Author: admin

ಮಂಗಳೂರು: ಕರಾವಳಿಯ ಜನ ರಾಜಕೀಯವಾಗಿ ಪ್ರಬುದ್ಧರು. ಇಲ್ಲಿನ ಜನ ನೆಮ್ಮದಿಯಾಗಿ ಇರಬೇಕು ಎನ್ನುವುದಾರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ತೀರ್ಮಾನವನ್ನು ಮಾಡಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಮಂಗಳೂರಿನ ಹರೇಕಳದಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2013ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 8 ಸ್ಥಾನದಲ್ಲಿ 7 ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಿರಿ, ಉಡುಪಿಯಲ್ಲಿ 5 ರಲ್ಲಿ 3 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಿರಿ. ಇದು ಮತ್ತೆ ಮರುಕಳಿಸಬೇಕು. ಇಂದು ಎಲ್ಲಾ ಜಾತಿ, ಧರ್ಮಗಳ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿಯಿರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಎಲ್ಲ ಜನರಿಗೂ ನ್ಯಾಯವನ್ನು, ರಕ್ಷಣೆಯನ್ನು ನೀಡುವುದು ಕಾಂಗ್ರೆಸ್ ಮಾತ್ರ. ಬಿಜೆಪಿಯವರು ಚುನಾವಣಾ ಸಂದರ್ಭದಲ್ಲಿ ಅನೇಕ ಭರವಸೆಗಳನ್ನು ನೀಡಿ, ಅಧಿಕಾರಕ್ಕೆ ಬಂದ ಮೇಲೆ ತಾವು ನೀಡಿದ್ದ ಭರವಸೆಗಳನ್ನು ಮರೆತು ಸಮಾಜ ಒಡೆಯುವ ಕೆಲಸ ಮಾಡುತ್ತಾರೆ ಎಂದ ಹೇಳಿದರು. ನಮ್ಮದು ಬಹುತ್ವದ ದೇಶ. ಇಲ್ಲಿ ಅನೇಕ ಜಾತಿ, ಧರ್ಮ, ಭಾಷೆ, ಸಂಸ್ಕೃತಿಯ ಜನರಿದ್ದಾರೆ.…

Read More

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿ ವತಿಯಿಂದ 2022-23ನೇ ಸಾಲಿಗೆ RKVY ಯೋಜನೆಯಡಿಯಲ್ಲಿ ಪಶುಭಾಗ್ಯ ಆಧಾರಿತ ಕಾರ್ಯಕ್ರಮವಾದ “ಮುಖ್ಯ ಮಂತ್ರಿಗಳ ಅಮೃತ ಯೋಜನೆ” ಅನುಷ್ಠಾನ ಗೊಳಿಸಲು ಆದ್ಯತೆಯ ಮೇರೆಗೆ ಫಲಾನುಭವಿಗಳನ್ನಾಗಿ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ 01 ಮಿಶ್ರ ತಳಿ ಹಾಲು ಕರೆಯುವ ಹಸು/01 ಸುದಾರಿತ ಎಮ್ಮೆ ವಿತರಿಸಲಾಗುವುದು. ಘಟಕದ ಮೊತ್ತ ರೂ. 62,000/- ಆಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33% ಅಂದರೆ ರೂ. 20,665/- ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25% ಅಂದರೆ ರೂ. 15,500/- ಸಹಾಯಧನ ಒದಗಿಸಲಾಗುವುದು. ಸಹಾಯಧನವನ್ನು ಹೊರತು ಪಡಿಸಿದಂತೆ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಗೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯುವುದು. ಸದರಿ ಕಾರ್ಯಕ್ರಮದಲ್ಲಿ ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ (ಶೇ.33.3), ಅಲ್ಪಸಂಖ್ಯಾತರಿಗೆ (ಶೇ.15), ವಿಕಲ ಚೇತನರಿಗೆ(ಶೇ.3)ರಷ್ಟು ಆಧ್ಯತೆ ನೀಡಲಾಗುವುದು. ಅರ್ಹ ಫಲಾನುಭವಿಗಳು ಭರ್ತಿಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ…

Read More

ಹಾವೇರಿ: ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡಿಗರು ಮತ್ತು ಸಾಹಿತ್ಯಾಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದೆ. ಕನ್ನಡಿಗರ ಬಗ್ಗೆ, ಭಾಷೆ, ನಾಡು-ನುಡಿಯ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ ವೇಳೆ ಮಾತನಾಡಿದ ಅವರು, ನಾನು ನುಡಿಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, ಹಾವೇರಿಗೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಜಿಲ್ಲಾಡಳಿತ ವತಿಯಿಂದ ಅದ್ದೂರಿ ಸ್ವಾಗತ ನೀಡಲಾಗಿದೆ. ಸಮ್ಮೇಳನ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ನಡೆಯಲಿ ಎಂದು ನಿಗದಿತ ಸಮಯಕ್ಕೆ ಧ್ವಜಾರೋಹಣ ಮಾಡಿದ್ದೇವೆ ಎಂದರು. ಕನ್ನಡ ನಾಡು ನುಡಿ ಭಾಷೆ ಬಗ್ಗೆ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಉತ್ತಮ ಚರ್ಚೆ ನಡೆಯಲಿದೆ. ಸಮ್ಮೇಳನದಲ್ಲಿ ಯಾವುದೇ ಅಭಾಸ, ಕುಂದುಕೊರತೆಯಾಗದಂತೆ ಸರ್ಕಾರ ಮತ್ತು ಜಿಲ್ಲಾಡಳಿತ ಎಚ್ಚರಿಕೆಯಿಂದ ಕೆಲಸ ಮಾಡಿದೆ. ಕನ್ನಡವೇ ಸತ್ಯ-ಕನ್ನಡವೇ ನಿತ್ಯ ಎಂಬ ಘೋಷಣೆಯನ್ನು ಜಾರಿಗೆ ತರಲು…

Read More

ಹಾವೇರಿಯಲ್ಲಿ ಶುಕ್ರವಾರ ಕನ್ನಡ ತಾಯಿ ಭುವನೇಶ್ವರಿಯ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಬೆಳಗ್ಗೆ ಆರಂಭಗೊಂಡಿದೆ. ಇದರ ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು. ಇಂದಿನಿಂದ ಜನವರಿ 8 ವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣ ಜಾಗದಲ್ಲಿ ಕನಕ–ಶರೀಫ–ಸರ್ವಜ್ಞ ವೇದಿಕೆ ಮುಂಭಾಗ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ ನೆರವೇರಿತು. ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ ಹೀರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ವಿವಿಧ ಕಲಾತಂಡಗಳು ಸಾಹಿತ್ಯ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರುಗು ನೀಡಿದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಮಂಗಳೂರು:  ನಾನು ಅವರಿಗೆ ನಾಯಿ ಮರಿ ಅಂಥ ಹೇಳಿಲ್ಲ. ಧೈರ್ಯ ಇರಬೇಕು ಅಂದೆ. ನಮಗೆ ರಾಜ್ಯದ ಹಿತ ಮುಖ್ಯ. ಕೇಂದ್ರದ ಜೊತೆ ಧೈರ್ಯವಾಗಿ ಮಾತನಾಡಿ ಅಂದೆ. ಧೈರ್ಯವಾಗಿ ಇರಬೇಕು, ನಾಯಿ ಮರಿ ಥರ ಇರಬಾರದು ಅಂದೆ. ಇದರಲ್ಲಿ ತಪ್ಪು ಏನು ಇದೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಅವರ ಕುರಿತು ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಸಂಬಂಧ ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ನನಗೆ ಟಗರು, ಹುಲಿಯಾ ಅಂತೆಲ್ಲಾ ಕರೀತಾರೆ, ಅದು ಅನ್ ಪಾರ್ಲಿಮೆಂಟರಿ ಅಲ್ಲ ಅಂದರು. ಯಡಿಯೂರಪ್ಪನನ್ನ ರಾಜಾ ಹುಲಿ ಅಂತಾರೆ, ಅದು ಅನ್ ಪಾರ್ಲಿಮೆಂಟರಿಯಾ? ಯಡಿಯೂರಪ್ಪ ಹುಲೀನಾ? ನಾಯಿ ಅನ್ನೋದು ನಂಬಿಕೆ ಇರೋ ಪ್ರಾಣಿ, ಧೈರ್ಯ ಇರಬೇಕು ಅಂದೆ. ನಮ್ಮ ಪಾಲನ್ನ ಕೇಂದ್ರದ ಜೊತೆ ಧೈರ್ಯವಾಗಿ ಕೇಳಿ ಅಂದರು. ಉಳ್ಳಾಲ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಸುದ್ದಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಲೆಮಾರಿ ರಾಜಕಾರಣಿ ಅಲ್ಲ. ಕೋಲಾರ, ಬಾದಾಮಿಯವರು ಕರೀತಾ…

Read More

ಪಾವಗಡ : ಕ್ಷೇತ್ರಾದ್ಯಂತ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಜೆಡಿಎಸ್ ಪಕ್ಷದ ಶಾಸಕರ ಕಾಲದಲ್ಲಿ ಆಗಿರುವ ಅಭಿವೃದ್ಧಿ  ಮತ್ತು ನಾನು  ಮಾಡಿರುವ ಅಭಿವೃದ್ಧಿ  ಕೆಲಸಗಳನ್ನು ಕ್ಷೇತ್ರದ ಮತದಾರರು ತುಲನೆ ಮಾಡಿದ ನಂತರ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು. ತಾಲ್ಲೂಕಿನ ನಿಡಗಲ್ ಹೋಬಳಿಯ ಗುಜ್ಜನಡು, ಮಂಗಳವಾಡ ಹಾಗೂ ಅರಸೀಕೆರೆ ಗ್ರಾಮ ಪಂಚಾಯತಿ  ಭಾಗದಲ್ಲಿ ಗುರುವಾರ ಜಲಜೀವನ್ ಯೋಜನೆ ಮತ್ತು ಶಾಸಕರ ಪ್ರಾದೇಶಿಕ ಅಭಿವೃದ್ಧಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಅನುದಾನದ ಅಡಿಯಲ್ಲಿ  ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು. ಗುಜ್ಜನಡು ಗ್ರಾಮದಿಂದ ಚಿನ್ನಮ್ಮನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿಗೆ  1.50 ಕೋಟಿ, ಮದ್ದೆ ಗ್ರಾಮದಿಂದ ಸ್ವಾರಮ್ಮನ ದೇವಸ್ಥಾನ ಮಾರ್ಗದ ರಸ್ತೆ ಅಭಿವೃದ್ಧಿಗೆ 50 ಲಕ್ಷ, ಪಾವಗಡ ಮತ್ತು ಅರಸೀಕೆರೆಯ ಮುಖ್ಯ ರಸ್ತೆಯಿಂದ ಪೆಮ್ಮನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿಗೆ 25 ಲಕ್ಷ, ಮರೂರು ಮತ್ತು ಹೊಸಹಳ್ಳಿ ರಸ್ತೆ ಅಭಿವೃದ್ಧಿಗೆ 25 ಲಕ್ಷ, ಮಂಗಳವಾಡ ಗ್ರಾಮದಲ್ಲಿ…

Read More

ಭೋಪಾಲ್: ಯುವ ವೈದ್ಯೆಯೊಬ್ಬರು ಕಾಲೇಜಿನ ಹಾಸ್ಟೆಲ್ ನಲ್ಲಿ ರಾಸಾಯನಿಕ ಔಷಧಿ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ. ಆಕಾಂಶಾ ಮಹೇಶ್ವರಿ ಮೃತ ವೈದ್ಯೆಯಾಗಿದ್ದು, ತಲಾ 2.5 ಮಿಲಿಯ ನಾಲ್ಕು ಡೋಸ್ ಅರಿವಳಿಕೆಯನ್ನು ಚುಚ್ಚಿಕೊಂಡು ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿ ತಿಳಿಸಿದೆ. ತನಗೆ ಮಾನಸಿಕವಾಗಿ ಬಲವಿಲ್ಲ ಮತ್ತು ಕೆಲಸದೊತ್ತಡ ತಾಳಲಾಗುತ್ತಿಲ್ಲ ಎಂದು ಸಾವಿಗೂ ಮೊದಲು ವೈದ್ಯೆ ಬರೆದಿದ್ದಾರೆನ್ನಲಾಗಿರುವ ಡೆತ್ ನೋಟ್ ಆಕೆಯ ಕೊಠಡಿಯಲ್ಲಿ ಸಿಕ್ಕಿದ್ದು, ಈ ಪತ್ರದಲ್ಲಿ ಆಕೆ ಪೋಷಕರ ಕ್ಷಮೆ ಕೇಳಿದ್ದಾಳೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಂಚೋಳಿ: ತಾಲ್ಲೂಕಿನ ರಾಮತೀರ್ಥ ಗ್ರಾಮದಲ್ಲಿ ದಿ.ಆರ್.ಎಂ.ನಾಟೀಕಾರ್ ಅವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕೋಲಿ ಕಬ್ಬಲಿಗ ಸಮಾಜದ ಪರ್ಯಾಯ ಬೇರೆ ಬೇರೆ ಜಾತಿಯವರು ಕೂಡಾ ಅಂಬಿಗರ ಚೌಡಯ್ಯನವರ ಹೆಸರಲ್ಲಿ ಒಗ್ಗೂಡುತ್ತಿದ್ದೀರಿ. ನೀವೆಲ್ಲಾ ಮುಗ್ಧ ಹಾಗೂ ಹಿಂದುಳಿದವರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅಂಬಿಗರ ಚೌಡಯ್ಯ ನಿಗಮ ಸ್ಥಾಪನೆ ಮಾಡಲಾಯಿತು. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಕಬ್ಬಲಿಗ ಕೋಲಿ ಸಮಾಜವನ್ನು ST ಸೇರಿಸಲಾಗುತ್ತದೆ ಎಂದು ಹೇಳಿದ ನಂತರ ಅವರಿಗೆ ಬೆಂಬಲಿಸಿದಿರಿ ಆದರೆ ಇನ್ನೂ ಆಗಿಲ್ಲ. ನಾನು ಸಚಿವನಾಗಿದ್ದಾಗ ಕೋಲಿಯನ್ನು ST ಸೇರಿಸಲು ಅಗತ್ಯ ಕ್ರಮ ಕೈಗೊಂಡಿದ್ದೆ. ಇತ್ತೀಚಿಗೆ ನಾನೇ ದಿಲ್ಲಿಗೆ ಹೋಗಿ ವಾಸ್ತವ ಸ್ಥಿತಿ ಅರಿತುಕೊಂಡಾಗ ST ಗೆ ಸೇರಿಸುವ ಪ್ರಸ್ತಾವನೆ ಹಾಗೆ ಇದೆ ಎಂದು ತಿಳಿಸಿದರು. ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಚೌಡದಾನಪುರದ ಅಭಿವೃದ್ದಿಗೆ ರೂ 5 ಕೋಟಿ ಅನುದಾನ ಬಿಡುಗಡೆ ಮಾಡಿದ್ದೆ. ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆಗೆ ರೂ…

Read More

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಸರ್ಕಾರ ಘೋಷಿಸಿರುವ 2ಡಿ ಮೀಸಲಾತಿಯನ್ನು ಸಂಪೂರ್ಣ ತಿರಸ್ಕರಿಸುವ ನಿರ್ಣಯ ಕೈಗೊಂಡಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಗಾಂಧಿ ಭವನದಲ್ಲಿ ಪಂಚಮಸಾಲಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಘೋಷಿಸಿರುವ 2 ಡಿ ಮೀಸಲಾತಿಯನ್ನು ಪಂಚಮಸಾಲಿ ಸಮಾಜ ತಿರಸ್ಕರಿಸುತ್ತಿದೆ. ಮುಖ್ಯಮಂತ್ರಿಗಳು 24 ಗಂಟೆಯಲ್ಲಿ ಮೀಸಲಾತಿ ಕೊಡುತ್ತಾರೋ ಇಲ್ಲವೋ ಎನ್ನುವುದನ್ನು ಸ್ಪಷ್ಟ ಪಡಿಸಬೇಕು ಎಂದು ಆಗ್ರಹಿಸಿದರು. ಇದೇ ತಿಂಗಳು 12ನೇ ತಾರೀಖಿನ ಒಳಗಾಗಿ ಮೀಸಲಾತಿ ಹೊರಡಿಸಿ ಗೆಜೆಟ್​​ನಲ್ಲಿ ಘೋಷಣೆ ಮಾಡಬೇಕು. ಇಲ್ಲದೇ ಹೋದಲ್ಲಿ ಜನವರಿ 13 ರಂದು ಹಾವೇರಿಯಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಒಂದು ದಿನದ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉಗ್ರಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನ ಎನ್ ಐಎ ಬಂಧಿಸಿದೆ. ಉಡುಪಿ ಮೂಲದ ವಿದ್ಯಾರ್ಥಿ ರಿಹಾನ್ ಶೇಖ್ ಬಂಧಿತ ವಿದ್ಯಾರ್ಥಿ. ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್ ಉಗ್ರ ಚಟುವಟಿಕೆಯಲ್ಲಿ ಬಾಕಿಯಾಗಿರುವ ಆರೋಪ ಕೇಳಿ ಬಂದಿದೆ. ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನ ಎನ್ ಐಎ ಚುರುಕುಗೊಳಿಸಿದೆ. ಇಂದು ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ ಐ ದಾಳಿ ಮಾಡಿದ್ದು, ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿ ರಿಹಾನ್ ಶೇಖ್ ಬಂಧಿಸಿದೆ ಎನ್ನಲಾಗುತ್ತಿದೆ. ಇದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಮಾಜ್ ಮುನೀರ್ ಎಂಬಾತನನ್ನ ಶಿವಮೊಗ್ಗ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More