Subscribe to Updates
Get the latest creative news from FooBar about art, design and business.
- ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ
- ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
- ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
- ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
- ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್ ಸಂಘ
- ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
- ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
- ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
Author: admin
ಹುಬ್ಬಳ್ಳಿಯ ಶಿರಡಿನಗರದ ರೈಲು ಹಳಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೊಬ್ಬನ ಮರ್ಮಾಂಗಕ್ಕೆ ವಿದ್ಯುತ್ ತಗುಲಿ ಗಂಭೀರ ಗಾಯವಾಗಿದೆ. ವಿನಾಯಕ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ. ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ. ರೈಲು ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳುವ ಸಮಯದಲ್ಲಿ ಏಕಾಏಕಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿಕೊಂಡು ದೇಹಕ್ಕೆ ಆವರಿಸಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ವಿದ್ಯಾರ್ಥಿ ಅಪಾಯಕಾರಿ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ ಗೀಳು ಹೊಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದ. ಅಲ್ಲಿ ಬರುವ ರಿಯಾಕ್ಷನ್‌ಗಳಿಂದ ಉತ್ತೇಜಿತನಾಗಿ ಅಪಾಯಕಾರಿ ಸ್ಥಳಗಳನ್ನು ಆಯ್ದುಕೊಳ್ಳುತ್ತಿದ್ದ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೀರತ್‌ನ ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆಯಾಗಿದ್ದು, ನರ ಬಲಿ ಇರಬಹುದು ಎನ್ನುವ ಅನುಮಾನ ವ್ಯಕ್ತವಾಗಿದೆ. ಬಾಲಕನನ್ನು ನವೆಂಬರ್ 30 ರಂದು ಪ್ರೀತ್ ವಿಹಾರ್‌ನಲ್ಲಿರುವ ನಿವಾಸದಿಂದ ಅಪಹರಿಸಿ ಹತ್ಯೆ ಮಾಡಲಾಗಿದೆ. ಮೀರತ್‌ನ ಹೊಲವೊಂದರಲ್ಲಿ ರುಂಡ ಇಲ್ಲದ ಶವ ಪತ್ತೆಯಾಗಿದ್ದು, ನರಬಲಿಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಬಳಿಕ ಆರೋಪಿಯು ಮೀರತ್‌ನ ಕಬ್ಬಿನ ಗದ್ದೆಯಲ್ಲಿ ಮಗುವನ್ನು ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ. ಸ್ಥಳೀಯ ಪೊಲೀಸರು ಈಗಾಗಲೇ ತಲೆ ಮತ್ತು ಕೈಕಾಲು ಇಲ್ಲದ ದೇಹವನ್ನು ಪತ್ತೆ ಮಾಡಿದ್ದಾರೆ. ಸಮೀಪದಲ್ಲಿ ತಲೆ ಕೂಡ ಪತ್ತೆಯಾಗಿದೆ. ಬಟ್ಟೆಗಳ ಆಧಾರದ ಮೇಲೆ ಶವವು ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಾಣೆಯಾದ ಬಾಲಕನದ್ದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬಾಲಕನ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬ ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರೀತ್ ವಿಹಾರ್ ಪ್ರದೇಶದಲ್ಲಿ ರಸ್ತೆಯನ್ನು ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಪನ್ನು ಚದುರಿಸಲು ಯತ್ನಿಸುತ್ತಿದ್ದ ಪೊಲೀಸರ…
ಭಾರತ ತಂಡದ ನಾಯಕ ರೋಹಿತ್ ಶರ್ಮ ಫೀಲ್ಡಿಂಗ್ ವೇಳೆ ಹೆಬ್ಬೆರಳಿಗೆ ಬಲವಾದ ಪೆಟ್ಟು ಬಿದ್ದಿದ್ದು, ಬಾಂಗ್ಲಾದೇಶದ ವಿರುದ್ಧದ 2ನೇ ಏಕದಿನ ಪಂದ್ಯದ ನಡುವೆಯೇ ಹೊರನಡೆದಿದ್ದಾರೆ. ಮೀರ್ ಪುರದಲ್ಲಿ ಬುಧವಾರ ನಡೆದ 2ನೇ ಏಕದಿನ ಪಂದ್ಯದ ವೇಳೆ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಫೀಲ್ಡಿಂಗ್ ವೇಳೆ ರೋಹಿತ್ ಹೆಬ್ಬೆರಳಿಗೆ ಗಾಯವಾಗಿದ್ದು, ಸ್ಕ್ಯಾನಿಂಗ್ ಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಉಮ್ರಾನ್ ಮಲಿಕ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಏಕದಿನ ಕ್ರಿಕೆಟ್ ಗೆ ಮರಳಿದ್ದಾರೆ. ಈಗಾಗಲೇ ಭಾರತ ತಂಡ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡಿದ್ದರಿಂದ ಸರಣಿ ಜೀವಂತವಾಗಿಸಿರಿಸಿಕೊಳ್ಳಲು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೆದುಳು ಜ್ವರ ತಡೆಗೆ ರಾಜ್ಯದಲ್ಲಿ ಜೆಇ ಲಸಿಕೆಯನ್ನು ನೀಡುತ್ತಿದ್ದು, ಮಧುಗಿರಿಯಲ್ಲಿ ಇದನ್ನು ಪಡೆದ 10 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಟ್ಟಣದ ಎಂಜಿಎಂ ಬಾಲಕಿಯರ ಪ್ರೌಢ ಶಾಲೆಯ ಮಕ್ಕಳು ಅಸ್ವಸ್ಥಗೊಂಡಿದ್ದು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಶಾಸಕ ಎಂ.ವಿ.ವೀರಭದ್ರಯ್ಯ ಆಸ್ಪತ್ರೆಗೆ ಮಕ್ಕಳ ಆರೋಗ್ಯ ವಿಚಾರಿಸಿದರು. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಲಸಿಕೆ ಅಭಿಯಾನದ ಆರ್‌ಸಿಎಚ್‌ಡಿ ಕೇಶವರಾವ್, ಟಿಎಚ್‌ಒ ಡಾ.ರಮೇಶ್‌ಬಾಬು, ವೈದ್ಯಾಧಿಕಾರಿ ಸಂತೋಷ್ ಸಿಂಗ್, ಬಿಇಒ ಕೃಷ್ಣಪ್ಪ, ಬಿಆರ್‌ಸಿ ಹನುಮಂತರಾಯಪ್ಪ, ಶಾಲಾ ಸಮಿತಿ ಕಾರ್ಯದರ್ಶಿ ಶಂಕರನಾರಾಯಣ್, ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಹಾಗೂ ಇತರರು ಇದ್ದರು.
ಮುಸ್ಲಿಮರ ವೇಷಭೂಷಣ ಧರಿಸಿದ ನಾಯಕರ ಪೋಟೊಗೆ ಮುಸ್ಲಿಂ ಹೆಸರನ್ನು ಹಾಕಿ ವ್ಯಂಗ್ಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಪೋಸ್ಟ್‌ಗೆ ಜೆಡಿಎಸ್ ಆಕ್ಷೇಪಿಸಿದೆ. ಈ ಎರಡೂ ಪಕ್ಷಗಳ ಪಾಲಿಗೆ ಮುಸ್ಲಿಮರು ಅಬ್ಬೇಪಾರಿಗಳಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿ ಕಾರಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಮುಸಲ್ಮಾನರನ್ನು ಯಾರು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು ಎಂದುಕೊಂಡಿದ್ದಾರೆ, ಇವರಿಬ್ಬರ ಹೆಸರು ಬೇರೆ, ಆದರೆ ಉದ್ದೇಶ ಮಾತ್ರ ಒಂದೇ. ಸಮುದಾಯಗಳ ನಡುವೆ ದ್ವೇಷ ಬಿತ್ತುವುದೇ ಇವರ ಕೆಲಸ ಎಂದು ಟೀಕಿಸಿದ್ದಾರೆ. ಬಿಜೆಪಿಗೆ ಮುಸಲ್ಮಾನರೆಂದರೆ ಅಪಥ್ಯ, ಸದಾ ಮೇಲೆ ದ್ವೇಷ ಕಾರುವುದೇ ಜಾಯಮಾನ. ಮುಸಲ್ಮಾನರನ್ನು ಗುತ್ತಿಗೆ ತೆಗೆದುಕೊಂಡಂತೆ ವರ್ತಿಸುವ ಕಾಂಗ್ರೆಸ್ ಖಾನ್,ಉಲ್ಲಾ,ಶೇಖ್ ಎಂಬ ಮುಸ್ಲಿಂ ಹೆಸರುಗಳನ್ನು ಮತ್ತು ವೇಷಭೂಷಣಗಳನ್ನು ವ್ಯಂಗ್ಯ ಮತ್ತು ಹೀಯಾಳಿಕೆಗೆ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ಹೇಳಿದ್ದಾರೆ. ಮುಸಲ್ಮಾನರು ಪ್ರಬುದ್ಧರಾಗಿದ್ದಾರೆ ಎನ್ನುವುದನ್ನು ಬಿಜೆಪಿ ಮತತು ಕಾಂಗ್ರೆಸ್ ಪಕ್ಷಗಳು ಮರೆಯಬಾರದು ಎಂದು ಎಚ್ಚರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಮೆದುಳು ಜ್ವರ ತಡೆಗೆ ರಾಜ್ಯದಲ್ಲಿ ಜೆಇ ಲಸಿಕೆಯನ್ನು ನೀಡುತ್ತಿದ್ದು, ಮಧುಗಿರಿಯಲ್ಲಿ ಇದನ್ನು ಪಡೆದ 10 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಟ್ಟಣದ ಎಂಜಿಎಂ ಬಾಲಕಿಯರ ಪ್ರೌಢ ಶಾಲೆಯ ಮಕ್ಕಳು ಅಸ್ವಸ್ಥಗೊಂಡಿದ್ದು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಶಾಸಕ ಎಂ.ವಿ.ವೀರಭದ್ರಯ್ಯ ಆಸ್ಪತ್ರೆಗೆ ಮಕ್ಕಳ ಆರೋಗ್ಯ ವಿಚಾರಿಸಿದರು. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಲಸಿಕೆ ಅಭಿಯಾನದ ಆರ್‌ಸಿಎಚ್‌ಡಿ ಕೇಶವರಾವ್, ಟಿಎಚ್‌ಒ ಡಾ.ರಮೇಶ್‌ಬಾಬು, ವೈದ್ಯಾಧಿಕಾರಿ ಸಂತೋಷ್ ಸಿಂಗ್, ಬಿಇಒ ಕೃಷ್ಣಪ್ಪ, ಬಿಆರ್‌ಸಿ ಹನುಮಂತರಾಯಪ್ಪ, ಶಾಲಾ ಸಮಿತಿ ಕಾರ್ಯದರ್ಶಿ ಶಂಕರನಾರಾಯಣ್, ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಹಾಗೂ ಇತರರು ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಮತ್ತೆ ತಾರಕಕ್ಕೇರಿದ್ದು ಇದೀಗ ಮಹಾರಾಷ್ಟ್ರದಲ್ಲಿ ಮತ್ತೆ ಉದ್ದಟತನ ತೋರಲಾಗಿದೆ. ನವನಿರ್ಮಾಣ ಸೇನೆ ಕಾರ್ಯಕರ್ತರು ಕರ್ನಾಟಕ ಬ್ಯಾಂಕ್ ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದಲ್ಲಿ ನಾಸೀಕ್ ನಲ್ಲಿ ರಾಜ್ ಠಾಕ್ರೆ ನೇತೃತ್ವದ ನವ ನಿರ್ಮಾಣ ಸೇನೆ ಕಾರ್ಯಕರ್ತರು ಭಗವಾ ಧ್ವಜ ಹಿಡಿದು ಕರ್ನಾಟಕ ಬ್ಯಾಂಕ್ ಬಾಗಿಲು ಮತ್ತು ಬೋರ್ಡ್ ಗೆ ಮಸಿ ಬಳಿದು ಕಿಡಿಗೇಡಿತನ ಪ್ರದರ್ಶಿಸಿದ್ದಾರೆಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸಿಧದುರ್ಗ ಜೆ.ಕುಡಾಲ ಬಸ್ ನಿಲ್ದಾಣದ ಬಳಿ ಎಂಎನ್ ಎಸ್ ಕರ್ನಾಟಕದ ಸರ್ಕಾರಿ ಬಸ್ ಗಳಿಗೆ ಮಸಿ ಬಳಿದು ಪುಂಡಾಟ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರೂಪಾ ಸಾವಿನ ಸುತ್ತ ಅನುಮಾನಗಳು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ರೂಪಾ ಅವರ ಪತಿ ಆರಂಭದಲ್ಲಿ ತಲೆಗೆ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆಂದು ಹೇಳಿದ್ದರು. ಆದರೆ ಪೋಸ್ಟ್ ಮಾರ್ಟಂ ವರದಿ ಪ್ರಕಾರ ತಲೆಗೆ ಗುಂಡು ತಗುಲಿ ಮೃತಪಟ್ಟಿದ್ದಾರೆ. ಹೀಗಾಗಿ ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ ಪೊಲೀಸ್ ತನಿಖೆ ಆರಂಭಗೊಂಡಿದೆ. ರೂಪಾ ಪತಿ ಡಾ.ಕೆ.ಜಿ.ರವಿ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸಹಜ ಸಾವು ಎಂಬಂತೆ ಅವರು ಬಿಂಬಿಸಲು ಮುಂದಾದ ರೀತಿ ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ ಮನೆಯಲ್ಲಿ ಡಾ.ರೂಪಾ ಸೋಮವಾರ ಅನುಮಾಸ್ಪದವಾಗಿ ಮೃತಪಟ್ಟಿದ್ದರು. ವಿಷಯ ತಿಳಿದ ರವಿ ಕೂಡಲೇ ತುರುವನೂರು ರಸ್ತೆಯ ಆಸ್ಪತ್ರೆಗೆ ಮೃತದೇಹ ಸಾಗಿಸಿದ್ದಾರೆ. ಮನೆಯಲ್ಲಿ ಕಾಲುಜಾರಿ ಬಿದ್ದು ತಲೆಗೆ ಪೆಟ್ಟುಬಿದ್ದು ಮೃತಪಟ್ಟಿದ್ದಾಗಿ ರವಿ ಮಾಹಿತಿ ನೀಡಿದ್ದರು. ಆದರೆ ರೂಪಾ ಅವರ ಸಹೋದ್ಯೋಗಿಗಳು ಹಾಗೂ ಆಸ್ಪತ್ರೆಯ ವೈದ್ಯರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ತಲೆಯಲ್ಲಿ ರಂಧ್ರವಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿತ್ರದುರ್ಗ…
ಆಂಟೋನಿ ಬೇಗೂರು ಈ ಧ್ವಜ ದಿನದಂದು, ದೇಶದ ನಿಜವಾದ ವೀರರಾದ ರಕ್ಷಣಾ ಪಡೆಗಳ ತ್ಯಾಗವನ್ನು ಎಲ್ಲರೂ ಗೌರವಿಸುತ್ತಿದ್ದಾರೆ. ಅದೇ ಸಮಯದಲ್ಲಿ, ಅವರು ತಮ್ಮ ಕುಟುಂಬಗಳಿಗೆ ಸಹಾಯ ಮಾಡಲು ಈ ದಿನದಂದು ನೇರವಾಗಿ ಕೊಡುಗೆ ನೀಡುತ್ತಿದ್ದಾರೆ. ನಮ್ಮ ದೇಶವನ್ನು ಹಗಲಿರುಳು ರಕ್ಷಿಸುವ ಮೂರು ಸಶಸ್ತ್ರ ಪಡೆಗಳ ತ್ಯಾಗವನ್ನು ಗೌರವಿಸಲು ಪ್ರತಿ ವರ್ಷ ಡಿಸೆಂಬರ್ 7 ಅನ್ನು ಹಿರಿಯರ ಧ್ವಜ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವೆಟರನ್ಸ್ ಧ್ವಜ ದಿನವನ್ನು 1949 ರಿಂದ ಆಚರಿಸಲಾಗುತ್ತದೆ. ಬಿಸಿಲು, ಹಿಮ ಮತ್ತು ಮಳೆಯನ್ನು ಲೆಕ್ಕಿಸದೆ ಅತ್ಯಂತ ಆಧುನಿಕ ತಂತ್ರಜ್ಞಾನದೊಂದಿಗೆ ಗಡಿಗಳು, ಸಮುದ್ರ ಮತ್ತು ಆಕಾಶದ ಉದ್ದವನ್ನು ಹೊಂದಿರುವ ಮೂರು ಸಶಸ್ತ್ರ ಪಡೆಗಳ ಕುಟುಂಬಗಳ ಹಿತಾಸಕ್ತಿಗಳನ್ನು ರಕ್ಷಿಸುವುದು ನಮ್ಮ ಸಾಮಾಜಿಕ ಕರ್ತವ್ಯವಾಗಿದೆ. ಧ್ವಜ ದಿನದಂದು ಧ್ವಜ ಮಾರಾಟ ಮತ್ತು ದೇಣಿಗೆ ಮೂಲಕ ಸಂಗ್ರಹವಾದ ಹಣವನ್ನು ಅಂಗವಿಕಲರ ಪುನರ್ವಸತಿ ಮತ್ತು ಮಾಜಿ ಸೈನಿಕರ ಅಭಿವೃದ್ಧಿಗೆ ಬಳಸಲಾಗುತ್ತದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ…
ಗುಜರಾತ್, ಹಿಮಾಚಲ ಪ್ರದೇಶದ ಮಾದರಿಯಂತೆ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರಿಗೆ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆಯಂತೆ. ಗುಜರಾತ್ ಚುನಾವಣೆ ಮುಗಿದ ಬಳಿಕ ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಭಾಗಿಯಾಗಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಅವರಂತೆ ಹಿರಿಯ ನಾಯಕರು ಅವರೇ ಸ್ವಯಂ ನಿವೃತ್ತಿ ಘೋಷಿಷಿಕೊಳ್ಳಬೇಕು. ಹಿರಿಯ ಸಚಿವರಿಗೆ ಮನವರಿಕೆ ಮಾಡಿಕೊಡುವಂತೆ ಕೆಲವು ನಾಯಕರಿಗೆ ನಿರ್ದೇಶನ ನೀಡಬೇಕು. ಸ್ವಯಂ ನಿವೃತ್ತಿ ನಿರ್ಧಾರ ತಮ್ಮದೇ, ಪಕ್ಷದಿಂದ ಮಾಡಿಸಿದ್ದಲ್ಲ. ಪಕ್ಷಕ್ಕೂ ತಮ್ಮ ನಿರ್ಧಾರಕ್ಕೂ ಸಂಬಂಧ ಇಲ್ಲ ಎಂಬುದನ್ನು ಸ್ಪಷ್ಟವಾಗಿ ಘೋಷಿಸಬೇಕು. ಕಾರ್ಯಕರ್ತರ ವಲಯ ಹಾಗೂ ನಿಮ್ಮ ಕ್ಷೇತ್ರಗಳಲ್ಲಿ ಗೊಂದಲ ಆಗದಂತೆ ನಿಗಾ ವಹಿಸಬೇಕು. ಈ ಸಂದೇಶವನ್ನು 73 ವರ್ಷದ ಮೀರಿದ ಹಿರಿಯರಿಗೆ ತಲುಪಿಸುವಂತೆ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‍ಗೆ ಹೈಕಮಾಂಡ್ ಸೂಚನೆ ನೀಡಿದೆ. ಬೂತ್ ಮಟ್ಟದಲ್ಲಿ…