Author: admin

ಬೆಂಗಳೂರು : ಶಾಲಾ ಮಕ್ಕಳಿಗೆ ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ವಾಟರ್ ಬೆಲ್ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಬೆಲ್ ಹೊಡೆದ ವೇಳೆ ಮಕ್ಕಳಿಗೆ ನೀರು ಕುಡಿಯಲು ಸೂಚಿಸಿಬೇಕೆಂಬುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಶುದ್ದವಾದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು, ಕುಡಿಯುವ ನೀರಿನ ಬೆಲ್ ಗೆ ವಿಶೇಷ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ 10:35 ಕ್ಕೆ ಹಾಗೂ ಮಧ್ಯಾಹ್ನ 12 ಗಂಟೆ, ಹಾಗೂ 2 ಗಂಟೆಗೆ ವಾಟಲ್ ಬೆಲ್ ಮಾಡಲು ಚಿಂತನೆ ನಡೆಸಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ನೀರು ಬಹಳ ಮುಖ್ಯವಾಗಿದ್ದು, ಆದ್ದರಿಂದ ಮಕ್ಕಳಿಗೆ ನೀರು ಕುಡಿಯಲು ದಿನಕ್ಕೆ ಮೂರು ಬಾರಿ 10 ನಿಮಿಷ ಬ್ರೇಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಶಾಲೆಗಳಲ್ಲಿ ಮಕ್ಕಳು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುತ್ತಿಲ್ಲ ಎಂಬುದನ್ನು ಮನಗಂಡ ಶಿಕ್ಷಣ…

Read More

ಮಧುಗಿರಿ: ತಾಲೂಕು   ವಿಕಾಸ  ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ಪುಣ್ಯ ಸ್ಮರಣೆ ಅಂಗವಾಗಿ ನವೆಂಬರ್ 13ರಂದು ಭಾನುವಾರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬೆಳಗೆ 10 ರಿಂದ  2 ಗಂಟೆವರೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು  ವಿಕಾಸ ಸಮಿತಿಯ ಅಧ್ಯಕ್ಷರಾದ ಭೀಮನಕುಂಟೆ ಹನುಮಂತೇಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ರತ್ನ ಪುನೀತ್ ರಾಜಕುಮಾರ್ ಅವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದೆ. ಆರೋಗ್ಯ ತಪಾಸಣೆಯನ್ನು  ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಮೂಲಕ ನಡೆಸಲಾಗುತ್ತದೆ. ಈ ತಪಾಸಣೆಯಲ್ಲಿ ಮಧುಮೇಹ ತಜ್ಞರು, ಮೂಳೆ ಮತ್ತು ಕೀಳು ತಜ್ಞರು ಹಾಗೂ  ಜನರಲ್ ಸರ್ಜನ್ ಲಭ್ಯವಿರುತ್ತಾರೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಧ್ಯಮ ಮೂಲಕ  ಮನವಿ ಮಾಡಿದರು. ಸಂಜೆ  ಖ್ಯಾತ ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ರವರ ನೇತೃತ್ವದಲ್ಲಿ…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜಸ್ವಿ ಸೂರ್ಯ ಮೊದಲಾದವರು ಉಪಸ್ಥಿತರಿದ್ದರು. ವಿಶ್ವದ ಅತಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತಿಪಟೂರು: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಮಾದರಿಯಲ್ಲಿ ತಿಪಟೂರು ಐಕ್ಯತಾ ನಡಿಗೆ ಸಾಗಿದೆ. ಕ್ಷೇತ್ರ ಸಂಚಾರದಲ್ಲಿ  ಕ್ಷೇತ್ರದ ಮೂಲ ಸಮಸ್ಯೆಗಳ ದಿಗ್ದರ್ಶನವಾಯಿತು. ಸ್ಥಳೀಯರು ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಟಿಟ್ಟಿದ್ದಾರೆ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಿ.ಬಿ.ಶಶಿಧರ್ (ಟೂಡಾ)  ಹೇಳಿದ್ದಾರೆ. ಸಚಿವ ಬಿ.ಸಿ.ನಾಗೇಶ್ ಅವರು ಕೇವಲ ಧರ್ಮ ರಾಜಕೀಯ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸುತ್ತಿಲ್ಲ, ಸಮಸ್ಯೆಗಳತ್ತ‌‌ ಮುಖ ಮಾಡುತ್ತಿಲ್ಲವೆಂದು ಸ್ವತಃ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ. ಸಚಿವರ ವಿರುದ್ಧ ನಾವು ಹೇಳಿಕೆ ನೀಡಿದರೆ ಬಹುಶಃ ರಾಜಕಾರಣವೆಂದು ಹೇಳಬಹುದು. ಆದರೆ, ಜನರೇ ಬೇಸತ್ತಿದ್ದಾರೆಂದರೆ‌ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲವೆಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ. ಅಕ್ಟೋಬರ್ 20 ರಿಂದ ಕ್ಷೇತ್ರ ಸಂಚಾರ ಕೈಗೊಂಡಿದ್ದು, ಇದುವರೆಗೆ ಗ್ಯಾರಘಟ್ಟ, ಹಾಲ್ಕುರಿಕೆ, ತಡಸೂರು, ಸಾರ್ಥವಳ್ಳಿ, ಗುಡಿಗೊಂಡನಹಳ್ಳಿ, ಗುಂಗುರಮಳೆ ಸೇರಿ 6 ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿದ್ದೇವೆ. ಪ್ರತಿ ಗ್ರಾಪಂಗಳಲ್ಲೂ ಸರಾಸರಿ 300 ಜನರಂತೆ ಇದುವರೆಗೆ ಕನಿಷ್ಠ 1,800 ಜನರನ್ನು ಭೇಟಿಯಾಗಿದ್ದೇನೆ‌. ಸ್ಥಳೀಯ ಹಿರಿಯರು, ಗ್ರಾಪಂ ಅಧ್ಯಕ್ಷರು, ಸದಸ್ಯರು, ಮುಖಂಡರು, ಯುವಕ-ಯುವತಿಯರು, ಮಹಿಳೆಯರು…

Read More

ಸರಗೂರು: ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಾಣ ವಾಗುತ್ತಿರುವ ಶಾಲಾ ಕಟ್ಟಡ ಕಾಮಗಾರಿ ಕಳಪೆಯಾಗಿದ್ದು, ಅಧಿಕಾರಿಗಳು ತಕ್ಷಣವೇ ತನಿಖೆ ನಡೆಸಬೇಕು ಎಂದು ಪಟ್ಟಣ ಪಂಚಾಯತಿ ಸದಸ್ಯ ಶ್ರೀನಿವಾಸ್ ಒತ್ತಾಯಿಸಿದ್ದಾರೆ. ಕಟ್ಟಡ ಕಾಮಗಾರಿಯ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದ್ದು, ಇಲಾಖೆಗೆ ಎಂಜಿನಿಯರ್ ಧ್ರುವರಾಜ್ ಅವರು ಗುತ್ತಿಗೆದಾರನೊಂದಿಗೆ ಶಾಮಿಲಾಗಿ  ಆರಂಭದಿಂದಲೂ ಕಟ್ಟಡ ಕಾಮಗಾರಿಯನ್ನು ಕಳಪೆಯಾಗಿ ನಿರ್ಮಿಸಿದ್ದಾರೆ ಎಂದು ಅವರು ಆರೋಪಿಸಿದರು. ತಕ್ಷಣವೇ ಕಾಮಗಾರಿಯನ್ನು ನಿಲ್ಲಿಸಲು ಎಂಜಿನಿಯರ್‌‌ ಧ್ರುವ ರಾಜ್, ಗುತ್ತಿಗೆದಾರನಿಗೆ ಆದೇಶಿಸಬೇಕು ಎಂದು ಒತ್ತಾಯಿಸಿದ ಅವರು, ಕಳಪೆ ಕಾಮಗಾರಿಯ ಬಗ್ಗೆ ಪ್ರಶ್ನಿಸಿದರೆ, ಧ್ರುವ ರಾಜ ಅವರು ಉಡಾಫೆ  ಉತ್ತರ ನೀಡುತ್ತಿದ್ದಾರೆ. ಕಾಮಗಾರಿ ನಿಲ್ಲಿಸಲು ಶಾಸಕರ ಗಮನಕ್ಕೆ ತರಲಾಗಿದೆ ಎಂದರೂ ಶಾಸಕರ ಮಾತಿಗೂ ಕ್ಯಾರೆ ಎನ್ನುತ್ತಿಲ್ಲ ಎಂದು ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ನಿಲ್ಲಿಸುವುದಿಲ್ಲ, ಯಾರಿಗೆ ಬೇಕಾದರೂ  ಹೇಳಿಕೊಳ್ಳಿ ಎಂದು ಬೇಜವಾಬ್ದಾರಿಯ ಉತ್ತರ ನೀಡುವ ಮೂಲಕ ಶಾಸಕರಿಗೂ ಧ್ರುವ ರಾಜ್ ಅಗೌರವ ತೋರಿದ್ದಾರೆ. ಹೀಗಾಗಿ ಎಂಜಿನಿಯರ್‌ ವಿರುದ್ದ ಸೂಕ್ತಕ್ರಮ ವಹಿಸಬೇಕು. ಕಾಮಗಾರಿ ನಿಲ್ಲಿಸಬೇಕು.…

Read More

ಪ್ರಧಾನಿ ಮೋದಿಯವರ ನಾಳಿನ ಬೆಂಗಳೂರು ಭೇಟಿ ಎಲೆಕ್ಷನ್ ಗಿಮಿಕ್ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ, ಮೋದಿ ಬೆಂಗಳೂರು ಭೇಟಿ ಎಲೆಕ್ಷನ್ ಗಿಮಿಕ್. ಮೊದಲು 40 ಪರ್ಸೆಂಟ್ ಆರೋಪಕ್ಕೆ ಮೋದಿ ಉತ್ತರಿಸಲಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪತ್ರ ಬರೆದರೂ ಉತ್ತರಿಸಿಲ್ಲ ಎಂದು ಟಾಂಗ್ ನೀಡಿದರು. ವಾಲ್ಮಿಕಿ ಕನಕ ಪ್ರತಿಮೆಗೆ ಮಾಲಾರ್ಪಣೆ ಇದು ಎಲೆಕ್ಷನ್ ಗಿಮಿಕ್ . ವಾಲ್ಮಿಕಿ ಕನಕ ಪ್ರತಿಮೆ ನಿರ್ಮಿಸಿದ್ದು ಕಾಂಗ್ರೆಸ್. ಈಗ ಮಾಲಾರ್ಪಣೆ ಮಾಡಲು ಮೋದಿ ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮೋದಿ ಬರ್ತಾರೆ ಅಂತಾ ಹಿಂದೆ ಗುಂಡಿ ಮುಚ್ಚಿದ್ದರು. ಈಗ ರಸ್ತೆ ಗುಂಡಿ ಮುಚ್ಚುತ್ತಿದ್ದಾರೆ. ಕಳಪೆ ರಸ್ತೆ ನಿರ್ಮಿಸಿ ಕಿತ್ತೋದ್ರೆ ಏನು ಪ್ರಯೋಜನ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಾಳೆ 108 ಅಡಿಯ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿದ್ದು, ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಾರೆ. ಮೋದಿ ಆಗಮನ ಹಿನ್ನೆಲೆ ಬೆಂಗಳೂರು ರಸ್ತೆ ಸಂಚಾರದಲ್ಲಿ ಮಾರ್ಗ ಬದಲಾವಣೆಯಾಗಲಿದ್ದು, ಟ್ರಾಫಿಕ್​ ಹಾಗೂ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಕೆಲ ರಸ್ತೆಗಳು ಬಂದ್​ ಆಗಲಿವೆ. CTO ಜಂಕ್ಷನ್​, ಪೊಲೀಸ್​ ತಿಮ್ಮಯ್ಯ ಜಂಕ್ಷನ್​​, ರಾಜಭವನ, ಸ್ಯಾಂಕಿ ರಸ್ತೆ, ಏರ್​​ಪೋರ್ಟ್​ ಕಾರಿಡಾರ್​, ಮಹಾರಾಣಿ ಬ್ರಿಡ್ಜ್ ಸೇರಿದಂತೆ ಕೆಲ ರಸ್ತೆಗಳು​ ಬಂದ್ ಆಗಲಿವೆ.​​ ಮೋದಿ ಭದ್ರತೆಗಾಗಿ ಒಟ್ಟು 4 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಏರ್‌ ಟೆಲ್ ಎಕ್ಸ್‌ಸ್ಟ್ರೀಮ್ ಫೈಬರ್ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಇದರಿಂದಾಗಿ ಗ್ರಾಹಕರು ಪರದಾಡಿದ ಘಟನೆ ನಡೆದಿದೆ. ತಾಂತ್ರಿಕ ಅಡಚಣೆಯ ಹಿನ್ನೆಲೆಯಲ್ಲಿ ಏರ್ ಟೆಲ್ ಗ್ರಾಹಕರ ಬಳಿಕ ಕ್ಷಮೆಯಾಚಿಸಿದೆ. ಏರ್ ಟೆಲ್  ನ ಸೇವೆಯಲ್ಲಿ ಹಲವೆಡೆ ಸೇವಾ ಅಡೆತಡೆಗಳು ಉಂಟಾಗಿದ್ದು, ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಏರ್ ಟೆಲ್ ಈ ಬಗ್ಗೆ ಸ್ಪಷ್ಟನೆ ನೀಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ನಿಮ್ಮ ಏರ್‌ ಟೆಲ್ ಎಕ್ಸ್‌ಸ್ಟ್ರೀಮ್ ಫೈಬರ್ ಸೇವೆಗಳಲ್ಲಿ ನೀವು ಅಡಚಣೆಯನ್ನು ಅನುಭವಿಸಬಹುದು. ನಿಮ್ಮ ಸೇವೆಗಳನ್ನು ಪುನರಾರಂಭಿಸಲು ನಿರೀಕ್ಷಿತ ಸಮಯ 10 ನವೆಂಬರ್ 2022, 5:44 PM ಆಗಿದೆ. ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಏರ್ ಟೆಲ್ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನಟಿ ರಶ್ಮಿಕಾ ಮಂದಣ್ಣ ಮಾಡಿರುವ ಪೋಸ್ಟ್​ ಕುರಿತು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಶ್ಮಿಕಾ ಟ್ರೋಲ್​ ಮತ್ತು ನೆಗೆಟಿವಿಟಿ ಕಾರಣದಿಂದ ನಮಗೆ ಆಗಿರುವ ತೊಂದರೆ ಕುರಿತು ಅವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕುರಿತು ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಟ್ರೋಲಿಂಗ್​ ಕೆಟ್ಟದ್ದು. ಜನರ ಜೀವನದ ಬಗ್ಗೆ ನಾವು ಅಭಿಪ್ರಾಯಗಳನ್ನು ಹೇರೋಕೆ ಆಗಲ್ಲ. ವಾಸ್ತವ ಆ ವ್ಯಕ್ತಿಗೆ ಮಾತ್ರ ಗೊತ್ತಿರುತ್ತದೆ. ಅವರ ಪಾಡಿಗೆ ಅವರನ್ನು ಇರಲು ಬಿಡಿ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಅಂದಹಾಗೆ ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್​ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್​ ಬ್ಯಾಗ್​ ರೀತಿ ಆಗಿದ್ದೇನೆ ಎಂದು ಬರೆದುಕೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಡಿಕೇರಿ; ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಶ್ರೀನಾಥ್ ಬಂಧಿತ ಆರೋಪಿ. ಶ್ರೀನಾಥ್ ಎಂಬಾತ 60 ಕ್ಕೂ ಹೆಚ್ಚು ಜನರಿಗೆ ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ ವಂಚನೆ ಮಾಡಿದ್ದ. ಪ್ರತಿಯೊಬ್ಬರಿಂದ 1 ಲಕ್ಷ ರೂ. ಸಂಗ್ರಹ ಮಾಡಿದ್ದ ಎನ್ನಲಾಗಿದೆ. ಕೊಡಗು, ದಕ್ಷಿಣ ಕನ್ನಡ ಕೇರಳಾದಲ್ಲೂ ಆರೋಪಿ ವಂಚನೆ ಮಾಡಿದ್ದು, ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More