Subscribe to Updates
Get the latest creative news from FooBar about art, design and business.
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
- ತುಮಕೂರಿಗೆ ಏರ್ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
Author: admin
ಬೆಂಗಳೂರು/ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ವೇಗಿ ಯಶ್ ದಯಾಳ್ ಅವರಿಗೆ ಸಂಕಷ್ಟ ಎದುರಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣದಲ್ಲಿ ಜೈಪುರದ ವಿಶೇಷ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಕ್ರಿಕೆಟಿಗನಿಗೆ ಈಗ ಬಂಧನದ ಭೀತಿ ಎದುರಾಗಿದೆ. ಘಾಜಿಯಾಬಾದ್ ಮೂಲದ ಸಂತ್ರಸ್ತೆ, ಯಶ್ ದಯಾಳ್ ಮದುವೆಯಾಗುವುದಾಗಿ ನಂಬಿಸಿ ತನಗೆ ವಂಚಿಸಿದ್ದಾರೆ ಮತ್ತು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಯಶ್ ತನ್ನನ್ನು ಊಟಿಗೆ ಕರೆದೊಯ್ದಿದ್ದರು ಮತ್ತು ಸುಮಾರು 15 ದಿನಗಳ ಕಾಲ ಅವರ ಮನೆಯಲ್ಲೇ ಉಳಿದುಕೊಂಡಿದ್ದೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಯಶ್ ಇತರ ಹಲವು ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅವರು ದೂರಿದ್ದಾರೆ. ಪ್ರಕರಣದ ಗಂಭೀರತೆ ಮತ್ತು ಲಭ್ಯವಿರುವ ಸಾಕ್ಷ್ಯಗಳನ್ನು ಗಮನಿಸಿದ ನ್ಯಾಯಾಧೀಶರಾದ ಅಲ್ಕಾ ಬನ್ಸಾಲ್, ತನಿಖೆಯ ಈ ಹಂತದಲ್ಲಿ ಆರೋಪಿಗೆ ಬಂಧನದಿಂದ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿ…
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ದಿನಕ್ಕೊಂದು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ರಕ್ಷಿತಾ ಮತ್ತು ಗಿಲ್ಲಿ ನಟ ಅವರ ಸ್ನೇಹ ಹಾಗೂ ಕೆಮಿಸ್ಟ್ರಿ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಕ್ಷಿತಾ ನೀಡಿರುವ ಒಂದು ಹೇಳಿಕೆ ಈಗ ವೀಕ್ಷಕರಲ್ಲಿ ಹೊಸ ಅನುಮಾನ ಹುಟ್ಟುಹಾಕಿದೆ. ಏನಿದು ರಕ್ಷಿತಾ ಹೇಳಿಕೆ? ಇತ್ತೀಚೆಗೆ ಸೂರಜ್ ಅವರ ಸಹೋದರಿ ಬಿಗ್ ಬಾಸ್ ಮನೆಗೆ ಭೇಟಿ ನೀಡಿದ್ದಾಗ, “ಬಿಗ್ ಬಾಸ್ ಮನೆಯಲ್ಲಿರುವವರೆಲ್ಲರೂ ನಿನಗೆ ಅಣ್ಣಂದಿರಲ್ಲವೇ?” ಎಂದು ರಕ್ಷಿತಾ ಅವರನ್ನು ಕೇಳಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ರಕ್ಷಿತಾ, “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯಲ್ಲಿರುವ ಮಿಕ್ಕವರೆಲ್ಲರೂ ನನಗೆ ಅಣ್ಣಂದಿರು” ಎಂದು ಉತ್ತರಿಸಿದ್ದಾರೆ. ಈ ಮಾತು ಕೇಳಿದ ಮನೆಯ ಸದಸ್ಯರು ಹಾಗೂ ವೀಕ್ಷಕರು ಶಾಕ್ ಆಗಿದ್ದಾರೆ. ಗಿಲ್ಲಿ ಮೇಲೆ ಪ್ರೀತಿ ಇದೆಯೇ? ರಕ್ಷಿತಾ ಅವರ ಈ ನೇರ ಹೇಳಿಕೆಯಿಂದಾಗಿ, ಗಿಲ್ಲಿ ಮೇಲೆ ಅವರಿಗೆ ಕೇವಲ ಸ್ನೇಹ ಮಾತ್ರವಲ್ಲದೆ ವಿಶೇಷವಾದ ಪ್ರೀತಿ ಇದೆಯೇ…
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುವುದನ್ನು ತಡೆಯಲು ಅರಣ್ಯ ಇಲಾಖೆಯು ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಫಾರ್ಮ್ ಗಾರ್ಡ್’ (ತೋಟದ ಕಾವಲುಗಾರ) ಎಂಬ ಅತ್ಯಾಧುನಿಕ ಕ್ಯಾಮರಾಗಳನ್ನು ಅಳವಡಿಸಿದೆ. ನಾಗರಹೊಳೆಯ ವೀರನಹೊಸಳ್ಳಿ ವಲಯದ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಈ ಪ್ರಾಯೋಗಿಕ ಯೋಜನೆಯನ್ನು ಜಾರಿಗೆ ತರಲಾಗಿದೆ. ಕಾರ್ಯನಿರ್ವಹಣೆ ಹೇಗೆ? ಈ ಎಐ ಆಧಾರಿತ ಕ್ಯಾಮರಾವು ಆನೆಗಳನ್ನು ಸುಮಾರು 150 ಮೀಟರ್ ದೂರದಲ್ಲೇ ಪತ್ತೆಹಚ್ಚುವ ಸಾಮರ್ಥ್ಯ ಹೊಂದಿದೆ. ಆನೆಯು ಅರಣ್ಯದ ಗಡಿ ದಾಟಿ ಬರುತ್ತಿರುವುದು ಕಂಡುಬಂದ ತಕ್ಷಣ, ಈ ಸಾಧನವು ಧ್ವನಿವರ್ಧಕಗಳ ಮೂಲಕ ವಿವಿಧ ರೀತಿಯ ಭಯಾನಕ ಶಬ್ದಗಳನ್ನು ಹೊರಹಾಕುತ್ತದೆ. ಜೇನುನೋಣಗಳ ಝೇಂಕಾರ, ಪಟಾಕಿ ಸಿಡಿಯುವ ಸದ್ದು, ಸಿಡಿಲು-ಗುಡುಗಿನ ಧ್ವನಿ ಹಾಗೂ ಮನುಷ್ಯರು ಕಿರುಚುವ ಸದ್ದು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಬಗೆಯ ಶಬ್ದಗಳನ್ನು ಇದು ಮೊಳಗಿಸುತ್ತದೆ. ಈ ಶಬ್ದಗಳಿಂದ ಆನೆಗಳು ವಿಚಲಿತಗೊಂಡು ಭಯದಿಂದ ವಾಪಸ್ ಕಾಡಿನತ್ತ ತೆರಳುತ್ತವೆ. ಯೋಜನೆಯ ಪ್ರಾಮುಖ್ಯತೆ: ಬೊಮ್ಮಲಾಪುರ ಹಾಡಿಯ ಭೂಪ್ರದೇಶವು ಆನೆ…
ಬೆಂಗಳೂರು: ರಾಜ್ಯದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅರಣ್ಯ ಇಲಾಖೆಯ ಖಾಯಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 1 ಕೋಟಿ ರೂಪಾಯಿಗಳ ಅಪಘಾತ ವಿಮೆ ಸೌಲಭ್ಯವನ್ನು ಅವರು ಘೋಷಿಸಿದ್ದಾರೆ. ಈ ಮಹತ್ವದ ಯೋಜನೆಗಾಗಿ ಇಲಾಖೆಯು ‘ಬ್ಯಾಂಕ್ ಆಫ್ ಬರೋಡಾ’ ಜೊತೆಗೆ ತಿಳಿವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ. ಈ ಯೋಜನೆಯ ಪ್ರಮುಖಾಂಶಗಳು ಈ ಕೆಳಗಿನಂತಿವೆ: ಖಾಯಂ ಸಿಬ್ಬಂದಿ: ಎಲ್ಲಾ ಖಾಯಂ ಉದ್ಯೋಗಿಗಳಿಗೆ ಅವರ ಶ್ರೇಣಿಯ ಹಂಗಿಲ್ಲದೆ 1 ಕೋಟಿ ರೂ. ವೈಯಕ್ತಿಕ ಅಪಘಾತ ವಿಮೆ ದೊರೆಯಲಿದೆ. ಕರ್ತವ್ಯದ ಅವಧಿಯಲ್ಲಿ ಮೃತಪಟ್ಟರೆ ಬ್ಯಾಂಕ್‌ನಿಂದ ಹೆಚ್ಚುವರಿಯಾಗಿ 25 ಲಕ್ಷ ರೂ. ಪಾವತಿಸಲಾಗುತ್ತದೆ. ಅಲ್ಲದೆ 10 ಲಕ್ಷ ರೂ. ಜೀವ ವಿಮಾ ರಕ್ಷಣೆಯೂ ಇರಲಿದೆ. ಹೊರಗುತ್ತಿಗೆ ಸಿಬ್ಬಂದಿ: ಅರಣ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಹೊರಗುತ್ತಿಗೆ ನೌಕರರಿಗೂ 20 ಲಕ್ಷ ರೂಪಾಯಿಗಳ ವಿಮಾ ಸೌಲಭ್ಯ ಕಲ್ಪಿಸಲಾಗಿದೆ. “ನಮ್ಮ ಹಸಿರು ಯೋಧರು ಜೀವದ ಹಂಗು…
ಸರಗೂರು: ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ.ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ ಎಂದು ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರದಂದು ಸಾಂಕೇತಿಕವಾಗಿ ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸರಗೂರಿನ ಪ್ರವಾಸ ಮಂದಿರದಲ್ಲಿ ಹಮ್ಮಿಕೊಂಡಿದ್ದ ಮನುಸ್ಮೃತಿ ಪ್ರತಿಕೃತಿ ದಹನ ಸುಟ್ಟು ಹಾಕಿ ಮಾತನಾಡಿದರು. ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದರು . ಈ ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಮನುಸ್ಮೃತಿ ಅಳಿಸಲಿ ಸಂವಿಧಾನ ಉಳಿಯಲಿ ಎಂಬ ಚೌಕಟ್ಟಿನಲ್ಲಿ ಬಾಬಾ…
ತಿಪಟೂರು: ನಗರದ ಕೋಡಿ ಸರ್ಕಲ್ ನ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಸಬಾ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಎಂ.ಶೀನಪ್ಪರವರ ಸಮ್ಮುಖದಲ್ಲಿ ನಡೆಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಎಂ.ಶೀನಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರಿಗೆ ಬ್ಯಾಂಕಿನ ಮೂಲಕ ನಡೆಯುವ ವ್ಯವಹಾರದ ಪಾರದರ್ಶಕತೆ ಹಾಗೂ ಯೋಜನೆಯ ಯಶಸ್ವಿ ಕಾರ್ಯಕ್ರಮಗಳಾದ ಕೃಷಿ, ಜ್ಞಾನವಿಕಾಸ, CSC, ಶುದ್ಧಗಂಗಾ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿ ರಾಜ್ಯದ ಬಡಜನತೆಯ ಅಭ್ಯುದಯಕ್ಕೆ ಸರಕಾರಗಳೊಟ್ಟಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅವಿರತ ಶ್ರಮಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ತುಮಕೂರು–1 ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ಮಾತನಾಡಿ, ಧರ್ಮಸ್ಥಳ ಸಂಘಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಒಕ್ಕೂಟಪದಾಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಎಳೆಎಳೆಯಾಗಿ ತಿಳಿಸಿ ಸಂಘದ ಪಾಲುದಾರಬಂದುಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಉದಯ್ ಕೆ., ವಲಯ ಮೇಲ್ವಿಚಾರಕ ಜಯಪ್ರಸಾದ್, ಕಸಬಾ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಹಾಗೂ ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.…
ಗುಬ್ಬಿ: ಕಡಬ ಗ್ರಾಮ ಪಂಚಾಯಿತಿ ಕಚೇರಿ ಪಕ್ಕದ ಎಸ್ ಬಿಐ ಬ್ಯಾಂಕ್ ನ ಎಟಿಎಂನಲ್ಲಿ ಮಂಗಳವಾರ ತಡರಾತ್ರಿ ಖದೀಮರು ಗ್ಯಾಸ್ ಕಟರ್ ಬಳಸಿ ಲಕ್ಷಾಂತರ ರೂ. ಗಳನ್ನು ದೋಚಿದ ಘಟನೆ ನಡೆದಿದೆ. ಗುಬ್ಬಿ ತಾಲೂಕಿನ ಮೈಸೂರು ಸಂಪರ್ಕದ ಮಾರ್ಗ ಮಧ್ಯೆಯ ಕಡಬ ಗ್ರಾಮ ಪ್ರಮುಖ ಹೋಬಳಿ ಕೇಂದ್ರವಾಗಿದ್ದು, ವ್ಯಾಪಾರ ಕೇಂದ್ರ ಎನಿಸಿದೆ. ಬಸ್ ನಿಲ್ದಾಣ ಸಮೀಪ ಪೊಲೀಸ್ ಉಪ ಠಾಣೆಗೆ ಕೂಗಳತೆಯ ಎಸ್‌ಬಿಐ ಎಟಿಎಂ ಗೆ ಕಟರ್ ಮೂಲಕ ಕನ್ನ ಹಾಕಿರುವ ಕಳ್ಳರು ಸುಮಾರು 13 ರಿಂದ 14 ಲಕ್ಷ ರೂಪಾಯಿ ಹಣ ದೋಚಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದ ಕೂಡಲೇ ಗುಬ್ಬಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇನ್ನಿತರ ಸಾಕ್ಷ್ಯಾಧಾರಕ್ಕೆ ಮುಂದಾಗಿದ್ದು, ತುಮಕೂರು ಎಎಸ್ಪಿ ಪುರುಷೋತ್ತಮ್ ಸೇರಿದಂತೆ ತಿಪಟೂರು ಡಿವೈಎಸ್ಪಿ ಹಾಗೂ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಜಾಡು ಹಿಡಿಯಲು ವಿಶೇಷ ತಂಡ ರಚಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನಾದ್ಯಂತ ಕಳ್ಳತನ ಪ್ರಕರಣಗಳು…
ಚಿತ್ರದುರ್ಗ:ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದಾಗಿ ಬಸ್ ಬೆಂಕಿಗಾಹುತಿಯಾಗಿದ್ದು, 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ, ಹಿರಿಯೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಡಿವೈಡರ್ ಹಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಬಸ್ ಬೆಂಕಿಯ ಕೆನ್ನಾಲಗೆಗೆ ಸಿಲುಕಿದೆ. ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ದುರಂತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಕುಲದೀಪ್ ಕೂಡ ಮೃತಪಟ್ಟಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್, ಮತ್ತು ಕಂಪ್ಯೂಟರ್ ಆಪರೇಟರ್ ಸುಬ್ರಹ್ಮಣ್ಯರವರ ಹಗರಣ ವಿರುದ್ದ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಾರ್ವಜನಿಕರು ನಡೆಸುತ್ತಿದ್ದ ಪ್ರತಿಭಟನೆಯ ಎರಡು ದಿನಗಳ ನಂತರ ಕೈಬಿಡಲಾಗಿದೆ. ಡಿ.23ರಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುವ ಮೂಲಕ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಡಿ.24ರಂದು ಕೂಡ ಪ್ರತಿಭಟನೆ ಮುಂದುವರಿದಿತ್ತು. ಸಿಇಒ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಆದರೆ ಕಾರಣಾಂತರಗಳಿಂದ ಸಿಇಒ ಪ್ರತಿಭಟನಾ ಸ್ಥಳಕ್ಕೆ ಆಗಮಿಸಲಿಲ್ಲ, ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರು ಅಹವಾಲು ಸ್ವೀಕರಿಸಿದರು. ನಂತರ ಹಗರಣಗಳ ಬಗ್ಗೆ ಮಾಹಿತಿ ಪಡೆದು, ತನಿಖಾಧಿಕಾರಿಗಳನ್ನು ನೇಮಕ ಮಾಡಿ ಕ್ರಮಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟರು. ಎಚ್ಚರಿಕೆ: ಸಮಸ್ಯೆಗಳ ಪರಿಹಾರದ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟಿದ್ದು, ಒಂದು ವೇಳೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇದ್ದರೆ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು…
ಸರಗೂರು: ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ ಸಂಘದ ಸಹ ಕಾರ್ಯದರ್ಶಿ ಮಣಿರಾಜು ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಪಟ್ಟಣ ಪಂಚಾಯಿತಿ, ತಾಲ್ಲೂಕು ಕಾನೂನು ಸೇವಾ ಸಮಿತಿ ತಾಲ್ಲೂಕು ವಕೀಲರ ಸಂಘ ಹಾಗೂ ಸರ್ಕಾರಿ ಅಭಿಯೋಜನಾ ಇಲಾಖೆ.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ದಂದು ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ವಿಶೇಷ ವಿಕಲಚೇತನರ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರು ಸರ್ಕಾರದ ಉದ್ಯೋಗ ಹಾಗೂ ವಿವಿಧ ಸೌಲಭ್ಯಗಳು, ಸ್ಥಳೀಯ ನ್ಯಾಯಾಲಯದ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು. ವಿಕಲಚೇತನರಿಗೆ ಸರಕಾರದಿಂದ ಸಿಗುವ ಅನುದಾನ ಗಳನ್ನು ಸಮರ್ಪಕವಾಗಿ ತಲುಪಿಸಲು ಎಲ್ಲರೂ ಶ್ರಮಿಸಬೇಕು ಎಂದರು. ಇಓ ಪ್ರೇಮ್ ಕುಮಾರ್ ಮಾತನಾಡಿ, ವಿಕಲಚೇತನರಿಗೆ ನಾಲ್ಕು ರೀತಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕಾಗಿದೆ. ಮುಖ್ಯವಾಗಿ 0–6 ವರ್ಷದ ಮಕ್ಕಳಿಗೆ ಶೀಘ್ರ ಪತ್ತೆ…