Author: admin

ಮುಂಬೈ: 32 ಕೋಟಿ ಮೌಲ್ಯದ 61 ಕಿಲೋ ಚಿನ್ನವನ್ನ ವಶಪಡಿಸಿಕೊಂಡು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಏಳು ಜನರನ್ನು ಬಂಧಿಸಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಕತಾರ್ ಏರ್ ವೇಸ್ ವಿಮಾನದಲ್ಲಿ ಮುಂಬೈಗೆ ಬಂದಿದ್ದರು. ಭಾರತಕ್ಕೆ ಚಿನ್ನ ತರುವುದಾಗಿ ಹಣದ ಆಮಿಷ ಒಡ್ಡಲಾಗಿದ್ದು, ಅವರಿಗೆ ಭಾರತದಲ್ಲಿನ ಕಸ್ಟಮ್ಸ್ ಕಾನೂನುಗಳ ಬಗ್ಗೆ ತಿಳಿದಿರಲಿಲ್ಲ. ಹಾಗಾಗಿ ಇವರೆಲ್ಲರೂ ಅಷ್ಟೊಂದು ಚಿನ್ನವನ್ನ ತಂದರು ಎನ್ನಲಾಗ್ತಿದೆ. ಇನ್ನು ಎಲ್ಲಾ ಆರೋಪಿಗಳನ್ನ ಪೊಲೀಸರು ಬಂಧಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಗೋವಿನಜೋಳ ಮಷಿನ್​ ಚಕ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಬಾಗಲಕೋಟೆ ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ರೇಣುಕಾ ಮಾದರ (45) ಮೃತ ದುರ್ದೈವಿ. ಕೂಲಿ ಕೆಲಸ ಬಂದಿದ್ದ ರೇಣುಕಾ, ಕೆಲಸ ಮಾಡುವಾಗ ಗೋವಿನಜೋಳ ಮಷಿನ್​ ಚಕ್ರಕ್ಕೆ ಸೀರೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕಾಲೇಜು ಹಂತದಲ್ಲಿಯೂ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ 2021ನೇ ಸಾಲಿನ ಆಗಸ್ಟ್ 7ರಂದು ಹೊರಡಿಸಿದ್ದ ಎರಡು ಆದೇಶಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗಿತ್ತು. ಆದರೆ ಇದಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರ ಕನ್ನಡ ಕಲಿಕೆ ಕಡ್ಡಾಯಕ್ಕೆ ಅಡ್ಡಗಾಲು ಹಾಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊಲ್ಲಾಪುರ: ಅಪಘಾತದಲ್ಲಿ ಮರಾಠಿ ನಟಿ ಕಲ್ಯಾಣಿ ಕುರಾಳೆ ಸಾವನ್ನಪ್ಪಿದ ಘಟನೆ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. 32 ವರ್ಷದ ಕಲ್ಯಾಣಿ ಪ್ರಯಾಣಿಸುತ್ತಿದ್ದ ಮೋಟಾರ್‌ ಸೈಕಲ್‌ ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ತುಜ್ಯಹತ್ ಜೀವ್ ರಂಗಾ ಟಿವಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿರುವ ಕಲ್ಯಾಣಿ ಕುರಾಳೆ ಜಾಧವ್ ಅವರು ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದಾಗ ಗಾಯಗೊಂಡ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತಲುಪಿದಾಗ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಲಬುರಗಿ : ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಮಣಿಕಂಠ ರಾಠೋಡ್ ಹೇಳಿದರು. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಣಿಕಂಠ ಬಂಧನಕ್ಕಾಗಿ ಕಾಂಗ್ರೆಸ್ ಕೂಡ ಆಗ್ರಹಿಸಿತ್ತು. ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಭಾನುವಾರ ಮಧ್ಯರಾತ್ರಿ ಹೈದರಾಬಾದ್‌ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬದಲಾದ ಆಹಾರ ಪದ್ಧತಿ, ಜೀವನ ಶೈಲಿಗಳಿಂದ ಇಂದು ಪ್ರತಿಯೊಬ್ಬರಿಗೂ ಬಿಪಿ, ಶುಗರ್‌, ಗ್ಯಾಸ್ಟ್ರಿಕ್‌, ಅಲರ್ಜಿ ಸೇರಿದಂತೆ ಕೆಲವೊಂದು ಆರೋಗ್ಯ ಸಮಸ್ಯೆಗಳು ಸಾಮಾನ್ಯ ಎಂಬಂತಾಗಿದೆ. ಸಂಸ್ಕರಿಸಿದ ಹಾಗೂ ಟೇಸ್ಟ್‌ ಪೌಡರ್‌ ಬಳಸಿದ, ಮತ್ತೆ ಮತ್ತೆ ದುದಿದ ಎಣ್ಣೆ ಬಳಸಿದ ಆಹಾರಗಳ ಸೇವನೆಗೆ ಕಡಿವಾಣ ಹಾಕುವ ಜೊತೆಗೆ ಕೆಲವೊಂದು ಮನೆಯಲ್ಲೇ ಸಿಗುವ ಅಡುಗೆ ಸಾಮಗ್ರಿಗಳಿಂದಲೇ ಗ್ಯಾಸ್ಟ್ರಿಕ್‌ ಸಮಸ್ಯೆ ದೂರಗೊಳಿಸಬಹುದು. ಒಬ್ಬೊಬ್ಬರಿಗೆ ಒಂದೊಂದು ಆಹಾರದಿಂದ ಅಲಜಿ, ಗ್ಯಾಸ್ಟ್ರಿಕ್‌ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಯಾರಿಗೆ ಯಾವುದರಿಂದಲಾದ್ರೂ ಗ್ಯಾಸ್ಟ್ರಿಕ್‌ ಸಮಸ್ಯೆ ಉಂಟಾಗಬಹುದು. ಸಾಮಾನ್ಯವಾಗಿ ಆಲೂ,ಬದನೆ,ಕಡ್ಲೆಕಾಳು ತೊಗರಿಬೇಳೆ ಗ್ಯಾಸ್ಟ್ರಿಕ್ ಉಂಟು ಮಾಡುತ್ತವೆ ಎನ್ನಲಾಗುತ್ತದೆ. ಗ್ಯಾಸ್ಟ್ರಿಕ್‌ ಹೊಟ್ಟೆಯ ಸೆಡೆತ, ಹೊಟ್ಟೆಯುಬ್ಬರಿಕೆ, ತಲೆ ಸುತ್ತುವಿಕೆ ಮತ್ತು ಎದೆಯುರಿಗೆ ಕಾರಣವಾಗುತ್ತದೆ. ಜೀರ್ಣಾಂಗಗಳಲ್ಲಿ ವಾಯು ಉತ್ಪತ್ತಿಯಾಗಿ ಹೊರಬರಲು ನೀಡುವ ಒತ್ತಡವೇ ಗ್ಯಾಸ್ಟ್ರಿಕ್‌. ತಜ್ಞರು ಈ ಸಮಸ್ಯೆಗೆ ನಾನಾ ಕಾರಣಗಳನ್ನು ಪಟ್ಟಿ ಮಾಡುತ್ತಾರೆ. ಊಟದ ಸಮಯದಲ್ಲಿ ಪ್ರತಿ ತುತ್ತನ್ನೂ ನುಂಗುವಾಗ ಇದರೊಂದಿಗೆ ಕೊಂಚ ಪ್ರಮಾಣದಲ್ಲಿ ಹೊಟ್ಟೆ ಸೇರುವ ವಾತಾವರಣದ ಗಾಳಿ. ಅಹಾರ ಜೀರ್ಣಗೊಳ್ಳುವಾಗ ಉತ್ಪತ್ತಿಯಾಗುವ ಅನಿಲಗಳು ಈ…

Read More

ಗಂಡನ ಮನೆ ಹೋಗು ಎಂದು ತಾಯಿ ಬುದ್ದಿವಾದ ಹೇಳಿದ್ದಕ್ಕೆ ಬೇಸರಗೊಂಡ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಉಪ್ಪಾರಬೀದಿಯಲ್ಲಿ (ಮಾವಿನತೋಪು) ನಡೆದಿದೆ. ಉಪ್ಪಾರಬೀದಿ ನಿವಾಸಿ ಐಶ್ವರ್ಯ (20) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಐಶ್ವರ್ಯ‌ ಕುಣಿಗಲ್ ತಾಲೂಕಿನ ಅಮೃತೂರಿನ ಅನಿಲ್‌ಕುಮಾರ್‌ ಜೊತೆ ಹಲವು ವರ್ಷಗಳ ಹಿಂದೆ ಮದುವೆಯಾಗಿದ್ದು, 2021ರಲ್ಲಿ ಐಶ್ವರ್ಯ ಗರ್ಭಿಣಿಯಾಗಿದ್ದಳು. ಈ ಸಂದರ್ಭದಲ್ಲಿ ಐಶ್ವರ್ಯಳ ಮೈದುನ ಮತ್ತು ನಾದಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪತಿ ಅನಿಲ್‌ಕುಮಾರ್ ಪತ್ನಿಯನ್ನು ತವರು ಮನೆಗೆ ಬಿಟ್ಟು ಬಂದಿದ್ದರು. ತವರು ಮನೆಯಲ್ಲೇ ಹೆರಿಗೆ ಆಗಿ ಹಲವು ತಿಂಗಳು ಕಳೆದರೂ ಐಶ್ವರ್ಯ ಗಂಡನ ಮನೆಗೆ ಹೋಗಿರಲಿಲ್ಲ. ಹೀಗಾಗಿ ತಾಯಿ ಮಗಳಿಗೆ ತವರು ಮನೆಗೆ ಹೋಗುವಂತೆ ಬುದ್ಧಿವಾದ ಹೇಳಿದ್ದಾರೆ. ಬುದ್ಧಿವಾದದಿಂದ ಬೇಸರಗೊಂಡಿದ್ದ ಐಶ್ವರ್ಯ ತಾಯಿ ಮದುವೆಗೆ ಹೋಗಿದ್ದ ವೇಳೆಯಲ್ಲಿ ಮನೆಯಲ್ಲಿ ಯಾರು ಇಲ್ಲದಾಗ ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿನ ಕುರಿತು ತಾಯಿ ನೀಡಿದ ದೂರಿನ ಅನ್ವಯ…

Read More

ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಡೆದ ಟಿ-20 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ 5 ವಿಕೆಟ್ ಗಳಿಂದ ಜಯ ಗಳಿಸಿ ನೂತನ ಚಾಂಪಿಯನ್ ಆಗಿದೆ. ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆರಿಸಿಕೊಂಡಿತು. ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು. ಇಂಗ್ಲೆಂಡ್ 1 ಓವರ್ ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಪಾಕ್ ಪರ ನಾಯಕ ಬಾಬಾ ಅಜಂ 30 ರನ್ ಹಾಗೂ ಮಸೂದ್ 38 ರನ್ ಹೊಡೆದರು. ಅಂತ್ಯದಲ್ಲಿ ಶಾದಾಬ್ ಖಾನ್ 20 ರನ್ ಗಳಿಸಿದ್ದನ್ನು ಬಿಟ್ಟರೆ ಉಳಿದೆಲ್ಲ ಬ್ಯಾಟ್ಸ್‌ಮನ್ ಗಳು ತರಗಲೆಗಳಂತೆ ಔಟಾದರು. ಇಂಗ್ಲೆಂಡ್ ಪರ ಸ್ಯಾಮ್ ಕರ್ರನ್ 3 ವಿಕೆಟ್ ಹಾಗೂ ಅದಿಲ್ ರಶೀದ್-ಕ್ರಿಸ್ ಜೋರ್ಡನ್ ತಲಾ 2 ವಿಕೆಟ್ ಪಡೆದರು. ಬಳಿಕ ಇಂಗ್ಲೆಂಡ್ 19 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಹೊಡೆದು ಗೆಲುವು ಸಾಧಿಸಿತು.…

Read More

ಟರ್ಕಿಯ ರಾಜಧಾನಿ ಇಸ್ತಾಂಬುಲ್ ನ ಜನದಟ್ಟಣೆ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟಿದ್ದು, 53ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಸ್ತಾಂಬುಲ್ ನ ರಸ್ತೆ ಇಸ್ತಿಕಲಾಲ್ ನಲ್ಲಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಬಾಂಬ್ ಸ್ಫೋಟ ಸಂಭವಿಸಿದೆ. ಬಾಂಬ್ ಸ್ಫೋಟವಾಗುತ್ತಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪತ್ನಿ ಕಿರುಕುಳ ಕಾಟ ತಡೆಯಲಾರದೇ ಪತಿ ಹಾಗೂ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ರಾಜಗೋಪಾಲನಗರದ ಶ್ರೀಗಂಧ ನಗರದ ನಿವಾಸಿ ಅತ್ತೆ ಭಾಗ್ಯಮ್ಮ (57) ಮತ್ತು ಶ್ರೀನಿವಾಸ್ (33) ಮೃತಪಟ್ಟ ದುರ್ದೈವಿಗಳು. ಮೃತ ಶ್ರೀನಿವಾಸ್ ಪೋಷಕರಿಗೆ ವಯಸ್ಸಾಗಿದ್ದು, ತಿಂಗಳ ಹಿಂದೆಯಷ್ಟೇ ಮಡಿಕೇರಿಯಲ್ಲಿದ್ದ ತನ್ನ ತಂದೆ, ತಾಯಿಯನ್ನು ಬೆಂಗಳೂರಿನ ಮನೆಗೆ ಕರೆದುಕೊಂಡು ಬಂದಿದ್ದರು. ಶ್ರೀನಿವಾಸ್ ಪತ್ನಿ ಸಂಧ್ಯಾಳಿಗೆ ಇದು ಇಷ್ಟವಿರಲಿಲ್ಲ. ವಯಸ್ಸಾದ ಅತ್ತೆ – ಮಾವನನ್ನು ನೋಡಿಕೊಳ್ಳೋರು ಯಾರು? ನನಗೆ ಅತ್ತೆ, ಮಾವ ನೋಡಿಕೊಳ್ಳೋಕೆ ಕಷ್ಟ ಎಂದು ಸಂಧ್ಯಾ ಗಲಾಟೆ ತೆಗೆದಿದ್ದಳು. ಮಧ್ಯರಾತ್ರಿ ಮೂರು ಗಂಟೆಗೆ ಗಲಾಟೆ ನಡೆದಿತ್ತು ಎಂಬ ಆರೋಪ ಬಂದಿದೆ. ಸಂಧ್ಯಾಳ ಜಗಳದಿಂದ ಬೇಸತ್ತ ತಾಯಿ ಭಾಗ್ಯಮ್ಮ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಂತರ ಶ್ರೀನಿವಾಸ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಧ್ಯಾಹ್ನದ ತನಕ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗಲಾಟೆಯಿಂದ ಬೇಸತ್ತು ತಾಯಿ- ಮಗ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ…

Read More