Author: admin

ಮಂಡ್ಯ: ರಾಜ್ಯ ಸರಕಾರವು ನಿನ್ನೆ ಹೊಸ ಆದೇಶ ಹೊರಡಿಸಿದೆ. ಗ್ಯಾರಂಟಿ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಬಿಡುಗಡೆಗೆ ಆದೇಶ ಮಾಡಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಸುದ್ದಿಗಾರರ ಜೊತೆಗೆ  ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೆ, ಕಸದ ಮೇಲೆ ತೆರಿಗೆ ಹಾಕುವಂತಹ ಸರಕಾರ ಸಿದ್ದರಾಮಯ್ಯರ ನೇತೃತ್ವದ್ದು ಎಂದು ಟೀಕಿಸಿದರು. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಎಲ್ಲ ಶಾಸಕರು ಅನುದಾನವಿಲ್ಲದೆ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆಲೆ ಏರಿಕೆ ಮೂಲಕ ಸರಕಾರವು ಬಡವರಿಗೆ ಬರೆ ಎಳೆಯುತ್ತಿದೆ. ಕೂಡಲೇ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಹೀನಾಯವಾಗಿ ಸೋಲುವುದು ನಿಶ್ಚಿತ ಎಂಬುದು ಸರ್ವೇಯ ಫಲಿತಾಂಶದಿಂದ ಗೊತ್ತಾಗಿದೆ. ಬಡವರ ವಿರೋಧಿ ಸರಕಾರ ತೊಲಗಬೇಕು ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ರಾಜ್ಯದಲ್ಲಿ ಒಂದೇ ವರ್ಷದಲ್ಲಿ 700 ಬಾಲ್ಯವಿವಾಹಗಳಾಗಿವೆ. ಇದು ನಿಮ್ಮ ಗಮನಕ್ಕೆ ಬಂದಿದೆಯೇ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ನಿಮಗೆ ದಕ್ಷತೆ ಇಲ್ಲವೇ? ಇದಕ್ಕೆ ಕಡಿವಾಣ ಹಾಕಲು ಕಾನೂನು ಇದ್ದರೂ ಬಳಸದಿರುವುದು ತಪ್ಪಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳನ್ನು ಪ್ರಶ್ನಿಸಿದರು. ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, “ನಿಮ್ಮ ಜಿಲ್ಲೆಗಳಲ್ಲಿ ಬಾಲ್ಯ ವಿವಾಹ ಆಗುವುದು ನಿಮ್ಮ ಗಮನಕ್ಕೆ ಯಾಕೆ ಬರುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್ ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇಷ್ಟೊಂದು ಬಾಲ್ಯ ವಿವಾಹಗಳು ನಡೆಯುತ್ತಿರುವುದು ಗಂಭೀರ ವಿಷಯವಲ್ಲವೇ ಎಂದು ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಬೆಳಗಾವಿಯಲ್ಲಿ  ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು. ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ನನ್ನ ಇಲಾಖೆಯಲ್ಲಿ ಇಂತಹದ್ದನ್ನ ಸಹಿಸೋಕೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರಿ ನೌಕರರಿಗೆ ಕಾನೂನು ಇದೆ. ಇಂತಹ ಸಮಸ್ಯೆ ಇದ್ದರೆ ಇಲಾಖೆ ಗಮನಕ್ಕೆ ತರಬೇಕು. ಬಿಇಓ, ಡಿಡಿಪಿಐಗಳ ಗಮನಕ್ಕೆ ತರಬೇಕು. ಏಕಾಏಕಿ ಪ್ರತಿಭಟನೆ ಮಾಡೋದು ಸರಿಯಲ್ಲ ಎಂದಿದ್ದಾರೆ. ಸರ್ಕಾರಿ ನೌಕರರು ಇತಿಮಿತಿಯಲ್ಲಿ ಇರಬೇಕು. ಹೀಗೆ ಮಾಡೋದು ಸರಿಯಲ್ಲ. ಪ್ರತಿಭಟನೆ ಮಾಡೋಕೆ ಸರ್ಕಾರದಲ್ಲಿ ಅವಕಾಶ ಇಲ್ಲ. ಅವರ ಸಮಸ್ಯೆ ಬಗ್ಗೆ ಪ್ರತಿಭಟನೆ ಮಾಡಲಿ. ಅದು ಬಿಟ್ಟು ಇಂತಹ ವಿಷಯಕ್ಕೆ ಪ್ರತಿಭಟನೆ ಮಾಡೋದು ಸರಿಯಲ್ಲ. ಅನೇಕರು ನನಗೆ ಅಮಾನತು ವಾಪಸ್ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಈಗ ಅಮಾನತು ವಾಪಸ್ ಪಡೆಯಬೇಕು ಅಂತ ಕಡತ ತರಿಸಿದ್ದೇನೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ಬಳಿ ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕಾಲುವೆ ಯೋಜನೆ ವಿರೋಧಿಸಿ ರೈತ ಸಂಘಟನೆಗಳು, ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದವು. ನಂತರ ಜಿಲ್ಲಾಡಳಿತ ಯೋಜನಾ ಕಾರ್ಯವನ್ನು ಸ್ಥಗಿತಗೊಳಿಸುವುದಾಗಿ ಭರವಸೆ ನೀಡಿದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಅವರೊಂದಿಗೆ ಮಾತನಾಡಿದ್ದು, ಸಮಸ್ಯೆಯನ್ನು ಪರಿಹರಿಸುವಂತೆ ಸೂಚಿಸಿರುವುದಾಗಿ ಹೇಳಿದರು. ಹೇಮಾವತಿ ನದಿ ಕೆನಾಲ್ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು. ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಸಿಎಂ ತಿಳಿಸಿದರು. ಇನ್ನೂ  ಈ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ,  “ಸರ್ಕಾರವು ಕಾಲುವೆ ನಿರ್ಮಾಣದ ಬಗ್ಗೆ ನಿರ್ಧರಿಸಿ ಸುಮಾರು 1,000 ಕೋಟಿ ರೂ.ಗಳ ಕಾಮಗಾರಿಗೆ ಅನುಮೋದನೆ ನೀಡಿದೆ. ಮೂರು ತಿಂಗಳ ಹಿಂದೆ ನಾವು ಕಾಮಗಾರಿಯನ್ನು ಪ್ರಾರಂಭಿಸಲು ಪ್ರಯತ್ನಿಸಿದಾಗ, ಬಿಜೆಪಿ ಅದನ್ನು ಅವೈಜ್ಞಾನಿಕ ಎಂದು ವಿರೋಧಿಸಿತು. ನಂತರ…

Read More

ಚಿಕ್ಕಮಗಳೂರು:  ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದ ದಂಪತಿ ಹಾಗೂ ನಿವೃತ್ತ ನರ್ಸ್​​ರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹರಾವರಿ ಗ್ರಾಮದ ಕೋಣನಗುಡ್ಡದ ರತ್ನಾ, ಸದಾನಂದ ದಂಪತಿ ಮಗುವನ್ನು ಮಾರಾಟ ಮಾಡಿದ ದಂಪತಿಯಾಗಿದ್ದು, ಕೊಪ್ಪದ ನಿವೃತ್ತ ನರ್ಸ್ ಕುಸುಮ ಎಂಬುವರ ಮೂಲಕ 1 ಲಕ್ಷ ರೂಪಾಯಿಗೆ ಕಾರ್ಕಳದ ರಾಘವೇಂದ್ರ ಎಂಬವರಿಗೆ ಮಗುವನ್ನು ಮಾರಾಟ ಮಾಡಲಾಗಿತ್ತು. ವಿಚಾರ ತಿಳಿದ ಎನ್.ಆರ್ ಪುರ ಠಾಣೆಯ ಪೊಲೀಸರು ತನಿಖೆ ನಡೆಸಿ, ಬಳಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕಾರ್ಕಳಕ್ಕೆ ತೆರಳಿ ಮಗುವನ್ನು ಸುರಕ್ಷಿತವಾಗಿ ತಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ. ಇನ್ನು, ಮಗು ದತ್ತು ಪಡೆದ ರಾಘವೇಂದ್ರ, ನಿವೃತ್ತ ನರ್ಸ್‌ ಕುಸುಮ ಅವರ ಸಹೋದರ. ತಮಗೆ ಮಕ್ಕಳು ಇಲ್ಲದೆ ಇರುವುದರಿಂದ ಸಾಕಲು ಮಗು ಪಡೆದಿದ್ದೇನೆ ಎಂದು ರಾಘವೇಂದ್ರ ಪೊಲೀಸರ ಮುಂದೆ ಹೇಳಿದ್ದಾರೆ ಎನ್ನಲಾಗಿದೆ. ರತ್ನಾ–ಸದಾನಂದ…

Read More

ತುಮಕೂರು: ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿ ಹೋರಾಟ ತೀವ್ರಗೊಂಡಿದ್ದು ಹೆದ್ದಾರಿ ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ನಿಟ್ಟೂರು ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಹೇಮಾವತಿ ಲಿಂಕ್‌ ಕೆನಾಲ್‌ ಮೂಲಕ ನೀರು ತೆಗೆದುಕೊಂಡು ಮಾಗಡಿ, ರಾಮನಗರಕ್ಕೆ ಹೋದರೆ ತುಮಕೂರು ಜನರಿಗೆ ಅನ್ಯಾಯವಾಗಲಿದೆ. ಸರ್ಕಾರ ಯಾವುದೇ ಮುಂದಾಲೋಚನೆ ಇಲ್ಲದೆ ಯೋಜನೆ ಜಾರಿಗೊಳಿಸಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ. ಕೂಡಲೇ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೆ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಹೋರಾಟ ಸಮಿತಿ ಇಂದು ಬೃಹತ್‌ ಹೋರಾಟಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗುಬ್ಬಿ ತಹಶೀಲ್ದಾರ್‌ ಬಿ.ಆರತಿ ಅವರು ಮೇ 31ರ ಬೆಳಿಗ್ಗೆ 6 ಗಂಟೆಯಿಂದ ಜೂನ್‌ 1ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಇನ್ನು ಪ್ರತಿಭಟನಾಕಾರರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೆ ನಿಷೇಧಾಜ್ಞೆ ಧಿಕ್ಕರಿಸಿ ರೈತರು, ಮುಖಂಡರು ಹೋರಾಟ ತೀವ್ರಗೊಳಿಸಿದ್ದಾರೆ. ಶಾಸಕರಾದ ಬಿ. ಸುರೇಶ್‌ಗೌಡ,…

Read More

ತುಮಕೂರು:  ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಇಂದು ತುಮಕೂರಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಭಾರೀ ಪ್ರತಿಭಟನೆ ಬೆನ್ನಲ್ಲೇ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾಮಗಾರಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಜಿಲ್ಲಾಧಿಕಾರಿ ಪೋನ್ ಮೂಲಕ ಭರವಸೆ ನೀಡಿದ ನಂತರ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಹೋರಾಟಗಾರರು ಹೋರಾಟ ಕೈಬಿಟ್ಟಿದ್ದಾರೆ. ಸಂಕಾಪುರ ಬಳಿಯ ಕಾಮಗಾರಿ ಬಳಿಗೆ ಬಂದು ರೈತರು ಹೋರಾಟ ಮಾಡಿದ್ದಾರೆ. ರೈತರ ಹೋರಾಟಕ್ಕೆ ಸ್ಪಂದಿಸಿ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಶಾಸಕರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳುವಂತೆ‌ ಸೂಚನೆ ನೀಡಲಾಗಿದ್ದು, ಸದ್ಯ ಹೋರಾಟಗಾರರಿಂದ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ಪ್ರತಿಭಟನೆಗೂ ಮುನ್ನವೇ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಬ್ಬಿ ತಾಲೂಕಿನ ಚೇಳೂರಿನ ಫಾರ್ಮ್ ಹೌಸ ವೊಂದರಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.  ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾಕಾರರು ಪ್ರತಿಭಟನೆಗೆ ಕರೆ ನೀಡಿದ್ದರು. ಇನ್ನೂ  ಮೂರು ಬಸ್ ನಲ್ಲಿ ಆಗಮಿಸಿದ್ದ ಪ್ರತಿಭಟನಕಾರರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ನಿಟ್ಟೂರು ಸಮೀಪ ಆಂಜನೇಯಸ್ವಾಮಿ ಬಳಿ ಪ್ರತಿಭಟನಾಕಾರರು  ಸೇರಿದ್ದರು. ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜ್ಯೋತಿಗಣೇಶ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಮಧುಗಿರಿ ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ 2025–26ನೇ ಸಾಲಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಳಡಿ ರೈತರಿಗೆ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಹ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ರೈತರಿಗೆ ಹಾಗೂ ಉದ್ದಿಮೆದಾರರಿಗೆ ನೆರವು ನೀಡಲಾಗುವುದು. ಈ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಬಾಳೆ, ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ‍್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಗೋಡಂಬಿ, ಕೋಕೊ, ಕಾಳುಮೆಣಸು ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಅಣಬೆ ಉತ್ಪಾದನಾ ಘಟಕ, ಹಸಿರು ಮನೆ ಹಾಗೂ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ; ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ…

Read More

ನವದೆಹಲಿ: ಅಡುಗೆ ಎಣ್ಣೆ(Cooking Oil)ಗಳ ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡುವ ಮತ್ತು ದೇಶೀಯ ಸಂಸ್ಕರಣಾಗಾರಗಳನ್ನು ರಕ್ಷಿಸುವ ಗುರಿ ಹೊಂದಿರುವ ಕೇಂದ್ರವು ಶುಕ್ರವಾರ ಕಚ್ಚಾ ಪಾಮ್ ಎಣ್ಣೆ, ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಮೂಲ ಕಸ್ಟಮ್ ಸುಂಕವನ್ನು ಶೇ. 10 ಕ್ಕೆ ಇಳಿಕೆ ಮಾಡಿದೆ. ಈ ಮೂರು ಕಚ್ಚಾ ಖಾದ್ಯ ತೈಲಗಳ ಮೇಲಿನ ಸುಂಕವು ಶೇ. 20 ರಷ್ಟಿತ್ತು. ಅದನ್ನೀಗ ಸರ್ಕಾರ ಶೇ 10ರಷ್ಟು ಇಳಿಕೆ ಮಾಡಿದೆ. ಹೀಗಾಗಿ ಅಡುಗೆ ಎಣ್ಣೆ ಬೆಲೆಗಳಲ್ಲಿ ಇಳಿಕೆ ಆಗುವ ಸಾಧ್ಯತೆಗಳಿವೆ. ಭಾರತವು ತನ್ನ ದೇಶೀಯ ಖಾದ್ಯ ತೈಲದ ಅಗತ್ಯದ ಶೇ. 50 ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳುತ್ತದೆ. 2023-24 ರ ತೈಲ ಮಾರುಕಟ್ಟೆ ವರ್ಷದಲ್ಲಿ (ನವೆಂಬರ್ ನಿಂದ ಅಕ್ಟೋಬರ್ ವರೆಗೆ) ಭಾರತವು 159.6 ಲಕ್ಷ ಟನ್ ಖಾದ್ಯ ತೈಲಗಳನ್ನು ಆಮದು ಮಾಡಿಕೊಂಡಿದ್ದು, ಇದರ ಮೌಲ್ಯ ಸುಮಾರು 1.32 ಲಕ್ಷ ಕೋಟಿ ರೂಪಾಯಿ ಎಂಬುದು ಗಮನಾರ್ಹ. ಈ ಸಂಬಂಧ ಹಣಕಾಸು ಸಚಿವಾಲಯ…

Read More