Author: admin

ನಮ್ಮತುಮಕೂರು ಎಕ್ಸ್’ಕ್ಲೂಸಿವ್ ರಿಪೋರ್ಟ್:  ಮೇಕೆ ಸಾಕಾಣಿಕೆಗಾಗಿ  ಮುದ್ರಾ ಲೋನ್ ಗೆ ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಸರಿಯಾದ ಸಮಯಕ್ಕೆ ಲೋನ್ ನ ಹಣವನ್ನು ಬಿಡುಗಡೆ ಮಾಡದೇ ಸತಾಯಿಸಿದ ಮಧುಗಿರಿ ತಾಲೂಕಿನ  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪುರವರ ಬ್ಯಾಂಕ್ ಶಾಖೆಗೆ ತುಮಕೂರು ಗ್ರಾಹಕರ ನ್ಯಾಯಾಲಯವು ಬಿಸಿ ಮುಟ್ಟಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಪುರವರ ಬ್ರಾಂಚ್ ನ ಮುಂದೆ ಮಹಿಳೆಯೊಬ್ಬರು ತೀವ್ರವಾಗಿ ದುಃಖಿತರಾಗಿರುವುದನ್ನು ಕಂಡ ಅಡ್ವಕೇಟ್ ಎಂ.ಎಸ್.ಗಣೇಶ್ ಹಾಗೂ ಅಡ್ವಕೇಟ್ ಶಿವಕುಮಾರ್ ಮೇಷ್ಟ್ರುಮನೆ ಅವರು, ಮಹಿಳೆಯ ಬಳಿ ಏನು ಸಮಸ್ಯೆ ಎಂದು ವಿಚಾರಿಸಿದ್ದಾರೆ. ಈ ವೇಳೆ ತನ್ನ ಹೆಸರು ಲಕ್ಷ್ಮೀನರಸಮ್ಮ ಎಂದು ತಿಳಿಸಿದ್ದು, ತನಗೆ ಬ್ಯಾಂಕ್ ನಿಂದಾದ ಅನ್ಯಾಯವನ್ನು ವಿವರಿಸಿದ್ದಾರೆ… ಲಕ್ಷ್ಮೀನರಸಮ್ಮ ಮೇಕೆ ಸಾಕಾಣಿಕೆಗಾಗಿ 6 ಲಕ್ಷ ರೂಪಾಯಿಗಾಗಿ ಮುದ್ರಾ ಯೋಜನೆಯಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪುರವರ ಬ್ರಾಂಚ್ ಗೆ ಅರ್ಜಿ ಸಲ್ಲಿಸುತ್ತಾರೆ.  ಬ್ಯಾಂಕ್ ವೆರಿಫಿಕೇಷನ್ ಮಾಡಿ 3 ಲಕ್ಷ  ಮಂಜೂರು ಮಾಡ್ತೀವಿ ಎಂದು ಹೇಳಿ ಮಂಜೂರು ಮಾಡ್ತಾರೆ.…

Read More

ಮಂಡ್ಯದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ.ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಚಿಕ್ಕಕೊಪ್ಪಲಿನ ಗ್ರಾಮದವರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಶಿವರಾಮ್ ಎಂಬುವವರ ಜಮೀನಿನಲ್ಲಿ ಬೋನ್ ಇರಿಸಿದ್ದರು. ಇದೀಗ ಬೋನಿಗೆ ಚಿರತೆ ಬಿದ್ದಿದೆ. ಕಳೆದ 30 ದಿನಗಳಲ್ಲಿ ಮಂಡ್ಯದಲ್ಲಿ ಮೂರು ಚಿರತೆ ಸೆರೆಯಾಗಿವೆ. ಡಿಸೆಂಬರ್ 12 ರಂದು ಡಿಸೆಂಬರ್ 27 ರಂದು ಹಾಗೂ ಇಂದು ಚಿರತೆ ಸೆರೆಯಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಕ್ಯಾಂಟರ್ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡು, ಹಲವರಿಗೆ ಗಾಯಗಳಾದ ಘಟನೆ ಗದ್ದನಕೇರಿ ಸಮೀಪವಿರುವ ಇಟಗಿ ಭೀಮಮ್ಮ ದೇವಸ್ಥಾನದ ಬಳಿ ನಡೆದಿದೆ. ಅರಕೇರಿ ಗ್ರಾಮದ ವಿದ್ಯಾರ್ಥಿ ರಾಹುಲ್‌ ಮೃತಪಟ್ಟ ದುರ್ದೈವಿ. ಬಸ್ ಅಮಲಜರಿಯಿಂದ ಬಾಗಲಕೋಟೆಗೆ ಬರುತ್ತಿದ್ದ ವೇಳೆ ಕ್ಯಾಂಟರ್‌ ಬಾಗಲಕೋಟೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಕ್ಯಾಂಟರ್ ಅತಿ ವೇಗದಿಂದಾಗಿ ಅದು ಹೋಗಿ ಬಸ್ಸಿಗೆ ಗುದ್ದಿದೆ. ಬಸ್‌ ನಿಯಂತ್ರಣ ತಪ್ಪಿ ಕೆಳಗಿನ ತಗ್ಗಿನ ಪ್ರದೇಶಕ್ಕೆ ಬಿದ್ದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬೀಳಗಿ ತಾಲೂಕಿನ ಅರಕೇರಿ ಗ್ರಾಮದ ರಾಹುಲ್‌ ಅಪಘಾತದ ರಭಸಕ್ಕೆ ದೇಹ ತುಂಡು ತುಂಡಾಗಿ ಬಿದ್ದಿರುವ ದೃಶ್ಯ ಎಂಥವರ ಮನಸ್ಸನ್ನೂ ಕಲಕುವಂತಿತ್ತು. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು:ರಾಜ್ಯ ಸರ್ಕಾರ 216 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದ್ದು, ಶಾಲೆಗಳು ಆರಂಭವಾದ ಎರಡು ಮೂರು ವರ್ಷಗಳ ಬಳಿಕ ಸರ್ಕಾರ ಉಪ ಪ್ರಾಂಶುಪಾಲರ ಹುದ್ದೆಯನ್ನು ಸೃಜಿಸಿ ಆದೇಶ ಹೊರಡಿಸಿದೆ. 276 ಶಾಲೆಗಳಿಗೆ ಈಗಾಗಲೇ 156 ಉಪ ಪ್ರಾಂಶುಪಾಲರ ಸಮಾನಾಂತರ ಹುದ್ದೆಗಳು ಮಂಜೂರಾಗಿವೆ. ಹೊಸದಾಗಿ 120 ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದ್ದು, ಈ ಹಿಂದೆ ಇದ್ದ 279 ಹುದ್ದೆಗಳನ್ನು ರದ್ದು ಮಾಡಿ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. 500ಕ್ಕೂ ಕಡಿಮೆ ದಾಖಲಾತಿ ಹೊಂದಿದ 35 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮುಖ್ಯೋಪಾಧ್ಯಾಯ ಉಪ ಪ್ರಾಂಶುಪಾಲರ ವೃಂದದ ಹುದ್ದೆಗಳನ್ನು ಸ್ಥಳಾಂತರಿಸುವ ಷರತ್ತಿಗೆ ಒಳಪಡಿಸಿ ಸರ್ಕಾರದಿಂದ ಮಂಜೂರಾತಿ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: 2022-23ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಮಾಹಿತಿಗಾಗಿ ಕಾಲೇಜು ಶಿಕ್ಷಣ ಇಲಾಖೆಯ https://dce.karnataka.gov.in ವೆಬ್ ಸೈಟ್ ಗಮನಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 16 ರಿಂದ 25ರ ಒಳಗೆ ಮೆರಿಟ್ ಪಟ್ಟಿ, ಸ್ಥಳ, ಆಯ್ಕೆ ಕೌನ್ಸಿಲಿಂಗ್ ನಡೆಸಬೇಕು. ಫೆಬ್ರವರಿ 1 ರೊಳಗೆ ಆಯ್ಕೆಯಾದ ಅತಿಥಿ ಉಪನ್ಯಾಸಕರು ಕಾಲೇಜುಗಳಿಗೆ ಪ್ರವೇಶ ಪಡೆಯಬೇಕೆಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಕಲಬುರಗಿ: ತೀವ್ರ ಸಂಚಲನ ಮೂಡಿಸಿದ್ದ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಮುಖ ಆರೋಪಿ ಕಿಂಗ್​ಪಿನ್ ದಿವ್ಯಾ ಹಾಗರಗಿ, ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್​ ಜಡ್ಜ್​ ಜಾಮೀನು ನೀಡಿದ್ದಾರೆ. ಪಿಎಸ್​ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. ಎಂಟು ಅಭ್ಯರ್ಥಿಗಳು,ಮೂವರು ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ಮಂಜೂರು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ಲೋಕಾಯುಕ್ತ ಅಧಿಕಾರಿಯಾದ ಡಿಎಸ್‍ಪಿ ಜೆ ರಘು ಜನವರಿ 07, 2023 ರಂದು ಜಿಲ್ಲೆಯ ರಾಮದುರ್ಗ ತಾಲೂಕಿನ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಸದರಿ ಸರ್ಕಾರಿ ಕೆಲಸ ನಿರ್ವಹಿಸಲು ಹಣ/ವಸ್ತು/ಲಂಚ ಬೇಡಿಕೆ ಇಟ್ಟಲ್ಲಿ ಸಾರ್ವಜನಿಕರು ತಮ್ಮ ದೂರು, ಅಹವಾಲಗಳನ್ನು 11 ಗಂಟೆಯಿಂದ 2 ಗಂಟೆಯವರೆಗೆ ಪ್ರವಾಸಿ ಮಂದಿರದಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೃಷ್ಣರಾಜಪೇಟೆ: ಕೆಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಕೃಷ್ಣರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಕೆಎ-09 F-5282 ನಂಬರ್‌ ನ ಕೆ ಎಸ್ ಆರ್ ಟಿ ಸಿ ಬಸ್ ಗದಗದಿಂದ-ಮೈಸೂರಿನ ಕಡೆಗೆ ಬರುತ್ತಿದ್ದಾಗ ಮರುಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಘಟನೆಯ ವೇಳೆ  ಬಸ್ಸಿನಲ್ಲಿ ಸುಮಾರು 32 ಪ್ರಯಾಣಿಕರಿದ್ದರು ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಕೃಷ್ಣರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ  ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಶ್ರೀನಿವಾಸ್, ಮಂಡ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಭರ್ಜರಿ ತಯಾರಿ ನಡೆಸಿದೆ. ಸದ್ಯ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಟ್ವಿಟ್ ಮಾಡಿ ಮಾಹಿತಿ  ತಿಳಿಸಿರುವ ರಾಜ್ಯ ಚುನಾವಣಾ ಆಯೋಗವು, 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವದನ್ನು http://nvsp.in ಜಾಲತಾಣಕ್ಕೆ ಭೇಟಿ ನೀಡಿ, ಖಚಿತಪಡಿಸಿಕೊಳ್ಳಲು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡುಕೋಣ ದಾಳಿಗೆ ಮತ್ತೋರ್ವ ಯುವಕ ಗಾಯಗೊಂಡಿದ್ದು, ಚಿಕ್ಕಮಗಳೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ಕಾಡುಕೋಣ ದಾಳಿ ನಡೆದಿದೆ. ಮನೋಜ್ ಕಾಡುಕೋಣ ದಾಳಿಯಿಂದ ಗಾಯಗೊಂಡ ಯುವಕನಾಗಿದ್ದು, ಇವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೋಟದಲ್ಲಿದ್ದಾಗ ಏಕಾಏಕಿ ಮನೋಜ್ ಮೇಲೆ ದಾಳಿ ಮಾಡಿದ ಕಾಡುಕೋಣ ಗಂಭೀರವಾಗಿ ಗಾಯಗೊಳಿಸಿದೆ.  ಕಳೆದ 15 ದಿನದಲ್ಲಿ ಜಿಲ್ಲೆಯಲ್ಲಿ ಇದು ಮೂರನೇ  ಬಾರಿಗೆ ಕಾಡುಕೋಣ ದಾಳಿ ನಡೆಸುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಕಾಡುಕೋಣ ದಾಳಿಗೆ  ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More