Author: admin

ಇತ್ತೀಚೆಗೆ ಸಾಮಾಜಿಕ ಜಾಲತಾಣ ಹಾಗೂ ಕನ್ನಡ ಚಿತ್ರರಂಗದ ಗಮನ ಸೆಳೆಯುತ್ತಿರುವ ಪಾಲಾರ್ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಚಿತ್ರದ ಪ್ರೀಮಿಯರ್ ಶೋಗಳು ಯಶಸ್ವಿಯಾಗಿದ್ದು, ಚಿತ್ರ ವೀಕ್ಷಿಸಿದವರು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 24ರಂದು ಚಿತ್ರಮಂದಿರಕ್ಕೆ ಕಾಲಿಡಲಿರುವ ಪಾಲಾರ್ ಚಿತ್ರ ನೋಡಲು ಸಾಕಷ್ಟು ಜನರು ಕುತೂಹಲದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಕಲಾತ್ಮಕ ಚಿತ್ರಗಳು ಹೆಚ್ಚು ಯಶಸ್ವಿಯಾಗುತ್ತಿದೆ. ನಮ್ಮ ನೆಲಮೂಲದ ಕಥೆಗಳನ್ನು ಜನರು ಹೆಚ್ಚು ಆಕರ್ಷಿತರಾಗಿ ನೋಡುತ್ತಿದ್ದಾರೆ. ಇಂತಹ ಕಥೆಗಳ ಸಾಲಿನಲ್ಲಿ ಪಾಲಾರ್ ಚಿತ್ರ ಕೂಡ ಸ್ಥಾನ ಪಡೆಯಲಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಶೋಷಿತರು ಮೇಲ್ವರ್ಗಗಳ ರಾಜಕೀಯ, ಆರ್ಥಿಕ ಸಾಮರ್ಥ್ಯದ ನಡುವೆ ಸಿಲುಕಿ ಮತ್ತಷ್ಟು ಶೋಷಣೆಗೊಳಪಡುತ್ತಿರುವ ದುಸ್ಥಿತಿಗಳು ಇಂದಿಗೂ ನಮ್ಮ ಸಮಾಜದಲ್ಲಿದೆ. ಅಂತಹ ಘಟನೆಯೊಂದನ್ನು ಪಾಲಾರ್ ಚಿತ್ರ ಹೇಳಲು ಹೊರಟಿದೆ. ಈ ಚಿತ್ರ ಯಶಸ್ವಿಯಾದರೆ ಮುಂದೆ ಇನ್ನಷ್ಟು ಇಂತಹ ಕಥೆಗಳ ಚಿತ್ರಗಳು ತೆರೆಯ ಮೇಲೆ ಬರಲು ಸಾಧ್ಯವಾಗುತ್ತದೆ. ಇದರಿಂದ ಸಾಮಾಜಿಕವಾಗಿಯೂ ಸಾಕಷ್ಟು ಬದಲಾವಣೆಯಾಗುತ್ತದೆ. ಶೋಷಿತರು ಜಾಗೃತರಾದರೆ, ಶೋಷಣೆ ಮಾಡುತ್ತಿರುವವರ ಮನಃಪರಿವರ್ತನೆಯೂ ಆಗುತ್ತದೆ ಅನ್ನೋದು…

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂ ದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಬೆಂಡೋಣಿ ಗ್ರಾಮದ ಸಿದ್ದರಾಜು ಬಿ.ಎನ್ ಬಿನ್ ನರಸಿಂಹಯ್ಯ (45) ಎಂಬ ಬಡ ರೈತ ಸಾಲಬಾಧೆ ತಾಳಲಾರದೆ ತನ್ನದೇ ಜಮೀನಿನಲ್ಲಿ (ಸರ್ವೇ ನಂಬರ್ 22/2 ರಲ್ಲಿ) ಇರುವ ತುಗಲಿ ಮರಕ್ಕೆ ನೇಣು ಹಾಕಿಕೊಂಡು ಮೃತನಾಗಿದ್ದ ಘಟನೆ ಮಂಗಳವಾರ ನಡೆದಿತ್ತು. ಕೊರಟಗೆರೆ ಕೆನರಾ ಬ್ಯಾಂಕ್ ನಲ್ಲಿ ದಾಳಿಂಬೆ ಬೆಳೆ ಬೆಳೆಯುವ ಸಲುವಾಗಿ ಐದು ಲಕ್ಷ ಸಾಲ, ವಿ ಎಸ್ ಎಸ್ ಎನ್ ಬೆಂಡೋಣಿ ಶಾಖೆಯಲ್ಲಿ ಒಂದು ಲಕ್ಷ ಸಾಲ, ಖಾಸಗಿ ಫೈನಾನ್ಸ್ ಸಂಸ್ಥೆಯಾದ ಸಮಸ್ತ ಫೈನಾನ್ಸ್ ನಲ್ಲಿ ಹೈನುಗಾರಿಕೆಗಾಗಿ 70,000 ಸಾಲವನ್ನು ಮಾಡಿದ್ದರು ಮತ್ತು ಮಗನ ಚಿಕಿತ್ಸೆಗಾಗಿ ಸ್ಥಳೀಯ ಸಾರ್ವಜನಿಕರಲ್ಲಿ ಕೈ ಸಾಲವನ್ನು ಸಹ ಮಾಡಿ ಅತಿಯಾದ ಬಡ್ಡಿಯಿಂದ ಸಾಲವನ್ನು ತೀರಿಸಲಾಗದೆ ಕೊರಟಗೆರೆಯ ಕೆನರಾ ಬ್ಯಾಂಕ್ ಕಳುಹಿಸಿದ್ದ ಲೀಗಲ್ ನೋಟಿಸ್ ತನ್ನ ಜೇಬಿನಲ್ಲಿಯೇ ಇಟ್ಟುಕೊಂಡು ಮರಕ್ಕೆ ನೀನು ತೆಗೆದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು. ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಪ್ರಕರಣವನ್ನು…

Read More

ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರ ಹಾಗೂ ದಬ್ಬೇಗಟ್ಟ ಹೋಬಳಿ ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದು ಸುಳ್ಳು,  ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಬಹುಮತಗಳನ್ನು ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಬೆಮೆಲ್ ಕಾಂತರಾಜು ಅಭಿಪ್ರಾಯಪಟ್ಟರು. ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಮಾವಿನಹಳ್ಳಿಯಲ್ಲಿ ಮಾತನಾಡಿದ ಬೆಮೆಲ್ ಕಾಂತರಾಜು, ಕಾಂಗ್ರೆಸ್ ಪಕ್ಷದಿಂದ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆ ಪ್ರತಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಘೋಷಣೆಯನ್ನು ಮಾಡಿದ್ದೇವೆ, ಸಾರ್ವಜನಿಕರಿಗೆ ಇವುಗಳ ಮನವರಿಕೆ ಮಾಡಿ ಗ್ಯಾರಂಟಿ ಕಾರ್ಡುಗಳನ್ನು ಕೊಡಲಾಗುವುದು, ಇದೇ ಕಾರ್ಯಕ್ರಮವನ್ನು ತುಮಕೂರಿನಲ್ಲಿ ನಮ್ಮ ಪಕ್ಷದ ಉಸ್ತುವಾರಿಗಳಾದ ಸುರ್ಜೆವಾಲ ರವರು ಉದ್ಘಾಟಿಸಿದ್ದು. ಅವುಗಳ ಬಗ್ಗೆ ಮನವರಿಕೆಯನ್ನು ಜನತೆಗೆ ಮಾಡಿಕೊಡಲು ತಾಲೂಕಿನ        ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ ಮಾವಿನಹಳ್ಳಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದೇವೆ  ಎಂದರು. ಇಲ್ಲಿ ಸೇರಿರುವ ಜನಗಳನ್ನು ನೋಡಿ ನಮ್ಮ ಕಾಂಗ್ರೆಸ್ ಪಕ್ಷದ ಮೇಲೆ ನೀವು ಇಟ್ಟಿರುವ ಅಭಿಮಾನವನ್ನು ಬೆಂಬಲವನ್ನು ತೋರುತ್ತದೆ.…

Read More

2017-18ರಲ್ಲಿ ಕೇಂದ್ರ ಸರ್ಕಾರದಿಂದ ನಮಗೆ ಬರುವ ನಮ್ಮ ತೆರಿಗೆ ಪಾಲು 31,752 ಕೋಟಿ ಇತ್ತು. 2022-23ರಲ್ಲಿ 34,596 ಕೋಟಿ, ಮುಂದಿನ ವರ್ಷ 37,252 ಕೋಟಿ ಬರಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಸಂಗ್ರಹ ಮತ್ತು ಬಜೆಟ್ ಗಾತ್ರಕ್ಕೆ ಹೋಲಿಸಿದರೆ ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ನಮಗೆ ದೊಡ್ಡ ಅನ್ಯಾಯವಾಗುತ್ತಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಬರುವ ಹಣ 2017-18ರಲ್ಲಿ 12,389 ಕೋಟಿ ಇತ್ತು. 2022-23ರಲ್ಲಿ 12,391 ಕೋಟಿ. ಮುಂದಿನ ವರ್ಷಕ್ಕೆ 13,005 ಕೋಟಿ. ನಮಗೆ ಒಟ್ಟು ನಮ್ಮ ತೆರಿಗೆ ಪಾಲು, ಕೇಂದ್ರದ ಸಹಾಯಧನ ಸೇರಿ 50,257 ಕೋಟಿ ಬರಲಿದೆ. 2017-18ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24,42,000 ಕೋಟಿ. ಆಗ ರಾಜ್ಯಕ್ಕೆ ಹಂಚಿಕೆಯಾದ ತೆರಿಗೆ 35,895 ಕೋಟಿ. ಕೇಂದ್ರ ನೀಡಿದ್ದ ಅನುದಾನ 16,082 ಕೋಟಿ. ಒಟ್ಟು 51,977 ಕೋಟಿ ಬಂದಿತ್ತು. 2019-20ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 27,86,349 ಕೋಟಿ. ಆಗ ರಾಜ್ಯಕ್ಕೆ ಹಂಚಿಕೆಯಾದ…

Read More

ಐಪಿಎಸ್ ಅಧಿಕಾರಿ ಡಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಸದ್ಯಕ್ಕಂತೂ ಮುಗಿಯೋ ಲಕ್ಷಣ ಕಾಣುತ್ತಿಲ್ಲ. ಸರ್ಕಾರವು ಇಬ್ಬರು ಅಧಿಕಾರಿಗಳಿಗೂ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಬಾರದೆಂದು ತಾಕೀತು ಮಾಡಿತ್ತು. ಇದರ ನಡುವೆಯೇ ಡಿ.ರೂಪಾ ಅವರು ರೋಹಿಣಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡುತ್ತಿರುವ ಆಡಿಯೋವೊಂದು ವೈರಲ್ ಆಗಿದೆ. ಆಡಿಯೋದಲ್ಲಿ ಡಿ ರೂಪಾ ಅವರು ರೋಹಿಣಿ ಸಿಂಧೂರಿಯವರನ್ನು ಹಿಗ್ಗಾಮುಗ್ಗ ಬೈಯುತ್ತಿರುವ ಮತ್ತು ತಮ್ಮ ಸಂಸಾರದ ವಿಷಯಗಳನ್ನು ಎತ್ತಿ ಮಾತನಾಡಿದ್ದಾರೆ. ಆಯಮ್ಮನ ದಿಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ. ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ. ನಾವು ನೋಡಿದ್ದೀವಲ್ಲ ಎಂದು ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಡಿ.ರೂಪಾ ಗಂಗರಾಜು ಜತೆ ಸಂಭಾಷಣೆ ವೇಳೆ ಆರೋಪ ಮಾಡಿದ್ದಾರೆ. ಸದ್ಯ ಈ ಆಡಿಯೋ ಈಗ ವೈರಲ್…

Read More

ತುರುವೇಕೆರೆ: ತಾಲ್ಲೂಕಿನಲ್ಲಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನವರನ್ನು ನೋಡಿ ಹೆಚ್ಚಿನ ಮತಗಳನ್ನು ವೀರಶೈವರು ನೀಡಿದ್ದಾರೆಯೇ ಹೊರತು ಶಾಸಕರ ಮುಖವನ್ನು ನೋಡಿ ಅಲ್ಲ ಎಂದು ಮಾಜಿ ಬಿ.ಜೆ.ಪಿ ಅಧ್ಯಕ್ಷ ಹೆಡಗೀಹಳ್ಳಿ ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಪ್ರವಾಸಿಮಂದಿರದಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಕೆಲವರು ಹೇಳಿಕೆ ನೀಡಿ ಎಲ್ಲ ವೀರಶೈವರ ಬೆಂಬಲ ಬಿ.ಜೆ.ಪಿ. ಗೆ ಇದೆಯೆಂದು ತಿಳಿಸಿರುವುದು ಸತ್ಯಕ್ಕೆ ದೂರವಾದ ವಿಚಾರ. ಇವರುಗಳು ಸ್ವಾರ್ಥಕ್ಕಾಗಿ ಸಮಾಜವನ್ನು ಹಾಳುಮಾಡುವ ಹುನ್ನಾರವಾಗಿದ್ದು ವೀರಶೈವರು ಕೇವಲ ಒಂದೇ ಪಕ್ಷಕ್ಕೆ ಸೀಮಿತರಾದವರಲ್ಲ ಸಮಾಜದ ಹಲವಾರು ಮುಖಂಡರುಗಳು ಬಿ.ಜೆ.ಪಿ. ಪಕ್ಷದಲ್ಲಿ ಕಡೆಗಣಿಸಿದ್ದರಿಂದ ಬೇಸತ್ತು ಪಕ್ಷ ತೊರೆಯುವ ನಿರ್ದಾರ ಮಾಡಿದ್ದಾರೆ. ಅದರಲ್ಲಿ ನಾನೂ ಒಬ್ಬ ಈಗಾಗಿ ನಾನು ಜೆ.ಡಿ.ಎಸ್. ಸೇರಿದ್ದೇನೆ ಇನ್ನು ಹಲಾವಾರು ಮುಖಂಡರುಗಳು ನಮ್ಮನ್ನು ಹಿಂಬಾಲಿಸಲಿದ್ದಾರೆ ಇದಕ್ಕೆ ಇಲ್ಲಿ ಸೇರಿರುವ ಸಮಾಜದ ನೂರಾರು ಮುಖಂಡರೇ ಸಾಕ್ಷಿ ಎಂದು ಹೇಳಿದರು. ನಾನು ಯಾವುದೇ ಕಾರಣಕ್ಕೂ ಆಸೆ ಆಮಿಷಕ್ಕೆ ಒಳಗಾಗಿ ಪಕ್ಷವನ್ನು ತೊರೆದಿಲ್ಲ, ಅಲ್ಲಿ ಕಾರ್ಯಕರ್ತರಿಗೆ ಆದಂತಹ ಅನ್ಯಾಯವನ್ನು…

Read More

ತುರುವೇಕೆರೆ: ನನಗೆ ಕ್ಷೇತ್ರದ ಜನತೆಯ ಜೊತೆ ಒಡನಾಟವಿದ್ದು, ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನನಗೆ ನಿಮ್ಮ ಸೇವೆಯನ್ನು ಮಾಡುವ ಅವಕಾಶ ಸಿಗುತ್ತದೆ ಎಂಬ ಆಶಯವನ್ನು ಕೆ. ಆರ್. ಎಸ್. ಪಕ್ಷದ ಸಂಭಾವ್ಯ ಅಭ್ಯರ್ಥಿ ರಾಮ್ ಪ್ರಸಾದ್ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸತತ ಎರಡು ವರ್ಷಗಳಿಂದ ಜಿಲ್ಲಾಧ್ಯಕ್ಷರ ನಿರ್ದೇಶನದಂತೆ ಕ್ಷೇತ್ರದ ಜನತೆಯ ನಾಡಿಮಿಡಿತ ಅರಿಯುವ ಕೆಲಸವನ್ನು ಮಾಡುತಿದ್ದೇನೆ ಹಾಗೂ ಕ್ಷೇತ್ರದ ತುಂಬಾ ಪ್ರವಾಸಮಾಡಿ ಜನರ ನಾಡಿಮಿಡಿತ ಅರಿಯುವ ಕೆಲಸ ಮಾಡಿದ್ದೇನೆ ಎಂದು ಅವರು ತಿಳಿಸಿದರು. ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆ, ರಸ್ತೆ ಮತ್ತು ರೈತರಿಗೆ ನೀಡುವ ತ್ರೀಫೇಸ್ ವಿದ್ಯುತ್ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ನಮ್ಮ ತಾಲ್ಲೂಕು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಹಾಗೂ ಸರ್ಕಾರಿ ಕಚೇರಿಗಳಲ್ಲಿ ತಾಂಡವವಾಡುತ್ತಿರುವ ಲಂಚಕೋರತನವನ್ನು ದಮನ ಮಾಡುವ ನಿಟ್ಟಿನಲ್ಲಿ…

Read More

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಜಮಗುಳಿ ಗ್ರಾಮಸ್ಥರು ಇತ್ತೀಚೆಗೆ ಮತದಾನ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ಮತ್ತೆ ಕೆಲ ಗ್ರಾಮದ ಜನರು ಮತದಾನ ಬಹಿಷ್ಕರಿಸಿದ್ದಾರೆ. ಸಿದ್ದಾಪುರ ತಾಲ್ಲೂಕಿನ ಕಾನೂರು, ಶ್ರೀನಿವಾಸಜಡ್ಡಿ, ಹೊಸಕೊಪ್ಪ ಗ್ರಾಮದ ಜನರು “ರಾಜಕಾರಣಿಗಳಿಗೆ ನಮ್ಮ ಊರಿಗೆ ಪ್ರವೇಶವಿಲ್ಲ” ಎಂದು ನಾಮಫಲಕಗಳನ್ನು ಹಾಕಿದ್ದು, ಮತದಾನ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಳ್ಳ ದಾಟಲು ತೂಗು ಸೇತುವೆ ನಿರ್ಮಿಸಿ ಕೊಡಿ ಎಂದು ಹಲವು ವರ್ಷಗಳಿಂದ ಬೇಡಿಕೆ ಇತ್ತು. ಕಳೆದ 10 ವರ್ಷಗಳಿಂದ ಮನವಿ ಮಾಡಿದರೂ ಯಾವೊಬ್ಬ ಜನಪ್ರತಿನಿಧಿಗಳು ಗಮನ ಹರಿಸಿಲ್ಲ. ಇನ್ನೂ ಮಳೆಗಾಲದಲ್ಲಿ ಹಳ್ಳ ತುಂಬಿ ಹರಿದು ಜನರ ಓಡಾಟಕ್ಕೆ ಪರದಾಡುವ ಸ್ಥಿತಿಯಿದೆ. ಆದರೂ ಜನರ ಸಂಕಷ್ಟಕ್ಕೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ಜಿಲ್ಲೆಯ ರಾಯಬಾಗ (Raibag) ತಾಲೂಕಿನ ಮೇಖಳಿ ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಎಂಬಾಕೆ ಕಮಿಷನ್ ಕಿರುಕುಳಕ್ಕೆ ಬೇಸತ್ತು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಗ್ರಾಮದ ಅಭಿವೃದ್ಧಿ ಕೆಲಸಗಳಿಗಾಗಿ ಕಾಮಗಾರಿ ಅನುಮೋದನೆಗೆ ಪಂಚಾಯಿತಿ ಅಧಿಕಾರಿಗಳಿಂದ ಶೇ. 30 ಕಮಿಷನ್ ಬೇಡಿಕೆ ಇದೆ. ಆದರೆ, ಕಮಿಷನ್ ನೀಡಲು ನನ್ನ ಕೈಯಿಂದ ಸಾಧ್ಯವಾಗದೇ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಅವರು ಪತ್ರದಲ್ಲಿ ತಿಳಿಸಿದ್ದಾರೆ. ಪಂಚಾಯತಿಯ 14 ಮತ್ತು 15ನೇ ಹಣಕಾಸು, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆಗೆ ಕಮಿಷನ್ ಬೇಡಿಕೆ ಇಡುತ್ತಿದ್ದಾರೆ. ಕ್ರಿಯಾಯೋಜನೆ ಅನುಮೋದನೆಗಾಗಿಯು ಮುಂಚಿತವಾಗಿ ಶೇ. 3 ರಷ್ಟು ಹಣವನ್ನು ನೀಡಬೇಕಿದೆ. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮುಗಂಡ ಹಣ ನೀಡಲು ಪಿಡಿಓ ಮಂಜುನಾಥ್ ದಳವಾಯಿ ಅವರು ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಬಸವಣ್ಣ ದೇವಸ್ಥಾನದ ಅರ್ಚಕ ಪ್ರಕಾಶ್ ಕುಂದಗೋಳಮಠ ಎಂಬುವರಿಗೆ ಗ್ರಾಮಸ್ಥರು ಕ್ಷುಲ್ಲಕ ವಿಚಾರಕ್ಕಾಗಿ ದೇವಸ್ಥಾನದಲ್ಲಿ ಪೂಜಾರಿಯನ್ನು ಸ್ಥಳೀಯರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯ ಕಂಪ್ಲಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪೂಜೆಯ ವಿಚಾರವಾಗಿ ಪೂಜಾರಿ ಮತ್ತು ಗ್ರಾಮಸ್ಥರ ನಡುವೆ ಗಲಾಟೆ ನಡೆದಿದೆ. ಅದು ವಿಕೋಪಕ್ಕೆ ಹೋಗಿ ಪೂಜಾರಿಯನ್ನು ಮನಬಂದಂತೆ ಥಳಿಸಿದ್ದಾರೆ. ಪೂಜಾರಪ್ಪ ಪ್ರಕಾಶ್ ಕುಂದಗೋಳಮಠ ತುಂಬಾ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಅರ್ಚಕನ ನಡವಳಿಕೆಯಲ್ಲಿ ಬದಲಾವಣೆಯಾಗಿದೆ ಎಂದು ಗ್ರಾಮಸ್ಥರು ಹೊಸ ಅರ್ಚಕರ ನೇಮಕಕ್ಕೆ ಚಿಂತನೆ ನಡೆಸಿದ್ದರು. ಆದರೆ ಗ್ರಾಮಸ್ಥರ ಈ ನಿರ್ಧಾರಕ್ಕೆ ಪ್ರಕಾಶ್ ಒಪ್ಪಿಗೆ ನೀಡಿರಲಿಲ್ಲ. ಈ ವಿಚಾರವಾಗಿ ದೇವಸ್ಥಾನ ಆವರಣದಲ್ಲಿ ಗಲಾಟೆ ಆರಂಭವಾಗಿದೆ. ಇನ್ನೂ ಗಲಾಟೆಯಲ್ಲಿ ಅರ್ಚಕ ಪ್ರಕಾಶ್‌ಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಜಗಳ ಬಿಡಿಸಲು ಬಂದ ಅರ್ಚಕನ ಮಗನಿಗೂ ಗ್ರಾಮಸ್ಥರು ಥಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More