Author: admin

ಪಾವಗಡ: ತಾಲ್ಲೂಕಿನ ಯ.ನಾ.ಹೊಸಕೋಟೆ ಹೋಬಳಿಯ ಚಿಕ್ಕಜಾಲೋಡು ಗ್ರಾಮದಲ್ಲಿ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಮಂಗಳವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಚಿಕ್ಕಜಾಲೋಡು ಗ್ರಾಮದ ಸರಕಾರಿ ಶಾಲೆಯ ಸುತ್ತಮುತ್ತ ಮಳೆ ನೀರು, ಚರಂಡಿ ನೀರು ಸಂಗ್ರಹಗೊಂಡು ಪರಿಸರ ಮಾಲಿನ್ಯವಾಗುತ್ತಿದೆ. ಕ್ರಿಮಿಕೀಟಗಳು ಹೆಚ್ಚಾಗಿದ್ದು, ದುರ್ವಾಸನೆ ಬರುತ್ತಿದೆ. ಶಾಲಾ ಮಕ್ಕಳು, ಸಾರ್ವಜನಿಕರು ಕೊಳಚೆ ನೀರಿನಲ್ಲೇ ಓಡಾಡಬೇಕಾಗಿದೆ. ಈ ನೀರು ಖಾಸಗಿ ಜಮೀನಿನಲ್ಲಿ ಹರಿಯಬೇಕಾಗಿದೆ. ಆದರೆ ಖಾಸಗಿಯವರು ಇದಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದ ರಸ್ತೆ ಮೇಲೆ ನೀರು ಸಂಗ್ರಹಗೊಂಡು ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ದೂರು ನೀಡಿದ್ದೇವೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಚರಂಡಿ ಕಾಮಗಾರಿ ಆರಂಭಿಸುವುದಾಗಿ ಪಿಡಿಒ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಗಿದೆ. ಕಾಮಗಾರಿ ಆರಂಭಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಇದೇ ವೇಳೆ ದೊಡ್ಡಜಾಲೋಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ…

Read More

ಕೊರಟಗೆರೆ: ಕೊರಟಗೆರೆ ತಾಲೂಕ್ ಕವರ್ಗಲ್ ಕಂಬದಹಳ್ಳಿ ಕೆರೆ ಕಟ್ಟೆ ಒಡೆದ ಪರಿಣಾಮ ನೀರು ಕೊರಟಗೆರೆ ಜಂಪೇನಹಳ್ಳಿ, ಅಗ್ರಹಾರ ಕೆರೆಗೆ ಹರಿಯುತ್ತಿದ್ದು, ಇದರಿಂದಾಗಿ ಎರಡೂ ಕೆರೆಗೂ ಅಪಾಯವಾಗುವ ಸಾಧ್ಯತೆ ಇದ್ದು, ಸ್ಥಳಕ್ಕೆ ತಹಶೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯ ಕಟ್ಟೆ ಒಡೆದ ಪರಿಣಾಮ ನೀರು ರಭಸವಾಗಿ ನುಗುತ್ತಿದ್ದು, ರೈತರ ನೂರಾರು ಎಕರೆ ಜಮೀನು ನಷ್ಟವಾಗುವ ಭೀತಿ ಸೃಷ್ಟಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ್ ನಹೀದಾ ಜಮ್ ಜಮ್ ಸ್ಥಳಕ್ಕೆ ಭೇಟಿ ನೀಡಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ, ದೊಡ್ಡ ಗಾತ್ರದಲ್ಲಿ ಕುಸಿದು ಬಿದ್ದ ಪರಿಣಾಮ 2 ಗಂಟೆಯಲ್ಲಿ ನೀರು ಖಾಲಿಯಾಗಿತ್ತು. ಘಟನಾ ಸ್ಥಳಕ್ಕೆ ಅಧಿಕಾರಿಗಳ ಸ್ಥಳಕ್ಕೆ ದೌಡಾಯಿಸಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಆರ್ಥಿಕವಗಿ ಹಿಂದುಳಿದ ಬಡವರಿಗೆ ಶೇ.10 ರಷ್ಟು ಮೀಸಲಾತಿಗೆ ಸಿದ್ಧರಾಮಯ್ಯ ವಿರೋಧಿಸಿದ್ದಾರೆ. ಅವರು ತಮ್ಮನ್ನ ಹಿಂದುಳಿದ ವರ್ಗದ ಚಾಂಪಿಯನ್ ಎಂದುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಮೀಸಲಾತಿ ಬಗ್ಗೆ ಬಿಜೆಪಿ ಸಾಮಾಜಿಕ ನ್ಯಾಯದ ಕಳಕಳಿ ತೋರಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸ್ವಾಗತ ಮಾಡಿದ್ದಾರೆ. ಆದರೆ ಸಿದ್ಧರಾಮಯ್ಯ ಮಾತ್ರ ಇದನ್ನು ಟೀಕೆ ಮಾಡುತ್ತಾರೆ. ಬಡವರ ಮೇಲೆ ನಿಮಗೆ ಎಷ್ಟು ಕಾಳಜಿ ಎಂದು ಸ್ಪಷ್ಟಪಡಿಸಿ. ಕೇವಲ ಬಡವರ ಬಗ್ಗೆ ಭಾಷಣ ಮಾಡಿದರೇ ಪ್ರಯೋಜವಿಲ್ಲ. ಮಾಜಿ ಸಿಎಂ ಸಿದ್ಧರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಪಾಠ ಮಾಡಬೇಕು. ಸಿದ್ದರಾಮುಯ್ಯ ಸರ್ವಜ್ಞ ಅಲ್ಲ ಎಂದು ವಾಗ್ದಾಳಿ ನಡೆಸಿದರು. ಡಿಕೆ ಶಿವಕುಮಾರ್ ಅವರ ಆದೇಶವನ್ನ ಸಿದ್ಧರಾಮಯ್ಯ ಪಾಲಿಸುತ್ತಿಲ್ಲ ಚುನಾವಣೆಗೆ ಕ್ಷೇತ್ರವಿಲ್ಲದೇ ಒದ್ದಾಡುತ್ತಿದ್ದಾರೆ. ಸಿದ್ಧರಾಮಯ್ಯಗೆ ರಾಜಕೀಯ ಬದ್ಧತೆ ಇಲ್ಲ ಎಂದು ನುಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಬೆಂಗಳೂರು ಮಹಾನಗರದ ಅಂದಿನ ಜನಪ್ರಿಯ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿ ಒಂದು ದಶಕಕ್ಕಿಂತಲೂ ಹೆಚ್ಚಿನ ಸಮಯವಾಗಿದೆ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರುವವರಿಗೆ ಕೃಷ್ಣರಾಜಸಾಗರದ ಅತ್ಯಂತ ದೊಡ್ಡ ಜನಪ್ರಿಯತೆಯನ್ನು ಪಡೆದಂತಹ ಬೃಂದಾವನ ಉದ್ಯಾನವನದಲ್ಲಿರುವ ಸಂಗೀತ ಕಾರಂಜಿಯ ಬಗ್ಗೆ ತಿಳಿದೇ ಇರುತ್ತದೆ. ಬೆಂಗಳೂರಿಗರು ಒಂದು ಕಾಲದಲ್ಲಿ ಅಲ್ಲಿನ ಸಂಗೀತ ಕಾರಂಜಿಯನ್ನು ನೋಡಲು ಇಲ್ಲಿಂದ ಮಂಡ್ಯದಲ್ಲಿರುವ ಬೃಂದಾವನ ಉದ್ಯಾನವನಕ್ಕೆ ತೆರಳುತ್ತಿದ್ದರು. ಹಾಗಾಗಿ, ಸಂಬಂಧಪಟ್ಟ ಪ್ರಾಧಿಕಾರಗಳು ನಮ್ಮ ಬೆಂಗಳೂರಿನಲ್ಲಿಯೂ ಅದೇ ರೀತಿಯ ಒಂದು ಸಂಗೀತ ಕಾರಂಜಿಯನ್ನು ಸ್ಥಾಪಿಸಲು ನಿರ್ಧರಿಸಿದರು. ಇದರ ಫಲವಾಗಿ ೧೯೯೪ರಲ್ಲಿ ಬೆಂಗಳೂರಿನ ಇಂದಿರಾ ಗಾಂಧಿ ಸಂಗೀತ ಕಾರಂಜಿ ಅಸ್ತಿತ್ವಕ್ಕೆ ಬಂತು. ಈ ಕಾರಂಜಿ ೬೦ ಅಡಿ ಉದ್ದ ಹಾಗೂ ೧೫ ಅಡಿ ಅಗಲವಿದೆ. ಈ ಕಾರಂಜಿಯೂ ಸಹ ಬೆಂಗಳೂರಿಗರ ಪೈಕಿ ದೊಡ್ಡ ಹಟ್ ಆಗಿತ್ತು. ಆದರೆ ೨೦೧೨ರಲ್ಲಿ ಈ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತ್ತು. ಅಂದಿನಿಂದ ಇದನ್ನು ಸರಿಪಡಿಸಲಾಗಿಲ್ಲ. ಜೊತೆಗೆ, ಇಲ್ಲಿ ಒಂದು ಪುಟಾಣಿ ರೈಲು (ಟಾಯ್ ಟ್ರೇನ್) ಸಹ ಇದ್ದು, ಇದೂ ಸಹ ಈ…

Read More

ಹೆಸರಾಂತ ಲೇಖಕ ಸಿ. ಮೇರಿ ಜೋಸೆಫ್ ಅವರಿಗೆ ನವಂಬರ್ 26 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕುಮಾರ ಕೃಪಾ ರಸ್ತೆಯ ಗಾಂಧಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ “ರೆವೆರೆಂಡ್ ಕಿಟ್ಟಲ್” ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಬಿ.ವಿ. ಪಿಂಟೋ ಅವರು ಸಿ. ಮೇರಿ ಜೋಸೆಫ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು ಈ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ರೆವೆರೆಂಡ್ ಫರ್ಡಿನೆಂಡ್ ಕಿಟ್ಟಲ್ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯಲ್ಲಿ ಆಸ್ಪತ್ರೆಗೆ ಬಂದ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ವೈದ್ಯನೊಬ್ಬನ‌ನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದ ಮತ್ತಿಕೆರೆಯಲ್ಲಿರುವ ನ್ಯಾಚುರೋಪತಿ ಮತ್ತು ಅಕ್ಯುಪಂಕ್ಚರ್ ವೈದ್ಯ ವೆಂಕಟರಮಣ ಬಮಧಿತ ಆರೋಪಿ. ಚಿಕಿತ್ಸೆ ನೆಪದಲ್ಲಿ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದನೆಂದು ತಿಳಿದ ಮೇಲೆ ವೈದ್ಯನ ಮೊಬೈಲ್ ಪರಿಶೀಲಿಸಿ ಪೊಲೀಸರು ಬಂಧಿಸಿದ್ದಾರೆ. 14 ರಿಂದ 15 ವಯಸ್ಸಿನ ಹೆಣ್ಣುಮಕ್ಕಳ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದನೆಂದು ತಿಳಿದು ಬಂದಿದೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು‌ ಸಿಸಿಬಿಗೆ ವರ್ಗಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಈಗ ಮೈಸೂರಿನ ಬಿಜೆಪಿ ಶಾಸಕ ಹಾಗೂ ಸಂಸದರ ನಡುವೆ ಡೈರೆಕ್ಟ್ ಫೈಟ್ ಆಗಿದೆ. ಸಂಸದರು ಒಡೆಯುತ್ತೀನಿ ಎಂದ‌ ಮೇಲೆ ಕಳಶ ನಿರ್ಮಿಸಿಲ್ಲ. ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ, ಪ್ರತಾಪ್ ಸಿಂಹ ಹೇಳಿರುವಂತೆ ರಾತ್ರೋರಾತ್ರಿ ಕಳಸ ನಿರ್ಮಾಣ ಮಾಡಿಲ್ಲ, ಯಾವುದೇ ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ ಎಂದು ಶಾಸಕ ರಾಮದಾಸ್ ಗೂಗಲ್ ಫೋಟೊ ರಿಲೀಸ್ ಮಾಡಿದ್ದಾರೆ. ಮೈಸೂರಿನ ಬಸ್ ನಿಲ್ದಾಣಗಳು ಮುಸ್ಲಿಂ ಶೈಲಿಯ ಗುಂಬಜ್​ಗಳ ಮಾದರಿಯಲ್ಲಿ ನಿರ್ಮಾಣಗೊಂಡಿವೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ರಾಮದಾಸ್ ತಿರುಗೇಟು ನೀಡಿದ್ದಾರೆ. ಮೈಸೂರಿನ ಪಾರಂಪರಿಕ ಮಹತ್ವ ಸಾರಲು ಮೈಸೂರು ಅರಮನೆಯ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪಾಗಿ ಅರ್ಥೈಸುವ ಹುನ್ನಾರ ನಡೆದಿದೆ ಎಂದಿದ್ದಾರೆ. 10 ಲಕ್ಷ ವೆಚ್ಚದ ಬಸ್ ನಿಲ್ದಾಣ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ. ಇದನ್ನು ಮಹದೇವ್ ಎಂಬ ಗುತ್ತಿಗೆದಾರನಿಗೆ ನೀಡಲಾಗಿದೆ. ಬಸ್ ನಿಲ್ದಾಣಗಳ ವಿನ್ಯಾಸಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ರಚಿಸಲಿ.…

Read More

ನಮ್ಮರಾಜ್ಯಕ್ಕೆ ಬರಬೇಕಿರುವ ಜಿಎಸ್‌ಟಿ ಪಾಲನ್ನು ಕೊಡದಿದ್ದರೆ ಕೇಂದ್ರ ಸರ್ಕಾರಕ್ಕೆ ಜಿಎಸ್‌ಟಿ ಪಾವತಿ ಮಾಡುವುದನ್ನೇ ನಿಲ್ಲಿಸಬೇಕಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾ‌ರೆ. ಕೇಂದ್ರ ಸರ್ಕಾರ ಒಂದೋ ಜಿಎಸ್‌ಟಿ ಬಾಕಿಯನ್ನು ನೀಡಬೇಕು. ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಯಬೇಕು ಎಂದು ಮಮತಾ ಆಗ್ರಹಿಸಿದ್ದಾರೆ. ನರೇಗಾ ಯೋಜನೆಯ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ ಸಿಎಂ ಇದನ್ನು ವಿರೋಧಿಸಿ ಬುಡಕಟ್ಟು ಮಂದಿ ಬೀದಿಗೆ ಇಳಿಯಬೇಕು ಎಂದು ಹೇಳಿದ್ದಾರೆ. ನ್ಯಾಯಬದ್ಧವಾಗಿ ರಾಜ್ಯ ಸರ್ಕಾರಕ್ಕೆ ಬರಬೇಕಿರುವ ಪಾಲು ಪಡೆಯಲು ನಾವು ಕೇಂದ್ರ ಸರ್ಕಾರದ ಮುಂದೆ‌ ಭಿಕ್ಷೆ ಬೇಡುವುದಿಲ್ಲ, ನರೇಗಾ ಯೋಜನೆಯ ಹಣ ಬಿಡುಗಡೆ ಮಾಡುತ್ತಿಲ್ಲ. ನೀಡಬೇಕಿರುವ ಹಣ ನೀಡದಿದ್ದರೆ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಕಿಡಿ ಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು ನಗರದಲ್ಲಿ ಬೆಸ್ಕಾಂ ಗ್ರಾಹಕರು ಇನ್ಮುಂದೆ ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡುವಂತಿಲ್ಲ. ಹಾಗೆ ಮಾಡಿದರೆ ವಿದ್ಯುತ್ ಸಂಪರ್ಕದ ಲೈಸೆನ್ಸ್ ರದ್ದು ಮಾಡಲು ಬೆಸ್ಕಾಂ ಮುಂದಾಗಿದೆ. ಮೂರು ತಿಂಗಳು ವಿದ್ಯುತ್ ಬಿಲ್ ಕಟ್ಟಿಲ್ಲವೆಂದರೆ ಸಿಬ್ಬಂದಿ ಕರೆಂಟ್ ಫ್ಯೂಸ್ ತೆಗೆಯುವ ಬದಲು ಮನೆಯ ‌ವಿದ್ಯುತ್ ಸಂಪರ್ಕದ ಲೈಸೆನ್ಸ್ ನನ್ನೇ ರದ್ದು ಮಾಡ್ತಾರೆ. ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಂಡರೆ ಪುನಃ ಅರ್ಜಿ ಸಲ್ಲಿಸಿ ಹೊಸ ಕನೆಕ್ಷನ್ ತೆಗೆದುಕೊಳ್ಳಲೇಬೇಕು. ವಿದ್ಯುತ್ ಬಿಲ್ ಪಾವತಿಸುವಲ್ಲಿ ವಿಳಂಬ ಮಾಡಿದ್ರೆ ಕರೆಂಟ್ ಇಲ್ಲದೆ ಕತ್ತಲಲ್ಲೇ ಜೀವನ ನಡೆಸುವಂತಹ ಸ್ಥಿತಿ ಉಂಟಾಗಲಿದೆ. ತಿಂಗಳಿಗೆ ಸರಿಯಾಗಿ ಬಿಲ್ ಪಾವತಿಸದೆ ನಿರ್ಲಕ್ಷ್ಯ ತೋರುವರರ ವಿರುದ್ಧ ಬೆಸ್ಕಾಂ ಈ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಈ ಬಗ್ಗೆ ಬೆಸ್ಕಾಂ ಎಂ.ಡಿ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಳಿಸುವಂತಹ ತೊಂದರೆ ಬೇಡ ಅಂದರೆ ಸರಿಯಾದ ಟೈಮ್ ಗೆ ವಿದ್ಯುತ್ ಬಿಲ್ ಕಟ್ಟಿ ಎಂದು ಗ್ರಾಹಕರಿಗೆ ಮನವಿ ಮಾಡಿದ್ದಾರೆ. ಬೆಸ್ಕಾಂ ಎಂಡಿಯ…

Read More

ನಾವು ಪ್ರತಿಯೊಬ್ಬರ ನಂಬಿಕೆಯನ್ನು ಗೌರವಿಸಬೇಕು,ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂ. ವೈವಿಧ್ಯತೆಯಲ್ಲಿ ಏಕತೆ ಭಾರತದ ಪುರಾತನ ವೈಶಿಷ್ಟ್ಯ. ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿರುತ್ತದೆ. ಅವರ ಆಚರಣೆಗಳನ್ನು ಯಾರೂ ಬದಲಾಯಿಸುವ ಅಗತ್ಯವಿಲ್ಲ ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಛರಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮಾತನಾಡಿದ ಅವರು, ಎಲ್ಲರನ್ನು ತನ್ನೊಟ್ಟಿಗೆ ಕರೆದುಕೊಂಡು ಹೋಗುವುದನ್ನು ನಂಬುವ ವಿಶ್ವದ ಏಕೈಕ ಕಲ್ಪನೆ ಹಿಂದುತ್ವ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳು ಎಂದು ನಾವು 1925ರಿಂದಲೂ ಹೇಳುತ್ತಿದ್ದೇವೆ. ಭಾರತವನ್ನು ಮಾತೃಭೂಮಿ ಎಂದು ಪರಿಗಣಿಸುವವರು ವಿವಿಧತೆಯಲ್ಲಿ ಏಕತೆಯ ಸಂಸ್ಕೃತಿಯೊಂದಿಗೆ ಬದುಕಲು ಬಯಸುತ್ತಾರೆ. ಅವರು ಯಾವುದೇ ಧರ್ಮ, ಸಂಸ್ಕೃತಿ, ಭಾಷೆ ಮತ್ತು ಆಹಾರ ಪದ್ಧತಿ ಮತ್ತು ಸಿದ್ಧಾಂತವನ್ನು ಅನುಸರಿಸಿದರೂ ಅವರು ಹಿಂದೂಗಳೇ ಆಗಿರುತ್ತಾರೆ ಎಂದು ಹೇಳಿದ್ದಾರೆ. ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿರುತ್ತದೆ. ವೈವಿಧ್ಯತೆಗಳ ಜೊತೆಯಲ್ಲೇ ನಾವೆಲ್ಲರೂ ಒಟ್ಟಿಗೇ ಇದ್ದೇವೆ. ಪ್ರತಿಯೊಬ್ಬರೂ ತಮ್ಮ ನಮ್ಮ ಪೂರ್ವಜರು ನಂಬಿಕೆ ಮತ್ತು ಆಚರಣೆಗಳಿಗೆ ಅಂಟಿಕೊಳ್ಳಬೇಕು, ಇತರರ ನಂಬಿಕೆಯನ್ನು ಪರಿವರ್ತಿಸಲು ಪ್ರಯತ್ನಿಸಬಾರದು ಎಂದು ಕಲಿಸಿದರು. ಅದರಂತೆ ನಾವು…

Read More