Subscribe to Updates
Get the latest creative news from FooBar about art, design and business.
- ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
- ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ
- ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
- ತುಮಕೂರು| ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
- ಸರಗೂರು: ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
- ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
- ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
- ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
Author: admin
ಈಗಾಗಲೇ ಚುನಾವಣೆಗೆ ಮೂರು ಪಕ್ಷಗಳಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ವರುಣ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಶೀಲನೆ ನೆಪದಲ್ಲಿ ವರುಣ ಕ್ಷೇತ್ರಕ್ಕೂ ಕನ್ನ ಬೀಳುವ ಸಂಭವ ಇದೆ ಎಂದು ವರುಣ ಕ್ಷೇತ್ರದ ಶಾಸಕ ಯತಿಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಠದ ಅಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು. ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟರು ಪದಾಧಿಕಾರಿಗಳ ಸಭೆಯನ್ನು ನಂಜನಗೂಡಿನ ಮಾದೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಈಗಾಗಲೇ ಚುನಾವಣೆ ಹತ್ತಿರವಾಗುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವುದರಿಂದ ಎಲ್ಲೆಲ್ಲಿ ಕಾಂಗ್ರೆಸ್ ಪಕ್ಷದ ಮತದಾರರ ಸಂಖ್ಯೆ ಹೆಚ್ಚಿದೆಯೋ ಅಂತಹ ಕಡೆಗಳಲ್ಲಿ ಬಿಜೆಪಿ ಪಕ್ಷದವರು ಸೋಲಿನ ಭೀತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ನೆಪದಲ್ಲಿ ಇರುವಂತ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮತದಾರ…
ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ವಿದ್ಯುತ್ ದರ ಹೆಚ್ಚಳ ಮಾಡಲಾಗಿತ್ತು. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಂತ ಜನತೆಗೆ ಮತ್ತಷ್ಟು ಹೊರೆ ಬಿದ್ದಂತೆ ಆಗಿತ್ತು. ಈ ಬೆನ್ನಲ್ಲೇ ಹೊಸ ವರ್ಷಕ್ಕೆ ವಿದ್ಯುತ್ ದರ ಕಡಿತಕ್ಕೆ ರಾಜ್ಯ ಸರ್ಕಾರ ಮುಂದಾಗಿ ಎನ್ನಲಾಗಿದೆ. ಈ ಬಗ್ಗೆ ಇಂಧನ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್, ವಿದ್ಯುತ್ ದರ ಕಡಿತ ಪ್ರಸ್ತಾವನೆ ಸಿದ್ಧಪಡಿಸುವಂತೆ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಸೂಚನೆಯ ಮೇರೆಗೆ ಇಂಧನ ಇಲಾಖೆಯಿಂದ ವಿದ್ಯುತ್ ದರ ಇಳಿಕೆಯ ಪ್ರಸ್ತಾವನೆಯನ್ನು ಎಲ್ಲಾ ಎಸ್ಕಾಂಗಳು ಸಿದ್ಧಪಡಿಸಿ ಕೆ ಇ ಆರ್ ಸಿಗೆ ಸಲ್ಲಿಸಿವೆ ಎಂದು ಹೇಳಲಾಗುತ್ತಿದೆ. ಸಲ್ಲಿಕೆಯಾಗಿರುವಂತ ಪ್ರಸ್ತಾವನೆಯಲ್ಲಿ ವಿದ್ಯುತ್ ಬಳಕೆದಾರರ ಶುಲ್ಕ ಕಡಿತ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ. ಪ್ರತಿ ಯೂನಿಟ್ ಗೆ 70 ಪೈಸೆಯಿಂದ 2 ರೂವರೆಗೆ ಶುಲ್ಕ ಇಳಿಕೆ ಆಗಲಿದೆ ಎನ್ನಲಾಗಿದೆ. ಈ ಪ್ರಸ್ತಾವನೆಯನ್ನು ಎಲ್ಲಾ ಎಸ್ಕಾಂಗಳಿಂದ ಕೆ ಇ ಆರ್ ಸಿಗೆ ಸಲ್ಲಿಸಿರುವ ನಿರ್ಧಾರವನ್ನು ಕೈಗೊಂಡಿವೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ನನ್ನ 40 ರೂಪಾಯಿ ತೆಗೆದುಕೊಂಡಿದ್ದೀಯಾ ಎಂದು ಅತ್ತೆ ಭೀಮವ್ವ ಗುಳ್ಳಣ್ಣವರು ಸೊಸೆ ರಂಗವ್ವ ಗುಳ್ಳಣ್ಣವರ ಮೇಲೆ ಆರೋಪ ಮಾಡಿದ್ದಾಳೆ. ಈ ವಿಚಾರವಾಗಿ ಅತ್ತೆ, ಸೊಸೆಯ ಜಗಳ ತಾರಕಕ್ಕೇರಿದೆ. ಪತ್ನಿ ಹಾಗೂ ತಾಯಿ ಜಗಳದಿಂದ ಕೋಪಗೊಂಡ ಮಗ ಮಳಿಯಪ್ಪ ಜಗಳ ಬಿಡಿಸುವ ವೇಳೆ ಪತ್ನಿ ಕಪಾಳಕ್ಕೆ ಪತಿ ಹೊಡೆದಿದ್ದಾನೆ. ಅಸ್ತಮಾ, ಬಿ.ಪಿಯಿಂದ ಬಳಲುತ್ತಿದ್ದ ಪತ್ನಿ, ಒಂದೇ ಹೊಡೆತಕ್ಕೆ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಇನ್ನು 12 ವರ್ಷದ ಹಿಂದೆ ತನ್ನ ಸೋದರ ಮಾವನ ಮಗಳನ್ನೇ ಮದುವೆಯಾಗಿದ್ದ ಮಳಿಯಪ್ಪ ಹಮಾಲಿ ಕೆಲಸ ಮಾಡುತ್ತಿದ್ದ, ಕೇವಲ 40 ರೂಪಾಯಿ ಜಗಳ ಒಂದು ಜೀವವನ್ನೇ ಬಲಿ ತೆಗೆದುಕೊಂಡಿದ್ದು, ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಲಯದಲ್ಲಿ ಇಂದು ಮಾತನಾಡಿರುವ ನಟ ಶಿವರಾಜ್ ಕುಮಾರ್, ನಾಡು ನುಡಿ ಗಡಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿರಬೇಕು. ನಾವು ಎಲ್ಲಿದ್ದೇವೆ. ಯಾವ ಮಣ್ಣಿನಲ್ಲಿ ಇದ್ದೇವೆಂಬುದು ಮುಖ್ಯ. ನಮ್ಮ ನೆಲೆ ಜಲ ಭಾಷೆಗೆ ಗೌರವ ನೀಡುವುದು ನಮ್ಮೆಲ್ಲರ ಧರ್ಮ ಎಂದಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಇತ್ತ ಕಳೆದ ಎರಡು ದಿನಗಳ ಹಿಂದೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿದ ಘಟನೆಗೆ ನಾಡಿನಲ್ಲಿ ಆಕ್ರೋಶದ ಕಿಡಿ ಹೊತ್ತಿ ಉರಿದಿತ್ತು. ಹಾಗೆಯೇ ಡಿಸೆಂಬರ್ 6ಕ್ಕೆ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿದ್ದು ಇದಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವು ನಡೆಯಲಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರಕಾರದ ಸಾಧನೆಗಳು, ಜನಪರ ಕೆಲಸಗಳ ಸಾರ್ಥಕ ಸೇವೆ ಮತ್ತು ಸಬಲೀಕರಣಕ್ಕಾಗಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವನ್ನು ಪಟ್ಟಣದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 7ರ ಬುಧವಾರ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಜಿಲ್ಲಾ ಮಂತ್ರಿಗಳಾದ ಬಿ.ಸಿ ನಾಗೇಶ್, ಜೆ.ಸಿ.ಮಾಧುಸ್ವಾಮಿ, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರುಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ ಸೇರಿದಂತೆ ಜಿಲ್ಲೆಯ ನಾಯಕರು, ಮುಖಂಡರು, ತಾಲ್ಲೂಕಿನ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಈ ಜನಸಂಕಲ್ಪ ಯಾತ್ರೆಗೆ ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 2023 ರ…
ಬೆಣಚು ಕಲ್ಲಿನ ಗಣಿಗಾರಿಕೆ ಕುಸಿದ ಪರಿಣಾಮ 7 ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಛತ್ತೀಸ್ ಗಢದಲ್ಲಿ ಶುಕ್ರವಾರ ಸಂಭವಿಸಿದೆ. ಬಸ್ತಾರ್ ಜಿಲ್ಲೆಯ ಜಗ್ದಲ್ ಪುರದಿಂದ 12 ಕಿ.ಮೀ. ದೂರದಲ್ಲಿರುವ ಗಣಿಗಾರಿಕೆಯಲ್ಲಿ ಈ ದುರಂತ ಸಂಭವಿಸಿದ್ದು, ಮೃತಪಟ್ಟವರಲ್ಲಿ 6 ಮಂದಿ ಮಹಿಳೆಯರು ಎಂದು ಪೊಲೀಸರು ತಿಳಿಸಿದ್ದಾರೆ. ಕಣಿವೆಯಲ್ಲಿ ಕಾರ್ಮಿಕರು ಮಣ್ಣು ಅಗೆಯುತ್ತಿದ್ದಾಗ ಗಣಿಗಾರಿಕೆಯ ಒಂದು ಭಾಗ ಕುಸಿದಿದೆ. ಇದರಲ್ಲಿ ಕಾರ್ಮಿಕರು ಸಿಲುಕಿ ಮೃತಪಟ್ಟರು ಎಂದು ಹೇಳಲಾಗಿದೆ. ಮಣ್ಣಿನಡಿ 7 ಮಂದಿ ಮಾತ್ರ ಇದ್ದರು ಎಂದು ಹೇಳಲಾಗಿದೆ. ಆದರೆ ಘಟನಾ ಸ್ಥಳಕ್ಕೆ ಆಗಮಿಸಿರುವ ರಕ್ಷಣಾ ಸಿಬ್ಬಂದಿ ಪರಿಹಾರ ಕಾರ್ಯದಲ್ಲಿ ತೊಡಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ರಸ್ತೆ ಗುಂಡಿಗಳಿಗೆ ರಾಜ್ಯ ಸರಕಾರ ಹಾಗೂ ಬಿಬಿಎಂಪಿ ಮುಕ್ತಿ ನೀಡದೇ ಇರುವುದರಿಂದ ವಾಹನಗಳ ಸಂಚಾರ ವೇಗದಲ್ಲಿ ಕುಸಿತ ಕಂಡು ಬಂದಿದೆ. ಸಂಚಾರಿ ವಿಭಾಗದ ವಿಶೇಷ ಕಮಿಷನರ್ ಆಗಿ ಇತ್ತೀಚೆಗೆ ನೇಮಕಗೊಂಡ ಡಾ.ಎಂ.ಎ.ಸಲೀಂ ಮಾತನಾಡಿ, ಕಳೆದ 10 ದಿನಗಳಲ್ಲಿ ವಾಹನಗಳ ಸಂಚಾರ ವೇಗ ಶೇ.50ರಷ್ಟು ಕುಸಿದಿದೆ. ನಗರದಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ಲಘು ವಾಹನಗಳು ನಗರ ಪ್ರವೇಶಿಸಿದಂತೆ ನಿರ್ಬಂಧ ವಿಧಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಲಘು ಹಾಗೂ ಗೂಡ್ಸ್ ವಾಹನಗಳ ಸಂಚಾರದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಅಲ್ಲದೇ ರಸ್ತೆ ಗುಂಡಿಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅವರು ಸೂಚಿಸಿದ್ದಾರೆ. ನಗರದಲ್ಲಿ ಅತೀ ಹೆಚ್ಚು ಸಂಚಾರ ದಟ್ಟಣೆ ಇರುವ 9 ಕಾರಿಡಾರ್ ರಸ್ತೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಸುಗಮ ಸಂಚಾರದ ಕಡೆ ಗಮನ ಹರಿಸಲಾಗುತ್ತಿದೆ. ಇದರಲ್ಲಿ ಸಿಲ್ಕ್ ಬೋರ್ಡ್, ಗೊರಗುಂಟೆಪಾಳ್ಯ ಅತೀ ಹೆಚ್ಚು ಗಮನ ಹರಿಸಲಾಗುತ್ತಿದೆ. ಈ…
ಸರ್ಕಾರಿ ಶಾಲೆಯ ತರಗತಿಯೊಳಗೆ ಇಬ್ಬರು ಹುಡುಗರು ತಮ್ಮ 13 ವರ್ಷದ ಕ್ಲಾಸ್ ಮೇಟ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಮುಂಬೈನ ಮಾಟುಂಗಾ ಪ್ರದೇಶದಲ್ಲಿ ದಾಖಲಾಗಿದೆ. ಕೆಲವು ದಿನದ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು ನೃತ್ಯ ಅಭ್ಯಾಸಕ್ಕಾಗಿ ಹೊರಬಂದಾಗ ಆಕೆಯ ಇಬ್ಬರು ಕ್ಲಾಸ್ ಮೇಟ್ಸ್ ಗಳು 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮಾಟುಂಗಾ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ. ಹುಡುಗಿ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದು, ಪೋಷಕರು ತಕ್ಷಣ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿರತೆ ದಾಳಿಗೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಯುವತಿ ಮೃತಪಟ್ಟ ಪ್ರಕರಣ ಸಂಬಂಧ ಮೃತ ಯುವತಿ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ ಹಸ್ತಾಂತರಿಸಲಾಗಿದೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ 5 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಇದೇ ವೇಳೆ ಕುಟುಂಬದ ಒಬ್ಬರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾದ ಹಿನ್ನೆಲೆ ಆಕ್ರೋಶಗೊಂಡಿರುವ ಗ್ರಾಮದ ಜನರು ಧರಣಿ ಕುಳಿತಿದ್ದರು. ಅದತರಂತೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಆರ್ಎಫ್ಒಗೆ ಕಡ್ಡಾಯ ರಜೆ ನೀಡಿ ತನಿಖೆ ಬಳಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಂತರ ಗ್ರಾಮಸ್ಥರು ಧರಣಿಯನ್ನು ಕೈಬಿಟ್ಟರು. ತಾಲೂಕಿನಲ್ಲಿ ಚಿರತೆ ಹಾವಳಿ ಇರುವ ಹಿನ್ನೆಲೆ 15 ತಂಡಗಳನ್ನು ರಚನೆ ಮಾಡಿ ಬೇರೆಬೇರೆ ಕಡೆಗಳಲ್ಲಿ ಕಾರ್ಯಾಚರಣೆಗೆ ಇಳಿಸುತ್ತೇವೆ. 7 ದಿನಗಳ ಒಳಗೆ ಕಂಡಲ್ಲಿ ಗುಂಡು ಹಾರಿಸಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯ ನಾವು ಮಾಡುತ್ತೇವೆ. ಆರ್ಎಫ್ಒ ಅವರನ್ನು ಕಡ್ಡಾಯ ರಜೆ…
ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ವೈ.ಎಸ್ ರವಿಕುಮಾರ್ ಅವರ ಪತ್ನಿ ರೂಪಾಲಿ ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಆರೋಪಿಸಿದ್ದಾರೆ. ಹಣ ಕೊಡದೆ ಇದ್ದಿದ್ದಕ್ಕಾಗಿ ನನ್ನನ್ನು ಗಡಿಪಾರು ಮಾಡಿದ್ದಾರೆ ಎಂದು ಚಿತ್ತಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಣಿಕಂಠ ರಾಠೋಡ್ ಹೇಳೀದ್ದಾರೆ. ಸೆ.30 ರಂದು ರೂಪಾಲಿ ಸೇರಿದಂತೆ ಅವರ ತಂಡದಿಂದ ದಾಂಡಿಯಾ ನೈಟ್ ಆಯೋಜಿಸಲಾಗಿತ್ತು. ಮುಂಬೈ ಮೂಲದ ಇವೆಂಟ್ ಕಂಪನಿಗೆ ಮೂರು ಲಕ್ಷ ನೀಡಿದ್ದೆ. ಅನಂತರ ಮತ್ತೆ ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು, ಕೊಡದೇ ಇದ್ದಾಗ ಅವರ ಪತಿ ನಗರ ಪೊಲೀಸ್ ಕಮಿಷನರ್ ಡಾ.ವೈ ಎಸ್ ರವಿಕುಮಾರ್ ನನ್ನನ್ನು ಸುಳ್ಳು ಪ್ರಕರಣ ದಾಖಲಿಸಿ ಗಡಿಪಾರು ಆದೇಶ ಮಾಡಿದ್ದರು. ನನ್ನ ಹಣ ನನಗೆ ನೀಡಬೇಕು, ಇಲ್ಲದಿದ್ದರೆ ಮೇಲಾಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದು ರಾಠೋಡ್ ತಿಳಿಸಿದ್ದಾರೆ. ನನ್ನ ಪತ್ನಿ ದಾಂಡಿಯಾ ನೈಟ್ ಮಾಡಿದ್ದು ನಿಜ, ಅನೇಕರಿಂದ ಸ್ಪಾನ್ಸರ್ ಕೇಳಿದ್ದಾರೆ. ಮಣಿಕಂಠ ರಾಠೋಡ್ರಿಗೂ ಕೇಳಿರಬಹುದು, ಹಣಕ್ಕಾಗಿ ಒತ್ತಾಯ…