Author: admin

ಚಿಕ್ಕಮಗಳೂರು: ಪಾದಯಾತ್ರೆಗೆ ಹೊರಟಿದ್ದ ಯುವಕ ನಾಪತ್ತೆಯಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ  ನಡೆದಿದೆ. ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಲವ (22) ನಾಪತ್ತೆಯಾಗಿರುವ ಯುವಕನಾಗಿದ್ದಾನೆ. ಯುವಕ  ಸ್ವಲ್ಪ  ಬುದ್ಧಿಮಾಂದ್ಯನಾಗಿದ್ದು50 ಜನರು ಪಾದ ಯಾತ್ರಿಕರ ಜೊತೆಗೆ ಬಂದಿದ್ದ ಈತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ  ನಾಪತ್ತೆಯಾಗಿದ್ದಾನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನೂ ತಮ್ಮ ಮಗನನ್ನು ಯಾರಾದರೂ ಕಂಡಲ್ಲಿ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಮನವಿ ಮಾಡಿಕೊಂಡಿದ್ದು, ಮಗನನ್ನು ಪತ್ತೆ ಹಚ್ಚಿಕೊಟ್ಟರೆ 5 ಸಾವಿರ ಬಹುಮಾನ ಕೊಡುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಆರಕಲಗೂಡು: ತಾಲೂಕಿನ ರಾಮನಾಥಪುರ ಹೋಬಳಿಯ ಶಿರಧನಹಳ್ಳಿಯ ಶ್ರೀ ಶನಿದೇವರ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಪ್ರತಿ ವರ್ಷದಂತೆ  ಈ ವರ್ಷ ಮಹಾಶಿವರಾತ್ರಿ ನಿಮಿತ್ತವಾಗಿ. ಕಾವೇರಿ ನದಿ ಹತ್ತಿರ  ದೇವರನ್ನು ಶುಚಿಗೊಳಿಸಿ, ದಕ್ಷಿಣ ಕಾಶಿ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಮಲ್ಲರಾಜ ಪಟ್ಟಣ, ಉಪ್ಪರ್ ಕೊಪ್ಪಲು, ರಾಮನಾಥಪುರದ ಮುಖಾಂತರ ಹಾದು ಹೋಗಿ, ಶಿರಧನಹಳ್ಳಿ ಶ್ರೀ ಶನಿದೇವರ ದೇವಸ್ಥಾನಕ್ಕೆ ಪೂರ್ಣಗೊಂಡಿತು. ಈ ಸಂದರ್ಭದಲ್ಲಿ ವೀರಗಾಸೆ ಮತ್ತು ಡೊಳ್ಳು ಕುಣಿತ ಸಹ ಏರ್ಪಡಿಸಲಾಗಿತ್ತು. ಭಕ್ತಾದಿಗಳಿಗೆ ಪ್ರಸಾದ‌ ವಿನಿಯೋಗ ಮಾಡಲಾಯಿತು. ರಾತ್ರಿ 8 ಗಂಟೆಗೆ ಶನಿ ಪ್ರಭಾವ ಎಂಬ ಪೌರಾಣಿಕ ನಾಟಕ ನಡೆಯಿತು. ಈ ಸಂದರ್ಭದಲ್ಲಿ ಭಕ್ತರು ಸ್ರಹಸ್ರಾರು ಸಂಖೈಯಲ್ಲಿ ಸೇರಿ ಶ್ರೀ ಶನಿದೇವರ ಕೃಪೆಗೆ ಪಾತ್ರರಾದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಧ್ಯಪ್ರದೇಶದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಇರಿಂಗಲಕುಡ ಕ್ರೈಸ್ಟ್ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ. ತಲೆಗೆ ಪೆಟ್ಟಾಗಿರುವ ವಿದ್ಯಾರ್ಥಿ ಎಡ್ವಿನ್ ಕೂಡ ಸುಧಾರಿಸಿಕೊಂಡಿದ್ದಾನೆ. ಅಪಘಾತದಲ್ಲಿ ಮಧ್ಯಪ್ರದೇಶದ ಕ್ಲೀನರ್ ಮೃತಪಟ್ಟಿದ್ದಾರೆ. ಅಧ್ಯಯನ ಪ್ರವಾಸಕ್ಕೆಂದು ಮಧ್ಯಪ್ರದೇಶಕ್ಕೆ ಬಂದಿದ್ದ ತ್ರಿಶೂರ್‌ನ ಇರಿಂಗಲಕುಡ ಕ್ರೈಸ್ಟ್ ಕಾಲೇಜಿನ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದೆ. ಅಂತಿಮ ವರ್ಷದ ಭೂವಿಜ್ಞಾನ ವಿದ್ಯಾರ್ಥಿಗಳು ಅಧ್ಯಯನ ಪ್ರವಾಸಕ್ಕೆ ತೆರಳಿದ್ದರು. ಎರಡು ಬಸ್‌ಗಳಲ್ಲಿ ಏಳು ಶಿಕ್ಷಕರು ಹಾಗೂ 60 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಈ ಪೈಕಿ ಒಂದು ಬಸ್ ಪಲ್ಟಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೆಹಲಿ ಮದ್ಯ ನೀತಿ ಹಗರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಪ್ರಶ್ನಿಸಲಿದೆ. ದೆಹಲಿಯ ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ. ಇದೇ ವೇಳೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಸಿಬಿಐ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ.ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್‌ನಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೊದಲ ಆರೋಪಿಯಾಗಿದ್ದಾರೆ. ಸಿಸೋಡಿಯಾ ಮತ್ತು ಇತರರ ವಿರುದ್ಧದ ಪ್ರಕರಣವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ, 477 ಎ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿದೆ.ಸದ್ಯ ಪ್ರಕರಣದಲ್ಲಿ 7 ಮಂದಿಯನ್ನು ಬಂಧಿಸಲಾಗಿದೆ. ಮನೀಷ್ ಸಿಸೋಡಿಯಾ ಅವರ ಮನೆ ಮತ್ತು ಕಚೇರಿಯಲ್ಲೂ ಸಿಬಿಐ ಶೋಧ ನಡೆಸಿದೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ದೆಹಲಿಯ ಉಪಮುಖ್ಯಮಂತ್ರಿ ಹೇಳಿದ್ದಾರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಮಹಾಶಿವರಾತ್ರಿಯ ದಿನದಂದು ಉಜ್ಜಯಿನಿ 18.82 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ. ಕಳೆದ ವರ್ಷ ದೀಪಾವಳಿಯಂದು 15.76 ಲಕ್ಷ ದೀಪಗಳನ್ನು ಬೆಳಗಿಸಿದ ಉತ್ತರ ಪ್ರದೇಶದ ಅಯೋಧ್ಯೆಯ ದಾಖಲೆಯನ್ನು ಉಜ್ಜಯಿನಿ ಮುರಿದಿದೆ.ಮಹಾಶಿವರಾತ್ರಿಯಂದು 18,82,000 ದೀಪಗಳನ್ನು ಬೆಳಗಿಸಲಾಯಿತು. 18,000ಕ್ಕೂ ಹೆಚ್ಚು ಸ್ವಯಂಸೇವಕರು ದೀಪ ಬೆಳಗಿಸಿದರು. ಶಾಲಾ ಮಕ್ಕಳಿಂದ ಕಾಲೇಜು ವಿದ್ಯಾರ್ಥಿಗಳು, ಸಾಮಾಜಿಕ ಸಂಘಟನೆಗಳು, ಸಮಾಜದ ವಿವಿಧ ಸ್ತರದ ಜನರು ದೀಪ ಬೆಳಗಿಸಿದರು.ದೀಪ ಬೆಳಗಿಸಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಉಜ್ಜಯಿನಿ ತಲುಪಿದ್ದರು. ಉಜ್ಜಯಿನಿಯ ಹೆಸರು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಹೇಳಿದರು. ದೀಪ ಬೆಳಗಿಸಲು ಸಹಕರಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಿದರು. ಮಹಾಶಿವರಾತ್ರಿಯ ಹಬ್ಬವನ್ನು ಉಜ್ಜಯಿನಿಯಲ್ಲಿ ಶಿವ ದೀಪಾವಳಿ ಎಂದು ಕರೆಯಲಾಗುತ್ತದೆ. ಮಹಾಶಿವರಾತ್ರಿಯಂದು ಉಜ್ಜಯಿನಿಯು 18,82,000 ದೀಪಗಳಿಂದ ಪ್ರಕಾಶಿಸಲ್ಪಟ್ಟಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಪುರುಷೋತ್ತಮ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅಪ್ರಾಪ್ತ ಬಾಲಕಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಸಿಡ್ ದಾಳಿಕೋರರಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪ್ರೀತಿ ನಿರಾಕರಿಸಿದ್ದಕ್ಕೆ ನಿನ್ನೆ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಆ್ಯಸಿಡ್ ಎರಚಿದ್ದ. ರಾಮನಗರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಸಂತ್ರಸ್ತ ಬಾಲಕಿಯ ಆರೋಗ್ಯ ವಿಚಾರಿಸಿದರು. ಪ್ರಮೀಳಾ ನಾಯ್ಡು ಮತ್ತು ಎಂಎಲ್ ಸಿ ಭಾರತ ಶೆಟ್ಟಿ ಸಾಥ್ ನೀಡಿದರು. ಬಳಿಕ ಮಾತನಾಡಿದ ಶೋ‍ಭಾ ಕರಂಧ್ಲಾಜೆ, ಹೆಣ್ಣುಮಕ್ಕಳ ಮೇಳೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಮೈನರ್ ರೇಪ್ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುತ್ತದೆ. ಅದೇ ರೀತಿ ಆ್ಯಸಿಡ್ ದಾಳಿಕೋರರಿಗೂ ಗಲ್ಲು ಶಿಕ್ಷೆಯಾಗಬೇಕು. ಸಂತ್ರಸ್ತೆ ಎಲ್ಲಿ ಓದಲು ಇಚ್ಚೆ ಇದೆಯೋ ಅಲ್ಲಿ ಓದಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋಲಾರದ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆನಂದ್, ಕಾಂತರಾಜು, ಪ್ರವೀಣ್, ವೇಣುಗೆ ಜೀವಾವಧಿ ಶಿಕ್ಷೆಗೆ ಗುರಿಯಾದವರು. 2022ರ ಫೆಬ್ರವರಿಯಲ್ಲಿ ನಾಲ್ವರು ಅಪರಾಧಿಗಳು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಬಿಪಿ ದೇವಮಾನೆ ಅವರು ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸ್ನಾನ ಮಾಡುತ್ತಿದ್ದ ವೇಳೆ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಛ್ಲಾ ಗಂಗಾ ಘಾಟ್‌ ನಲ್ಲಿ ನಡೆದಿದೆ. ಸಾವಿಗೀಡಾದ ವಿದ್ಯಾರ್ಥಿಗಳು ಜೈ ಮೌರ್ಯ, ಪವನ್ ಪ್ರಕಾಶ್, ನವೀನ್ ಸೆಂಗರ್, ಪ್ರಮೋದ್ ಯಾದವ್, ಅಂಕುಶ್ ಗೆಹ್ಲೋಟ್ ಎಂದು ವರದಿಯಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿಗಳು ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಆಳವಾದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಐದು ವಿದ್ಯಾರ್ಥಿಗಳು ಸ್ನಾನಕ್ಕೆ ತೆರಳಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಾಲೇಜು ಪ್ರಾಂಶುಪಾಲ ಡಾ.ಧರ್ಮೇಂದ್ರ ಗುಪ್ತಾ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಆಡಳಿತಕ್ಕೆ ತಿಳಿಸದೆ ಸ್ನಾನ ಮಾಡಲು ಹೋಗಿದ್ದರು ಎಂದು ಹೇಳಿದರು. ಕಾಣೆಯಾದ ಮೂವರು ವಿದ್ಯಾರ್ಥಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬದೌನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೋಜ್ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಹಾಸನ ಜಿಲ್ಲೆ ಅರಕಲಗೂಡು ನಗರದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜು ಪ್ರಭಾರ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲ ಸಂಘಟನೆಗಳ ಮುಖಂಡರು ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ಪೊಲೀಸರು ಮತ್ತು ತಹಶೀಲ್ದಾರ್ ಗೆ ಮಾಹಿತಿ ನೀಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ರಘುಪತಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಇಂದಿರಾ ಅವರು ವಿದ್ಯಾರ್ಥಿನಿಯರ ಹೇಳಿಕೆ ಪಡೆದು ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಭಾರ ಪ್ರಾಂಶುಪಾಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ  ಈಶಪ್ಪ (22) ಹಾಗೂ ಸುವರ್ಣ(20)  ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈಶಪ್ಪ ಮತ್ತು ಸುವರ್ಣ ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. 2 ವರ್ಷದ ಹಿಂದೆ ಬೇರೆ ಯುವಕನೊಂದಿಗೆ ಜೊತೆ ಸುವರ್ಣಳ ಮದುವೆಯಾಗಿತ್ತು . ಸುವರ್ಣ ಬೆಂಗಳೂರು ನಗರದಲ್ಲಿ ಪತಿ ಜೊತೆ ವಾಸವಿದ್ದಳು. ಶುಕ್ರವಾರ (ಫೆ.17) ಗಂಡನಿಗೆ ತಿಳಿಸದೇ ಹುರುಸಗುಂಡಗಿ ಗ್ರಾಮಕ್ಕೆ ಬಂದಿದ್ದಳು. ಶನಿವಾರ (ಫೆ.18) ಅದೇನಾಯಿತು ಏನೋ ಬೆಳಗ್ಗೆ ವಿಷ ಸೇವಿಸಿ ಸುವರ್ಣ, ಈಶಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ  ಘಟನೆ  ಕುರಿತು  ಭೀಮರಾಯನಗುಡಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More