Author: admin

ಬೆಳಗಾವಿ: ಬಾಳೇಕುಂದ್ರಿ ಕೆ ಎಚ್ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಮತ್ತು ನೂತನ ಸ್ಮಾರ್ಟ್ ಕ್ಲಾಸ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಉದ್ಘಾಟಿಸಿದರು. ಕಾಲ ಬದಲಾದಂತೆ ತಂತ್ರಜ್ಞಾನಗಳು ಬದಲಾಗುತ್ತಿವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತ್ಯಂತ ವೇಗವಾಗಿ ಬದಲಾಗುವ ತಂತ್ರಜ್ಞಾನದೊಂದಿಗೆ ಮಕ್ಕಳು ಓಡಲೇಬೇಕಾಗಿದೆ. ಹಾಗಾಗಿ ಸ್ಮಾರ್ಟ್ ಕ್ಲಾಸ್ ಗಳು ಅನಿವಾರ್ಯವಾಗಿವೆ. ವಿದ್ಯಾರ್ಥಿಗಳು ಸಮರ್ಪಕ ಬಳಕೆಯ. ಮೂಲಕ ಇದರ ಪ್ರಯ.ೋಜನ ಪಡೆಯಬೇಕು ಎಂದು ಚನ್ನರಾಜ ಕರೆ ನೀಡಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ನಿಲೇಶ್ ಚಂದಗಡ್ಕರ್, ಶಹಬಾಜ್ ಶೇಖ್, ಜೈನೂಲ್ ಕುಡಚಿ, ಕುತಬುದ್ದಿನ ಅತ್ತಾರ ಹಾಗೂ ಶಾಲಾ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಇಟಲಿಯ ಕ್ಯಾಲಬ್ರಿಯಾದಲ್ಲಿ ನಿರಾಶ್ರಿತರ ದೋಣಿ ಮುಳುಗಿ 59 ಸಾವು,ದೋಣಿಯಲ್ಲಿ ಸುಮಾರು 150 ಮಂದಿ ಇದ್ದರು ಎಂದು ವರದಿಯಾಗಿದೆ .ಇನ್ನುಳಿದವರನ್ನು ಪತ್ತೆ ಹಚ್ಚಲು ಶೋಧ ಕಾರ್ಯ ನಡೆಯುತ್ತಿದೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. 27 ಮಂದಿಯ ಮೃತದೇಹಗಳು ದಡದಲ್ಲಿ ಕೊಚ್ಚಿಹೋಗಿವೆ. ದೋಣಿಯಲ್ಲಿ ಇರಾನ್, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಜನರು ಇದ್ದರು. ಇಳಿಯಲು ಸ್ವಲ್ಪ ದೂರ ಇದ್ದಾಗ ಅವಘಡ ಸಂಭವಿಸಿದೆ. ಹವಾಮಾನ ವೈಪರೀತ್ಯ ಹಾಗೂ ಬೋಟ್ ಬಂಡೆಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಅದೇ ಸಮಯದಲ್ಲಿ, ನಿರಾಶ್ರಿತರ ಅಕ್ರಮ ಆಗಮನವನ್ನು ಕಟ್ಟುನಿಟ್ಟಾಗಿ ತಡೆಯಲಾಗುವುದು ಎಂದು ಇಟಲಿಯ ಆಂತರಿಕ ಸಚಿವ ಮ್ಯಾಟಿಯೊ ಪಿಯಾಂಟೆಡೋಸಿ ಹೇಳಿದ್ದಾರೆ. ನಿರಾಶ್ರಿತರು ಇಟಲಿಯ ಮೆಡಿಟರೇನಿಯನ್ ಸಮುದ್ರದ ಮೂಲಕ ಯುರೋಪಿಗೆ ಆಗಮಿಸುತ್ತಾರೆ. ಇದು ಅತ್ಯಂತ ಅಪಾಯಕಾರಿ ಜಲಮಾರ್ಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ಮುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಸಿಬಿಐ ದಾಖಲಿಸಿರುವ ಮದ್ಯ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮೊದಲ ಆರೋಪಿಯಾಗಿದ್ಧಾರೆ. ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆಯನ್ನು ಆಯೋಜಿಸಲು ನಿರ್ಧರಿಸಿದೆ. ಎಎಪಿ ನಾಯಕರು ಎಲ್ಲಾ ರಾಜ್ಯಗಳ ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆಗಳನ್ನು ಆಯೋಜಿಸುವುದಾಗಿ ಘೋಷಿಸಿದರು. ಬಂಧನದ ನಂತರ ಎಎಪಿ ಟ್ವೀಟ್ ಮಾಡಿದ್ದು, ಇದು ಪ್ರಜಾಪ್ರಭುತ್ವದಲ್ಲಿ ಕರಾಳ ದಿನ. ನಕಲಿ ಪ್ರಕರಣದಲ್ಲಿ ವಿಶ್ವದ ಅತ್ಯುತ್ತಮ ಶಿಕ್ಷಣ ಸಚಿವರನ್ನು ಸಿಬಿಐ ಬಂಧಿಸಿದ್ದು, ಇದರ ಹಿಂದೆ ಬಿಜೆಪಿಯ ರಾಜಕೀಯ ಸೇಡಿನ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದೆ. ಮನೀಶ್ ಸಿಸೋಡಿಯಾ ಸೇರಿದಂತೆ 15 ಜನರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಸಿಸೋಡಿಯಾ ಮೊದಲ ಆರೋಪಿ. ದೆಹಲಿಯ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಮತ್ತು ಇಬ್ಬರು ಹಿರಿಯ…

Read More

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಟೀಕಿಸಿದರು. ಕೇಂದ್ರ ಸರ್ಕಾರವನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಿದ ಖರ್ಗೆ, ಪ್ರಜಾಪ್ರಭುತ್ವವನ್ನು ರಕ್ಷಿಸಲು ದೌರ್ಜನ್ಯವನ್ನು ತೀವ್ರವಾಗಿ ಎದುರಿಸಬೇಕಾಗುತ್ತದೆ ಎಂದು ಹೇಳಿದರು. ಕಾಂಗ್ರೆಸ್‌ನ 85ನೇ ಸರ್ವಸದಸ್ಯ ಅಧಿವೇಶನದ ನಂತರ ರಾಯ್‌ಪುರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ದೇಶದಲ್ಲಿ ಸರ್ವಾಧಿಕಾರಿ ಆಡಳಿತ ನಡೆಯುತ್ತಿದೆ ಎಂದು ಖರ್ಗೆ ಆರೋಪಿಸಿದರು. ಸಂಸತ್ತಿನಲ್ಲಿ ಬಡವರು, ಪರಿಶಿಷ್ಟ ಪಂಗಡಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳು ಸ್ವತಂತ್ರವಾಗಿಲ್ಲ. ಅವರ ಮತ್ತು ರಾಹುಲ್ ಗಾಂಧಿಯವರ ಭಾಷಣಗಳನ್ನು ಬಿಟ್ಟುಬಿಡಲಾಗಿದೆ. ಗೌತಮ್ ಅದಾನಿ ಅವರ ಬಗ್ಗೆ ಪ್ರಶ್ನೆಯಾಗಿದ್ದು, ಯಾವುದೇ ಅವಹೇಳನಕಾರಿ ಪದಗಳನ್ನು ಬಳಸಿಲ್ಲ ಎಂದು ಖರ್ಗೆ ಹೇಳಿದರು. 2004ರ ಮೊದಲು ಅದಾನಿ ಆಸ್ತಿ 3,000 ಕೋಟಿ ರೂ. 2014ರಲ್ಲಿ 50,000 ಕೋಟಿ ರೂ.ಗೆ ಏರಿಕೆಯಾಗಿದೆ. 2021 ರಿಂದ 2023 ರವರೆಗೆ ಸಂಪತ್ತು 13 ಪಟ್ಟು ಹೆಚ್ಚಾಗಿದೆ. ಇದು ಯಾವ ಮಾಯೆ?…

Read More

ನಾಗಾಲ್ಯಾಂಡ್‌:  ಚುನಾವಣಾ ಕರ್ತವ್ಯದ ನಿಮಿತ್ತ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಭಾನುವಾರ ಮಧ್ಯಾಹ್ನ ನಾಗಾಲ್ಯಾಂಡ್‌ನ ವೋಖಾದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ. ವೋಖಾ ಜಿಲ್ಲೆಯ ಡೊವಾಂಗ್ ಜಲವಿದ್ಯುತ್ ಯೋಜನೆಯ ಬಳಿ ಮತಗಟ್ಟೆ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದೆ. ಮತದಾನ ಕೇಂದ್ರದಿಂದ ಹತ್ತು ನಿಮಿಷಗಳ ಅಂತರದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್ ಚಾಲಕ ಸಾವನ್ನಪ್ಪಿದ್ದಾನೆ ಗಾಯಗೊಂಡ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದಿಮಾಪುರಕ್ಕೆ ವಿಮಾನದಲ್ಲಿ ರವಾನಿಸಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ  ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಖುಷ್ಬು ನೇಮಕಗೊಂಡಿದ್ದಾರೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಟ್ವಿಟರ್‌ನಲ್ಲಿ ಅವರ ಅವಿರತ ಪ್ರಯತ್ನಗಳು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಹೋರಾಟವನ್ನು ಗುರುತಿಸಿ ಅಭಿನಂದಿಸಿದ್ದಾರೆ. ಈ ಹಿಂದೆ ನಟಿ ಖುಷ್ಬು ಅವರು 2020 ರಿಂದ ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಸೇರಿದ ನಂತರ ಬಿಜೆಪಿಗೆ ಸೇರಿದ್ದರು. ಖುಷ್ಬು ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 2021 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅವರು ಆಯರ್ವಿಳಕ್ಕು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಭಯಾನಕ ಫೋಟೋವನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. 3 ದಿನಗಳ ಹಿಂದೆ ಎಂಜಿನಿಯರ್ ಒಬ್ಬರು ತೆಗೆದ ಕಪ್ಪು ಬಣ್ಣದ ಭೂತದ ಆಕೃತಿಯ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಇದು ಅಲಕ್ಸ್ ಎಂಬ ಅಲೌಕಿಕ ಆಕೃತಿಯಂತೆ ಕಾಣುತ್ತದೆ ಎಂದು ಅವರು ಹೇಳಿದ್ದಾರೆ.ಇದಾದ ನಂತರ ಅಲೌಕಿಕ ಆಕೃತಿಯನ್ನು ನಿಜವಾಗಿಯೂ ತೆಗೆದುಕೊಳ್ಳಲಾಗಿದೆಯೇ ಅಥವಾ ಮರದ ಕೊಂಬೆಯ ಮೇಲಿನ ಆಕೃತಿಯಂತೆ ಕಾಣುತ್ತಿದೆಯೇ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ (ತೇರದಾಳ): ನವ ಕರ್ನಾಟಕದಲ್ಲಿ ಎಲ್ಲಾರಿಗೂ ಅವಕಾಶವಿರುವ, ಸಮೃದ್ಧಿ ಇರುವ ನಾಡು ನಿರ್ಮಾಣ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಅವರು ಇಂದು ಶ್ರೀಶೈಲ ಮಲ್ಲಿಕಾರ್ಜುನ ಭ್ರಮರಾಂಬ ದೇವಸ್ಥಾನಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿ ಬಂಡಿಗಣಿ ಮಠ ಗ್ರಾಮದಲ್ಲಿ ಮಾತನಾಡಿದರು. ಕಾಯಕ ಹಾಗೂ ಕರ್ತವ್ಯದಲ್ಲಿ ಬಹಳ ವ್ಯತ್ಯಾಸವಿದೆ. ಕರ್ತವ್ಯ ದಿಂದ ಬಂದ ಉತ್ಪಾದನೆಗಳನ್ನು ದಾಸೋಹ ಮೂಲಕ ನೀಡಿದಾಗ ಅದು ಕಾಯಕ ಆಗುತ್ತದೆ. ಕಾಯಕನಿಷ್ಠೆಯನ್ನು ಪರಮಪೂಜ್ಯ ರು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಭಕ್ತಿ ಎಂಬುವುದು ಉತ್ಕೃಷ್ಟ ಪ್ರೀತಿ. ಕರಾರುರಹಿತ ಪ್ರೀತಿ ಭಕ್ತರಲ್ಲಿ ಬಂದಾಗ ಭಗವಂತ ಆಶೀರ್ವಾದ ಮಾಡುತ್ತಾನೆ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೇಶಾದ್ಯಂತ ಹೊಸ ನಿಯಮ ಜಾರಿಯಾಗ್ತಿದೆ. ಈ ಮೂಲಕ ಪಡಿತರ ಚೀಟಿಯಿಂದ ಆಹಾರ ಧಾನ್ಯ ಪಡೆಯುವವರಿಗೆ ಕೇಂದ್ರ ಸರ್ಕಾರದ ನಿರ್ಧಾರದಿಂದ  ಸಿಹಿ ಸುದ್ದಿ ಸಿಕ್ಕಿದೆ. ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ  ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಇದರ ನಂತರ ಎಲ್ಲಾ ಅಂಗಡಿಗಳಲ್ಲಿ ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾನೂನಿನ ಅಡಿಯಲ್ಲಿ ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಇಪಿಒಎಸ್) ಸಾಧನಗಳನ್ನು ಲಿಂಕ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಇದರಿಂದಾಗಿ ಫಲಾನುಭವಿಗಳು ಪೂರ್ಣ ಪ್ರಮಾಣದ ಆಹಾರ ಧಾನ್ಯಗಳನ್ನು ಪಡೆಯಬಹುದು. ಇದಕ್ಕಾಗಿ ಕಾನೂನು ನಿಯಮಗಳನ್ನು ಕೇಂದ್ರ ಸರ್ಕಾರ  ತಿದ್ದುಪಡಿ ಮಾಡಿದೆ. ನ್ಯಾಯಬೆಲೆ ಅಂಗಡಿಗಳನ್ನು ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳೊಂದಿಗೆ ಲಿಂಕ್ ಮಾಡಿದರೆ ಪಡಿತರ ತೂಕದಲ್ಲಿ ದೋಷಕ್ಕೆ ಅವಕಾಶವಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆಯ(ಪಿಡಿಎಸ್) ಫಲಾನುಭವಿಗಳಿಗೆ ಯಾವುದೇ ಸಂದರ್ಭದಲ್ಲಿ ಕಡಿಮೆ ಪಡಿತರ ಆಹಾರ ಸಿಗದಂತೆ ನೋಡಿಕೊಳ್ಳಲು, ಹೈಬ್ರಿಡ್…

Read More

ಕೊರಟಗೆರೆ: ಕೊರಟಗೆರೆ ತಾಲೂಕಿನಲ್ಲಿ ಇತ್ತೀಚಿಗೆ ನೂತನವಾಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಟರಾಜ್ ಹಲವು ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಶಿಕ್ಷಕರಿಗೆ ಅಚ್ಚರಿ ಮೂಡಿಸಿದ್ದಾರೆ. ತಾಲೂಕಿನಲ್ಲಿ ಇತ್ತೀಚೆಗೆ ಅನಿರೀಕ್ಷಿತ ಭೇಟಿ ಕೊಡುತ್ತಿರುವ ಬಿಇಒ ನಟರಾಜ್ ಇಂದು ಯಾವ ಶಾಲೆಗೆ ಬರಲಿದ್ದಾರೆ ಎಂದು ಶಿಕ್ಷಕರಿಗೆ ನಡುಕ ಹುಟ್ಟುತ್ತಿದೆ, ಯಾವುದೇ ಮಾಹಿತಿ ಇಲ್ಲದೆ ಬೆಳ್ಳಂಬೆಳ್ಳಗೆ ಶಿಕ್ಷಕರು ಶಾಲೆಗೆ ಬರುವ ಮುಂಚೆಯೇ ಶಾಲೆಯ ಮುಂದೆ ಹಾಜರಾಗುವ ಬಿಇಓ ನಟರಾಜ್ ಶಾಲೆಯ ಪೂರ್ಣ ವಾತಾವರಣವನ್ನು ಕಲೆಹಾಕಿ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಲು , ಸರ್ಪ್ರೈಸ್ ವಿಸಿಟ್ ನೀಡುವ ಮೂಲಕ ತಾಲೂಕಿನಲ್ಲಿ ಮಿಂಚಿನ ಸಂಚಲನವನ್ನೇ ಮೂಡಿಸಿದ್ದಾರೆ. ಬಿಇಒ ನಟರಾಜ್ ಶೈಕ್ಷಣಿಕ ಕ್ಷೇತ್ರದಲ್ಲಿ ಒಂದು ಬದಲಾವಣೆ ತರಲು ಒಂದು ವಿಶಿಷ್ಟ ರೀತಿಯಲ್ಲಿ ಪ್ರಯೋಗ ಮಾಡುತ್ತಿದ್ದು, ಕೊರಟಗೆರೆ ತಾಲೂಕಿನಲ್ಲಿ ಹಲವು ಶಾಲೆಗಳಿಗೆ ಇತ್ತೀಚಿಗೆ ಸರ್ಪ್ರೈಸ್ ವಿಸಿಟ್ ನೀಡುವ ಮೂಲಕ ನಿಗದಿತ ಸಮಯಕ್ಕೆ ಹಾಜರಾಗದ ಶಿಕ್ಷಕರುಗಳಿಗೆ ಶಾಕ್ ನೀಡಿದ್ದು, ಜೊತೆಗೆ ಶಾಲೆಯನ್ನು ಮುಕ್ತಾಯ ಸಮಯಕ್ಕಿಂತ ಮುಂಚೆ ಹೊರಹೋಗುವ ಶಿಕ್ಷಕರಿಗೂ ಖಡಕ್ ಎಚ್ಚರಿಕೆ…

Read More