Author: admin

ಅಮೆಜಾನ್‌ 10 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲು ಯೋಜನೆ ರೂಪಿಸಿರುವ ಸುದ್ದಿ ಬಹಿರಂಗವಾಗಿದೆ. ಕಾರ್ಪೋರೆಟ್‌ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಈ ವಾರದಿಂದಲೇ ಸಿಬ್ಬಂದಿ ಕಡಿತ ಮಾಡಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್‌ ವರದಿ ಮಾಡಿದೆ. ಸಿಬ್ಬಂದಿ ಕಡಿತದ ಕುರಿತಾಗಿ ಅಮೆಜಾನ್‌ ಪ್ರತಿಕ್ರಿಯೆ ನೀಡಿಲ್ಲ, ಕಂಪನಿ ತನ್ನ ಅಧೀನದಲ್ಲಿರುವ ವಿವಿಧ ವಲಯಗಳ ಸಿಬ್ಬಂದಿ ಕಡಿತ ಮಾಡಲು ನಿರ್ಧರಿಸಿದೆಯಂತೆ. ಕಳೆದ ಡಿಸೆಂಬರ್‌ 31ರ ವೇಳೆಗೆ ಅಮೆಜಾನ್‌ನಲ್ಲಿ 1.68 ಲಕ್ಷ ಮಂದಿ ಅರೆಕಾಲಿಕ ಉದ್ಯೋಗಿಗಳಾಗಿದ್ದರು. ಈಗ ವಾಯ್ಸ್‌ಅಸಿಸ್ಟೆಂಟ್‌ ಅಲೆಕ್ಸಾ, ರೀಟೇಲ್‌ವಿಭಾಗ ಮತ್ತು ಮಾನವ ಸಂಪನ್ಮೂಲ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ.ಅಮೆಜಾನ್‌ ಅಧ್ಯಕ್ಷ ಜೆಫ್‌ಬೆಜೋಸ್‌ತಮ್ಮ ಒಟ್ಟು ಆಸ್ತಿಯಾದ 10 ಲಕ್ಷ ಕೋಟಿ ಪೈಕಿ ಬಹುತೇಕ ಆಸ್ತಿಯನ್ನು ಜೀವಿತಾವಧಿಯಲ್ಲಿ ದಾನ ಮಾಡುವುದಾಗಿ ಸಿಎನ್‌ಎನ್‌ಗೆ ಮಾಹಿತಿ ನೀಡಿದ ದಿನವೇ ಹುದ್ದೆ ಕಡಿತದ ಸುದ್ದಿ ಪ್ರಕಟವಾಗಿದೆ. ಅಮೆರಿಕ ಮತ್ತೊಂದು ವಿಶ್ವವಿಖ್ಯಾತ ಕಂಪನಿ ಡಿಸ್ನಿ ಸಿಬ್ಬಂದಿ ಕಡಿತಕ್ಕೆ ಯೋಜಿಸಿದೆ. ಕಂಪನಿಯ ಸ್ಟ್ರೀಮಿಂಗ್‌ ಸೇವೆ ಕಳೆದ…

Read More

ಮದುವೆ ಆಗು ಅಂತ ಕೇಳಿದ್ದಕ್ಕೆ ಕೊಲೆ ಮಾಡಿ 35 ತುಂಡುಗಳಾಗಿ ಕತ್ತರಿಸಿದ್ದ ಅಫ್ತಾಬ್ ಅಮೀನ್ ಪೂನೂವಾಲಾ ಪ್ರೇಯಸಿ ಶವ ಮನೆಯಲ್ಲಿದ್ದಾಗಲೇ ಮತ್ತೊಬ್ಬಳನ್ನು ಮನೆಗೆ ಕರೆದುಕೊಂಡು ಬಂದಿದ್ದ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಡೇಟಿಂಗ್ ಆಪ್ ನಲ್ಲಿ ಶ್ರದ್ಧಾಳ ಪರಿಚಯ ಮಾಡಿಕೊಂಡಿದ್ದ ಅಫ್ತಾಬ್, ಸ್ನೇಹಕ್ಕೆ ತಿರುಗಿದ ನಂತರ ಮುಂಬೈನಲ್ಲಿ ಆಕೆಯ ಜೊತೆ ಇದ್ದ. ನಂತರ ದೆಹಲಿಯಲ್ಲಿ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ. ಶ್ರದ್ಧಾಳನ್ನು ಕೊಂದು 35 ತುಂಡುಗಳಾಗಿ ಕತ್ತರಿಸಿ ಪ್ರತಿದಿನ ರಾತ್ರಿ 2 ಗಂಟೆಗೆ ಮೆಹ್ರೂಲ್ ಕಾಡಿನಲ್ಲಿ 18 ದಿನಗಳ ಕಾಲ ಬಿಸಾಡಿದ್ದ. ಶ್ರದ್ಧಾಳ ದೇಹದ ತುಂಡುಗಳು ಮನೆಯಲ್ಲಿ ಇದ್ದಾಗಲೇ ಡೇಟಿಂಗ್ ಆಪ್ ನಲ್ಲಿ ಪರಿಚಯ ಆದ ಮತ್ತೊಬ್ಬ ಮಹಿಳೆಯನ್ನು ಅಫ್ತಾಬ್ ಮನೆಗೆ ಕರೆದುಕೊಂಡು ಬಂದಿದ್ದ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಇದೀಗ ಅಪ್ತಾಬ್ ನನ್ನು ಬಂಧಿಸಿ ಜೈಲಿನಲ್ಲಿ ಇರಿಸಿದ್ದು ದಿನದ 24 ಗಂಟೆ ಸಿಸಿಟಿವಿ ನಿಗಾದಲ್ಲಿ ಇದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಉತ್ತರಾಖಂಡದ ಸಿತಾರ್‌ ಗಂಜ್‌ ನಲ್ಲಿ ಶಾಲಾ ಬಸ್ ಮತ್ತು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿ ಇಬ್ಬರು ಮೃತಪಟ್ಟು 30 ಮಂದಿ ಗಾಯಗೊಂಡಿದ್ದು, 22 ಮಂದಿಯ ಸ್ಥಿತಿ ಗಂಭೀರವಾಗಿದೆ. ಶಾಲಾ ಮಕ್ಕಳು ಮತ್ತು ಸಿಬ್ಬಂದಿಯನ್ನು ಪಿಕ್‌ನಿಕ್‌ನಿಂದ ವಾಪಸ್ ಕರೆತರುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 74ರ ಸಿಸೈಯಾನ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಸಿತಾರ್‌ ಗಂಜ್‌ ನ ಉಪವಿಭಾಗಾಧಿಕಾರಿ ತುಷಾರ್ ಸೈನಿ ಹೇಳಿದ್ದಾರೆ. 14 ವರ್ಷದ ವಿದ್ಯಾರ್ಥಿನಿ ಮತ್ತು 35 ವರ್ಷದ ಶಿಕ್ಷಕರು ಅಪಘಾತದಲ್ಲಿ ಅಸು ನೀಗಿದ್ದಾರೆ. ಗಾಯಗೊಂಡಿರುವ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 22 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉನ್ನತ ಆಸ್ಪತ್ರೆಗಳಿಗೆ ಕಳುಹಿಸಲು ಸೂಚಿಸಲಾಗಿದೆ ಎಂದು ಸೈನಿ ಹೇಳಿದ್ದಾರೆ. ಅಪಘಾತಗೊಂಡ ಬಸ್‌ನಲ್ಲಿ 51 ಮಂದಿ ಇದ್ದರು. ಘಟನೆ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಕಾಂಗ್ರೆಸ್​ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ನ 15 ಕೊನೆಯ ದಿನವಾಗಿದ್ದು, ಸಾವಿರಾರು ಮಂದಿ ಅರ್ಜಿ ಸ್ವೀಕರಿಸಿದ್ದು, 400 ಮಂದಿ ಮಾತ್ರವೇ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ 30 ಶಾಸಕರು ಸೇರಿದ್ದಾರೆ. ಹಲವು ಶಾಸಕರು ಮತ್ತು ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಕೊನೆಯ ದಿನಾಂಕ ವಿಸ್ತರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಕಾಂಗ್ರೆಸ್ ಪಕ್ಷವು ಟಿಕೆಟ್​ಗಾಗಿ ಅರ್ಜಿಗೆ ₹ 5,000 ಶುಲ್ಕ ನಿಗದಿಪಡಿಸಿದೆ. ಅರ್ಜಿಯೊಂದಿಗೆ ₹ 2 ಲಕ್ಷ ಡಿಡಿ ನೀಡಬೇಕು ಎಂದು ಷರತ್ತು ವಿಧಿಸಿದೆ. ಕೋಲಾರ ಕ್ಷೇತ್ರಕ್ಕೆ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಅರ್ಜಿ ಪಡೆದಿದ್ದರು. ಆದರೆ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾದ ಬಳಿಕ ಅರ್ಜಿ ಸಲ್ಲಿಸಲು ಅವರು ಹಿಂದೇಟು ಹಾಕಿದ್ದಾರೆ. ವಿ.ಆರ್.ಸುದರ್ಶನ್ ಅವರ ಜೊತೆಗೆ ಗೋವಿಂದೇಗೌಡ, ಶ್ರೀನಿವಾಸ್ ಅರ್ಜಿ ಪಡೆದಿದ್ದರು ಎನ್ನಲಾಗಿದೆ. ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ಅರ್ಜಿ ಸಲ್ಲಿಕೆಯಾಗಿಲ್ಲ. ನಂಜನಗೂಡು ಕ್ಷೇತ್ರಕ್ಕೆ ಎಚ್.ಸಿ.ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅರ್ಜಿ ಸಲ್ಲಿಸಿದ್ದಾರೆ. ಪುಲಕೇಶಿ ನಗರದಲ್ಲಿ ಶಾಸಕ ಅಖಂಡ ಶ್ರೀನಿವಾಸ್…

Read More

ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್ಐ ನಾರಾಯಣಸ್ವಾಮಿಯ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಅರೀಫ್(35) ಹಾಗೂ ಜಮಷೀದ್ ಖಾನ್(27) , ಆಂಧ್ರಪ್ರದೇಶದ ಪಟಾಣ್ ಯಾರಿಸ್ ಖಾನ್(30) ಬಂಧಿತರು. ನ. 8ರಂದು ಬಾಗೇಪಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆ ಮೇಲೆ ದಾಳಿ ಮಾಡಿ ಮನೆಯಲ್ಲಿದ್ದ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ, ಮನೆಯಲ್ಲಿದ್ದ ನಗನಾಣ್ಯ ಲೂಟಿ ಮಾಡಿದ್ದರು. ಅಡ್ಡ ಬಂದಿದ್ದ ಮನೆ ಮಾಲೀಕ ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದರು. ಜೊತೆಗ ನಾರಾಯಣಸ್ವಾಮಿ ಪುತ್ರ ಶರತ್ ಕಾಲಿಗೆ ಗುಂಡು ಹಾರಿಸಿದ್ದರು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಸದ್ಯ ಮೂವರನ್ನ ಬಂಧಿಸಿದ್ದು, ಬಂಧಿತರಿಂದ ಮೂರು ನಾಡ ಪಿಸ್ತೂಲ್‌ , ಖಾಲಿ ಮ್ಯಾಗ್ಜಿನ್ ಹೊಂದಿರುವ ಒಂದು ಪಿಸ್ತೂಲ್, 3 ಲಕ್ಷದ 41000 ನಗದು, ಕೃತ್ಯಕ್ಕೆ ಬಳಸಿದ ಕಾರು, 71 ಗ್ರಾಂ ತೂಕದ ಚಿನ್ನದ ಸರ, 21 ಬೆಳ್ಳಿಯ ಪೂಜಾ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…

Read More

ದಾಬಸ್‌ಪೇಟೆಯ ತ್ಯಾಮಗೊಂಡ್ಲು ಹೋಬಳಿ ತಡಸಿಘಟ್ಟಗ್ರಾಮದ ಕುಟುಂಬವೊಂದು ಪಿತ್ರಾರ್ಜಿತ ಆಸ್ತಿಯನ್ನ ಕಳೆದುಕೊಂಡು ಮನನೊಂದು ಕುಟುಂಬದ ಎಲ್ಲಾ ಸದಸ್ಯರು ತಹಶೀಲ್ದಾರ್‌ಮೂಲಕ ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಮನವಿ ಸಲ್ಲಿಸಿದ್ದಾರೆ. ತಡಸಿಘಟ್ಟದ ಗಂಗಹನುಮಕ್ಕ ಕುಟುಂಬದ 26 ಸದಸ್ಯರು ನೆಲಮಂಗಲ ತಹಶೀಲ್ದಾರ್‌ ಕಚೇರಿ ಎದುರು ದಯಾಮರಣ ಕೋರಿ ಪತ್ರ ಬರೆದು ಸಹಿ ಹಾಕಿ ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ. ತಡಸೀಘಟ್ಟಗ್ರಾಮದಲ್ಲಿನ ಸರ್ವೆ ನಂ. 73ರಲ್ಲಿ ತಮ್ಮ 3. 22 ಎಕರೆ ಜಮೀನನ್ನು ಗ್ರಾಮದ ರಾಜಗೋಪಾಲಯ್ಯ ಎಂಬ ವ್ಯಕ್ತಿಗೆ ಗಂಗಹನುಮಕ್ಕನ ತಂದೆ ದಿ. ಭೈರಣ್ಣ 10-06-1981ರಂದು 3500 ರೂ.ಗಳಿಗೆ ವಾಯಿದೆ ಕ್ರಯಕ್ಕೆ ಕೊಟ್ಟಿದ್ದರು. ಆದರೆ ರಾಜಗೋಪಾಲಯ್ಯ ನಕಲಿ ದಾಖಲೆ ಸೃಷ್ಟಿಸಿ ವಾಯಿದೆ ಕ್ರಯಕ್ಕೆ ಕೊಟ್ಟಿದ್ದ ಜಮೀನನ್ನು ರಾಜಕೀಯ ಪ್ರಭಾವ ಬಳಸಿ ಶುದ್ಧ ಕ್ರಯ ಮಾಡಿಕೊಂಡು ವಂಚಿಸಿರುವುದಾಗಿ ಆರೋಪಿಸಿದ್ದಾರೆ. ಕುಟುಂಬದ ಹಿರಿಯ ನಾರಾಯಣಪ್ಪ ಪ್ರತಿಕ್ರಿಯಿಸಿ, ನಮ್ಮ ತಂದೆ ಕಾಲವಾದ ನಂತರ ಜಮೀನು ವಾಪಸ್‌ ಪಡೆಯಲು ತೆರಳಿದಾಗ ಇವತ್ತು, ನಾಳೆ ಅಂತ ಕಾಲಹರಣ ಮಾಡಿಕೊಂಡು 2012ರಲ್ಲಿ ನಕಲಿ ದಾಖಲೆ ಸೃಷ್ಟಿಸಿ…

Read More

ಬೆಂಗಳೂರು : ಸಿನಿಮಾ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ ಅವರು ಸೋಮವಾರ ಅವರು ವಿಧಿವಶರಾಗಿದ್ದಾರೆ. ಕನ್ನಡದ ಗರ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಕೆ.ಆರ್​. ಮುರಳಿ ಕೃಷ್ಣ ಅವರಿಗೆ ಬ್ರೈನ್​ ಟ್ಯೂಮರ್​ ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಿಜೋರಾಂನ ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟ ಬಿಹಾರದ 8 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ. ಸೋಮವಾರ ಸಂಜೆ ಕಲ್ಲುಕ್ವಾರಿ ಕುಸಿದಿದ್ದು, ಅದರಡಿ 12 ಮಂದಿ ಸಿಲುಕಿದ್ದರು. ಇನ್ನೂ ನಾಲ್ವರಿಗಾಗಿ ಹುಡುಕಾಟ ಮುಂದುವರಿದಿದೆ. ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಎಲ್ಲ ಕಾರ್ಮಿಕರು ಪತ್ತೆಯಾಗುವವರೆಗೂ ಕಾರ್ಯಾಚರಣೆ ನಡೆಯಲಿದೆಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್‌ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ಊಟದ ವಿರಾಮದ ಬಳಿಕ ಕೆಲಸದಲ್ಲಿ ತೊಡಗಿದ್ದಾಗ ಅವಘಡ ಸಂಭವಿಸಿದೆ. ಕಾರ್ಮಿಕರ ಜೊತೆಗೆ ಐದು ಹಿಟಾಚಿ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎನ್ನಲಾಗಿದೆ. ಲೀಟೆ ಮತ್ತು ನಾತಿಯಾಲ್ ಗ್ರಾಮಗಳ ಜನರು ಸ್ವಯಂಪ್ರೇರಿತರಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್ ಪಡೆಯನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಕರ್ನಾಟಕದ ಅಥ್ಲೀಟ್ ಅಶ್ಚಿನಿ ಅಕ್ಕುಂಜೆ ಮತ್ತು ಕಬಡ್ಡಿ ಆಟಗಾರ ಬಿಸಿ ಸುರೇಶ್ ಜೀವಮಾನದ ಸಾಧನೆಗಾಗಿ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಉಡುಪಿ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅಶ್ವಿನಿ ಅಕ್ಕುಂಜೆ 400 ಮೀ. ರೀಲೆ ಓಟಗಾರ್ತಿಯಾಗಿದ್ದು, 2010ರ ಕಾಮನ್ ವೆಲ್ತ್ ಹಾಗೂ ಏಷ್ಯನ್ ಗೇಮ್ಸ್ ಗಳ ರಿಲೇ ತಂಡದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಚೀನಾದ ಗುವಾಂಗ್ ಜುನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಅಶ್ವಿನಿ ಅಕ್ಕುಂಜೆ ವೈಯಕ್ತಿಕ 400 ಮೀ. ರೇಸ್ ನಲ್ಲಿ ಚಿನ್ನದ ಪದಕದ ಸಾಧನೆ ಮಾಡಿದ್ದರು. ಮಾಜಿ ಕಬ್ಬಡ್ಡಿ ಆಟಗಾರ ಬಿಸಿ ಸುರೇಶ್ ಈಗಾಗಲೇ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಎರಡು ಬಾರಿ ಚಿನ್ನದ ಪದಕ ಗೆದ್ದ ಭಾರತ ತಂಡದ ಆಟಗಾರರಾಗಿದ್ದರು. ಅಲ್ಲದೇ ಪ್ರೊ ಕಬಡ್ಡಿ ಲೀಗ್ ನಲ್ಲಿ ಪ್ರಶಸ್ತಿ ತಂಡದ ಕೋಚ್ ಆಗಿದ್ದರು. ಪ್ರಸ್ತುತ ಬಂಗಾಳ್ ವಾರಿಯರ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದೀಯ ಅಂತ ಶಿಕ್ಷಕಿ ನಿಂದಿಸಿದ್ದರಿಂದ ನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಎಂಬಿಆರ್​ ಲೇಔಟ್​ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲಿಷ್​ ಸ್ಕೂಲ್ ವಿದ್ಯಾರ್ಥಿನಿ ಅಮೃತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನವೆಂಬರ್​ 2ರಂದು ಟೆಸ್ಟ್ ವೇಳೆ ಅಮೃತಾ ಕಾಪಿ ಚೀಟಿ ತಂದಿದ್ದಾಳೆ ಎಂದು 4-5 ದಿನಗಳಿಂದ ಕ್ಲಾಸ್​ನಲ್ಲಿ ವಿದ್ಯಾರ್ಥಿಗಳ ಮುಂದೆ ಅಮೃತಾಳನ್ನು ಶಿಕ್ಷಕಿ ಶಾಲಿನಿ ನಿಂದಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕಿ ಪದೇಪದೆ ನಿಂದಿಸಿ ಅಪಮಾನ ಮಾಡಿದ್ದಾರೆ ಎಂದು ಅಮೃತಾ ಡೆತ್ ನೋಟ್ ನಲ್ಲಿ ವಿವರಿಸಿದ್ದಾಳೆ. ಎಲ್ ಕೆಜಿಯಿಂದ ಇದೇ ಶಾಲೆಯಲ್ಲಿ ಓದುತ್ತಿದ್ದ ಅಮೃತಾ ಸಾವಿಗೆ ಶಾಲಾ ಆಡಳಿತ ಮಂಡಳಿ ಕಾರಣ ಎಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದರು.ಇದ್ದ ಒಬ್ಬಳೇ ಪುತ್ರಿಯನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕಿದ್ದಾರೆ. ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಜಯಪ್ರಕಾಶ್​ ಭೇಟಿ ನೀಡಿ ಅಮೃತಾ ತಾಯಿ ಆಶಾ ಅವರನ್ನು ಸಾಂತ್ವನ ಮಾಡಿದರು. ಅಮೃತಾ ಮೃತ ದೇಹಕ್ಕೆ ಅಂತಿಮ…

Read More