Author: admin

ಹೆಚ್.ಡಿ.ಕೋಟೆ: ಪುರಸಭೆ ಕಾರ್ಯಲಯದಲ್ಲಿ ಖಾಸಗಿ ವ್ಯಕ್ತಿಗಳ ದರ್ಬಾರಿಗೆ ಕೋಕ್ ಕೊಡುವುದಾಗಿ ನೂತನ ಸ್ಥಾಯಿಸಮಿತಿ ಅಧ್ಯಕ್ಷ ಐಡಿಯ ವೆಂಕಟೇಶ್ ಭರವಸೆ ನೀಡಿದರು. ಹೆಚ್.ಡಿ.ಕೋಟೆ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಹಗಲು ದಂಧೆ ನಡೆಯುತಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದ ಕೂಗಿಗೆ ಸ್ಪಂದಿಸುವುದಾಗಿ ತಿಳಿಸಿದ ಅವರು, ಪುರಸಭೆ ಕಾರ್ಯಾಲಯದಲ್ಲಿ ಸರ್ಕಾರದ ಆದೇಶವಿಲ್ಲದೇ,  ಕೆಲವು ವ್ಯಕ್ತಿಗಳು ಅಧಿಕಾರಿಗಳ ಕುಮ್ಮಕ್ಕಿನಿಂದ ಸರ್ಕಾರಿ ಕಡತಗಳನ್ನು ತೆಗೆದುಕೊಂಡು ತಮ್ಮ ಮನಬಂದಂತೆ ವರ್ತಿಸುತ್ತಿದ್ದು, ಅಂತಹ ವ್ಯಕ್ತಿಗಳ ಮೇಲೆ ಶಿಸ್ತುಕ್ರಮ ಜರಗಿಸುವುದಾಗಿ ಭರವಸೆ ನೀಡಿದರು. ಪುರಸಭೆ ಕಾರ್ಯಾಲಯದಲ್ಲಿ ಅಧಿಕಾರಿಗಳು ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಹಿಂದೇಟು ಹಾಕಿದ್ದು, ತಾವು ನೇಮಕ ಮಾಡಿಕೊಂಡ ದಳ್ಳಾಳಿಗಳ ಮುಖಾಂತರ ಹೋದರೆ ಮಾತ್ರ ಕೆಲಸ ಕಾರ್ಯಮಾಡಿಕೊಡುವುದು  ಇಲ್ಲವಾದರೆ ಸಾರ್ವಜನಿಕ ಕೆಲಸ ಕಾರ್ಯ ಮಾಡದೆ ಅಲೆದಾಡಿಸುತ್ತಿದ್ದಾರೆ.  ಸರ್ಕಾರದಿಂದಯಾವುದೇ ಆದೇಶವನ್ನು ಪಡೆಯದೆ ಖಾಸಗಿ ವ್ಯಕ್ತಿಗಳನ್ನು ಅಧಿಕಾರಿಗಳು ನೇಮಕ ಮಾಡಿಕೊಂಡಿರುವುದು ಆನೇಕ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇಂತಹ ಸಿಬ್ಬಂದಿಯ ಮೇಲೆ ನಿರ್ದಾಕ್ಷಿಣ್ಯವಾಗಿ ನಮ್ಮ ಆಡಳಿತ ಮಂಡಳಿಯವರಿಗೆ ತಿಳಿಸಿ ಸೂಕ್ತಕ್ರಮ ಜರುಗಿಸುವುದಾಗಿ ವೆಂಕಟೇಶ್ ಭರವಸೆ ನೀಡಿದರು…

Read More

ಪ್ರಪಂಚದಾದ್ಯಂತ ಕೆಲವು ವಿಶೇಷ ದಿನಗಳನ್ನು ಆಚರಿಸುವ ಪದ್ಧತಿ ಇದೆ. ಇದು ಸಂತೋಷದ ದಿನಗಳನ್ನು ಸಹ ಹೊಂದಿದೆ. ಅದನ್ನು ಆಚರಿಸುವುದು ಎಂದರೆ ನಾವು ಅವರ ನೆನಪನ್ನು ಹಂಚಿಕೊಳ್ಳುತ್ತಿದ್ದೇವೆ ಎಂದರ್ಥ. ನಮ್ಮ ಭಾರತ ದೇಶದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟಗಾರ, ಭಾರತಕ್ಕೆ ಬೆಳಕಾಗಿದ್ದ ಮಂತರುಲ್ ಮಾಣಿಕಂ ಅವರ ಜನ್ಮದಿನವಾದ ನವೆಂಬರ್ 14 ರಂದು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಪ್ರೀತಿಸುವ ಮತ್ತು ಅವರೊಂದಿಗೆ ಸಂವಹನ ನಡೆಸುತ್ತಿದ್ದ ಭಾರತದ ಮೊದಲ ಪ್ರಧಾನಿ ಅವರನ್ನು ಮಕ್ಕಳು ಅಂಕಲ್ ನೆಹರು ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಯಾವಾಗಲೂ ತನ್ನ ಅಂಗಿಯೊಳಗೆ ಗುಲಾಬಿಯನ್ನು ಹಿಡಿದಿರುವ ಸಂಭಾವಿತ ವ್ಯಕ್ತಿ. ನೆಹರು ಮಕ್ಕಳಿಗಾಗಿ ಅನೇಕ ಉಲ್ಲೇಖಗಳು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳೇ ಭಾರತದ ಭವಿಷ್ಯ ಮತ್ತು ಅವರನ್ನು ಬೌದ್ಧಿಕವಾಗಿ ಮತ್ತು ವಿದ್ಯಾವಂತರನ್ನಾಗಿ ಮಾಡಬೇಕು ಎಂಬ ದೃಢ ನಂಬಿಕೆ ನೆಹರೂ ಅವರಲ್ಲಿತ್ತು. “ಇಂದಿನ ಮಕ್ಕಳೇ ನಾಳಿನ ನಾಯಕರು” ಎಂಬುದು ಅವರ ಪ್ರಸಿದ್ಧ ಧ್ಯೇಯವಾಕ್ಯ. ಅವರು…

Read More

ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಘಟಪ್ರಭಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಇದೇ ನವೆಂಬರ್ 11 ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಮುತ್ತಿಗೆ ಹಾಕಿ ಸತೀಶ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಹಿನ್ನೆಲೆಯಲ್ಲಿ ಘಟಪ್ರಭಾ ಠಾಣೆಯಲ್ಲಿ ಇದೀಗ 18 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಧರಣಿ ನಡೆಸುತ್ತಿದ್ದ ವೇಳೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ವಿವಿಧ ದಲಿತ ಸಂಘಟನೆ ಮುಖಂಡರ ವಿರುದ್ಧ ದೂರು ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ : ಹಿರೇಬಾಗೇವಾಡಿ ಹೊರವಲಯದ ಘಾಟ್ ರಸ್ತೆಯಲ್ಲಿ ಲಾರಿ, ಟ್ರ್ಯಾಕ್ಟರ್ ಹಾಗೂ ಎರಡು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ತೀವ್ರ ಗಾಯಗೊಂಡಿದ್ದಾರೆ. ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಹೊರಟಿದ್ದ ಲಾರಿಯು ಟ್ರ್ಯಾಕ್ಟರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು. ಎರಡು ವಾಹನಗಳು ರಸ್ತೆ ಪಕ್ಕದ ಎರಡು ಬೈಕುಗಳಿಗೆ ಡಿಕ್ಕಿ ಹೊಡೆದವು. ಒಂದಕ್ಕೂಂದು ಗುದ್ದಿದ ರಭಸಕ್ಕೆ ನಾಲ್ಕೂ ವಾಹನಗಳು ರಸ್ತೆ ಬದಿಗೆ ಉರುಳಿ ಬಿದ್ದವು. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಮೂರು ತುಂಡಾಗಿದೆ. ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಒಬ್ಬ ಬೈಕ್ ಸವಾರ, ಟ್ರ್ಯಾಕ್ಟರ್ ಚಾಲಕ ಹಾಗೂ ಲಾರಿ ಚಾಲಕ ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಇನ್ನಿಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ರಸ್ತೆ ಬದಿಯ ತಗ್ಗಿನಲ್ಲಿ ಲಾರಿ ಮುಂಭಾಗ ಕೆಳಗೆ ಮಾಡಿ ಬಿದ್ದಿದ್ದರಿಂದ ಅದರೊಳಗೆ ಸಿಲುಕಿಕೊಂಡ ಚಾಲಕನನ್ನು ಹೊರತೆಗೆಯಲು ಊರಿನ ಜನ ಹಗ್ಗಗಳನ್ನು ತಂದು ಲಾರಿಯ ಮುಂಭಾಗದ ಸರಳು, ಗಾಜು,…

Read More

ಹೆ.ದೇ.ಕೋಟೆ: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬಿರ್ಸಾ ಮುಂಡ ಬುಡಕಟ್ಟು ಸಮಾಜಗಳ ಅಭಿವೃದ್ಧಿ ಮತ್ತು ಸೇವಾ ಒಕ್ಕೂಟ ಮತ್ತು ಶೋಟೋಕಾನ್ ಕರಾಟೆ ಮತ್ತು ಮಾರ್ಟಿಯಲ್ ಆರ್ಟ್ ಅಕಾಡೆಮಿ ವತಿಯಿಂದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಸುಮಾರು 500 ನೂರಕ್ಕು ಹೆಚ್ಚು ಕರಾಟೆ ಪಟುಗಳು ಭಾಗವಹಿಸಿ ತಮ್ಮ ತಮ್ಮ ಪ್ರತಿಭೆಗಳನ್ನು ಪ್ರದರ್ಶನ ಮಾಡಿದರು. ಈ ಪಂದ್ಯಾವಳಿಯ ವೇದಿಕೆಯಲ್ಲಿ ಜಿ.ಎನ್. ದೇವದತ್ತ, ಜಯಪ್ರಕಾಶ್,  ಬೆಟ್ಟಸ್ವಾಮಿ, ಮಹೇಂದ್ರ, ಎಡತೊರೆ ಮಹೇಶ್, ವೆಂಕಟೇಶ,  ಕರಾಟೆ ಮಾಸ್ಟರ್ ಗಳಾದ ಸೇನ್ ಸೈ  ಅಬ್ದುಲ್, ಮಹಮೊದ್,  ಚಂದ್ರನ್, ಮನೋಜ್, ರಾಯಪ್ಪ, ಸಂದೇಶ ಮುಂತಾದವರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿಗಾರರಿಗೆ 354ಕೋಟಿ ಯಲ್ಲಿ 20 ಕುರಿ 1 ಮೇಕೆ ವಿತರಣಾ ಯೋಜನೆಯನ್ನು ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ ಘೋಷಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರನ್ನು ಕುರುಬ ಸಮುದಾಯಕ್ಕಾಗಿ ಯೋಜನೆ ಘೋಷಿಸಿರುವುದಕ್ಕೆ ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ಮಾಜಿ ಸಚಿವರಾದ ಹೆಚ್ ಎಂ ರೇವಣ್ಣನವರ ನೇತೃತ್ವದಲ್ಲಿ. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಲದಿಂದ ಸನ್ಮಾನಿಸಲಾಯಿತು. ಮಹಾಮಂಡಳ ಅಧ್ಯಕ್ಷರಾದ ಶ್ರೀ ಶರಣು ಬಿ ತಳ್ಳಿಕೇರಿ , ಉಪಾಧ್ಯಕ್ಷರಾದ ಶ್ರೀ ಕಾಶಿನಾಥ್ ಹುಡೇದ ಸೇರಿದಂತೆ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಧಾನಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಚುನಾವಣೆ ಪ್ರಚಾರಕ್ಕೆಂದು ಸಿದ್ಧಗೊಳಿಸಲಾಗಿರುವ ವಿಶೇಷ ಬಸ್‌ ಪರೀಕ್ಷಾರ್ಥ ಸಂಚಾರದಲ್ಲಿ ಪಾಲ್ಗೊಂಡರು. ಈ ವೇಳೆ ಕಾಂಗ್ರೆಸ್‌ ಪಕ್ಷದ ಇತರ ನಾಯಕರು ಜೊತೆಗಿದ್ದರು. ಈ ಬಸ್‌ ಕ್ಯಾರವಾನ್‌ ಮಾದರಿಯಲ್ಲಿ ವಿನ್ಯಾಸಗೊಂಡಿದ್ದು ಎಲ್ಲ ವ್ಯವಸ್ಥೆಗಳನ್ನು ಒಳಗೊಂಡಿದೆ. ಟಿ.ವಿ, ಕಾನ್ಫರೆನ್ಸ್‌ ಹಾಲ್‌, ವಿಶ್ರಾಂತಿ ಕೊಠಡಿ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒಳಗೊಂಡಂರೆ ಬಸ್‌ ರೂಪಿಸಲಾಗಿದೆ. ರಾಹುಲ್ ಗಾಂಧಿ ಕರ್ನಾಟಕದಲ್ಲಿ ನಡೆಸಿದ ಭಾರತ್ ಜೋಡೊ ಪಾದಯಾತ್ರೆ ಯಶಸ್ವಿ ಬೆನ್ನಲ್ಲೆ ಸಿದ್ದರಾಮಯ್ಯ ಚುನಾವಣಾ ಪ್ರಚಾರ ರಾಜ್ಯಾದ್ಯಂತ ಆರಂಭಿಸಲಿದ್ದು, ಇದಕ್ಕಾಗಿ ತಯಾರಿ ಆರಂಭಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಏರ್ ಶೋ ವೇಳೆ ಎರಡು ವಿಮಾನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟಿರುವ ಘಟನೆ ಅಮೆರಿಕದ ಟೆಕ್ಸಾಸ್ ಬಳಿಯ ಡಲ್ಲಾಸ್ ಎಕ್ಸಿಕ್ಯೂಟಿವ್ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದೆ. ಬೋಯಿಂಗ್ ಬಿ-17 ಹೆಸರಿನ ದೊಡ್ಡ ಹಾಗೂ ಸಣ್ಣ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ವಿಮಾನದಲ್ಲಿದ್ದ 6 ಮಂದಿ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಏರ್ ಶೋ ವೀಕ್ಷಿಸಲು ಬಂದಿದ್ದ ಸಾರ್ವನಿಕರು ಈ ಭಯಾನಕ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಬೋಯಿಂಗ್ ಬಿ-17 ವಿಮಾನ ನೆಲದ ಮೇಲೆ ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದರೆ ಪಕ್ಕದಲ್ಲೇ ಅಡ್ಡ ಬಂದ ಸಣ್ಣ ವಿಮಾನ ಡಿಕ್ಕಿ ಹೊಡೆದಿದೆ. ಎರಡು ವಿಮಾನಗಳು ಬೆಂಕಿ ಹೊತ್ತಿಕೊಂಡು ಧರೆಗುರುಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಾಯಿ ಕಚ್ಚಿದರೆ ಸಂತ್ರಸ್ತರ ಚಿಕಿತ್ಸೆಗೆ ನಾಯಿ ಮಾಲೀಕರು 10 ಸಾವಿರ ರೂ. ನೀಡಬೇಕು ಎಂದು ನೋಯ್ಡಾದಲ್ಲಿ ಆದೇಶಿಸಲಾಗಿದೆ. ಮಾರ್ಚ್ 1, 2023ರಿಂದ ಅನ್ವಯ ಆಗುವಂತೆ ನೋಯ್ಡಾ ಪ್ರಾಧಿಕಾರ ಈ ಆದೇಶ ಹೊರಡಿಸಿದೆ. ನಗರದಲ್ಲಿ ನಾಯಿ ದಾಳಿ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ನೋಯ್ಡಾ ಪ್ರಾಧಿಕಾರ ಈ ಆದೇಶ ಹೊರಡಿಸಿದೆ. ಶನಿವಾರ ನಡೆದ ನೋಯ್ಡಾ ಪ್ರಾಧಿಕಾರ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಗಂಬೀರ ಚರ್ಚೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಶಾಲೆಗಳಲ್ಲಿ ಹಿಜಾಬ್, ಪಠ್ಯ ಪರಿಷ್ಕರಣೆ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಶುರುವಾಗಿದ್ದು, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಿಕ್ಷಣ ಇಲಾಖೆ ಹೊಸದಾಗಿ 7000ಕ್ಕೂ ಅಧಿಕ ಶಾಲಾ ಕಾಲೇಜು ಕೊಠಡಿಗಳಿಗೆ ಸ್ವಾಮಿ ವಿವೇಕಾನಂದರ ನೆನಪಿನಲ್ಲಿ ವಿವೇಕ ಶಾಲೆ ಎಂದು ಹೆಸರಿಡಲು ಮುಂದಾಗಿದ್ದು, ಈ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಸಲು ಚಿಂತನೆ ನಡೆಸಿದೆ. ಇಲಾಖೆಯ ಈ ನಡೆ ಮುಸ್ಲಿಂ ಮುಖಂಡರಿಂದ ಖಂಡನೆ ವ್ಯಕ್ತವಾಗಿದೆ. ಶಿಕ್ಷಣ ಇಲಾಖೆ ವಿವೇಕಾನಂದರ ಹೆಸರನ್ನ ಉಪಯೋಗಿಸಿಕೊಂಡು ಶಾಲೆಗಳನ್ನ ಕೇಸರಿಮಯ ಮಾಡಲು ಮುಂದಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯ ನಂತರ ಎರಡನೇ ಸುತ್ತಿನ ಕೇಸರೀಕರಣ ಶುರು ಮಾಡಿದೆ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More