Author: admin

ಪಾವಗಡ : ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು ಹಾಗೂ ಪಂಚನೌಕರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ.ಉತ್ತಮ್ ಅವರ ಆಡಳಿತ ಶೈಲಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಶಾಸಕರಿಗೆ ಲಿಖಿತ ಅಹವಾಲು ಸಲ್ಲಿಸಿದ್ದಾರೆ. ಇ.ಒ ಅವರಿಂದ ನಿರಂತರ ಮಾನಸಿಕ ಒತ್ತಡ, ಅವಮಾನಕಾರಿ ಭಾಷೆ, ಬೆದರಿಕೆ ಹಾಗೂ ಅಧಿಕಾರ ದುರುಪಯೋಗ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯಿತಿ ಆಡಳಿತ ವ್ಯವಸ್ಥೆಯೊಳಗಿನ ಗಂಭೀರ ಅಂತರಂಗ ಸಂಘರ್ಷ ಬಹಿರಂಗವಾಗಿದೆ. ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಇ.ಒ ಅವರು ಅಧಿಕಾರಿಗಳನ್ನು ಏಕವಚನದಲ್ಲಿ ನಿಂದಿಸುವುದು, ಸಭೆಗಳಲ್ಲಿ ಅವಾಚ್ಯ ಪದ ಬಳಸಿ ಕುಗ್ಗಿಸುವುದು ಹಾಗೂ ಬೆದರಿಕೆಯ ಭಾಷೆಯಲ್ಲಿ ಮಾತನಾಡುವುದು ರೂಢಿಯಾಗಿದೆ ಎಂದು ಪಿಡಿಒ ಮತ್ತು ಸಿಬ್ಬಂದಿ, ನೌಕರರ ಒಕ್ಕೂಟ  ಆರೋಪಿಸಿದ್ದಾರೆ. ಇಒ ಉತ್ತಮ್ ಅವರು ಬುದ್ದಿವಂತರೇ ಸರಿ ಯಾಕಿಷ್ಟು ಅಹಂ ಅಂತ ಮಾತನಾಡ್ತಿದ್ದಾರೆ. ಇನ್ನು ಮಹಿಳಾ ಸಿಬ್ಬಂದಿ ಹಾಗೂ ಹಿರಿಯ…

Read More

ಕೊರಟಗೆರೆ : ದೇವರ ದರ್ಶನ ಎಂದರೆ ಕಾಲುನಡಿಗೆಯಲ್ಲೇ ಆಗಬೇಕು ಎಂಬ ದೃಢ ನಂಬಿಕೆ, ಶ್ರಮ—ಭಕ್ತಿ–ಸಂಕಲ್ಪದೊಂದಿಗೆ ರಾಮನಗರ ಜಿಲ್ಲೆಯ ಮಾಗಡಿಯಿಂದ ಮಂತ್ರಾಲಯದವರೆಗೆ ಕಾಲುನಡಿಗೆಯಲ್ಲಿ ಸಾಗುತ್ತಿರುವ ಶ್ರೀ ಗುರುರಾಜ ಪಾದಯಾತ್ರೆ ಸೇವಾ ಸಮಿತಿಯ ಯಾತ್ರೆ ಇಡೀ ರಾಜ್ಯದ ಗಮನ ಸೆಳೆದಿದೆ. ಲೋಕ ಕಲ್ಯಾಣಾರ್ಥವಾಗಿ ಕಳೆದ 14 ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆಗಳನ್ನು ಆಯೋಜಿಸುತ್ತಿರುವ ಈ ಸಮಿತಿ ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ಆರ್ಥಿಕ ಸ್ಥಿತಿ, ಆರೋಗ್ಯ ಸಮಸ್ಯೆ, ಊಟ–ವಾಸ್ತವ್ಯದ ಚಿಂತೆಗಳ ಕಾರಣದಿಂದ ಯಾತ್ರೆ ಕೈಗೊಳ್ಳಲಾಗದವರನ್ನೂ ಒಳಗೊಂಡು, ಪೂರ್ವನಿಯೋಜಿತ ಚಲಿಸುವ ನಕ್ಷೆ, ತಂಗುವ ಸ್ಥಳಗಳ ವ್ಯವಸ್ಥೆಯೊಂದಿಗೆ ಪಾದಯಾತ್ರೆಯನ್ನು ಯಶಸ್ವಿಯಾಗಿ ಸಂಘಟಿಸುವುದು ಈ ಸಮಿತಿಯ ವಿಶೇಷತೆ. ಹಿರಿಯ ಮುತ್ಸದ್ದಿ ಸದಾಶಿವ ಶೆಟ್ಟರ್ ಅವರ ಮಾರ್ಗದರ್ಶನದಲ್ಲಿ, ಸಮಿತಿಯ ಗೌರವಾಧ್ಯಕ್ಷ ಸೀಬಣ್ಣಾಚಾರ್, ಅಧ್ಯಕ್ಷ ಗುರುಸಿದ್ದಪ್ಪ ನೇತೃತ್ವದಲ್ಲಿ ಈಗಾಗಲೇ ಕಾಶಿ, ತಿರುಪತಿ, ಧರ್ಮಸ್ಥಳ, ಮಲೆ ಮಹದೇಶ್ವರ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಿಗೆ ಕಾಲುನಡಿಗೆಯಲ್ಲಿ ಪಾದಯಾತ್ರೆ ಪೂರ್ಣಗೊಳಿಸಲಾಗಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯಾತ್ರೆಗಳನ್ನು ಕೈಗೊಳ್ಳುವ ಉದ್ದೇಶವನ್ನು ಸಮಿತಿ ಹೊಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

Read More

ಕೊರಟಗೆರೆ : ಮಕ್ಕಳಿಗಾಗಿ ಪೋಷಕರು ಹಣ ಸಂಪಾದಿಸುವುದಕ್ಕಿಂತ, ಸರಿಯಾದ ಸಮಯದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ಕರೆ ನೀಡಿದರು. ಪಟ್ಟಣದ ಹೊರ ವಲಯದಲ್ಲಿರುವ ಜೆ.ಕೆ. ಮೆಮೋರಿಯಲ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಮಕ್ಕಳನ್ನು ಧರ್ಮ ಮತ್ತು ಸಂಸ್ಕಾರದ ಹಾದಿಯಲ್ಲಿ ನಡೆಸುವ ಜವಾಬ್ದಾರಿ ಪೋಷಕರು ಮತ್ತು  ಶಾಲೆಗಳ ಮೇಲಿದೆ, ಆಟ-– ಪಾಠಗಳಿಂದ ವಂಚಿತ ಮಕ್ಕಳ ಜೀವನ ಶೂನ್ಯವಾಗುತ್ತದೆ. ಇಂದಿನ ಮಕ್ಕಳು ಅತ್ಯಂತ ಬುದ್ಧಿವಂತರು, ಅವರನ್ನು ಕೇವಲ ಸ್ಪರ್ಧಾತ್ಮಕ ಜಗತ್ತಿಗೆ ತಯಾರಿಸುವುದಷ್ಟೇ ಅಲ್ಲ, ಸಂಸ್ಕಾರಯುತ ಶಿಕ್ಷಣ ನೀಡುವುದು ಕೂಡ ಅತ್ಯಾವಶ‍್ಯಕ ಎಂದು ಸಲಹೆಯಿತ್ತರು. ಕ್ಷೇತ್ರ ಶಿಕ್ಷಣಾಧಿಕಾರಿ ಫೈರೋಜ್ ಬೇಗಂ ಮಾತನಾಡಿ, ಪ್ರಪಂಚದ ಅತ್ಯುತ್ತಮ ಗ್ರಂಥವೆಂದರೆ ಭಗವದ್ಗೀತೆ ಇದು ಮಕ್ಕಳಿಗೆ ಜೀವನದ ಅನುಭವಬೋಧನೆ ನೀಡುತ್ತದೆ, ಮಕ್ಕಳಲ್ಲಿ ಉತ್ತಮ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕು, ಆರೋಗ್ಯವಂತ ಮಗುವಿನಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ, ಆದ್ದರಿಂದ ಪೋಷಕರು ಮಕ್ಕಳ…

Read More

ತಿಪಟೂರು: ತಾಲ್ಲೂಕಿನ ಕಂಚಿಗಾರನಹಳ್ಳಿ ಗ್ರಾಮದ ನಿವಾಸಿ, ಮೂಳೆಯ ಕ್ಯಾನ್ಸರ್‌ ನಿಂದ ಬಳಲುತ್ತಿರುವ ಲತಾ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರ್ಥಿಕ ಸಹಾಯ ಹಸ್ತಚಾಚಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಲತಾ ಅವರ ಚಿಕಿತ್ಸೆಗಾಗಿ 25 ಸಾವಿರ ರೂಪಾಯಿ ಸಹಾಯಧನವನ್ನು ಮಂಜೂರು ಮಾಡಿದ್ದು, ಈ ಮೊತ್ತದ ಡಿಡಿಯನ್ನು (DD) ಯೋಜನಾಧಿಕಾರಿ ಉದಯ್ ಕೆ. ಅವರು ಸಂತ್ರಸ್ತೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯೋಜನಾಧಿಕಾರಿ ಉದಯ್ ಕೆ., “ಆರೋಗ್ಯವು ಭಾಗ್ಯದಂತಿದ್ದು, ಭಗವಂತನು ಲತಾ ಅವರಿಗೆ ಶೀಘ್ರವಾಗಿ ಪೂರ್ಣ ಆರೋಗ್ಯವನ್ನು ಕರುಣಿಸಲಿ” ಎಂದು ಹಾರೈಸಿದರು. ಕಷ್ಟದ ಸಮಯದಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಹುಚ್ಚಯ್ಯ, ಚಿಕ್ಕಣ್ಣ, ಲೋಕೇಶ್, ವಲಯ ಮೇಲ್ವಿಚಾರಕಿ ರಮ್ಯಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪದ್ಮಾವತಿ, ಸೇವಾಪ್ರತಿನಿಧಿ ಮಂಜುಳಾ ಹಾಗೂ ಧರ್ಮಸ್ಥಳ ಸಂಘದ ಪಾಲುದಾರ ಬಂಧುಗಳು ಉಪಸ್ಥಿತರಿದ್ದು, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ…

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ತುಂಬು ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ತಹಶೀಲ್ದಾರ್ ಮುಖೇನಾ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ತಾಲೂಕಿನ ವೀರಾಪುರ ಗ್ರಾಮದ ಯುವತಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ತಂದೆಯೇ ಮಗಳು 7 ತಿಂಗಳು ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಭೀಕರವಾಗಿ ಕೊಲೆ ಮಾಡಿರುವುದನ್ನು ದಲಿತ ಪರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಭೀಕರವಾಗಿ ಹತ್ಯೆ ಮಾಡಿದ ತಂದೆಗೆ ವಿಶೇಷ ಕಾನೂನು ರಚನೆ ಮಾಡಿ ಗಲ್ಲು ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಮಾದಿಗ ಸಮುದಾಯದ ಯುವಕ ಅಂತರ್ಜಾತಿ ವಿವಾಹವಾಗಿ ಒಂದೂವರೆ ವರ್ಷ ಕಳೆದಿದೆ. ಮಗಳು 7 ತಿಂಗಳ ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ವಿಕೃತವಾಗಿ ಕೊಲೆ ಮಾಡಿದ ಪಾಪಿ ತಂದೆಗೆ ಸರ್ಕಾರ ವಿಶೇಷ ಕಾನೂನು ರಚಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸುವಂತೆ ಸರ್ಕಾರಕ್ಕೆ ಒತ್ತಾಯ…

Read More

ಔರಾದ: ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸುವ ಮತ್ತು ಪೊಲೀಸ್ ಇಲಾಖೆ ಹಾಗೂ ಜನರ ನಡುವಿನ ಬಾಂಧವ್ಯವನ್ನು ಬಲಪಡಿಸುವ ಉದ್ದೇಶದಿಂದ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಬುಧವಾರ ಸಂಜೆ “ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂತಪುರ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಡಿ ಪೊಲೀಸ್ ಅಧಿಕಾರಿಗಳು ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿದರು. ಇದೇ ವೇಳೆ ವಿವಿಧ ಕಾನೂನು ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಇಲಾಖೆ ನೀಡುವ ಆದ್ಯತೆಯ ಬಗ್ಗೆ ತಿಳಿಸಿದರು.  ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಯಿತು.  ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸಲಾಯಿತು.  ರಸ್ತೆ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಯಿತು. ಸಂತಪುರ ಪೊಲೀಸ್ ಠಾಣೆಯ ಪಿ.ಎಸ್.ಐ ದಿನೇಶ್ ಅವರು ಮಾತನಾಡಿ, “ಪೊಲೀಸ್ ಮತ್ತು…

Read More

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಕೊಳ್ಳುರ ಗ್ರಾಮದ ಸೆಂಟ್ ಪಾಲ್ ಮೆಥೋಡಿಸ್ಟ್ ಚರ್ಚ್‌ನಲ್ಲಿ ಇಂದು ಕ್ರಿಸ್ಮಸ್ ಹಬ್ಬವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಲೋಕದ ರಕ್ಷಕ ಯೇಸುಕ್ರಿಸ್ತನ ಜನ್ಮದಿನದ ನೆನಪಿಗಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ವಿಶೇಷ ಪ್ರಾರ್ಥನೆ ಮತ್ತು ಸಂದೇಶ: ಹಬ್ಬದ ಪ್ರಯುಕ್ತ ಚರ್ಚ್‌ನಲ್ಲಿ ಯೇಸುಕ್ರಿಸ್ತನ ಜನ್ಮ ವೃತ್ತಾಂತವನ್ನು ಸ್ಮರಿಸುತ್ತಾ ಕೇಕ್ ಕತ್ತರಿಸುವ ಮೂಲಕ ಸಂಭ್ರಮ ಹಂಚಿಕೊಳ್ಳಲಾಯಿತು. ನಂತರ ವಿಶೇಷ ಆರಾಧನೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಲಾಯಿತು. ಚರ್ಚ್‌ನ ಪಾಸ್ಟರ್ ಸಂಪತ್ತ ಕುಮಾರ ಅವರು ಭಕ್ತರಿಗೆ ಕ್ರಿಸ್ಮಸ್ ಸಂದೇಶ ನೀಡಿ, ಯೇಸುವಿನ ಬೋಧನೆಗಳಾದ ಪ್ರೀತಿ ಮತ್ತು ಕ್ಷಮೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು. ಶಾಂತಿ ಮತ್ತು ಸೌಹಾರ್ದತೆಯ ಸಂಕೇತ: ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖಂಡ ಸುಧಾಕರ ಕೊಳ್ಳುರ ಅವರು, “ಕ್ರಿಸ್ಮಸ್ ಹಬ್ಬವು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ; ಇದು ಶಾಂತಿ, ಪ್ರೀತಿ, ಸೌಹಾರ್ದತೆ ಮತ್ತು ಕರುಣೆಯ ಮಹಾನ್ ಸಂಕೇತವಾಗಿದೆ. ಮನುಕುಲದ ಕಲ್ಯಾಣಕ್ಕಾಗಿ ಯೇಸು ತೋರಿದ ಹಾದಿಯಲ್ಲಿ ನಾವೆಲ್ಲರೂ…

Read More

ತುಮಕೂರು:  ತುಮಕೂರಿನ ಎಸ್‌.ಎಸ್.ಪುರಂನಲ್ಲಿರುವ ಗ್ರ್ಯಾಂಡ್ ಪಾರ್ಟಿ ಹಾಲ್ ನಲ್ಲಿ ಡ್ರೀಮ್ ಡೀಲ್ ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ ಡ್ರೀಮ್ ಡೀಲ್ ಲಕ್ಕಿ ಡ್ರಾ ಕಾರ್ಯಕ್ರಮ ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಭರ್ಜರಿ ರೀತಿಯಲ್ಲಿ ನಡೆಯಿತು. ಡಿಸೆಂಬರ್ ತಿಂಗಳ ಕನಸಿನ ಮೆಗಾ ಹಬ್ಬದ ಅಂಗವಾಗಿ ಆಯೋಜಿಸಿದ್ದ ಈ ಲಕ್ಕಿ ಡ್ರಾ ಕಾರ್ಯಕ್ರಮದಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಐಫೋನ್ 16 ಪ್ಲಸ್, ಬಂಗಾರದ ಉಂಗುರಗಳು ಹಾಗೂ ಅಚ್ಚರಿಯ ಉಡುಗೊರೆಗಳು ವಿಜೇತರಿಗೆ ವಿತರಿಸಲಾಯಿತು. ಈ ಲಕ್ಕಿ ಡ್ರಾದಲ್ಲಿ  ಐಫೋನ್ 16 ಪ್ಲಸ್– 3 ಜನರಿಗೆ, ಬಂಗಾರದ ಉಂಗುರಗಳು– 25 ಜನರಿಗೆ, ಅಚ್ಚರಿಯ ಉಡುಗೊರೆಗಳು –ಮತ್ತೊಂದು 25 ಜನರಿಗೆ ವಿತರಿಸಲಾಯಿತು. ಒಟ್ಟು 53 ಜನ ಭಾಗ್ಯಶಾಲಿ ವಿಜೇತರಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ಲಭಿಸಿತು. ವಿಜೇತರನ್ನು ಸ್ಥಳದಲ್ಲಿಯೇ ಘೋಷಿಸಿ ಬಹುಮಾನ ವಿತರಣೆ ಮಾಡಲಾಗಿದ್ದು, ಸ್ಥಳದಲ್ಲಿರದ ಕೆಲ ವಿಜೇತರಿಗೆ ಫೋನ್ ಮೂಲಕ ಸಂಪರ್ಕಿಸಿ ಅಚ್ಚರಿ ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಮ್ಮ…

Read More

ಬೆಂಗಳೂರು/ಟಿ. ದಾಸರಹಳ್ಳಿ:  ಕಾನೂನು ಜಾಗೃತಿ, ಸಮಾಜ ಸೇವೆ, ಉದ್ಯೋಗ ಸೃಷ್ಟಿ, ಶಿಕ್ಷಣ ಹೋರಾಟ ಹಾಗೂ ಜನಪರ ಪತ್ರಿಕೋದ್ಯಮದ ಕ್ಷೇತ್ರಗಳಲ್ಲಿ ನಿರಂತರ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸಿದ ವಕೀಲರು, ಸಮಾಜ ಸೇವಕರು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಗೌರವಿಸುವ ಉದ್ದೇಶದಿಂದ VPK ಲಾ ಎನ್‌ ಜಿಒ ಗ್ರೂಪ್ಸ್ ಇಂಡಿಯಾ ವತಿಯಿಂದ ಸಮಾಜ ಸೇವಾ ರತ್ನ ಹಾಗೂ ಸೂಪರ್ ಲಾಯರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಟಿ. ದಾಸರಹಳ್ಳಿಯಲ್ಲಿರುವ ಸಂಸ್ಥೆಯ ಕಚೇರಿ ಆವರಣದಲ್ಲಿ ಭವ್ಯವಾಗಿ ಆಯೋಜಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವೆಂಕಟೇಶ್ ವರ್ಸೆ, ಕಾನೂನು ವೃತ್ತಿಯು ಕೇವಲ ವೃತ್ತಿಯಾಗದೆ, ಸಮಾಜದ ಮೇಲಿನ ಮಹತ್ತರ ಜವಾಬ್ದಾರಿಯನ್ನು ಹೊತ್ತಿರಬೇಕು ಎಂದು ಅಭಿಪ್ರಾಯಪಟ್ಟರು. ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ನೆಲಮಟ್ಟಕ್ಕೆ ತಲುಪಿಸುವಲ್ಲಿ ವಕೀಲರು ಹಾಗೂ ಸಮಾಜ ಸೇವಕರ ಪಾತ್ರ ಅತ್ಯಂತ ಮಹತ್ವದ್ದೆಂದು ಅವರು ತಿಳಿಸಿದರು. ತುಮಕೂರು ವಿಶ್ವವಿದ್ಯಾಲಯದ ಮಾಜಿ ಮೌಲ್ಯಮಾಪನ ಕುಲಸಚಿವರೂ ಹಾಗೂ ಕಾನೂನು ಪ್ರಾಧ್ಯಾಪಕರಾದ ಪ್ರೊ. ಡಾ.ಸತೀಶ್ ಗೌಡ ಮಾತನಾಡಿ,…

Read More

ತುಮಕೂರು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಡಿಸೆಂಬರ್ 27 ಮತ್ತು 28ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿಸೆಂಬರ್ 27ರಂದು: ಬಿದರೆ, ದೊಡ್ಡಗುಣಿ, ಕಡಬ, ಕಲ್ಲೂರು, ಕೆ.ಜೆ.ಟೆಂಪಲ್, ಉಂಗ್ರಾ, ಸೋಮಲಾಪುರ, ಹೊನ್ನುಡಿಕೆ, ಹಿರೇಹಳ್ಳಿ ಮತ್ತು ನೈರುತ್ಯ ರೈಲ್ವೆ ಉಪಸ್ಥಾವರ, ನಿಟ್ಟೂರು ಸ್ವೀಕರಣಾ ಕೇಂದ್ರದ ವ್ಯಾಪ್ತಿಯ ಎಲ್ಲ ಗ್ರಾಮಗಳು ಮತ್ತು ಕೈಗಾರಿಕಾ ಪ್ರದೇಶಗಳು. ಡಿಸೆಂಬರ್ 28ರಂದು: ಅಂತರಸನಹಳ್ಳಿ ಸ್ವೀಕರಣಾ ಕೇಂದ್ರದ ವ್ಯಾಪ್ತಿ: ಬೆಳ್ಳಾವಿ, ಹೆಗ್ಗೆರೆ, ಮಲ್ಲಸಂದ್ರ, ದೊಡ್ಡ ಸಾರಂಗಿ, ಕೋರ, ಬೆಳಧರ, ಊರ್ಡಿಗೆರೆ, ಸಿ.ಟಿ.ಕೆರೆ, ಟಿಎಂಟಿಪಿ ಹಾಗೂ ವಿಪ್ರೊ ಮಾರ್ಗ. ವಸಂತನರಸಾಪುರ ಸ್ವೀಕರಣಾ ಕೇಂದ್ರದ ವ್ಯಾಪ್ತಿ: ತೋವಿನಕೆರೆ, ಚೇಳೂರು, ಹೊಸಕೆರೆ, ಹಾಗಲವಾಡಿ, ಮೆಳೆಕೋಟೆ, ನಂದಿಹಳ್ಳಿ, ಹೆಬ್ಬೂರು, ತಿಮ್ಮಸಂದ್ರ, ಹೊನ್ನೇನಹಳ್ಳಿ, ಬಡ್ಡಿಹಳ್ಳಿ ಉಪಸ್ಥಾವರಗಳಿಗೆ ಒಳಪಡುವ ಗ್ರಾಮಗಳು ಮತ್ತು ಕೈಗಾರಿಕಾ ಪ್ರದೇಶಗಳು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More