Subscribe to Updates
Get the latest creative news from FooBar about art, design and business.
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
- ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
- ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
- ಜೂಜಾಟ: 12 ಮಂದಿ ಆರೋಪಿಗಳ ಬಂಧನ
Author: admin
ಹಾಸನ: ಕುಮಾರಣ್ಣ ನನ್ನ ಹಿತೈಷಿ, ಯಾವಾಗಲೂ ನನ್ನ ಒಳಿತನ್ನೇ ಬಯಸುವಂತಹವರು. ಅವರು ಏನು ಹೇಳಿದರೂ ಆಶೀರ್ವಾದ ಅನ್ಕೊತೀನಿ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ. ಅವನ್ಯಾವನೋ ಶಾಸಕ 50 ಸಾವಿರ ಲೀಡ್‌ನಿಂದ ಗೆಲ್ತೀನಿ ಅಂತ ಚಾಲೆಂಜ್ ಹಾಕ್ತಾನೆ ಎಂಬ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿಗೆ ನಯವಾಗಿಯೇ ತಿರುಗೇಟು ಕೊಟ್ಟ ಪ್ರೀತಂ ಗೌಡ, ಅವರು ವೈಯುಕ್ತಿಕವಾಗಿ ನನ್ನ ಬಗ್ಗೆ ಮಾತಾನಾಡಿದರೆ ಅವರು ಯಾವಾಗಲೂ ನನ್ನ ಹಿತೈಷಿಯೇ. ನನ್ನ ಬಗ್ಗೆ ವೈಯುಕ್ತಿಕವಾಗಿ ಮಾತನಾಡಿದರೆ ಅವರು ಪ್ರೀತಿಯಿಂದ ಮಾತನಾಡಿರುತ್ತಾರೆ ಎಂದರು. ಅವರ ಪ್ರೀತಿಯನ್ನು ನಾನು ಆಶೀರ್ವಾದ ಎಂದು ತೆಗೆದುಕೊಂಡಿರುತ್ತೇನೆ. ಅವರ ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರುತ್ತದೆ. ಅವರು ಏನು ಬಯಸುತ್ತಾರೆ ಅದನ್ನು ಮಾಡುವುದಕ್ಕೆ ಅವರ ಒಬ್ಬ ಸಹೋದರನಾಗಿ ನಾನು ಹಾಸನದಲ್ಲಿ ಅವರ ಪರವಾಗಿ ಯೋಚನೆ ಮಾಡುತ್ತೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಸಾಧು ಕೋಕಿಲ ಅವರಿಗೆ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‍ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಶುಭವಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಭಾಶಯ ಕೋರಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತುಮಕೂರು ವಿಧಾನಸಭಾ ಕ್ಷೇತ್ರ: ಕರ್ನಾಟಕ ರಾಷ್ಟ್ರ ಸಮಿತಿ(KRS) ಪಕ್ಷದ ವತಿಯಿಂದ ಏಳಿ! ಎದ್ದೇಳಿ! ವೀರಕನ್ನಡಿಗರೇ, ಭ್ರಷ್ಟರನ್ನು ತೊಲಗಿಸುವ ತನಕ ವಿರಮಿಸದಿರಿ ಅನ್ನೋ ಘೋಷಣೆಯೊಂದಿಗೆ ಕೆ ಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಕರುನಾಡು ಕಟ್ಟೋಣ — ಸಂಕಲ್ಪ ಯಾತ್ರೆ ಯಶಸ್ವಿಯಾಗಿ ನಡೆದಿದ್ದು, ಇದೀಗ ಯಾತ್ರೆಯ ಸಮಾರೋಪ ಸಮಾರಂಭ ನಡೆದಿದೆ. ಯಾತ್ರೆಯು ರಾಮನಗರ ಜಿಲ್ಲೆಯ ಮಾಗಡಿಯಿಂದ ಪ್ರಾರಂಭವಾಗಿ ತುಮಕೂರು, ಹಾಸನ, ಚಿಕ್ಕಮಗಳೂರು,ದಾವಣಗೆರೆ, ಹಾವೇರಿ ಮಾರ್ಗವಾಗಿ , ಧಾರವಾಡ, ಬೆಳಗಾವಿ ಮತ್ತು ಬಾಗಲಕೋಟೆ , ಕೊಪ್ಪಳ, ವಿಜಯನಗರ, ಬಳ್ಳಾರಿ, ಇಂದು ಚಿತ್ರದುರ್ಗ ತಲುಪಿ ಮುಂದೆ ಸಾಗಿ ಸಿರಾ ಮತ್ತು ತುಮಕೂರಿನಲ್ಲಿ ಸಮಾರೋಪಗೊಂಡಿದೆ. ಪ್ರಸ್ತುತ ಯಾತ್ರೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೆ.ಆರ್.ಎಸ್. ಪಕ್ಷದ ಪ್ರಮುಖ ಪ್ರಣಾಳಿಕೆ ಅಂಶಗಳನ್ನು ಬಿಡುಗಡೆ ಮಾಡಲಾಗುವುದು ಮತ್ತು ಅದನ್ನು ಜನರಿಗೆ ತಲುಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಯಾತ್ರೆಯ ಸಮಾರೋಪದಲ್ಲಿ ಪಕ್ಷದ ಸಂಪೂರ್ಣ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು. ಈಗಾಗಲೇ ಕರ್ನಾಟಕ ರಾಷ್ಟ್ರ…
ಚೆನ್ನೈ – ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಆದರೆ, ಪ್ರತಿದಿನ ಸರಾಸರಿ 30ರಿಂದ 40 ಕಾಡ್ಗಿಚ್ಚುಗಳು ಉರಿಯುತ್ತಿದ್ದು,ಭಾರತೀಯ ಅರಣ್ಯ ಸಂಶೋಧನಾ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಜಿಲ್ಲಾ ಅರಣ್ಯಾಧಿಕಾರಿಗಳ ಮೂಲಕ ಅಗ್ನಿಶಾಮಕದವರು ನಂದಿಸುವ ಕಾರ್ಯ ಮಾಡುತ್ತ ಬರುತ್ತಿದ್ದಾರೆ. ತಮಿಳುನಾಡು ಮಾತ್ರವಲ್ಲದೆ ಕರ್ನಾಟಕ, ಆಂಧ್ರಪ್ರದೇಶ, ಇನ್ನಿತರ ಅರಣ್ಯಪ್ರದೇಶದಲ್ಲಿ ಬೇಸಿಗೆ ಕಾಲದಲ್ಲಿ ವಿವಿಧ ರೀತಿಯಲ್ಲಿ ಕಾಡುಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅನೇಕ ಪ್ರಾಣಿಸಂಕುಲ ನಾಶ ಹೊಂದುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತ ಮತ್ತು ಚೀನಾ ನಡುವೆ ಬಲವಾದ ಸಂಬಂಧವನ್ನು ರಷ್ಯಾ ಬಯಸುತ್ತದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ. ಅಬ್ಸರ್ವರ್ ರಿಸರ್ಚ್ ಫೌಂಡೇಶನ್ (ಒಆರ್‌ಎಫ್) ಅಧ್ಯಕ್ಷ ಸಂಜಯ್ ಜೋಶಿ ಮಾತನಾಡಿ, ಭಾರತ ಮತ್ತು ಚೀನಾದೊಂದಿಗೆ ರಷ್ಯಾ ವಿಶೇಷ ಸವಲತ್ತು ಸಹಭಾಗಿತ್ವವನ್ನು ಹೊಂದಿದೆ ಎಂದು ಲಾವ್ರೊವ್ ಹೇಳಿದರು. ಪಾಶ್ಚಿಮಾತ್ಯ ದೇಶಗಳು, ಅದರಲ್ಲೂ ವಿಶೇಷವಾಗಿ ಅಮೆರಿಕ, ಭಾರತ-ಚೀನಾ ಗಡಿ ಸಮಸ್ಯೆಯನ್ನು ಉಭಯ ದೇಶಗಳ ನಡುವಿನ ಅನುಮಾನ ಮತ್ತು ಗೊಂದಲಗಳಿಗೆ ಇಂಧನವಾಗಿ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬ್ರಿಟನ್‌ನಲ್ಲಿ ಕಿಂಗ್ ಚಾರ್ಲ್ಸ್‌ನ ಪಟ್ಟಾಭಿಷೇಕ ಸಮಾರಂಭದ ಮೊದಲು ಬ್ರಿಟನ್‌ನ ಐತಿಹಾಸಿಕ ಸಿಂಹಾಸನವನ್ನು ಅಲಂಕರಿಸಲಾಗಿದೆ. ಸಿಂಹಾಸನವನ್ನು ಹೆನ್ರಿ VIII, ಚಾರ್ಲ್ಸ್ I, ರಾಣಿ ವಿಕ್ಟೋರಿಯಾ ಮತ್ತು ಇತರರು ಬಳಸಿದರು. ಈ ಸಿಂಹಾಸನವನ್ನು ಬ್ರಿಟಿಷ್ ರಾಜಮನೆತನವು 700 ವರ್ಷಗಳಿಂದ ಬಳಸುತ್ತಿದೆ ಎಂದು ಹೇಳಲಾಗಿದೆ. ಓಕ್‌ನಿಂದ ಮಾಡಲ್ಪಟ್ಟ ಈ ಸಿಂಹಾಸನವನ್ನು ಐತಿಹಾಸಿಕ ಸಮಾರಂಭದಲ್ಲಿ ಬಳಸಲಾಗುವ ಅತ್ಯಂತ ಹಳೆಯ ಮರದ ತುಂಡು ಎಂದು ಪರಿಗಣಿಸಲಾಗಿದೆ. ಸಿಂಹಾಸನವನ್ನು 1300 ರಲ್ಲಿ ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. 39 ಆಡಳಿತಗಾರರು ಸಿಂಹಾಸನವನ್ನು ಬಳಸಿದ್ದಾರೆಂದು ಹೇಳಲಾಗಿದೆ. ಕಿಂಗ್ ಎಡ್ವರ್ಡ್ ಸ್ಟೋನ್ ಆಫ್ ಡೆಸ್ಟಿನಿ ಎಂದು ಕರೆಯಲ್ಪಡುವ ಆಭರಣದಿಂದ ಸುತ್ತುವರಿದ ಸಿಂಹಾಸನವನ್ನು ನಿರ್ಮಿಸಲು ಆದೇಶಿಸುತ್ತಾನೆ. 1399 ರಿಂದ, ಈ ಭವ್ಯವಾದ ಸಿಂಹಾಸನವನ್ನು ಪಟ್ಟಾಭಿಷೇಕ ಸಮಾರಂಭಗಳಿಗೆ ಬಳಸಲಾಗುತ್ತಿತ್ತುಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಖಾಸಗಿ ಶಾಲೆಗಳ NOC, ನವೀಕರಣ ಪತ್ರ, ನೋಂದಣಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗೆ ತಡವಾಗುತ್ತಿತ್ತು. ಹೀಗಾಗಿ ಈ ವ್ಯವಸ್ಥೆಯನ್ನ ಸರಳೀಕೃತ ಮಾಡಿದ್ದೇವೆ. ಈಗ ಎಲ್ಲವನ್ನು ಆನ್ ಲೈನ್ ಸೇವೆಯ ಮೂಲಕ ಕೊಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಖಾಸಗಿ ಶಾಲೆಗಳು NOC, ನವೀಕರಣ ಪತ್ರ, ನೋಂದಣಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗೆ ತಡವಾಗುತ್ತಿತ್ತು. ಅದ್ದರಿಂದ ಎಲ್ಲವನ್ನು ಆನ್ ಲೈನ್ ಸೇವೆಯ ಮೂಲಕ ಕೊಡಲಾಗ್ತಿದೆ. ಪ್ರತಿಯೊಂದು ಪ್ರಕ್ರಿಯೆ ಮೊದಲು 8 ಹಂತದಲ್ಲಿ ಇತ್ತು. ಈಗ 4 ಹಂತಕ್ಕೆ ಇಳಿಸಿದ್ದೇವೆ. ಮೊದಲು 27 ದಿನ ಸಮಯ ಆಗುತ್ತಿತ್ತು. ಈಗ 17 ದಿನಕ್ಕೆ ಪ್ರಕ್ರಿಯೆ ಮುಗಿಸುತ್ತಿದ್ದೇವೆ. ಎಲ್ಲವೂ ಆನ್ ಲೈನ್ ವ್ಯವಸ್ಥೆ ಮಾಡಿದ್ದೇವೆ. ಅರ್ಜಿಯ ಮಾಹಿತಿ ಬಗ್ಗೆ ಮೆಸೇಜ್ ಮೂಲಕ ಅರ್ಜಿದಾರನಿಗೆ ರವಾನೆ ಮಾಡಲಾಗುತ್ತದೆ. ಡಿಜಿಟಲ್ ಸಹಿ ಮೂಲಕ ಎಲ್ಲಾ ಮಾನ್ಯತೆ ಕೊಡುವ ಪ್ರಕ್ರಿಯೆ ಮಾಡುತ್ತಿದ್ದೇವೆ. ಹೊಸ ಶಾಲಾ ನೋಂದಣಿ, ಮಾನ್ಯತೆ…
ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ನಿರ್ದೇಶಕರು ಹಾಗೂ ಕೆಲ ಸಿಬ್ಬಂದಿಯಿಂದ ನಡೆದಿದೆ ಎನ್ನಲಾದ ಸುಮಾರು 40 ಕೋಟಿ ರೂ.ಗಳ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅರಣ್ಯ ವಿಜಿಲೆನ್ಸ್ ತಂಡದಿಂದ ತನಿಖೆ ನಡೆಸಲು ಅರಣ್ಯ ಪಡೆಯ ಮುಖ್ಯಸ್ಥರೂ ಆಗಿರುವ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ( ಪಿಸಿಸಿಎಫ್) ಆರ್ ಕೆ.ಸಿಂಗ್ ಆದೇಶಿಸಿದ್ದಾರೆ. ಕಟ್ಟಡ ನಿರ್ಮಾಣ, ಹಲವು ಕಾಮಗಾರಿಗಳಲ್ಲಿ ನಿಯಮ ಪಾಲಿಸದೇ ಭ್ರಷ್ಟಾಚಾರ ಎಸಗಲಾಗಿದೆ ಎನ್ನುವ ಕುರಿತು ರೈತಸಂಘ ಸೇರಿದಂತೆ ಬೇರೆ ಸಂಘಟನೆಗಳಿಂದಲೂ ದೂರು ಬಂದಿರುವ ಹಿನ್ನೆಲೆಯಲ್ಲಿ ಪಿಸಿಸಿಎಫ್ ಅವರು ಈ ಆದೇಶವನ್ನು ಮಾಡಿದ್ದು, ವಿಜಿಲೆನ್ಸ್ ತಂಡ ತನಿಖೆ ಆರಂಭಿಸಿದೆ. ಈಗಾಗಲೇ ಬಂಡೀಪುರದ ಸಿಬ್ಬಂದಿ ನಾಗೇಂದ್ರ ಎನ್ನುವವರ ವಿರುದ್ದ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ವಿಜಿಲೆನ್ಸ್ ತಂಡವು ಈಗಾಗಲೇ ತನಿಖೆ ನಡೆಸಿ ಕ್ರಮಕ್ಕೆ ಶಿಫಾರಸ್ಸು ಮಾಡಿದೆ. ಅಲ್ಲದೇ ಬಂಡೀಪುರ ನಿರ್ದೇಶಕ ಡಾ.ಪಿ.ರಮೇಶ್ ಕುಮಾರ್ ವಿರುದ್ದವೂ ಆರೋಪ ಕೇಳಿ ಬಂದಿರುವುದರಿಂದ ಅವರ ವಿರುದ್ದವೂ ತನಿಖೆ ನಡೆಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ…
ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನ ರಾಜ್ಯ ಸರ್ಕಾರ ಮತ್ತೆ 15 ದಿನಗಳಿಗೆ ವಿಸ್ತರಿಸಿ ಆದೇಶಿಸಿದೆ. ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ. 50ರ ರಿಯಾಯಿತಿ ನೀಡಿದ್ದ ಸರ್ಕಾರ ಇದೀಗ ಮತ್ತೆ ಶೇ.50 ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ಫೈನ್ ಕಟ್ಟಲು 15 ದಿನಗಳವರೆಗೆ ಕಾಲಾವಕಾಶ ನೀಡಿದೆ. 11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಹಿಂದೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ನೀಡಿದ್ದ ವೇಳೆ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೋಟ್ಯಂತರ ರೂಪಾಯಿ ದಂಡ ಸಂಗ್ರಹವಾಗಿತ್ತು.…
ಮಾರ್ಚ್ 12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಹಾಸನ ಜಿಲ್ಲೆ ರಾಜಕಾರಣ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ ಹಾಸನ ಜಿಲ್ಲೆಯನ್ನ ಹೆಚ್.ಡಿ ರೇವಣ್ಣ ಅವರಿಗೆ ಬಿಟ್ಟಿದ್ದೇನೆ. ಪಕ್ಷಕ್ಕಾಗಿ ದುಡಿದವರನ್ನ ನಾನು ಎಂದೂ ಕೈಬಿಟ್ಟಿಲ್ಲ. ತಾಳ್ಮೆ ಅನ್ನೋದು ಇಲ್ಲಿ ಮುಖ್ಯ ಎಂದರು. ಪಂಚರತ್ನ ರಥಯಾತ್ರೆ ಬಗ್ಗೆ ಲಗುವಾಗಿ ಮಾನಾಡಿದ್ದಾರೆ. ಜೆಡಿಎಸ್ ರಾಜ್ಯದ ಜನತೆಯ ಭಾವನೆಗೆ ಸ್ಪಂದಿಸುವಂತಹ ಪಕ್ಷ. ಜನತಾ ದಳ ಬಂದಾಗ ಅಭಿವೃದ್ದಿ ಅನ್ನೋದು ಆರಂಭವಾಯಿತು ಹೆಚ್.ಡಿ ರೇವಣ್ಣ ಪಿಡಬ್ಲ್ಯುಡಿ ಮಂತ್ರಿ ಆಗಿದ್ದಾಗ ರಸ್ತೆಗಳು ಅಭಿವೃದ್ಧಿಯಾದವು. ದೇವೆಗೌಡರು ಅಧಿಕಾರದಲ್ಲಿದ್ದಾಗ ಬಡ್ಡಿಮನ್ನಾ ಮಾಡಿದರು. ನಾನು ಅಧಿಕಾರಕ್ಕೆ ಬಂದಾಗ ರೈತರ ಸಾಲಮನ್ನಾ ಮಾಡಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy