Subscribe to Updates
Get the latest creative news from FooBar about art, design and business.
- ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
- ತುಮಕೂರು| ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
- ಸರಗೂರು: ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
- ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
- ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
- ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
- ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
- ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
Author: admin
ರಷ್ಯಾ ಸೇನಾಪಡೆಗಳು ಉಕ್ರೇನಿನ ಇಂಧನ ಮೂಲ ಸ್ಥಾವರಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದು, ಒಂದೇ ಬಾರಿಗೆ 100 ಕ್ಷಿಪಣಿಗಳನ್ನು ಉಡಾಯಿಸಿವೆ. ಈ ಭೀಕರ ದಾಳಿಯಿಂದ ಉಕ್ರೇನಿನ ಹಲವೆಡೆ ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ. ಈ ಹಿಂದೆ ಅಕ್ಟೋಬರ್ 10 ಅಂದು ನಡೆಸಿದ ದಾಳಿಗಿಂತಲೂ ಈ ದಾಳಿ ಮಾರಕವಾಗಿದೆ ಎಂದು ಉಕ್ರೇನ್ ವಾಯುಪಡೆಯ ವಕ್ತಾರ ಯೂರಿ ಇಗ್ನಾಟ್ ತಿಳಿಸಿದ್ದಾರೆ. ರಷ್ಯಾ ಪಡೆಗಳು ಉಕ್ರೇನಿನ ಕೆಲವು ಕ್ಷಿಪಣಿಗಳನ್ನು ಹೊಡೆದುರುಳಿದೆ. ನಿರ್ಣಾಯಕ ಮೂಲ ಸೌರ್ಯಕಗಳನ್ನು ಧ್ವಂಸಗೊಳಿಸುತ್ತಿವೆ. ಈ ಬಗ್ಗೆ ನಿಖರ ಮಾಹಿತಿಯನ್ನು ಉಕ್ರೇನ್ ಸೇನೆ ಅಥವಾ ಸಚಿವಾಲಯ ಇನ್ನಷ್ಟೇ ನೀಡಬೇಕಿದೆ. ಉಕ್ರೇನ್ ಈ ಹಿಂದೆ ರಷ್ಯಾದ ಕ್ರಿಮಿಯಾ ಸೇತುವೆಯನ್ನು( ಧ್ವಂಸಗೊಳಿಸಿದ ನಂತರ ಪ್ರತೀಕಾರವಾಗಿ ರಷ್ಯಾ ದಾಳಿ ನಡೆಸಿತು. ನಿರಂತರ 75 ಕ್ಷಿಪಣಿಗಳು, 5 ಡೆಡ್ಲಿ ರಾಕೆಟ್‌ಗಳನ್ನು ಉಕ್ರೇನ್ ಮೇಲೆ ಉಡಾಯಿಸಿತ್ತು.. ಇದಾದ ಒಂದು ವಾರದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ವಿರುದ್ಧ ಕ್ಷಿಪಣಿ ದಾಳಿ ಅಂತ್ಯಗೊಳಿಸುವುದಾಗಿ ಹೇಳಿದ್ದರು. ಮತ್ತೆ 84 ಡೆಡ್ಲಿ ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಅದಕ್ಕಾಗಿ ಇರಾನಿ…
ಬೆಳಗಾವಿ : ಕೊಟ್ಟ ಹಣ ವಾಪಸ್ ಕೊಡದೇ ತಪ್ಪಿಸಿಕೊಳ್ಳಲು ಅಜ್ಜಿಯ ಪ್ರಾಣವನ್ನೇ ತೆಗೆದ ಘಟನೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ್ 6 ರಂದು ನಡೆದಿದ್ದ ಈ ಕೊಲೆಯ ಹಿಂದಿನ ರಹಸ್ಯ ಈಗ ಬಯಲಾಗಿದೆ. ಮಲ್ಲವ್ವ ಕಮತೆ ಕೊಲೆಯಾದ ವೃದ್ಧೆ. ಶಂಕರ್ ರಾಮಪ್ಪ ಪಾಟೀಲ್, ಗೆಳೆಯ ಮಹೇಶ ಸದಾಶಿವ ಕಬಾಡಗೆ ಬಂಧಿತ ಆರೋಪಿಗಳು. ಶಂಕರ ಪಾಟೀಲ್ ನಿಗೆ ವೃದ್ಧೆ ಮಲ್ಲವ್ವ ಬಳಿ 50 ಸಾವಿರ ರೂ. ಸಾಲ ಪಡದಿದ್ದ. ಆದರೆ, ಅದನ್ನು ಹಿಂದಿರುಗಿಸಲೇ ಇಲ್ಲ. ವೃದ್ಧೆ ಆಗಾಗ ಕೇಳಲು ಶುರು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಹಣ ಹೊಂದಿಸುವ ಬದಲು ಅಜ್ಜಿಯನ್ನೇ ಮುಗಿಸಲು ಸಂಚು ರೂಪಿಸಿದ್ದರು. ತನ್ನ ಗೆಳೆಯನಾಗಿರುವ ಮಹೇಶ ಸದಾಶಿವ ಕಬಾಡಗೆಯನ್ನು ಸೇರಿಸಿಕೊಂಡು ಅಜ್ಜಿಯ ಕುತ್ತಿಗೆಗೆ ಸೀರೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ. ಜೊತೆಗೆ ಮಲ್ಲವ್ವ ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ಕೂಡಾ ದೋಚಿದ್ದರು. ಸುಮಾರು 1 ಲಕ್ಷ ಮೌಲ್ಯದ ಬಂಗಾರದ ಸರವನ್ನು ಅವರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆವತ್ತು ಕೊಲೆ…
ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದಲೇ 1ನೇ ತರಗತಿಗೆ ಮಕ್ಕಳ ದಾಖಲಾತಿಯನ್ನು 6 ವರ್ಷ ನಿಗದಿ ಪಡಿಸಿತ್ತು. ಈ ಬಳಿಕ ಆದೇಶವನ್ನು ರದ್ದುಗೊಳಿಸಿತ್ತು. ಇದೀಗ 2025-26ನೇ ಶೈಕ್ಷಣಿಕ ವರ್ಷದಿಂದ ಅನ್ವಯ ಆಗುವಂತೆ ಕಡ್ಡಾಯಗೊಳಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 26-07-2022ರ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ 1ನೇ ತರಗತಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಈ ಮೊದಲಿನ ಆದೇಶವನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಖಾತೆ ಮಾಡಿ ಕೊಡೋದಕ್ಕಾಗಿ ಲಂಚ ಸ್ವೀಕರಿಸುವ ವೇಳೆಯಲ್ಲಿಯೇ, ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಖಾತೆ ಮಾಡಿ ಕೊಡೋದಕ್ಕಾಗಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆಯಲ್ಲಿ ತಹಶೀಲ್ದಾರ್ ವರ್ಷಾ ಎಂಬ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್ ವರ್ಷಾ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಸಿ ಕೊಡೋ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿಯೇ ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು : 2022ರ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ತಪ್ಪು ಮೌಲ್ಯಮಾಪನಕ್ಕಾಗಿ ಸರ್ಕಾರಿ ಪಿಯು ಕಾಲೇಜುಗಳ ಒಂಬತ್ತು ಅಧ್ಯಾಪಕರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ತಪ್ಪು ಮಾಡಿದ ಖಾಸಗಿ ಅನುದಾನರಹಿತ ಕಾಲೇಜಿನ ಒಬ್ಬ ಬೋಧಕನ ವಿರುದ್ಧ ಶಿಸ್ತು ಕ್ರಮಕ್ಕೆ ಇಲಾಖೆ ನಿರ್ದೇಶನ ನೀಡಿದೆ. 10 ಅಧ್ಯಾಪಕರ ಪೈಕಿ, ತಲಾ ಐದು ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳಿಗೆ ಸೇರಿದವುಗಳಾಗಿವೆ. ಅಮಾನತು ಆದೇಶದ ಪ್ರಕಾರ, ಉತ್ತರ ಪತ್ರಿಕೆಗಳ ಕೊನೆಯ ಕೆಲವು ಪುಟಗಳನ್ನು ಮೌಲ್ಯಮಾಪನ ಮಾಡಲು ಅಧ್ಯಾಪಕರು ವಿಫಲರಾಗಿದ್ದಾರೆ. ಮೌಲ್ಯಮಾಪಕರ ಜೊತೆಗೆ, ಉಪ ಮೌಲ್ಯಮಾಪಕರಾಗಿ ನಿಯೋಜನೆಗೊಂಡಿದ್ದ ಅಧ್ಯಾಪಕರನ್ನು ಸಹ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲಬುರಗಿ: ತಡರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಬೌಲಿಗಲ್ಲಿ ಬಳಿ ನಡೆದಿದೆ. ನಗರದ ರೋಜಾ ಬಡಾವಣೆ ನಿವಾಸಿ ಮುದಾಸಿರ್ (19) ಕೊಲೆಯಾದ ಯುವಕ, ತಡರಾತ್ರಿ ಬೌಲಿಗಲ್ಲಿ ಬಳಿ ಬೈಕ್ ಗಳಲ್ಲಿ ಬಂದಿದ್ದ 3-4 ದುಷ್ಕರ್ಮಿಗಳ ತಂಡ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಲವ್ ವಿಚಾರಕ್ಕೆ ಮುದಾಸಿರ್ ನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲಾ ಸವಿತಾ ಸಮಾಜ ಹಾಗೂ ಪಾವಗಡ ಸವಿತಾ ಸಮಾಜ ಸಹಯೋಗದೊಂದಿಗೆ ತುಮಕೂರು ಜಿಲ್ಲಾ ಸವಿತಾ ಸಮಾಜ ಯುವ ಪಡೆ ವತಿಯಿಂದ ಪಾವಗಡ ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಪಾವಗಡ ಸವಿತಾ ಸಮಾಜದ ಸಲೂನ್ ಗಳಿಗೆ ಉಚಿತ ಸಲೂನ್ ಕಿಟ್ ನೀಡಲಾಯಿತು. ಈ ವೇಳೆ ಮಾತನಾಡಿದ ಕಟ್ ವೆಲ್ ರಂಗನಾಥ್, ಯುವಕರು ಸಮುದಾಯ ಸಂಘಟನೆಗೆ ಮುಂದೆ ಬರಬೇಕು, ಹೋಬಳಿ ಮಟ್ಟದಲ್ಲಿ ಸಂಘಟನೆ ಆಗಬೇಕು. ವೃತ್ತಿಯನ್ನ ಆಧುನಿಕತೆಗೆ ಕೊಂಡೊಯ್ಯಬೇಕು ಎಂದು ಕರೆ ನೀಡಿದರು. ಇದೇ ವೇಳೆ ಪಾವಗಡ ಸವಿತಾ ಸಮಾಜ ಯುವ ಪಡೆ ಅಧ್ಯಕ್ಷರಾಗಿ ಲಿಂಗದಹಳ್ಳಿ ನೀಲಕಂಠ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾರ್ಥಸಾರಥಿ, ಪಾವಗಡ ಅಧ್ಯಕ್ಷರಾದ ರಾಮು, ಪ್ರತಿನಿದಿಯಾದ ದೇವರಾಜು, ಯುವ ಪಡೆ ಜಿಲ್ಲಾ ಪ್ರಮುಖರಾದ ಕಟ್ ವೆಲ್ ರಂಗನಾಥ್, ಲಿಂಗದಹಳ್ಳಿ ಸವಿತಾ ಸಮಾಜದ ಅಧ್ಯಕ್ಷರಾದ ರವಿ ಎನ್., ನೀಡಗಲ್ಲು ಸವಿತಾ ಸಮಾಜ ಅಧ್ಯಕ್ಷರಾದ ಕಣಮರಾಜು, ಅಣ್ಣಪ್ಪ, ನಾಗರಾಜು, ಮೋಹನ್, ಅರಸೀಕೆರೆ ನಾರಾಯಣಪ್ಪ, ಬಡವನಹಳ್ಳಿ ಪ್ರದೀಪ್,…
ಅಡಿಕೆ ಎಲೆಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಡೂರಿನ ಪೊಲೀಸ್ ತರಬೇತಿ ಕೇಂದ್ರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದ್ದು, ವಿಶ್ವವಿದ್ಯಾಲಯಗಳು, ಸಂಬಂಧಪಟ್ಟ ಇಲಾಖೆ, ಕೇಂದ್ರ ಸರ್ಕಾರದ ಸಂಸ್ಥೆಗಳು ರೋಗ ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯೋನ್ಮುಖವಾಗಿವೆ. ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಔಷಧಿ ಸಿಂಪಡನೆಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದಿದ್ದಾರೆ. ಎಲೆಚುಕ್ಕೆ ರೋಗದ ಮೂಲಕಾರಣ ಹಾಗೂ ಔಷಧಿಯ ಬಗ್ಗೆ ವಿಜ್ಞಾನಿಗಳು ಅಧ್ಯಯನ ಮಾಡಿ ಪರಿಹಾರ ಮಾರ್ಗ ಕಂಡುಹಿಡಿದರೆ, ಅದರಂತೆ ಸರ್ಕಾರ ಕ್ರಮಕೈಗೊಳ್ಳುವುದು. ಈ ರೋಗ ದೊಡ್ಡ ಪ್ರಮಾಣದಲ್ಲಿ ಹರುಡುತ್ತಿರುವುದರಿಂದ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಮಲೆನಾಡು ಹಾಗೂ ಬಯಲುಸೀಗಳಲ್ಲಿ ಈರುಳ್ಳಿ ಸೇರಿದಂತೆ ಹಲವು ಬೆಳೆಗಳ ನಾಶಕ್ಕೆ ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯಿಸಿ, ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸರ್ಕಾರ ಈಗಾಗಲೇ…
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಿಲಾರಹಟ್ಟಿ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬರ ಹತ್ಯೆಯಾಗಿದೆ. 55 ವರ್ಷದ ಮರಗು ಪಾಂಡ್ರೆ ಹತ್ಯೆಯಾಗಿರುವ ದುರ್ದೈವಿ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೀರು, ಮಾಳಪ್ಪ ಹಾಗೂ ಇನ್ನೋರ್ವ ಆರೋಪಿ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜಾಗದ ವಿಷಯಕ್ಕೆ ಹಲವು ದಿನಗಳಿಂದ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲಬುರಗಿಯಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಲ್ಲಿಕಾರ್ಜುನ್ ಮುತ್ಯಾಲ (64) ಹತ್ಯೆಯಾದ ವ್ಯಕ್ತಿ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಕೊಲೆ ನಡೆದಿದ್ದು, ಮರ್ಮಾಂಗಕ್ಕೆ ಚಾಕು ಇರಿದು , ಕುತ್ತಿಗೆಗೆ ಹಗ್ಗ ಬಿಗಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಮಲ್ಲಿಕಾರ್ಜುನ ಮುತ್ಯಾಲ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಮಾಲೀಕರಾಗಿದ್ದರು. ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಭೇಟಿ ನೀಡಿದ್ದಾರೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.