Author: admin

ಬೆಂಗಳೂರು: ತಾಯಿ ಮೃತಪಟ್ಟಿದ್ದಾಳೆ ಎಂಬ ಅರಿವು ಇಲ್ಲದೆ ಬಾಲಕನೋರ್ವ ಎರಡು ದಿನಗಳ ಕಾಲ ತಾಯಿಯ ಮೃತದೇಹದ ಪಕ್ಕದಲ್ಲೇ ಸಮಯ ಕಳೆದಿರುವ ಘಟನೆ ಬೆಂಗಳೂರಿನ ಗಂಗಾ ನಗರದಲ್ಲಿ ನಡೆದಿದೆ. 40 ವರ್ಷದ ಅಣ್ಣಮ್ಮ ಮಲಗಿದ್ದ ಸ್ಥಿತಿಯಲ್ಲೇ ಮನೆಯಲ್ಲಿ ಸಾವನ್ನಪ್ಪಿದ್ದರು. ಆದರೆ ಈ ಬಗ್ಗೆ ತಿಳಿಯದ ಆಕೆಯ 11 ವರ್ಷದ ಮಗ ತಾಯಿಯ ಮೃತದೇಹದೊಂದಿಗೆ ಸಮಯ ಕಳೆದಿದ್ದಾರೆ. ಸ್ಥಳೀಯರು ನೀಡಿರುವ ಮಾಹಿತಿ ಅನ್ವಯ ಅಣ್ಣಮ್ಮ ತನ್ನ ಮಗನ ಜೊತೆ ಒಂಟಿಯಾಗಿ ವಾಸವಿದ್ದರು. ಆದರೆ ಅವರು ಕಳೆದ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಮನೆಯಿಂದ ದುರ್ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಮನೆಯಲ್ಲಿ ಗಮನಿಸಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ಗಂಗಾನಗರದ ಸ್ಥಳೀಯ ಸರ್ಕಾರಿ ಶಾಲೆಯೊಂದರ ಮನೆಯಲ್ಲಿ ಅಣ್ಣಮ್ಮ ಮಗನೊಂದಿಗೆ ವಾಸಿಸುತ್ತಿದ್ದರು. ಅಣ್ಣಮ್ಮ ಅವರ ಪತಿ ಕಳೆದ ಕೆಲ ವರ್ಷಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಮಾತನಾಡಲು ಬಾರದ ಅಣ್ಣಮ್ಮ ಕೂಲಿ ಕೆಲಸ ಮಾಡಿಕೊಂಡು ಮಗನನ್ನು ನೋಡಿಕೊಳ್ಳುತ್ತಿದ್ದರು. ಆದರೆ ಏಕಾಏಕಿ ಕಳೆದ ಎರಡು ದಿನಗಳ ಹಿಂದೆ ನಿದ್ದೆ ಮಾಡುತ್ತಿದ್ದ…

Read More

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನಲ್ಲಿ ರೈತರಿಂದ 67.94 ಎಕರೆ ಕೃಷಿ ಭೂಮಿಯನ್ನು ಸಚಿವರ ಆಪ್ತರಾದ ವಿದ್ಯಾ ಸುವರ್ಣ-ಗಜಾನಂದ ದಂಪತಿ ಖರೀದಿಸಿದ್ದಾರೆ. 4.15 ಕೋಟಿ ರೂಪಾಯಿಗೆ ಜಮೀನು ಖರೀದಿಸಲಾಗಿದೆ. ಈ ಜಮೀನಿನ ಖರೀದಿ ಪ್ರಕ್ರಿಯೆ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ. ಜಮೀನು ಕೊಟ್ಟ ರೈತರಿಗೆ ದೊಡ್ಡ ಅನ್ಯಾಯವಾಗಲಿದೆ ಎಂದು ಶ್ರೀರಾಮಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ಕಾರ್ಕಳ ಶಾಸಕ, ಸಚಿವ ಸುನಿಲ್ ಕುಮಾರ್ ಹೆಸರು ಉಲ್ಲೇಖಿಸದೆಯೇ ಅವರ ವಿರುದ್ಧ ಆರೋಫ ಮಾಡಿದ್ದಾರೆ. ಜತೆಗೆ, ಈ ವಿಚಾರವಾಗಿ ಉಡುಪಿಯ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮುತಾಲಿಕ್ ಈ ಆರೋಪ ಮಾಡಿದ್ದು ರಾಜಕೀಯವಾಗಿ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: 50 ವರ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಹೇಗೆ ಸರ್ಕಾರ ನಡೆಸಿದೆ ಎಂಬುದು ಬಟಾಬಯಲಾಗಿದೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ತಲೆ ತಗ್ಗಿಸುವ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ ಎಂದು ಸಚಿವ ಅಶೋಕ್ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಜನರಿಗೆ 500 ರೂ. ಕೊಟ್ಟು ಕರೆದುಕೊಂಡು ಬನ್ನಿ ಎಂಬ ವೀಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ತಲೆ ತಗ್ಗಿಸುವ ಹೇಳಿಕೆಯನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ. ನಮಗೆ ವೋಟ್ ಹಾಕಿ ಸದನಕ್ಕೆ ಕಳುಹಿಸುವವರಿಗೆ ಮಾಡಿದ ಅವಮಾನ. ಇವರು ಕಾರ್ಯಕ್ರಮಕ್ಕೆ 500 ರೂ. ಕೊಟ್ಟರೆ ವೋಟ್‌ಗೆ ಎಷ್ಟು ಹಣ ಕೊಡುತ್ತಾರೆ? ಸಾವಿರಾರು ಕೋಟಿ ರೂ. ಹಣ ಖರ್ಚು ಮಾಡಲು ಕಾಂಗ್ರೆಸ್ ಸಿದ್ದವಿದೆ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುತ್ತಾರೆ ಎಂದು ಅಮಿತ್ ಶಾ ಹೇಳಿದ್ದರು. ಅದಕ್ಕೆ ಪಕ್ಕಾ ಸಾಕ್ಷಿ ಸಿಕ್ಕಿದೆ. ಇವರು ಅಧಿಕಾರಕ್ಕೆ ಬಂದರೆ ಜನರ ತೆರಿಗೆ ಹಣ ಲೂಟಿ ಹೊಡಿಯುತ್ತಾರೆ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಭಾರತೀಯ ಜನತಾ ಪಕ್ಷದ ಎರಡನೇ ತಂಡ ಬೆಳಗಾವಿ ಉಸ್ತುವಾರಿ ಸಚಿವರಗಳಾದ ಗೋವಿಂದ್ ಕಾರಜೋಳ್ ಅವರ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ ವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ಬೆಳಗಾವಿ ಕರ್ನಾಟಕದ ಕಿರೀಟ ಎಂದಿದ್ದಾರೆ. ಕನ್ನಡದಲ್ಲಿ ಎಲ್ಲರಿಗೂ ಧನ್ಯವಾದ ತಿಳಿಸುತ್ತ ಭಾಷಣ ಪ್ರಾರಂಭಿಸಿದ ಅವರು ಸ್ವತಂತ್ರದ ಬೆಳ್ಳಿ ಚುಕ್ಕಿಯಾದ ವೀರ ರಾಣಿ     ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪಾದಸ್ಪರ್ಶವಾಗಿದೆ ಏರ್ ಮಾರ್ಸ್ ಅಲ್ಲಿ ಕರಿಯಪ್ಪ ಅಂತ ವೀರರನ್ನು ಜನ್ಮ ನೀಡಿದ ಈ ಭೂಮಿ ತಾಯಿಗೆ ನನ್ನ ವಂದನೆಗಳು ಎಂದು ಕರ್ನಾಟಕ ಭೂಮಿಗೆ ತಮ್ಮ ನಮನಗಳನ್ನು ಸಲ್ಲಿಸಿದರು. ಭೂಮಿ ನಮಗೆ ಪ್ರೇರಣೆ ಅದರ ಸಲುವಾಗಿ ಮುಖ್ಯಮಂತ್ರಿಗಳು ಈ ಸ್ಥಳವನ್ನು ವಿಜಯ ಸಂಕಲ್ಪ ಯಾತ್ರೆಗೆ ಆಯ್ಕೆ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷ ಎಲ್ಲರಿಗೂ ಸಮಭಾವ ಸಮಬಾಳು ಸಮಾನ ಹಕ್ಕು ಕೊಡುವ ಪಕ್ಷ ನಾವು ಅನೇಕ ಜನಪ್ರಿಯ ಕಾರ್ಯಕ್ರಮಗಳನ್ನು ಹಾಕಿದ್ದೇವೆ ಎಂದರು. ತಮ್ಮ ಭಾಷಣ ಉದ್ದಕ್ಕೂ ಸರ್ಕಾರದ ಸಾಧನೆಗಳು ಕುರಿತು ಹೇಳಿದರಲ್ಲದೆ…

Read More

ಭಾರತ ಪ್ರವಾಸದಲ್ಲಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವೇಳೆ ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಪ್ರಮುಖ ಪಾತ್ರವಹಿಸಬೇಕು ಎಂದು ಮೆಲೋನಿ ಮನವಿ ಮಾಡಿಕೊಂಡಿದ್ದು,  ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಭಾರತ ಸಂಪೂರ್ಣ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ದ್ವಿಪಕ್ಷೀಯ ಮಾತುಕತೆ ವೇಳೆ ಅನೇಕ ಜಾಗತಿಕ ವಿಚಾರಗಳ ಜತೆ ಉಕ್ರೇನ್ ಸಂಘರ್ಷದ ಬಗ್ಗೆಯೂ ಚರ್ಚೆಯಾಯಿತು. ನವದೆಹಲಿಯಲ್ಲಿ ಜಿ20 ವಿದೇಶಾಂಗ ಸಚಿವರ ಸಭೆ ನಡೆಯುತ್ತಿರುವ ಸಂದರ್ಭದಲ್ಲೇ ಮೋದಿ ಈ ಹೇಳಿಕೆ ನೀಡಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ರಷ್ಯಾ –ಉಕ್ರೇನ್ ಯುದ್ಧದ ಆರಂಭದಿಂದಲೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದನ್ನು ಭಾರತ ಪ್ರತಿಪಾದಿಸುತ್ತಲೇ ಬಂದಿದೆ. ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಭಾರತ ಪೂರ್ಣ ಸಿದ್ಧವಿದೆ ಎಂದು ಮೋದಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಮಂಡ್ಯ: ಜಿಲ್ಲೆಯ ಚಿಕ್ಕಬೋರೇಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರ ಚಿರತೆಯೊಂದು 15 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ. ಬುಧವಾರ ಸಂಜೆ ಗೌತಮ್ (15) ಎಂಬ ಬಾಲಕ ತಮ್ಮ ಜಮೀನಿನ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದಾಳಿ ಮಾಡಿದ ಚಿರತೆ  ಆತನ  ಕಿವಿ, ಕತ್ತು ಕೆನ್ನಯ ಭಾಗದಲ್ಲಿ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ  ಸಮೀಪದಲ್ಲಿಯೇ ಇದ್ದ ಬಾಲಕನ ಸಹೋದರ ಚಿರತೆ ಚಿರತೆ ಎಂದು ಕಿರುಚಲು ಆರಂಭಿಸಿದಾಗ ಚಿರತೆ ಅಲಿಂದ ಓಡಿಹೋಗಿ ಬಾಲಕ ಬದುಕುಳಿದಿದ್ದಾನೆ. ನಂತರ ಬಾಲಕನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿರತೆ ಹಿಡಿಯುವಂತೆ ಪೋಷಕರು ಹಾಗೂ ಗ್ರಾಮಸ್ಥರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಪಾವಗಡ : ತಾಲೂಕಿನ ಯರಪಾಳ್ಯ ಗ್ರಾಮದಲ್ಲಿ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರವನ್ನು ಕಾಲೇಜಿನ ಘಟಕ 1  ಮತ್ತು 4 ರಿಂದ ಆಯೋಜಿಸಲಾಗಿತ್ತು, ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ವೆಂಕಟರಮಣಪ್ಪ,  ವಿದ್ಯಾರ್ಥಿಗಳು ಇಂತಹ ಶಿಬಿರದಲ್ಲಿ ಪಾಲ್ಗೊಳ್ಳಬೇಕು, ಜೊತೆಗೆ  ಗ್ರಾಮೀಣ ಭಾಗದಲ್ಲಿ ಜನರು ಯಾವ ರೀತಿ ಇರುತ್ತಾರೆ ಮತ್ತು ಯಾವ ರೀತಿ ಜೀವನವನ್ನು ನಡೆಸುತ್ತಾರೆ ಎನ್ನುವುದನ್ನು ಅವಲೋಕಿಸಿಕೊಂಡು  ತಮ್ಮ ಜೀವನದಲ್ಲಿ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು. ಇನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್. ಶ್ರೀಧರ್ ಅವರು ಮಾತನಾಡಿ, ಕಾಲೇಜಿನಲ್ಲಿ ಕಲಿಯುವಂತಹ ಶಿಕ್ಷಣದ ಜೊತೆಗೆ ಇಂತಹ ವಿಶೇಷ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಲ್ಲೂ ಸಹ ಭಾಗವಹಿಸಿ ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ನೀಡುವುದರ ಜೊತೆಗೆ ಸಮಾಜದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಪರಶುರಾಮಪುರದ ಸರ್ಕಾರಿ ಪ್ರಥಮ ದರ್ಜೆ…

Read More

ಬೆಳಗಾವಿ:  ಕರ್ನಾಟಕವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರೆಸುವುದು ಭಾಜಪ ಸರ್ಕಾರದ ಗುರಿ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ರಥ ಯಾತ್ರೆಗೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಅವರು ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯದ 53 ಲಕ್ಷ  ರೈತ ಕುಟುಂಬಗಳಿಗೆ 12 ಸಾವಿರ ಕೋಟಿ ಕಿಸಾನ್ ಸಮ್ಮಾನ ಯೋಜನೆ ತಲುಪಿದೆ. 4481 ಕೋಟಿ ರೂ. ರಾಜ್ಯ ಸರ್ಕಾರದಿಂದ ಪಾವತಿಯಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆಗಳನ್ನು ಜನರಿಗೆ ತಲುಪಿಸಲಾಗಿದೆ. ರಾಜ್ಯ ಸರ್ಕಾರ ರೈತ ಮಕ್ಕಳಿಗೆ, ರೈತ ಕೂಲಿಕಾರರ, ನೇಕಾರರು, ಮೀನುಗಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ  ನೀಡಲಾಗುತ್ತಿದೆ. ದುಡಿಯುವ ವರ್ಗದ ಕುಶಲಕರ್ಮಿಗಳ ಆರ್ಥಿಕ ಅಭಿವೃದ್ಧಿಗೆ ಕಾಯಕ ಯೋಜನೆ, ಮಹಿಳೆಯರ ಸ್ವಯಂಉದ್ಯೋಗಕ್ಕೆ ಸ್ತ್ರೀ ಸಾಮರ್ಥ್ಯ ಯೋಜನೆ, ಯುವಕರಿಗೆ ಸ್ವಾಮಿ ವಿವೇಕಾನಂದ ಯೋಜನೆ ಜಾರಿಗೊಳಿಸಲಾಗುತ್ತಿದೆ. ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ಯೋಜನೆ, ದುಡಿಯುವ ಮಹಿಳೆಗೆ…

Read More

ಕಳಪೆ ಆಹಾರ ಒತ್ತಡ ಜೀವನದಿಂದಾಗಿ  ಕೂದಲು ಉದುರುವ ಸಮಸ್ಯೆ ಕೂಡ ಹೆಚ್ಚಾಗಿ ಕಂಡುಬರುತ್ತದೆ. ಇದನ್ನು ನಿಯಂತ್ರಿಸಲು ಜನರು ಅನೇಕ ಬಗೆಯ  ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಬಳಸುತ್ತಾರೆ.ಆದರೆ  ಎಳ್ಳೆಣ್ಣೆಯನ್ನು ಬಳಸುವುದರಿಂದ ಕೂದಲು ಉದುರುವ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು. ಇದರಲ್ಲಿ ಅನೇಕ ವಿಧದ  ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಇ ಇದೆ. ಇವು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಮತ್ತು ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ. ಕೂದಲಿಗೆ ಎಳ್ಳಿನ ಎಣ್ಣೆಯನ್ನು ಹಲವು ವಿಧಗಳಲ್ಲಿ ಬಳಸಬಹುದು. ಆದರೆ ಇದನ್ನು ಮನೆಯಲ್ಲಿಯೇ ಮಾಡಿ ಉಪಯೋಗಿಸಿದರೆ ಹೆಚ್ಚು ಲಾಭವಾಗುತ್ತದೆ. ಇದಕ್ಕಾಗಿ ಮೊದಲು ಎಳ್ಳನ್ನು ತೆಗೆದುಕೊಂಡು ಸಾಸಿವೆ ಎಣ್ಣೆಯಲ್ಲಿ ಬೇಯಿಸಿಕೊಳ್ಳಬೇಕು. ಬಳಿಕ ಈ ಎಣ್ಣೆಯನ್ನು ಫಿಲ್ಟರ್ ಮಾಡಿ ಕೂದಲಿಗೆ ಹಚ್ಚಿ ಮಸಾಜ್ ಮಾಡಬೇಕು. ಎಳ್ಳಿನ ಎಣ್ಣೆಯು ಕೂದಲಿಗೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ನೆತ್ತಿಯ ಸೋಂಕು ಮತ್ತು ಕೂದಲಿನ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಈ ಎಣ್ಣೆಯನ್ನು ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆ ನಿವಾರಣೆಯಾಗುತ್ತದೆ.ಎಳ್ಳಿನ ಎಣ್ಣೆಯು ಕೂದಲಿನ ಬೇರುಗಳನ್ನು ಗಟ್ಟಿಗೊಳಿಸುತ್ತದೆ.…

Read More

ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗ ಬೇಕಾದಲ್ಲಿ ಸರಕಾರಿ ಬಸ್ ನಿಲ್ದಾಣಗಳ ಸಂಪರ್ಕ ಸಂಖ್ಯೆಗಳನ್ನು ಬಳಸಿ ಯಾವ ಸಮಯಕ್ಕೆ ಬಸ್ ಹೊರಡುವುದು ಎಂದು ತಿಳಿಯುವ ಬಗ್ಗೆ ಒಂದು ಮಾಹಿತಿ: 1 ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562 2 ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530 3 ಬೆಂಗಳೂರು ಶಾಂತಿನಗರ ಬಸ್ ನಿಲ್ದಾಣ 7760990531 4 ಭದ್ರಾವತಿ ಬಸ್ ನಿಲ್ದಾಣ 7760973105 5 ಚಿಕ್ಕಮಗಳೂರು ಬಸ್ ನಿಲ್ದಾಣ 7760990419 6 ಚಿತ್ರದುರ್ಗ ಬಸ್ ನಿಲ್ದಾಣ 8194222431, 8194220201 7 ದಾವಣಗೆರೆ ಬಸ್ ನಿಲ್ದಾಣ 7760973101 8 ಧರ್ಮಸ್ಥಳ ಬಸ್ ನಿಲ್ದಾಣ 7760106655 9 ಹಾಸನ ಬಸ್ ನಿಲ್ದಾಣ 7760990520 10 ಕೋಲಾರ ಬಸ್ ನಿಲ್ದಾಣ 7760990611 11 ಕುಂದಾಪುರ ಬಸ್ ನಿಲ್ದಾಣ 7760973162 12 ಮಂಡ್ಯ ಬಸ್ ನಿಲ್ದಾಣ 7760973058 13 ಮಂಗಳೂರು ಬಸ್ ನಿಲ್ದಾಣ 7760990720 14 ಮಡಿಕೇರಿ ಬಸ್ ನಿಲ್ದಾಣ 7760107788 15 ಮೈಸೂರು ಬಸ್ ನಿಲ್ದಾಣ…

Read More