Author: admin

ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆತನ ಸೋದರ ತೀವ್ರ ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಿಲ್ವಾರಾ ನಗರದಲ್ಲಿ 48 ಗಂಟೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ನಡೆದ ಆದರ್ಶ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮುಸ್ಲಿಂ ಸಹೋದರರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಹಲವೆಡೆ ಜನರು ಗುಂಪು ಕಟ್ಟಿಕೊಂಡು ಆಕ್ರೋಶ ಹೊರಹಾಕಲಾರಂಭಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಿಲ್ವಾರಾ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹವಾ ಸಿಂಗ್ ಘುಮಾರಿಯಾ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಆಸ್ಪತ್ರೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಅವರ ಸಹೋದರನನ್ನು ಚಿಕಿತ್ಸೆಗಾಗಿ ಉದಯಪುರಕ್ಕೆ ಕಳುಹಿಸಲಾಗಿದೆ. ಮಹಾತ್ಮಾ ಗಾಂಧಿ ಕ್ರಾಸಿಂಗ್, ಬದ್ಲಾ ಚೌರಾಹಾ, ಭೀಮಗಂಜ್, ಸಿಟಿ ಕೊತ್ವಾಲಿ ಸೇರಿದಂತೆ ಹಲವೆಡೆ ನಗರದಲ್ಲಿ…

Read More

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಅಭಿಯಾನ ನಡೆಸಿದೆ. 40% ಕಮಿಷನ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. ರೋಡಲ್ಲಿ ಯಮಗುಂಡಿ, ಬಿದ್ರೆ ಜೀವನ ಬಂಡಿ ಪೋಸ್ಟರ್ ಬಿಡುಗಡೆ ಮಾಡಿದ್ದು, ಪೋಸ್ಟರ್ ನಲ್ಲಿ ಸಿಎಂ ಯಮನಂತೆ ಬಿಂಬಿಸಿದೆ. ಈ ಮೂಲಕ ವಿವಿಧ ಚಿತ್ರಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಅಭಿಯಾನ ನಡೆಸಿದೆ. ಮತ್ತೊಂದು ಪೋಸ್ಟರ್ ನಲ್ಲಿ ಕಿಲಾಡಿ ಜೋಡಿ ಎಂದು ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥನಾರಾಯಣ ಅವರ ಪೋಸ್ಟರ್, ಸರ್ವರ್ ಸೋಮಣ್ಣ ಹೆಸರಲ್ಲಿ ಸಚಿವ ಸೋಮಣ್ಣ, ಚಪಲ ಚನ್ನಿಗರಾಯ ಎಂದು ರಮೇಶ್ ಜಾರಕಿಹೊಳಿ ಪೋಸ್ಟರ್, ಅಡುಗೆ ಭಟ್ಟರಂತೆ ಸಚಿವ ಬಿ.ಸಿ.ನಾಗೇಶ್ ಪೋಸ್ಟರ್ ಪ್ರಕಟಿಸಿದೆ. ಈ ಮೂಲಕ ಕಾಂಗ್ರೆಸ್ ವಿಭಿನ್ನ ರೀತಿಯ ಪೋಸ್ಟರ್ ಅಭಿಯಾನದ ಮೂಲಕ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಅಣಕವಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಬೆಂಗಳೂರು : ಕ್ಷೀರಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಕೆನೆಭರಿತ ಹಾಲಿನ ಪುಡಿ ಬದಲಿಗೆ ಟೆಟ್ರಾ ಪ್ಯಾಕೆಟ್ ನಲ್ಲಿ ಹಾಲು ವಿತರಿಸಲು ಕೆಎಂಎಫ್ ನಿರ್ಧರಿಸಿದೆ. ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕೆಟ್ ನಲ್ಲಿನ ಹಾಲು ವಿತರಿಸಲು ಕೆಎಂಎಫ್ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದು, ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಬಜೆಟ್ ನಲ್ಲಿ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆಗೆ ಹಸಿರು ನಿಶಾನೆ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಹಾಲಿನ ಪೌಡರ್ ವಿತರಿಸುವಲ್ಲಿ ಸಾಲು ಸಾಲು ಲೋಪಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಬೆಂಗಳೂರು: ನವೆಂಬರ್ 26 ಸಂವಿಧಾನ ಅರ್ಪಣೆ ದಿನ ಹಾಗೂ ಜನವರಿ 26ರ ಸಂವಿಧಾನ ಜಾರಿಯಾದ ದಿನಗಳ ಅಂಗವಾಗಿ ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಹೊಸ ಸಂವಿಧಾನ ಗೀತೆ ಬಿಡುಗಡೆಯಾಗಿದೆ. ಈ ಗೀತೆಯನ್ನು ಸೋಸಲೆ ಗಂಗಾಧರ್ ಅವರು ರಚಿಸಿ ರಾಗ ಸಂಯೋಜನೆ ಮಾಡಿದ್ದಾರೆ. ಡಾ.ಶಿವಕುಮಾರ್, ಸಿದ್ದೇಶ್ ಬದನವಾಳು ಗಾಯನ ಮಾಡಿದ್ದಾರೆ. ಎಂ.ಎಸ್.ಮಾರುತಿ ಸಂಗೀತ ನೀಡಿದ್ದಾರೆ. ಹರಿರಾಮ್ ಎ. ನಿರೂಪಿಸಿದ್ದಾರೆ. ಸುನೀಲ್ ಬಾಫುಲೆ ಆರ್ಥಿಕ ಸಹಕಾರ ನೀಡಿದ್ದಾರೆ. ಅಶ್ವಿನ್ ಚೆಂಡ್ತಿಮಾರ್ ಛಾಯಾಗ್ರಹಣ ಮಾಡಿದ್ದು,  ವಿನಯ್ ಕುಮಾರ್ ಎ. ಸಂಕಲನದಲ್ಲಿ ಈ ಹಾಡು ಮೂಡಿ ಬಂದಿದೆ. ಪದ್ಮಪಾಣಿ ಮ್ಯೂಸಿಕ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಈಗಾಗಲೇ ಈ ಗೀತೆ ಬಿಡುಗಡೆಗೊಂಡಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.  ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಈ ಹಾಡಿಗೆ ಹೆಚ್ಚಿನ ಮಹತ್ವ ದೊರೆತಿದೆ.  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು : ಸರ್ಕಾರಿ ಶಾಲೆಗಳ ಮಕ್ಕಳಿಗೆ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದ 48 ಸಾವಿರ ಶಾಲೆಗಳ ಮಕ್ಕಳ ಆರೋಗ್ಯ ತಪಾಸಣೆ ಒಂದು ಇಲಾಖೆಯಿಂದ ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ, ಖಾಸಗಿ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳ ಸಹಭಾಗಿತ್ವದಲ್ಲಿ ನಿರ್ವಹಿಸಲು ಕೋರಲಾಗಿದೆ. ಪರೀಕ್ಷಾ ಫಲಿತಾಂಶ ಅಂಕಪಟ್ಟಿ ಜೊತೆಗೆ ಮಕ್ಕಳಿಗೆ ಹೆಲ್ತ್ ಕಾರ್ಡ್ ವಿತರಿಸಿದರೆ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಧಾರವಾಡ: ಆಯತಪ್ಪಿ ಬಾವಿಯಲ್ಲಿ ಬಿದ್ದು ಅರಣ್ಯಾಧಿಕಾರಿ ಅಜೀತ್ ಶಾನಬಾಗ್ ಅವರು ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ನಗರದ ಶ್ರೀಪಾದ ನಗರದಲ್ಲಿರುವ ಅವರ ಮನೆಯ ಅಂಗಳದ ಭಾವಿಯ ಸುತ್ತ ಬೆಳೆದಿರುವ ಕಸ ಸ್ವಚ್ಛಗೊಳಿಸುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ. ಹೊಸಾಯಲ್ಲಾಪುರದ ರುದ್ರ ಭೂಮಿಯಲ್ಲಿ ಬ್ರಾಹ್ಮಣರ ವಿಧಿ ವಿಧಾನ ಪ್ರಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ರಾಜ್ಯದ ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ 23.95 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟು 55 ಮಠಗಳು, 81 ದೇಗುಲಗಳು, 25 ಸಂಘ ಸಂಸ್ಥೆಗಳಿಗೆ ಒಟ್ಟು 23.95 ಕೋಟಿ ಬಿಡುಗಡೆಯಾಗಿದೆ. ಕೆಲವು ತಿಂಗಳ ಹಿಂದೆಯಷ್ಟೇ ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ 3ನೇ ಪೀಠಕ್ಕೂ ಅನುದಾನ ಬಿಡುಗಡೆಯಾಗಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟ ಹಾಗೂ ಒಕ್ಕೂಟದ ಸದಸ್ಯರಾಗಿರುವ ರಾಜ್ಯದ ಪಂಚಮಸಾಲಿ ಸ್ವಾಮೀಜಿಗಳ ಮಠಗಳ ಒಕ್ಕೂಟದ ಟ್ರಸ್ಟ್​ಗೆ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನಾಡಹಬ್ಬ ಮೈಸೂರು ದಸರಾದಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಗಜಪಡೆಯ ಭಾಗವಾಗಿದ್ದ ಗೋಪಾಲಸ್ವಾಮಿ (40) ಆನೆ ಕಾಡಾನೆ ದಾಳಿಗೆ ಬಲಿಯಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಹೋಬಳಿ ಬಳಿ ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಗೋಪಾಲಸ್ವಾಮಿ ಆನೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಇತ್ತೀಚೆಗಷ್ಟೇ ನಡೆದ ದಸರಾ ಮಹೋತ್ಸವದಲ್ಲೂ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ ಎಂಬ ಆನೆ ಎಲ್ಲರ ಗಮನ ಸೆಳೆದಿತ್ತು. ಗೋಪಾಲಸ್ವಾಮಿ ಆನೆಯನ್ನು ಮೇಯಲು ಬಿಟ್ಟಿದ್ದ ವೇಳೆ ಕೊಡಗಿನ ಭಾಗದಲ್ಲಿ ಪುಂಡಾಟ ನಡೆಸುತ್ತಿದ್ದ ಕಾಡಾನೆ (ಅಯ್ಯಪ್ಪ) ನಡುವೆ ಗುದ್ದಾಟ ನಡೆದಿದೆ. ಕಾಲರ್ ಐಡಿ ಅಳವಡಿಸಲಾಗಿದ್ದ ಅಯ್ಯಪ್ಪ ಆನೆಯ ದಾಳಿಗೆ ಸಿಲುಕಿದ ಗೋಪಾಲಸ್ವಾಮಿಗೆ ಕಾಲು ಮುರಿದಿದೆ. ಈ ವೇಳೆ ದಂತದಿಂದ ಅಯ್ಯಪ್ಪ ಮನ ಬಂದಂತೆ ತಿವಿದು ದಾಳಿ ನಡೆಸಿದ್ದರಿಂಧ ತೀವ್ರ ರಕ್ತಸ್ರಾವಕ್ಕೊಳಗಾದ ಆನೆ ಚಿಂತಾಜನಕ ಸ್ಥಿತಿಗೆ ತಲುಪಿತು. ಗೋಪಾಲಸ್ವಾಮಿ ಆನೆಯ ಮಾವುತ ಮಂಜು ಹಾಗೂ ಕಾವಾಡಿ ಆನೆಯನ್ನು ಕರೆತರಲು ಕಾಡಿಗೆ ಹೋದ ವೇಳೆ ಕಾದಾಟವನ್ನು ಕಣ್ಣಾರೆ ಕಂಡು ಆನೆಯನ್ನು ಬೆದರಿಸಲು ಹೋಗುತ್ತಿದ್ದಂತೆ ಅವರ ಮೇಲೆಯೇ…

Read More

ಮಕ್ಕಳಿಲ್ಲದ ಕೊರತೆ ನೀಗಿಸಲು ಹರಕೆ ಹೊತ್ತು ಬರುತ್ತಿದ್ದ ದಂಪತಿ ಅಪಘಾತದಲ್ಲಿ ಮೃತಪಟ್ಟ ಘಟನೆ ಗದಗ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದೆ. ನರಗುಂದ ತಾಲ್ಲೂಕಿನ ಬೈರನಹಟ್ಟಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ಸಹದೇವಪ್ಪ ಮತ್ತು ದೀಪಾ ದೇವರಮನೆ (36) ಮೃತಪಟ್ಟ ದುರ್ದೈವಿಗಳು. 15 ವರ್ಷಗಳಿಂದ ಮಕ್ಕಳಿಲ್ಲದ ಕಾರಣಕ್ಕೆ ದೇವರಿಗೆ ಹರಕೆ ಹೊತ್ತು ಬೈಕ್ ನಲ್ಲಿ ಬರುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಬೆಂಕಿ ಹೊತ್ತಿಕೊಂಡು ಎರಡೂ ವಾಹನಗಳು ಭಸ್ಮಗೊಂಡಿವೆ. ಮಕ್ಕಳಿಗಾಗಿ ಹರಕೆ ಹೊರಲು ಸಹದೇವಪ್ಪ ಮತ್ತು ದೀಪಾ ಬೈಕ್ ನಲ್ಲಿ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಬುಧವಾರ ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಮಹಿಂದ್ರಾ TUV-300 ಕಾರು ಸರ್ವಿಸ್‌ಗಾಗಿ ಹುಬ್ಬಳ್ಳಿಗೆ ಹೊರಟಿತ್ತು. ಎರಡೂ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸಹ ಗಾಯಗೊಂಡಿದ್ದು, ಅವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.…

Read More

ಕುಡಿದ ಅಮಲಿನಲ್ಲಿ ಪತ್ನಿಯನ್ನೇ ಕಟ್ಟಿಗೆಯಿಂದ ಬಡಿದು ಪತಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಅವೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಅವರೇಹಳ್ಳಿ ಗ್ರಾಮದ ನಿವಾಸಿ ಬೋರಯ್ಯ ಮಂಗಳವಾರ ತಡರಾತ್ರಿ 4ನೇ ಪತ್ನಿ ಭದ್ರಮ್ಮನ ಹತ್ಯೆಗೈದಿದ್ದಾನೆ. ಗ್ರಾಮದ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೋರಯ್ಯ ತಡರಾತ್ರಿ ಪತ್ನಿ ಜೊತೆ ಕುಡಿದು ಜಗಳವಾಡಿದ್ದು, ಕುಡಿದ ಮತ್ತಿನಲ್ಲಿ ಬಡಿಗೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಈ ಮೊದಲು ಬೋರಯ್ಯ ತನ್ನ ಎರಡನೇ ಪತ್ನಿಯನ್ನು ಸಹ 2014ರಲ್ಲಿ ಇದೇ ರೀತಿ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ 6 ವರ್ಷಗಳ ಕಾಲ ಶಿಕ್ಷೆ ಅನುಭವಿಸಿ ಹೊರಬಂದು ಭದ್ರಮ್ಮಳನ್ನು ಮದುವೆಯಾಗಿದ್ದ. ಈ ಮಧ್ಯೆ ಎರಡನೇ ಪತ್ನಿ ಬದುಕಿರುವಾಗಲೇ ಇನ್ನೊಂದು ಮದುವೆ ಆಗಿದ್ದ. ಇದೀಗ ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More