Subscribe to Updates
Get the latest creative news from FooBar about art, design and business.
- ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
- ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್ ಗೌಡ
- ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
- ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
Author: admin
ಕುಕಡೊಳ್ಳಿ ಗ್ರಾಮಸ್ಥರ ಬಹು ವರ್ಷಗಳ ಬೇಡಿಕೆಯಾದ ನೂತನ ಪ್ರೌಢ ಶಾಲೆಯ ಮಂಜೂರಾತಿಗಾಗಿ ಸೋಮವಾರ ಮುಂಜಾನೆ ಗಣೇಶ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರಿಗೆ, ಮುಖ್ಯ ಮಂತ್ರಿಗಳಿಗೆ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಗಳಿಗೆ ರಕ್ತದಿಂದ ಗ್ರಾಮಸ್ಥರು ಮನವಿ ಬರೆದು ಕರ್ನಾಟಕ ಸರ್ಕಾರದ ಮುಖ್ಯ ಮಂಂತ್ರಿಗಳಾದ ಬಸವರಾಜ ಬೊಮ್ಮಾಯಿ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ ಮತ್ತು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ,ಪೋಸ್ಟ ಮುಖಾಂತರ ರಕ್ತದ ಮೂಲಕ ಮನವಿ ಕಳಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮದ ಶಿಕ್ಷಣ ಪ್ರೇಮಿಗಳು, ಪಾಲಕರು ಯುವಕರು, ಸಂಘ ಸಂಸ್ಥೆಗಳ ಸರ್ವ ಸದಸ್ಯರು ಪಕ್ಷಾತೀತವಾಗಿ ಪಾಲ್ಗೊಂಡು ಗ್ರಾಮಸ್ಥರು ರಕ್ತದಲ್ಲಿ ಮನವಿ ಸಲ್ಲಿಸಲಿದರು. ಇದೆ ಸಮಯದಲ್ಲಿ ಗ್ರಾಮದ ಯುವಕರಾದ ಮಾರುತಿ ಸಾರಾವರಿ, ವಿಠ್ಠಲ ಬಡಸ, ರಮೇಶ ಲಕಮೋಜಿ,ಪುಂಡಲಿಕ ರಜಪೂತ,ಕಿರಣ ಹಟ್ಟಿ, ಶ್ರೀಕಾಂತ ಹಟ್ಟಿ , ಬಾಬು ಲಕಮೋಜಿ, ಬಸ್ಸು ಗಾಡಿಕೊಪ್ಪ,ರಾಮಕೃಷ್ಣ ವಡ್ಡಿನ , ತುಕಾರಾಮ ಹಟ್ಟಿ, ವಿಜಯ ವಡ್ಡಿನ. ಸೇರಿದಂತೆ ಕುಕಡೊಳ್ಳಿ ಗ್ರಾಮಸ್ಥರು ಪಕ್ಷಾತೀತವಾಗಿ…
ಬೆಳಗಾವಿ ನಗರದಲ್ಲಿ ಇಂದು ಬೆಳಗಾವಿ ವಾರ್ಡ್ ಸಮಿತಿ ಬಳಗ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಪ್ರತಿ ವಾರ್ಡಿಗೆ ಒಂದು ವಾರ್ಡ್ ಕಮಿಟಿ ಮಾಡಬೇಕೆಂದು ವಾರ್ಡ್ ಸಮಿತಿ ಬಳಗದಿಂದ ಪ್ರಾದೇಶಿಕ ಆಯುಕ್ತರು ಬೆಳಗಾವಿ ಅವರಿಗೆ ಮನವಿ ನೀಡಿದ್ದೇವೆ ಕೆ ಎಂ ಸಿ ಕಾಯ್ದೆ 1976 ,ಸೆಕ್ಷನ್ 13ರ ಪ್ರಕಾರ, ಸಂವಿಧಾನಾತ್ಮಕವಾಗಿ ಶಾಸನತ್ಮಕವಾಗಿ ಮಹಾನಗರ ಪಾಲಿಕೆ ಅಡಿಯಲ್ಲಿ ಕಾನೂನಾತ್ಮಕವಾಗಿ ಕಡ್ಡಾಯವಾಗಿ ವಾರ್ಡ್ ಸಮಿತಿಗಳು ರಚನೆ ಮಾಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಬಿ ಬಿ ಎಂ ಪಿ ಬೆಂಗಳೂರು,ಹುಬ್ಬಳ್ಳಿ ಧಾರವಾಡ, ಮಂಗಳೂರು, ಹಾಗೂ ಕಲ್ಬುರ್ಗಿ, ಮಹಾನಗರ ಪಾಲಿಕೆಗಳಲ್ಲಿ ವಾರ್ಡ್ ಕಮಿಟಿಗಳನ್ನು ರಚನೆ ಮಾಡಲು ಪ್ರಾರಂಭಿಸಿದ್ದಾರೆ ಆದರೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇನ್ನೂ ಇದರ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ಅದರ ಸಲುವಾಗಿ ವಾರ್ಡ್ ಕಮಿಟಿ ಬಳಗವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅರವಿಂದ್ ಕುಲಕರ್ಣಿ ವಾರ್ಡ್ ಕಮಿಟಿ ಕುರಿತು ಮಾಹಿತಿ ನೀಡಿದರು. ಇದು ಪ್ರತಿಯೊಂದು ವಾರ್ಡಿನಲ್ಲಿ ನಾಗರಿಕ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಮಾಯಸಂದ್ರ ಗ್ರಾಮ ಹಾಗೂ ಕೋಡಿ ನಾಗಸಂದ್ರ ಟಿ ಬಿ ಕ್ರಾಸ್ನ ಇಪ್ಪತ್ತಕ್ಕೂ ಹೆಚ್ಚು ಕೆಲವು ಮುಸ್ಲಿಂ ಯುವಕರು.ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಜೆಡಿಎಸ್ ಮುಖಂಡರಾದ ಬಾಣಸಂದ್ರ ರಮೇಶ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸೋಮಶೇಖರ್ ಟಿ ಬಿ ಕ್ರಾಸ್, ಸಾಬೀರ್, ಮುಬಾರಕ್, ಮುಸಾಹಿಫ್, ಅಹಮದ್, ಖುರೇಶಿ, ಹಾಸಿಫ್ ,ನವಾಜ್, ಹರ್ಷದ್, ಜುಬೇರ್, ಮುಜೀಬ್, ನೇಮಥ್, ಸದ್ದಾಂ ,ಜಲಾಲ್, ಇನ್ನು ಅನೇಕ ಜೆಡಿಎಸ್ ಮುಖಂಡರು ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಹೆಚ್.ಡಿ.ಕೋಟೆ: ಇಂದು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಾತ್ಯಾತೀತ ಜನತಾದಳ ವತಿಯಿಂದ ನಾಡು ಕಂಡ ಅಪ್ರತಿಮ ರಾಜಕಾರಣಿ ಆರ್.ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ನಾನು ಮತ್ತು ಧ್ರುವನಾರಾಯಣ್ ರವರು ಅತ್ಯಂತ ಆತ್ಮೀಯವಾಗಿ ಇದ್ದೆವು. ಇಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದೆವು. ಆದರೆ ಕಳೆದ ಒಂಬತ್ತು ವರ್ಷದಿಂದ ಅವರ ನನ್ಮ ಸ್ನೇಹ ಮುರಿದ್ದಿತ್ತು, ಆದರೆ ಯಾವತ್ತೂ ನೇರ ನೇರ ನಿಂತು ಜಗಳವಾಗಲಿ. ಮಾತುಕತೆಯಾಗಲಿ ಇರಲಿಲ್ಲ. ಧ್ರುವನಾರಾಯಣ್ ರವರು ಯಾವುದೇ ವೇದಿಕೆಯಲ್ಲಿ ಅಥವಾ ಕಾರ್ಯಕ್ರಮದಲ್ಲಿಯಾಗಲಿ ನನ್ನ ಬಗ್ಗೆ ಕೆಟ್ಟದಾಗಿ ಅಥವಾ ನನ್ನ ವಿರೋಧವಾಗಿ ಮಾತನಾಡಲಿಲ್ಲ. ಇಂತಹ ಸಹೃದಯ ವ್ಯಕ್ತಿ ಇಂದು ನಮ್ಮ ನಡುವೆ ಇಲ್ಲದಿರುವುದು ನೋವಿನ ಸಂಗತಿ ಎಂದರು. ಈ ಸಂದರ್ಭದಲ್ಲಿ ರಾಜೇಂದ್ರ,ಗೋಪಾಲಸ್ವಾಮಿ, ಚಾ.ನಂಜುಂಡ ಮೂರ್ತಿ, ಫಿಸ್ ಸಲೀಮ್ ತಾರಕ ಮನ್ಸೂರ್, ಮಂಚಯ್ಯ, ಕಡಕೊಳ ನಾಗರಾಜು, ಧ್ರುವನಾರಾಯಣ ಅಭಿಮಾನಿಗಳು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಸರಗೂರು: ಬೆಳೆಯುವ ಮಕ್ಕಳ ಪೌಷ್ಟಿಕಾಂಶ ಹೀರಿ ಬೆಳೆಯುವ ಜಂತು ಹುಳಗಳ ನಿವಾರಣೆಗಾಗಿ ಅಲ್ಪೆಂಡಝೋಲ್ ಮಾತ್ರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಸೇವಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಪಾರ್ಥ ಸಾರಥಿ ಹೇಳಿದರು. ತಾಲ್ಲೂಕಿನ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರರಂದು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ ನಡೆದ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು. ಬಯಲು ಶೌಚದಿಂದಾಗಿ, ಬರಿಗಾಲಿನಲ್ಲಿನಡೆದಾಗ ಹಾಗೂ ಕಲುಷಿತ ಕೈಗಳಿಂದ ಆಹಾರ ಸೇವನೆ ಮಾಡುವುದರಿಂದ ಜಂತು ಹುಳುಗಳು ದೇಹದೊಳಗೆ ಪ್ರವೇಶಿಸಿ ಕರುಳಿನಲ್ಲಿವಾಸಿಸುವ ಜೀವಿಗಳಾಗಿ ಬೆಳೆಯುತ್ತದೆ. ಇವುಗಳು ಮಕ್ಕಳಲ್ಲಿನ ಪೌಷ್ಠಿಕಾಂಶ ಹೀರುವುದರಿಂದ ರಕ್ತ ಹೀನತೆ ಉಂಟು ಮಾಡಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಶಾಲೆಯ ಮಕ್ಕಳಲ್ಲಿನ ಕಲಿಕಾ ಸಾಮರ್ಥ್ಯ ಮತ್ತು ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿಜಂತು ಹುಳುಗಳು ದೇಹದೊಳಗೆ ಪ್ರವೇಶಿಸದಂತೆ ಮುನ್ನಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದರು. ಹಿಂದೆ ಬಹುತೇಕ ಮಕ್ಕಳಲ್ಲಿಪೂರ್ವ ಕಾಲದಲ್ಲಿಜಂತು ಹುಳು ಸಮಸ್ಯೆ ಕಾಣುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿಆ ಸಮಸ್ಯೆ…
ತುರುವೇಕೆರೆ: ತಾಲೂಕಿನಲ್ಲಿ ನಾಳೆ 14ನೇ ಮಂಗಳವಾರ ಮೊಟ್ಟಮೊದಲ ಬಾರಿಗೆ ಇತಿಹಾಸದಲ್ಲೇ ತುರುವೇಕೆರೆ ಪಟ್ಟಣದ ಗುರುಭವನದ ಆವರಣದಲ್ಲಿ ಮಾಜಿ ಶಾಸಕರಾದ ಎಂ ಟಿ ಕೃಷ್ಣಪ್ಪನವರ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ, ಕಾರ್ಯಾಧ್ಯಕ್ಷೆ ನಜ್ಮಾ ನಜೀರ್, ನೌಶಿದ್ದು ಖಾನ್, ಇನ್ನು ಅನೇಕ ರಾಜ್ಯಮಟ್ಟದ ಜಿಲ್ಲಾಮಟ್ಟದ ಜೆಡಿಎಸ್ ಮುಖಂಡರುಗಳು ಆಗಮಿಸಲಿದ್ದು, ಈ ಸಮಾವೇಶ ನಮ್ಮ ತಾಲೂಕಿನಲ್ಲಿರುವ 80 ಹಳ್ಳಿಯಿಂದ ನಮ್ಮ ಪಕ್ಷದ ಮುಖಂಡರುಗಳು ಕಾರ್ಯಕರ್ತರನ್ನು ಕರೆತಂದು, ರಾಜ್ಯಾಧ್ಯಕ್ಷರು ಬರುವ ಹಿನ್ನೆಲೆಯಲ್ಲಿ ಸಂಘಟನೆಗೆ ಒತ್ತುಕೊಟ್ಟು ಚುನಾವಣೆ ಹತ್ತಿರವಿರುವುದರಿಂದ ನಮ್ಮ ಪಕ್ಷಕ್ಕೆ ಅನುಕೂಲವಾಗುತ್ತದೆ, ಹಾಗಾಗಿ ಮೊಟ್ಟ ಮೊದಲನೇ ಬಾರಿಗೆ ನಮ್ಮ ತಾಲೂಕಿನಲ್ಲಿ ಅಲ್ಪಸಂಖ್ಯಾತರ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷ ಜಫ್ರುಲ್ಲಾ ಖಾನ್ ಹೇಳಿದರು , ಇದೆ ವೇಳೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರಾದ ನಯಾಜ್, ಅಸ್ಲಾಂ, ಯಾಸಿನ್, ನಯಾಜ್ ಪಾಶ, ಫಯಾಜ್, ಹಾದಿಲ್, ವಸಿಂ, ಜಾಕೀರ್, ಇನ್ನು ಅನೇಕ ಕಾರ್ಯಕರ್ತರು ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ…
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಶ್ರಮ ಸಾರ್ಥಕವಾಗಿದೆ. ರಾಜಹಂಸಗಡವನ್ನು ದೊಡ್ಡ ಧಾರ್ಮಿಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕೆನ್ನುವ ಅವರ ಕನಸು ನನಸಾಗಿದೆ. ನವೀಕೃತ ಸಿದ್ಧೇಶ್ವರ ಮಂದಿರ ಮತ್ತು ಛತ್ರಪತಿ ಶಿವಾಜಿ ಮೂರ್ತಿ ಉದ್ಘಾಟನೆಯಾಗಿ ಒಂದೇ ವಾರದಲ್ಲಿ ರಾಜಹಂಸಗಡ ದೊಡ್ಡ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಭಾನುವಾರ ಒಂದೇ ದಿನ 10 ಸಾವಿರಕ್ಕಿಂತ ಹೆಚ್ಚು ಪ್ರವಾಸಿಗರು ಆಗಮಿಸಿ, ಅಭಿವೃದ್ಧಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ದಿನದಿಂದಲೇ ರಾಜಹಂಸಗಡ ಕೊಟೆಯನ್ನು ಪರಿಪೂರ್ಣ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕೆನ್ನುವ ಕನಸು ಹೊತ್ತಿದ್ದರು. ಅಲ್ಲಿ ರಾಷ್ಟ್ರದಲ್ಲೇ ಭವ್ಯವಾದ ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಬೇಕೆನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡಿದರು. ಯಾವ ಅಡ್ಡಿ, ಆತಂಕಕ್ಕೂ ಬಗ್ಗದೆ ನಿರಂತರ ಪ್ರಯತ್ನ ಮಾಡಿ ಯಶಸ್ವಿಯಾದರು. ಮಾರ್ಚ್ 5ರಂದು ನವೀಕೃತ ಸಿದ್ದೇಶ್ವರ ಮಂದಿರ ಮತ್ತು ಬೃಹತ್ ಛತ್ರಪತಿ ಶಿವಾಜಿ ಮೂರ್ತಿ ಶಾಸ್ತ್ರೋಕ್ತವಾಗಿ ಉದ್ಘಾಟನೆಯಾಯಿತು. ಉದ್ಘಾಟನೆಯ ದಿನವೇ ಒಂದೂವರೆ ಲಕ್ಷಕ್ಕಿಂತ ಹೆಚ್ಚು ಜನರು ಆಗಮಿಸಿ, ಹರ್ಷೋದ್ಘಾರಗೈದಿದ್ದರು. ಅಲ್ಲಿಂದ ಪ್ರತಿನಿತ್ಯ 2 -3 ಸಾವಿರ ಪ್ರವಾಸಿಗರು…
ಬೆಳಗಾವಿ ನಗರ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕನ್ನಡಪರ ಹೋರಾಟಗಾರರು ಜಾತ್ಯತೀತ ಜನತಾದಳವನ್ನು ಶಂಕರಗೌಡ ಪಾಟೀಲ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರಿದರು. ಶಂಕರಗೌಡ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಳಗಾವಿ ಜಿಲ್ಲೆ ಯಲ್ಲಿ ಶಕ್ತಿ ಹೀನವಾಗಿರುವ ಜೆ ಡಿಎಸ್ ಪಕ್ಷವನ್ನುತಳ ಮಟ್ಟದಿಂದ ಕಟ್ಟುತ್ತೇವೆ ಮತ್ತೆ ಜಿಲ್ಲೆಯಲ್ಲಿ ಜೆ ಡಿ ಎಸ್ ಅಸ್ತಿತ್ವದಲ್ಲಿ ಬರಲಿದೆ. ಅದಕ್ಕಾಗಿ ಗ್ರಾಮೀಣ ಮಟ್ಟದಲ್ಲಿ ಕಾರ್ಯಕರ್ತರನ್ನು ಜಾಗೃತಗೊಳಿಸುತ್ತಾ ಹಳೆ ಕಾರ್ಯಕರ್ತರನ್ನು ಹಾಗೂ ಹೊಸದಾಗಿ ಸದಸ್ಯತ್ವ ನಿಡುತ್ತಾ ಪಕ್ಷಕ್ಕೆ ಸೇರ್ಪಡೆ ಮಾಡುತ್ತಾ ಇದ್ದೇವೆ. ಅದರ ಭಾಗವಾಗಿಯೇ ಕನ್ನಡಪರ ಸಂಘಟನೆಗಳು ಮತ್ತು ಕನ್ನಡಪರ ಹೋರಾಟಗಾರರು ಜೆ ಡಿ ಎಸ್ ಪಕ್ಷವನ್ನು ಸೇರಿದ್ದಾರೆ. ಪಕ್ಷ ಬಲಿಷ್ಠ ಗೊಳ್ಳಲಿದೆ ಸ್ವಂತ ಬಲದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಹಲವಾರು ವರ್ಷಗಳಿಂದ ಸಮಾಜ ಸೇವೆ ಹಾಗೂ ಕನ್ನಡಪರ ಹೋರಾಟಗಾರರಾಗಿ ನಾನು ತೊಡಗಿಸಿಕೊಂಡಿದ್ದೇನೆ ಈಗ ಜಾತ್ಯತೀತ ಜನತಾದಳದ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿಯಾಗಿದ್ದೇನೆ. ನಮ್ಮ ನಾಯಕರಗಳಾದ ವಿವೇಕ್ ರಾವ್…
ಬೆಳಗಾವಿ: ವಿಧಾನ ಸಭಾ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ಚುನಾವಣೆ ಆಯೋಗ ನೀತಿಸಂಹಿತೆ ಜಾರಿಗೊಳಿಸಬಹುದು ಎಂದು ಎಲ್ಲ ರಾಜಕಾರಣಿಗಳು ಕಾಯುತ್ತಿದ್ದಾರೆ. ಆದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾತ್ರ ಅಭಿವೃದ್ಧಿ ಯೋಜನೆಗಳ ಸರಣಿ ಇನ್ನೂ ನಿಂತಿಲ್ಲ. ಮಳೆಗಾಲದ ಮಳೆಯಂತೆ ನಿರಂತರವಾಗಿ ಶಂಕುಸ್ಥಾಪನೆ ಇಲ್ಲವೇ ಉದ್ಘಾಟನೆ ಕಾರ್ಯಕ್ರಮಗಳು ಮುಂದುವರಿದಿವೆ. ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ.ಗಳ ಯೋಜನೆಗಳನ್ನು ತಂದಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಚುನಾವಣೆ ಅಧಿಸೂಚನೆ ಜಾರಿಗೊಳ್ಳುವ ಮುನ್ನ ಎಲ್ಲ ಕಾಮಗಾರಿಗಳಿಗೆ ಚಾಲನೆ ನೀಡುವ ತವಕದಲ್ಲಿದ್ದಾರೆ. ಶಾಸಕರಾಗಿ ಆಯ್ಕೆಯಾದ ದಿನದಿಂದಲೂ ಅವರು ಅವಿಶ್ರಾಂತವಾಗಿ ಯೋಜನೆಗಳನ್ನು ತಂದು ಚಾಲನೆ ನೀಡುತ್ತಲೇ ಇದ್ದಾರೆ. ಭಾನುವಾರ ಸಹ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಲವು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಇನಾಂ ಬಡಸ್ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೊಸ ಕೊಠಡಿಯನ್ನು ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಮೇದಾರ್,…
ಗೋಕಾಕ್ : “ಮಾ. 15ರಂದು ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಹಲವು ಗಣ್ಯರು ಆಗಮಿಸುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ ಯಶಸ್ಸಿಯಾಗಿ ನಡೆಸಲಾಗಿದ್ದು, 2ನೇ ಹಂತದ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳನ್ನು ಮನೆ ಮನೆಗೆ ತಿಳಿಸಲಾಗುವುದು, ಇನ್ನು ಅನೇಕ ಯೋಜನೆಗಳನ್ನು ಘೋಷಿಸಲಾಗುವುದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಹಂಚಿಕೆಯಾಗಿವೆ. ಜನ ಆಶೀರ್ವಾದ ಮಾಡಿದರೆ ಈ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು ಪಕ್ಷಾಂತರ ಪರ್ವ ಸಹಜ: ಚುನಾವಣೆ ಬಂದಾಗ ಪಕ್ಷಾಂತರ ಪರ್ವ ಸಹಜವಾಗಿದೆ. ಬಿಜೆಪಿ ಆಡಳಿತ ಅವಧಿಯಲ್ಲಿ ಬೆಲೆ ಏರಿಕೆಯಿಂದ ಜನರು ತತ್ತರಿಸಿಹೋಗಿದ್ದಾರೆ. ಹೀಗಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ನತ್ತ ಒಲವು ತೋರುತ್ತಿದ್ದಾರೆ. ಮತದಾರರು…