Author: admin

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ (ಕೆಆರ್‌ಇಡಿಎಲ್‌) ಯೋಜನಾ ನಿರ್ದೇಶಕರಾಗಿದ್ದ ಡಿ.ಕೆ. ದಿನೇಶ್‌ ಕುಮಾರ್‌ (50) ಮೈಸೂರಿನ ಬೋಗಾದಿಯಲ್ಲಿರುವ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಅವರು ಪತ್ನಿ, ಕಿರಿಯ ಪುತ್ರನೊಂದಿಗೆ ವಾಸವಿದ್ದರು. ಹಿರಿಯ ಪುತ್ರ ಮಂಗಳೂರಿನಲ್ಲಿ ಓದುತ್ತಿದ್ದಾರೆ. ದಿನೇಶ್‌ ಕುಮಾರ್‌ ಮೃತಪಟ್ಟು 40 ಗಂಟೆಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ನ. 27 ರಂದು ರಾತ್ರಿ ಜೊತೆಯಲ್ಲೇ ಊಟ ಮಾಡಿ ಮಲಗಿದ್ದೆವು.ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ದಿನೇಶ್‌ ಕುಮಾರ್‌ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅದನ್ನು ನೋಡಿ ನಾವೂ ಮೂರ್ಛೆ ಹೋದೆವು ಎಂದು ಪತ್ನಿ ಮತ್ತು ಪುತ್ರ ಹೇಳಿಕೆ ನೀಡಿದ್ದಾರೆ. ಮೃತದೇಹ ಊದಿಕೊಂಡಿದ್ದು ಬಾಯಲ್ಲಿ ರಕ್ತಸ್ರಾವವಾಗಿದೆ. ದೇಹದ ಕೆಲಭಾಗ ಗಾಯವಾಗಿದೆ. ಈ ಸಾವಿನಲ್ಲಿ ಅನುಮಾನವಿದ್ದು, ಜೊತೆಯಲ್ಲಿಯೇ ಇದ್ದ ಪತ್ನಿ, ಪುತ್ರ, ಕೆಲಸಗಾರರನ್ನು ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಮೃತ ವ್ಯಕ್ತಿಯ ಸೋದರ ಮಾವ ಮಂಡ್ಯದ ವಕೀಲ ಎಚ್‌.ಎಂ. ನಾರಾಯಣ ಸರಸ್ವತಿಪುರಂ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಸೇರಿದ 1.5 ಎಕರೆ ಫಾರ್ಮ್ ಹೌಸ್ ಸೇರಿದಂತೆ ಮೂರು ಅಕ್ರಮ ಫಾರ್ಮ್ ಹೌಸ್ ಗಳನ್ನು ಪಂಜಾಬ್ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್ ಇಲಾಖೆ ಸೀಜ್ ಮಾಡಿದೆ. ಸನ್ಹಾದಲ್ಲಿರುವ ಧಮ್ ಧಾಮ ಸರೋವರದ ಬಳಿ ಇರುವ ದಲೇರ್ ಮೆಹೆಂದಿಗೆ ಸೇರಿದ ಫಾರ್ಮ್ ಹೌಸ್ ಸೇರಿದಂತೆ ಮೂರು ಫಾರ್ಮ್ ಸೀಜ್ ಮಾಡಲಾಗಿದೆ. ಕೆರೆಯ ಬಳಿ ನಿರ್ಮಿಸಲಾದ ಅಕ್ರಮ ಮೂರು ಫಾರ್ಮ್ ಹೌಸ್ ಗಳನ್ನು ಸೀಜ್ ಮಾಡಲಾಗಿದೆ. ಯಾವುದೇ ಅನುಮತಿ ಇಲ್ಲದೇ ಅರಾವಳಿ ವಲಯದಲ್ಲಿ ಫಾರ್ಮ್ ಹೌಸ್ ಗಳನ್ನು ನಿರ್ಮಿಸಲಾಗಿತ್ತು ಎಂದು ಜಿಲ್ಲಾ ಯೋಜನಾಧಿಕಾರಿ ಅಮಿತ್ ಮಡೋಲಿಯಾ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ವಿವಿಧ ಶಾಲೆಗಳ ಮಕ್ಕಳ ಬ್ಯಾಗ್​ ಗಳಲ್ಲಿ ಹಲವು ಆಘಾತಕಾರಿ ವಸ್ತುಗಳಿರುವುದು ಬೆಳಕಿಗೆ ಬಂದಿದ್ದು, ಶಾಲಾ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್ ​ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್ ​ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್ ​ಗಳಲ್ಲಿ ಸ್ಮಾರ್ಟ್​ಫೋನ್​ ಗಳು, ಜೊತೆಗೆ ಕಾಂಡೋಮ್​ ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್ ​ಗಳು, ಸಿಗರೇಟ್ ​ಗಳು, ಮತ್ತೇರಿಸುವ ವಾಸನೆ ಹೊಂದಿರುವ ವೈಟ್ ​ನರ್​ ಗಳು ಮತ್ತು ಹೆಚ್ಚಿನ ಮೊತ್ತದ ನಗದು ಪತ್ತೆಯಾಗಿವೆ. ಈ ಬೆಳವಣಿಗೆಯು ಹಲವು ಶಾಲೆಗಳ ಬೋಧಕ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ತರಗತಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ತರುತ್ತಾರೆ, ಅದರಿಂದ ಕಿರಿಕಿರಿ ಆಗುತ್ತಿದೆ ಎಂದು ಶಿಕ್ಷಕರು ಇತ್ತೀಚೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ವಿದ್ಯಾರ್ಥಿಗಳ ಬ್ಯಾಗ್ ಗಳನ್ನು ಪರಿಶೀಲಿಸುವಂತೆ ಕರ್ನಾಟಕ…

Read More

ಪ್ರಧಾನಿಯಾಗಿ ನರೇಂದ್ರ ಮೋದಿ ತಮ್ಮ ಕರ್ತವ್ಯ ಮರೆತಿದ್ದಾರೆ. ಹಾಗಾಗಿ ಅವರು ಎಲ್ಲಾ ಚುನಾವಣೆಯಲ್ಲೂ ಭಾಷಣ ಮಾಡಲು ಬರುತ್ತಾರೆ. ಅವರೇನು 100 ತಲೆಯ ರಾವಣನಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಈಗ ವಿವಾದಕ್ಕೆ ತಿರುಗಿದೆ. ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ತಮ್ಮ ಕರ್ತವ್ಯ ಮರೆತಿದ್ದಾರೆ. ಹಾಗಾಗಿ ಅವರು ಸ್ಥಳೀಯ, ಕಾರ್ಪೊರೇಷನ್, ಎಂಎಲ್ ಎ ಸೇರಿದಂತೆ ಯಾವುದೇ ಚುನಾವಣೆ ಇದ್ದರೂ ಹೋಗಿ ನನ್ನ ಮುಖ ನೋಡಿ ಮತ ಹಾಕಿ ಅಂತಾರೆ. ಎಷ್ಟು ದಿನ ಅಂತ ಅವರ ಮುಖ ನೋಡೋದು? ಅವರೇನು 100 ತಲೆಯ ರಾವಣನಾ ಎಂದು ಪ್ರಶ್ನಿಸಿದ್ಧಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಗುಜರಾತ್ ಪುತ್ರನಿಗೆ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದೆ. ಆದರೆ ಕಾಂಗ್ರೆಸ್ ಗುಜರಾತ್ ಚುನಾವಣೆಯಲ್ಲೂ ಅಭಿವೃದ್ಧಿ ವಿಷಯ ಮಾತನಾಡದೇ ಮೋದಿ ಹೆಸರು ಹೇಳಿಕೊಂಡು ಮತ ಕೇಳುವುದು ಎಷ್ಟು ಸರಿ…

Read More

ರಾಜ್ಯ ರಾಜಕೀಯದಲ್ಲಿ ತನ್ನದೇ ಛಾಪು ಹೊಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಸಿನಿಮಾ ನಿರ್ಮಾಣದ ಸಿದ್ಧತೆ ನಡೆದಿದ್ದು, ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಸಿದ್ದರಾಮಯ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಹಯಾತ್ ಪೀರ್ ಸಾಬ್, ಎಂ.ಎಸ್​. ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನು ತೆರೆಮೇಲೆ ತರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಚಾರ ಸದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಬಯೋಪಿಕ್ ಮಾಡುವಾಗ ಮಾಹಿತಿಗಳು ಸ್ಪಷ್ಟವಾಗಿರಬೇಕು. ಹೆಚ್ಚು ಮಸಾಲೆ ಸೇರಿಸುವ ಪ್ರಯತ್ನ ನಡೆದರೆ ವಿವಾದ ಸೃಷ್ಟಿ ಆಗುತ್ತದೆ. ಈ ಕಾರಣಕ್ಕೆ ನಿರ್ಮಾಪಕರು ಸಿದ್ದರಾಮಯ್ಯ ಅವರಿಂದ ಒಪ್ಪಿಗೆ ಪಡೆದು ಅವರಿಂದಲೇ ಮಾಹಿತಿ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಮೊದಲ ಹಂತದ ಮಾತುಕತೆ ನಡೆದಿದೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ಜಮೀರ್ ಆಹ್ಮಮದ್ ನೇತೃತ್ವದಲ್ಲಿ ಈ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ವಿಷಯವನ್ನು ಕಾಂಗ್ರೆಸ್ ಮುಖಂಡ ಶಿವರಾಜ್…

Read More

ಹೆಚ್.ಡಿ.ಕೋಟೆ:  ಆರೋಗ್ಯಾಧಿಕಾರಿ  ಡಾ. ಟಿ.ರವಿಕುಮಾರ್ ಮತ್ತು ತಂಡದವರು ಹೆಚ್.ಡಿ.ಕೋಟೆ ವ್ಯಾಪ್ತಿಗೆ ಬರುವ ಯರಹಳ್ಳಿ ಗ್ರಾಮದಲ್ಲಿ ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ  ಆರೋಗ್ಯಾಧಿಕಾರಿ ರವಿಕುಮಾರ್ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಂದ ಪ್ರತಿ ಶುಕ್ರವಾರ ಮತ್ತು ಪ್ರತಿ ಮಂಗಳವಾರ ಹೆಚ್.ಡಿ.ಕೋಟೆ ಮತ್ತು ಹ್ಯಾಂಡ್ ಪೋಸ್ಟ್ ಟೌನ್ ನಲ್ಲಿ ಲಾರ್ವ ಸಮೀಕ್ಷೆಯನ್ನು ಮಾಡುತ್ತಾರೆ. ಇದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು ಮತ್ತು ಸೊಳ್ಳೆಯಿಂದ ಹರಡುವ ಜ್ವರಗಳ ಬಗ್ಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿಸಿದರು. ಡೆಂಗ್ಯೂ ಮತ್ತು ಚಿಕುಂಗುನ್ಯಾ ಕಾಯಿಲೆ, ಈ ಜ್ವರ ಸೋಂಕು ಹೊಂದಿದ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವುದರಿಂದ  ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಯು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ.  ಈ ರೋಗದ ಮುಖ್ಯಲಕ್ಷಣಗಳು ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗುಡ್ಡೆ  ಹಿಂಭಾಗದಲ್ಲಿ ವಿಪರೀತ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು, ಮತ್ತು ವಸಡುಗಳಲ್ಲಿ ರಕ್ತ…

Read More

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ‌ ಅಂತಿಮ‌ ವಿಚಾರಣೆ ನವೆಂಬರ್ 30ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಇದೀಗ ವಿವಾದದ ಉರಿಯುವ ಬೆಂಕಿಗೆ ಎಂಇಎ ತುಪ್ಪ ಸುರಿಯುವ ಕೃತ್ಯಕ್ಕೆ ಮುಂದಾಗಿದೆ. ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವರಾದ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿಗೆ ಪತ್ರ ಬರೆದು, ಬೆಳಗಾವಿಗೆ ಬರುವಂತೆ ಆಹ್ವಾನಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಉಭಯ ರಾಜ್ಯಗಳ ಗಡಿವಿವಾದ ವಿಚಾರಣೆಯ ನಡುವೆ ಇಬ್ಬರನ್ನು ಮಹಾರಾಷ್ಟ್ರ ಸರ್ಕಾರ ಸಮನ್ವಯ ಸಚಿವರನ್ನಾಗಿ ನೇಮಿಸಿದೆ. ಗಡಿವಿವಾದ ಅಲ್ಲದೇ ಇತರ ಸಮಸ್ಯೆಗಳ ಬಗ್ಗೆ ಎಂಇಎಸ್ ಕಾರ್ಯಕರ್ತರ ಜೊತೆ ಚರ್ಚಿಸುವುದು ಅಗತ್ಯವಿದೆ. ಹೀಗಾಗಿ ಬೆಳಗಾವಿಗೆ ಇಬ್ಬರು ಸಚಿವರು ಆಗಮಿಸಿ ಚರ್ಚಿಸಬೇಕಿದೆ‌ ಎಂದು‌ ಪತ್ರದಲ್ಲಿ ಎಂಇಎಸ್ ಮುಖಂಡರು ಮನವಿ ಮಾಡಿದ್ದಾರೆ. ಎಂಇಎಸ್ ‌ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಹಾ ‌ಗಡಿ‌ ಸಚಿವರು ಡಿಸೆಂಬರ್ ‌3ಕ್ಕೆ‌ ಬೆಳಗಾವಿಗೆ ಬರುವುದಾಗಿ‌ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಿರಿಯ ವಕೀಲ ಮುಕುಲ್ ರೊಹ್ಟಗಿ ಅವರನ್ನ ಭೇಟಿ ಮಾಡಿ ಚರ್ಚಿಸಿದರು. ಮುಕುಲ್ ರೋಹ್ಟಗಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗಡಿ ವಿವಾದ ಬಗ್ಗೆ ನಾಳೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇದೆ. ಗಡಿ ವಿವಾದದ ಬಗ್ಗೆ ಮುಕುಲ್ ರೋಹ್ಟಗಿಗೆ ವಿವರಣೆ ನೀಡಿದ್ದೇನೆ. ಮಹಾರಾಷ್ಟ್ರ ಸರ್ಕಾರ ಹಾಕಿದ ಅರ್ಜಿ ಬಗ್ಗೆ ವಿಚಾರಣೆ ನಡೆಯಲಿದೆ. ವಾದಮಂಡನೆಯ ಸಿದ್ಧತೆ ಬಗ್ಗೆ ಮುಕುಲ್ ರೋಹ್ಟಗಿ ತಿಳಿಸಿದ್ದಾರೆ. ಕರ್ನಾಟಕ ಪರ ಸಮರ್ಥವಾಗಿ ವಾದ ಮಂಡಿಸುವ ವಿಶ್ವಾಸವಿದೆ ಎಂದರು. ಮಹಾರಾಷ್ಟ್ರದಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ಸಂಬಂಧ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಹರಾಷ್ಟ್ರ ಗೃಹ ಇಲಾಖೆ ಜೊತೆ ನಮ್ಮ ಅಧಿಕಾರಿಗಳು ಮಾತನಾಡಿದ್ದಾರೆ ಜತ್ ತಾಲ್ಲೂಕು 42 ಗ್ರಾಮಗಳು ಕರ್ನಾಟಕಕ್ಕೆ ಸೇರುವ ಇಂಗಿತ ವಿಚಾರ ಸಂಬಂಧ, ಒಂದು ರಾಜ್ಯದಿಂದ…

Read More

ಬೆಂಗಳೂರು: ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಸವಾರ ಹಾಗೂ ಆತನ ಸ್ನೇಹಿತರು ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ನಿನ್ನೆ ರಾತ್ರಿ ಯುವತಿ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಈ ವೇಳೆ ರ‍್ಯಾಪಿಡೋ ಬೈಕ್ ಸವಾರ ಯುವತಿಯನ್ನು ಬಿಟಿಎಂ ಲೇಔಟ್​ನಿಂದ ಪಿಕ್​ ಮಾಡಿ ಎಲೆಕ್ಟ್ರಾನಿಕ್​ಸಿಟಿಯಲ್ಲಿರುವ ಆಕೆಯ ಮನೆಗೆ ಡ್ರಾಪ್​ ಮಾಡಬೇಕಿತ್ತು. ಆದ್ರೆ ಯುವತಿ ಕುಡಿದ ನಶೆಯಲ್ಲಿರುವುದನ್ನು ಗಮನಿಸಿ ಆಕೆಯನ್ನು ಮನೆಗೆ ಬಿಡುವ ಬದಲು ರೂಮ್​ಗೆ ಕರೆದೊಯ್ದಿದ್ದಿದ್ದಾನೆ. ಯುವತಿಯನ್ನು ತನ್ನ ರೂಮ್​ಗೆ ಕರೆದೊಯ್ದು ರ‍್ಯಾಪಿಡೋ ಬೈಕ್ ಸವಾರ ಮತ್ತು ಆತನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ. ಘಟನೆ ಬಗ್ಗೆ ಎಲೆಕ್ಟ್ರಾನಿಕ್​ಸಿಟಿ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ರ‍್ಯಾಪಿಡೋ ಬೈಕ್ ಸವಾರ ಶಹಾಬುದ್ದೀನ್ ಮತ್ತು ಆತನ ಸ್ನೇಹಿತ ಅಖ್ತರ್​ನನ್ನು ಪೊಲೀಸರು​ ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ ಪ್ರಮುಖ ಪಟ್ಟಣ ನಿಪ್ಪಾಣಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್​ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಮಂಗಳವಾರ (ನ 29) ನಡೆಯಿತು. ಪಟ್ಟಣದ ಸರ್ಕೀಟ್​ ಹೌಸ್​ನಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅಲೋಕ್ ಕುಮಾರ್, ಕಳೆದ ವಾರ ಕರ್ನಾಟಕ ಸಾರಿಗೆ ನಿಗಮದ ಬಸ್​ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಿ ಮಸಿ ಬಳಿಯಲಾಗಿತ್ತು. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯಬಾರದು ಎಂದು ತಾಕೀತು ಮಾಡಿದರು. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ. ಅಶಾಂತಿಗೆ ಇದು ಕಾರಣವಾಗಬಾರದು ಎನ್ನುವ ಕಾರಣಕ್ಕೆ ಮುನ್ನೆಚ್ಚರಿಕೆ ದೃಷ್ಟಿಯಿಂದ ಸಭೆ ನಡೆಸಲಾಯಿತು ಎಂದು ಅವರು ಹೇಳಿದರು. ಸುಪ್ರೀಂಕೋರ್ಟ್​ ಒಂದು ವೇಳೆ ನಾಳೆಯೇ ತೀರ್ಪು ಪ್ರಕಟಿಸಿದರೂ ಏನೂ ಗಲಾಟೆ ಆಗಬಾರದು. ಇದಕ್ಕಾಗಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ಪೊಲೀಸರು ಮೂರು ಕಡೆ ಜಂಟಿ ಚೆಕ್​ಪೋಸ್ಟ್ ಮಾಡಿದ್ದಾರೆ. ಪ್ರತಿದಿನ…

Read More