Author: admin

ಬೆಳಗಾವಿ: ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ‌ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 8 ರಿಂದ 12 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿತ್ತು. ಮಹಾರಾಷ್ಟ್ರ ನೋಂದಣಿಯ ಲಾರಿಯ ಮೇಲೆ ಕಲ್ಲು ತೂರಿ ಗಾಜು ಪುಡಿ ಪುಡಿ ಮಾಡಲಾಗಿತ್ತು. ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಆದ್ರೆ ಐಪಿಸಿ ಸೆಕ್ಷನ್ 143, 147, 341, 427, 149 ಅಡಿ 12 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1100 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಖಾಲಿ ಇರುವ 1000 ಅಬಕಾರಿ ಪೇದೆ, 100 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಬಕಾರಿ ಇಲಾಖೆಯಿಂದ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಹೊಸ ಮದ್ಯ ತಯಾರಿಕೆಗೆ ಉದ್ಯಮಿಗಳು ಮುಂದೆ ಬಂದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ ಅನುಮೋದನೆ ನೀಡಲಿದ್ದು, ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಜನೆಯಾಗುತ್ತದೆ ಎಂದು ತಿಳಿಸಿದ್ದಾರೆ, ಮದ್ಯದ ದರ ಪರಿಷ್ಕರಣೆ ವಿಚಾರ ಸರ್ಕಾರದ ಮುಂದಿಲ್ಲ. ನಿರೀಕ್ಷೆಗೂ ಮೀರಿ ಆದಾಯ ಸಂಗ್ರಹವಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಾಮರಾಜನಗರ: ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ಕಾಡಾನೆಗೆ ತಿನ್ನಲು ಕಬ್ಬು ನೀಡಿದ ಮೈಸೂರು ಮೂಲದ ಲಾರಿ ಚಾಲಕನಿಗೆ ಅರಣ್ಯ ಇಲಾಖೆ 75 ಸಾವಿರ ರೂಪಾಯಿ ದಂಡ ವಿಧಿಸಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ನಂಜನಗೂಡು ತಾಲೂಕಿನ ಸಿದ್ದರಾಜು ಎನ್ನುವ ಲಾರಿ ಚಾಲಕ, ಡಿಸೆಂಬರ್ 3 ರಂದು ಕಬ್ಬು ತುಂಬಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದ. ಆ ವೇಳೆ ಗಡಿ ಭಾಗದ ತಮಿಳುನಾಡಿನ ಹಾಸನೂರು ಬಳಿ ಕಾಡಾನೆಗೆ ಕಬ್ಬು ನೀಡಿದ್ದಾನೆ. ಇದನ್ನು ನೋಡಿ ಅರಣ್ಯಧಿಕಾರಿಗಳು ಚಾಲಕನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ 75,000 ರೂ. ದಂಡ ಕಟ್ಟಿಸಿಕೊಂಡಿದ್ದಾರೆ. ಕರೆಪಳ್ಳಂ ಚೆಕ್​ಪೋಸ್ಟ್​ನಿಂದ ಮೂರು ಕಿಲೋಮೀಟರ್ ದೂರದಲ್ಲಿ ಕಬ್ಬು ತುಂಬಿದ್ದ ಲಾರಿ ನಿಂತಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕ ರಾಷ್ಟ್ರೀಯ ಹೆದ್ದಾರಿ ಬಳಿ ಇದ್ದ ಕಾಡಾನೆಗೆ ತಿನ್ನಲು ಕಬ್ಬು ತೆಗೆದುಕೊಂಡು ಹೋಗುತ್ತಿದ್ದನ್ನು ನೋಡಿದ್ದಾರೆ. ಬಳಿಕ ವಿಚಾರಣೆ ವೇಳೆ ಆನೆಗೆ ಕಬ್ಬು ನೀಡಿದ್ದನ್ನು ಲಾರಿ ಚಾಲಕ ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ 75 ಸಾವಿರ…

Read More

ನವದೆಹಲಿ : ಇಂದಿನಿಂದ ಡಿ.29 ರವರೆಗೆ 17 ದಿನಗಳ ಕಾಲ ಸಂಸತ್ತಿನ ಚಳಿಗಾಲದ ಅಧಿವೇಶನದ ಕಲಾಪ ನಡೆಯಲಿದೆ. ಈಗಾಗಲೇ 16 ಮಸೂದೆಗಳು ಮಂಡನೆಗೆ ಸಿದ್ಧವಾಗಿದೆ. ಡಿಸೆಂಬರ್ 7 ರಿಂದ ಹಾಲಿ ಕಟ್ಟಡದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆಗಳು ಭರದಿಂದ ಸಾಗಿವೆ. ಇನ್ನು ಅಧಿವೇಶನದಲ್ಲಿ ಕೋವಿಡ್ ಹೊರತುಪಡಿಸಿ ರಷ್ಯಾ-ಉಕ್ರೇನ್ ಯುದ್ಧವು ಸಾಗರೋತ್ತರ ವಿತರಣೆಗಳ ಮೇಲೆ ಪರಿಣಾಮ ಬೀರುವುದು ಸೇರಿದಂತೆ ಹಲವು ಮುಖ್ಯ ವಿಚಾರಗಳ ಕುರಿತಂತೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ತಾಲ್ಲೂಕಿನ ನಲ್ಲದಿಗಬಂಡೆ ತಾಂಡ  ಗ್ರಾಮದಲ್ಲಿ ಗೋರ್ಸಿ ಕೋಡಿ ತಾಲೂಕು ಘಟಕ ವತಿಯಿಂದ ನಾಯಕಿರ್ಧನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯವನ್ನು ಸಂತ ಶ್ರೀ ಸೇವಾಲಾಲ್ ಭೋಕರ್ಯದ ಮೂಲಕ ಪ್ರಾರಂಭಿಸಲಾಯಿತು. ಪ್ರಾಸ್ತಾವಿಕ ನುಡಿ ರಮೇಶ್ ಬಾಬು ರಾತೋಡ್,   ಈ ನಾಯಕಿರ್ಧನ್ ವಿಶೇಷತೆಯ ಬಗ್ಗೆ ತಿಳಿಸಿಕೊಟ್ಟರು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತ್ ರಾವ್ ನಾಯಕ್ ರಾಥೋಡ್ 12 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿರುವ ನೆನಪಿಗೋಸ್ಕರ ದೇಶಾದ್ಯಂತ ಈ ದಿನವನ್ನು ನಾಯಕೀರ್ ಧನ್ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ತಾಂಡಾದ ನಾಯಕ್ ಕಾರ್ಬಾರಿ  ಶಂಕ್ರನಾಯಕ್ ಡಾವ ಪುಟ್ಟ ನಾಯಕ್, ಗೋರ್ಸಿಕ್ವಾಡಿ ತುಮಕೂರು ಜಿಲ್ಲಾ ಸಂಯೋಜಕರಾದ ವೆಂಕಟೇಶ್ ಚೌಹಾನ್, ಭೀಮಾಸತ್ತಿ ಗ್ರಾಮೀಣಾಭಿವೃದ್ಧಿ ಅಧ್ಯಕ್ಷರು ಹಾಗೂ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿಯಾದ ರಮೇಶ್ ಬಾಬು ರಾತೋಡ್,  ಗೋರ್ಸೇನಾ ಪಾವಗಡ ತಾಲ್ಲೂಕು ಘಟಕ  ಅಧ್ಯಕ್ಷರಾದ ಜಗದೀಶ್ ನಾಯಕ್ ಗೌರಾಧ್ಯಕ್ಷರಾದ ಗೋವಿಂದ ನಾಯಕ್, ಗೋರ್ಸಿಕ್ವಾಡಿ ತಾಲೂಕು ಸಂಚಾಲಕರಾದ ಪ್ರಕಾಶ್ ನಾಯಕ್, ತಾಲೂಕು ಅಕ್ಷರ ದಾಸೋಹ ಅಧಿಕಾರಿಯಾದ ಶಂಕ್ರಾಯಕ್ ,ತಾಂಡಾದ ಗ್ರಾಪಂ…

Read More

ಧಾರವಾಡ: ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿರುವಾಗಲೇ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲು ಮುಂದಾಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ. ಯಾವುದೇ ಕಾರಣಕ್ಕೂ ಮಹಾ ಸಚಿವರಿಗೆ ರಾಜ್ಯ ಪ್ರವೇಶ ಮಾಡಲು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಧಾರವಾಡದಲ್ಲಿ ಪ್ರತಿಕ್ರಿಯಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಹಾರಾಷ್ಟ್ರ ಸಚಿವರಿಗೆ ಉತ್ತರಿಸಲೆಂದೇ 100 ವಾಹನಗಳಲ್ಲಿ ನಾವು ಬೆಳಗಾವಿಗೆ ಹೊರಟಿದ್ದೇವೆ. ಬೆಳಗಾವಿಯಲ್ಲಿ 1000 ಕನ್ನಡ ಬಾವುಟ ಹಾರಿಸುತ್ತೇವೆ. ಅದ್ಯಾರು ನಮ್ಮನ್ನು ತಡೆಯುತ್ತಾರೆ ನೋಡೋಣ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಸಚಿವರು ಪದೇ ಪದೇ ಕರ್ನಾಟಕವನ್ನು ಅವಮಾನಿಸುತ್ತಿದ್ದಾರೆ. ಅವರ ಹೇಳಿಕೆಗಳು ಕನ್ನಡಿಗರನ್ನು ಪ್ರಚೋದಿಸುತ್ತಿದೆ. ಬೆಳಗಾವಿಯಲ್ಲಿರುವ ಮರಾಠಿಗರನ್ನೂ ಪ್ರಚೋದಿಸುತ್ತಿದೆ. ಇದೆಲ್ಲದಕ್ಕೂ ಉತ್ತರ ಕೊಡಬೇಕಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗಡಿ ವಿವಾದದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬಹಿರಂಗ ಸಭೆ ನಡೆಸಲಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರದ ಎಂ.ಇ.ಎಸ್. ಮಹಾರಾಷ್ಟ್ರ ರಾಜಕಾರಣಿಗಳ ವಿರುದ್ಧ ಕಿಡಿಕಾರಿದ್ದು, ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಿದೆ. ಇಂದು ಬಹಿರಂಗ ಸಭೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಡಿಸಿಪಿ, ನಾಲ್ವರು ಸಿಪಿಐ, 10 ಪಿಎಸ್ ಐ, 12 ಕೆಎಸ್ ಆರ್, 8 ಸಿಎಆರ್ ತುಕಡಿಗಳು ಹಾಗೂ ಅಶ್ರುವಾಯು ಪ್ರಯೋಗ ವರುಣಾ ವಾಹನ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಎಂಇಎಸ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಿಡಿದೆದ್ದಿದ್ದು, ಇಂದು ಕರವೇ ನಡಿಗೆ ಬೆಳಗಾವಿ ಕಡೆಗೆ ಕಾರ್ಯಕ್ರಮವನ್ನ ಹಮ್ಮಿಕೊಂಡಿದೆ. ಗಡಿ ವಿವಾದ ಸಮಸ್ಯೆ ತಲೆದೂರಿದ್ದರೂ ಸಹ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿದ್ದರು. ಆದರೆ ನಂತರ ಎಚ್ಚೆತ್ತು ಮಹಾರಾಷ್ಟ್ರ ಸರ್ಕಾರ ಸಚಿವರ ಬೆಳಗಾವಿ ಭೇಟಿಯನ್ನ ರದ್ದುಗೊಳಿಸಿದೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಕರವೇ ಅಧ್ಯಕ್ಷ ಟಿ.ಎ ನಾರಾಯಣಗೌಡ, ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದೆ. ಮಹಾಜನ್ ವರದಿಯನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಗಡಿ ವಿಚಾರಕ್ಕೆ ಬಂದ್ರೆ ನಾವು ಸುಮ್ಮನಿರಲ್ಲ. ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿಗೆ ಅವಕಾಶ ನೀಡಲ್ಲ. ಯಾವುಧೇ ಖಾರಣನ್ನೂ ನಾವು ಹಿಂದೆ ಸರಿಯಲ್ಲ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಕರ್ನಾಟಕಕ್ಕೆ ದಿಕ್ಸೂಚಿ ಎಂದಿದ್ದ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿದ‍್ಧರಾಮಯ್ಯ, ಗುಜರಾತ್ ಫಲಿತಾಂಶ ಕರ್ನಾಟಕ್ಕ್ಕೆ ದಿಕ್ಸೂಚಿಯಾತ್ರೆ ಪಂಜಾಬ್ ಫಲಿತಾಂಶ ಯಾಕೆ ದಿಕ್ಸೂಚಿ ಆಗಲಿಲ್ಲ. ಅಲ್ಲಿನ ರಾಜಕೀಯ, ಆಡಳಿತ, ಭಾವನೆಗಳು ಬೇರೆ. ಇಲ್ಲಿಯ ರಾಜಕೀಯ. ಭಾವನೆಗಳೇ ಬೇರೆ. ರಾಷ್ಟ್ರ ಚುನಾವಣೆ ಬೇರೆ, ರಾಜ್ಯ ಚುನಾವಣೆ ಬೇರೆ ಎಂದರು. ಎಕ್ಸಿಟ್ ಪೋಲ್ ವಿಚಾರ ಸಂಬಂಧ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುಂದಿದೆ. ಅಂತಾ ಹೇಳಿದೆ. ಗುಜರಾತ್ ನಲ್ಲಿ ಬಿಜೆಪಿ ಮುಂದಿದೆ ಎಂದು ಹೇಳಿದ್ದಾರೆ 8 ನೇ ತಾರೀಖು ನೋಡೋಣ. ಚುನಾವಣೇಯಲ್ಲಿ ಜನ ಕೊಟ್ಟ ತೀರ್ಪು ಒಪ್ಪಿಕೊಳ್ಳಬೇಕು ಎಂದು ತಿಳಿಸಿದರು. ಗಡಿ ವಿವಾದ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಈಗಾಗಲೇ ಮಹಾಜನ್ ವರದಿ ಬಂದಿದೆ ಮಹಾಜನ್ ವರದಿಯೇ ಅಂತಿಮ. ಮಹಾರಾಷ್ಟ್ರದವರು ವರದಿ ಒಪ್ಪಲ್ಲ ಅಂದರೇ ಮಹಾರಾಷ್ಟ್ರದವರ ಪುಂಡಾಟಿಕೆಗೆ ಸರ್ಕಾರ ಹೆದರಬಾರದು. ಉತ್ತಮ ಲಾಯರ್ ಇಟ್ಟು ವಾದ ಮಾಡಲಿ. ಸಿಎಂ ಬೊಮ್ಮಾಯಿ ಸರ್ವಪಕ್ಷ ಸಭೆ ಕರೆಯುವುದಾಗಿ…

Read More

ಮಾಗಡಿ ತಾಲೂಕಿನ ನಾರಾಯಣಿಪಾಳ್ಯ ಗೇಟ್ ಬಳಿ ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ಸರಕು ಸಾಗಣೆ ಆಟೊ ಉರುಳಿ ಮೂವರು ಮೃತಪಟ್ಟಿದ್ದಾರೆ. ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದವರಾದ ರತ್ನಮ್ಮ (53), ಲಕ್ಕಮ್ಮ (40) ಹಾಗೂ ಮಂಜುನಾಥ (32) ಮೃತಪಟ್ಟವರು. ನೆಲಮಂಗಲದಲ್ಲಿ ತರಕಾರಿ ತೆಗೆದುಕೊಂಡು ಬೆಳ್ಳೂರಿಗೆ ವಾಪಸ್ ಹೋಗುವಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More