Author: admin

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ, ₹ 50 ಸಾವಿರ ದಂಡ ವಿಧಿಸಿ ನಗರದ ಪೊಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಅಪರಾಧಿಯು ಬಿಹಾರ ಮೂಲದವನಾಗಿದ್ದು, ವಿಶೇಷ ಕೋರ್ಟ್​ನ ನ್ಯಾಯಾಧೀಶೆ ಶೈಮಾ ಕಮರೋಜ್ ಈ ತೀರ್ಪು ನೀಡಿದ್ದಾರೆ. ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು. 2021ರಲ್ಲಿ 10 ವರ್ಷದ ಬಾಲಕಿ ಮೇಲೆ ಆರೋಪಿಯು ನಿರಂತರ ಅತ್ಯಾಚಾರ ಎಸಗಿದ್ದ. ಮೈಸೂರಿನ ಟಿ.ನರಸೀಪುರ ರಸ್ತೆಯ ಫಾರಂಹೌಸ್ ನಲ್ಲಿ ಕೃತ್ಯವೆಸಗಿದ್ದ. ಮೈಸೂರು ಗ್ರಾಮಾಂತರ ಮಹಿಳಾ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೆಜಿಎಫ್‌’ ಎಂಬುದೇ ಒಂದು ಬ್ರಾಂಡ್.‌ ಈ ‘ಕೆಜಿಎಫ್‌’ ಸಿನಿಮಾದ ಹೆಸರೇ ಇದೀಗ ಹೊಟೇಲ್‌ವೊಂದಕ್ಕೆ ನಾಮಕರಣ ಮಾಡಲಾಗಿದೆ. ಹೌದು, ಸಿನಿಮಾದಲ್ಲಿ ‘ಕೆಜಿಎಫ್‌’ ಎಂದರೆ ಕೋಲಾರ ಗೋಲ್ಡ್‌ ಫೀಲ್ಡ್‌ ಎಂದಿದ್ದರೆ, ಈ ಹೊಟೇಲ್‌ ಉದ್ಯಮದಲ್ಲಿ ‘ಕೆಜಿಎಫ್‌’ ಎಂದರೆ ‘ಕನ್ನಡಿಗಾಸ್‌ ಗೋಲ್ಡನ್‌ ಫುಡ್’ ಎಂದರ್ಥ. ನರಾಚಿಯ ಮುಖ್ಯದ್ವಾರವನ್ನೇ ಹೋಲುವ ರೀತಿಯಲ್ಲಿ ಆರ್ಟ್‌ ವರ್ಕ್‌ ಮಾಡಿ ನಿರ್ಮಿಸಲಾಗಿದೆ. ಅಲ್ಲದೇ ನರಾಚಿ ಮಾದರಿಯಲ್ಲಿ ಒಳಾಂಗಣವನ್ನು ನಿರ್ಮಿಸಲಾಗಿದೆ. ಸುಮಾರು 200 ಆಸನಗಳ ವ್ಯವಸ್ಥೆಯೊಂದಿಗೆ ಬೆಂಗಳೂರಿನ ಸಹಕಾರನಗರದಲ್ಲಿ ಈ ಹೊಟೇಲ್‌ ತಲೆ ಎತ್ತಿದ್ದು, ನೋಡುಗರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಬೃಹತ್‌ ಗೋಡೆ, ಗೋಡೆಗೆ ಕಲ್ಲುಗಳ ರೀತಿಯ ಕೆತ್ತನೆ. ದೊಡ್ಡದಾದ ಮುಖ್ಯದ್ವಾರ ಥೇಟ್‌ ರಣರೋಚಕ ಕಥೆ ಹೇಳಿದ್ದ ‘ಕೆಜಿಎಫ್‌’ ನರಾಚಿಯನ್ನೇ ನೆನಪಿಸುತ್ತಿದೆ. ಇಲ್ಲಿ ಬಗೆಬಗೆ ತಿಂಡಿಯ ನಳಪಾಕದ ರುಚಿ ಸಿಗಲಿದೆ. ಈ ವಿಶಿಷ್ಟ ಹೊಟೇಲ್ ನ ಸೌಂದರ್ಯ ಕಣ್ತುಂಬಿಕೊಳ್ಳಲು ಭೇಟಿ ನೀಡಿ. ಸ್ಥಳ: ನಂ.15-16, 5ನೇ ಮುಖ್ಯರಸ್ತೆ, ಶಾಂತಿವನ, ಸಹಕಾರ ನಗರ, ಸ್ಟೆರ್ಲಿಂಗ್ ಹೈಟ್ಸ್ ಅಪಾರ್ಟ್ಮೆಂಟ್ ಪಕ್ಕ. ಬೆಂಗಳೂರು-92 Contact: 8495880088, 8496880088 ಶ್ರೀನಿವಾಸ್…

Read More

ಮಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಗೆ ಸ್ಫೋಟದಿಂದ ಶ್ವಾಸಕೋಶಕ್ಕೆ ಹಾನಿಯಾಗಿದ್ದು, 8 ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಪಂಪ್ ವೆಲ್ ಬಳಿ ಚಲಿಸುತ್ತಿದ್ದ ಆಟೋದಲ್ಲೇ ಕುಕ್ಕರ್​ ಬಾಂಬ್​ ಬ್ಲಾಸ್ಟ್ ಆಗಿದ್ದರಿಂದ ಪ್ರಮುಖ ಆರೋಪಿ ಶಾರೀಕ್ ​ಶೇ.45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಟೋದಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಆದ ಪರಿಣಾಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಪ್ರಮಾಣದ ಹೊಗೆ ಆವರಿಸಿತ್ತು, ಅಪಾರ ಪ್ರಮಾಣದ ವಿಷಾನಿಲದ ಸೇವನೆಯಿಂದ ಶಾರೀಕ್‌ ಲಂಗ್ಸ್‌ಗೆ ಡ್ಯಾಮೇಜ್‌ ಆಗಿದ್ದು, 8 ವೈದ್ಯರಿಂದ ಉಗ್ರ ಶಾರೀಕ್‌ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಗಳೂರಿನ ನಾಗುರಿ ಬಳಿ ಸಂಭವಿಸಿದ್ಧ ಆಟೋದಲ್ಲಿನ ಬಾಂಬ್ ಸ್ಪೋಟದ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಂಬ್ ಸ್ಪೋಟದ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಪೊಲೀಸರಿಂದ ಮಾಹಿತಿ ಪಡೆದರು. ಗೃಹ ಸಚಿವರಿಗೆ ಡಿಜಿಪಿ ಪ್ರವೀಣ್ ಸೂದ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಅಧಿಕಾರಿಗಳು ಸಾಥ್ ನೀಡಿದರು. ಹಾಗೆಯೇ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಪುರುಷೋತಮ್ ಆರೋಗ್ಯ ವಿಚಾರಿಸಿದರು. ಗೃಹ ಸಚಿವರಿಗೆ ಗೃಹ ಸಚಿವರಿಗೆ ಡಿಜಿಪಿ ಪ್ರವೀಣ್ ಸೂದ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಜಿಲ್ಲಾಧಿಕಾರಿಗಳು ಸಾಥ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಂಚರತ್ನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪೂರ್ಣ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೋಲಾರ ಜಿಲ್ಲೆಯಿಂದಲೇ 2 ಸುನಾಮಿ ಪ್ರಾರಂಭವಾಗಿದೆ. ಕೋಲಾರ, ಚಿಕ್ಕಬಳ್ಳಾಪುರದ 11 ಕ್ಷೇತ್ರಗಳನ್ನೂ ನಾವು ಗೆಲ್ಲುತ್ತೇವೆ ಎಂದರು. ಪಂಚರತ್ನ ಕಾರ್ಯಕ್ರಮಕ್ಕೆ ಒಳ್ಳೆಯ ಬೆಂಬಲ ಸಿಕ್ಕಿದೆ. ನಮ್ಮ ಪಕ್ಷದಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಜೆಡಿಎಸ್ ಪಕ್ಷದಿಂದ ಯಾರು ಬೇಕಾದರೂ ಸಿಎಂ ಆಗಬಹುದು 1994 ರ ಇತಿಹಾಸ ಮತ್ತೆ ಮರುಕಳಿಸಲಿದೆ ಎಂದು ಹೆಚ್.ಡಿಕೆ ತಿಳಿಸಿದರು. Reporting by Antony begur ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ಹಸು ಮೇಯಿಸಲು ಹೋಗಿದ್ದ ಮಹಿಳೆ ಮತ್ತು ಹಸು ಇಬ್ಬರೂ ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲೂಕು ಮಿಡಿಗೇಶಿ ಹೋಬಳಿ ಲಕ್ಲಹಟ್ಟಿಗ್ರಾಮದಲ್ಲಿ ನಡೆದಿದೆ. ರತ್ನಮ್ಮ(45) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಪ್ರತಿನಿತ್ಯದಂತೆ ಹಸುಗಳನ್ನು ಮೇಯಿಸಲು ಹೋಗಿದ್ದ ವೇಳೆ  ಉಗರಡ್ಡಿ ಎಂಬುವವರ ಜಮೀನಿನಲ್ಲಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಹಸು  ಸ್ಪರ್ಶಿಸಿದೆ. ಹಸುವನ್ನು ರಕ್ಷಿಸಲು ಹೋದ ರತ್ನಮ್ಮಗೆ ಕೂಡ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮಿಡಿಗೇಶಿ ಬೆಸ್ಕಾಂ ಇಲಾಖೆಯ ಸೆಕ್ಷನ್ ಆಫೀಸರ್ ಅಕ್ರಮ್ ಪಾಷಾ ಭೇಟಿ ನೀಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದರು. ಇನ್ನೂ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಊರಿನವರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಇನ್ನೂ ಇಲಾಖೆ ಅಧಿಕಾರಿಗಳು ಮೃತ ಮಹಿಳೆಯ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವರದಿ: ಲಕ್ಷ್ಮಿಪತಿ,  ದೊಡ್ಡ ಯಲ್ಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಲಿದೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ರಾಜ್ಯದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಕಾನೂನು ತಂಡಕ್ಕೆ ಸಹಕಾರ ನೀಡಲು ಮತ್ತು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ನೇಮಕ ಮಾಡಿದೆ. ಭಾಷಾವಾರು ಪ್ರಾಂತ್ಯ ರಚನೆಗಾಗಿ ಕೇಂದ್ರ ಸರ್ಕಾರ 1953ರಲ್ಲಿ ಫಸಲ್ ಅಲಿ ನೇತೃತ್ವದ ಸಮಿತಿ ರಚನೆಯಾಗಿತ್ತು, 1955ರಲ್ಲಿ ಫಸಲ್ ಅಲಿ ಆಯೋಗದ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂಬೈ ಪ್ರಾಂತ್ಯದಲ್ಲಿದ್ದ ಬೆಳಗಾವಿ ಸೇರಿ 865 ಗಡಿ ಪ್ರದೇಶಗಳು ಮೈಸೂರು ರಾಜ್ಯಕ್ಕೆ ಸೇರ್ಪಡೆಯಾಗಬೇಕೆಂದು ವರದಿಯಲ್ಲಿತ್ತು, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಮೆಹರ್ ಚಂದ್ ಮಹಾಜನ್ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿ 1967ರಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಮಹಾಜನ್ ವರದಿಯಲ್ಲೂ ಕೂಡ ಬೆಳಗಾವಿ ಸೇರಿ…

Read More

ಬೆಂಗಳೂರು: ಲಂಚಕ್ಕೆ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಗೃಹಸಚಿವಾಲಯದ ಹೋಮ್​ಗಾರ್ಡ್​ನನ್ನು ಲಂಚದ ಹಣದ ಸಹಿತ ನಗರದ ಖಾಸಗಿ ಹೋಟೆಲ್​ನಲ್ಲಿ ಬಂಧಿಸಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ವೈದ್ಯಕೀಯ ವೆಚ್ಚದ ಬಿಲ್ ​ಗಾಗಿ ಲಂಚ ಪಡೆಯುತ್ತಿದ್ದ ಹೋಮ್​ ಗಾರ್ಡ್​ ಸತೀಶ್​ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ವೈದ್ಯಕೀಯ ವೆಚ್ಚದ ಬಿಲ್ ​ಗಾಗಿ ಸಂಬಂಧಪಟ್ಟವರಿಂದ ಮರುಪಾವತಿಸಲು ಕ್ರಮಕೈಗೊಳ್ಳಲು ಲಂಚಕ್ಕೆ ಬೇಡಿಕೆ ಇಡಲಾಗಿದೆ. ಸಂಬಂಧಪಟ್ಟವರನ್ನು ಹಣ ತರುವಂತೆ ಖಾಸಗಿ ಹೊಟೇಲ್​ಗೆ ಆಹ್ವಾನಿಸಲಾಗಿದೆ. ಈ ವೇಳೆ ಸತೀಶ್ ಅವರು ಲಂಚವಾಗಿ 20,000 ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದರು. ಕರ್ನಾಟಕ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಮತ್ತು ಗೋವಾ ವಿಮೋಚನೆಗೆ ಕೆಲಸ ಮಾಡಿದ ಕನ್ನಡಿಗರಿಗೆ ಪಿಂಚಣಿ ನೀಡಲಾಗುತ್ತದೆ. ಈ ಸಂಬಂಧ ಸರ್ಕಾರ ಅಗತ್ಯ ದಾಖಲೆಗಳನ್ನು ತರಿಸಿಕೊಳ್ಳಲಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ‌ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ನಿಲಯದಲ್ಲಿ ಇತರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಾಗಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ‌ಪರೀಕ್ಷೆಗೆ ವಿದ್ಯಾರ್ಥಿ ಶವವನ್ನು ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More