Author: admin

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ಬೆಂಗಳೂರಿನ ನಾನಾ ಕಡೆ ದಾಳಿ ನಡೆಸಿ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಇ-ಸಿಗರೇಟ್ ಜಪ್ತಿ ಮಾಡಿದೆ. ಒಂದು ಇ- ಸಿಗರೇಟ್ ಬೆಲೆ 5 ಸಾವಿರದವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ. 2019 ರಲ್ಲಿ ಮನುಷ್ಯನ ಮೆದುಳು ಹಾಗೂ ಆರೋಗ್ಯಕ್ಕೆ ಹೆಚ್ಚು ಹಾನಿಕಾರಕ ಎಂದು ಸರ್ಕಾರ ಇ- ಸಿಗರೇಟ್ ಬ್ಯಾನ್ ಮಾಡಿದೆ. ಆದರೂ ಬೆಂಗಳೂರಿನ ಕೋರಮಂಗಲ, ಬಾಣಸವಾಡಿ, ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳ‌ಲ್ಲಿ ಕೇರಳ ಮೂಲದ ಆರೋಪಿಗಳು ಅಕ್ರಮವಾಗಿ ನಿಷೇಧಿತ ಇ- ಸಿಗರೇಟ್ ಮಾರಾಟ ಮಾಡುತ್ತಿದ್ದಾರೆ. ಪುಲಕೇಶಿ ನಗರ, ಬಾಣಸವಾಡಿ, ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯಪುರ: ಮಗನ ಸಾವಿನ ವಿಷಯ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂಡಿ ತಾಲೂಕಿನ ತಡವಲ ಗ್ರಾಮದಲ್ಲಿ ನಡೆದಿದೆ. ಮಗ ಶರಣಪ್ಪ ಚನ್ನಮಲ್ಲಪ್ಪ ರೂಗಿ (48), ಸುಗಲಾಬಾಯಿ ಚನ್ನಮಲ್ಲಪ್ಪ ರೂಗಿ (65) ಮೃತರು. ಅನಾರೋಗ್ಯದಿಂದ ಮಗ ಶರಣಪ್ಪ ಮೃತಪಟ್ಟಿರುತ್ತಾರೆ. ಇನ್ನು ವಿಷಯ ತಿಳಿದು ಒಂದು ಗಂಟೆಯಲ್ಲೇ ತಾಯಿ ಸುಗಲಾಬಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದು ಗ್ರಾಮಸ್ಥರು ಸಹ ತಾಯಿ ಮಗನ ಸಾವಿಗೆ ಕಂಬನಿ ಮಿಡಿದಿದ್ದಾರೆ.\ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸುಮಾರು 300 ಅತಿಥಿಗಳ ಸಮ್ಮುಖದಲ್ಲಿ ವೇದಿಕೆ ಮೇಲೆ ಮದುಮಗ ಕಿಸ್ ಕೊಟ್ಟಿದ್ದಕ್ಕೆ ಯುವತಿ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಸಾಂಬಲ್ ಎಂಬ ನಗರದಲ್ಲಿ ಈ ಘಟನೆ ನಡೆದಿದೆ. ವೇದಿಕೆ ಮೇಲೆ ವಧು-ವರರು ಹೂವಿನ ಹಾರ ಬದಲಾಯಿಸಿಕೊಳ್ಳುತ್ತಿದ್ದಂತೆ ವರ ಕಿಸ್ ಮಾಡಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಆಘಾತಕ್ಕೆ ಒಳಗಾದ ಯುವತಿ ಕೂಡಲೇ ವೇದಿಕೆಯಿಂದ ಇಳಿದು ಹೋಗಿದ್ದು, ನಂತರ ಮದುವೆಯನ್ನು ರದ್ದುಗೊಳಿಸಿದ್ದಾಳೆ. ಹುಡುಗಿಗೆ ಮುತ್ತು ಕೊಡುವುದಾಗಿ ಯುವಕ ಸ್ನೇಹಿತರ ಬಳಿ ಪಂದ್ಯ ಕಟ್ಟಿದ್ದ. ಬೆಟ್ ಕಟ್ಟಿ ಹೀಗೆ ಮಾಡುತ್ತಾನೆ ಅಂದರೆ ಅವರ ಚಾರಿತ್ರ್ಯದ ಬಗ್ಗೆ ನನಗೆ ಅನುಮಾನ ಮೂಡಿದೆ. ಆದ್ದರಿಂದ ಮದುವೆ ರದ್ದುಗೊಳಿಸಿದ್ದಾಗಿ 23 ವರ್ಷದ ಪದವೀಧರ ಯುವತಿ ಹೇಳಿದ್ದಾಳೆ. ಯುವತಿ ನಿರ್ಧಾರದಿಂದ ವರನ ಕಡೆಯವರು ಆಘಾತಕ್ಕೆ ಒಳಗಾದರೆ, ಮದುವೆ ಬಂದಿದ್ದ ಅತಿಥಿಗಳು ವಾಪಸ್ ಹೋದರು. ಆದರೆ ಪಟ್ಟು ಬಿಡದ ವರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಪೊಲೀಸರು ಎರಡೂ ಕುಟುಂಬಗಳನ್ನು ಕರೆಸಿ ಮಾತುಕತೆ ನಡೆಸಿ ರಾಜಿ ಸಂಧಾನ…

Read More

ರಾಜ್ಯ ವಕ್ಫ್​ ಮಂಡಳಿಯ ಅಧ್ಯಕ್ಷ ಶಫಿ ಸಅದಿ ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ. ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಕ್ಫ್​ ಮಂಡಳಿಯ ಅಧ್ಯಕ್ಷರು ಏನು ಹೇಳಿದ್ದಾರೆ ಎಂಬ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅದು ಅವರ ವೈಯಕ್ತಿಕ ನಿಲುವು ಇರಬಹುದು. ಸರ್ಕಾರದ ನಿಲುವು ಅಲ್ಲ. ವಕ್ಫ್ ಮಂಡಳಿಯ ಅಧ್ಯಕ್ಷರು ತಮ್ಮ ಆಲೋಚನೆಗಳ ಬಗ್ಗೆ ನನ್ನೊಂದಿಗೆ ಮಾತನಾಡಲಿ ಎಂದಿದ್ದಾರೆ. ರಾಜ್ಯದಲ್ಲಿ ಸರ್ಕಾರ ತಲಾ ೨.೫ ಕೋಟಿ ವೆಚ್ಚದಲ್ಲಿ ಹತ್ತು ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪಿಸು ಮುಂದಾಗಿದೆ ಎಂಬ ವಕ್ಫ್ ಮಂಡಳಿ ಅಧ್ಯಕ್ಷರ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಂಡ ನಂತರ ಮುಖ್ಯಮಂತ್ರಿ ಈ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ವಕ್ಫ್​ ಮಂಡಳಿ ಅಧ್ಯಕ್ಷ ಶಫಿ ಸಅದಿ, ಸರ್ಕಾರದ ಅನುದಾನದಿಂದ ಕಾಲೇಜು ಆರಂಭಿಸಲಾಗುವುದು. ಇದರಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರವೇ ಅವಕಾಶ ಇರುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ.…

Read More

ಬೆಳಗಾವಿ : ಕನ್ನಡ ಬಾವುಟ ಹಾರಿಸಿದಕ್ಕೆ, ಸಹಪಾಠಿಗಳು ವಿದ್ಯಾರ್ಥಿಗೆ ಥಳಿಸಿರುವ ಘಟನೆ ನಗರದ ಟೀಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ನಡೆದಿದೆ. ಗೋಗಟೆ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿಸಿದ್ದಾರೆ. ನಿನ್ನೆ ಸಂಜೆ 7.30ರ ಸುಮಾರಿಗೆ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜು ಫೆಸ್ಟ್ ನಡೆಯುತ್ತಿತ್ತು. ಈ ವೇಳೆ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಮೂರು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಯಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಯಾರು ಹಲ್ಲೆ ಮಾಡಿದ್ದಾರೆ ಅವರ ಗುರುತು ಪತ್ತೆ ಹಚ್ಚಿ ವಿಚಾರಣೆ ಮಾಡುತ್ತೇವೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಡಿಸಿಪಿ ರವೀಂದ್ರ ಗಡಾದಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ : ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಪುತ್ತೂರು ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದು, ಮುತಾಲಿಕ್ ರ ಮನೆಗೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ. ಮುಸ್ಲಿಂ ಪ್ರತ್ಯೇಕ ಕಾಲೇಜು ಸ್ಥಾಪನೆ ವಿರೋಧಿಸಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ವಾಟ್ಸಪ್ ಮೂಲಕ ಪುನೀತ್ ಕೆರೆಹಳ್ಳಿ ಸೇರಿ ಹಲವರ ಹೆಸರು ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿದ್ದಾನೆ. ಮೊಹಮ್ಮದ್ ಆಸೀಫ್ ಹೆಸರಿನ ಸಿಮ್ ಕಾರ್ಡ್ ನಿಂದ ಜೀವ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಕರೆ ಹಿನ್ನೆಲೆ ಮುತಾಲಿಕ್ ಅವರ ಧಾರವಾಡದ ಮನೆಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ಶಿಕ್ಷಕವೃತ್ತಿಯನ್ನು ಪಡೆಯಲು ನೂರಾರು ಜನ್ಮದ ಪುಣ್ಯಬೇಕು, ಅಂತಹ ಶಿಕ್ಷಣ ವೃತ್ತಿ ದೊರೆತಿರುವ ನೀವು ಆತ್ಮಸಾಕ್ಷಿಯಿಂದ ದೃಢನಿಶ್ಚಯದಿಂದ ದೇಶವನ್ನು ಕಟ್ಟಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕರೆನೀಡಿದರು. ನಗರದ ಜೆ.ಬಿ.ಜೆ.ಸಿ. ಆವರಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ಅಕ್ಷರಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಶಿಕ್ಷಣ ಎನ್ನುವುದು ವ್ಯಾಪಾರಿ ಸರಕಾಗಿರುವುದು ವಿಪರ್ಯಾಸವಾಗಿದೆ ಎಂದರು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮವಾದ ವಿದ್ಯಾರ್ಹತೆಯನ್ನು ಹೊಂದಿರುವ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಆದರೆ, ಸ್ವಲ್ಪ ಕೀಳಿರಿಯೆಯಲ್ಲಿರುವಂತೆ ಕಾಣುತ್ತಿದೆ. ಇದನ್ನು ಹೋಗಲಾಡಿಸಲು ನಮ್ಮ ಮಕ್ಕಳನ್ನು ಸಹ ತಮ್ಮ ಶಾಲೆಯಲ್ಲಿ ಓದಿಸಿ ಜನರ ಮತ್ತು ಊರಿನ ಗುರುವಾಗಬೇಕು ಎಂದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹೆಚ್.ಡಿ. ಕೋಟೆ: ತಾಲ್ಲೂಕಿನ ಚಿಕ್ಕಕೆರೆಯೂರು ಗ್ರಾಮದಿಂದ  ಹೆಚ್.ಡಿ.ಕೋಟೆಗೆ ಮತ್ತು ಮೈಸೂರು ಕಡೆಗೆ ಹೋಗುವ ರಸ್ತೆಗಳು ತುಂಬಾ  ಹದಗೆಟ್ಟಿದ್ದು, ಸಾರ್ವಜನಿಕರು ಪ್ರಾಣವನ್ನು  ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ . ಮಲಾರ ಕಾಲೋನಿ ಗ್ರಾಮದಿಂದ ಹೆಚ್.ಡಿ.ಕೋಟೆಗೆ ಹೋಗುವ  ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಅದರೂ ರಸ್ತೆ ದುರಸ್ತಿ ಮಾಡಲು ಅಧಿಕಾರಿಗಳು ಮೀನಾಮಿಷ ಎಣಿಸುತ್ತಿದ್ದಾರೆ. ರಸ್ತೆಯಲ್ಲಿ ಗುಂಡಿಗಳೋ ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಎನ್ನುವಂತಾಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ವಾಹನ ಚಲಾಯಿಸುವುದು ಎಂದರೆ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡೇ ವಾಹನ ಚಲಾಯಿಸಬೇಕು ಎಂದು ಹೇಳುತ್ತಾರೆ ಇಲ್ಲಿನ ಸಾರ್ವಜನಿಕರು. ಈ ರಸ್ತೆಯಲ್ಲಿ ಪ್ರತಿ ನಿತ್ಯ ಸಂಚಾರಿಸುವ ನೂರಾರು ವಿದ್ಯಾರ್ಥಿಗಳು, ಪ್ರಾಣವನ್ನು  ಕೈಯಲ್ಲಿ ಹಿಡಿದುಕೊಂಡು ಶಾಲಾ ಕಾಲೇಜುಗಳಿಗೆ ಹೋಗಿ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆಯಿಂದ ರೋಸಿ ಹೋಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ರಸ್ತೆ ಸರಿಪಡಿಸುವಂತೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ  ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ರಸ್ತೆಯಲ್ಲಿನ ಗುಂಡಿಗಳನ್ನು…

Read More

ಪ್ರೇಯಸಿಯ ತಲೆಯನ್ನು ಗೋಡೆಗೆ ಗುದ್ದಿ ಪ್ರಿಯಕರ ಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ. ನೇಪಾಳ ಮೂಲದ ಕೃಷ್ಣಕುಮಾರಿ (23) ಹತ್ಯೆಗೀಡಾದ ಯುವತಿ. ಸಂತೋಷ್ ದಾಮಿ (27) ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಕೃಷ್ಣಕುಮಾರಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದರೆ, ಸಂತೋಷ್ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದ. ಪರಸ್ಪರ ಪರಿಚಯ ಆದ ನಂತರ ನೇಪಾಳ ಮೂಲದ ಇಬ್ಬರು ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ವಾಸವಾಗಿದ್ದರು. ಬುಧವಾರ ಇಬ್ಬರ ನಡುವೆ ಜಗಳ ಉಂಟಾಗಿದ್ದು, ಸಿಟ್ಟಿನ ಭರದಲ್ಲಿ ಸಂತೋಷ್ ಪ್ರೇಯಸಿಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾನೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಬಿಎಸ್-3 ವಾಹನಗಳ ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಅಶೋಕ್ ಲೈಲ್ಯಾಂಡ್ ಕಂಪನಿ ಮೇಲೆ ಜಾರಿ ನಿರ್ದೇಶನಾಯಲ ದಾಳಿ ಮಾಡಿದೆ. ವಾಯುಮಾಲಿನ್ಯ ನಿಯಂತ್ರಣ ನಿಯಮದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಬಿಎಸ್-3 ವಾಹನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ವಿವಿಧ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More