Author: admin

ಕೊರಟಗೆರೆ: ಪಂಚರತ್ನ ಯೋಜನೆಯಿಂದ ಕರ್ನಾಟಕ ರಾಜ್ಯದ ಅಭಿವೃದ್ದಿ ಸಾಧ್ಯ. ಗ್ರಾಮೀಣ ಜನತೆಯ ಆರ್ಥಿಕ ಸದೃಢತೆಗೆ ಶಿಕ್ಷಣ, ವಸತಿ, ಆರೋಗ್ಯ, ರೈತ ಚೈತನ್ಯ ಮತ್ತು ಯುವ ನವಮಾರ್ಗ, ಮಹಿಳಾ ಸಬಲೀಕರಣ ಅಗತ್ಯ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸ್ತ್ರೀ ಶಕ್ತಿ ಸಂಘದ ಸಾಲದಿಂದ ಋಣಮುಕ್ತ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವಾರ, ಹೊಳವನಹಳ್ಳಿ, ಕೋಳಾಲ, ಕಸಬಾ, ತೋವಿನಕೆರೆ ಮತ್ತು ಕೊರಟಗೆರೆ ಪಟ್ಟಣದಲ್ಲಿ ಜಾತ್ಯಾತೀತ ಜನತಾ ದಳ ಪಕ್ಷದಿಂದ ಶನಿವಾರ ಏರ್ಪಡಿಸಲಾಗಿದ್ದ ಪಂಚರತ್ನ ರಥಯಾತ್ರೆ ಸಂಚಾರದ ವೇಳೆ ಮಾತನಾಡಿದರು. ಗುಣಮಟ್ಟದ ಶಿಕ್ಷಣವೇ ಆಧುನಿಕ ಶಕ್ತಿ, ಬಡವರಿಗೆ ವಸತಿಯ ಆಸರೆ, ಪ್ರತಿ ಗ್ರಾ.ಪಂ.ಗೆ ಹೈಟೆಕ್ ಆಸ್ಪತ್ರೆ, ಆಧುನಿಕ ತಂತ್ರಜ್ಞಾನದ ಕೃಷಿ ಚೈತನ್ಯ, ಯುವ ಜನತೆಗೆ ನವಮಾರ್ಗ ಮತ್ತು ಮಹಿಳೆಯರಿಗೆ ಉದ್ಯೋಗಕ್ಕಾಗಿ ಜೆಡಿಎಸ್ ಪಕ್ಷವು ಪಂಚರತ್ನ ಯೋಜನೆ ರೂಪಿಸಿದೆ. ರಾಜ್ಯ ಸರಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ, ಕಾರ್ಯಕ್ರಮದ ಹೆಸರಿನಲ್ಲಿ ಜನರ ಹಣವು ಲೂಟಿ ಆಗುತ್ತಿದೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ…

Read More

ಶಿವಮೊಗ್ಗ : ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ಸಂಬಂಧ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಂ ಕಾಲೇಜಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜಿಗೆ ಅವಕಾಶ ಇಲ್ಲ. ನಾನು ಯಾವುದೇ ಇಲಾಖೆ ಅಧಿಕಾರಿ, ಅಂಟೆಂಡರ್ ನಂಬುವುದಿಲ್ಲ. ಮುಸ್ಲಿಂ ಕಾಲೇಜು ವಿಚಾರದಲ್ಲಿ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲ್ಲ ಎಂದು ಹೇಳಿದ್ದಾರೆ ಎಂದರು. ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಮುಸ್ಲಿಂರಿಗಾಗಿ ಪ್ರತ್ಯೇಕ ಮಹಿಳಾ ಕಾಲೇಜು ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎನ್ನಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಗಡಿ ವಿವಾದದ ಹೊತ್ತಲ್ಲೇ ಮಹಾರಾಷ್ಟ್ರ ಸಚಿವರು ನಾಳೆ ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಶಾಂತಿ ಕದಡಲು ಬಿಡುವುದಿಲ್ಲ. ಭಾವನಾತ್ಮಕವಾಗಿ ಕೆರಳಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದು ಏನು ಮಾಡಬಹುದು ಎಂದು ನೋಡೋಣ. ಬೆಳಗಾವಿ ಎರಡು ರಾಜ್ಯಗಳ ಯುದ್ಧರಂಗ ಅಲ್ಲ. ನೆಲ, ಜಲ ಕಾಪಾಡುವ ದೃಷ್ಟಿಯಿಂದ ನಾವು ಕ್ರಮಕ್ಕೆ ಮುಂದಾಗಿದ್ದೇವೆ. ಮಹಾರಾಷ್ಟ್ರ ಸಚಿವರು ಕಾನೂನು ಉಲ್ಲಂಘನೆ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಮತ್ತು ಗಡಿ ವಿವಾದದ ಮಹಾರಾಷ್ಟ್ರ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ಧೈರ್ಯಶೀಲ್ ಮಾನೆ ಅವರು ಡಿಸೆಂಬರ್ 6 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…

Read More

ತುರುವೇಕೆರೆ:  ಪಕ್ಷದಲ್ಲಿ ದಲಿತರಿಗೆ ಸಲತ್ತುಗಳನ್ನು ಕೊಡಲು ಹಾಲಿ ಶಾಸಕರು ತಾರತಮ್ಯ ಮಾಡಿದ್ದಾರೆ ಅದರಿಂದ ಬೇಸತ್ತು ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಅವರನ್ನು ಮುಂದೆ  ಗೌರವಯುತವಾಗಿ ನೋಡಿಕೊಳ್ಳುತ್ತೇನೆ ಎಂದು ಮಾಜಿ ಶಾಸಕ ಕೃಷ್ಣಪ್ಪ  ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಜೆಡಿಎಸ್ ಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು,  ಕಳೆದ ಬಾರಿ ಬಿಜೆಪಿಯಲ್ಲಿ ಮಾಜಿ  ಜಿಲ್ಲಾ ಘಟಕದ ಎಸ್ ಸಿ ಮೋರ್ಚಾದ ಪದಾಧಿಕಾರಿಯಾಗಿದ್ದ ಜುಂಜಪ್ಪ ಸ್ವಾಮಿ    ಅವರು 25 ಜನ ದಲಿತ ಮುಖಂಡರ ಜೊತೆ ಬಿಜೆಪಿಯನ್ನು ಬಿಟ್ಟು ಜೆಡಿಎಸ್ ಸೇರುತ್ತಿದ್ದಾರೆ. ಬಿಜೆಪಿ ಪಕ್ಷದಲ್ಲಿ ದಲಿತರಿಗೆ ಸವಲತ್ತುಗಳನ್ನು ಕೊಡಲು ಹಾಲಿ ಶಾಸಕರು ತಾರತಮ್ಯ ಮಾಡಿದ್ದಾರೆ ಅದರಿಂದ ಬೇಸತ್ತು ಬಿಜೆಪಿ ಬಿಟ್ಟು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ ಎಂದು ಅವರು ತಿಳಿಸಿದರು. ನಾನು ಶಾಸಕನಾಗಿದ್ದ ಕಾಲದಲ್ಲಿ 285 ಬೋರ್ವೆಲ್ ಗಳನ್ನು ಒಂದೇ ಬಾರಿಗೆ ಅನುಮೋದನೆ ಪಡೆದುಕೊಂಡು ಬಂದಿದ್ದೆ. ಬಹಳಷ್ಟು ಬೋರ್ವೆಲ್ ಗಳನ್ನು ಕೇಳುವವರೇ ಇರಲಿಲ್ಲ. ಒಬ್ಬರಿಗೆ ಎರಡೆರಡು ಬೋರ್ವೆಲ್ ಗಳನ್ನು ಕೊರೆಸಿಕೊಟ್ಟಿದ್ದೇನೆ ಎಂದರು. ದಲಿತ ಮುಖಂಡ  ಜುಂಜಪ್ಪಸ್ವಾಮಿ ಮಾತನಾಡಿ,  ತಾಲೂಕಿನ  ಹಲವಾರು…

Read More

ಕಾರವಾರ: ಜಿಲ್ಲಾ ಪಂಚಾಯಿತಿ ನೌಕರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕಾಳಿ ನದಿ ಸೇತುವೆ ಬಳಿ ನಡೆದಿದೆ. ಶ್ರೀಕಾಂತ ಮೇಲಿನಮನೆ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಕಾರವಾರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿದ್ದ ಶ್ರೀಕಾಂತ ಕಾಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕ ಕೆಲಸದ ಒತ್ತಡ, ಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತಮ್ಮಣ್ಣ ಚನ್ನಬಸಪ್ಪ ಮೇಲಿನಮನೆ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 6 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರತ್ನಲಂ ಜಿಲ್ಲೆಯಲ್ಲಿ ಸಂಭವಿಸಿದೆ. ರಟ್ಲಂ ಜಿಲ್ಲೆಗೆ 35 ಕಿ.,ಮೀ. ದೂರದ ಸತ್ರುದ್ರ ಬಳಿಯ ರಟ್ಲಂ ಲೆಬ್ಡ್ ರಸ್ತೆಯಲ್ಲಿ ಭಾನುವಾರ ಈ ದುರ್ಘಟನೆ ಸಂಭವಿಸಿದೆ. ಅಪಘಾತದಿಂದ ಸಂಚಾರಿ ದಟ್ಟಣೆ ಉಂಟಾಗಿದೆ. ರಟ್ಲಂನಿಂದ ಬದ್ವಾರ್ ಗೆ ಹೋಗುತ್ತಿದ್ದ ಟ್ರಕ್ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡು ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಶಕ್ತೀಕರಣ ನಿರ್ದೇಶನಾಲಯದಿಂದ ಆಯೋಜಿಸಿದ್ದ ವಿಶ್ವಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಿದ್ದು, 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ. ಅಂಗವಿಕಲರು ಯಶಸ್ವಿಯಾಗಿ ಬದುಕು ನಡೆಸಲು ಸರಕಾರ ನಿರ್ಮಿಸುವ ಮನೆಗಳಲ್ಲಿ ಶೇ. 3ರಷ್ಟು ಮೀಸಲಾತಿ ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ವರ್ಕ್‌ ಶಾಪ್‌ ಸ್ಥಾಪಿಸಲು ಸರಕಾರ ಬದ್ಧವಾಗಿದೆ. ಜತೆಗೆ ಅಂಗ ವಿಕಲರಿಗೆ ಮಾ. 31ರೊಳಗೆ ಎರಡು ಸಾವಿರ ವಿದ್ಯುತ್ಛಕ್ತಿಚಾಲಿತ ಟ್ರೈಸಿಕಲ್‌ ನೀಡಲಾಗುತ್ತದೆ. ಅದಕ್ಕಾಗಿ ಈಗಾಗಲೇ 15 ಕೋಟಿ ರೂ. ನೀಡ ಲಾಗಿದ್ದುಎಂದು ಬೊಮ್ಮಾಯಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರ ಸಚಿವರು ಪ್ರವೇಶಿಸುವುದಕ್ಕೆ ಬಿಡುವುದಿಲ್ಲ. ಮಹಾರಾಷ್ಟ್ರ ಸಚಿವರು ಭಯೋತ್ಪಾದನೆಗೆ ಸೇರಿದವರಾಗಿದ್ದಾರೆ. ಅಂತಹ ರಾಷ್ಟ್ರ ದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಪ್ರವೇಶಿಸಲು ಬಿಡುವುದಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 6ರಂದು ಬೆಂಗಳೂರಿನಿಂದ 100 ವಾಹನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿಗೆ ಆಗಮಿಸಲಿದ್ದಾರೆ. ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರುವುದಕ್ಕೆ ಜಿಲ್ಲಾಡಳಿತ ಅವಕಾಶ ಕೊಟ್ಟರೂ ನಾವು ಕೊಡುವುದಿಲ್ಲ. ಬೆಳಗಾವಿ ಗಡಿಯಲ್ಲಿ ಸಚಿವರನ್ನು ತಡೆಯುವ ಕೆಲಸ ಮಾಡುತ್ತೇವೆ ಎಂದರು. ಮಹಾರಾಷ್ಟ್ರ ಸಚಿವರು ಭಯೋತ್ಪಾಕದ ಕುಲಕ್ಕೆ ಸೇರಿದವರು. ಭಯೋತ್ಪಾದನೆ ಉಂಟು ಮಾಡುವಂಕ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅಂತಹ ರಾಷ್ಟ್ರದ್ರೋಹಿಗಳು ಕರ್ನಾಟಕ ಪ್ರವೇಶಿಸುವುದು ಬೇಡ. ಹೀಗಾಗಿ ಗಡಿಯಲ್ಲೇ ಅವರನ್ನು ತಡೆಯುವಂತೆ ಕೆಲಸವನ್ನು ನಮ್ಮಕರವೇ ಕಾರ್ಯಕರ್ತರು ಮಾಡಲಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕಾಂತಾರ ಚಿತ್ರದ ‘ವರಾಹ ರೂಪಂ’ಹಾಡು ಯೂಟ್ಯೂಬ್​​ನಲ್ಲಿ ಪ್ರತ್ಯಕ್ಷವಾಗಿದೆ. ಈ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಬಳಿಕ ಹಾಡನ್ನು ಪ್ರಸಾರ ಮಾಡದಂತೆ ಕೇರಳದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿತ್ತು. ಹಾಗಾಗಿ ಯೂಟ್ಯೂಬ್, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮೊದಲಾದ ಪ್ಲಾಟ್​ಫಾರ್ಮ್​ಗಳಿಂದ ಈ ಹಾಡನ್ನು ಡಿಲಿಟ್‌ ಮಾಡಲಾಗಿತ್ತು. ವರಾಹ ರೂಪಂ ಹಾಡು ಕಾನೂನು ಹೋರಾಟದಲ್ಲಿ ಕಾಂತಾರ ಚಿತ್ರಕ್ಕೆ ಗೆಲುವು ಸಿಕ್ಕಿದೆ. ವರಾಹ ರೂಪಂ ಹಾಡಿನ ಕುರಿತು ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ ’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಚಿತ್ರತಂಡವು ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಯೂಟ್ಯೂಬ್​ನ ಹೊಂಬಾಳೆ ಫಿಲಂಸ್​ನ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮುಂತಾದ ಕಡೆಗಳಿಂದ ಡಿಲಿಟ್‌​ ಮಾಡಿತ್ತು. ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸಿದ್ದು,…

Read More

ಪಾವಗಡ : ರಾಜ್ಯದಲ್ಲಿ 2023 ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಾವಗಡ ತಾಲೂಕು ಸಮಗ್ರ ಅಭಿವೃದ್ಧಿಗೆ ಹಾಗೂ ಆರ್ಥಿಕವಾಗಿ ಸದೃಢವಾಗಲು ಶ್ರಮಿಸುತ್ತೇವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದರು. ಪಾವಗಡ ಪಟ್ಟಣದ ಮುಖಂಡ ತಿಮ್ಮಾರಾಜುರವರ ಮನೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ ನಂತರ ತುಮಕೂರು ರಸ್ತೆಯಲ್ಲಿರುವ ಕನಕದಾಸರ ಪ್ರತಿಮೆಗೆ 42 ಅಡಿವುಳ್ಳ ಬೃಹತ್ ಆಕಾರದ ಕಂಬಳಿ ಹಾರ ಹಾಕಿ ನಂತರ ಶನೇಶ್ವರ ಸರ್ಕಲ್ ಸಾರ್ವಜನಿಕ ಉದ್ದೇಶ ಮಾತನಾಡಿದ ಅವರು ಈ ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಎಂ. ತಿಮ್ಮರಾಯಪ್ಪ ಅವರಿಗೆ ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ರಚಿಸಲು ನಿಮ್ಮೆಲ್ಲರ ಆಶೀರ್ವಾದ ಮುಖ್ಯ ಎಂಬುದಾಗಿ ತಿಳಿಸಿದರು. ಪಾವಗಡ ಘಟಕ ಸರ್ಕಾರಿ ನೌಕರರು ಮಾಜಿ ಮುಖ್ಯಮಂತ್ರಿಗಳಿಗೆ  ಹೆಚ್.ಡಿ.ಕುಮಾರ್ ಸ್ವಾಮಿಯವರಿಗೆ ಒ.ಪಿ.ಎಸ್.ವಜಾ ಗೊಳಿಸಲು ಮನವಿ ಪತ್ರ ಸಲ್ಲಿಸಿದರು ನಂತರ ನಮ್ಮ ಸರ್ಕಾರ ಬಂದ ತಕ್ಷಣವೇ ನಿಮ್ಮ ಸಮಸ್ಯೆ ಬಗ್ಗೆ ಹರಿಸುವುದಾಗಿ ಆಶ್ವಾಸನೆ ನೀಡಿದರು. ಈ ಭಾಗದಲ್ಲಿ ಹದಿನೈದು ಸಾವಿರ ಕುಟುಂಬಗಳಿಗೆ 82 ಕೋಟಿ ಸಾಲ ಮನ್ನಾ…

Read More