Subscribe to Updates
Get the latest creative news from FooBar about art, design and business.
- ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
- ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ
- ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
- ತುಮಕೂರು| ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
- ಸರಗೂರು: ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
- ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
- ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
- ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
Author: admin
ಅಹಮದಾಬಾದ್: ಗುಜರಾತ್ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿ ಆಯಂಬುಲೆನ್ಸ್ಗೆ ದಾರಿಬಿಟ್ಟುಕೊಟ್ಟಿದ್ದಾರೆ. ಚುನಾವಣೆ ಪ್ರಚಾರದ ಭಾಗವಾಗಿ ಪ್ರಧಾನಿ ಮೋದಿ ಅವರು ಅಹಮದಾಬಾದ್ನಲ್ಲಿ ಬೃಹತ್ ರೋಡ್ ಶೋ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್ಐ ಟ್ವಿಟರ್ನಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೀಕ್ಷಿಸಿರುವ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ಪಟ್ಟಣದ ಬೀದಿ ಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಒತ್ತಾಯಿಸಿ ವ್ಯಾಪಾರಿಗಳು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಮಸಾಲ ಜಯರಾಮ್, ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಲು ತೀರ್ಮಾನ ಕೈಗೊಂಡಿದ್ದಾರೆ. ಪಟ್ಟಣ ಪಂಚಾಯಿತಿ ಅನುದಾನ ಮತ್ತು ಶಾಸಕರ ನಿಧಿ ಬಳಕೆ ಮಾಡಿಕೊಂಡು ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನು ಬೀದಿಬದಿ ವ್ಯಾಪಾರಿಗಳಿಗೆ ಸ್ಥಿರವಾಗಿ ಅಂಗಡಿ ಮುಂಗಟ್ಟು ಗಳನ್ನು ಮಾಡಲು ಶಾಸಕರು ತೀರ್ಮಾನ ಕೈಗೊಂಡಿದ್ದು, ಶಾಸಕರ ತೀರ್ಮಾನಕ್ಕೆ ವ್ಯಾಪಾರಿಗಳ ಸಂಘದ ಅಧ್ಯಕ್ಷರು ಮತ್ತು ವ್ಯಾಪಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. 15 ದಿನಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಿಗೆ ಮಸಾಲ ಜಯರಾಮ್ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಯಾದ ರೇಣು ಕುಮಾರ್, ಕೊಂಡಜ್ಜಿ ವಿಶ್ವನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಸಿಬ್ಬಂದಿ ವರ್ಗಗಳು ಸ್ಥಳದಲ್ಲಿ ಉಪಸ್ಥಿತರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಆಂಟೋನಿ ಬೇಗೂರು ಹ್ಯೂಮನ್ ಇಮ್ಯೂನೊಡಿಫಿಶಿಯನ್ಸಿ ವೈರಸ್ – ಎನ್ನುವುದು ಎಚ್.ಐ.ವಿ. (HIV)ಯ ವಿಸ್ತೃತರೂಪ. ಹ್ಯೂಮನ್ (ಮಾನವ) – ಅಂದರೆ ಈ ವೈರಸ್ ಮನುಷ್ಯರನ್ನು ಮಾತ್ರ ಬಾಧಿಸುತ್ತದೆ ಎಂದರ್ಥ. ಇಮ್ಯೂನೊಡಿಫಿಶಿಯನ್ಸಿ (ರೋಗ ನಿರೋಧಕ ಕೊರತೆ) ಅಂದರೆ – ದೇಹದ ರೋಗನಿರೋಧಕ ಶಕ್ತಿ ಕ್ಷೀಣಿಸಿದೆ ಎಂದರ್ಥ. ವೈರಸ್ ಅಂದರೆ ರೋಗ ನಿರೋಧಕ ಶಕ್ತಿಯನ್ನು ಕ್ಷೀಣಿಸುವಂತೆ ಮಾಡುವ ಒಂದು ಸೂಕ್ಷ್ಮಾಣುಜೀವಿ. ಏಡ್ಸ್ ಎಂದರೆ ಅಕ್ವಯರ್ಡ್ ಇಮ್ಯೂನೊ ಡಿಫೀಶಿಯನ್ಸಿ ಸಿಂಡ್ರೋಮ್. ಅಂದರೆ ಇದು ಮಾನವನು ಎಚ್.ಐ.ವಿ. ಎಂಬ ವೈರಸ್‌ನಿಂದ ಸೋಂಕಿತಗೊಂಡಿದ್ದಾನೆ, ಇದು ಆನುವಂಶಿಕವಾದುದಲ್ಲ ಎಂಬುದನ್ನು ತಿಳಿಸುತ್ತದೆ. ಇಮ್ಯೂನ್ ಡಿಫೀಶಿಯನ್ಸಿ (ರೋಗ ನಿರೋಧಕ ಕೊರತೆಯ ಸಿಂಡ್ರೋಮ್ (ರೋಗ ಲಕ್ಷಣಕೂಟ) – ಅಂದರೆ ವ್ಯಕ್ತಿಯು ಎಚ್.ಐ.ವಿ.ಯಿಂದ ಸೋಂಕಿತನಾಗಿದ್ದಾನೆ ಮತ್ತು ಅದು ಉಲ್ಬಣಿತ ಸ್ಥಿತಿಯನ್ನು ತಲುಪಿದೆ ಎಂದು ಸೂಚಿಸುವ ಲಕ್ಷಣ ಅಥವಾ ಕಾಯಿಲೆಗಳ ಸಮೂಹ. ಹರಡುವ ವಿಧಾನಗಳು: ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಎಚ್.ಐ.ವಿ. ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ೨. ಹೆತ್ತವರಿಂದ, ಸೋಂಕಿತ ತಾಯಿಯಿಂದ ಮಗುವಿಗೆ ಗರ್ಭಾವಸ್ಥೆಯಲ್ಲಿ, ಪ್ರಸವ ಸಮಯದಲ್ಲಿ ಮತ್ತು ಎದೆಹಾಲು…
ಮೇಯುತ್ತಿದ್ದ ಹಸುವಿನ ಮೇಲೆ ಅತ್ಯಾಚಾರವೆಸೆಗಿದ ವಿಕೃತ ಕಾಮಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ದೇವಯ್ಯ ಎನ್ನುವವರಿಗೆ ಸೇರಿದ್ದ ಹಸು ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಅಬೂಬಕ್ಕರ್ ಸಿದ್ದಿಕಿ (40) ಬಂಧಿತ ಆರೋಪಿ. 15 ದಿನಗಳಿಂದ ಅಂದಗೋವೆಗೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ಅಬುಬಕ್ಕರ್, ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆಯಲ್ಲಿ ಹಸುವಿನ ಜೊತೆ ಸೆಕ್ಸ್ ಮಾಡಿದ್ದ. ಹೀಗೆ ಒಂದು ದಿನ ಹೊಲದಲ್ಲಿ ಮೇಯುತ್ತಿದ್ದ ಹಸುವಿನೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಅಬೂಬಕ್ಕರ್ ಸಿಕ್ಕಿಬಿದ್ದಿದ್ದಾನೆ. ದೇವಯ್ಯ ಮೂರು ಹಸುಗಳನ್ನ ಗದ್ದೆಯಲ್ಲಿ ಕಟ್ಟುತ್ತಿದ್ದರು. ಘಟನೆ ಬಳಿಕ ಗಬ್ಬದ ಹಸು ಕರುವಿಗೆ ಜನ್ಮ ನೀಡಿದೆ. ಜನಿಸುತ್ತಲೇ ಕರು ಮೃತಪಟ್ಟಿದೆ. ಗಬ್ಬದ ಹಸುವಿನ ಜೊತೆಗೂ ಸೆಕ್ಸ್ ನಡೆಸಿರುವ ಶಂಕೆ ವ್ಯಕ್ತವಾಗಿದೆ. ದೇವಯ್ಯ ಸುಂಟಿಕೊಪ್ಪ ಪೊಲಿಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ಅಬುಬಕ್ಕರ್ ಮತ್ತು ಹಸುವಿಗೆ ವೈದ್ಯಕೀಯ ಪರೀಕ್ಷೆಗೊಳಪಡಿಸಿ ತನಿಖೆ ಮುಂದುವರಿಸಿದ್ದಾರೆ. ನವೆಂಬರ್ 27ರಂದು ಮಧ್ಯಾಹ್ನ ಸುಂಟಿಕೊಪ್ಪ ಸಂತೆಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದಾಗ ಗದ್ದೆಯ ದಾರಿಯಲ್ಲಿ ಒಂದು ಕೆಂಪು…
ತಂದೆಗೆ ಪೊಲೀಸ್ ಕಾನ್ ಸ್ಟೇಬಲ್ ಹಲ್ಲೆ ಮಾಡುತ್ತಿರುವುದನ್ನು ನೋಡಿ ತಡೆಯಲು ಆಗದ ಕಾರಣ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ. ಛತ್ತೀಸ್ ಘಡದ ಬಿಲಾಸ್ ಪುರ್ ಜಿಲ್ಲೆಯಲ್ಲಿ ಬಿನ್ಸ್ ಬೋಡ್ ಗ್ರಾಮದ ನಿವಾಸಿ 23 ವರ್ಷದ ಹರೀಶ್ ಚಂದ್ರ ಜಿಂಡ್ಲೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹರೀಶ್ ಚಂದ್ರ ಜಿಂಡ್ಲೆ ಬೈಕ್ ಬಾಲಕಿಯೊಬ್ಬಳಿಗೆ ಡಿಕ್ಕಿ ಹೊಡೆದಿತ್ತು. ಈ ಸಂಬಂಧ ಶಾಲಾ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಮನೆಗೆ ಭೇಟಿ ನೀಡಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಅಲ್ಲದೇ ತಂದೆಯನ್ನು ಠಾಣೆಗೆ ಕರೆದೊಯ್ದಿದ್ದರು. ಹರೀಶ್ ಚಂದ್ರ ಪೊಲೀಸ್ ಠಾಣೆಗೆ ಹೋದಾಗ ಪೊಲೀಸ್ ಕಾನ್ ಸ್ಟೇಬಲ್ ತಂದೆಯನ್ನು ಥಳಿಸುತ್ತಿದ್ದರು. ಇದನ್ನು ನೋಡಿದ ಕೂಡಲೇ ರೈಲ್ವೆ ನಿಲ್ದಾಣಕ್ಕೆ ಹೋಗಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಸಣ್ಣ ಪ್ರಕರಣದಲ್ಲಿ ಕೀಳಾಗಿ ನಡೆದುಕೊಂಡಿದ್ದಾರೆ. ಅಪಘಾತ ಪ್ರಕರಣದಲ್ಲಿ ಅವನ ಪಾತ್ರ ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳದೇ ಮನೆಯವರಿಗೆ ಹಿಂಸೆ ನೀಡಿದ್ದರಿಂದ…
ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಬಸ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ರಾಜಧಾನಿಯಲ್ಲಿ ಅಪರಾಧ ಕೃತ್ಯಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮೊನ್ನೆಯಷ್ಟೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ತೆ ಬಸ್ ಗಾಗಿ ನಾಯಂಡಹಳ್ಳಿ ಸಮೀಪ ಕಾಯುತ್ತ ನಿಂತಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಶಾಲಾ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಆರೋಪಿ ಶಿವಕುಮಾರ್‌ಗೆ ಆಕೆಯ ಪರಿಚವಿದ್ದಿದ್ದರಿಂದ ಡ್ರಾಪ್ ಕೊಡುತ್ತೇನೆ ಎಂದು ಹೇಳಿದ್ದಾನೆ. ಹೀಗಾಗಿ ಸಂತ್ರಸ್ತೆ ಆರೋಪಿಯ ಬಸ್ ನಲ್ಲಿ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಮಹಿಳೆಯನ್ನು ನಾಗರಬಾವಿ ಸರ್ವಿಸ್ ರಸ್ತೆಗೆ ಕರೆದೊಯ್ದ ಅತ್ಯಾಚಾರವೆಸಗಿದ್ದಾನೆ. ಘಟನೆ ಬಳಿಕ ಸಂತ್ರಸ್ತೆ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಆಕೆಯ ಪುತ್ರ ಆರೋಪಿ ಶಿವಕುಮಾರ್‌ಗೆ ಥಳಿಸಿದ್ದಾನೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಲೇಔಟ್ ಪೊಲೀಸರು ಆರೋಪಿ ಶಿವಕುಮಾರ್ನನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ನಿ. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮದುರ್ಗ ತಾಲೂಕಿನ ಸಾಲಹಳ್ಳಿಯ ಡಾ. ಶ್ಯಾಮ ಪ್ರಸಾದ ಮುಖರ್ಜಿ ವೇದಿಕೆಯಲ್ಲಿ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರಾಮದುರ್ಗ ತಾಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ ಪಾಟೀಲ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಲಿದ್ದಾರೆ. ಅದೇ ರೀತಿಯಲ್ಲಿ ಬೃಹತ್ ಮತ್ತು…
ಪಿಯು ಪರೀಕ್ಷೆಯ ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲೂ 15ರಿಂದ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ ಪಿಯು ಪ್ರಶ್ನೆ ಪತ್ರಿಕೆ ವಿವರಣಾತ್ಮಕ ಉತ್ತರಗಳನ್ನು ಮಾತ್ರ ಒಳಗೊಂಡಿದೆ. ಒಂದು ಅಂಕದ ಪ್ರಶ್ನೆ ಗಳಿಗೂ ವಿವರಣಾತ್ಮಕ ಉತ್ತರಗಳನ್ನು ವಿದ್ಯಾರ್ಥಿಗಳು ಬರೆಯಬೇಕಿದೆ. ಹಾಗಾಗಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪಿಯು ಪರೀಕ್ಷಾ ಪದ್ಧತಿಯಲ್ಲಿ ಬಲಾವಣೆ ತರಲು ಮುಂದಾಗಿದೆ. ಸಚಿವ ಬಿ.ಸಿ.ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.ರಾಜ್ಯದ ದ್ವಿತೀಯ ಪಿಯು ಫಲಿತಾಂಶವನ್ನು ಕೇಂದ್ರೀಯ ಮಂಡಳಿಗಳ ಫಲಿತಾಂಶಗಳೊಂದಿಗೆ ಹೋಲಿಸಿದಾಗ ರಾಜ್ಯದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಮತ್ತು ಅಂಕಗಳ ಸಾಮರ್ಥ್ಯ ಕಡಿಮೆಯಾಗುತ್ತಿದೆ. ವೃತ್ತಿ ಪರ ಕೋರ್ಸ್‌ಗಳ ಸೀಟುಗಳಿಗಾಗಿ ಸಿಬಿಎಸ್‌ಇ ವಿದ್ಯಾರ್ಥಿಗಳ ಜತೆ ಸ್ಪರ್ಧಿಸುವ ಸವಾಲನ್ನು ಎದುರಿಸುತ್ತಿದ್ದಾರೆ. ಉತ್ತೀರ್ಣತೆಯ ಶೇಕಡಾವಾರು ಪ್ರಮಾಣ ಸುಧಾರಿಸಲು ಪ್ರಥಮ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಈ ಪದ್ಧತಿ ಅಳವಡಿಸಿಕೊಳ್ಳಬಹುದು ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಮತ್ತೆ ಮೂರು ತಿಂಗಳ ಅವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿ.6ಕ್ಕೆ ಹೈಕೋರ್ಟ್ ಮುಂದೂಡಿದೆ. ಬಿಬಿಎಂಪಿಯ 243 ವಾರ್ಡ್‌ಗಳಿಗೆ ನವೆಂಬರ್ 30ರೊಳಗೆ ಮೀಸಲು ನಿಗದಿಪಡಿಸಬೇಕು ಹಾಗೂ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಬೇಕು ಎಂದು 2022ರ ಸೆ.30ರಂದು ಹೈಕೋರ್ಟ್ ಆದೇಶ ನೀಡಿತ್ತು. ಆದೇಶ ಪಾಲನೆಗೆ ಮೂರು ತಿಂಗಳು ಅವಧಿ ವಿಸ್ತರಿಸುವಂತೆ ನಗರಾಭಿವೃದ್ಧಿ ಇಲಾಖೆ ಇತ್ತೀಚೆಗೆ ಸಲ್ಲಿಸಿದ್ದ ಪ್ರಮಾಣಪತ್ರವನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಹಾಜರಾಗಿ, ಬಿಬಿಎಂಪಿಯ 243 ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿವರ್ಗ, ಹಿಂದುಳಿದ ವರ್ಗ ಎ ಹಾಗೂ ಬಿಗೆ ಮೀಸಲು ನಿಗದಿ ಮತ್ತು ರಾಜಕೀಯ ಮೀಸಲಿಗೆ ಅರ್ಹರಿರುವ ಹಿಂದುಳಿದ ವರ್ಗಗಳ ವಿವರವಾದ ಪಟ್ಟಿಯನ್ನು ಸಲ್ಲಿಕೆ ವಿಚಾರದಲ್ಲಿ ನ್ಯಾ.ಕೆ.ಭಕ್ತವತ್ಸಲ ನೇತೃತ್ವದ ಆಯೋಗಕ್ಕೆ ವರದಿ ಕೋರಲಾಗಿದೆ. ಆದಷ್ಟು ಬೇಗ ಪ್ರತಿಕ್ರಿಯಿಸುವುದಾಗಿ ಆಯೋಗ ಹೇಳಿದೆ. ಹೊಸದಾಗಿ ಮೀಸಲು…
ತಿರುವನಂತಪುರಂ ಜಿಲ್ಲೆಯ ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಮಾವುತ ಆನೆ ಮರಿಗೆ ಊಟ ಕೊಡಲು ಹೋದಾಗ ಅದು ಮಾವುತನ ಬೆರಳನ್ನು ಕಚ್ಚಿ ತುಂಡು ಮಾಡಿದೆ. ಕೇಂದ್ರದ ಪಕ್ಕದಲ್ಲೇ ಜೆಸಿಬಿ ಕೆಲಸ ನಡೆಯುತ್ತಿತ್ತು. ಇದರಿಂದ ಹೆದರಿದ ಆನೆ ಮರಿ ಊಟ ತಿನ್ನಿಸಲು ಬಂದ ಮಾವುತನ ಕೈ ಬೆರಳನ್ನು ಕಚ್ಚಿದೆ. ಪುಷ್ಕರನ್ ಪಿಳ್ಳೈ ಎಂಬವರು ಅರಣ್ಯ ಎಂಬ ಆನೆಮರಿಗೆ ಆಹಾರ ನೀಡುತ್ತಿದ್ದಾಗ ಬೆರಳುಗಳಿಗೆ ಕಚ್ಚಿ ಗಂಭೀರವಾದ ಗಾಯಗಳಾಗಿವೆ. 2 ತಿಂಗಳ ಹಿಂದೆ ತಾಯಿ ಆನೆ ಸತ್ತ ನಂತರ ಅರಣ್ಯ ಎಂಬ ಮರಿಯಾನೆಯನ್ನು ಕೊಟ್ಟೂರು ಅರಣ್ಯದಿಂದ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ. ಮಾವುತನ ಎರಡು ಬೆರಳುಗಳು ಆನೆ ಮರಿಯ ಬಾಯಿಯೊಳಗೆ ಸಿಕ್ಕಿಹಾಕಿಕೊಂಡವು. ಕೂಡಲೇ ಆತನನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ. ಬೇರ್ಪಡಿಸಿದ ಬೆರಳನ್ನು ಮತ್ತೆ ಜೋಡಿಸಲು ವೈದ್ಯರು ಪ್ರಯತ್ನ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…