Author: admin

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಗುತ್ತಿಗೆ ನೌಕರರಿಗೆ ಸಂಭಾವನೆಯನ್ನು ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಶೇ.15ರಷ್ಟು ಹೆಚ್ಚಿಸಲಾಗಿದೆ. ಈ ಆದೇಶವು  ಗುತ್ತಿಗೆ ನೌಕರರಿಗೆ ಮಾತ್ರವೇ ಅನ್ವಯವಾಗಲಿದೆ.ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಐಆರ್’ಸಿಟಿಸಿ ಪೋರ್ಟಲ್’ನಲ್ಲಿ ದೋಷ ಟಿಕೆಟ್ ಬುಕ್ಕಿಂಗ್’ಗೆ ಗ್ರಾಹಕರ ಪರದಾಟ ಇದರ ಪರಿಣಾಮವಾಗಿ ಸಾರ್ವಜನಿಕರು ಸಮಸ್ಯೆ ಅನುಭವಿಸಬೇಕಾಗಿದೆ. ಆನ್ ಲೈನ್ ಮೂಲಕ ಟಿಕೆಟ್‌ಗಳನ್ನು ಬುಕ್ ಮಾಡುವವರು ಬುಕ್ಕಿಂಗ್ ವೇಳೆ ಆಗುತ್ತಿರುವ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಿದ್ದಾರೆ. ತತ್ಕಾಲಿಕ  ಸೇವೆಯ ಮೂಲಕ ತಮ್ಮ ರೈಲು ಟಿಕೆಟ್‌ಗಳನ್ನು ಕಾಯ್ದಿರಿಸಲು ಪ್ರಯತ್ನಿಸುವಾಗ ಹೆಚ್ಚಿನವರು ಐಆರ್ ಸಿಟಿಸಿ ಪೋರ್ಟಲ್‌ನಲ್ಲಿ ದೋಷವನ್ನು ಎದುರಿಸಿದ್ದಾರೆ. ಹಲವರು ಅನಿರೀಕ್ಷಿತ ದೋಷವನ್ನು ಗಮನಕ್ಕೆ ತರುವ ಮೂಲಕ ಸಾಮಾಜಿಕ ಜಾಲತಾಣಗಳ ಮೂಲಕ ಸಮಸ್ಯೆಯನ್ನು ಹಂಚಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು : ಮಾರ್ಚ್‌ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್‌ಆರ್‌ಟಿಸಿ ಒಪ್ಪಿ ಸುತ್ತೋಲೆ ಹೊರಡಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿತ್ತು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಅಷ್ಟೇ ಅಲ್ಲದೆ ಪರೀಕ್ಷಾ ದಿನ ಸಂಚರಿಸುವಾಗಿ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಇನ್ನೂ ಈ ಕುರಿತಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸಲಹೆ ಸೂಚನೆಯನ್ನು…

Read More

2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ( Right to Education Act – RTE ) ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಸ್ವೀಕರಿಸಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ https://www.schooleducation.kar.nic.in ನಲ್ಲಿ ಖಚಿತಪಡಿಸಿಕೊಳ್ಳಬೇಕುಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಜ್ವರದಿಂದ ಬಳಲುತ್ತಿರುವ ಸೋನಿಯಾಗಾಂಧಿ ಅವರು ತಜ್ಞವೈದ್ಯರ ಮಾರ್ಗದರ್ಶನದಲ್ಲಿ ಸೋನಿಯಾಗಾಂಧಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ‌. ಎಂದು ಗಂಗಾರಾಮ್ ಆಸ್ಪತ್ರೆಯ ಮೂಲಗಳು ತಿಳಿಸಿವೆ. ವಯೋಸಹಜ ಸಮಸ್ಯೆಯಿಂದ ಹಾಗು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಡಿಎಸ್ ರಾಣಾ ತಿಳಿಸಿದ್ದಾರೆ. ನಿನ್ನೆ ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ಕಾಂಗ್ರೆಸ್ ಪಕ್ಷದ ನಾಯಕರು ವಿರೂಪಾಕ್ಷಪ್ಪ ಮಾತ್ರವಲ್ಲ ಸಿದ್ದರಾಮಯ್ಯನವರು ಸಹ ನನ್ನ ಆಪ್ತರೇ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಿದರೆ ಇತ್ತ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಬೆಳಗಾವಿಗೆ ಆಗಮಿಸಿದ ಅವರು ಮಾಧ್ಯಮದವರು ಮಾಡಾಳ್ ವಿರೂಪಾಕ್ಷಪ್ಪನವರ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸಮಾಧಾನ ಚಿತ್ತದಿಂದ, ಶಾಂತರಾಗಿ ಉತ್ತರ ನೀಡಿದರು.ವಿರೂಪಾಕ್ಷಪ್ಪ ಮತ್ತು ಅವರ ಮಗನ ಮೇಲೆ ಸರ್ಕಾರವಲ್ಲ, ಲೋಕಾಯುಕ್ತ ಕ್ರಮ ಜರುಗಿಸುತ್ತದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷದ ನಾಯಕರು ವಿರೂಪಾಕ್ಷಪ್ಪ ನಿಮ್ಮ ಆಪ್ತರೆಂದು ಅರೋಪಿಸುತ್ತಿದ್ದಾರೆ ಅಂತ ಹೇಳಿದ್ದಕ್ಕೆ ಅವರು ವಿರೂಪಾಕ್ಷಪ್ಪ ಮಾತ್ರವಲ್ಲ ಸಿದ್ದರಾಮಯ್ಯನವರು ಸಹ ನನ್ನ ಆಪ್ತರೇ ಎಂದು ನಗುತ್ತಾ ಉತ್ತರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : BSFನಲ್ಲಿ ಖಾಲಿಯಿರುವ 1284 ಕಾನ್ಸ್‌ಟೇಬಲ್ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು BSFನ ಅಧಿಕೃತ ವೆಬ್ ಸೈಟ್ (rectt.bsf.gov.in) ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 27 , 2023 ಹುದ್ದೆಗಳ ಸಂಖ್ಯೆ: ಒಟ್ಟು ಹುದ್ದೆಗಳ ಸಂಖ್ಯೆ- 1284 ಪುರುಷರಿಗಾಗಿ ಪೋಸ್ಟ್‌ಗಳ ಸಂಖ್ಯೆ – 1220 ಮಹಿಳೆಯರಿಗಾಗಿ ಹುದ್ದೆಗಳ ಸಂಖ್ಯೆ – 64 ಅರ್ಹತಾ ಮಾನದಂಡಗಳು: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ವ್ಯಾಪಾರದಲ್ಲಿ ಪರಿಣತಿ ಹೊಂದಿರಬೇಕು. ನೇಮಕಾತಿ ಮಂಡಳಿಯು ನಡೆಸುವ ಸಂಬಂಧಿತ ವ್ಯಾಪಾರದಲ್ಲಿ ಟ್ರೇಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಾನ್‌ಸ್ಟೆಬಲ್ (ಅಡುಗೆ), ಕಾನ್ಸ್‌ಟೇಬಲ್ (ವಾಟರ್ ಕ್ಯಾರಿಯರ್) ಮತ್ತು ಕಾನ್ಸ್‌ಟೇಬಲ್ (ವೇಟರ್) ಟ್ರೇಡ್‌ಗಳಿಗೆ: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಆಹಾರದಲ್ಲಿ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟಿನ ಹಂತ-1…

Read More

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್ ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್ ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ ದಿನಾಂಕ 21-03-2023, ಮಂಗಳವಾರ – ಹಿಂದಿ ದಿನಾಂಕ 23-03-2023, ಗುರುವಾರ – ಇಂಗ್ಲೀಷ್ ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ದಿನಾಂಕ 27-03-2023, ಸೋಮವಾರ…

Read More

ಚಿತ್ರದುರ್ಗ:  ಅತ್ಯಂತ ಕೆಳಸ್ತರದಲ್ಲಿರುವವರಿಗೆ ದುಡಿಯುವ ವರ್ಗದವರಿಗೆ ಸರ್ಕಾರ ನೀಡಿರುವ ಕಾರ್ಯಕ್ರಮ ಸರಿಯಾಗಿ ಮುಟ್ಟಿದೆ ಹಾಗೂ ಸರ್ಕಾರದ ಕಾರ್ಯಕ್ರಮಗಳು ಮುಟ್ಟದಿರುವ  ಕೆಲವು ಕಡೆಗಳಲ್ಲಿ ಅವುಗಳನ್ನು ವಿಲೇವಾರಿ ಮಾಡಲು ಆದೇಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ   ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ಫಲಾನುಭವಿಗಳ ಸಭೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಳ ಸ್ತರದಲ್ಲಿ ಶಕ್ತಿ ಇಲ್ಲದವರಿಗೆ    ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಇದನ್ನು ನೆರವೇರಿಸುವರು ಎಂದರು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ : ಬಗರ್ ಹುಕುಂ ಸಾಗುವಳಿ ಮಾಡುವವರಿಗೆ ಹಕ್ಕುಪತ್ರ ನೀಡುವ ಸಂಬಂಧ ಸಮಿತಿಯಲ್ಲಿ ಕೆಲಸಗಳಾಗುತ್ತಿದ್ದು,  ಫಾರಂ ನಂ 57 ಸಲುವಾಗಿ ಒಂದು ವರ್ಷ ವಿಸ್ತರಣೆ ಯೂ ಆಗಿದೆ. ಅದರಡಿ ವಿಲೇವಾರಿಗೆ ಆದೇಶ ನೀಡಿದ್ದು, ವಿಳಂಬವಾಗಿರುವಲ್ಲಿ ನೇರವಾಗಿ ಎ.ಸಿ ಅವರು ಸಭೆ ಮಾಡಿಸಿ ವಿತರಣೆ…

Read More

ಕೊರಟಗೆರೆ: ಕೊರಟಗೆರೆಯಲ್ಲಿ ರಾಜೀವ(ಕಾಂಗ್ರೆಸ್) ಭವನವನ್ನು ನೂತನವಾಗಿ ಜನತೆಯ ಸಹಕಾರದಿಂದ ನಿರ್ಮಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾ.5ರ ಭಾನುವಾರ 11 ಗಂಟೆಗೆ ಏರ್ಪಡಿಸಿದ್ದು, ನಮ್ಮ ಆತ್ಮೀಯರು, ನಮ್ಮ ರಾಜ್ಯದವರೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಈ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ನೂತನ ಕಾಂಗ್ರೆಸ್ ಭವನ ಆವರಣದಲ್ಲಿ ಏರ್ಪಡಿಸಲಾದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜೀವ ಭವನ ಉದ್ಘಾಟನೆ ಹಾಗೂ ಜಿಲ್ಲಾ ಸಮಾವೇಶಕ್ಕೆ ನಮ್ಮ ನೆಚ್ಚಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ಆಗಮನದಿಂದ ಮೆರುಗು ತರುವುದರ ಜೊತೆಗೆ ಈ ಕಾರ್ಯಕ್ರಮ ಐತಿಹಾಸಿಕವಾಗಲಿದೆ ಎಂದು ತಿಳಿಸಿದರು. ನಮ್ಮ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷವಾಗಿ ಒದಗಿ ಬಂದ ಭಾಗ್ಯ ಎಂದು ನನ್ನ ಭಾವನೆ ಜೊತೆಗೆ ಚುನಾವಣೆ ಕೂಡ ಸಮೀಪದಲ್ಲಿರುವ ದೃಷ್ಠಿಯಿಂದ ಜಿಲ್ಲಾ ಸಮಾವೇಶವಾಗಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಕಾರ್ಯದರ್ಶಿ ಸುರ್ಜಿವಾಲ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಮೇಲ್ಮನೆ ವಿರೋಧಪಕ್ಷದ ನಾಯಕ ಹರಿಪ್ರಸಾದ್, ಕೋಲಾರ ಸಂಸದ ಮುನಿಯಪ್ಪ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ…

Read More