Subscribe to Updates
Get the latest creative news from FooBar about art, design and business.
- ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?
- ತುಮಕೂರು| ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥಿಸಿ ಚಂಡಿಕಾ ಹೋಮ
- ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
- ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
- ಕೂಲಿ ಕೊಡದೇ ಗಾರ್ಮೆಂಟ್ಸ್ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
- ಸರಗೂರು | ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
- ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
- ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
Author: admin
ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಮಧ್ಯೆ ಪೋಷಕರು ಬೈದಿದ್ದಕ್ಕೆ 7 ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 7 ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್(13) ನೇಣಿಗೆ ಶರಣಾದ ಬಾಲಕ. ನಿನ್ನೆ ಸಂಜೆ 7 ಗಂಟೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಪೋಷಕರು ಬೈದಿದ್ದಕ್ಕೆ ಮನೆಯ ಟೆರೇಸ್ ಮೇಲೆ ಸಾಯಿಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿಂದಿಯ ಖ್ಯಾತ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಕುಂಕುಮ್, ಕಸೊಟಿ ಜಿಂದಗಿ ಕೀ ಮುಂತಾದ ಜನಪ್ರಿಯ ಧಾರವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಸೂರ್ಯವಂಶಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಹೃದಯಘಾತದಿಂದ ಕುಸಿದುಬಿದ್ದಿದ್ದಾರೆ. ಪತ್ನಿ ಅಲೇಸಿಯಾಗೆ ಕೂಡ ಮಾಡೆಲಿಂಗ್ ಕ್ಷೇತ್ರದಲ್ಲಿ ದೊಡ್ಡ ಹೆಸರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 2017ರಲ್ಲಿ ಅಲೇಸಿಯಾ ಮತ್ತು ಸಿದ್ದಾಂತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸಿದ್ದಾಂತ್ ಮೊದಲ ಪತ್ನಿ ಇರಾ ಚೌಧರಿ್ಡ 2015ರಲ್ಲಿ ವಿಚ್ಛೇದನ ನೀಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಪ್ರಧಾನಿ ಮೋದಿಗೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆಯ ಕಾಮಧೇನುವನ್ನು ಮುಜರಾಯಿ ಹಜ್ ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಉಡುಗೊರೆಯಾಗಿ ನೀಡಿದ್ದಾರೆ. ಇಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಭಾರತ ಗೌರವ್ ಕಾಶಿ ದರ್ಶನ ವಿಶೇಷ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಮುಖ ಕಲೆಯಾಗಿರುವ ಕಿನ್ನಾಳ ಕಲೆಯಲ್ಲಿ ಸ್ಥಳೀಯ ಕಲಾವಿದರಿಂದ ನಿರ್ಮಿಸಲಾಗಿರುವ ಕಾಮಧೇನುವನ್ನು ಉಡುಗೊರೆಯಾಗಿ ನೀಡಲಾಯಿತು. ನಮ್ಮ ಸ್ಥಳೀಯ ಕಲೆಗೆ ಉತ್ತೇಜನ ನೀಡುವ ಸಲುವಾಗಿ ಈ ಕಾಮಧೇನು ಅನ್ನು ಉಡುಗೊರೆಯಾಗಿ ನೀಡಲಾಗಿದೆ. ಅದನ್ನು ಸ್ವೀಕರಿಸಿದ ಪ್ರಧಾನಿ ಮೋದಿ ಅದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಕನಕದಾಸರು ತಮ್ಮ ದಾಸ ಸಾಹಿತ್ಯ, ಕೀರ್ತನೆಗಳ ಮೂಲಕ ಜೀವನಪಾಠ ಸಾರಿದವರು. ಜಾತಿ, ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ, ಸಮಾಜದ ಅಂಕು ಡೊಂಕುಗಳನ್ನು ತಿದ್ದಿದಾರೆ ಎಂದು ಎಚ್. ಬಿ ಕೋಲಕಾರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ ನಡೆದ ಶ್ರೀ ಭಕ್ತ ಕನಕದಾಸ ಹಾಗೂ ಒನಕೆ ಓಬವ್ವ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುಲ ಕುಲ ಕುಲವೆಂದು ಬಡಿದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಎಂದು ತಿಳಿಸಿದ ಅವರ ಕೀರ್ತನೆಗಳು ಸೇರಿದಂತೆ ಹಲವಾರು ಸಾಹಿತ್ಯಗಳು ನಮಗೆ ದಾರಿದೀಪ. ಕನಕದಾಸರ ತತ್ವಆದರ್ಶಗಳು ಇಂದಿಗೂ ಪ್ರಸ್ತುತ. ಅವುಗಳ ಮೂಲಕ ಸಮಾಜದಲ್ಲಿ ಶಾಂತಿ ಸಮಾನತೆ , ಪ್ರಗತಿ ಸಾಧಿಸಲು ಸಾಧ್ಯವಿದೆ ಎಂದು ಹೇಳಿದರು. ಸಹಜ ಬದುಕು ಬಾಳಿದ ಕನಕದಾಸರು, ಕೀರ್ತನರಾರರಾಗಿ, ತತ್ತ್ವಜ್ಞಾನಿಯಾಗಿ,…
ಅನ್ವಯಿಕ ಗಣಿತಜ್ಞ, ವೇದ ಪಂಡಿತರೂ ಆಗಿದ್ದಂಥಹ ಪದ್ಮಶ್ರೀ ಪುರಸ್ಕೃತ ಪ್ರೊ. ಆರ್.ಕೆ.ಕಶ್ಯಪ್ ಅವರು ಇಂದು ಬೆಂಗಳೂರಿನಲ್ಲಿ ಸ್ವರ್ಗಸ್ಥರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಪರ್ ಡ್ಯೂ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾಗ, ಹಾರ್ವರ್ಡ್ ನ ಓರ್ವ ಪ್ರಾಧ್ಯಾಪಕರೊಂದಿಗೆ, ಮಾದರಿಗಳನ್ನು ಗುರುತಿಸುವ ಆಲ್ಗಾರಿದಂ (Ho-Kashyap rule) ಹೋ-ಕಶ್ಯಪ್ ಅನ್ನು ಅಭಿವೃದ್ಧಿಪಡಿಸಿದ ಕೀರ್ತಿ ಪಡೆದಿದ್ದರು. ಶ್ರೀಯುತರು ಸುಮಾರು ೫೦ ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಕಶ್ಯಪ್ ಅವರಿಗೆ ವೇದಗಳ ಬಗ್ಗೆ ಅತೀ ಆಸಕ್ತಿ ಇತ್ತು. ಯುಎಸ್‌ನಿಂದ ಹಿಂದಿರುಗಿದ ನಂತರ ಅವರು ಬೆಂಗಳೂರಿನ ಜಯನಗರದಲ್ಲಿ ೧೯೯೭ರಲ್ಲಿ ಸಾಕ್ಷಿ – ಶ್ರೀ ಅರಬಿಂದೋ ಕಪಾಲಿ ಶಾಸ್ತ್ರಿ ಇನ್ಸ್ಟಿಟ್ಯೂಟ್ ಆಫ್ ವೇದಿಕ್ ಕಲ್ಚರ್ ಅನ್ನು ಸ್ಥಾಪಿಸಿದರು. ಆ ಸಂಸ್ಥೆಯ ಮೂಲಕ ಅವರು ವೇದಗಳ ಅಧ್ಯಯನವನ್ನು ಕೈಗೊಂಡು, ಹಲವು ಪುಸ್ತಕಗಲನ್ನು ಸಂಪಾದಿಸಿ, ಪ್ರಕಟಿಸಿದರು. ಜೊತೆಗೆ ಶ್ರೀ ಅರಬಿಂದೊ ಅವರ ಕುರಿತು ಅಧ್ಯಯನ ನಡೆಸಿದರು. ನಾಲ್ಕೂ ವೇದಗಳನ್ನು ಆಂಗ್ಲ ಭಾಷೆಗೆ ತರ್ಜುಮೆ ಮಾಡಿದ ಕೀರ್ತಿಯೂ ಇವರಿಗೆ ಸಂದಿದೆ.…
ಕಾಲುಜಾರಿ ಹೊಂಡಕ್ಕೆ ಬಿದ್ದು ಬಾಲಕಿ ಮತ್ತು ಯುವತಿ ಸಾವನ್ನಪ್ಪಿರುವ ಘಟನೆ ಕಲಬುರುಗಿಯಲ್ಲಿ ನಡೆದಿದೆ. ಕಲಬುರುಗಿ ಜಿಲ್ಲೆ ಶಹಬಾದ್ ತಾಲ್ಲೂಕು ರಾಮಘಡ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು ಮಾಣಕಮ್ಮದಾಸರ(20), ಕೀರ್ತೀಕಾ(12) ಮೃತಪಟ್ಟವರು. ಮೃತರು ಬಟ್ಟೆ ತೊಳೆಯಲು ಹೊಂಡದ ಬಳಿ ಹೋಗಿದ್ದರು. ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ ಗರ್ಭಪಾತ ಮಾಡಿಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ನಿರ್ದೇಶನ ನೀಡಿದೆ. ಅತ್ಯಾಚಾರಕ್ಕೊಳಗಾಗಿ ಗರ್ಭ ಧರಿಸಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಆಸ್ಪತ್ರೆಯ ವೈದ್ಯರು ಸಂತ್ರಸ್ತೆಯನ್ನು ಪರಿಶೀಲನೆಗೊಳಪಡಿಸಿ ಅವರ ಜೀವಕ್ಕೆ ಹಾನಿಯಾಗುವಂತಿದ್ದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬಹುದು. ಒಂದು ವೇಳೆ ವೈದ್ಯರ ನಿರ್ಧಾರದಂತೆ ಗರ್ಭ ತೆಗೆಸಿದಲ್ಲಿ ತನಿಖೆಗೆ ನೆರವಾಗುವುದಕ್ಕಾಗಿ ಭ್ರೂಣದ ಡಿಎನ್‌ಎಯನ್ನು ವಿಧಿ ವಿಜ್ಞಾನ ಪ್ರಯೋಗದಲ್ಲಿ ಸಂಗ್ರಹಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ. ಅಲ್ಲದೆ, ವೈದ್ಯರ ಸೂಚನೆ ಮೇರೆಗೆ ಹೆಚ್ಚುವರಿ ಚಿಕಿತ್ಸೆಗೂ ಇದೇ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕು. ಯಾವುದೇ ಕಾರಣಕ್ಕೂ ಸಂತ್ರಸ್ತೆಯಿಂದ ಪಡೆದುಕೊಳ್ಳಬಾರದು ಎಂದು ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ಆರೋಪಿಯೊಬ್ಬರು ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ(45) ಮೃತರು, ಗಾಂಜಾ ಪ್ರಕರಣದ ವಿಚಾರಣೆಗೆ ಈತನನ್ನು ಬೆಳಗಾವಿಗೆ ಕರೆತರುವಾಗ ಕಾಕತಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದೆವು. ಚೇತರಿಸಿಕೊಂಡ ನಂತರ, ಬೆಳಗಾವಿ ಗ್ರಾಮೀಣ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದೆವು. ಈ ವೇಳೆ ಮತ್ತೆ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದೆವು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪತ್ನಿ ನೀಡಿದ ದೂರು ಆಧರಿಸಿ, ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ಒಪ್ಪಿಸಲಾಗುವುದು ಎಂದು ಡಿಸಿಪಿ ರವೀಂದ್ರ ಗದಾಡಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕು ಆಡಳಿತ ವತಿಯಿಂದ ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸರ ಜಯಂತಿಯನ್ನು ತಹಶೀಲ್ದಾರ್ ರವರ ಕಚೇರಿ ಆವರಣದಲ್ಲಿ ತಾಲ್ಲೂಕು ಕುರುಬ ಸಮುದಾಯದ ಸದಸ್ಯರು ಹಾಗೂ ಚಲವಾದಿ ಸಮುದಾಯದ ಸದಸ್ಯರೊಂದಿಗೆ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷಯೆ ವಹಿಸಿ ಮಾತನಾಡಿದ ತಹಶೀಲ್ದಾರ್ ನಾಹಿದಾ ಜಮ್ ಜಮ್, ನಮ್ಮ ನಾಡಿಗೆ ಕೀರ್ತಿ ತರುವ ಪಾತ್ರದಲ್ಲಿ ವೀರ ವನಿತೆಯರ ಪಾತ್ರವೂ ಬಹುಮುಖ್ಯವಾಗಿದೆ. ಅದರಲ್ಲೂ ವೀರವನಿತೆ ಒನಕೆ ಓಬವ್ವ ಎಂದ ಕೂಡಲೇ ನೆನಪಾಗುವುದು ಚಿತ್ರದುರ್ಗದ ಕೋಟೆ ಹೈದರಾಲಿಯ ಸೇನೆಯೊಂದಿಗೆ ಏಕಾಂಗಿಯಾಗಿ ಹೋರಾಡಿದ ವೀರವನಿತೆ ಒನಕೆ ಓಬವ್ವ ಆಕೆ ಸಾಹಸದ ಕಥೆಯನ್ನು ಮುಂದಿನ ಪೀಳಿಗೆಗೂ ಸಾರುವಂತದ್ದು. ಅಂತಹ ವೀರ ವನಿತೆಯರು ಜನಿಸಿರುವ ಈ ಭೂಮಿ ನಿಜಕ್ಕೂ ಪುಣ್ಯಭೂಮಿ ಎಂದರೆ ತಪ್ಪಾಗಲಾರದು. ಇಂತಹ ಮಹಾನ್ ವೀರ ವನಿತೆಯರ ಜಯಂತಿಯನ್ನು ಆಚರಿಸಲು ಸರಕಾರವು ಅನುವು ಮಾಡಿಕೊಟ್ಟ ಸಾರ್ವಜನಿಕರು ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ತಾಲ್ಲೂಕು ಕುರುಬ ಸಮುದಾಯದ ಅಧ್ಯಕ್ಷ ಮೈಲಾರಪ್ಪ ಮಾತನಾಡಿ, ಕನಕದಾಸರು ಕೇವಲ ಕುರುಬ ಸಮುದಾಯಕ್ಕೆ ಮಾತ್ರ ಸೇರಿದವರಲ್ಲ ನಾಡಿನ…
ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಮರು ವಿಂಗಡಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ಇತರೆ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಮತ್ತೆ 12 ವಾರಗಳ ಕಾಲ ಹೈಕೋರ್ಟ್ ಕಾಲಾವಕಾಶ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಅನಿರುದ್ಧ್ ಬೋಸ್ ಅವರ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ರಾಜ್ಯ ಚುನಾವಣಾ ಆಯೋಗದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಿ ಈ ಹಿಂದೆ ಆಯೋಗ ಹೊರಡಿಸಿದ ಆದೇಶದ ಪ್ರಕಾರ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಚುನಾವಣಾ ಆಯೋಗದಿಂದ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರು. ನಂತರ ಸುಪ್ರೀಂ ಕೋರ್ಟ್ ಪೀಠ ಚುನಾವಣಾ ಆಯೋಗದ ಅರ್ಜಿಯನ್ನು ವಜಾಗೊಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ…