Author: admin

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ವೊಂದು ರಸ್ತೆಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ನಿನ್ನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೈರನಾಯಕನಹಳ್ಳಿ ಬಳಿ ನಡೆದಿದೆ. ಕುಣಿಗಲ್ ಟು ಮಾಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಹಳ್ಳದಲ್ಲಿ ಸಿಲುಕಿದೆ. ಹಳ್ಳದಲ್ಲಿ ಸಿಲುಕಿದ್ದ ಬಸ್ ನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಕೊನೆಗೆ ಜೆಸಿಬಿ ಮೂಲಕ ಹಳ್ಳದಲ್ಲಿದ್ದ ಬಸ್ ನ್ನು ಹೊರ ತೆಗೆಯಲಾಯಿತು. ಅಪಘಾತಕ್ಕೀಡಾದ ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ತುಮಕೂರು :  ಸಂಸ್ಕೃತದ ಜೊತೆಯಲ್ಲಿಯೇ ಕನ್ನಡ ಭಾಷೆ ಅಸ್ತಿತ್ವದಲ್ಲಿ ಇರುವುದನ್ನು ಕಂಡಿದ್ದೇವೆ, ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ತಮ್ಮ ಹೇಳಿಕೆಯನ್ನು ಬಳಸಬಾರದಿತ್ತು, ನಾವ್ಯಾರು ಕೂಡ ಸುಮ್ಮನೆ ಕೂರುವುದಿಲ್ಲ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ. ಕಮಲಹಾಸನವರ ಹೇಳಿಕೆಯನ್ನು ಖಂಡಿಸುತ್ತೇವೆ. ಅವರ  ಹೇಳಿಕೆ ವಿರುದ್ಧ ಪ್ರತಿಭಟಿಸುತ್ತೇವೆ. ಚಿತ್ರನಟ ಕಮಲಹಾಸನ್ ಸೇರಿದಂತೆ ಯಾರೋ ಕನ್ನಡ ಭಾಷೆಯನ್ನು ಬಗ್ಗೆ ಮಾತನಾಡಿದರೆ ನಾವು ಕೆಳಹಂತಕ್ಕೆ ಹೋಗುವುದಿಲ್ಲ. ಎಂಟು ಜ್ಞಾನಪೀಠ ಪ್ರಶಸ್ತಿ ಕನ್ನಡ ಭಾಷೆಗೆ ಲಭಿಸಿದೆ ಕಮಲಹಾಸನವರ ಹೇಳಿಕೆಯಿಂದ ಅವರೇ ಸಣ್ಣ ಮಟ್ಟಕ್ಕೆ ಹೋಗಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಕಮಲ್ ಹಾಸನ್ ಅವರು ಕ್ಷಮೆ ಕೇಳಬೇಕು ಇಲ್ಲದೇ ಹೋದರೆ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಹೇಳಿದ್ದಾರೆ. ‘ಥಗ್ ಲೈಫ್’ ಸಿನಿಮಾ ಕರ್ನಾಟಕದ ವಿತರಕ ವೆಂಕಟೇಶ್ ಅವರನ್ನು ಚೇಂಬರ್​ಗೆ ಕರೆಸಿ ಮಾತುಕತೆ ನಡೆಸಿದ್ದೇವೆ. ಕಮಲ್ ಹಾಸನ್ ಅವರನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಕಮಲ್ ಅವರಿಂದ ಕ್ಷಮೆ ಕೇಳಿಸುತ್ತೇವೆ. ಎಂದು ಅವರು ಹೇಳಿದ್ದಾರೆ. ಇನ್ನೂ ಸಾರಾ ಗೋವಿಂದು ಮಾತನಾಡಿ, ಕಮಲ್ ಹಾಸನ್ ಬಗ್ಗೆ ಕನಿಕರ ಇಲ್ಲ ಇದನ್ನ ಸಹಿಸೋಕೆ ಸದ್ಯ ಇಲ್ಲ, ಇವತ್ತು ನಾಳೆ ಒಳಗೆ ಕ್ಷಮೆ ಕೇಳದೆ ಹೋದ್ರೆ ಚಿತ್ರ ಬಿಡುಗಡೆ ಆಗೋದಿಲ್ಲ, ಕಮಲ್ ಹಾಸನ್ ಅವರಿಗೆ ಮನದಟ್ಟು ಮಾಡಿಸುವ ಜವಾಬ್ದಾರಿ ವಿತರಕರದ್ದು  ಎಂದು ಅವರು ಹೇಳಿದ್ದಾರೆ. ಸಿನಿಮಾದ ಕರ್ನಾಟಕ ವಿತರಕ ವೆಂಕಟೇಶ್ ಮಾತನಾಡಿ, ನಾನೊಬ್ಬ ಕನ್ನಡಿಗನಾಗಿ ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸುತ್ತೀನಿ. ಚೇಂಬರ್ ನಲ್ಲಿ ಏನೇನು ಮೀಟಿಂಗ್ ಆಗಿದೆ ಅದನ್ನೆಲ್ಲ ಕಮಲ್ ಹಾಸನ್ ಅವರಿಗೆ…

Read More

ಬೆಳಗಾವಿ: ಬೆಳಗಾವಿಯಲ್ಲಿ ಕೊವಿಡ್ ಗೆ  ಮೊದಲ ಬಲಿಯಾಗಿದ್ದು,  ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧ  ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ಮೃತಪಟ್ಟವರಾಗಿದ್ದು, ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.  ಹೀಗಾಗಿ ಚಿಕಿತ್ಸೆಗೆ ಅಂತಾ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ. ಕೊವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಗೊತ್ತಾದ ತಕ್ಷಣವೇ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದ ಕಾರಣ 70 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಕೊವಿಡ್ ನಿಯಮಾವಳಿ ಪ್ರಕಾರವೇ ರಾತ್ರಿಯೇ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೆರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಹಾವೇರಿ: ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿದಲ್ಲದೇ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ ಪ್ರದರ್ಶಿಸುತ್ತಿದ್ದಾರೆ ಎಂದು ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ತಮಿಳು, ಕನ್ನಡ ಎರಡೂ ಒಂದೇ ಮೂಲದ ಭಾಷೆಗಳು. ಇವು ದ್ರಾವಿಡ ವರ್ಗದಿಂದ ಬಂದ ಭಾಷೆಗಳಾಗಿವೆ. ಎರಡೂ ಕೂಡಾ ಸಹೋದರ ಭಾಷೆಗಳು. ಕಮಲ್ ಹಾಸನ್ ಅವೈಜ್ಞಾನಿಕ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ? ಕಮಲ್ ಹಾಸನ್ ಇಷ್ಟಾದ್ರೂ ಕನ್ನಡಿಗರ ಬಳಿ ಕ್ಷಮೆ ಕೇಳದೇ ಮೊಂಡುತನ ತೋರಿಸಿದ್ದಾರೆ. ಸಣ್ಣತನದ ಹೇಳಿಕೆ ನೀಡಿದ್ದಾರೆ. ಕ್ಷಮೆ ಕೇಳುವ ವಿನಯವೂ ಅವರಿಗೆ ಇಲ್ಲ. ಸುಳ್ಳಲ್ಲೇ ಮೆರೆಯೋಕೆ ನೋಡ್ತಿದಾರೆ. ಅವರು ವೈಚಾರಿಕೆ ನೆಲೆಗಟ್ಟಿನಲ್ಲಿ ಮಾತಾಡಬೇಕು. ಕಮಲ್ ಹಾಸನ್ ಹೇಳಿಕೆಯಲ್ಲಿ ದ್ರಾವಿಡ ಪರಿಕಲ್ಪನೆಯೂ ಅಲ್ಲ ಎಂದು ಆಕ್ರೋಶ ಹೊರಹಾಕಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತಿಪಟೂರು: ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಅಕ್ರಮ ಮದ್ಯಮಾರಾಟ ಅವ್ಯಹತವಾಗಿ ನಡೆಯುತ್ತಿದರೂ, ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಹಾಲ್ಕುರಿಕೆ ಗ್ರಾಮದ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ದೇವಾಲಯಗಳ ಬಳಿಯೇ ಅಕ್ರಮವಾಗಿ ಮದ್ಯಮಾರಾಟ ಮಾಡಲಾಗುತ್ತಿದೆ. ಪ್ರತಿದಿನ ಕುಡುಕರ ಹಾವಳಿಗೆ ಜನಹೈರಾಣಾಗಿ ಹೋಗಿದ್ದಾರೆ. ಹಾಲ್ಕುರಿಕೆ ಬಸ್ ನಿಲ್ದಾಣದ ಬಳಿಯೇ ನಾಲ್ಕೈದು ಅಕ್ರಮ ಮದ್ಯಮಾರಾಟದ ಅಂಗಡಿಗಳಿವೆ, ಒಂದೆಡೆ ಬಸ್ ನಿಲ್ದಾಣ, ಇನ್ನೊಂದೆಡೆ ತರಳಬಾಳು ವಿದ್ಯಾಸಂಸ್ಥೆಗೆ ಸೇರಿದ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು. ಬ್ಯಾಂಕ್ ಇದ್ದರೂ ಸಹ. ರಾಜಾರೋಷವಾಗಿಯೆ ಅಕ್ರಮವಾಗಿ ಅಂಗಡಿಗಳಲ್ಲಿ ಮದ್ಯಮಾರಾಟ ಮಾಡಲಾಗುತ್ತಿದೆ. ಪ್ರತಿದಿನ ಹಾಲ್ಕುರಿಕೆ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಜನ ಬಸ್ ಸೌಕರ್ಯಕ್ಕಾಗಿ ಹಾಲ್ಕುರಿಕೆಗೆ ಬರಬೇಕಿದೆ. ಆದರೆ, ಬಸ್ ನಿಲ್ದಾಣದ ಬಳಿ ಇತರ ಸರಕು ಸರಜಾಮುಗಳ ಮಾರಾಟಕ್ಕಿಂತ ಅಕ್ರಮ ಮದ್ಯವೇ ನಿರ್ಭಯವಾಗಿ ಮಾರಾಟವಾಗುತ್ತಿದೆ. ಬಸ್ ಗಾಗಿ ಕಾಯುವ ಮಹಿಳೆಯರು, ವೃದ್ದರು. ಮಕ್ಕಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕುಡುಕರ ಕಾಟಕ್ಕೆ ಬೇಸತ್ತು ಹೋಗಿದ್ದಾರೆ. ಮದ್ಯಪಾನ ಮಾಡುವುದು. ಬಸ್ ನಿಲ್ದಾಣದ…

Read More

ತುಮಕೂರು: ದಕ್ಷಿಣ ಕರ್ನಾಟಕದ ಏಕೈಕ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು 2025–26ನೇ ಸಾಲಿನಿಂದ “ತುಮಕೂರು ನಗರದ ರೇಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ನಡೆಯುತ್ತಿದೆ” ಈ ಕಾಲೇಜಿನಲ್ಲಿ ಕಳೆದ 30 ವರ್ಷಗಳಿಂದ ಬಿ.ವಿ.ಎ.ಪೇಟಿಂಗ್ ಪದವಿ ಶಿಕ್ಷಣವನ್ನು ನೀಡಲಾಗುತ್ತಿದೆ. ಇದರೊಂದಿಗೆ 2024—25 ನೇ ಸಾಲಿನಿಂದ ಬಡ–ವಿದ್ಯಾರ್ಥಿಗಳಿಗಾಗಿ ಸರ್ಕಾರದ ಅನುಮತಿ ಮೇರೆಗೆ ಹೊಸದಾಗಿ ಬಿ.ವಿ.ಎ.ಅನಿಮೇಶನ್ ಪದವಿ ಮತ್ತು ಬಿ.ವಿ.ಎ. ಗ್ರಾಫಿಕ್ಸ್ ಡಿಸೈನ್ ಪದವಿ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ಪ್ರತಿವರ್ಷವೂ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಈ ಕಾಲೇಜಿಗೆ ಚಿತ್ರಕಲಾ ಪದವಿ ಶಿಕ್ಷಣ ಬಯಸಿ ಅನೇಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಈ ಕಾಲೇಜಿನಲ್ಲಿ ಎಲ್ಲ ಮೂಲಭೂತ ಸೌಕರ್ಯಗಳ ಜೊತೆಗೆ ನುರಿತ ಅಧ್ಯಾಪಕರಿದ್ದು, ಗುಣಮಟ್ಟದ ಕಲಾ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ. ಈ ಪದವಿಗಳು ವಿವಿಧ ವೃತ್ತಿ ಕೌಶಲ್ಯಗಳನ್ನು ಒಳಗೊಂಡಿದ್ದು, ವಿವಿಧ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ. ಹಾಗೂ ಪದವಿ ಪಡೆದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗ ಕೈಗೊಳ್ಳಬಹುದಾಗಿದೆ. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ…

Read More

ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ ಟಿಸಿ) ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಶೆಂಬಳ್ಳಿ ಕ್ರಾಸ್ ಸಮೀಪ ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ. ಔರಾದ್ ತಾಲ್ಲೂಕಿನ ಜೊನ್ನೆಕೇರಿ ಗ್ರಾಮದ ಯುವರಾಜ್ ಶರಣಪ್ಪಾ ಬಿರಾದಾರ (35) ಮೃತರು ಪತ್ನಿ ತಂದೆ- ತಾಯಿ, ಸಹೋದರರು, 2 ವರ್ಷದ ಪುತ್ರ ಹಾಗೂ ಬಂಧು ಮಿತ್ರರಿದ್ದಾರೆ ಬೀದರ್ ನಿಂದ ಬೈಕ್ ಮೇಲೆ ಸ್ವಗ್ರಾಮಕ್ಕೆ ತೆರಳುತ್ತಿದ್ದರು ರಾಷ್ಟ್ರೀಯ ಹೆದ್ದಾರಿ –161(ಎ) ರಲ್ಲಿ ಔರಾದ್ ಕಡೆಯಿಂದೆ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಯುವರಾಜ ಅವರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಿದರು, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಸ್ಥಳಕ್ಕೆ ಸಂತಪೂರ ಪೊಲೀಸ್ ಠಾಣೆ ಪಿಎಸ್ ಐ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದರು.ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ ಎಂದು ತಿಳಿಸಿದ್ದಾರೆ ವರದಿ:…

Read More

ಬೆಂಗಳೂರು: ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಕಮಲ್ ಹಾಸನ್ ಕ್ಷಮೆ ಕೇಳಲ್ಲ ಎಂದು ಹೇಳಿದ ಬೆನ್ನಲ್ಲೇ ಅವರ ಭಾವಚಿತ್ರದ ಬ್ಯಾನರ್‌ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ನಗರದ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪವಿತ್ರ ಪ್ಯಾರಡೈಸ್ ಸಿಗ್ನಲ್ ಬಳಿ ಈ ಘಟನೆ ನಡೆದಿದೆ. ರಾತ್ರೋ ರಾತ್ರಿ  ಕನ್ನಡ ಅಭಿಮಾನಿಯೊಬ್ಬ ಕಮಲ್ ಹಾಸನ್ ಹೇಳಿಕೆಗೆ ಧಿಕ್ಕಾರ ಕೂಗಿ ಕಮಲ್ ಹಾಸನ್ ಅವರ ಭಾವಚಿತ್ರದ ಬ್ಯಾನರ್‌ಗೆ ಬೆಂಕಿ ಹಚ್ಚಿದ್ದಾರೆ. ಫೋಟೋಗೆ ಬೆಂಕಿ ಹಚ್ಚಿದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ನೀರು ಹಾಕಿ ಬ್ಯಾನರ್‌ ನ್ನು ರಸ್ತೆಯಿಂದ ತೆಗೆದು ಹಾಕಿದ್ದಾರೆ. `ಥಗ್ ಲೈಫ್’ ಸಿನಿಮಾದ ಪ್ರಚಾರದ ವೇಳೆ ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನನ್ನು ಬಂಧಿಸಲಾಗಿದೆ ಮೇ 24 ರಂದು ಕಾಡುಗೋಡಿ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಭಾರತಿ ಕಣ್ಣನ್ ಬಂಧಿತ ಆರೋಪಿಯಾಗಿದ್ದಾನೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂತ್ರಸ್ತೆಯ ಬಳಿ ಕಾರು ನಿಲ್ಲಿಸಿದ್ದಾನೆ, ನಂತರ ತಾನು ನೃತ್ಯ ಶಿಕ್ಷಕ ಎಂದು ಪರಿಚಯಿಸಿಕೊಂಡು ನೃತ್ಯ ತರಗತಿಗಳ ಬಗ್ಗೆ ವಿವರಗಳನ್ನು ವಿವರಿಸುವ ನೆಪದಲ್ಲಿ ಆಕೆಯನ್ನು ಕಾರಿಗೆ ಹತ್ತಿಸಿಕೊಂಡಿದ್ದಾನೆ. ಸಂತ್ರಸ್ತೆ ಕಾರು ಹತ್ತುತ್ತಿದ್ದಂತೆ, ಆರೋಪಿ ಬಾಗಿಲುಗಳನ್ನು ಲಾಕ್ ಮಾಡಿ ಸ್ವಲ್ಪ ದೂರ ಹೋಗಿದ್ದಾನೆ. ಈ ಸಮಯದಲ್ಲಿ, ಅವನು ಹುಡುಗಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ಕಣ್ಣನ್, ಸಂತ್ರಸ್ತೆಯನ್ನು ತಾನು ಕರೆದುಕೊಂಡು ಹೋದ ಸ್ಥಳದಲ್ಲೇ ಇಳಿಸಿದ್ದಾನೆ. ಸಂತ್ರಸ್ತೆ ಮನೆಗೆ ತಲುಪಿದ ನಂತರ, ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಅದಾದ ಮೇಲೆ ಅವರು ದೂರು ದಾಖಲಿಸಿದ್ದರು, ನಂತರ, ಕಣ್ಣನ್ ನನ್ನು ಬಂಧಿಸಲಾಯಿತು ಎಂದು ವಿವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More