Author: admin

ದೇಶದ ಜನತೆ ತಮ್ಮನ್ನು ಆರಾಧಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಬಯಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದರು. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ, ಜನರ ಸಂಪತ್ತನ್ನು ಬಳಸಿ, ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಮತ್ತು ಭಯವನ್ನು ಸೃಷ್ಟಿಸುವ ಮೂಲಕ ಬಲವಂತವಾಗಿ ತಮ್ಮನ್ನು ಆರಾಧಿಸಬೇಕೆಂದು ಮೋದಿ ಬಯಸುತ್ತಿದ್ದಾರೆ. ಅವರನ್ನು ಬಲವಂತವಾಗಿ ಪೂಜಿಸಬೇಕೆಂದು ಆರ್‌ಎಸ್‌ಎಸ್ ಬಯಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಇದನ್ನೇ ಬಯಸುತ್ತಾರೆ ಎಂದರು.ಭಾರತ್ ಜೋಡೋ ಯಾತ್ರೆ ಸಮಾಜದಲ್ಲಿ ಹರಡುತ್ತಿರುವ ದ್ವೇಷ ಮತ್ತು ಭಯದ ವಿರುದ್ಧವಾಗಿದೆ. ಯಾತ್ರೆಯು ಸಂಯಮ ಮತ್ತು ಸ್ವಯಂ ಧ್ಯಾನದ ಬಗ್ಗೆ ಸೂಚಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾವೇರಿ : ಈ ವರ್ಷವೇ 15 ಸಾವಿರ ಶಿಕ್ಷಕರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಎಂ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ , ಈಗಾಗಲೇ 15,000 ಶಿಕ್ಷರನ್ನು ನೇಮಕ ಮಾಡಲಾಗಿದೆ. ಈ ವರ್ಷ ಇನ್ನೂ 15,000 ಶಿಕ್ಷಕರ ನೇಮಕ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಈ ವರ್ಷದಲ್ಲಿ 8,100 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಷ್ಟು ಪ್ರಮಾಣದ ಶಾಲಾ ಕೊಠಡಿಗಳ ನಿರ್ಮಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾವೇರಿ: ಕನ್ನಡ ಹೋರಾಟಗಾರರ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ. ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು , ಸಮ್ಮೇಳನದ ಸರ್ವಾಧ್ಯಕ್ಷರಾದ ದೊಡ್ಡರಂಗೇಗೌಡರಿಗೆ ಅಭಿನಂದನೆಗಳು. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ ಎಂದರು. ಕಳಸ ಬಂಡೂರಿ ಯೋಜನೆಗೆ ಈಗಾಗಲೇ ಅನುಮತಿ ಸಿಕ್ಕಿದೆ. ಉತ್ತರ ಕರ್ನಾಟಕ ಭಾಗದ ಜನರ ಕನಸು ನನಸಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೂ ಶೀಘ್ರವೇ ಅನುಮತಿ ಸಿಗುವ ಭರವಸೆ ಇದೆ ಎಂದರು. ಇನ್ನು ಗಡಿನಾಡಿನ ಅಭಿವೃದ್ಧಿಗಾಗಿ ಪ್ರಾಧಿಕಾರಕ್ಕೆ ಈಗಾಗಲೇ 25 ಕೋಟಿ ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಇನ್ನೂ 100 ಕೋಟಿ ರೂಪಾಯಿ ಅನುದಾನ ನೀಡುತ್ತೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಬೆಳಗಾವಿ ಪಟ್ಟಣದ ಸಾರಥಿ ನಗರದಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಾಣ  ಮಾಡಿದ್ದು, ಒಂದು ವಾರದಲ್ಲಿ ಮಸೀದಿ ನೆಲಸಮ ಮಾಡಬೇಕು. ಇಲ್ಲದಿದ್ರೆ ನಾನೇ ಬರ್ತೇನೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಿಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ . ನಗರದ ಹಿಂದೂ ವಿರಾಟ ಸಮಾವೇಶದಲ್ಲಿ ಮಾತನಾಡಿ, ಮಸೀದಿ ಕೆಡವುದಾದ್ರೆ ಕೆಡವಿ, ಇಲ್ಲದಿದ್ರೆ ದೀರ್ಘ ರಜೆ ಮೇಲೆ ಹೋಗಿ. ಇಲ್ಲದಿದ್ರೆ ನನ್ನ ತಾಕತ್‌ ಏನು ಅಂತಾ ತೋರಿಸುತ್ತೇನೆಂದು ಎಂದು ಪಾಲಿಕೆ ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಶೀಘ್ರವೇ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರು-ಬೆಳಗಾವಿಗೆ ಸಂಚಾರ ಆರಂಭವಾಗಲಿದೆ ಎನ್ನಲಾಗಿದೆ. ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಹೊಸ ವಂದೇ ಭಾರತ್ ರೈಲು ಧಾರವಾಡಕ್ಕೂ ವಿಸ್ತರಣೆಯಾಗುವುದು ಖಚಿತ ಆಗಿದೆ. ಹೀಗಾಗಿ ಬೆಂಗಳೂರು – ಧಾರವಾಡ ನಡುವಿನ ವಂದೇ ಭಾರತ್ ರೈಲು ಬೆಳಗಾವಿಯವರೆಗೂ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಮಾಹಿತಿ ನೀಡಿದ್ದಾರೆ. ಶೀಘ್ರವೇ ಬೆಂಗಳೂರು-ಹುಬ್ಬಳ್ಳಿ-ಬೆಳಗಾವಿಗೆ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ.

Read More

ಬೆಂಗಳೂರು: ಇಂದು ಸಿದ್ದು ನಿಜಕನಸುಗಳು ಪುಸ್ತಕ ಲೋಕಾರ್ಪಣೆ ಆಗುತ್ತಿದ್ದು, ಕಾಂಗ್ರೆಸ್‌ ಪಕ್ಷದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಪುಸ್ತಕ ಬಿಡುಗಡೆ ಕಾರ್ಯಕ್ರಮ ಸಾಮರಸ್ಯ ಕದಡುವ ಕೆಲಸವಾಗಿದೆ. ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಹೆಸರು ಬಳಸಿ ತೇಜೋವಧೆ ಮಾಡಲಾಗುತ್ತಿದೆ. ಪುಸ್ತಕದ ಮುಖಪುಟದಲ್ಲಿ ಅವರ ಭಾವಚಿತ್ರವನ್ನು ವಿರೂಪಗೊಳಿಸಲಾಗಿದೆ. ಕಲ್ಪಿತ ಪ್ರಚೋದನಕಾರಿ ಬರಹಗಳು ಈ ಪುಸ್ತಕದಲ್ಲಿವೆ. ಇದರಿಂದ ಸಾಮರಸ್ಯ ಕದಡುವ ಸಾಧ್ಯತೆಯಿದ್ದು, ಕಾರ್ಯಕ್ರಮ ರದ್ದು ಮಾಡಬೇಕು ಎಂಬ ಎಸ್ ಜೆ ಪಾರ್ಕ್ ಪೊಲೀಸರಿಗೆ ಮನವಿ‌ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರಿನ ಪತ್ರಿಕಾ ಭವನದಲ್ಲಿ ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಜಿಲ್ಲಾ ಸಮಾವೇಶ ರವಿವಾರ ಜರುಗಿತು. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ತಿಂಗಳಿಗೆ ರೂ. 20,000 ಗೌರವಧನ ನೀಡುವಂತೆ ಹಾಗೂ ವಾರಕ್ಕೆ 10 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ನೀಡುತ್ತಿರುವುದನ್ನು ವಿರೋಧಿಸಿ ಈ ಸಮಾವೇಶ ಜರುಗಿತು. ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪದವಿ ಪೂರ್ವ ಅತಿಥಿ ಉಪನ್ಯಾಸಕರು ಈ ಸಮಾವೇಶದಲ್ಲಿ ಭಾಗಿಯಾಗಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ದೊರೆರಾಜು ,ಪ್ರಗತಿಪರ ಚಿಂತಕರು ಹಾಗೂ ನಿವೃತ್ತ ಡಿಡಿಪಿಐ ಸಮಾವೇಶವನ್ನು ಕುರಿತು ಮಾತನಾಡಿ, ಇಂದು ಎಲ್ಲಾ ಸರ್ಕಾರಗಳು ಜನವಿರೋಧಿಯಾಗಿದ್ದು, ಅತಿಥಿ ಉಪನ್ಯಾಸಕರಿಗೆ ಯಾವುದೇ ರೀತಿಯ ನೆರವು ನೀಡುತ್ತಿಲ್ಲ. ಉಪನ್ಯಾಸಕರು ಬೀದಿಗಿಳಿದೇ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು. ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಸಂಘಟನೆಯ ರಾಜ್ಯ ಸಲಹೆಗಾರರಾದ ವಿಎನ್ ರಾಜಶೇಖರ್ ಮಾತನಾಡಿ, ವಾರಕ್ಕೆ ಕೇವಲ 10 ಗಂಟೆಗಳು ಮಾತ್ರ ಕಾರ್ಯಭಾರ ನೀಡಬೇಕೆಂದು ಪದವಿ ಪೂರ್ವ ಇಲಾಖೆಯ ಸುತ್ತೋಲೆ ಇದ್ದರೂ, ಪದವಿ ಪೂರ್ವ ಅತಿಥಿ ಉಪನ್ಯಾಸಕರಿಗೆ…

Read More

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶ” ದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಾಲ್ಗೊಂಡು, ಶೋಷಿತ ಸಮುದಾಯಗಳ ಜನರ ಸಮಾನತೆಯ ಕೂಗಿಗೆ ದನಿಗೂಡಿಸಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶವನ್ನು ಒಂದೇ ವೇದಿಕೆಯಲ್ಲಿ ಆಯೋಜಿಸಿರುವುದು ಪ್ರಶಂಸನೀಯ ಮತ್ತು ಸ್ವಾಗತಾರ್ಹವಾದುದ್ದು. ಅವಕಾಶ ಮತ್ತು ಸಾಮಾಜಿಕ ನ್ಯಾಯದಿಂದ ವಂಚಿತವಾದ ಶೋಷಿತ ಜನರು ಇಂದು ಒಗ್ಗೂಡಿ ಹೋರಾಟವನ್ನು ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೋಟೆನಾಡು ಚಿತ್ರದುರ್ಗದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶ” ದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ಜನರಿಗೂ ನ್ಯಾಯವನ್ನು ಕೊಡಬೇಕು ಎಂಬ ವಿಷಯದಲ್ಲಿ ಬದ್ಧತೆ ಹೊಂದಿರುವ ಪಕ್ಷ. ಬಿಜೆಪಿಯವರು ಸಾಮಾಜಿಕ ನ್ಯಾಯ, ಮೀಸಲಾತಿಯಲ್ಲಿ ನಂಬಿಕೆ…

Read More

ಮಂಡ್ಯ: ನಾಟಕ ಪ್ರದರ್ಶನದ ವೇಳೆಯೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ದುಗ್ಗನಹಳ್ಳಿ ಗ್ರಾಮದ ನಿವಾಸಿ ನಂಜಯ್ಯ(46) ಮೃತಪಟ್ಟ ಕಲಾವಿದರಾಗಿದ್ದು, ಕುರುಕ್ಷೇತ್ರದ ಕೃಷ್ಣ ಸಂಧಾನ ಅನ್ನೋ ನಾಟಕದಲ್ಲಿ ಸಾರ್ಥ್ಯಕಿ ಪಾತ್ರ ನಿರ್ವಹಿಸುತ್ತಿದ್ದ ಅವರು ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಾಟಕ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಕಲಾವಿದನ ಸಾವಿನ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಾಟಕವನ್ನು ಸ್ಥಗಿತಗೊಳಿಸಿದರು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ಮಕ್ಕಳು, ಪೋಷಕರ ಹಾಗೂ ಶಿಕ್ಷಕ ವೃಂದದ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದರೆ, ಜಗತ್ತನ್ನೇ ಗೆಲ್ಲಬಹುದೆಂದು ರಾಮಕೃಷ್ಣ ಆಶ್ರಮದ ಜಪಾನಂದ ಸ್ವಾಮೀಜಿ ತಿಳಿಸಿದರು. ಪಾವಗಡ ಪಟ್ಟದ ಹೆಸರಾಂತ ಶಾಲೆಯಾದ ಜ್ಞಾನಭೋದಿನಿ ಆಂಗ್ಲ ಮಾಧ್ಯಮ ಪ್ರೌಢಶಾಲಯ 30ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಇರುವಂತಹ ಪ್ರತಿಭೆಗಳನ್ನು ಪೋಷರಿಗಿಂತ ಹೆಚ್ಚಾಗಿ ಶಿಕ್ಷಕರು ಕಂಡುಹಿಡಿಯಲು ಸಾಧ್ಯ. ಇತ್ತೀಚಿನ ದಿನದಲ್ಲಿ ತಂದೆ ತಾಯಿಯ ಒಡನಾಟಕ್ಕಿಂತ ಶಿಕ್ಷಕರ ಒಡನಾಟವೇ ಹೆಚ್ಚು. ಹಾಗಾಗಿ ಪಠ್ಯ ಹಾಗೂ ಜ್ಞಾನದ ಬಗ್ಗೆ ಹೆಚ್ಚು ಶಿಕ್ಷಕರು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ವಿವೇಕಾನಂದರ ವಿಚಾರಧಾರೆಗಳನ್ನು ಮಕ್ಕಳು ತಮ್ಮಜೀವನ ಶೈಲಿಯಲ್ಲಿ ಬಳಸಿಕೊಂಡು, ತಮ್ಮ ನಿತ್ಯದ ಪಠ್ಯದ ಜೊತೆಯಲ್ಲಿ ಅವರ ಆದರ್ಶಗಳನ್ನು  ರೂಡಿಸಿಕೊಳ್ಳಬೇಕು. ಅದು ನಿಮ್ಮ ಜೀವನದಲ್ಲಿ ಬದಲಾವಣೆ ಬರಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಅನಿಲ್ ಕುಮಾರ್, ಈ ನಮ್ಮ ಸಂಸ್ಥೆಗೆ ಇಂದಿಗೆ 30 ವರ್ಷ ಪೂರ್ಣಗೊಂಡಿದೆ. ಈ ಬಾರಿ ಶಾಲೆಯಲ್ಲಿ ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು, ಪೋಷಕರಿಗೂ ಸಹ…

Read More