Subscribe to Updates
Get the latest creative news from FooBar about art, design and business.
- ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
- ತುಮಕೂರು| ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
- ಸರಗೂರು: ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
- ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
- ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
- ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
- ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
- ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
Author: admin
ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟನೆ ನೀಡಿದ್ದಾರೆ. ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಕೆಲ ಮಾಧ್ಯಮಗಳ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್ ಮಾಡಲಾಗಿದೆ ಎಂದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್ವೇರ್ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್ ಮಾಡಲಾಗಿದೆ ಎಂದು ತಿಳಿಸಿದರು. ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್ 12ರ ವರೆಗೆ ಕಾಲವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು…
ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ ಮಾಡಲು ಸ್ವಾಮೀಜಿಗಳ ನೇತೃತ್ವದಲ್ಲಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ನೈತಿಕ ಶಿಕ್ಷಣ ಪಠ್ಯ ವಿಭಾಗದಲ್ಲಿ ಭಗವದ್ಗಿತೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಕುರಿತು ರಾಜ್ಯದ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಮಿತಿ ರಚನೆ ಬಗ್ಗೆ ಶಿಕ್ಷಣ ಇಲಾಖೆ ಧರ್ಮಗುರುಗಳು, ಶ್ರೀಗಳೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸಮಿತಿಯಲ್ಲಿ ಸುತ್ತೂರು, ಆದಿಚುಂಚನಗಿರಿ, ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆ ಆಗಲಿದೆ. ಸಮಿತಿ ನೈತಿಕ ಶಿಕ್ಷಣ ಪಠ್ಯ ಹೇಗಿರಬೇಕು ಅಂತಾ ನಿರ್ಧಾರ ಮಾಡಲಿದೆ. ಯಾವ ಪಠ್ಯ ಸೇರ್ಪಡೆ ಮಾಡಬೇಕು? ಯಾರ ಪಠ್ಯ ಸೇರ್ಪಡೆ ಮಾಡಬೇಕು? ಎಂಬುದನ್ನ ನಿರ್ಧರಿಸಲಿದೆ. ರಾಮಾಯಣ, ಮಹಾಭಾರತ, ಭಗವದ್ಗೀತೆ ಸೇರಿದಂತೆ ಯಾವ-ಯಾವ ಮಹಾ ದಾರ್ಶನಿಕ ಗ್ರಂಥಗಳು ಪಠ್ಯದಲ್ಲಿ ಸೇರ್ಪಡೆ ಮಾಡಬೇಕು ಅಂತಾ ಸಮಿತಿ ನಿರ್ಧಾರ ಮಾಡಲಿದೆ. ಪಂಚತಂತ್ರ ಕಥೆಗಳು, ದಾರ್ಶನಿಕರ ಜೀವನ ಚರಿತ್ರೆ,…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದ ಕಾವಲಮ್ಮ ಕೆರೆ, ಮಾರೀಪಾಳ್ಯ ಕೆರೆ, ಅನುಪಲು ಕೆರೆ, ಸಿದ್ದರಬೆಟ್ಟದ ಕಟ್ಟೆ ಗೆ ಕ್ಷೇತ್ರದ ಶಾಸಕ ಡಾ.ಜಿ ಪರಮೇಶ್ವರ್ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರು ದಿವ್ಯಾಸನದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿತು. ನಂತರ ಕ್ಷೇತ್ರಪಾಲಕಿ ಶಕ್ತಿ ದೇವತೆಯಾದ ಶ್ರೀ ಕಾವಲಮ್ಮ ದೇವಿಗೆ ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರು ಮತ್ತು ಶಾಸಕ ಡಾ.ಜಿ ಪರಮೇಶ್ವರ್ ವಿಶೇಷ ಪೂಜೆ ಸಲ್ಲಿಸಿದರು. ನಂತರ ನೇಗಲಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮಕ್ಕೆ ಮರೇನಾಯಕನಹಳ್ಳಿ,ನೇಗಲಾಲ, ಮಾರೀಪಾಳ್ಯ,ಅನುಪಲು,ಗಟ್ಟಿ ತಿಮ್ಮನಹಳ್ಳಿ ಗ್ರಾಮದ ಸಹಸ್ರಾರು ಮಂದಿ ಮಹಿಳೆಯರು ಕುಂಭ ಕಳಸಗಳನ್ನೂ ಹೊತ್ತು ಮತ್ತು ವೀರಗಾಸೆ ನೃತ್ಯದೊಂದಿಗೆ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರನ್ನು…
ಧಾರವಾಡ : ಕ್ರಾಸ್‌ನಲ್ಲಿ ರೋಡ್ ಕ್ರಾಸ್ ಮಾಡುವಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳಗಲಿ ಕ್ರಾಸ್ ಬಳಿ ಸಂಭವಿಸಿದೆ. 29 ವರ್ಷದ ಮಹಮ್ಮದ್ ನವಾಜ್ ಮೃತ ದುರ್ದೈವಿ. ಲಾರಿ ಡಿಕ್ಕಿಗೆ ಬೈಕ್ ಬಹುದೂರಕ್ಕೆ ಹೋಗಿ ಬಿದ್ದಿದ್ದು, ನವಾಜ್ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಮೃತ ಮಹಮ್ಮದ್ ನವಾಜ್ ಹುಬ್ಬಳ್ಳಿಯ ತಬೀಬ್‌ಲ್ಯಾಂಡ್ ನಿವಾಸಿಯಾಗಿದ್ದು, ಕೆಲಸದ ನಿಮಿತ್ತ ಧಾರವಾಡ ಕಡೆಗೆ ಬಂದಿದ್ದರು. ಲಾರಿ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ನವಾಜ್ ಪ್ರಾಣ ಕಳೆದುಕೊಳ್ಳುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿಯಾಗೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನವೆಂಬರ್ 26ನೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ನವೆಂಬರ್ 26 ಈ ದಿನವನ್ನು ಭಾರತ ಸಂವಿಧಾನವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪತ್ರದಲ್ಲಿ ಸೂಚಿಸಿರುವಂತೆ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳ ಅರಿವನ್ನು ಮೂಡಿಸುವಂತಹ Know Your Constitution ಕಾರ್ಯಕ್ರಮವನ್ನು ಶಾಲಾ ಹಂತದಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಆಯೋಜಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಶಾಲೆಗಳಲ್ಲಿ ದಿನಾಂಕ:26.11.2022ರಂದು ಬೆಳಿಗ್ಗೆ 11:00 ಗಂಟೆಗೆ ಏಕಕಾಲಕ್ಕೆ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು, ಶಾಲಾ ಆವರಣದಲ್ಲಿನ ಪ್ರಮುಖ ಸ್ಥಳದಲ್ಲಿ ಭಾರತ ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಕರ್ತವ್ಯಗಳು ಮತ್ತು ಶಾಲೆಗಳಲ್ಲಿ ಸಂವಿಧಾನದ ವಿವಿಧ ಅಂಶಗಳ ಕುರಿತು ಚರ್ಚಾ ಸ್ಪರ್ಧೆ, ರಸಪ್ರಶ್ನೆಗಳು / ಪ್ರಬಂಧ ಸ್ಪರ್ಧೆಗಳು…
ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೇ ನವೆಂಬರ್ 23 ರಂದು ನಡೆಯಲಿದೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ರಾಜ್ಯದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಕಾನೂನು ತಂಡಕ್ಕೆ ಸಹಕಾರ ನೀಡಲು ಮತ್ತು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ನೇಮಕ ಮಾಡಿದೆ. ಭಾಷಾವಾರು ಪ್ರಾಂತ್ಯ ರಚನೆಗಾಗಿ ಕೇಂದ್ರ ಸರ್ಕಾರ 1953ರಲ್ಲಿ ಫಸಲ್ ಅಲಿ ನೇತೃತ್ವದ ಸಮಿತಿ ರಚನೆಯಾಗಿತ್ತು, 1955ರಲ್ಲಿ ಫಸಲ್ ಅಲಿ ಆಯೋಗದ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂಬೈ ಪ್ರಾಂತ್ಯದಲ್ಲಿದ್ದ ಬೆಳಗಾವಿ ಸೇರಿ 865 ಗಡಿ ಪ್ರದೇಶಗಳು ಮೈಸೂರು ರಾಜ್ಯಕ್ಕೆ ಸೇರ್ಪಡೆಯಾಗಬೇಕೆಂದು ವರದಿಯಲ್ಲಿತ್ತು, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಮೆಹರ್ ಚಂದ್ ಮಹಾಜನ್ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿ 1967ರಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಮಹಾಜನ್ ವರದಿಯಲ್ಲೂ ಕೂಡ ಬೆಳಗಾವಿ…
ವಿಜಯಪುರ: ಮಂಗಳೂರಿನ ಆಟೋದಲ್ಲಿ ಉಂಟಾದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಬಾಯಿ ಮಾತಲ್ಲಿ ಕಠಿಣ ಕ್ರಮ ಎಂದು ಹೇಳಿದರೆ ಸಾಕಾಗಲ್ಲ, ಎನ್ ಕೌಂಟರ್ ಮಾಡಿ ಬುದ್ಧಿ ಕಲಿಸಬೇಕು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದ ಮಾದರಿ ಇಲ್ಲೂ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರಿಗೆ ಫ್ರೀಹ್ಯಾಂಡ್ ಕೊಡಿ ಎಂದು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ಇಲ್ಲದಿದ್ದರೆ ಉಗ್ರರು ರಾಜಾರೋಷವಾಗಿ ದುಷ್ಕೃತ್ಯ ಎಸಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಒಳ್ಳೆಯವರು, ಆದರೆ ಕಠಿಣಕ್ರಮ ಕೈಗೊಳ್ಳುತ್ತಿಲ್ಲ. ಒಳ್ಳೆಯತನ ನಡೆಯಲ್ಲ, ಖಡಕ್ ಆಗಿ ನಿರ್ಣಯ ಕೈಗೊಳ್ಳಬೇಕು. ಸಿಎಂ ಬೊಮ್ಮಾಯಿ ಅದನ್ನು ಮಾಡುತ್ತೇನೆ, ಇದನ್ನು ಮಾಡುತ್ತೇನೆ ಅಂತಾರೆ. ಆದರೆ ಆದಷ್ಟು ಬೇಗ ಒಳ್ಳೆಯ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನವದೆಹಲಿ: ಖ್ಯಾತ ತಂಪು ಪಾನೀಯ ಬ್ರ್ಯಾಂಡ್ ರಸ್ನಾವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಸಮೂಹದ ಸಂಸ್ಥಾಪಕ ಅರೀಜ್ ಫಿರೋಜ್ ಶಾ ಖಂಬಾಟ್ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ಅರೀಜ್ ಖಂಬಾಟ್ ಬೆನಿವೊಲೆಂಟ್ ಟ್ರಸ್ಟ್ ನ ಅಧ್ಯಕ್ಷರೂ ಆಗಿದ್ದರು. ಪಾರ್ಸಿ ಇರಾನಿ ಝಾರ್ಥೋಸ್ಟಿಸ್ ನ ವಿಶ್ವ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅರೀಜ್ ಫಿರೋಜ್ಶಾ ಅವರು ಭಾರತೀಯ ಕೈಗಾರಿಕೆ, ಉದ್ಯಮ, ಸಾಮಾಜಿಕ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜ ಸೇವೆಯ ಮೂಲಕವೂ ಪ್ರಸಿದ್ಧರಾಗಿದ್ದರು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯವಾಡ: ವಿಧಿಯ ಆಟದಲ್ಲಿ ಮಗಳನ್ನು ಕಳೆದುಕೊಂಡ ತಂದೆಯೊಬ್ಬ ಬಳಿಕ ಆಕೆಯನ್ನು ಮರೆಯಲಾಗದೇ ಮಗಳ ಮೂರ್ತಿಯನ್ನು ಸ್ಥಾಪಿಸಿ, ದೇವಸ್ಥಾನ ನಿರ್ಮಿಸಿ ನಿತ್ಯವು ಪೂಜೆ ಮಾಡುತ್ತಿರುವ ಅಪರೂಪದ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ವೆಂಕಟಾಚಲಂ ಮಂಡಲದ ಕಾಕೂಟೂರಿನ ಚೆಂಚಯ್ಯ ಮತ್ತು ಲಕ್ಷ್ಮಮ್ಮ ದಂಪತಿಗೆ ಐವರು ಮಕ್ಕಳು. ಅದರಲ್ಲಿ ನಾಲ್ಕನೇ ಮಗಳ ಹೆಸರು ಸುಬ್ಬಲಕ್ಷ್ಮಮ್ಮ. ಈಕೆ ಹುಟ್ಟಿದ ಮೇಲೆ ಕುಟುಂಬ ಆರ್ಥಿಕವಾಗಿಯೂ ಸದೃಢವಾಯಿತು. ಹೀಗಾಗಿ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಅಲ್ಲದೆ, ಮಗಳಿಗೆ ಅರಣ್ಯ ಇಲಾಖೆಯಲ್ಲಿ ಕೆಲಸ ಸಿಕ್ಕಿದಾಗ ಅವರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿತ್ತು. ಆದರೆ, ಆ ಸಂತೋಷ ಹೆಚ್ಚು ದಿನ ಇರಲಿಲ್ಲ. 2011ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಬ್ಬಲಕ್ಷ್ಮಮ್ಮ ಪ್ರಾಣ ಕಳೆದುಕೊಂಡಿದ್ದಳು. ಆಕೆಯ ಸಾವಿನಿಂದಾಗಿ ಕುಟುಂಬಕ್ಕೆ ಬರಸಿಡಿಲು ಬಡಿದಂತಾಯಿತು. ಒಂದು ದಿನ ತಂದೆ ಚೆಂಚಯ್ಯಯ ಕನಸಿನಲ್ಲಿ ಮಗಳು ಸುಬ್ಬಲಕ್ಷ್ಮಮ್ಮ ಕಾಣಿಸಿಕೊಂಡಳಂತೆ. ಆಕೆಯ ಬಯಕೆಯಂತೆ ದೇವಸ್ಥಾನ ಕಟ್ಟಿದ್ದಾಗಿ ಚೆಂಚಯ್ಯ ಹೇಳಿದ್ದಾನೆ. ಮಗಳ ಮೂರ್ತಿಯನ್ನು ಸ್ಥಾಪಿಸಿ, ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಅಲ್ಲದೆ, ಪ್ರತಿ…
ಕೊರಟಗೆರೆ: ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ 1120ನೇ ಮದ್ಯವರ್ಜನ ಶಿಬಿರವನ್ನು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮುರುಳೀಧರ ಹಾಲಪ್ಪ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಗಳಾದರೂ ತಮ್ಮ ಕುಟುಂಬಕ್ಕೆ ಅಲ್ಲಿ ಬಡವ ಶ್ರೀಮಂತ ಎಂದು ಬರುವುದಿಲ್ಲ, ಮದ್ಯಪಾನ, ಧೂಮಪಾನ ಇತರೆ ದುಶ್ಚಟಗಳಿಗೆ ದಾಸರಾದರೆ ಅವರ ಕುಟುಂಬ ಬೀದಿ ಪಾಲಾಗುತ್ತದೆ. ಅದರಲ್ಲೂ ಬಡ ಕುಟುಂಬಗಳು ಪ್ರತಿನಿತ್ಯ ಕೂಲಿ ಮಾಡಿ ಜೀವನ ಸಾಗಿಸಬೇಕು, ಕೂಲಿ ಮಾಡಿ ಸಂಪಾದಿಸುವ ಹಣವನ್ನು ಮದ್ಯಪಾನ ಇನ್ನಿತರ ಚಟಗಳಿಗೆ ದಾಸರಾದರೆ, ಕುಟುಂಬದ ಪಾಡೇನು, ಆದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಪರಮ ಪೂಜ್ಯ ಶ್ರೀ ವೀರೇಂದ್ರ ಹೆಗಡೆಯವರ ಈ ಒಂದು ಮಧ್ಯವರ್ಜನ ಶಿಬಿರ ಕಾರ್ಯಕ್ರಮದ ಅಡಿಯಲ್ಲಿ ಇಲ್ಲಿ ಬಂದಿರುವ ಮದ್ಯ ವೇಸನಿಗಳು ತಮ್ಮ ದುಶ್ಚಟಗಳನ್ನು ಬಿಟ್ಟು ತಮ್ಮ ಕುಟುಂಬದ ಜೊತೆ ಆನಂದವಾಗಿರುವುದನ್ನ ಒಮ್ಮೆ ಆಲೋಚಿಸಿ ನೋಡಿ, ತಮ್ಮ ಕುಟುಂಬದ ಹೆಣ್ಣು ಮಕ್ಕಳ…