Author: admin

ವಿಚಾರದಲ್ಲಿ ಮಹಾರಾಷ್ಟ್ರ ಧೋರಣೆ ಖಂಡಿಸುತ್ತೇವೆ. ಭಾಷೆ, ನೆಲೆ ಜಲದ ವಿಚಾರದಲ್ಲಿ ಯಾವುದೇ ಪ್ರಚೋದನೆ ಸಹಿಸಲ್ಲ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ಉಡುಪಿಯಲ್ಲಿ ಇಂದು ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಇತ್ಯರ್ಥ ಆಗಿರುವ ಗಡಿ ವಿಚಾರವನ್ನ ಮತ್ತೆ ಮತ್ತೆ ಕೆದಕಬೇಡಿ. ಜನರ ಭಾವನೆ ಕೆರಳಿಸುವುದು ಖಂಡನೀಯ. ನಾವು ಜೊತೆಯಾಗಿ ಬದುಕಬೇಕು. ಪ್ರಚೋದನೆಗೆ ಒಳಗಾಗಬಾರದು ನಾವೆಲ್ಲರೂ ಭಾರತೀಯರು ಅನ್ನುವ ಭಾವನೆಯಿಂದ ಬದುಕೋಣ ಎಂದರು. ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ಶಿವಸೇನೆ ಮೈತ್ರಿ ಸರ್ಕಾರವಿದೆ. ಶಿವಸೇನೆ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ರಾಜಕೀಯ ಹೇಳಿಕೆ ನೀಡುತ್ತಿದೆ. ಭಾರತೀಯತೆ ಎನ್ನುವುದು ಇವೆಲ್ಲವನ್ನೂ ಮೀರಿದೆ. ಭಾಷೆ ನೆಲೆ ಜಲದ ವಿಚಾರದಲ್ಲಿ ಯಾವುದೇ ಪ್ರಚೋದನೆ ಸಹಿಸಲ್ಲ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಗಡಿ ವಿವಾದದ ಕಳೆದ ಎರಡು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತ ಮಹಾರಾಷ್ಟ್ರದ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದ ಕನ್ನಡಿಗರು ಕನ್ನಡ ಧ್ವಜ ಹಾಗೂ ಕರುನಾಡಿಗೆ ಜೈ ಎಂದು ನಾಮಫಲಕ ಹಾಕಿ, ಮುಖ್ಯಮಂತ್ರಿ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕನ್ನಡ ಧ್ವಜಗಳನ್ನು ಹಿಡಿದು ಕರುನಾಡಿಗೆ ಜೈಕಾರ ಹಾಕಿದ ಕನ್ನಡಿಗರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಕಳೆದ 75 ವರ್ಷಗಳಿಂದ ಮಹಾರಾಷ್ಟ್ರ ಸರ್ಕಾರ ಈ ಭಾಗದಲ್ಲಿ ನೀರಾವರಿ ಯೋಜನೆಯನ್ನು ರೂಪಿಸಿಲ್ಲ. ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಜತ್ ತಾಲೂಕಿನ 42 ಹಳ್ಳಿಗೆ ನೀರು ಕೊಡುತ್ತೇವೆ ಎಂದು ಹೇಳಿದ್ದು, ನಮಗೆ ಸಂತೋಷವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಸಭೆ ಮೇಲೆ ಸಭೆ ನಡೆಸಿ ಜತ್ ಕಡೆ ತಿರುಗಿ ನೋಡುವಂತಾಗಿದೆ. ಇದಕ್ಕೆ ಕಾರಣವಾದ ಬಸವರಾಜ ಬೊಮ್ಮಾಯಿ ಅವರಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ ಎಂದು ಕನ್ನಡಿಗರು ಹೇಳಿದ್ದಾರೆ. ಇಲ್ಲಿ ಕಳೆದ 40 ವರ್ಷಗಳಿಂದ ಕುಡಿಯುವ ನೀರಿಗಾಗಿ ಹಾಗೂ ಮೂಲ ಸೌಕರ್ಯ ನೀಡುವಂತೆ…

Read More

ಭಾರತೀಯ ಬಾಹ್ಯಕಾಶ ಸಂಸ್ಥೆ 9 ಸ್ಯಾಟಲೈಟ್ ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ ಎಲ್ ವಿ) ಸಿ54 ಬಾಹ್ಯಕಾಶಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಶನಿವಾರ ಬೆಳಿಗ್ಗೆ ಯಶಸ್ವಿಯಾಗಿ ಉಡಾವಣೆಗೊಳಿಸಲಾಯಿತು. 4.4 ಮೀಟರ್ ಉದ್ದದ ನೌಕೆ 321 ಟನ್ ತೂಕ ಹೊಂದಿದೆ. ಭೂಮಿ ಮೇಲೆ ನಿಗಾ ವಹಿಸಲಿರುವ ಸ್ಯಾಟಲೈಟ್-6, ಸಮುದ್ರದ ಮೇಲೆ ನಿಗಾ ವಹಿಸಲಿರುವ ಒಶೆನೆಟ್ -3 ಸೇರಿದಂತೆ ಖಾಸಗಿಯವರ 8 ಸ್ಯಾಟಲೈಟ್ ಗಳನ್ನು ಹೊತ್ತ ನೌಕೆ ಬಾಹ್ಯಕಾಶಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಮಹಾರಾಷ್ಟ್ರದ ಗಡಿಯಲ್ಲಿ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಪುಣೆಯಿಂದ ಅಥಣಿಗೆ ಸಂಚರಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜು ಹಾಗೂ ಎರಡು ಕಿಟಕಿ ಒಡೆದಿವೆ. ಬಸ್ ಸಂಚರಿಸುವಾಗ ರಸ್ತೆಗೆ ಅಡ್ಡಬಂದ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ. ಬಸ್ಸಿನ ಚಾಲಕ ಕುಳಿತಿದ್ದ ಭಾಗದ ಗಾಜು ಒಡೆದು ಹೋದರೂ ಚಾಲಕ ವಾಹನ ನಿಲ್ಲಿಸದೇ ಸುರಕ್ಷಿತವಾಗಿ ಗಡಿ ದಾಟಿಸಿದ್ದಾರೆ. ಮೀರಜ್ ಮಾರ್ಗವಾಗಿ ಸಂಚರಿಸುವ ಕರ್ನಾಟಕದ ಎಲ್ಲ ಬಸ್ ಸಂಚಾರವನ್ನು ಶನಿವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಾಗವಾಡ ಮಾರ್ಗವಾಗಿ ಪ್ರತಿ ದಿನ ಸಾವಿರಾರು ಪ್ರಯಾಣಿಕರು ಮಹಾರಾಷ್ಟ್ರಕ್ಕೆ ತೆರಳುತ್ತಾರೆ. ಕಿಡಿಗೇಡಿಗಳು ಇದೇ ಬಸ್ಸುಗಳನ್ನು ಗರಿಯಾಗಿಸಿ ಕಲ್ಲು ತೂರಿದ್ದಾರೆ. ರಾಜ್ಯದ ಬಸ್ಸುಗಳ ಮೇಲೆ ಮಹಾರಾಷ್ಟ್ರದಲ್ಲಿ ದಾಳಿ ಮುಂದುವರಿದ ಕಾರಣ ಈ ಮಾರ್ಗದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಪೊಲೀಸ್‌ ಬಲೆಗೆ ಬಿದ್ದಿರುವ ಚನ್ನಮ್ಮನ ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಹಾಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಅವರನ್ನು ಲೋಕಾಯುಕ್ತ ಪೊಲೀಸರು ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ. ಪೊಲೀಸ್ ವಾಹನದಲ್ಲಿ ಜೈಲಿಗೆ ಬಂದ ಇಬ್ಬರೂ ಆರೋಪಿಗಳು ಮಾಧ್ಯಮದವರನ್ನು ಕಂಡ ತಕ್ಷಣ ತಮ್ಮ ಬ್ಯಾಗುಗಳನ್ನು ಮುಖಕ್ಕೆ ಮುಚ್ಚಿಕೊಂಡು ಒಳಗೆ ಹೋಗಿದ್ದಾರೆ. ಖೋದಾನಪುರ ರೈತ ರಾಜೇಂದ್ರ ಇನಾಮದಾರ ಅವರ ಜಮೀನು ಖಾತೆ ಮಾಡಲು ಆರೋಪಿಗಳು 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಶುಕ್ರವಾರ ರಾತ್ರಿ 2 ಲಕ್ಷ ರೂ. ಲಂಚ ತೆಗೆದುಕೊಳ್ಳುವ ವೇಳೆ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಪೊಲೀಸರು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಇಬ್ಬರೂ ಆರೋಪಿಗಳನ್ನು ಸೋಮವಾರರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಮಂಗಳೂರಿನ ನಂತೂರಿನಲ್ಲಿ ಹಿಂದೂ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ ತಾಲೂಕಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂದು ಗುರುತಿಸಲಾಗಿದೆ. ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ರಶೀಮ್‌ ಯುವತಿ ಜೊತೆ ಪ್ರಯಾಣಿಸುತ್ತಿದ್ದರು.ಬಸ್ ನಂತೂರು ಜಂಕ್ಷನ್‌ತಲುಪಿದಾಗ ನಾಲ್ಕೈದು ಯುವಕರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ನಿಂದಿಸಿ ಬಸ್‌ನಿಂದ ಕೆಳಗೆ ಇಳಿಸಿ ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದ್ದಾರೆ. ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ತಿಳಿಸಿದ್ದಾರೆ. ಎಡಿಜಿಪಿ (ಕಾನೂನು ಸುವ್ಯವಸ್ಥೆ) ಅಲೋಕ್‌ಕುಮಾರ್‌, ಈ ಘಟನೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಟಿಕೆಟ್ ಬುಕಿಂಗ್ ಆ್ಯಪ್ ಟ್ರೈನ್​ಮ್ಯಾನ್ ಮೂಲಕ ಕಾಯ್ದಿರಿಸಿದ ರೈಲು ಟಿಕೆಟ್​ ವೇಟಿಂಗ್​ ಲಿಸ್ಟ್​ನಲ್ಲಿದ್ದು ಕೊನೆಗೂ ಕನ್​ಫರ್ಮ್ ಆಗದಿದ್ದರೆ ಅಂಥ ಪ್ರಯಾಣಿಕರು ಉಚಿತವಾಗಿ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ದೂರದ ರೈಲು ಪ್ರಯಾಣಕ್ಕೆ ಕಾಯ್ದಿರಿಸಿದ ಟಿಕೆಟ್ ವೇಟಿಂಗ್ ಲಿಸ್ಟ್​ನಲ್ಲಿದ್ದು, ಕೊನೆಯ ಕ್ಷಣದಲ್ಲಿ ರದ್ದಾದರೆ ಉಚಿತವಾಗಿ ವಿಮಾನ ಪ್ರಯಾಣದ ಟಿಕೆಟ್ ಸಿಗಲಿದೆ. ಟ್ರಿಪ್ ಅಶ್ಯೂರೆನ್ಸ್ ಅಥವಾ ಪ್ರಯಾಣದ ಖಾತರಿ ಎಂಬ ಹೊಸ ಆಯ್ಕೆಯನ್ನು ಟ್ರೈನ್​ಮ್ಯಾನ್ ಆ್ಯಪ್ ಗ್ರಾಹಕರಿಗೆ ಒದಗಿಸುತ್ತಿದೆ. ವೈಟಿಂಗ್​​ಲಿಸ್ಟ್​ನಲ್ಲಿರುವ ಪ್ರಯಾಣಿಕರಿಗೆ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಬಗ್ಗೆ ಈ ಆಯ್ಕೆಯ ಮೂಲಕ ಆ್ಯಪ್ ಖಾತರಿ ನೀಡುತ್ತದೆ. ಕಾಯ್ದಿರಿಸಿದ ಟಿಕೆಟ್​ನ ಸ್ಥಿತಿಗತಿ ಏನಿದೆ ಎಂಬುದನ್ನು ಪರಿಶೀಲಿಸುವ ಆಯ್ಕೆಯೂ ಈ ಆ್ಯಪ್​ನಲ್ಲಿದೆ. ವೇಟಿಂಗ್ ಲಿಸ್ಟ್​ನಲ್ಲಿರುವ ಟಿಕೆಟ್ ಸಿಗುವ ಸಾಧ್ಯತೆ ಎಷ್ಟರಮಟ್ಟಿಗಿದೆ ಎಂಬುದನ್ನು ತೋರಿಸುವ ‘ಪ್ರೆಡಿಕ್ಷನ್ ಮೀಟರ್’ ಆ್ಯಪ್​ನಲ್ಲಿದೆ. ಚಾರ್ಟ್ ಸಿದ್ಧಪಡಿಸಿದ ಬಳಿಕವೂ ಟಿಕೆಟ್ ಕನ್​ಫರ್ಮ್ ಆಗಿಲ್ಲವೆಂದಾದರೆ ಆಗ ‘ಟ್ರಿಪ್ ಅಶ್ಯೂರೆನ್ಸ್’ ಆಯ್ಕೆಯು ಪ್ರಯಾಣಿಕರ ನೆರವಿಗೆ ಬರುತ್ತದೆ. ಕೊನೆಯ ಕ್ಷಣದ ಪರ್ಯಾಯ ಪ್ರಯಾಣದ ಆಯ್ಕೆಯನ್ನು ಪ್ರಯಾಣಿಕರಿಗೆ ಅದು ನೀಡುತ್ತದೆ. ಪ್ರಯಾಣಿಕರ…

Read More

ನೋಟು ರದ್ದತಿ ನೀತಿ ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಒಕ್ಕೂಟ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಟಾರ್ನಿ ಜನರಲ್ (ಎಜಿ) ಆರ್ ವೆಂಕಟರಮಣಿ, ಅದೊಂದು ವಿಫಲ ಯೋಜನೆ ಎಂದು ಒಪ್ಪಿಕೊಂಡಿದ್ದು, ವಿಫಲವಾದ ಮಾತ್ರಕ್ಕೆ ಅವರ ಉದ್ದೇಶ ದೋಷಪೂರಿತ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣ್ಯಂ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ. ಸುಪ್ರೀಂ ಕೋರ್ಟ್ ಅಕ್ಟೋಬರ್ 12 ರಂದು ಪ್ರಾಥಮಿಕ ವಿಚಾರಣೆಯನ್ನು ನಡೆಸಿತ್ತು. ಹಿರಿಯ ವಕೀಲ, ನಾಲ್ಕು ಬಾರಿ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ನೋಟು ರದ್ದತಿ ನೀತಿಯು ಅಸಾಂವಿಧಾನಿಕ ಎಂದು ವಾದಿಸಿದ್ದರು. ಬ್ಯಾಂಕ್ ಆಫ್ ಇಂಡಿಯಾ ಕಾಯಿದೆಯ ಮೀಸಲು ಸೆಕ್ಷನ್ 26 (2) ರ ವ್ಯಾಪ್ತಿಯನ್ನು ಪ್ರಶ್ನಿಸಿದ್ದರು. 500 ಮತ್ತು 1,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ,…

Read More

ಬೆಳಗಾವಿ : ಕರ್ನಾಟಕ – ಮಹಾರಾಷ್ಟ್ರ ಗಡಿಭಾಗದಲ್ಲಿರುವ ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಬೆಳಗಾವಿ ಮೂಲದ ನಾಲ್ವರು ಯುವತಿಯರು ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಬೆಳಗಾವಿಯಿಂದ 40 ಯುವತಿಯರು ಟ್ರಿಪ್‌ಗೆ ತೆರಳಿದ್ದರು. ಅನಗೋಳದ ಕುದ್‌ಶೀಯಾ ಹಾಸಂ ಪಟೇಲ್ (20), ಉಜ್ವಲ್ ನಗರ ಆಸೀಯಾ ಮುಜಾವರ್ (17), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ (20) ಮತ್ತು ತಸ್ಮಿಯಾ (20) ಮೃತಪಟ್ಟ ಯುವತಿಯರಾಗಿದ್ದಾರೆ. ಕಿತವಾಡ ಫಾಲ್ಸ್‌ಗೆ ಬೆಳಗಾವಿಯಿಂದ 40 ಯುವತಿಯರು ಟ್ರಿಪ್‌ಗೆ ತೆರಳಿದ್ದರು. ಸೆಲ್ಫಿ ತಗೆದುಕೊಳ್ಳುವ ವೇಳೆ ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಬಿಮ್ಸ್ ಶವಗಳನ್ನು ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರಿಗೆ ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನದ ಸಾಧನೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ನೂರಾರು ಸಿನಿಮಾಗಳಲ್ಲಿ ನಟನೆ, 40ಕ್ಕೂ ಹೆಚ್ಚು ಸಿನಿಮಾ ನಿರ್ಮಾಣ ಮಾಡಿ ಸುಮಾರು 50ಕ್ಕೂ ಹೆಚ್ಚು ವರ್ಷಗಳಿಂದ ಚಿತ್ರರಂಗದಲ್ಲಿ ಸಾಧನೆ ಮಾಡಿರುವ ದ್ವಾರಕೀಶ್ ಅವರಿಗೆ ಬೆಂಗಳೂರು ವಿವಿ 57ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಡಿಸೆಂಬರ್ 5ರಂದು ಬೆಂಗಳೂರಿನ ಜ್ಞಾನಭಾರತಿ ಅಡಿಟೋರಿಯಂನಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ದ್ವಾರಕೀಶ್ ಅಲ್ಲದೇ ಕಾನೂನು ಅಟಾರ್ನಿ ಹಾಗೂ ನ್ಯಾಯ ಸಲಹೆಗಾರರು ವಿಭಾಗ ಅಮರನಾಥ ಗೌಡ, ವರ್ಣ ಚಿತ್ರಕಾರ ಡಾ.ಟಿ. ಅನಿಲ್ ಕುಮಾರ್ ಮುಂತಾದವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More