Author: admin

ಬೆಂಗಳೂರು: ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ರೇಣುಕಾಸ್ವಾಮಿ  ಕೊಲೆ ಕೇಸ್​ನ ಎರಡನೇ ಆರೋಪಿ ದರ್ಶನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ನೀಡುವಾಗ ವಿದೇಶಕ್ಕೆ ತೆರಳುವಂತಿಲ್ಲ ಎಂಬ ಷರತ್ತನ್ನು ಕೋರ್ಟ್ ವಿಧಿಸಿತ್ತು. ಹೀಗೆ ತೆರಳಬೇಕು ಎಂದರೆ ಕೋರ್ಟ್ ಅನುಮತಿ ಕಡ್ಡಾಯ ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿತ್ತು. ಈಗ ದರ್ಶನ್ ಅವರು ವಿದೇಶಕ್ಕೆ ತೆರಳಲು ಅನುಮತಿ ಕೋರಿ 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೋರ್ಟ್ ಇದರಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಚೆನ್ನೈ: ಕನ್ನಡ ತಮಿಳಿನಿಂದ ಹುಟ್ಟಿತು ಎನ್ನುವ ತಮಿಳಿನ ಮೆಗಾಸ್ಟಾರ್ ಕಮಲ್ ಹಾಸನ್ ಅವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ಹುಟ್ಟಿಕೊಂಡ ಬೆನ್ನಲ್ಲೇ  ತಮ್ಮ ಹೇಳಿಕೆಗೆ ಕಮಲ್ ಹಾಸನ್ ವಿವರಣೆ ನೀಡಿದ್ದಾರೆ. ಥಗ್ ಲೈಫ್ ನಟ– ಕಮ್ ರಾಜಕಾರಣಿ ಕಮಲ್ ಹಾಸನ್, “ನಾನು ಪ್ರೀತಿಯಿಂದ ಹೇಳಿದ್ದೇನೆ. ಬಹಳಷ್ಟು ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ನಾನು ಬೇರೆನೂ ಹೇಳಿಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ತಮಿಳುನಾಡು ಎಲ್ಲರಿಗೂ ಆಶ್ರಯ ನೀಡುವ ಅಪರೂಪದ ರಾಜ್ಯವಾಗಿದೆ.‘ತಮಿಳುನಾಡಿನಲ್ಲಿ ಮೆನನ್ ಮುಖ್ಯಮಂತ್ರಿ ಆಗಿದ್ದರು. ರೆಡ್ಡಿ ಒಬ್ಬರು ಮುಖ್ಯಮಂತ್ರಿ ಆಗಿದ್ದಾರೆ. ತಮಿಳರೊಬ್ಬರು ಸಿಎಂ ಆಗಿದ್ದು, ಕನ್ನಡಿಗ ಅಯ್ಯಂಗಾರ್ ಒಬ್ಬರು ಮುಖ್ಯಮಂತ್ರಿಯಾಗಿದ್ದಾರೆ ಎಂದು ತಿಳಿಸಿದರು. ಥಗ್ ಲೈಫ್ ಬ್ಯಾನ್ ಕುರಿತ ಕರೆಗೆ ಪ್ರತಿಕ್ರಿಯಿಸಿದ ಕಮಲ್ ಹಾಸನ್, ಕರ್ನಾಟಕದ ಜನರು ನನ್ನನ್ನು ಮತ್ತು ನನ್ನ ಸಿನಿಮಾ ನೋಡಿಕೊಳ್ಳುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. ಕರ್ನಾಟಕದಿಂದ ಬಂದ ಮುಖ್ಯಮಂತ್ರಿಯೊಬ್ಬರಿಂದ (ಜಯಲಲಿತಾ) ಸಮಸ್ಯೆ ಎದುರಾದಾಗ ನನಗೆ ಬೆಂಬಲ ನೀಡಿದ್ದು ಕರ್ನಾಟಕ. ಇಲ್ಲಿಗೆ ಬಾ, ಮನೆ ಕೊಡುತ್ತೇವೆ, ಎಲ್ಲೂ…

Read More

ತುಮಕೂರು: ಸಂವಿಧಾನಾತ್ಮಕ ಮೌಲ್ಯಗಳು ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಬುಧವಾರ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರುನಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ ಆರ್. ಮಾತನಾಡಿ,  ಭಾರತದ ಸಂವಿಧಾನ ನಮ್ಮ ಜೀವ ಮತ್ತು ಜೀವನದ ವಿಧಾನಗಳ ರಕ್ಷಕವಾಗಿದೆ. ನಮ್ಮ ವ್ಯಕ್ತಿತ್ವದ ಘನತೆ ಮತ್ತು ಗೌರವಗಳ ಉನ್ನತಿಯ ಮಾರ್ಗದರ್ಶಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಂವಿಧಾನದ ಮೌಲ್ಯಗಳನ್ನು ಅನುಸರಿಸಬೇಕು. ಮತ್ತು  ಕುಟುಂಬ, ಸಮಾಜ, ಸಂವಿಧಾನ, ದೇಶದ ಪ್ರಭಾವಿ ಪ್ರಜೆಯಾಗಿ ಹೊರಹೊಮ್ಮಲು ಇದು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ತುಮಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸಯೀದ್ ಅಕ್ರಂ ಅಲಿ ಅವರು ಮಾತನಾಡಿ, ಪ್ರಸ್ತುತ ಜನಪ್ರತಿನಿಧಿಗಳು, ಸರ್ಕಾರಗಳು, ಮತ್ತು ನ್ಯಾಯಾಂಗಗಳ ವರ್ತನೆ ಸಂವಿಧಾನಾತ್ಮಕವಾಗಿರಬೇಕು. ದೇಶದ ಪ್ರಜೆಗಳು ಇಂದು ತಮ್ಮ ಜವಾಬ್ದಾರಿಗಳನ್ನು ಅರಿತು ನಡೆದುಕೊಳ್ಳುವ ಅನಿವಾರ್ಯತೆಗಳ ಅರಿವಿನ ಬಗ್ಗೆ ಮಾಹಿತಿ ತಿಳಿಸಿದರು. ಪ್ರಾಂಶುಪಾಲರಾದ ಸಿ. ಸಿ.ಬಾರಕೇರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,  ಸಂವಿಧಾನದಲ್ಲಿ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಲಾಗಿದೆ. ನಾವುಗಳು…

Read More

ಬೀದರ್ : ಸಾರ್ವಜನಿಕರು ಕೊರೋನಾ ಬಗ್ಗೆ ಭಯ ಪಡುವ ಅಗತ್ಯವಿಲ್ಲ, ಜಾಗೃತಿ ಅಗತ್ಯವಾಗಿದೆ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಪರಿಸ್ಥಿತಿ ಎದುರಿಸಲು ಬ್ರಿಮ್ಸ್ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ನೀಡುವ ಮುನ್ನೆಚ್ಚೆರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಗಳ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಸಂಗ್ರಹಿಸಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಪಕ್ಕದಲ್ಲಿರುವ ವ್ಯಕ್ತಿಗೆ ತುಂತುರು ಹನಿಗಳ ಮೂಲಕ ಈ ರೋಗ ಹರಡುತ್ತದೆ. ಆದುದ್ದರಿಂದ ಕೆಮ್ಮು, ನೆಗಡಿ ಹೊಂದಿರುವ ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿದಾಗ ಮೂಗು ಹಾಗೂ ಬಾಯಿ ಮುಚ್ಚಿಕೊಳ್ಳಲು ಮಾಸ್ಕ್ ಬಳಸಬೇಕು. ಈ ತರಹದ ಲಕ್ಷಣ ಹೊಂದಿರದ ವ್ಯಕ್ತಿಗಳು ಮಾಸ್ಕ್ ಬಳಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಮಾಹಿತಿ…

Read More

ಅರಸಿಕೆರೆ: ತಾಲ್ಲೂಕಿನ ಮಾವಿನಕೆರೆ ಗ್ರಾಮದ ಶ್ರೀ ಹುಚ್ಚಮ್ಮದೇವಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ 50ಸಾವಿರ ಮೊತ್ತದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲ್ಲೂಕಿನ ಯೋಜನಾಧಿಕಾರಿಗಳಾದ ಕೆ.ಉದಯ್ ರವರ ನೇತೃತ್ವದಲ್ಲಿ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಧಾರ್ಮಿಕ ಮುಜರಾಯಿ ಇಲಾಖೆ ಸದಸ್ಯರಾದ ಶ್ರೀಧರ್,  ಧರ್ಮಸ್ಥಳ ಕ್ಷೇತ್ರದಿಂದ ರಾಜ್ಯದ ಜನತೆಗೆ ಧಾರ್ಮಿಕ ಕೇಂದ್ರಗಳ ಜೀರ್ಣೋದ್ದಾರಕ್ಕೆ ಸ್ವಾಮಿಯ ಪ್ರಸಾದದ ರೂಪದಲ್ಲಿ ಕೋಟ್ಯಾಂತರ ರೂ.ಗಳ ಹಣ ಸಹಾಯ ದೊರೆತಿದ್ದು, ಈ ಒಂದು ಉಡುಗೊರೆ ನಮ್ಮ ಗ್ರಾಮದ ಶ್ರೀ ಹುಚ್ಚಮ್ಮದೇವಿ ದೇವಸ್ಥಾನದ ಜೀರ್ಣೋದ್ದಾಕ್ಕೆ ದೊರೆತಿರುವುದು ಅತೀವ ಸಂತೋಷವುಂಟಾಗಿದೆ ಎಂದು ತಿಳಿಸಿದರು. ಬಳಿಕ ಮಾತನಾಡಿದ ಯೋಜನಾಧಿಕಾರಿ ಉದಯ್ ಕೆ.,  ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಕ್ಷಣ ವಿಭಾಗ, ಮಹಿಳಾ ಸಬಲೀಕರಣ, ಕೃಷಿ ಚಟುವಟಿಕೆಗಳು, ರಾಜ್ಯದ ಜನತೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಪ್ರಗತಿನಿಧಿ ಸೌಲಭ್ಯ, ಕೆರೆ ನಿರ್ಮಾಣ,…

Read More

ತುಮಕೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ(ವಿಆರ್‍ ಡಬ್ಲ್ಯೂ)ರ ತಾತ್ಕಾಲಿಕ ಹುದ್ದೆಗಳನ್ನು ಗೌರವಧನ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು ಗುಬ್ಬಿ ತಾಲ್ಲೂಕಿನ ಎಸ್.ಕೊಡಗೀಹಳ್ಳಿ ಹಾಗೂ ಚಂಗಾವಿ ಗ್ರಾಮ ಪಂಚಾಯತಿ; ಕುಣಿಗಲ್ ತಾಲ್ಲೂಕಿನ ಕಗ್ಗೆರೆ; ಪಾವಗಡ ತಾಲ್ಲೂಕಿನ ಪಳವಳ್ಳಿ ಹಾಗೂ ಕನ್ನಮೇಡಿ; ತಿಪಟೂರು ತಾಲ್ಲೂಕಿನ ಮಣಕಿಕೆರೆ ಗ್ರಾಮ ಪಂಚಾಯತಿಗಳಲ್ಲಿ ಖಾಲಿಯಿದ್ದು, ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 23ರೊಳಗಾಗಿ ಸಂಬಂಧಿಸಿದ ತಾಲ್ಲೂಕು ಪಂಚಾಯತಿಗಳಿಗೆ ಸಲ್ಲಿಸಬಹುದಾಗಿದೆ. ಆಯ್ಕೆಯಾದವರಿಗೆ ಮಾಹೆಯಾನ 10,000 ರೂ.ಗಳ ಗೌರವಧನ ನೀಡಲಾಗುವುದು. ವಿಆರ್‍ ಡಬ್ಲ್ಯೂ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಶೇ.40 ಮೇಲ್ಪಟ್ಟು ಭಾಗಶಃ ವಿಕಲತೆ ಹೊಂದಿ(ತೀವ್ರತರರಲ್ಲದ)ರುವ 18 ರಿಂದ 45ವರ್ಷ ವಯೋಮಿತಿಯೊಳಗಿನವರಾಗಿರಬೇಕು ಹಾಗೂ ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ವಾಸವಿರಬೇಕು. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2252763ನ್ನು…

Read More

ತುಮಕೂರು:  ಹಿಂದುಳಿದ ವರ್ಗರ್ಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಪಿಯುಸಿ, ಐಟಿಐ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾತ್ರ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಜೂನ್ 20ರೊಳಗಾಗಿ ಜಾಲತಾಣ:   https://shp.karnataka.gov.in/bcwd   ಮೂಲಕ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಆಯಾ ತಾಲ್ಲೂಕು  ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಜೂನ್ 23ರಂದು ಪರಿಶೀಲಿಸಲಿದ್ದಾರೆ. ತಾಲ್ಲೂಕು ಸಮಿತಿಯ ಮೂಲಕ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಪಟ್ಟಿಯನ್ನು ಜೂನ್ 27ರಂದು ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಜೂನ್ 30ರೊಳಗಾಗಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯತಕ್ಕದ್ದು. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/   ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಿ-ಅಂಚೆ:  bcwdhelpline@gmail.com ಮೂಲಕ ಅಥವಾ ಜಿಲ್ಲಾ/ ತಾಲ್ಲೂಕು…

Read More

ತಿಪಟೂರು: KSRTC ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನ ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಬಳಿ ನಡೆದಿದೆ. ಅಯ್ಯನಭಾವಿ ನಿವಾಸಿಗಳಾದ ಉಮೇಶ್ (32) ರಜನಿಕಾಂತ್ (33)    ಮೃತಪಟ್ಟ ಯುವಕರು ಎಂದು ತಿಳಿದು ಬಂದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರು ಮತಿಹಳ್ಳಿ ಗ್ರಾಮದಿಂದ ಕೆಲಸ ಮುಗಿಸಿ ತಮ್ಮ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಇದೇ ವೇಳೆ ತಿಪಟೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ KSRTC ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ  ತಲೆಗೆ ಗಂಭೀರವಾದ ಏಟು ತಗುಲಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯದ ಮಾಹಿತಿಗಳ ಪ್ರಕಾರ, ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು…

Read More

ತುಮಕೂರು:  ಗುಬ್ಬಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ, ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರವರ್ಗ–1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50ಲಕ್ಷ ಹಾಗೂ ಪ್ರವರ್ಗ–2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಮಿತಿಯೊಳಗಿರಬೇಕು. ಅರ್ಹ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಜೂನ್ 20ರೊಳಗಾಗಿ ಜಾಲತಾಣ:   https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/   ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಿ-ಅಂಚೆ: bcwdhelpline@gmail.com…

Read More

ತುಮಕೂರು:  ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ 21ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಡಿ ಶಾಲಾ–ಕಾಲೇಜು, ವಸತಿ ನಿಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ. ಗಂಗಾಧರ್ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಯೋಗ ದಿನಾಚರಣೆ ಕಾರ್ಯಕ್ರಮವು ಸಾರ್ವಜನಿಕ ಕಾರ್ಯಕ್ರಮವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಬೇಕು.  ಯೋಗ ದಿನಾಚರಣೆ ಕಾರ್ಯಕ್ರಮದ ಯಶಸ್ವಿಗೆ ಯೋಗ ತರಬೇತಿ ಸಂಸ್ಥೆ, ವಿವಿಧ ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ತಿಳಿಸಿದರು. ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21ರ ಬೆಳಿಗ್ಗೆ 6.30 ರಿಂದ 8 ಗಂಟೆಯವರೆಗೆ ಆಯೋಜಿಸಬೇಕು. ಕಾರ್ಯಕ್ರಮಕ್ಕೆ ಅವಶ್ಯವಿರುವ ಗ್ರೀನ್ ಮ್ಯಾಟ್, ವೇದಿಕೆ, ಧ್ವನಿವರ್ಧಕ ವ್ಯವಸ್ಥೆ ಮಾಡಬೇಕು. ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬ್ಯಾರಿಕೇಟ್‍ಗಳನ್ನು ಅಳವಡಿಸಬೇಕು. ಮುಂಜಾಗ್ರತಾ ಕ್ರಮವಾಗಿ…

Read More