Author: admin

ತರಗತಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಪ್ರಾಧ್ಯಾಪಕರೊಬ್ಬರು ಟೆರರಿಸ್ಟ್ ಎಂದು ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಎಂಐಟಿ ಕಾಲೇಜಿನಲ್ಲಿ ನಡೆದಿದ್ದು, ವೀಡಿಯೊ ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ಅಮಾನತು ಮಾಡಲಾಗಿದೆ. ನವೆಂಬರ್ 26ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಪ್ರಾಧ್ಯಾಪಕ ಮುಸ್ಲಿಮರು ಟೆರರಿಸ್ಟ್ ಗಳು ಎಂದು ವಿದ್ಯಾರ್ಥಿಯನ್ನು ನಿಂದಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿ ಆಕ್ಷೇಪ ವ್ಯಕ್ತಪಡಿಸಿದ್ದು, ಮುಸ್ಲಿಂ ಕಮ್ಯೂನಿಟಿಯನ್ನು ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯವಾಗಿ ಈ ರೀತಿ ಮಾತನಾಡಬೇಡಿ ಎಂದು ತಿರುಗೇಟು ನೀಡಿದ್ದಾನೆ. ವಿದ್ಯಾರ್ಥಿ ಕೆರಳುತ್ತಿದ್ದಂತೆ ಪ್ರಾಧ್ಯಾಪಕರು ವಿದ್ಯಾರ್ಥಿ ತನ್ನ ಮಗನಂತೆ ಎಂದು ಹೇಳಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ `ನೀವು ನಿಮ್ಮ ಮಗನಿಗೆ ಹೀಗೆ ಮಾತನಾಡುತ್ತೀರಾ? ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತೀರಾ? ನೀವು ಎಷ್ಟು ಜನರ ಮುಂದೆ ನನ್ನನ್ನು ಹಾಗೆ ಕರೆಯುತ್ತೀರಿ? ಇದು ತರಗತಿ, ನೀವು ವೃತ್ತಿಪರರಾಗಿ ಕಲಿಸುತ್ತಿದ್ದೀರಿ, ಮುಸ್ಲಿಮನಾಗಿ ದಿನನಿತ್ಯ ಇದನ್ನು ಎದುರಿಸುವುದು ತಮಾಷೆಯಲ್ಲ. ನೀವು ನನ್ನನ್ನು ಹಾಗೆ ಕರೆಯಬೇಡಿ” ಎಂದು ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದಾನೆ. ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ವಿಷಾದ ವ್ಯಕ್ತಪಡಿಸಿ,…

Read More

ಟೆಲಿಕಾಂ ದೈತ್ಯ ಕಂಪನಿಯಾದ ಬೆಂಗಳೂರು ಸೇರಿ 12 ನಗರಗಳಲ್ಲಿ ಏರ್ ಟೆಲ್ ನಿಂದ 5ಜಿ ಸೇವೆ ಈಗಾಗಲೇ ಆರಂಭವಾಗಿದೆ. ಏರ್ ಟೆಲ್ ಹಾಗೂ ಜಿಯೊ ಕಂಪನಿಗಳು ಪ್ರತಿದಿನ ಒಂದು ನಗರವನ್ನು 5ಜಿ ಸೇವೆಗೆ ಸೇರ್ಪಡೆಗೊಳಿಸುತ್ತಿದ್ದು, ಇದುವರೆಗೆ 12 ನಗರಗಳಲ್ಲಿ 5ಜಿ ಸೇವೆ ಆರಂಭಗೊಂಡಿದೆ. ಬೆಂಗಳೂರು, ದೆಹಲಿ, ಸಿಲುಗುರಿ, ಹೈದರಾಬಾದ್, ವರಣಾಸಿ, ಮುಂಬೈ, ನಾಗ್ಪುರ್, ಚೆನ್ನೈ, ಗುರ್ ಗಾಂವ್, ಪಾಣಿಪತ್, ಗುವಾಹತಿ ನಗರಗಳಲ್ಲಿ ಈಗಾಗಲೇ 5ಜಿ ಸೇವೆ ಲಭ್ಯವಾಗಿದೆ. ಬಿಹಾರದ ಪಾಟ್ನಾದಲ್ಲಿ ಕೆಲವು ಪ್ರದೇಶಗಳಲ್ಲಿ ಮಾತ್ರ 5ಜಿ ಸೇವೆ ಲಭ್ಯವಾಗಿದ್ದು, ಪೂರ್ಣ ಪ್ರಮಾಣದಲ್ಲಿ ಇನ್ನೂ ಲಭ್ಯವಾಗಿಲ್ಲ. ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ಧಾಣ, ಪೂನಾದ ಲೊಹೆಂಗೆ ವಿಮಾನ ನಿಲ್ದಾಣ, ವಾರಣಾಸಿ ಲಾಲ್ ಬಹದ್ದೂರ್ ಶಾಸ್ತ್ರಿ, ನಾಗ್ಪುರ ಬಾಬಾ ಸಾಹೇಬ್ ಅಂಬೇಡ್ಕರ್ ವಿಮಾನ ನಿಲ್ದಾಣ ಮತ್ತು ಪಾಟ್ನಾ ವಿಮಾನ ನಿಲ್ದಾಣಗಳಲ್ಲಿ 5ಜಿ ಸೇವೆ ಲಭ್ಯವಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಮಧುಗಿರಿ: ಶಿವಸೇನೆ ಪುಂಡರ ಅಟ್ಟಹಾಸವನ್ನು ಖಂಡಿಸುತ್ತಾ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದ ಘಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣ  ಮಧುಗಿರಿ ತಾಲೂಕು ಘಟಕದ ವತಿಯಿಂದ.ತಾಲೂಕು ಅಧ್ಯಕ್ಷರಾದ ಶ್ರೀ ಪಾಂಡುರಂಗಯ್ಯನವರ ನೇತೃತ್ವದಲ್ಲಿ ಖಂಡಿಸಲಾಯಿತು. ಎಂಇ ಎಸ್ ಸಂಘಟನೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಮಧ್ಯವಸ್ತಿಕೆ ವಹಿಸಿ ಕೂಡಲೇ ಮಹಾರಾಷ್ಟ್ರ ಬೆಳಗಾವಿ ಗಡಿ ಭಾಗದ ಸಮಸ್ಯೆಯನ್ನು ಅತೀ ಶೀಘ್ರದಲ್ಲಿ ಬಗೆಹರಿಸಿ ಕೊಡಬೇಕೆಂದು ಉಪಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಗಡಿ ಭಾಗದಲ್ಲಿ ಮೊನ್ನೆ ಮಹಾರಾಷ್ಟ್ರ ರಾಜ್ಯದ  ಶಿವಸೇನೆ ಪುಂಡರು, ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದು, ಕಲ್ಲುತೂರಾಟ ನಡೆಸಿ  ಗಾಜುಗಳನ್ನು ಹೊಡೆದಿರುವಂತ ಘಟನೆ ಖಂಡನೀಯ,  ಶಿವಸೇನೆ ಪುಂಡರ  ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹಾಕಿ ಕೂಡಲೇ ಬಂಧಿಸಬೇಕು ಉಪ ವಿಭಾಗಾಧಿಕಾರಿಗಳಾದಂತ ರಿಷಿ ಆನಂದ್ ಅವರಿಗೆ ಮನವಿ ನೀಡಲಾಯಿತು. ಕ ರ ವೇ ಅಲ್ಪಸಂಖ್ಯಾತರ ತಾಲೂಕು ಅಧ್ಯಕ್ಷರಾದ…

Read More

ಬೆಂಗಳೂರು/ನೆಲಮಂಗಲ : ಕರ್ನಾಟಕ ರಣಧೀರರ ವೇದಿಕೆ ರಾಜ್ಯ ಸಮಿತಿ ವತಿಯಿಂದ ನವೆಂಬರ್ 29ರಂದು ಮೂರನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ಶ್ರೀ ಭುವನೇಶ್ವರಿ ಹಬ್ಬ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ ಸಮಾರಂಭ ಮತ್ತು ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪವಾಡ ಶ್ರೀ ಬಸವಣ್ಣ ದೇವರ ಮಠ ನೆಲಮಂಗಲದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ರವರು ಮತ್ತು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಟ ವಿನೋದ್ ರಾಜ್, ನಿವೃತ್ತ ಪ್ರಸ್ತುತಿ ತಜ್ಞರಾದ ಡಾಕ್ಟರ್ ಚೌಡಯ್ಯ, ಅಗ್ನಿಶಾಮಕ ದಳ ನೆಲಮಂಗಲ ನಿರೀಕ್ಷಕರಾದ ಸಿದ್ದಪ್ಪ, ರಾಣಿ ಚೆನ್ನಮ್ಮ ದೇವಿ ಬಿರುದಂಕಿತರು ಹಾಗೂ ಖ್ಯಾತ ನಟಿ ಹಿರಿಯ ಕಲಾವಿದರಾದ ಡಾ.ಲೀಲಾವತಿರವರಿಗೆ, ಕನ್ನಡ…

Read More

ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮದ ಕೆರೆಗೆ ಈಜಾಡಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ ಗ್ರಾಮದ ಹೊಸಕೆರೆಯಲ್ಲಿ ನಡೆದಿದೆ. ತುಮಕೂರು ನಗರದ ಅಂತರಸಹಳ್ಳಿಯ ನಿತೀನ್(11) ಮತ್ತು ಸತ್ಯಮಂಗಲದ ದಿವಾಕರ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಈಜಾಡುತ್ತಿದ್ದ ವೇಳೆ ಮುಳುಗುತ್ತಿದ್ದ ಸ್ನೇಹಿತ ಮಗ ನಿತೀನ್ ನನ್ನು ರಕ್ಷಿಸಲು ದಿವಾಕರ ಅವರು ಮುಂದಾಗಿದ್ದಾರೆ. ಈ ವೇಳೆ ಅವರು ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗಿದ ಇಬ್ಬರನ್ನೂ ತುಂಬಾಡಿ ಗ್ರಾಮಸ್ಥರು ತಕ್ಷಣ ನೀರಿನಿಂದ ಮೇಲೆತ್ತುವ ಕೆಲಸ ಮಾಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡ ಹೆಚ್ಚಿನ ಚಿಕಿತ್ಸೆಗೆ ಪ್ರಯತ್ನಪಟ್ಟರೂ ಚಿಕಿತ್ಸೆ ಫಲಕಾರಿ ಆಗಿಲ್ಲ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಉತ್ತರ ಪ್ರದೇಶದ ಮೀರತ್‌ನಲ್ಲಿ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಬಗ್ಗೆ ವಿದ್ಯಾರ್ಥಿಗಳು ಅಶ್ಲೀಲ ಕಾಮೆಂಟ್ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಕಿಥೌರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಧನಾ ಇನಾಯತ್‌ಪುರ್ ಹಳ್ಳಿಯ ಶಾಲೆಯಲ್ಲಿ ಘಟನೆ ನಡೆದಿದ್ದು, ಈ ಗುಂಪಿನಲ್ಲಿ ಒಬ್ಬ ವಿದ್ಯಾರ್ಥಿನಿಯೂ ಇದ್ದಾರೆ. 12ನೇ ತರಗತಿಯ ವಿದ್ಯಾರ್ಥಿಗಳು ಬಹಳ ಸಮಯದಿಂದ ತಮಗೆ ಕಿರುಕುಳ ನೀಡುತ್ತಿರುವುದಾಗಿ ಶಿಕ್ಷಕಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ವಿದ್ಯಾರ್ಥಿಗಳು ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ. ಶಿಕ್ಷಕಿ ಹಲವು ಬಾರಿ ತಿಳಿ ಹೇಳಿದ್ದರೂ ಪ್ರಯೋಜನವಾಗಿಲ್ಲ ಎಂದು ಠಾಣಾಧಿಕಾರಿ ಅರವಿಂದ್ ಮೋಹನ್ ಶರ್ಮಾ ಹೇಳಿದ್ದಾರೆ. ಶಾಲಾ ಆವರಣದಲ್ಲಿ ಶಿಕ್ಷಕಿಗೆ ಐ ಲವ್ ಯೂ ಎಂದಿದ್ದಾರೆ. ಆ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳು 16 ವರ್ಷದ ಆಸುಪಾಸಿನಲ್ಲಿದ್ದು, ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಪಂಜಾಬ್‌ನ ಕಿರಾತ್‌ಪುರ ಸಾಹಿಬ್ ಬಳಿ ರೈಲು ಹಳಿ ಮೇಲೆ ಆಟವಾಡುತ್ತಿದ್ದಾಗ ವಲಸೆ ಕಾರ್ಮಿಕರ ಮೂವರು ಮಕ್ಕಳಿಗೆ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ನಗರದ ಸಟ್ಲೆಜ್ ನದಿಯ ಸೇತುವೆ ಸಮೀಪವಿರುವ ರೈಲು ಹಳಿ ಮೇಲೆ ವಲಸೆ ಕಾರ್ಮಿಕರ 4 ಮಕ್ಕಳು ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದೆ. ನಾಲ್ಕನೇ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಪಂಜಾಬ್ ಸರ್ಕಾರ ತನಿಖೆಗೆ ಆದೇಶಿಸಿದೆ. ಮೃತಪಟ್ಟಿರುವ ಮಕ್ಕಳು 7 ರಿಂದ 11 ವರ್ಷದೊಳಗಿನವರು. ಈ ದುರಂತದ ಬಗ್ಗೆ ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ದುಃಖ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಅಪಘಾತದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವಂತೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೋರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಭೋಪಾಲ್‌ನಲ್ಲಿ ಸಂಚರಿಸುತ್ತಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಬಿದ್ದು ಕೈ ಮುರಿದುಕೊಂಡಿದ್ದಾರೆ. ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಾಗ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್‍ರ ಬಿದ್ದು ಮೊಣಕಾಲು ಮತ್ತು ಕೈಗೆ ಗಾಯವಾಗಿದೆ. ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ ಫ್ಯಾಕ್ಚರ್ ಆಗಿರುವುದು ಪತ್ತೆಯಾಗಿದೆ. ವೈದ್ಯರ ತಂಡ ನಿಗಾ ವಹಿಸಿದ್ದು, ಚಿಕಿತ್ಸೆ ನೀಡಿದೆ. ಅಭಿಮಾನಿಗಳ ಗುಂಪನ್ನು ಪೊಲೀಸರು ನಿಯಂತ್ರಿಸಲು ವಿಫಲವಾದ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನ ಸದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪನ್ನಪಾಳ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನೇಣಿಗೆ ಶರಣಾದ ಮಹಿಳೆಯನ್ನು ಕತೀಜಾ ಕೂಬ್ರ(29) ಎಂದು ಗುರುತಿಸಲಾಗಿದೆ. ಗಂಡನ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮಗಳು ಮದುವೆಯಾಗಿಂದ ಗಂಡ ಜಗಳ ಮಾಡುತ್ತಿದ್ದ. ದೈಹಿಕವಾಗಿ ಹಲ್ಲೆ ಮಾಡುತ್ತಿದ್ದ. ಅವನಿಗೆ ಬೇರೊಬ್ಬಳೊಂದಿಗೆ ಸಂಬಂಧವಿತ್ತು. ಹೀಗಾಗಿ ಕತೀಜಾಳನ್ನ ಪತಿ ಮಹೆಬೂಬ್ ಪರೀಷನೇ ಕೊಂದಿದ್ದಾನೆ ಎಂದು ಕತೀಜಾ ತಂದೆ ಆರೋಪಿಸಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೊಲೆಯಾಗಿದ್ದು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಮೃತ ಕತೀಜಾ ಅವರ ಗಂಡ , ಮಾವ ಮತ್ತು‌ ನಾದಿನಿಯನ್ನ ಪೊಲೀಸರು ವಶಕ್ಕೆ‌ ಪಡೆದು ವಿಚಾರಣೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಬರಿಮಲೆ ವಾವರ್ ಮಸೀದಿ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಹಿಂದೂಗಳು ವಾವರ್ ಮಸೀದಿಗೆ ಹೋಗದಂತೆ ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಂಚಾಲಕ ಮೋಹನ್ ಗೌಡ ಮನವಿಯನ್ನು ಮಾಡಿದ್ದಾರೆ. ಈಗಾಗಲೇ ಶಬರಿಮಲೆ ಅಯ್ಯಪ್ಪ ಸ್ವಾಮೀಯ ವ್ರತ ಆರಂಭವಾಗಿದೆ. ನಾವು ಶಬರಿಮಲೆಗೆ ಹೋಗುವಾಗ ಘೋರ ತಪ್ಪನ್ನು ಮಾಡ್ತಿದ್ದೀವಿ.ವಾವರ್ ಮಸೀದಿಗೆ ಹೋಗುವಂತಹ ಕೆಟ್ಟ ಸಂಪ್ರದಾಯ ಇತ್ತೀಚೆಗೆ ಶುರುವಾಗಿದೆ. ಹಿಂದೂಗಳು ಕೋಟಿಗಟ್ಟಲೇ ಹಣವನ್ನು ಆ ಮಸೀದಿಗೆ ಸುರಿಯುತ್ತಿದ್ದಾರೆ. ವಾವರ್ ಒಬ್ಬ ಬಾಬರ್ ಆಗಿದ್ದ, ಒಬ್ಬ ಮುಸ್ಲಿಂ ಆಗಿದ್ದನು. ಒಬ್ಬ ಕಳ್ಳನನ್ನ ಅಯ್ಯಪ್ಪ ಸ್ವಾಮೀಯ ಸ್ನೇಹಿತ ಎಂದು ಬಿಂಬಿಸಿದ್ದಾರೆ. ಅವನ ಘೋರಿಯನ್ನು ಮಸೀದಿಯನ್ನಾಗಿ ಮಾಡಿದ್ದಾರೆ. ಇದು ಹಿಂದೂ ಧರ್ಮಕ್ಕೆ ಅಯ್ಯಪ್ಪನಿಗೆ ಮಾಡಿದ ಅಪಮಾನವಾಗಿದೆ. ಹಿಂದೂಗಳ ಮೂರ್ತಿ ಪೂಜೆಯನ್ನು ಒಪ್ಪದ ಒಬ್ಬ ಮುಸ್ಲಿಂ ವಾವರ್, ಹೇಗೆ ಅಯ್ಯಪ್ಪ ಸ್ವಾಮಿ ಭಕ್ತ ಆಗಲು ಸಾಧ್ಯವಿದೆ..? ಯಾವುದೇ ಕಾರಣಕ್ಕೂ ಹಿಂದೂಗಳು ವಾವರ್ ಮಸೀದಿಗೆ ಕಾಣಿಕೆ ನೀಡಬಾರ್ದು.ಶಬರಿಮಲೆಗೆ ಹೋಗಿ ಅಯ್ಯಪ್ಪಸ್ವಾಮಿ ದರ್ಶನ ಮಾತ್ರ ಪಡೆಯಬೇಕು ಎಂದು ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More