Author: admin

ದೇಶದಲ್ಲಿ ಆರ್ಥಿಕ ಬದಲಾವಣೆ ತಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶ ಋಣಿ ಆಗಿರಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಟಿಐಒಎಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ನೀತಿಗಳನ್ನು ರೂಪಿಸುವ ಮೂಲಕ ಮನಮೋಹನ್ ಸಿಂಗ್ ಬಡವರಿಗೂ ಸರಕಾರದ ಯೋಜನೆಗಳು ತಲುಪುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 1991ರಲ್ಲಿ ಮನಮೋಹನ್ ಸಿಂಗ್ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಆರ್ಥಿಕ ಪುನಶ್ಚೇತನ ನೀತಿ ಜಾರಿಗೆ ಬಂದಿತು. ಈ ಮೂಲಕ ದೇಶದಲ್ಲಿ ಆರ್ಥಿಕ ಉದಾರೀಕರಣದ ಹೊಸ ಅಧ್ಯಾಯ ಆರಂಭವಾಯಿತು ಎಂದು ಅವರು ಹೇಳಿದರು. ಮನಮೋಹನ್ ಸಿಂಗ್ ಹೊಸ ಆರ್ಥಿಕ ಉದಾರೀಕರಣ ಜಾರಿಗೆ ತಂದಿದ್ದರಿಂದ ನಾನು ಮಹಾರಾಷ್ಟ್ರದಲ್ಲಿ ಸಚಿವನಾಗಿದ್ದಾಗ ರಸ್ತೆಗಳನ್ನು ರೂಪಿಸಲು ಸಾಧ್ಯವಾಯಿತು. ಅಲ್ಲದೇ ಆರ್ಥಿಕ ಉದಾರೀಕರಣದಿಂದ ಹೆಚ್ಚು ಪ್ರಯೋಜನವಾಗಿದ್ದು ಬಡವರಿಗೆ ಮತ್ತು ರೈತರಿಗೆ ಎಂದು ಗಡ್ಕರಿ ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ರಾಜಧಾನಿ ದೆಹಲಿಯಲ್ಲಿ ಮಂಗಳವಾರ ತಡರಾತ್ರಿ 2 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ.ದೆಹಲಿಯಲ್ಲಿ ಭೂಮಿ ನಡುಗಿದರೆ ನೆರೆಯ ನೇಪಾಳ ದೇಶದಲ್ಲಿ ಭೂಕಂಪನ ಕೇಂದ್ರ ಬಿಂದು ಕಂಡು ಬಂದಿದ್ದು, ರಿಕ್ಡರ್ ಮಾಪಕದಲ್ಲಿ 6.3ರಷ್ಡು ತೀವ್ರತೆ ದಾಖಲಾಗಿದೆ. ದೆಹಲಿಯಲ್ಲಿ ನಡುರಾತ್ರಿ ಭೂಕಂಪನ ಸಂಭವಿಸಿದ್ದರಿಂದ ಮನೆಯಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ಇನ್ನೂ ಕೆಲವರು ನಿದ್ದೆಯಲ್ಲಿ ಇದ್ದಿದ್ದರಿಂದ ಅರಿವಿಗೆ ಬಂದಿಲ್ಲ. ದೆಹಲಿ, ನೋಯ್ಡಾ ಹಾಗೂ ಗುರ್ ಗಾಂವ್ ನಲ್ಲಿ ಸುಮಾರು 10 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ನೇಪಾಳದ ಸೈಸಿಮೊಗ್ಲಿ ಎಂಬ ಪಟ್ಟಣದಲ್ಲಿ 10 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದ್ದು, ಯಾವುದೇ ಸಾವು ನೋವು ವರದಿಯಾಗಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೂದಲು ಉದುರುವ (hair loss) ಸಮಸ್ಯೆಯಿಂದ ನೊಂದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ. ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್‍ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ. ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ಯುವತಿಯರು ನಿರಾಕರಿಸುತ್ತಿದ್ದರು. ಇದರಿಂದ ನೊಂದ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದು, ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರಶಾಂತ್ ಕುಟುಂಬಸ್ಥರು ವೈದ್ಯರ ವಿರುದ್ಧ…

Read More

2022-23ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ ಸೈಟ್ ವಿಳಾಸ https://ssp.karnataka.gov.in ಹಾಗೂ ತಮ್ಮ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಉಡುಪಿ: ಹಿಂದೂಗಳ ಬಗ್ಗೆ ಹಗುರವಾಗಿ ಮಾತನಾಡಿದರೆ ದೊಡ್ಡವರಾಗುತ್ತಾರೆ ಎಂದು ಅಂದುಕೊಂಡರೆ ಅದು ಅವರ ಭ್ರಮೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸತೀಶ್‌ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಹಿಂದೂಗಳಿಗೆ ಅಪಮಾನ ಮಾಡುವ ರೀತಿ ಮಾತನಾಡಿರುವುದು ಖಂಡನೀಯ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗುವುದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರಿಗೆ ಕ್ಷಮಾಪಣೆ ಕೇಳಬೇಕು ಎಂದರು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನವಾಗುವ ಹಾಗೆ ವರ್ತನೆ ಮಾಡಬಾರದು ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ, ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಅವರು, , ಲೆಫ್ಟಿನೆಂಟ್ ಗರ್ವನರ್‌ ಗೆ ಪತ್ರ ಬರೆದಿದ್ದಾರೆ. ಈ ಕುರಿತು ಸುಕೇಶ್ ಚಂದ್ರಶೇಖರ್ ಪರ ವಕೀಲರು ಮಾಹಿತಿ ನೀಡಿದ್ದು, ವಂಚನೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿ ತನಿಖೆ ನಡೆಸಲು ಸುಕೇಶ್ ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೊದಲು ಲೆಫ್ಟಿನೆಂಟ್ ಗವರ್ನರ್‌ ಅವರಿಗೆ ಬರೆದಿದ್ದ ಪತ್ರ ಮಾಧ್ಯಮಗಳಲ್ಲಿ ಸೋರಿಕೆಯಾದ ಬಳಿಕ ದೆಹಲಿಯ ಮಾಂಡೊಲಿ ಜೈಲಿನಲ್ಲಿರುವ ತಮಗೆ ಬಹಳಷ್ಟು ಬೆದರಿಕೆ ಬಂದಿದೆ. ಎಎಪಿ ನಾಯಕ ಸತ್ಯೇಂದರ್ ಜೈನ್ ಅವರು ಜೈಲು ಅಧಿಕಾರಿಗಳ ಮೂಲಕ ಬೆದರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ತಾಲೂಕಿನ ದಂಡಿನ ಶಿವರ ಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಯ್ಯನ ಪಾಳ್ಯದ ಬಳಿಯ ಕಾಲುವೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂದು ಮೃತ ಮಹಿಳೆಯ ಪತಿ ಆರೋಪಿಸಿದ್ದಾರೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಅವರ ಪತ್ನಿ ಆಶಾ(29) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಈಕೆಗೆ ಇಬ್ಬರು ಮಕ್ಕಳಿದ್ದಾರೆ. ತೋಟದಲ್ಲಿ ಮಹಿಳೆಯನ್ನು ಹತ್ಯೆ ಮಾಡಿ ಶವವನ್ನು ಸಣ್ಣಯ್ಯನ ಪಾಳ್ಯದ ಬಳಿ ಇರುವ ಕಾಲುವೆಗೆ ಎಸೆದು ಹೋಗಲಾಗಿದೆ ಎಂದು ಶಂಕಿಸಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹತ್ಯೆಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ ಆದರೆ, ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಈ ಹತ್ಯೆ ನಡೆಸಿದೆ ಎಂದು ಮೃತ ಮಹಿಳೆಯ ಪತಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕುಣಿಗಲ್ ಡಿ ವೈ ಎಸ್ ಪಿ ರಮೇಶ್, ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ಗೋಪಾಲ ನಾಯಕ್ , ದಂಡಿನಶಿವರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ರಾಮಚಂದ್ರಪ್ಪ, ಎಎಸ್ ಐ ಗಂಗಣ್ಣ …

Read More

ಚೆನ್ನೈ-ಬೆಂಗಳೂರು- ಮೈಸೂರು ನಡುವೆ ಇದೇ ವಾರ ಸಂಚಾರ ಆರಂಭಿಸಲಿರುವ ವಂದೇ ಭಾರತ್ ರೈಲು ಸೋಮವಾರ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈನ ಎಂಜಿಆರ್ ರೈಲು ನಿಲ್ದಾಣದಿಂದ ಸೋಮವಾರ ಮುಂಜಾನೆ 5.50ಕ್ಕೆ ಸೆಮಿ ಹೈಸ್ಪೀಡ್ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿತು. ಚೆನ್ನೈ ಮತ್ತು ಮೈಸೂರು ನಡುವಿನ 483 ಕಿ.ಮೀ. ದೂರದ ರೈಲು ಸಂಚಾರ ನವೆಂಬರ್ 11ರಂದು ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ವಂದೇ ಭಾರತ್ ಮತ್ತು ವಂದೇ ಮಾತರಂ ರೈಲು ಶೀಘ್ರದಲ್ಲೇ 25 ಹೊಸ ರೈಲುಗಳು ಸಂಚಾರ ಆರಂಭಿಸಲಿದ್ದು, ಮೊದಲ ರೈಲು ಮೈಸೂರು-ಚೆನ್ನೈ ನಡುವೆ ಸಂಚರಿಸಲಿವೆ. ಇದು ದಕ್ಷಿಣ ಭಾರತದಕ್ಕೆ ಒಲಿದ ಅತ್ಯಂತ ಕಡಿಮೆ ವೇಗದ ರೈಲು ಎಂದು ಹೇಳಲಾಗಿದೆ. ಇದರ ವೇಗ 120 ಕಿ.ಮೀ.ನಿಂದ ಗರಿಷ್ಠ 160 ಕಿ.ಮೀ. ಎಂದು ಹೇಳಲಾಗಿದೆ. ವಂದೇ ಮಾತರಂ ರೈಲುಗಳು ಗರಿಷ್ಠ 180 ಕಿ.ಮೀ. ವೇಗವಾಗಿ ಸಂಚರಿಸಲಿವೆ. ಈಗಾಗಲೇ ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅತ್ಯಾಧುನಿಕ ಸುರಕ್ಷತಾ ವೈಶಿಷ್ಯತೆಗಳನ್ನು ಹೊಂದಿದೆ.…

Read More

ನಾಯಿಗೆ ಊಟ ಕೊಡಲಿಲ್ಲ ಅಂತ 21 ವರ್ಷದ ಸಂಬಂಧಿಯನ್ನೇ ವ್ಯಕ್ತಿಯೊಬ್ಬ ಕೊಂದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಪಾಲಕ್ಕಾಡ್ ಜಿಲ್ಲೆಯ ಮುಲಯಂಕಾವು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಹರ್ಷದ್ ಮೃತಪಟ್ಟ ದುರ್ದೈವಿ. ಸಂಬಂಧ ಹಕೀಂ (27) ಕೊಲೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಹೊಡೆದು ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಹಕೀಂ ಹಾಗೂ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದು, ಮಹಡಿ ಮೇಲಿಂದ ಬಿದ್ದಿದ್ದಾನೆ. ನಾವಿಬ್ಬರು ಕೇಬಲ್ ವರ್ಕ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದರು. ಹರ್ಷದ್ ಚಿಕಿತ್ಸೆಗೆ ಮುಂದಾದ ವೈದ್ಯರು ಹಲ್ಲೆ ನಡೆದಿದ್ದರಿಂದ ಮೂಳೆ ಮುರಿದಿದ್ದರಿಂದ ದೇಹದೊಳಗೆ ರಕ್ತಸ್ರಾವ ಆಗಿ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಹರ್ಷದ್ ಮೃತಪಟ್ಟಿದ್ದಾನೆ. ನಂತರ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಐಎಬಿಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿದ್ದು, ಸಮಾವೇಶದಲ್ಲಿ 4 ರಿಂದ 5ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ನ.11 ರಂದು ಸಮಾವೇಶ ನಡೆಯುವ ಸ್ಥಳದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ಡಿಸಿಪಿ ಅನೂಪ್ ಶೆಟ್ಟಿ, ಬೆಂಗಳೂರುನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಾಥ್ ನೀಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ನ.11ರಂದು ಮೋದಿ ಪ್ರವಾಸ ಹಿನ್ನೆಲೆ ಎಲ್ಲಾ ವ್ಯವಸ್ಥೆ ಪರಿಶೀಲನೆ ನಡೆಸಿದ್ದೇನೆ. ಪ್ರಧಾನಿ ಮೋದಿ ಕೆಂಪೇಗೌಢ ಪ್ರತಿಮೆ ಉದ್ಘಾಟಿಸಲಿದ್ದಾರೆ. ಸಮಾವೇಶಕ್ಕೆ 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ. ಇದೆ. ಟ್ರಾಫಿಕ್ ಸೇರಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಭದ್ರತೆಗೆ 4 ಸಾವಿರಕ್ಕೂ ಹೆಚ್ಚು ಪೊಲೀಸರು ನಿಯೋಜನೆ ಮಾಡುತ್ತೇವೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More