Subscribe to Updates
Get the latest creative news from FooBar about art, design and business.
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
- ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
- ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
- ಜೂಜಾಟ: 12 ಮಂದಿ ಆರೋಪಿಗಳ ಬಂಧನ
Author: admin
ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಅದರ ಸಂಸ್ಥಾಪಕ ಅಧ್ಯಕ್ಷರು ಮತ್ತು ಕರ್ನಾಟಕದ ಖ್ಯಾತ ಸ್ತ್ರೀವಾದಿ ವಿಮರ್ಶಕರು ಹಾಗೂ ಲೇಖಕರೂ ಆದ ಡಾ. ವಿಜಯಾ ದಬ್ಬೆ ಅವರ ಹೆಸರಿನಲ್ಲಿ ಸ್ಥಾಪಿಸಿರುವ ‘ ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ‘ ಗೆ 2019 ರಿಂದ 2022ರ ಅವಧಿಯಲ್ಲಿ ಮಹಿಳೆಯರಿಂದ ಪ್ರಕಟವಾದ ‘ವಿಮರ್ಶೆ ಮತ್ತು ಸಂಶೋಧನಾ ಕೃತಿಗಳನ್ನು’ ಆಹ್ವಾನಿಸಿದೆ. ಈ ಅವಧಿಯಲ್ಲಿ ಪ್ರಕಟವಾಗಿ ಮೊದಲ ಮುದ್ರಣವನ್ನು ಕಂಡಿರುವ ಕೃತಿಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. ಯಾವುದೇ ಪದವಿಗಾಗಿ ಸಲ್ಲಿಸಿದ ನಿಬಂಧ, ಮಹಾ ಪ್ರಬಂಧಗಳನ್ನು ಮತ್ತು ನಿಗದಿತ ಯೋಜನೆಗಾಗಿ ಅನುದಾನ ಪಡೆದು ಸಿದ್ಧಪಡಿಸಿದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ. ಆಸಕ್ತ ಪ್ರಕಾಶಕರು ಅಥವಾ ಲೇಖಕರು ಕೃತಿಯ ಮೂರು ಪ್ರತಿಗಳನ್ನು ಕೊನೆಯಲ್ಲಿ ನೀಡಿರುವ ವಿಳಾಸಕ್ಕೆ ಏಪ್ರಿಲ್ 15 ರ ಒಳಗೆ ಕಳುಹಿಸಿ ಕೊಡಲು ಕೋರಿದೆ . ‘ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಯು 25,000 ರೂಪಾಯಿ ನಗದು ಬಹುಮಾನ, ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಪ್ರಶಸ್ತಿಯನ್ನು 2023ರ ಜೂನ್ 1ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು.…
ಖಾನಾಪುರ ವಿಧಾನಸಭಾ ಕ್ಷೇತ್ರ ಬಹಳ ವಿಶಿಷ್ಟ ಮತ್ತು ವಿಭಿನ್ನವಾದ ಕ್ಷೇತ್ರ ಇಲ್ಲಿ ರಾಜಕೀಯನೇ ಬೇರೆಇಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳ ಮೇಲೆ ಆಗಲಿ ಮತಗಳನ್ನು ಕೇಳುವುದಿಲ್ಲ, ಇಲ್ಲಿ ಭಾಷೆ ಮತ್ತು ಮರಾಠಿ ಮಾನುಸ ವಿಶೇಷದ ಆದಾರದ ಮೇಲೆ ರಾಜಕಾರಣ, ಮತ ರಾಜಕಾರಣ, ನಡೆಯುತ್ತದೆ. ಮತದಾರರ ಸಂಖ್ಯೆ ಸಾಮಾನ್ಯ 2,16000 ಅಂದಾಜಿಸಲಾಗಿದೆ ಒಟ್ಟು 255 ಭೂತಗಳನ್ನು ಈ ಕ್ಷೇತ್ರ ಹೊಂದಿದೆ.ಯಾವ ಸಮುದಾಯಗಳ ಮತದಾರರು ಹೆಚ್ಚು ಪ್ರಾಬಲ್ಯಒಂದು ಲಕ್ಷ ,ಆಸ ಪಾಸ ಮತದಾರರ ಸಂಖ್ಯೆಯನ್ನು ಹೊಂದಿದ ಮರಾಠ ಸಮುದಾಯ ಲಿಂಗಾಯತ್ ಸಮುದಾಯ 15000 ರಿಂದ 18000 ವರೆಗೆ, ಜೈನ್ 5000, ಎಸ್ ಸಿ ಎಸ್ ಟಿ 30,000, ಕ್ರಿಶ್ಚಿಯನ್ ಸಮುದಾಯ 4000, ಮುಸ್ಲಿಂ 18 ರಿಂದ 20 ಸಾವಿರ ಇತರರು 30,000 ವರೆಗೆ ಮತದಾರರನ್ನು ಹೊಂದಿರುವ ಕ್ಷೇತ್ರವಾಗಿದೆ. ಇಲ್ಲಿ ಖಾನಾಪುರ್ ಮತಕ್ಷೇತ್ರ ರಾಷ್ಟ್ರೀಯ ಪಕ್ಷಗಳು ಕಾಂಗ್ರೆಸ್ ಮತ್ತು ಬಿಜೆಪಿ ತೆಕ್ಕೆಗೆ ಈ ಕ್ಷೇತ್ರ ಬಂದರೆ ಉಳಿದ ಎಲ್ಲಾ ಸಮಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಜಯ…
ಪಾವಗಡ: ತಾಲೂಕಿನ ಪೋತಗಾನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ದಳವಾಯಿ ಹಳ್ಳಿ ಗ್ರಾಮಕ್ಕೆ ಇಂದು ಹೆಚ್.ವಿ.ವೆಂಕಟೇಶ್ ರವರು ಭೇಟಿ ನೀಡಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಗ್ರಾಮದ ಮಹಿಳೆಯರಿಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಿಳಿಸಿ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಗೃಹಲಕ್ಷ್ಮಿ, ಗೃಹ ಜ್ಯೋತಿ ಮತ್ತು ಅನ್ನ ಭಾಗ್ಯ ಯೋಜನೆಗಳನ್ನು ಜಾರಿಗೊಳಿಸುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ವಿತರಣೆ ಮಾಡಲಾಯಿತು. ಬಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುತ್ತೇವೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಈ ಭಾಗದ ಅನೇಕ ಮುಖಂಡ, ಕಾರ್ಯಕರ್ತರು, ಸಾರ್ವಜನಿಕರು ಈ ವೇಳೆ ಉಪಸ್ಥಿತರಿದ್ದರು. ವರದಿ: ರಾಮಪ್ಪ. ಸಿ.ಕೆ.ಪುರ. ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿ, ಪ್ರಾಣ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿ ಎಫ್ ಟಿ ಎಸ್ ಸಿ 1 ಜಿಲ್ಲಾ ಸತ್ರ ನ್ಯಾಯಾಲಯ (ವಿಶೇಷ ಮಕ್ಕಳ ಸ್ನೇಹಿ ನ್ಯಾಯಾಲಯ) ತೀರ್ಪು ನೀಡಿದೆ. ಸಿರಾ ತಾಲೂಕಿನ ಕಸಬಾ ಹೋಬಳಿ, ಮುದಿಗೆರೆ ಗ್ರಾಮದಲ್ಲಿ 22—02—2022ರಂದು ರಾತ್ರಿ 10 ಗಂಟೆಗೆ ತಂದೆ ಬಸವರಾಜು ಮಲಗಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಎಬ್ಬಿಸಿ ಬೆದರಿಸಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಸಾಯಿಸಿ ಬಿಡುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ. ತಂದೆಯ ದುಷ್ಕೃತ್ಯವನ್ನು ಬಾಲಕಿ ತನ್ನ ಚಿಕ್ಕಮ್ಮನಿಗೆ ತಿಳಿಸಿದ್ದು, ಈ ವೇಳೆ ಆಕೆಯ ಚಿಕ್ಕಮ್ಮ ಜಾಗೃತಗೊಂಡು, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಶಿರಾದಲ್ಲಿ ಸಹಾಯಕ ಮಕ್ಕಳ ರಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ವೇಳೆ ಅಧಿಕಾರಿಗಳ ತಕ್ಷಣವೇ ತಂದೆ ಬಸವರಾಜು ವಿರುದ್ಧ ದೂರು ನೀಡಿದ್ದಾರೆ. ಅಂತೆಯೇ ಆರೋಪಿಯ ವಿರುದ್ಧ ಕಲಂ 04, …
ಹೆಚ್.ಡಿ.ಕೋಟೆ: ಪಟ್ಟಣದ ಸ್ಟೇಟ್ ಬ್ಯಾಂಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಮಂಜುನಾಥ ಲೋಡರ್ಸ್ ಅಸೋಸಿಯೇಷನ್ ಕಟ್ಟಡವನ್ನು ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಹುದಿನಗಳಿಂದ ಶ್ರಮಿಕರಿಗೆ ಒಂದು ಆಶ್ರಯ ನೀಡುವ ಕಟ್ಟಡ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿ ಎಲ್ಲಾರ ಸಹಕಾರದಿಂದ ಇಂದು ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಕಟ್ಟಡವನ್ನು ಉದ್ಘಾಟನೆ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಉತ್ತಮವಾದ ಕಟ್ಟಡವನ್ನು ನಮ್ಮ ಲೋಡರ್ಸ್ ಸಂಘದವರಿಗೆ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಲಾಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಮತ್ತು ಆಶೀರ್ವಾದ ಅವಶ್ಯಕವಾಗಿದೆ ಎಂದು ಹೇಳಿದರು. ನಂತರ ಮಾತನಾಡಿದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ವೆಂಕಟಸ್ವಾಮಿ, ತಾತ್ಕಾಲಿಕವಾಗಿ ಕಟ್ಟಡ ನಿರ್ಮಾಣ ಮಾಡಿ ನಮ್ಮ ಲೋಡರ್ಸ್ ಸಂಘಕ್ಕೆ ನೀಡಲಾಗಿದೆ ಈ ಕಟ್ಟಡವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಿ ಕೊಳ್ಳುವುದು ಉತ್ತಮ ಎಂದು ಕಿವಿ ಮಾತು ಹೇಳಿದರು. ನಂತರ ಮಾತನಾಡಿದ ಆದಿ ಕರ್ನಾಟಕ ಮಹಾ ಸಭಾ ಅದ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ, ಈ ದೇಶದಲ್ಲಿ ಬಹಳ ಶ್ರಮಿಕ ವರ್ಗದವರು ಎಂದರೆ ನಮ್ಮ ಲೋಡರ್ಸ್ ಗಳು ಅವರು ಎಲ್ಲರ ಸಹಕಾರದಿಂದ…
ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆ ಆಟವಾಡುವ ಸಮಯದಲ್ಲಿ ಇರುವೆ ಪುಡಿಯನ್ನು ತಿಂದಿದೆ. ವಿಷ ತಿಂದು ನರಳಾಡುತ್ತಿದ್ದ ಮಗುವನ್ನು ಗಮನಿಸಿದ ಪೋಷಕರು ತಕ್ಷಣ ಕಾಮಗೆರೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮಗು ಚಿಕಿತ್ಸೆಗೆ ಫಲಿಸದೆ ಗುರುವಾರ ರಾತ್ರಿ ಸಾವನ್ನಪ್ಪಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ನಿನ್ನೆ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧ ವಿಧಿಸಲಾಗಿದೆ. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಬೆಳಿಗ್ಗೆ ಹಾಜರುಪಡಿಸಿದ್ದರು. ಇದೀಗ ಪ್ರಶಾಂತ್ ಮಡಾಳ್ ಸೇರಿ ಐವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶಿಸಿದೆ. ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್ ಮನೆ ಮತ್ತು ಕಚೇರಿಯಿಂದ ಇದುವರೆಗೆ ರೂ. 7.62 ಕೋಟಿ ವಶಪಡಿಸಿಕೊಂಡಿದ್ದಾರೆ. ಪ್ರಶಾಂತ್, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಒಬ್ಬ ಅಧಿಕಾರಿಯಾಗಿದ್ದು ನಿಯೋಜನೆ ಮೇರೆಗೆ ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಗನ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಮಾಧುಸ್ವಾಮಿ, ಶಾಸಕರು ಯಾಕೆ ರಾಜೀನಾಮೆ ಕೊಡಬೇಕು.? ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಅವರ ಮಗ ದುಡ್ಡು ತೆಗೆದುಕೊಂಡಿದ್ದಾನೆ ಮುಂದಿನ ಪರಿಣಾಮ ಎದುರಿಸುತ್ತಾನೆ ಎಂದರು. ಮಂಡ್ಯದ ಹುಲಿಕೆರೆಯಲ್ಲಿ ಮಾತನಾಡಿದ ಅವರು, ಪುತ್ರನ ಹಣ ಸಿಕ್ಕ ಪ್ರಕರಣ ಕುರಿತು ನಾವು ಅದರ ಬಗ್ಗೆ ಕಮೆಂಟ್ ಮಾಡೊಕೆ ಅಗಲ್ಲ. ವಿರೂಪಾಕ್ಷಪ್ಪನ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್. ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡ್ತಾರೆ ಎಂದು ಪ್ರಶ್ನಿಸಿದರು. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು.? ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು.? ಇಂತಹ ಅಯೋಗ್ಯರು ಯಾರ್ ಯಾರು ಇದ್ದಾರೆ ಎಂದು ನಾವು ಹುಡುಕಿಕೊಂಡು ಕೂರೊಕೆ ಆಗುತ್ತಾ ಎಂದು ಕಿಡಿಕಾರಿದರು. 40% ದಂಧೆ ಮಾಡೊಕೆ ಅವರು ಯಾರು ಮಂತ್ರಿಯಲ್ಲ. ಆತ ಒಬ್ಬ ಸರ್ಕಾರಿ ಅಧಿಕಾರಿ, ಎಸಿಬಿಯಲ್ಲಿ ಇದ್ದವರು. ಶಾಸಕರಿಗೂ ಮುಖ್ಯಮಂತ್ರಿಗಳಿಗೂ…
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ವೇಳೆ ಕೋಟ್ಯಾಂತರ ರೂಪಾಯಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಶಾಸಕ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ತಿಹಾರ್ ಜೈಲಿಗೆ ಹೋಗಿ ಬಂದಿರುವವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಕೆ ಎಸ್ ಈಶ್ವರಪ್ಪ ಟಾಂಗ್ ನೀಡಿದರು. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಡಿ ವಿ ಸದಾಂನಂದಗೌಡ, ಕೆ ಎಸ್ ಈಶ್ವರಪ್ಪ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ, ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ ಸಿ, ಎಸ್…
ಲೋಕಾಯುಕ್ತ ಬಲ ತುಂಬಿದ್ಧೇ ಭ್ರಷ್ಟಾಚಾರ ನಿಗ್ರಹಕ್ಕೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ, ಲೋಕಾಯುಕ್ತ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ‘ಭ್ರಷ್ಟಾಚಾರ ತಡೆಯುವುದಕ್ಕಾಗಿ ಲೋಕಾಯುಕ್ತ ಸ್ಥಾಪನೆ ಮಾಡಿದ್ದೇವೆ. ಕಾಂಗ್ರೆಸ್ ಶಾಸಕರ ಮೇಲು ಹಲವು ಆರೋಪಗಳಿತ್ತು, ಅವೆಲ್ಲವೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಚ್ಚಿ ಹಾಕಿದ್ದು, ಆ ಎಲ್ಲ ಕೇಸ್ಗಳ ತನಿಖೆ ಆಗಲಿ ಎಂದು ಹೇಳಿದರು. ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರುವುದು ಭ್ರಷ್ಟಾಚಾರ ನಿಯಂತ್ರಿಸಲು. ಹಿಂದೆ ಲೋಕಾಯುಕ್ತ ಇಲ್ಲದೆ ಕಾಂಗ್ರೆಸ್ ಕಾಲದ ಕೇಸ್ಗಳು ಮುಚ್ಚಿಹೋಗಿದ್ದವು. ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ನಾವು ಯಾರನ್ನೂ ರಕ್ಷಣೆ ಮಾಡಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…