Author: admin

ತಿಪಟೂರು ಎರಡನೇ ಹಂತದ ಜೆಡಿಎಸ್ ನ ಪಂಚರತ್ನ ಯಾತ್ರೆ ತಿಪಟೂರು ತಾಲೂಕಿಗೆ ಆಗಮಿಸಲಿದ್ದು ಈ ಸಮಯದಲ್ಲಿ ಕಾಂಗ್ರೆಸ್ನ ಮುಖಂಡರು ಕೆಲನ ನಗರಸಭೆ ಸದಸ್ಯರು ಬಿಜೆಪಿ ಸದಸ್ಯರು ಜೆಡಿಎಸ್ ಗೆ ಸೇರಲು ಒಲವು ತೋರಿದ್ದಾರೆ ಎಂದು ತಿಪಟೂರು ತಾಲೂಕು ಜೆಡಿಎಸ್ ಅಧ್ಯಕ್ಷ ಶಿವು ಸ್ವಾಮಿ ತಿಳಿಸಿದರು. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದ್ಯಂತ ನಡೆಯುತ್ತಿರುವ ಮೊದಲ ಹಂತದ ಪಂಚರತ್ನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಈಗಾಗಲೇ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಅದೇ ರೀತಿ ತಿಪಟೂರಿನಲ್ಲಿ ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಅವರಿಗೆ ಜೆಡಿಎಸ್ ಸೇರಲು ಬಹಿರಂಗವಾಗಿ ಆಹ್ವಾನ ನೀಡುತ್ತಿರುವುದಾಗಿ ತಿಳಿಸಿದರು. ತಿಪಟೂರು ನಗರಸಭೆ ಕೆಲಸ ಸದಸ್ಯರು ಜನವರಿ ಮಧ್ಯಭಾಗದಲ್ಲಿ ಪಂಚರತ್ನ ಯಾತ್ರೆ ತಿಪಟೂರು ತಾಲೂಕಿಗೆ ಆಗಮಿಸಲಿದ್ದು , ಈ ಸಂದರ್ಭದಲ್ಲಿ ಎಲ್ಲಾ ಮುಖಂಡರುಗಳನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ತಿಳಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಜಗದೀಶ್ ತಡಸೂರು, ಗ್ರಾಮ…

Read More

ತುರುವೇಕೆರೆ: ತುರುವೇಕೆರೆ.ತಾಲ್ಲೂಕಿನ ಆನೆಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇನಹಳ್ಳಿ, ಆನೆಕೆರೆ ಮತ್ತು ಆನೆಕೆರೆ ಪಾಳ್ಯದಲ್ಲಿ ಶಾಸಕ ಮಸಾಲಾ ಜಯರಾಮ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕಾಮಗಾರಿಗಳಿಗೆ ಕ್ರಷರ್ ಗಳ ಮುಷ್ಕರದಿಂದಾಗಿ   ಕಚ್ಚಾವಸ್ತುಗಳು ಲಭ್ಯವಿಲ್ಲದ ಕಾರಣ ಕಾಮಗಾರಿಗಳು ವಿಳಂಬವಾಗಿವೆ. ಆದರಿಂದ ತಡವಾಗಿ ಚಾಲನೆ ಕೊಟ್ಟಿದ್ದೇವೆ. ಇನ್ನು 40 ಕೋಟಿ ರೂ.ಗಳ ಕಾಮಗಾರಿಗಳು ಬಾಕಿಯಿವೆ.  ಇನ್ನು ಒಂದು ತಿಂಗಳ ಒಳಗಾಗಿ ಬಾಕಿ ಇರುವ ಕಾಮಗಾರಿಗಳಿಗೆ ಚಾಲನೆ ಕೊಡಲಾಗುವುದು. ಇನ್ನು ಎರಡು ತಿಂಗಳ ಒಳಗಾಗಿ ಎಲ್ಲ 400  ಹಳ್ಳಿಗಳಿಗೆ ಸಿ.ಸಿ. ರಸ್ತೆ ಕಾಮಗಾರಿಯನ್ನು ಮಾಡಿ ಮುಗಿಸಲಾಗುವುದು. ಈಗಾಗಲೇ ಕಾಮಗಾರಿಗಳಿಗೆ ವೇಗವನ್ನು ಹೆಚ್ಚಿಸಿ ಎಂದು ಗುತ್ತಿಗೆದಾರರುಗಳಿಗೆ ತಾಕೀತು ಮಾಡಿದ್ದೇನೆ. ಫೆಬ್ರವರಿ ಒಳಗಾಗಿ ಕಾಮಗಾರಿಗಳನ್ನು ಮುಗಿಸಲಾಗುವುದು ಎಂದು ಹೇಳಿದರು. ಸೋಮೇನಹಳ್ಳಿ ಗೆಟ್ ನಿಂದ   ಮಲ್ಲಾಘಟ್ಟ  ಆನೆಕೆರೆ  ನಾಯಕನಘಟ್ಟ ರಸ್ತೆ ತುಂಬಾ ಹಾಳಾಗಿರುವುದರಿಂದ ಮತ್ತು ಈ ಭಾಗದ  ಜನರ ಬಹುದಿನಗಳ ಬೇಡಿಕೆಯಾದ ರಸ್ತೆಯನ್ನು ಅಭಿವೃದ್ಧಿಪಡಿಸಲು 7.5 ಕೋಟಿ ರೂ.ಗಳು ಮಂಜೂರಾಗಿದ್ದು, ಅತಿಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ.…

Read More

ಸರಗೂರು:  ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟನೆ ಚುರುಕುಗೊಂಡಿದ್ದು,  ಬೂತ್ ಸಮಿತಿಗಳು ಕಾರ್ಯಾರಂಭ ಮಾಡುತ್ತಿರುವುದು ಬಿಜೆಪಿಯ ಕ್ರೀಯಾಶೀಲ ಪಕ್ಷ ಸಂಘಟನೆಯ ಕಾರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸಮಾಜ ಸೇವೆಕ ಬಿಜೆಪಿ ಮುಖಂಡ ಡಾ.ಹೆಚ್.ವಿ.ಕೃಷ್ಣಸ್ವಾಮಿ ಹೇಳಿದರು. ತಾಲೂಕಿನ ಮುಳ್ಳೂರು ಮಹಾಶಕ್ತಿ ಕೇಂದ್ರ ಹಾಗೂ ಬೆಣ್ಣೆಗೆರೆ ಗ್ರಾಮದಲ್ಲಿ ಬುಧವಾರ  ನಡೆದ ‘ಬೂತ್ ವಿಜಯ’ ಅಭಿಯಾನದ ಅಂಗವಾಗಿ ಮನೆ ಮನೆಗಳಿಗೆ ಬಿಜೆಪಿ ವಿಜಯಧ್ವಜ ಹಾರಿಸುವ ಮೂಲಕ ಪಕ್ಷದ  ಯಶಸ್ವಿಯಾಗಿ ನೆರವೇರಿಸಿ.  ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೂತ್ ಮಟ್ಟದಲ್ಲಿ ಪಕ್ಷ ಬಲಿಷ್ಠವಾಗಿದೆ, ಪಕ್ಷದ ಸಂಘಟನೆಯ ಕಾರ್ಯ ಇನ್ನೂ ಚುರುಕುಗೊಳಿಸಬೇಕಿದೆ, ಬಿಜೆಪಿ ಸರ್ಕಾರ ರೂಪಿಸಿರುವ ಜನಪರ ಯೋಜನೆ, ಸಾಧನೆಗಳ ಬಗ್ಗೆ ಜನರ ಮನೆಬಾಗಿಲಿಗೆ ಮುಟ್ಟಿಸುವ ಕೆಲಸ ನಡೆಯಬೇಕಿದೆ ಎಂದರು. ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಜಿಲ್ಲಾ ಸಹ ವಕ್ತರರಾದ ಸಿ.ಕೆ.ಗಿರೀಶ್ ಮಾತನಾಡಿ, ಕಾರ್ಯಕರ್ತರೇ ಬಿಜೆಪಿಯ ಅಮೂಲ್ಯ ಆಸ್ತಿ, ಕಾರ್ಯಕರ್ತರೇ ಬಿಜೆಪಿಯ ಬೆನ್ನೆಲುಬು, ನಿಷ್ಠೆಯಿಂದ ದುಡಿಯುವ ಕೋಟಿ ಕೋಟಿ ಕಾರ್ಯಕರ್ತರ ಶ್ರಮ ಹಾಗೂ ಆಶೀರ್ವಾದ ಬಿಜೆಪಿಗೆ ಇದೆ,…

Read More

ಸರಗೂರು: ಹಿಂದೂ ಸಂಘಟನೆಗಳ ಜಾಗೃತಿಗಾಗಿ ಪಟ್ಟಣದ ಶ್ರೀ ಹನುಮಜಯಂತಿ ಅಚರಣಾ ಸಮಿತಿ ಶನಿವಾರ ಆಯೋಜಿಸಿದ್ದ ಹನುಮ ಜಯಂತಿ ಉತ್ಸವದ ಶೋಭಯಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು. ದಾರಿಯುದ್ದಕ್ಕೂ ಭಗವಾನ್ ಹನುಮನ ಘೋಷಣೆ ಮೊಳಗಿದವು. ಶೋಭಾಯಾತ್ರೆ ಅಂಗವಾಗಿ ಪಲ್ಲಕ್ಕಿಯಲ್ಲಿ ಕೂರಿಸಿದ್ದ ಹನುಮಂತನ ಭಾವಚಿತ್ರಕ್ಕೆ ತಾಲೂಕಿನ ಹಂಚೀಪುರ ಮಠದ ಚನ್ನಬಸವ ಸ್ವಾಮೀಜಿ, ದಡದಹಳ್ಳಿ ಮಠದ ಷಡಕ್ಷರಿಸ್ವಾಮೀಜಿ, ಶಾಸಕ ಅನಿಲ್ ಚಿಕ್ಕಮಾದು, ಜೆಡಿಎಸ್ ಮುಖಂಡ ಜಯಪ್ರಕಾಶ್, ಬಿಜೆಪಿ ಮುಖಂಡರಾದ ಡಾ.ಎಚ್.ವಿ.ಕೃಷ್ಣಸ್ವಾಮಿ, ಎಂ.ಅಪ್ಪಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಹಂಚೀಪುರ ಗುರುಸ್ವಾಮಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಆಚರಣಾ ಸಮಿತಿ ಅಧ್ಯಕ್ಷ ಚನ್ನಪ್ಪ ಸೇರಿದಂತೆ ಮುಖಂಡರು ಹನುಮನ ಭಾವಚಿತ್ರವುಳ್ಳ ಶೋಭಯಾತ್ರೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಪಟ್ಟಣದ ಕೆಇಬಿ ಕಚೇರಿಯಿಂದ ಹೊರಟ ಶೋಭಾಯಾತ್ರೆ ಮೆರವಣಿಗೆಯು ಹುಣಸೂರು-ಎನ್.ಬೇಗೂರು ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣ, ಮಹಾವೀರ ವೃತ್ತ, ಚಿಕ್ಕದೇವಮ್ಮನ ವೃತ್ತ, ಮೂಲಕ 2ನೇ ಮುಖ್ಯ ರಸ್ತೆಯಲ್ಲಿ ಸಾಗಿ ಸಂತೆಮಾಳದ ಮಾಸ್ತಮ್ಮನ ದೇವಸ್ಥಾನದಲ್ಲಿ ಸಮಾವೇಶಗೊಂಡಿತು. ಪಟ್ಟಣದ ಪ್ರಮುಖ ಬೀದಿಗಳು ಕೆಸರಿಮಯವಾಗಿದ್ದು,…

Read More

ಕೇರಳ : ಕೊಲ್ಲಂನ ಕರುನಾಗಪಲ್ಲಿಯಲ್ಲಿ ಪೊಲೀಸರು ಭಾರೀ ಮಾದಕ ದ್ರವ್ಯ ಬೇಟೆ ನಡೆಸಿದ್ದಾರೆ. ಎರಡು ಲಾರಿಗಳಲ್ಲಿ ಒಂದು ಲಕ್ಷದ ಇಪ್ಪತ್ತೇಳು ಸಾವಿರದ ನಾನೂರ ಹತ್ತು ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. 80 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಈರುಳ್ಳಿ ತುಂಬಿದ ಲಾರಿಯಲ್ಲಿ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಕರುನಾಗಪಲ್ಲಿ ಎಸಿಪಿಗೆ ದೊರೆತ ರಹಸ್ಯ ಮಾಹಿತಿ ಮೇರೆಗೆ ನಡೆಸಿದ ಮಿಂಚಿನ ದಾಳಿಯಲ್ಲಿ ಈ ಪ್ರಮಾಣದ ತಂಬಾಕು ಉತ್ಪನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವೆಂಗಾರ ಮೂಲದ ತೌಫಿಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಿದ್ದಾರೆ. ರೈಲ್ವೇ ತಂಗುದಾಣವನ್ನು ಅಬಕಾರಿ ಮತ್ತು ರೈಲ್ವೆ ತನಿಖಾ ಇಲಾಖೆ ಪರಿಶೀಲನೆ ನಡೆಸುತ್ತಿದೆ.ಶನಿ ಮೇಲೆ ಅನುಮಾನಾಸ್ಪದವಾಗಿ ಕಂಡ ಒಡಿಶಾ ಮೂಲದ ಖಿಲಾ ನಾಯಕ್(22) ಎಂಬಾತನಿಂದ ಎಂಟು ಕಿಲೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ, ಶಾಲಿಮಾರ್ – ತಿರುವನಂತಪುರಂ ಎಕ್ಸ್‌ಪ್ರೆಸ್ ಜನರಲ್ ಕಂಪಾರ್ಟ್‌ಮೆಂಟ್‌ನಲ್ಲಿ ಮಾಲೀಕರಿಲ್ಲದ ಬ್ಯಾಗ್‌ನಿಂದ 4 ಕೆ.ಜಿ.ಅಬಕಾರಿ ಮತ್ತು ರೈಲ್ವೇ ರಕ್ಷಣಾ ಪಡೆ ಕಳೆದ…

Read More

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಸಂಜೆ ಜಿಲ್ಲೆಯ ಬಾಲಾಕೋಟ್ ಸೆಕ್ಟರ್‌ನಲ್ಲಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಗ್ರಾಮದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಸೇನಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಸೇನೆ ಶೋಧ ಆರಂಭಿಸಿದಾಗ ಉಗ್ರರ ಮೃತದೇಹಗಳು ಪತ್ತೆಯಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಜೆಪಿಯ ಹಿರಿಯ ನಾಯಕ ಮತ್ತು ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಭಾನುವಾರ ಬೆಳಿಗ್ಗೆ ಐದು ಗಂಟೆಗೆ ನಿಧನರಾದರು. ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಉತ್ತರ ಪ್ರದೇಶದ ಮಾಜಿ ವಿಧಾನಸಭಾ ಸ್ಪೀಕರ್ ಕೂಡ ಆಗಿರುವ ಅವರು ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಕೈ ಮುರಿದು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ತ್ರಿಪಾಠಿಯನ್ನು ಮನೆಗೆ ಕರೆತರಲಾಯಿತು. ಭಾನುವಾರ ಬೆಳಗ್ಗೆ ಅಂತ್ಯ ಸಂಭವಿಸಿದೆ. ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಕೇಸರಿ ನಾಥ್ ತ್ರಿಪಾಠಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅಲಹಾಬಾದ್‌ನಲ್ಲಿ 10 ನವೆಂಬರ್ 1934 ರಂದು ಜನಿಸಿದ ಕೇಸರಿ ನಾಥ್ ತ್ರಿಪಾಠಿ ಅವರು ಬಿಹಾರ, ಮೇಘಾಲಯ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಅವರು ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ…

Read More

ಪಾವಗಡ: ತಾಲ್ಲೂಕಿನ ಯ.ನಾ.ಹೊಸಕೋಟೆ ಗ್ರಾಮದ ದೊಡ್ಡಹಳ್ಳಿಗೆ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ನೂರಾರು ಜನರು ಪ್ರತಿನಿತ್ಯ ಸಂಚರಿಸುವ ರಸ್ತೆಯಲ್ಲೇ ನೀರು ಹರಿದು ಹೋಗುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿ ಪ್ರಕಟ ಮಾಡಿದ ಕೆಲವೇ ದಿನಗಳಲ್ಲಿ ರಸ್ತೆಯನ್ನು ಸರಿಪಡಿಸಲಾಗಿದೆ. “ಯ.ನಾ.ಹೊಸಕೋಟೆ ಗ್ರಾಮದಲ್ಲೊಂದು ನರಕದ ದಾರಿ: ರಸ್ತೆಯ ಸೌಂದರ್ಯ ನೋಡಿ ಹೋದ ಪಿಡಿಒ” ಅನ್ನೋ ಶೀರ್ಷಿಕೆಯಡಿಯಲ್ಲಿ ರಸ್ತೆ ಸಮಸ್ಯೆಯ ಕುರಿತಂತೆ ನಮ್ಮತುಮಕೂರು ವರದಿ ಮಾಡಿತ್ತು. ಇಲ್ಲಿನ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಡಲಾಗಿತ್ತು. ಇದೀಗ ವರದಿಯ ಫಲವಾಗಿ ಎಚ್ಚೆತ್ತುಕೊಂಡ ಅಧಿಕಾರಿಗಳು ಕೊನೆಗೂ ರಸ್ತೆ ಸರಿಪಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇನ್ನೂ ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಈ ದಾರಿಯಲ್ಲಿ ಸಂಚರಿಸಲು ಪರದಾಡುತ್ತಿದ್ದರು. ಇದೀಗ ನಮ್ಮ ತುಮಕೂರು ಮಾಧ್ಯಮವು ಈ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿ ಅಧಿಕಾರಿಗಳ ಕಣ್ಣು ತೆರೆಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ನಮ್ಮತುಮಕೂರು ಮಾಧ್ಯಮಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ್, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಮಾನವ ಮೃತ ದೇಹವನ್ನು ಸುಡಲಾಗುತ್ತದೆ ಅಥವಾ ಹೂಳಲಾಗುತ್ತದೆ. ಆದರೆ ಯುನೈಟೆಡ್ ಸ್ಟೇಟ್ಸ್ನಲ್ಲಿ, ಸತ್ತ ಮಾನವ ದೇಹಗಳನ್ನು ಕಾಂಪೋಸ್ಟ್ ಮಾಡುವ ಕಾರ್ಯಕ್ರಮವು ಪ್ರಾರಂಭವಾಗಿದೆ. ವಾಷಿಂಗ್ಟನ್ ಸೇರಿದಂತೆ 6 ರಾಜ್ಯಗಳಲ್ಲಿ ಇದನ್ನು ಅನುಮೋದಿಸಲಾಗಿದೆ. ಮೃತದೇಹವನ್ನು ಮಣ್ಣಿನಲ್ಲಿ ಹೂತು, ಗೊಬ್ಬರ ತಯಾರಿಸಿ ನಂತರ ಕೃಷಿ ಮಾಡುವ ವಿಧಾನಗಳನ್ನು ರೂಪಿಸಲಾಗಿದೆ. ಗಮನಾರ್ಹವಾಗಿ, ಈ ಪ್ರಕ್ರಿಯೆಯು ಸ್ವೀಡನ್‌ನಲ್ಲಿ ಈಗಾಗಲೇ ಜಾರಿಯಲ್ಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವಕಪ್ ​ನಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್ ನಲ್ಲಿ ಸೋತ ಬಳಿಕ ಇಡೀ ಆಯ್ಕೆ ಮಂಡಳಿಯನ್ನೇ ವಿಸರ್ಜನೆ ಮಾಡಿದ್ದ ಬಿಸಿಸಿಐ ಇದೀಗ ಭಾರತ ಕ್ರಿಕೆಟ್ ತಂಡದ ನೂತನ ಆಯ್ಕೆ ಸಮಿತಿಯನ್ನು ಪ್ರಕಟಿಸಿದೆ. ಹೊಸ ಆಯ್ಕೆ ಸಮಿತಿಯಲ್ಲಿ (new selection committee) ಸ್ಥಾನ ಪಡೆದಿರುವ 5 ಸದಸ್ಯರ ಹೆಸರನ್ನು ಪ್ರಕಟಿಸಿರುವ ಬಿಸಿಸಿಐ, ಇದರಲ್ಲಿ ನಾಲ್ವರು ಹೊಸಬರಿಗೆ ಅವಕಾಶ ನೀಡಿದರೆ, ಮುಖ್ಯ ಆಯ್ಕೆದಾರನ ಸ್ಥಾನಕ್ಕೆ ಈ ಹಿಂದೆ ಇದೇ ಹುದ್ದೆಯಲ್ಲಿದ್ದ ಚೇತನ್ ಶರ್ಮಾ ಅವರನ್ನು ಮರು ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ಚೇತನ್ ಶರ್ಮಾ ಹಾಗೂ ಸದಸ್ಯರಾಗಿ ಮಾಜಿ ಟೆಸ್ಟ್ ಕ್ರಿಕೆಟಿಗರಾದ ಸಲೀಲ್ ಅಂಕೋಲಾ, ಶಿವಸುಂದರ್ ದಾಸ್, ಸುಬ್ರೋತೊ ಬ್ಯಾನರ್ಜಿ ಮತ್ತು ಶ್ರೀಧರನ್ ಶರತ್ ಸ್ಥಾನ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More