Author: admin

ಬೆಂಗಳೂರು: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಈ ವಿಚಾರ ತಿಳಿಸಿದ ಸಚಿವರು, ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ–ಪಂಗಡಕ್ಕೆ ನಿಗದಿಪಡಿಸಿರುವ ಮೀಸಲು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದೆ. ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ ನಡೆಯಲಿದೆ ಎಂದರು. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಇನ್ನೂ ಜಾರಿಯಾಗಿಲ್ಲ. ರಾಜ್ಯದ 300ರಿಂದ 400 ಆಯ್ದ ಶಾಲೆಗಳಲ್ಲಿ ಜನವರಿ 26ರಿಂದ ಜಾರಿಗೊಳಿಸಲು ಯೋಜಿಸಿದ್ದೇವೆ. ಅದಕ್ಕೆ ಅಗತ್ಯವಿರುವ ಪಠ್ಯಕ್ರಮ ಕೂಡ ರೂಪುಗೊಂಡಿದೆ. ಎನ್‌ಇಪಿ ಪಠ್ಯ ಆಧಾರಿತ ಅಲ್ಲ. ಚಟುವಟಿಕೆ ಆಧಾರಿತ ಶಿಕ್ಷಣ. ಅಲ್ಲಿ ಬಹಳ ಪುಸ್ತಕಗಳು ಇರುತ್ತವೆ ಎಂದೇನೂ ನನಗೆ ಅನ್ನಿಸಿಲ್ಲ. ಪಠ್ಯಕ್ರಮಕ್ಕೆ ತಕ್ಕಂತೆ ಶಿಕ್ಷಕರಿಗೆ ತರಬೇತಿ ನೀಡಿ ಅವರನ್ನು ಸಜ್ಜುಗೊಳಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಚಾರ ಹೈಕೋರ್ಟ್‌ನಲ್ಲಿದೆ. ಜನವರಿ 18ಕ್ಕೆ ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ…

Read More

ಹಾವೇರಿ: ನಾವು ಬೇರೆ ಯಾವುದೇ ರಾಜ್ಯಕ್ಕೆ ಕರ್ನಾಟಕದ ಒಂದು ಇಂಚು ಬಿಟ್ಟುಕೊಡಲು ಸಾಧ್ಯವೇ ಇಲ್ಲ ಎಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಹೇಳಿದರು. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ ಕುರಿತು ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಹಾಜನ್ ಆಯೋಗದ ವರದಿಯು ಈಗಾಗಲೇ ಗಡಿ ರೇಖೆಯನ್ನು ಇತ್ಯರ್ಥಪಡಿಸಿದೆ. ಅಕ್ಕಪಕ್ಕದ ರಾಜ್ಯದವರು ಹಿಂಸಾಚಾರದಲ್ಲಿ ತೊಡಗಿ ಸಾಮಾಜಿಕ ಕಳಕಳಿ ಮೂಡಿಸುವುದು ಸರಿಯಲ್ಲ. ಸಮಸ್ಯೆಯನ್ನು ಮಾತುಕತೆಯ ಮೂಲಕ ಮತ್ತು ಕಾನೂನಿನ ಚೌಕಟ್ಟಿನೊಳಗೆ ಇತ್ಯರ್ಥಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.ಕನ್ನಡವು ಇಂಗ್ಲಿಷ್ನ ದಾಳಿಯನ್ನು ಎದುರಿಸುತ್ತಿದೆ. ಕನ್ನಡ ಮತ್ತು ಕರ್ನಾಟಕ ಪರಸ್ಪರ ಅವಲಂಬಿತವಾಗಿದ್ದು, ಅವುಗಳ ನಡುವೆ ಯಾವುದೇ ಪ್ರತ್ಯೇಕತೆಯು ಭಾಷೆಗೆ ಹಾನಿಯಾಗಬಹುದು ಎಂದು ಇದೇ ವೇಳೆ ಅವರು ಅಭಿಪ್ರಾಯಪಟ್ಟರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, B.C. ಟ್ರಸ್ಟ್ ಪಾವಗಡ ಯೋಜನಾ ಕಚೇರಿ ವ್ಯಾಪ್ತಿಯ ಸಿ.ಕೆ.ಪುರ ಕಾರ್ಯಕ್ಷೇತ್ರದಲ್ಲಿ ಇಂದು ಗ್ರಾಮ ದೇವತೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಗುರುವಾರ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. C.K.ಪುರ ವಲಯದ ಮೇಲ್ವಿಚಾರಕರಾದ ಮನು B.R. ಅವರ ನೇತೃತ್ವದಲ್ಲಿ ಹಾಗೂ ಸ್ವ– ಸಹಾಯ ಸಂಘಗಳು ಹಾಗೂ ಪ್ರಗತಿ ಬಂಧು ಸಂಘಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 2018ರಿಂದ ಸತತವಾಗಿ ಕರ್ನಾಟಕದದ್ಯಂತ ಎಲ್ಲಾ ಕಾರ್ಯಕ್ಷೇತ್ರಗಳಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗುತ್ತಿದೆ. ಅದರ ಅಂಗವಾಗಿ ಸಿ.ಕೆ.ಪುರದಲ್ಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ವಸಹಾಯ ಸಂಘದ ಸದಸ್ಯರಾದ ಉಮಾದೇವಿ, ಜ್ಯೋತಿ ನಾಗಮ್ಮ, ಗಿರಿಜಮ್ಮ, ಸುವರ್ಣಮ್ಮ, ಲಕ್ಷ್ಮೀದೇವಿ, ಶಿವಮ್ಮ, ಓಬಳಮ್ಮ ಮತ್ತಿತರರು ಭಾಗವಹಿಸಿದ್ದರು. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಹುಬ್ಬಳ್ಳಿ: ನಾನು ಒಬ್ಬ ಹಿಂದೂ, ಆದರೆ ನಾನು ಹಿಂದುತ್ವಕ್ಕೆ ವಿರುದ್ಧವಾಗಿದ್ದೇನೆ. ಧರ್ಮ ಇಟ್ಟುಕೊಂಡು ರಾಜಕೀಯ ಮಾಡಲು ವಿರೋಧವಿದೆ. ಸಂವಿಧಾನದಲ್ಲಿ ಎಲ್ಲ ಧರ್ಮಗಳು ಸಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲ ಧರ್ಮಗಳು ಕೂಡ ಸಮಾನವಾಗಿವೆ. ಯಾವುದೇ ಧರ್ಮ ಹೆಚ್ಚು ಅಲ್ಲ, ಕಡಿಮೆಯೂ ಅಲ್ಲ. ಧರ್ಮ ಮತ್ತು ಜಾತಿ ಆಧಾರದ ಮೇಲೆ ರಾಜಕಾರಣ ಮಾಡಬಾರದು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಆರ್​​ಎಸ್​ಎಸ್​ ಸ್ಥಾಪನೆ ಆಗಿದೆ. ಆದರೆ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ರಾ ಎಂದು ಪ್ರಶ್ನಿಸಿದರು. 1925-47ರವರೆಗೆ ಯಾರಾದ್ರು ಭಾಗವಹಿಸಿದ್ರೆ ಹೇಳಿ ನೋಡೋಣ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊಯಮತ್ತೂರು ಜಿಲ್ಲೆಯ ಆನ್ಯುರ್ ಜಿಲ್ಲೆಯಲ್ಲಿ 6,000 ಕ್ಕೂ ಹೆಚ್ಚು ಡೈರಿ ಹಸುಗಳಿವೆ. ಪ್ರಸ್ತುತ, ಹಸುಗಳ ದೇಹದಲ್ಲಿ ಗುಳ್ಳೆಗಳು ಮತ್ತು ಗಡ್ಡೆಗಳು ಉಂಟಾಗುತ್ತವೆ, ಹಾಲು ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ ಮತ್ತು ಕೆಲವು ಹಸುಗಳು ಕುಸಿಯುತ್ತವೆ. ಇದರಿಂದ ಆದಾಯ ಹಾಗೂ ಹಸುಗಳಿಗೆ ನಷ್ಟವಾಗುವ ಅಪಾಯವಿರುವುದರಿಂದ ವಿಶೇಷ ಜಾನುವಾರು ಶಿಬಿರ ನಡೆಸಿ, ದಡಾರ ಲಸಿಕೆ ಹಾಕಿ, ಸತ್ತ ಜಾನುವಾರುಗಳ ಮಾಲೀಕರಿಗೆ ಪರಿಹಾರ ನೀಡಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉತ್ತರ ಪ್ರದೇಶದ ನವಕವಾನಾ ಪ್ರದೇಶದಲ್ಲಿ ಹಿಮಾಂಶು ಎಂಬ ಯುವಕ ಫೋನ್‌ನಲ್ಲಿ ಮಾತನಾಡುತ್ತಿದ್ದ. ಆಗ ಅವರ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಈ ಫೋನನ್ನು 4 ತಿಂಗಳ ಹಿಂದೆ ರೂ.16,000 ನೀಡಿ ಖರೀದಿಸಿರುವುದಾಗಿ ತಿಳಿಸಿದರು. ಅದೃಷ್ಟವಶಾತ್ ಅವರು ಸ್ಫೋಟಗೊಳ್ಳುವ ಸಮಯಕ್ಕೆ ಫೋನ್ ಅನ್ನು ಕೈಯಿಂದ ಹೊರಹಾಕಿದ್ದರಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ದೂರು ದಾಖಲಾಗಿದೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಜನವರಿ 20, 2023 ರವರೆಗೆ ಇದ್ದು, ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಯ ಪೋಷಕರ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಮೀರಿರಬಾರದು. ಇಲಾಖೆಯ ವೆಬ್ ಸೈಟ್ https://shp.karnataka.gov.in ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಇಲಾಖೆಯ ವೆಬ್ ಸೈಟ್ https://shp.karnataka.gov.in ನಲ್ಲಿ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ…

Read More

ಧಾರವಾಡ : ತಾಯಿ-ಮಗಳ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತಾಯಿ ಮಕ್ತುಮ್ಬಿ (50) ಮಗಳು ಶಹನಾಜ್ (22) ಅವರ ಶವ ಎನ್ನುವುದು ಪತ್ತೆಯಾಗಿದೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಶವಗಳು ತೇಲುತ್ತಿರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ಶವಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಜನವರಿ 15 ರಂದು ಬೃಹತ್ ಯೋಗಥಾನ್-2023 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಯೋಗಥಾನ್-2023 ಪೂರ್ವಸಿದ್ಧತೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜ.6) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಮುಂಚೆ 80 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿತ್ತು. ಇದೀಗ ಈ ಸಂಖ್ಯೆಯನ್ನು 20 ಸಾವಿರಕ್ಕೆ ಮಿತಿಗೊಳಿಸಿ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.ಜ.15 ರಂದು ಬೆಳಿಗ್ಗೆ 6 ಗಂಟೆಯಿಂದ ಯೋಗಪಟುಗಳ ನೋಂದಣಿ ಯೊಂದಿಗೆ ಕಾರ್ಯಕ್ರಮ ಅರಂಭಗೊಳ್ಳಲಿದೆ. ಯೋಗಥಾನ್ ಏರ್ಪಡಿಸಲು ಸುವರ್ಣ ವಿಧಾನಸೌಧದ ಆವರಣದಲ್ಲಿ ವೇದಿಕೆ, ಮ್ಯಾಟಿಂಗ್, ಧ್ವನಿ ವ್ಯವಸ್ಥೆ ಮತ್ತಿತರ ಅಗತ್ಯ ವ್ಯವಸ್ಥೆ ಕುರಿತು ಚರ್ಚೆ ನಡೆಸಿದ ಅವರು, ಲಭ್ಯವಿರುವ ಅನುದಾನದಲ್ಲಿ ಅತ್ಯುತ್ತಮ ರೀತಿಯಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದರು. ಯೋಗಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸುವ 20 ಸಾವಿರ ಯೋಗಪಟುಗಳಿಗೆ ಪ್ರತಿ 50 ಜನಕ್ಕೆ ಒಬ್ಬರಂತೆ ಒಟ್ಟು 400 ಸ್ಟಿವರ್ಡ್ ಗಳನ್ನು, ಎನ್.ಎಸ್.ಎಸ್., ಎನ್.ಸಿ.ಸಿ. ಸ್ಕೌಟ್ಸ್-ಗೈಡ್ಸ್,…

Read More

ಬೆಳಗಾವಿ,: ಅಂತರಾಷ್ಟ್ರೀಯ ಮಹಿಳಾ ದಿನಚರಣೆಯಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ ಹಾಗೂ ಇತರೆ ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಶಿಕ್ಷಣ, ಕ್ರೀಡೆ, ಸಾಹಿತ್ಯ ಹಾಗೂ ಕಲಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಾಧನೆಯನ್ನು ಗುರುತಿಸಿ ಮಹಿಳೆಯರಿಗಾಗಿ ಕಿತ್ತೂರುರಾಣಿ ಚನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಸದರಿ ಪ್ರಶಸ್ತಿಗಾಗಿ ಅರ್ಹ ಸ್ವಯಂ ಸೇವಾ ಸಂಸ್ಥೆ ಹಾಗೂ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಲಾಗಿದೆ. ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಾಜಿ ನಗರ ಬೆಳಗಾವಿ ಇವರಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 10, 2023ರರೊಳಗೆ ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ಗ್ರಾಮೀಣ ಇಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0831- 2476209 ಗೆ ಸಂಪರ್ಕಿಸಬಹುದು. ನಿಗದಿತ ಅವಧಿಯ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ…

Read More