Author: admin

ಮುಂಬೈ: ನವೆಂಬರ್ 19ರಂದು ಇಂದಿರಾ ಗಾಂಧಿ ಜನ್ಮ ದಿನ ಇರುವುದರಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರು ಮಾತ್ರ ಭಾಗವಹಿಸಲಿದ್ದಾರೆ. ಇಂದಿರಾ ಗಾಂಧಿ ನೆನಪಿನಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಇಂದಿರಾಗಾಂಧಿ ಜಯಂತಿಯಂದು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ. ಇಡೀ ದಿನ ಮಹಿಳೆಯರು ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಖಚಿತಪಡಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹಿಂದೆ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದರು. ನೀವು ಈ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದೀರಿ. ಆ ತ್ಯಾಗ ವ್ಯರ್ಥವಾಗಲು ನಾನು ಬಿಡುವುದಿಲ್ಲ. ಈ ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಕುರಿತು ಟ್ವೀಟ್ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ವಿಜಯಪುರ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ, ಅದಕ್ಕಾಗಿಯೇ ಈ ತರಹದ ಹೇಳಿಕೆ ನೀಡುತ್ತಿದ್ದಾರೆ. ನನಗೆ ಗೋಕಾಕ್ ಬರಲು ಆಹ್ವಾನ ನೀಡಿದ್ದರು. ಆದ್ದರಿಂದ ನಾನು ಗೋಕಾಕ್ ಗೆ ಹೋಗಿದ್ದೆ, ಆ ಕ್ಷೇತ್ರಕ್ಕೆ ಹೋಗಲು ಯಾರಿಗೂ ಧಮ್ ಇಲ್ಲ ಎನ್ನುವಂತಾಗಿತ್ತು ಎಂದರು. ಸತೀಶ್ ಜಾರಕಿಹೊಳಿ ಅವರ ತಪ್ಪನ್ನು ಸರಿಮಾಡಿಕೊಳ್ಳಬೇಕು, ಇಂತಹ ಹೇಳಿಕೆಗಳನ್ನು ನೀಡಬಾರದು. ಅವರ ಅಂತ್ಯ ಕಾಲ ಹತ್ತಿರವಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಹಾರಾಷ್ಟ್ರ : ಆರ್ಡರ್ ಮಾಡಿದ ಮಟನ್ ಸೂಪ್​ನಲ್ಲಿ ಅನ್ನವನ್ನು ಕಂಡ ಇಬ್ಬರು ಯುವಕರು ವೇಟರ್​​ನನ್ನು ಹತ್ಯೆ ಮಾಡಿರುವ ಘಟನೆ ಪಿಂಪಲ್ ಸೌದಾಗರ್‌ನ ಸಾಸರವಾಡಿಯಲ್ಲಿ ನಡೆದಿದೆ. ಮೃತರನ್ನು ಮಂಗೇಶ್ ಸಂಜಯ್ ಪೋಸ್ತೆ(19) ಎಂದು ಗುರುತಿಸಲಾಗಿದೆ. ಆರೋಪಿಗಳಾದ ವಿಜಯರಾಜ್ ವಾಘಿರೆ ಮತ್ತು ಆತನ ಸಹಚರ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳಿಬ್ಬರು ಹೋಟೆಲ್ ​ಗೆ ತಿನ್ನಲು ಬಂದಿದ್ದರು. ವಿಜಯರಾಜ್ ಆರ್ಡರ್ ಮಾಡಿದ ಮಟನ್ ಸೂಪ್​ನಲ್ಲಿ ಅನ್ನದ ಕಣಗಳಿದ್ದವು. ಇದರಿಂದಾಗಿ ವೇಟರ್​​​ ಮತ್ತು ವಿಜಯರಾಜ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಮಂಗೇಶ್ ಜೊತೆ ಉಪಾಹಾರ ಗೃಹದ ಉದ್ಯೋಗಿ ಅಜಿತ್ ಮತ್ತು ಸಚಿನ್​ನ್ನು ಮರದ ಕೋಲಿನಿಂದ ಹೊಡೆದಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಮಂಗೇಶ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಶ್ರೀಗಂಧ ನೀತಿ -2022ಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದ್ದು, ರೈತರು ತಮ್ಮ ಜಮೀನಿನಲ್ಲಿ ಶ್ರೀಗಂಧ ಬೆಳೆದು ಮಾರಾಟ ಮಾಡಬಹುದು ಎಂದು ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದು. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಲಾಗಿದೆ. ಶ್ರೀಗಂಧ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ರೈತರು ಬೆಳೆಯುವ ಶ್ರೀಗಂಧಕ್ಕೆ ರಕ್ಷಣೆ ಒದಗಿಸಲಾಗುವುದು. ಪ್ರಸ್ತುತ ದಿನಗಳಲ್ಲಿ ಶ್ರೀಗಂಧ ಲಭ್ಯತೆಯ ಕೊರತೆ ಇದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಶ್ರೀಗಂಧ ಬೇಕಾಗಿದೆ. ಹೀಗಾಗಿ ಶ್ರೀಗಂಧ ಮಾರಾಟಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ದೇಶೀಯ ಸಿಲಿಂಡರ್  ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಪಿಜಿ ಸಿಲಿಂಡರ್ಗಳು ಶೀಘ್ರದಲ್ಲೇ ಕ್ಯೂಆರ್ ಕೋಡ್ಗಳೊಂದಿಗೆ ಬರಲಿವೆ. ಟ್ರ್ಯಾಕಿಂಗ್ ಮತ್ತು ಟ್ರೇಸ್ ಉಪಕ್ರಮವು ಸಿಲಿಂಡರ್ ಕಳವನ್ನು ತಡೆಯಲು ನೆರವಾಗಲಿದೆ.ಜೊತೆಗೆ ಸಿಲಿಂಡರ್‌ಗಳ ಉತ್ತಮ ದಾಸ್ತಾನು ನಿರ್ವಹಣೆಯನ್ನು ಪತ್ತೆಹಚ್ಚಲು ಮತ್ತು ಖಚಿತಪಡಿಸಿಕೊಳ್ಳಲು ಕೂಡ ಅನುಕೂಲ ಮಾಡಿಕೊಡಲಿದೆ. ಕ್ಯೂಆರ್ ಕೋಡ್ ಅನ್ನು ಅಸ್ತಿತ್ವದಲ್ಲಿರುವ ಸಿಲಿಂಡರ್‌ ಗಳಲ್ಲಿ ಅಂಟಿಸಲಾಗುವುದು ಮತ್ತು ಹೊಸದಕ್ಕೆ ಕೂಡ ಬೆಸುಗೆ ಹಾಕಲಾಗುತ್ತದೆ. ಕ್ಯೂಆರ್ ಕೋಡ್ ಸಕ್ರಿಯಗೊಳಿಸಿದಾಗ ಇದು ಗ್ಯಾಸ್ ಸಿಲಿಂಡರ್‌ ಗಳ ಕಳ್ಳತನ, ಟ್ರ್ಯಾಕಿಂಗ್ ಮತ್ತು ಟ್ರೇಸಿಂಗ್ ದಾಸ್ತಾನು ನಿರ್ವಹಣೆ ಹೀಗೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಹಾಯಕವಾಗಲಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮುಂಬೈ : ಮಹಾರಾಷ್ಟ್ರದಲ್ಲಿ ನಡೆದ 13 ವರ್ಷಗಳ ಹಿಂದಿನ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಸೇರಿ ಎಲ್ಲ ನಾಲ್ವರು ಆರೋಪಿಗಳನ್ನು ಮುಂಬೈ ವಿಶೇಷ ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನಾಲ್ವರನ್ನೂ ಆರೋಪ ಮುಕ್ತ ಮಾಡಲಾಗಿದೆ. 2009ರ ಜುಲೈ 29ರಂದು ಭಿಂಡಿ ಬಜಾರ್‌ನಲ್ಲಿ ಮತ್ತೊಬ್ಬ ಭೂಗತ ಪಾತಕಿ ಛೋಟಾ ಶಕೀಲ್ ಗ್ಯಾಂಗ್‌ನ ಆಸಿಫ್ ದಾಧಿ ಅಲಿಯಾಸ್ ಛೋಟೆ ಮಿಯಾನ್ ಮತ್ತು ಶಕೀಲ್ ಮೋದಕ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಛೋಟಾ ರಾಜನ್ ಈ ಜೋಡಿ ಕೊಲೆಗೆ ಸಂಚು ರೂಪಿಸಿದ್ದ ಆರೋಪ ಹೊತ್ತಿದ್ದರು. ಮೊಹಮ್ಮದ್ ಅಲಿ ಜಾನ್, ಪ್ರಣಯ್ ರಾಣೆ ಮತ್ತು ಉಮ್ಮದ್ ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ಆದರೆ, ಅಪರಾಧವನ್ನು ಸಾಬೀತುಪಡಿಸುವಲ್ಲಿ ಸಾಧ್ಯವಾಗಿಲ್ಲ. ಸಾಕ್ಷ್ಯಾಧಾರಗಳ ಕೊರತೆ, ಗುರುತಿನ ಪರೇಡ್ ವಿಫಲತೆ, ಶಸ್ತ್ರಾಸ್ತ್ರಗಳು ಮತ್ತು ಗುಂಡುಗಳು ಹೊಂದಿಕೆಯಾಗದ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಮುಂಬೈ ಸೆಷನ್ಸ್ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಎಂ.ಪಾಟೀಲ್ ತೀರ್ಪು ಪ್ರಕಟಿಸಿದ್ದಾರೆ.…

Read More

ಶಿರಸಿ: ಅತಿಕ್ರಮಣವಾಗಿರುವ ಮನೆ ಖಾಲಿ ಮಾಡಿಸಲು ಹೋದ ಸಂದರ್ಭದಲ್ಲಿ ಅರಣ್ಯ ಅಧಿಕಾರಿಯ ಕೈ ಬೆರಳು ಕತ್ತರಿಸಿದ ಘಟನೆ ಸಿದ್ದಾಪುರದ ಗವಿನಗುಡ್ಡದಲ್ಲಿ ನಡೆದಿದೆ. ವಿ ಟಿ ನಾಯ್ಕ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿ. ಮಹಾಬಲೇಶ್ವರ ಚಂದು ಮರಾಠಿ ಹಲ್ಲೆ ನಡೆಸಿದ ಆರೋಪಿ. ಇವರು ಹೊಸದಾಗಿ ನಿರ್ಮಾಣ ಮಾಡಿಕೊಂಡಿದ್ದ ಮನೆಯನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದರು. ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ಅರಣ್ಯ ಅಧಿಕಾರಿಯ ಕೈ ಬೆರಳನ್ನು ಮಹಾಬಲೇಶ್ವರ ಕತ್ತರಿಸಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಜೆಪಿಯವರು ಚುನಾವಣೆಯಲ್ಲಿ ಅಕ್ರಮ ಮಾಡಲು ಮತದಾರರ ಪಟ್ಟಿ ಪರಿಷ್ಕರಣೆಯನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ಕೊಟ್ಟಿದ್ದಾರೆ. ಇದು ಮಂತ್ರಿಗಳ ಬೇನಾಮಿ ಹೆಸರಿನಲ್ಲಿ ಇರುವ ಕಂಪನಿ ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇವಿಎಂ ಇರುವವರೆಗೆ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದರ ಬಗ್ಗೆ ನಾನು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ನಾನು ಸಾಫ್ಟ್ ಆಗಿಲ್ಲ. ಬಿಜೆಪಿ ಎಷ್ಟೇ ಕುತಂತ್ರ ಮಾಡಿದರೂ ಅಧಿಕಾರಕ್ಕೆ ಬರಲು ಆಗುವುದಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್​​ ಅಧಿಕಾರಕ್ಕೆ ಬರಲಿದೆ. ಆಗ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಚನ್ನಪಟ್ಟಣ ತಾಲೂಕಿಗೆ ಮನೆಗಳ ಮಂಜೂರಾತಿ ವಿಚಾರದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನನ್ನ ಪತ್ರಗಳಿಗೆ ಸೋಮಣ್ಣ ಹೇಗೆ ಸ್ಪಂದಿಸಿದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೂರು ಸಾವಿರ ಮನೆಗಳಿಗೆ 60 ಕೋಟಿ ಬೇಕಿತ್ತು. ಆದರೆ ಚುನಾವಣೆಗಾಗಿ…

Read More

ಉತ್ತರ ಬಂಗಾಳದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ವೇದಿಕೆಯಲ್ಲಿಯೇ ಅಸ್ವಸ್ಥಗೊಂಡಿದ್ದಾರೆ. ಶಿವಮಂದಿರದಿಂದ ಸೇವಕ್ ಕಂಟೋನ್ಮೆಂಟ್‌ವರೆಗಿನ ರಸ್ತೆಯ ಶಂಕುಸ್ಥಾಪನೆ ಮಾಡಲು ಗಡ್ಕರಿ ಸಿಲಿಗುರಿಗೆ ಬಂದಿದ್ದರು. ಕಾರ್ಯಕ್ರಮವನ್ನು ಡಾರ್ಜಿಲಿಂಗ್ ಜಂಕ್ಷನ್ ಬಳಿ ದಗಾಪುರ್ ಮೈದಾನದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು ವೇದಿಕೆಯಲ್ಲಿದ್ದಾಗ ಏಕಾಏಕಿ ಅನಾರೋಗ್ಯಕ್ಕೀಡಾದರು. ಕೂಡಲೇ ವೇದಿಕೆಯ ಹಿಂದಿನ ಗ್ರೀನ್ ರೂಮ್‍ಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಸಿಲಿಗುರಿಯಿಂದ ಗ್ರೀನ್ ಕಾರಿಡಾರ್ ಮೂಲಕ ವೈದರನ್ನು ಕರೆಸಿ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡ ಬಳಿಕ ಡಾರ್ಜಿಲಿಂಗ್ ಸಂಸದ ರಾಜು ಬಿಸ್ತಾ ಸಚಿವರನ್ನು ಮನೆಗೆ ಕರೆದುಕೊಂಡು ಹೋದರು. ಗಡ್ಕರಿ ರಕ್ತದಲ್ಲಿ ಸಕ್ಕರೆ ಪ್ರಮಾಣ ಇಳಿದಿದೆ. ಹೀಗಾಗಿ ವೈದ್ಯರ ಸೂಚನೆಯಂತೆ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಮನೆಯಲ್ಲಿಯೇ ಚಿಕಿತ್ಸೆ ನಡೆಯುತ್ತಿದ್ದು, ವೈದ್ಯರು ಕೂಡ ಅಲ್ಲಿಯೇ ಇದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಮುಂದಿನ ಚುನಾವಣೆಗಾಗಿ ಬೇರೆ ಕ್ಷೇತ್ರ ಹುಡುಕುತ್ತಿದ್ದೇನೆ ಅನ್ನುವುದು ಯಾರ ಕನಸೋ ಗೊತ್ತಿಲ್ಲ. ನಾನು ರಾಜಕೀಯಕ್ಕೆ ಬಂದಿರುವುದೇ ಮಂಡ್ಯಕ್ಕೋಸ್ಕರ. ರಾಜಕೀಯದಲ್ಲಿ ಏನೇನೋ ಆಗಬೇಕೆಂದು ಮಂಡ್ಯಕ್ಕೆ ಬಂದಿಲ್ಲ. ಇಂದಲ್ಲ ನಾಳೆ ರಾಜಕೀಯ ಬಿಡುತ್ತೇನೆ. ಆದರೆ ಮಂಡ್ಯ ಬಿಡಲ್ಲ. ಮಂಡ್ಯ ಬಿಟ್ಟು ಹೋಗಲ್ಲವೆಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಜನರ ಆಸೆಯಂತೆ ನಾನು ಮಂಡಕ್ಕೆ ಬಂದಿದ್ದು. ನಾನ್ಯಾಕೆ ಮಂಡ್ಯ ಜಿಲ್ಲೆ ಬಿಟ್ಟು ಮತ್ತೊಂದು ಕಡೆ ಹೋಗಬೇಕು ಎಂದು ಪ್ರಶ್ನಿಸುವ ಮೂಲಕ ಜೆಡಿಎಸ್​ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಸುಮಲತಾ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎನ್ನುವ ಚರ್ಚೆಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದು, ಈ ಮೂಲಕ ಎಲ್ಲಾ ಗೊಂದಗಳಿಗೆ ತೆರೆ ಎಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More