Subscribe to Updates
Get the latest creative news from FooBar about art, design and business.
- ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
- ತುಮಕೂರಿಗೆ ಏರ್ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
Author: admin
ಸರಗೂರು: ತಾಲೂಕಿನ ಲಿಂಗನೇಹಳ್ಳಿ ಗ್ರಾಮದ ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು ಜೋಳ, ರಾಗಿ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಬೆಳೆಯನ್ನು ನಾಶ ಮಾಡಿವೆ. ರೈತ ಕಾರಯ್ಯ ಎಂಬುವರಿಗೆ ಸೇರಿದ ಮೂರು ಎಕರೆ ರಾಗಿ ಜೋಳ ತೋಟಕ್ಕೆ ಬುಧವಾರದಂದು ರಾತ್ರಿ ನುಗ್ಗಿದ ಗಜಪಡೆ, ರಾಗಿ ಮತ್ತು ಜೋಳ ಬೆಳೆಯನ್ನು ಹಾಳು ಮಾಡಿವೆ. ವರ್ಷ ಪೂರ್ತಿ ಹಗಲು ರಾತ್ರಿ ದುಡಿದು ಬೆಳೆದ ಬೆಳೆ ರೈತನ ಕೈಗೆ ಬಂದ ತುತ್ತು ಕೈಗೆ ಬಾರದಂತಾಗಿದೆ. ಅರಣ್ಯದಂಚಿನ ಗ್ರಾಮದ ರೈತರ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆಗಳ ಮೇಲೆ ದಾಳಿಯಿಟ್ಟು ಬೆಳೆಗಳನ್ನು ನಾಶ ಮಾಡುತ್ತಲೆ ಇವೆ . ಇದರಿಂದ ಈ ಪ್ರದೇಶದಲ್ಲಿನ ರೈತರು ಆರ್ಥಿಕ ನಷ್ಟದ ಜತೆಗೆ ನಿತ್ಯ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಜೀವಿಸಬೇಕಾಸ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಬೆಳೆಗಳ ಮೇಲೆ ಆನೆಗಳು ದಾಳಿ ನಡೆಸುತ್ತಲೇ ಇವೆ. ತಡರಾತ್ರಿ ಗಜಪಡೆಗಳು ಗ್ರಾಮದ ಕಾರಯ್ಯ ಎಂಬುವರ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ರಾಗಿ ಜೋಳ ಬೆಳೆಯನ್ನು ನಾಶಪಡಿಸಿದ್ದು, ಅಲ್ಲದೇ ಉಳಿದ ರೈತರ…
ಕೊರಟಗೆರೆ : ಭಾರತರತ್ನ, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಬಿಜೆಪಿ ವತಿಯಿಂದ ಭಾವಪೂರ್ಣವಾಗಿ ಆಚರಿಸಲಾಯಿತು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಪಟ್ಟಣದ ಬಿಜೆಪಿ ಪಂಚಜನ್ಯ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕೇಂದ್ರ ಸಚಿವ ಸೋಮಣ್ಣ, “ಅಟಲ್ ಬಿಹಾರಿ ವಾಜಪೇಯಿ ಅವರು ದೇಶ ಕಂಡ ಅಪರೂಪದ ನಾಯಕ. ರಾಜಕೀಯದಲ್ಲಿ ಶುದ್ಧತೆ, ಮಾತಿನಲ್ಲಿ ಸಂಯಮ ಹಾಗೂ ಆಡಳಿತದಲ್ಲಿ ದೃಢತೆ ಅವರ ವ್ಯಕ್ತಿತ್ವದ ಪ್ರಮುಖ ಲಕ್ಷಣಗಳಾಗಿದ್ದವು. ವಿರೋಧಿಗಳಿಂದಲೂ ಗೌರವ ಪಡೆದ ಮಹಾನ್ ರಾಜಕಾರಣಿ ಎಂದು ಸ್ಮರಿಸಿದರು. ಸ್ವರ್ಣ ಚತುಷ್ಪಥ ಯೋಜನೆ, ಗ್ರಾಮೀಣ ರಸ್ತೆ ಅಭಿವೃದ್ಧಿ, ಅಣುಶಕ್ತಿ ಪರೀಕ್ಷೆ ಮೂಲಕ ಭಾರತದ ಶಕ್ತಿ ಪ್ರದರ್ಶನ ಸೇರಿದಂತೆ ಅನೇಕ ಐತಿಹಾಸಿಕ ನಿರ್ಣಯಗಳನ್ನು ವಾಜಪೇಯಿ ಅವರು ಕೈಗೊಂಡರು,ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಅಟಲ್‌ಜಿ ಅವರ ದೂರದೃಷ್ಟಿಯೇ ಮೂಲ ಪ್ರೇರಣೆ ಎಂದು ಹೇಳಿದರು. ರಾಜಕೀಯದಲ್ಲಿ ಸೌಜನ್ಯ ಮತ್ತು…
ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತುಮಕೂರು ತಾಲೂಕಿನ ಡಿ ಕೊರಟಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಚ್ಚುತ್ತಿರುವುದನ್ನು ವಿರೋಧಿಸಿ, ಶಾಲೆ ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಮಾತನಾಡಿ, ಬರಿ ಗ್ರಾಮ ಪಂಚಾಯಿತಿಗೊಂದು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮಾಡಿ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಗ್ರಾಮದ ಬಡ ರೈತ–ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಮುಂದುವರೆದು ಮಾತನಾಡುತ್ತಾ, ಬಸವೇಗೌಡನಪಾಳ್ಯ, ಬಿದರಕಟ್ಟೆ, ಕಳ್ಳಿಪಾಳ್ಯ, ಬೊಮ್ಮನಹಳ್ಳಿ,, ಚಿಕ್ಕ ಕೊರಟಗೆರೆ ಮತ್ತು ಡಿ ಕೊರಟಗೆರೆ ಗ್ರಾಮಗಳ ಸರ್ಕಾರಿ ಶಾಲೆಗಳನ್ನು ಮುಚ್ಚಿ ಮಸ್ಕಲ್ ಗ್ರಾಮ ಪಂಚಾಯತಿಯ ಮ್ಯಾಗ್ನೆಟ್ ಶಾಲೆಗೆ ಸೇರಿಸಿ ಮಕ್ಕಳನ್ನು ದೂರದ ಶಾಲೆಗೆ ಕಳುಹಿಸಲಾಗುತ್ತದೆ. ಉಚಿತ ಬಸ್ ಸೌಲಭ್ಯ ಹೊರೆಯನ್ನು ಎಸ್ ಡಿಎಂಸಿ ಗೆ ವಹಿಸಿ, ಮ್ಯಾಗ್ನೆಟ್ ಶಾಲೆಯ ನಿರ್ವಹಣೆ ಹೊರಗುತ್ತಿಗೆ ನೀಡಲಾಗುತ್ತಿದೆ. ಇದು ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ, ಬಡ ಮಕ್ಕಳನ್ನು ಶಾಶ್ವತವಾಗಿ ದೂರ ತಳ್ಳುವ…
ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ವಿಭಿನ್ನ ಪ್ರಯತ್ನದ “ಕರಿಕಾಡ” ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರವು ಕನ್ನಡದಲ್ಲಿ ತಯಾರಾಗಿಯಾಗಿರುವ ಪಂಚಭಾಷೆ ಯಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಮೂರು ತಿಂಗಳ ಹಿಂದೆ ಟೈಟಲ್ ಟೀಸರ್ ರಿಲೀಸ್ ಮಾಡಿ ಸದ್ದು ಮಾಡಿದ್ದ ಕರಿಕಾಡ ಚಿತ್ರತಂಡ ಇದೀಗ ಅಧಿಕೃತ ಟೀಸರ್ ರಿಲೀಸ್ ಮಾಡಿ. ಗಮನ ಸೆಳೆದಿದೆ. ಟೀಸರ್ ಭರವಸೆ ಹುಟ್ಟಿಸ್ತಿದೆ. ಸಾಹಸಮಯ ದೃಶ್ಯಕಾವ್ಯವಾಗಿ, ಪ್ರೇಮಕಥೆಯ ರೂಪಕವಾಗಿ, ನಮ್ಮ ಮಣ್ಣಿನ ಸೊಗಡನ್ನ ಸೂಸುವಂತಹ ಕಥಾಹಂದರ ಹೊಂದಿರುವಂತೆ ಕಾಣ್ತಿದೆ. ರಿವೇಂಜ್ ಸ್ಟೋರಿಯಂತೆ ಭಾಸವಾಗ್ತಿರೋ ಈ ಸಿಮಾದ ತಾರಾಗಣ ಮತ್ತು ತಾಂತ್ರಿಕತೆ ಗಮನ ಸೆಳೆಯುತ್ತಿದೆ. ಕಾಡನಟರಾಜ್ ನಾಯಕ ನಟನಾಗಿ ಅಭಿನಯಿಸಿರೋ ಈ ಸಿನಿಮಾದಲ್ಲಿ ಬಲರಾಜವಾಡಿ , ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ತುಳು ಚಿತ್ರರಂಗದ ಚೆಲುವೆ ನಿರೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಈ ಚಿತ್ರದಲ್ಲಿ ಮಂಜು ಸ್ವಾಮಿ , ಗೋವಿಂದ ಗೌಡ , ದೀವಾಕರ್ , ಕಾಮಿಡಿ…
ತುಮಕೂರು: ನಗರದ ಅನನ್ಯ ಪಿಯು ಕಾಲೇಜಿನಲ್ಲಿ ಸ್ವರ ಸಿಂಚನ ಸುಗಮ ಸಂಗೀತ ಮತ್ತು ಜಾನಪದ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕುವೆಂಪು ದಿನಾಚರಣೆ ಅಂಗವಾಗಿ ‘ವಿದ್ಯಾರ್ಥಿಗಳೆಡೆ ಕುವೆಂಪು ಭಾವಗೀತೆಗಳ ನಡೆ’ ಎಂಬ 3 ದಿನಗಳ ಭಾವಗೀತೆಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಹಾಗೂ ಸ್ವರ ಸಿಂಚನ ಸುಗಮ ಸಂಗೀತ ಮತ್ತು ಜಾನಪದ ಅಕಾಡೆಮಿ ಅಧ್ಯಕ್ಷ ಮಲ್ಲಿಕಾರ್ಜುನ ಕೆಂಕೆರೆ, ರಾಷ್ಟ್ರಕವಿ ಕುವೆಂಪುರವರ ಭಾವಗೀತೆಗಳಲ್ಲಿ ಪ್ರಕೃತಿ ಪ್ರೀತಿ, ಮಾನವತಾವಾದ, ಭಾವಗೀತೆಗಳಲ್ಲಿ ಕಾಣುವ ಭಾಷಾ ಸೌಂದರ್ಯ, ರಸವತ್ತಾದ ಪ್ರಕೃತಿ ವರ್ಣನೆ ಮಾನವನ ಜೀವನ ತತ್ವಗಳ ದರ್ಶನವನ್ನು ಕಾಣಬಹುದಾಗಿದೆ ಎಂದರು. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಕುವೆಂಪು ಅವರ ಮಾತುಗಳು ಅವರ ಪ್ರತಿ ಗೀತೆಗಳಲ್ಲಿ ಕಾಣಬಹುದಾಗಿದೆ. ‘ಓ ನನ್ನ ಚೇತನ’, ‘ನೂರು ದೇವರನೆಲ್ಲ ನೂಕಾಚೆ ದೂರ’, ‘ಆನಂದಮಯ ಈ ಜಗ ಹೃದಯ’, ‘ಬಾರಿಸು ಕನ್ನಡ ಡಿಂಡಿಮವ’, ‘ಕನ್ನಡ ಎನೆ ಕುಣಿದಾಡುವುದೆನ್ನೆದೆ’, ‘ಭಾಗ್ಯ…
ಕುಣಿಗಲ್: ಇಂದಿನ ರಾಜಕಾರಣವು ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಧರ್ಮ, ಧರ್ಮಗಳ ನಡುವೆ, ಜಾತಿ, ಜಾತಿಗಳ ನಡುವೆ ಎತ್ತಿಕಟ್ಟುವಂತಹ ನೀಚ ಕೆಲಸ ಮಾಡಲಾಗುತ್ತಿದೆ, ಇದಕ್ಕೆ ಕುಮ್ಮಕ್ಕು ನೀಡಿದರೆ ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟ ಸಂವಿಧಾನ ಇನ್ನು ಹತ್ತು ವರ್ಷದಲ್ಲಿ ಇರುವುದಿಲ್ಲ ಎಂದು ಸಾಹಿತಿ ಚಾಣಗೆರೆ ವೆಂಕಟರಾಮಯ್ಯ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಗ್ರಂಥಾಲಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ.ಬಿ.ಆರ್. ಅಂಬೇಡ್ಕರ್, ಪ್ರಥಮ ಪ್ರಧಾನಿ ನೆಹರು ಅವರು ದೇಶವು ಜಾತ್ಯತೀತ, ಧರ್ಮತೀತ ದೇಶವಾಗಬೇಕೆಂದು ಸಂವಿಧಾನ ಕೊಟ್ಟರು, ಡಾ. ಅಂಬೇಡ್ಕರ್ ಅವರು ಸಂವಿಧಾನ ನೀಡದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ, ಶೂದ್ರರು, ದಲಿತರು, ಶ್ರಮಿಕರು ಬದುಕಲು ಸಾಧ್ಯವಿರುತ್ತಿರಲಿಲ್ಲ. ಇಂದು ಮನುವಾದ, ಮನುಸ್ಮೃತಿಯನ್ನು ತಂದು ಆ ಜಾಗಕ್ಕೆ ಕೂರಿಸಲು ಪ್ರಯತ್ನಿಸಲಾಗುತ್ತಿದೆ, ಹಾಗೇನಾದರೂ ಆ ಪವಿತ್ರ ಸ್ಥಳಕ್ಕೆ ಮನುವಾದಿಗಳನ್ನು ಕೂರಿಸಿದ್ದೇ ಆದಲ್ಲಿ ಎರಡು ವರೆ ಸಾವಿರಗಳ ವರ್ಷದ ಹಿಂದಕ್ಕೆ ಹೋಗಲಿದ್ದೇವೆ ಎಂದು ಎಚ್ಚರಿಸಿದರು. ಕನ್ನಡ ಉಳಿದಿರುವುದು ಹಳ್ಳಿಗಳಿಂದ: ಒಂದು ಕಾಲದಲ್ಲಿ ಕುಣಿಗಲ್…
ಔರಾದ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇದೇ ಡಿಸೆಂಬರ್ 30ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಂತಪುರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ.ರತಿಕಾಂತ್ ಸ್ವಾಮಿ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ರಕ್ತದಾನವು ಜೀವದಾನಕ್ಕೆ ಸಮಾನ. ತಾಲೂಕಿನ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಕ್ಕೆ ಆಗಮಿಸಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು” ಎಂದು ಕರೆ ನೀಡಿದ್ದಾರೆ. ರಕ್ತದಾನ ಮಾಡಲು ಆಸಕ್ತಿ ಇರುವವರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಡಾ. ಸಿದ್ಧಾರಡ್ಡಿ ಅವರ ದೂರವಾಣಿ ಸಂಖ್ಯೆ: 9663859062ಕ್ಕೆ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಈ ಸದವಕಾಶವನ್ನು ಬಳಸಿಕೊಂಡು ರಕ್ತದ ಅವಶ್ಯಕತೆ ಇರುವವರಿಗೆ ನೆರವಾಗಬೇಕೆಂದು ಆರೋಗ್ಯ ಕೇಂದ್ರದ ಪ್ರಕಟಣೆ ತಿಳಿಸಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಕೊರಟಗೆರೆ : ಕೊರಟಗೆರೆ ತಾಲ್ಲೂಕಿನ ಜನರೊಂದಿಗೆ ನನ್ನ 30 ವರ್ಷದ ಅವಿನಾಭಾವ ಸಂಬಂಧವಿದ್ದು, ನನ್ನ ಹುಟ್ಟು ಹಬ್ಬವನ್ನು ನನ್ನ ಅಭಿಮಾನಿಗಳು ಸಾರ್ವಜನಿಕ ಸೇವೆಯನ್ನಾಗಿ ಆಚರಿಸುತ್ತಿದ್ದಾರೆ ಎಂದು ಮಾಜಿ ಜಿಲ್ಲಾಪಂಚಾಯತ್ ಸದಸ್ಯರಾದ ಪಿ.ಎನ್. ಕೃಷ್ಣಮೂರ್ತಿ ತಿಳಿಸಿದರು. ಅವರು ಕೊರಟಗೆರೆ ಪ್ರವಾಸಿ ಮಂದಿರದಲ್ಲಿ ಅಭಿಮಾನಿಗಳು ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ನಾನು ಸುಮಾರು 30 ವರ್ಷಗಳಿಂದ ಕೊರಟಗೆರೆ ತಾಲ್ಲೂಕಿನಲ್ಲಿ ಸಾರ್ವಜನಿಕ ಸೇವಾ ಬದುಕಿನಲ್ಲಿ ಇದ್ದೇನೆ, ಡಿಸೆಂಬರ್ 27 ಶನಿವಾರದಂದು ನನ್ನ ಅಭಿಮಾನಿಗಳು ಹಿತೈಷಿಗಳು ನನ್ನ 59 ವರ್ಷದ ಹುಟ್ಟು ಹಬ್ಬವನ್ನು ಸಾರ್ವಜನಿಕ ಸೇವಾ ಕಾರ್ಯಕ್ರಮವನ್ನಾಗಿ ಅಚರಿಸುತ್ತಿದ್ದು, ಬೆಳಿಗ್ಗೆ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಬ್ರೆಡ್ ಹಾಗೂ ಬೆಚ್ಚನೆಯ ಹೊದಿಕೆಗಳನ್ನು ವಿತರಿಸಲಾಗುವುದು ಹಾಗೂ ಮದ್ಯಾಹ್ನ 1 ಗಂಟೆಗೆ ಕೊರಟಗೆರೆ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಬೆಚ್ಚನೆ ಉಡುಪುಗಳನ್ನು ನೀಡಲಾಗುವುದು. ನಂತರ ತುಮಕೂರು ನಗರದ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು ಅಲ್ಲಿಯೂ ಆಚರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾಜಿ ಪ.ಪಂ ಸದಸ್ಯ ಅಶ್ವಥನಾರಾಯಣರಾಜು, ಮುಖಂಡರುಗಳಾದ ವಿಜಯ್‌ಕುಮಾರ್, ರಮೇಶ್,…
ಕೊರಟಗೆರೆ : ಗೃಹ ಸಚಿವ ಹಾಗೂ ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ ರವರು ಇಂದು ಕೊರಟಗೆರೆ ತಾಲ್ಲೂಕಿನಲ್ಲಿ 4 ಕಡೆ ಹಾಲು ಶೇಖರಣಾ ಘಟಕಗಳನ್ನು ಉದ್ಘಾಟಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಕೊಡ್ಲಹಳ್ಳಿ ಅಶ್ವಥನಾರಾಯಣ್, ಅರಕೆರೆ ಶಂಕರ್ ತಿಳಿಸಿದ್ದಾರೆ. ಅವರು ಪತ್ರಿಕಾ ಹೇಳಿಕೆ ನೀಡಿ ಗೃಹ ಸಚಿವಾರದ ಡಾ.ಜಿ. ಪರಮೇಶ್ವರರವರು ಇಂದು ವಿವಿಧ ಭಾಗಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ಚನ್ನರಾಯನದುರ್ಗ ಹೋಬಳಿಯ ಅಗ್ರಹಾರ, ಕೊಳಾಲ ಹೋಬಳಿಯ ಬೈರಗೊಂಡ್ಲು, ಪುಟ್ಟಸಂದ್ರ ಗ್ರಾಮಗಳಲ್ಲಿ ಹಾಲಿ ಶೇಖರಣಾ ಘಟಕಗಳನ್ನು ಉದ್ಘಾಟಿಸಲಿದ್ದಾರೆ. ಕಸಬಾ ಹೋಬಳಿಯ ತೀತಾ ಗ್ರಾಮದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ, ನಂತರ ಹೊಳವನಹಳ್ಳಿ ಹೋಬಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆಯುವ ಯೇಸು ಕ್ರಿಸ್ತ ಜಯಂತೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ : ಉತ್ತಮ ಮತ್ತು ದಕ್ಷ ಆಡಳಿತದಿಂದ ತಾಲ್ಲೂಕು ಸರ್ವತೋಮುಖ ಪ್ರಗತಿ ಸಾಧ್ಯ ಎಂದು ತಹಶೀಲ್ದಾರ್ ಮಂಜುನಾಥ್ ಅಭಿಪ್ರಾಯಪಟ್ಟರು. ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಗ್ರಾಮೀಣ ಮಾಹಿತಿ ತಂತ್ರಜ್ಞಾನ ಕೇಂದ್ರ ಗರುಗದೊಡ್ಡಿ ಸಂಯುಕ್ತಾಶ್ರಯದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಉತ್ತಮ ಆಡಳಿತ ವಾರ’ ತಾಲ್ಲೂಕು ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆಡಳಿತ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಧ್ಯೇಯವಾಗಿದೆ ಎಂದರು. ಉತ್ತಮ ಆಡಳಿತದಿಂದ ಸಮಾಜದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಸಾಮಾಜಿಕ ಹಕ್ಕುಗಳೆಂದರೆ ಕೇವಲ ವಸತಿ, ಆಹಾರ ಮತ್ತು ಶಿಕ್ಷಣ ನೀಡುವುದಷ್ಟೇ ಅಲ್ಲ, ವೈಯಕ್ತಿಕ ಭದ್ರತೆ ನೀಡಿ, ಹಕ್ಕುಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ. ತಳಮಟ್ಟದಿಂದ ಆಡಳಿತವನ್ನು ಬಲಪಡಿಸುವ ಮತ್ತು ಸಾಮಾನ್ಯ ಜನರಿಗೆ ಸರ್ಕಾರಿ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ‘ಸುಶಾಸನ ಸಪ್ತಾಹ ಅಭಿಯಾನ’ದ ಮುಖ್ಯ ಗುರಿಯಾಗಿದೆ ಎಂದು ಹೇಳಿದರು. ಪೌತಿ ಖಾತೆ ಮಾಡುವಲ್ಲಿ ಕೊರಟಗೆರೆ ತಾಲ್ಲೂಕು ರಾಜ್ಯದಲ್ಲಿಯೇ ೬ನೇ ಸ್ಥಾನದಲ್ಲಿದೆ. ಕಂದಾಯ ಇಲಾಖೆಯ…