Author: admin

ಕೊಪ್ಪಳ : ಮದುವೆ ಮನೆಯಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದ್ದು, ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಕೊಪ್ಪಳದ ವನಬಳ್ಳಾರಿ ಗ್ರಾಮದ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಸಿದ್ದರಾಮಯ್ಯ ಕಾಣಿಸಿಕೊಂಡಿದ್ದು, ಮದುವೆ ಮನೆಯ ವೇದಿಕೆಯನ್ನೇ ಬಳಸಿಕೊಂಡು ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದಾರೆ. ಕೊಪ್ಪಳದ ಕನಕಗಿರಿಗೆ ಶಿವರಾಜ ತಂಗಡಗಿ, ಕುಷ್ಟಗಿ ಕ್ಷೇತ್ರಕ್ಕೆ ಅಮರೇಗೌಡ ಭಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ ರಾಯರೆಡ್ಡಿ, ಕೊಪ್ಪಳಕ್ಕೆ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಿಂದ ಇಕ್ವಾಲ್ ಅನ್ಸಾರಿಗೆ ಈ ಈ ಬಾರಿ ಚುನಾವಣೆಯಲ್ಲಿ ಮತ ನೀಡುವಂತೆ ಸಿದ್ದರಾಮಯ್ಯ ಜನರಿಗೆ ಮನವಿ ಮಾಡಿದ್ದಾರೆ. ಇನ್ನೂ, ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ನೋಡೋಕೆ ನೂಕುನುಗ್ಗಲು ಸಂಭವಿಸಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ನಡೆದಿದೆ.…

Read More

ನವದೆಹಲಿ: ಪುಣೆಯ ನವಲೆ ಸೇತುವೆಯಲ್ಲಿ ಭಾನುವಾರ ಟ್ಯಾಂಕರ್ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, 30 ಮಂದಿ ಗಾಯಗೊಂಡಿದ್ದಾರೆ.  ಈ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪುಣೆ ಸಮೀಪದ ನವಲೆ ಬ್ರಿಡ್ಜ್​ನಲ್ಲಿ ನಡೆದಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿವೆ ಎಂದು ಪುಣೆ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಟ್ಯಾಂಕರ್‌ನ ಬ್ರೇಕ್ ವಿಫಲವಾಗಿದ್ದು, ಟ್ಯಾಂಕರ್ ಚಾಲಕನ ನಿಯಂತ್ರಣಕ್ಕೆ ಬಾರದೇ ಮತ್ತು ರಸ್ತೆಯಲ್ಲಿ ತೈಲ ಚೆಲ್ಲಿದ ಕಾರಣ ಅದು ಜಾರುವಂತಾಗಿ ಒಂದಕ್ಕೊಂದು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮುಂಬೈಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, 2 ಕಿ.ಮೀ.ಗೂ ಹೆಚ್ಚು ಜಾಮ್ ಉಂಟಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದು, ಸ್ಥಳಕ್ಕೆ ತಡವಾಗಿ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದಲ್ಲದೇ ಬಟ್ಟೆಯನ್ನು ಹರಿದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ಗ್ರಾಮಕ್ಕೆ ಬಂದಿದ್ದಾರೆ. ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಅಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರನ್ನು ಹಿಡಿದು ಎಳೆದಾಡಿದ್ದಾರೆ. ಪರಿಸ್ಥಿತಿ ಕೈ ಮೀರಿದ ವೇಳೆ ಲಾಠಿ ಲಾಠಿ ಚಾರ್ಜ್ ಮಾಡಿ ಶಾಸಕರನ್ನು ಕರೆದುಕೊಂಡು ಬಂದ ಕಾರಿನಲ್ಲಿ ಕೂಡಿಸಿದ್ದಾರೆ. ಈ ಸಂದರ್ಭದಲ್ಲಿ ಎಂ.ಪಿ. ಕುಮಾರಸ್ವಾಮಿ ಅವರ ಬಟ್ಟೆ ಹರಿದಿಲ್ಲ. ಆದ್ರೆ, ಕುಮಾರಸ್ವಾಮಿ ಅವರು ಈ ಘಟನೆ ಬಗ್ಗೆ ವಿಡಿಯೋ ಹೇಳಿಕೆಯೊಂದನ್ನು ನೀಡಿದ್ದು, ಆ ವಿಡಿಯೋದಲ್ಲಿ ಶಾಸಕರ ಶರ್ಟ್ ಹರಿದಿದೆ.…

Read More

ಕೊರಟಗೆರೆ: ಪ್ರತಿನಿತ್ಯ ತಮ್ಮ ಕೂಲಿ ಕೆಲಸವನ್ನು ಬಿಟ್ಟು ಕಚೇರಿಗಳತ್ತ ಅಲೆದಾಡುವ ರೈತರ ಹಾಗೂ ಸಾರ್ವಜನಿಕರ ಕಷ್ಟಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು  ತಹಶೀಲ್ದಾರ್ ನಾಹಿದ ಜಮ್ ಜಮ್ ಹೇಳಿದರು. ತಾಲ್ಲೂಕಿನ  ಕೋಳಾಲ ಹೋಬಳಿಯ ವೀರಪುರ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳೇ ಖುದ್ದಾಗಿ  ಹಳ್ಳಿಹಳ್ಳಿಗೆ ತಲುಪಿ ಜನರ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದರಿಂದಾಗಿ ಜನರು ತಾಲೂಕು ಕಚೇರಿಗೆ ಅಲೆಯುವುದು , ಅಧಿಕಾರಿಗಳಿಗಾಗಿ ಕಾಯುವುದು ತಪ್ಪುತ್ತದೆ ಎಂದರು. ಸಹಾಯಕ ಕೃಷಿ ನಿರ್ದೇಶಕರು ಹೆಚ್ ನಾಗರಾಜು ಮಾತನಾಡಿ, ನಮ್ಮ ತಾಲೂಕಿನ ರೈತರು ಬುದ್ಧಿವಂತರಾಗಿದ್ದಾರೆ ಅವರ ಜಮೀನುಗಳಲ್ಲಿ ಬೆಳೆಯುವ ಬೆಳೆಗಳಿಗೆ ಯಾವ ಯಾವ ಕಾಲದಲ್ಲಿ ಯಾವ ಬೆಳೆ  ಬೆಳೆಯಬೇಕು ಎನ್ನುವುದರ ಮಾಹಿತಿ ನಮ್ಮ ಬಳಿ ತಿಳಿದುಕೊಳ್ಳುತ್ತಾರೆ. ಅದರಲ್ಲೂ ಇತ್ತೀಚಿಗೆ ವಿದ್ಯಾವಂತ ಯುವಕರು ಕೂಡ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಅವರ ನೂತನ ಶೈಲಿಯ…

Read More

ಹೆಚ್.ಡಿ.ಕೋಟೆ: ಪುರಸಭಾ ವ್ಯಾಪ್ತಿಯಲ್ಲಿ ಬರುವ ವಡ್ಡರಗುಡಿ ಹಾಡಿಯನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಸೂಚನೆ ನೀಡಿದರು. ತಾಲೂಕಿನ ಹೊಸಹಳ್ಳಿ ಹಾಡಿ ವಿವೇಕಾನಂದ ಗಿರಿಜನ ಶೈಕ್ಷಣಿಕ ಕೇಂದ್ರದಲ್ಲಿ ಭಾನುವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಎರಡನೇ ದಿನದ ಗಿರಿಜನರ ಕುಂದುಕೊರತೆ ಸಮಾಲೋಚನೆ ಸಭೆಯಲ್ಲಿ ಗಿರಿಜನ ಮುಖಂಡರಿಂದ ಆಹುವಾಲು ಸ್ವೀಕರಿಸಿ ಮಾತನಾಡಿದರು. ವಡ್ಡರಗುಡಿ ಹಾಡಿಯನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತನೆ ಮಾಡದೆ ಪುರಸಭೆ ವ್ಯಾಪ್ತಿಗೆ ಸೇರಿಸಿರುವುದರಮದ ಹಾಡಿಯ ಜನರು ಮುಂದಿನ ದಿನಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ತೊಂದರೆ ಆಗುತ್ತದೆ ಹಾಗಾಗಿ ಶೀಘ್ರವಾಗಿ ಪರಿಶೀಲನೆ ನಡೆಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು. ಹಾಡಿಯ ಮುಖಂಡ ವಡ್ಡರಗುಡಿ ಚಿಕ್ಕಣ್ಣ ಮಾತನಾಡಿ, ಜಿಲ್ಲೆಯಲ್ಲಿ 125 ಹಾಡಿಗಳ ಪೈಕಿ ವಡ್ಡರಗುಡಿ ಹಾಡಿ ಒಂದನ್ನು ಪುರಸಭಾ ವ್ಯಾಪ್ತಿಗೆ ಸೇರಿಸಲಾಗಿದೆ. ಆದರೆ ಕಂದಾಯ ಗ್ರಾಮವನ್ನಾಗಿ ಸೇರ್ಪಡೆ ಮಾಡದೆ ಪುರಸಭೆ ಸೇರ್ಪಡೆ ಮಾಡಿರುವುದರಿಂದ 86 ಕುಟುಂಬಗಳಿಗೆ…

Read More

ಇಂದಿನ ಪತ್ರಿಕೆ ತಿರುವುತ್ತಿದ್ದೆ. ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಾರಣ ಪರೀಕ್ಷೆಯಲ್ಲಿ ಚೀಟಿ ಇಟ್ಟಿದ್ದಳೆಂದು ಕ್ಲಾಸ್ ಟೀಚರ್ ಬೈದಿದ್ದರು. ಅವಮಾನ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡಿದ್ದಳು. ಪೋಷಕರು ಮತ್ತು ಊರವರು ಶಾಲೆಯ ಮುಂದೆ ವಿದ್ಯಾರ್ಥಿನಿಯ ಶವ ಇಟ್ಟು ಧರಣಿ ಕೂತಿದ್ದರು. ಅವರ ಬೇಡಿಕೆ ಸ್ಪಷ್ಟ “ಹುಡುಗಿಯ ಸಾವಿಗೆ ಟೀಚರೇ ಕಾರಣ, ಅವರನ್ನು ನಮ್ಮ ಕೈಗೆ ಕೊಡಿ” ಬಹುಶಃ ಕೈಗೆ ಸಿಕ್ಕರೆ ಮಗುವಿನೊಂದಿಗೆ ಟೀಚರನ್ನೂ ಸಮಾಧಿ ಮಾಡುವ ಯೋಚನೆ ಇರಬಹುದು. ಸ್ವಲ್ಪ ದಿನದ ಮುಂಚೆ ಇದೇ ರೀತಿಯ ಪ್ರಸಂಗ ನಡೆದಿತ್ತು. ಪರೀಕ್ಷೆಯಲ್ಲಿ ಚೀಟಿ ಇಟ್ಟು ಸಿಕ್ಕಿಬಿದ್ದ ಹುಡುಗನೊಬ್ಬನನ್ನು ಶಿಕ್ಷಕಿ ಹೊರಗೆ ನಿಲ್ಲುವಂತೆ ಸೂಚಿಸಿದ್ದರು. ಹುಡುಗ ನೇರ ಅಪಾರ್ಟ್ ಮೆಂಟ್ ಗೆ ತೆರಳಿ, ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದ. ಕಾರಣ ಆತನಿಗೆ ಅದು ಸಹಿಸಲಾರದ ಅವಮಾನವಾಗಿತ್ತು. ಪೋಷಕರು ರೊಚ್ಚಿಗೆದ್ದು ಶಿಕ್ಷಕಿ ಮೇಲೆ ಕೇಸು ದಾಖಲಿಸಿದ್ದರು. ಈ ಎರಡೂ ಪ್ರಕರಣದಲ್ಲಿ ವಿದ್ಯಾರ್ಥಿಗಳು ಹತ್ತನೇ ತರಗತಿ ಕಲಿಯುತ್ತಿದ್ದರು. ಈ ಮೇಲಿನ ಎರಡು ಘಟನೆಗಳಲ್ಲದೆ ಇನ್ನೂ ನೂರಾರು ಘಟನೆಗಳು ನಮ್ಮ…

Read More

5 ಅಂತಸ್ತಿನ ವಸತಿ ಸಂಕೀರ್ಣ ಕುಸಿದ ಪರಿಣಾಮ 9 ಮಂದಿ ಮೃತಪಟ್ಟು ಒಬ್ಬರು ನಾಪತ್ತೆಯಾಗಿರುವ ಘಟನೆ ರಷ್ಯಾದ ಫೆಸಿಫಿಕ್ ದ್ವೀಪ ಸಕಲೇನ್ ನಲ್ಲಿ ಸಂಭವಿಸಿದೆ. ಗ್ಯಾಸ್ ಸ್ಫೋಟದಿಂದ ಕಟ್ಟಡ ಕುಸಿದಿದೆ ಎಂದು ಹೇಳಲಾಗಿದ್ದು, ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. 9 ಮೃತದೇಹಗಳು ಪತ್ತೆಯಾಗಿದ್ದು, ಒಬ್ಬರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 20 ಲೀಟರ್ ಅಡುಗೆ ಗ್ಯಾಸ್ ಸಿಲಿಂಡರ್ ಸಂಪರ್ಕ ಈ ಕಟ್ಟಡದ ವಸತಿಗಳಿಗೆ ಕಲ್ಪಿಸಲಾಗಿತ್ತು. ಸಿಲಿಂಡರ್ ಸ್ಫೋಟದಿಂದ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಐಟಿಟಿಎಫ್-ಎಟಿಟಿಯು ಏಷ್ಯನ್ ಕಪ್ ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಇತಿಹಾಸ ಬರೆದಿದ್ದಾರೆ. ಕಂಚಿನ ಪದಕಕ್ಕಾಗಿ ಶನಿವಾರ ನಡೆದ ವನಿತೆಯರ ಸಿಂಗಲ್ಸ್ ಪಂದ್ಯದಲ್ಲಿ ಮಾಣಿಕ್ ಬಾತ್ರಾ 4-2 (11-6, 6-11, 11-7, 12-10, 4-11, 11-2) ವಿಶ್ವದ 6ನೇ ಶ್ರೇಯಾಂಕಿತೆ ಹಾಗೂ ಮೂರು ಬಾರಿಯ ಏಷ್ಯನ್ ಚಾಂಪಿಯನ್ ಹೀನಾ ಹಯಾತ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದರು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮಾಣಿಕಾ ಬಾತ್ರಾ 4-2 ಸೆಟ್ ಗಳಿಂದ ಮಿಮಾ ವಿರುದ್ಧ ಆಘಾತ ಅನುಭವಿಸಿ ಫೈನಲ್ ಪ್ರವೇಶಿಸುವ ಅವಕಾಶದಿಂದ ವಂಚಿತರಾದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಕೇಂದ್ರ ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿದ ಆದೇಶದಲ್ಲಿ ರಾಷ್ಟ್ರಪತಿ ಅನುಮತಿ ಮೇರೆಗೆ ಅರುಣ್ ಗೋಯೆಲ್ ಯಾವಾಗ ಅಧಿಕಾರ ಸ್ವೀಕರಿಸುತ್ತಾರೆ ಅಂದಿನಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಹೇಳಿದೆ. 1985ರ ಬ್ಯಾಚ್ ನ ಅರುಣ್ ಗೋಯೆಲ್ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರ ಜೊತೆ ಕರ್ತವ್ಯ ನಿರ್ವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅನಾರೋಗ್ಯದಿಂದ ಮೃತಪಟ್ಟ ಗೆಳತಿಯ ಮೃತದೇಹಕ್ಕೆ ತಾಳಿ ಕಟ್ಟುವ ಮೂಲಕ ಪ್ರಿಯಕರ ಆಕೆಯ ಕೊನೆಯ ಆಸೆ ಈಡೇರಿಸಿದ ಮನಕಲಕುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಈ ಘಟನೆ ನಡೆದಿದೆ. ಮೊಯಿರ್‌ಗಾಂವ್ ನಿವಾಸಿ ಬಿಟುಪಾನ್ ತಮುಲಿ ಮೃತಪಟ್ಟ ಗೆಳತಿ ಕೊಸುವಾ ಗ್ರಾಮ ನಿವಾಸಿ ಪ್ರಾರ್ಥನಾ ಬೋರಾ ಮೃತದೇಹಕ್ಕೆ ತಾಳಿ ಕಟ್ಟಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೇ ಜೀವನದಲ್ಲಿ ಮದುವೆ ಆಗದೇ ಇರುವುದಾಗಿ ಘೋಷಿಸಿದ್ದಾರೆ. ಬಿಟುಪಾನ್ ತಮುಲಿ ಮತ್ತು ಪ್ರಾರ್ಥನಾ ಬೋರಾ ಪರಸ್ಪರ ಪ್ರೀತಿಸುತ್ತಿದ್ದು, ಎರಡೂ ಕುಟುಂಬಗಳು ಮದುವೆಗೆ ಒಪ್ಪಿಗೆ ನೀಡಿದ್ದವು. ಕೆಲ ದಿನಗಳ ಹಿಂದೆ ಪ್ರಾರ್ಥನಾ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಕೆಯನ್ನು ಗುವಾಹಟಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಂಜೆ ಪ್ರಾರ್ಥನಾ ಮೃತಪಟ್ಟಿದ್ದರು. ಗೆಳೆತಿಯ ಸಾವಿನ ಸುದ್ದಿ ತಿಳಿದ ಬಿಟುಪಾನ್ ತಮುಲಿಯ ದುಃಖ ತಡೆಯಲಾರದೇ ಮದುವೆಯ ಸಾಮಗ್ರಿಗಳೊಂದಿಗೆ ಅಂತ್ಯಕ್ರಿಯೆಗೆ ಬಂದಿದ್ದಾನೆ. ಅಲ್ಲಿಯೇ ಮೃತ ಗೆಳತಿ ಪ್ರಾರ್ಥನಾಳನ್ನೇ ಮದುವೆಯಾಗುವುದಾಗಿ ಘೋಷಿಸಿದ್ದಾನೆ. ಬಿಕ್ಕಿ ಬಿಕ್ಕಿ ಅಳುತ್ತಲೇ ಮದುವೆ ಕಾರ್ಯ ನೆರವೇರಿಸಿದ್ದಾನೆ. ಇದನ್ನು…

Read More