Author: admin

ಮಧುಗಿರಿ: ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸಹ ಶಿಕ್ಷಕನಿಗೆ ಗ್ರಾಮಸ್ಥರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿಯ ರಂಗಾಪುರ ಪಂಚಾಯ್ತಿಯ ಗ್ರಾಮ ಬೋರಗುಂಟೆ ಶಾಲೆಯಲ್ಲಿ ನಡೆದಿದೆ. ಶಾಲೆಯ ಸಹ ಶಿಕ್ಷಕ ಮಂಜುನಾಥ್ ಎಂಬವನು ಪ್ರತಿನಿತ್ಯ ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ ತೋರುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ವಿಚಾರ ತಿಳಿಸಿದ್ದು, ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆ ಆರಂಭಕ್ಕೆ ಮುನ್ನವೇ ಶಿಕ್ಷಕನನ್ನು ತಡೆದು ವಿಚಾರಿಸಿದ್ದಲ್ಲದೇ ಶಿಕ್ಷಕನಿಗೆ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾ ಧಿಕಾರಿ ತಿಮ್ಮರಾಜು, ಬಡವ ನಹಳ್ಳಿ ಸಿಪಿಐ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಈ ಬಗ್ಗೆ ವಿಚಾರಣೆ ನಡೆಸಿದಾಗ ಸತ್ಯ ಬಯಲುಗೊಂಡಿದೆ. ಇಂತಹ ಹೀನ ಕೃತ್ಯಕ್ಕೆ ಒಳಗಾದ ಶಾಲೆಯ ವಿದ್ಯಾರ್ಥಿಗಳು ಇಷ್ಟು ದಿವಸ ತಾವು ಅನುಭವಿಸಿದ ನೋವು ಸಂಕಷ್ಟಗಳನ್ನು ಇಲಾಖೆಯ ಮೇಲಧಿಕಾರಿಗಳ ಮುಂದೆ ಸಂಪೂರ್ಣ ವಿಚಾರ ತಿಳಿಸಿದರು. ಇದೇ ವೇಳೆ ವಿದ್ಯಾರ್ಥಿಗಳ…

Read More

ಭಾರತೀಯ ಕ್ರಿಕೆಟಿಗ ಕೇದಾರ್ ಜಾಧವ್ ಅವರ ತಂದೆ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ದೂರು ನೀಡಿದ್ದಾರೆ. ಜಾಧವ್ ಅವರ ತಂದೆ ಮಹದೇವ್ ಜಾಧವ್ ಪುಣೆಯ ಕೊತ್ರುಡ್ ಪ್ರದೇಶದಿಂದ ನಾಪತ್ತೆಯಾಗಿದ್ದಾರೆ. ದೂರನ್ನು ಸ್ವೀಕರಿಸಿದ ನಂತರ, ತ್ವರಿತ ಹುಡುಕಾಟ ನಡೆಸಲಾಯಿತು ಮತ್ತು ಕೆಲವೇ ಗಂಟೆಗಳಲ್ಲಿ, ಪುಣೆಯ ಮುಂಡ್ವಾ ಪ್ರದೇಶದಲ್ಲಿ ಪೊಲೀಸರು ಆತನನ್ನು ಪತ್ತೆ ಮಾಡಿದರು. ಮಹಾದೇವ್ ಜಾಧವ್ ಅವರು ಮಾರ್ಚ್ 27 ರಂದು ಬೆಳಿಗ್ಗೆ 11:30 ರಿಂದ ಪುಣೆಯ ಕೊತ್ರುಡ್ ಪ್ರದೇಶದಿಂದ ನಾಪತ್ತೆಯಾಗಿದ್ದರು. ಭಾನುವಾರ ಬೆಳಗ್ಗೆ ಸೆಕ್ಯೂರಿಟಿಯನ್ನು ತಪ್ಪಾಗಿ ಮನೆಯಿಂದ ಹೊರಗೆ ಹೋಗಿದ್ದ ಮಹದೇವ್ ನಾಪತ್ತೆಯಾಗಿದ್ದಾನೆ. ಮನೆಯವರು ಸಂಪರ್ಕಿಸಲು ಪ್ರಯತ್ನಿಸಿದರು ಆದರೆ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಅಲಂಕಾರ್ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಕೇಂದ್ರೀಕರಿಸಿ ತನಿಖೆ ನಡೆಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆತನನ್ನು ಪತ್ತೆ ಮಾಡಿದರು. ಮಹದೇವ್ ಕರವೇ ನಗರದಿಂದ ಪತ್ತೆಯಾಗಿದ್ದು, ಅವರು ಮರೆಗುಳಿತನದಿಂದ ಬಳಲುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ನೀವೇ ಸಾಕ್ಷಿಯಾಗಿದ್ದು, ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡಬೇಡಿ. ಸದಾ ನಿಮ್ಮೊಂದಿಗಿರುವ, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಮತ್ತೊಮ್ಮೆ ಆರಿಸಿ ತನ್ನಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಗೇವಾಡಿ ಕ್ರಾಸ್ ದಿಂದ ಬೆಂಡಿಗೇರಿ ಗ್ರಾಮದವರೆಗಿನ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2.50 ಕೋಟಿ ರೂ,ಗಳು ಮಂಜೂರಾಗಿದ್ದು, ಬೆಂಡಿಗೇರಿ ಗ್ರಾಮದಲ್ಲಿ ಸೋಮವಾರ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಗ್ರಾಮೀಣ ಕ್ಷೇತ್ರದ ಜನರು ಅತ್ಯಂತ ಮುಗ್ದರು ಹಾಗೂ ಪ್ರಾಮಾಣಿಕರು. ಯಾರು ಡೋಂಗಿ, ಯಾರು ಪ್ರಾಮಾಣಿಕರು ಎನ್ನುವುದನ್ನು ಅರ್ಥಮಾಡಿಕೊಳ್ಳುತ್ತಾರೆ . ಸುಳ್ಳು ಹೇಳಿ ಅವರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಈ ಬಾರಿ ರಾಜ್ಯದಲ್ಲೇ ಅತ್ಯಧಿಕ ಮತಗಳ ಅಂತರದಿಂದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಗೆಲ್ಲಿಸಲು ಪಣತೊಡೋಣ ಎಂದು ಚನ್ನರಾಜ ಹೇಳಿದರು. ಈ ಸಂದರ್ಭದಲ್ಲಿ…

Read More

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ಚವಾಟ ಗಲ್ಲಿಯ ಚರಂಡಿಗಳ ನಿರ್ಮಾಣಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಲೋಕೋಪಯೋಗಿ ಇಲಾಖೆಯ ವತಿಯಿಂದ 1.21 ಕೋಟಿ ರೂ, ಮಂಜೂರು ಮಾಡಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೋಮವಾರ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಾಗಿದ್ದು, ಇತಿಹಾಸದಲ್ಲೇ ಎಂದೂ ಇಷ್ಟೊಂದು ಅಭಿವೃದ್ಧಿ ಕಂಡಿರಲಿಲ್ಲ. ಹಾಗಾಗಿ ಮುಂದಿನ ಬಾರಿಯೂ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೆೆಂಬಲಿಸಬೇಕು ಎಂದು ಮೃಣಾಲ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು. ಈ ಸಮಯದಲ್ಲಿ ದತ್ತಾ ಪಾಟೀಲ, ಅರ್ಚನಾ ಪಾಟೀಲ, ಸದೆಪ್ಪ ರಾಜಕಟ್ಟಿ, ಜಯರಾಂ ಪಾಟೀಲ, ಶಂಕರ ಅಷ್ಟೇಕರ್, ಉಮೇಶ ಪಾಟೀಲ, ವಿಶಾಲ ಪಾಟೀಲ, ನಾರಾಯಣ ಪಾಟೀಲ, ಮಾರುತಿ ಚೌಹಾನ್ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಕರ್ನಾಟಕ ಸರ್ಕಾರ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ ತನ್ನ ಕಡೆಯ ಮೀಸಲಾತಿ ಅಸ್ತ್ರ ಬಳಿಸಿದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟ ಸಭೆ ಮೀಸಲಾತಿಯ ಬದಲಾವಣೆ ಮಾಡಿದ್ದು ಇಲ್ಲಿ ಎಲ್ಲಾ ವರ್ಗಗಳಿಗೆ ಅನ್ವಯಿಸುವ ಹಾಗೆ ಈ ಬದಲಾವಣೆಯನ್ನು ತರಲಾಗಿದೆ ಎಂದು ಸರ್ಕಾರ ಸಮರ್ಥನೆ ನೀಡುತ್ತಾ ಇದೆ . ಯಾವ ಬದಲಾವಣೆಯನ್ನು ಸಂಪುಟ ಸಭೆಯಲ್ಲಿ ತೀರ್ಮಾನಗೊಳ್ಳಲಾಗಿದೆ ಅಂದರೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣಾ ನೀತಿ ಸಂಹಿತಿ ಘೋಷಣೆ ಆಗಲಿದ್ದು ಅದರ ಮುಂಚೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಅತ್ಯಂತ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಬಹುದಿನಗಳಿಂದ ನಿರೀಕ್ಷಿತ ಗೊಂಡಿರುವ ದಲಿತ ಒಳ ಮೀಸಲಾತಿಗಳ ಕುರಿತು ಬೇಡಿಕೆ ಇತ್ತು 3ರಿಂದ 7 % ಹೆಚ್ಚಿಸಿ ಇದರಿಂದ ರಾಜ್ಯದಲ್ಲಿ ಮೀಸಲಾತಿ ಪ್ರಮಾಣ 50% ಗಿಂತ ಗರಿಷ್ಠ ಮಿತಿಯನ್ನು ದಾಟಿ 56% ಹೋಗಿದ್ದು ರಿಂದ ಇದು ಚರ್ಚೆಗೆ ಗ್ರಾಹಕವಾಗಿತ್ತು . 2018 ರಲ್ಲಿ ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಲಿಂಗಾಯತ ಧರ್ಮವನ್ನು ಒಡೆಯಲು ಪ್ರಯತ್ನ ಪಟ್ಟರು…

Read More

ಶಿಕಾರಿಪುರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ ವೇಳೆ ತಮ್ಮ ಮನೆ ಮೇಲೆ ನಡೆದ ಕಲ್ಲು ತೂರಾಟ ಕುರಿತು ಪ್ರತಿಕ್ರಿಯಿಸಿರುವ ಬಿಎಸ್ ಯಡಿಯೂರಪ್ಪ, ತಪ್ಪು ಗ್ರಹಿಕೆಯಿಂದ ಈ ಘಟನೆ ನಡೆದಿದೆ. ಸಮುದಾಯದ ಹಿರಿಯ ಮುಖಂಡರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಏಕಾಏಕಿ ಕಲ್ಲು ತೂರಾಟದಿಂದ ನನಗೆ ನೋವಾಗಿದೆ. ತಾಂಡಾ ಅಭಿವೃದ್ಧಿ ನಿಗಮವನ್ನು ನಾನು ಮಾಡಿದ್ದೇನೆ. ತಪ್ಪು ಗ್ರಹಿಕೆಯಿಂದ ಇಂತಹ ಘಟನೆ ನಡೆದಿದೆ ಅಂತಾ ಭಾವಿಸಿದ್ದೇನೆ. ಬಂಜಾರ ಸಮುದಾಯದ ಹಿರಿಯರನ್ನು ಕರೆದು ಮಾತನಾಡುತ್ತೇನೆ. ನಾನು ಮತ್ತು ವಿಜಯೇಂದ್ರ ಇಬ್ಬರೂ ಬಂಜಾರ ಸಮುದಾಯದ ಸಮಸ್ಯೆಗಳ ಚರ್ಚೆಗೆ ಸಿದ್ಧರಿದ್ದೇವೆ ಎಂದರು. ಬಂಜಾರ ಸಮುದಾಯದ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇವೆ. ನಾನು 4 ಸಲ ಸಿಎಂ ಆಗಲು ಬಂಜಾರ ಸಮುದಾಯ ಕಾರಣ. ಬಂಜಾರ ಸಮುದಾಯದವರು ಶಾಂತಿಯಿಂದ ವರ್ತಿಸಬೇಕು. ಸಮಾಜಘಾತುಕ  ವ್ಯಕ್ತಿಗಳ ಮಾತು ಕೇಳಬೇಡಿ. ನಾಳೆ ಅಥವಾ ನಾಡಿದ್ದು ಶಿವಮೊಗ್ಗಕ್ಕೆ ಹೋಗಿ ಮಾತನಾಡುತ್ತೇನೆ ಎಂದು ಬಿಎಸ್ ವೈ ತಿಳಿಸಿದರು. ನಮ್ಮತುಮಕೂರು.ಕಾಂನ…

Read More

ಬೆಂಗಳೂರಿನಲ್ಲಿ ಆಟೋ ಚಾಲಕರ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಹಗ್ಗಜಗ್ಗಾಟ ಶುರುವಾಗಿದ್ದು, ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಬೆಂಗಳೂರು ಆಟೋ ಚಾಲಕರ ವಿರುದ್ದ ಇದೀಗ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದಾರೆ. ನಗರದಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ ಇಂದು ಬೆಳಗ್ಗೆ ಫ್ರೀಡಂಪಾರ್ಕ್​ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗಾಗಿ ಒತ್ತಾಯಿಸಿ ಸಾವಿರಾರು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿಯಲ್ಲಿ ಪಾಲ್ಗೊಂಡು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೈಕ್ ಟ್ಯಾಕ್ಸಿ ಚಾಲಕರ ಪ್ರತಿನಿಧಿಸುವ ನಗರದ ಏಕೈಕ ಸಂಸ್ಥೆಯಾಗಿರುವ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ತಮ್ಮ ಸದಸ್ಯರ ಮೇಲೆ ಆಗುತ್ತಿರುವ ನಿರಂತರ ದೌರ್ಜನ್ಯ ಪ್ರಶ್ನಿಸಿ ಇಂದು ಧರಣಿ ನಡೆಸುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಪುದುಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಸೆಂಥಿಲ್ ಕುಮಾರ್ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಮೂರು ದ್ವಿಚಕ್ರವಾಹನಗಳಲ್ಲಿ ಬಂದ ಏಳು ಮಂದಿಯ ತಂಡವು ಮೊದಲು ಸೆಂಥಿಲ್ ಕುಮಾರ್ ಮೇಲೆ ಸ್ವದೇಶಿ ಬಾಂಬ್ ಎಸೆದು ನಂತರ ಮಾರಕಾಯುಧಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಲಿಯನ್ನೂರಿನ ಬೇಕರಿಯೊಂದರಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಸೆಂಥಿಲ್ ಕುಮಾರ್ ಪುದುಚೇರಿ ಗೃಹ ಸಚಿವ ಎ ನಮಶಿವಾಯಂ ಅವರ ಹತ್ತಿರದ ಸಂಬಂಧಿ ಎಂದು ವರದಿಗಳಿವೆ. ಹಿಂಸಾಚಾರದ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದರೂ ಸೆಂಥಿಲ್ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಸೆಂಥಿಲ್ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ದಾಳಿಕೋರರನ್ನು ಬಂಧಿಸಲು ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: 4 ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 80 ವರ್ಷದ ಅಪರಾಧಿಗೆ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ(ಪೋಕ್ಸೋ) ನ್ಯಾಯಾಲಯವು 20 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸುವಂತೆ ತೀರ್ಪು ನೀಡಿದೆ. ವಿಲ್ಸನ್ ಜೊನ್ ತನ್ ಅಲಿಯಾಸ್ ರಾಜಣ್ಣ ಅಲಿಯಾಸ್ ರಾಜಕುಮಾರ್ ಎಂಬ 80 ವರ್ಷದ ಅಪರಾಧಿಯು ದಿನಾಂಕ 5—01—2022ರಂದು ಬೆಳಗ್ಗೆ ಬೆತ್ತಲೂರು ಗ್ರಾಮದ ಚರ್ಚ್ ಮುಂಭಾಗದಲ್ಲಿರುವ ಹುಣಸೆತೋಪಿನ ಮರದ ಬಳಿ ಆಟವಾಡುತ್ತಿದ್ದ ಮಗುವನ್ನು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅಪರಾಧಿಯ ಮಗಳ ಮನೆ ಬೆತ್ತಲೂರು ಗ್ರಾಮದಲ್ಲಿದ್ದು, ಅಲ್ಲಿಗೆ ಬಂದಿದ್ದ ವೇಳೆ ಈ ದುಷ್ಕೃತ್ಯವನ್ನು ಎಸಗಿದ್ದ. ಈ ಪ್ರಕರಣಕ್ಕೂ ಮೊದಲು ಈತ ಪೋಕ್ಸೋ ಪ್ರಕರಣದಲ್ಲಿ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದ್ದೇ ಕೃತ್ಯ ಎಸಗಿ ಮೂರು ವರ್ಷ ಸಾಧಾರಣ ಶಿಕ್ಷೆ ಹಾಗೂ ದಂಡ ಕಟ್ಟಿದ್ದ. ಆದರೆ, ಇದಾದ ಬಳಿಕವೂ…

Read More

ದಾವಣಗೆರೆ: ಚನ್ನಗಿರಿಯ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಲಾಗಿದೆ. ಚುನಾವಣೆಗೆ ಕೆಲವೇ ದಿನಗಳು ಇರುವಾಗ ಹಾಲಿ ಬಿಜೆಪಿ ಶಾಸಕನನ್ನು ಲೋಕಾಯುಕ್ತರು ಬಂಧಿಸಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಶಾಸಕರ ನಿರೀಕ್ಷಣಾ ಜಾಮೀನನ್ನು ಸೋಮವಾರ ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿತ್ತು. ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ರದ್ದಾಗುತ್ತಿದ್ದಂತೆಯೇ ಲೋಕಾಯುಕ್ತ ಪೊಲೀಸರು ಚನ್ನಗಿರಿಯ ಅವರ ನಿವಾಸಕ್ಕೆ ತೆರಳಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ಬಂಧಿಸಲು ಕಾದು ಕುಳಿತಿದ್ದರು. ಅಂತಿಮವಾಗಿ ಸಂಜೆ 7 ಗಂಟೆ ಸುಮಾರಿಗೆ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ತುಮಕೂರಿನ ಕ್ಯಾತ್ಸಂದ್ರ ಟೋಲ್‌ ಬಳಿ ಬಂಧಿಸಿದ್ದಾರೆ. ಅವರು ಬೆಂಗಳೂರಿಗೆ ಬರುವಾಗ ಪೊಲೀಸರು ಬಂಧಿಸಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

Read More