Author: admin

ಬೆಂಗಳೂರು : ಶೀಘ್ರದಲ್ಲೇ ಶಿಕ್ಷಣ ಇಲಾಖೆಯು 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಶೀಘ್ರವೇ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರವೇ ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಳಿಕ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ರಾಮದುರ್ಗ ತಾಲೂಕಿನ ಮುದೇನೂರಿನಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ ಕೇಸ್​ಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ವಾಂತಿ ಭೇದಿ ತೀವ್ರವಾಗಿ ಕಿಡ್ನಿ ವೈಫಲ್ಯವಾಗಿದ್ದು, ಚಿಕಿತ್ಸೆ ಫಲಿಸದೆ ಮುದೇನೂರು ಗ್ರಾಮದ ವಿಠ್ಠಲ ಗುಡಿಹಿಂದ (45) ಮೃತಪಟ್ಟಿದ್ದಾರೆ. ಪ್ರಕರಣವಾದಾಗಿಂದ ಬಾಗಲಕೋಟೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಠ್ಠಲ, ಜಿಲ್ಲಾಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಆಂಬುಲೆನ್ಸ್​ನಲ್ಲಿ ಮೃತಪಟ್ಟಿದ್ದಾರೆ. ಸದ್ಯ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆಯ 3ಕ್ಕೆ ಏರಿದೆ. ಗ್ರಾಮದ 186 ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ 12 ಬಾಲಕರು, 8 ಬಾಲಕಿಯರು ಸೇರಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿರುವ 94 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ಹೈಕೋರ್ಟ್ ಉದ್ಯೋಗಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಯತ್ನಿಸಿದ್ದ ಗ್ಯಾಂಗ್​ ಅನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 10 ಮಂದಿಯನ್ನು ಬಂಧಿಸಲಾಗಿದೆ. ಹೈಕೋರ್ಟ್​ ಉದ್ಯೋಗಿ ಜೈರಾಮ್ ಎಂಬುವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದರು. ಆರೋಪಿ ಅನುರಾಧ, ಕಾವ್ಯಾ, ಸಿದ್ದರಾಜು ಎಂಬುವರು ಎರಡು ವರ್ಷದಿಂದ ಜೈರಾಮ್​ಗೆ ಪರಿಚಿತರಾಗಿದ್ದರು. ಪ್ರಕರಣ ಸಂಬಂಧ ಕೋರ್ಟ್​ಗೆ ಬಂದಾಗ ಅನುರಾಧ ಎಂಬುವರಿಗೆ ಜೈರಾಮ್​ ಪರಿಚಯವಾಗಿತ್ತು. ಮನೆಯಲ್ಲಿ ಶಾರ್ಟ್​ ಸೆರ್ಕ್ಯೂಟ್​ನಿಂದ ಬೆಂಕಿ ತಗುಲಿ ಮನೆಗೆ ಹಾನಿಯಾಗಿದೆ ಎಂದು ಹೇಳಿ ಜೈರಾಮ್​ನಿಂದ ಅನುರಾಧ 10 ಸಾವಿರ ರೂ. ಸಾಲ ಪಡೆದುಕೊಂಡಿದ್ದಳು. ಅಕ್ಟೋಬರ್ 10ರಂದು ಹಣ ಹಿಂತಿರುಗಿಸಿದ್ದು, ಮತ್ತೆ 5 ಸಾವಿರ ಕೇಳಿದ್ದಳು. ಆಕೆಗೆ ಸಾಲ ಕೊಡಲು ಆಕೆಯ ಮನೆಗೆ ಬಂದಾಗ ಜೈರಾಮ್​ರನ್ನು ಹಿಡಿದುಕೊಂಡಿದ್ದ ಇತರ ಆರೋಪಿಗಳು, ಅಲ್ಲಿಯೇ ಆತನನ್ನು ಬಂಧಿಸಿ, ಎರಡು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದರು. ಆರೋಪಿ ಒಬ್ಬ ತನ್ನ ಪತ್ನಿಯ ಮೇಲೆ ಅತ್ಯಾಚಾರಕ್ಕೆ…

Read More

ಮೇಷ ರಾಶಿ ಈ ದಿನ ಬದಲಾಯಿಸಲು ಸಾಧ್ಯವಿಲ್ಲದ ವಿಷಯಗಳನ್ನು ಬಿಡಿ, ಹೊಸ ಗುರಿಯತ್ತ ಗಮನಹರಿಸಿ. ಕುಟುಂಬದೊಂದಿಗೆ ವಿಶ್ರಾಂತಿ ಮತ್ತು ವಿನೋದದಿಂದ ತುಂಬಿದ ದಿನವಾಗಿರುತ್ತದೆ. ನಿಮ್ಮ ಆಲೋಚನೆಗಳ ವಿನಿಮಯವು ದಿನಚರಿಯನ್ನು ಆಹ್ಲಾದಕರವಾಗಿಸುತ್ತದೆ. ಮನೆ ಬದಲಾವಣೆಗೆ ಸಂಬಂಧಿಸಿದ ಕೆಲವು ಕೆಲಸಗಳು ಸಹ ಸುಗಮವಾಗಿ ನಡೆಯಲಿದೆ. ವೃಷಭ ರಾಶಿ ಈ ದಿನ ಪೀಠೋಪಕರಣ ಇತ್ಯಾದಿ ಖರೀದಿಗೆ ಸಂಬಂಧಿಸಿದ ಯೋಗಗಳನ್ನೂ ಮಾಡಲಾಗುತ್ತಿದೆ. ನಿರೀಕ್ಷೆಯಂತೆ, ಎಲ್ಲವೂ ಸಂಭವಿಸಿದ ನಂತರವೂ, ಕೆಲವು ನಕಾರಾತ್ಮಕ ಸುದ್ದಿಗಳನ್ನು ಸ್ವೀಕರಿಸಬಹುದು, ಇದರಿಂದಾಗಿ ನಿಮ್ಮ ಆತ್ಮವು ದುರ್ಬಲವಾಗಬಹುದು. ಕೆಲವು ವಿಷಯಗಳು ನಿಮ್ಮ ಇಚ್ಛೆಯಂತೆ ನಡೆಯುತ್ತವೆ ಮತ್ತು ಕೆಲವು ವಿಷಯಗಳು ಇತರರ ಇಚ್ಛೆಯ ಪ್ರಕಾರ ನಡೆಯುತ್ತದೆ. ಮಿಥುನ ರಾಶಿ ಈ ದಿನ ಅನುಪಯುಕ್ತ ವಿನೋದ ಮತ್ತು ಸೋಮಾರಿತನದಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ನಿಮ್ಮ ಗುರಿಗಳು ಮತ್ತು ಯೋಜನೆಗಳಿಗೆ ಕ್ರಮ ನೀಡಲು ಇದು ಅನುಕೂಲಕರ ಸಮಯ. ಮಕ್ಕಳಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳು ಕೇಳಿ ಮನಸ್ಸಿಗೆ ಸಂತೋಷವಾಗುತ್ತದೆ. ಮಾನಸಿಕ ನೆಮ್ಮದಿಗಾಗಿ ಧಾರ್ಮಿಕ ಪ್ರಯಾಣವೂ ಸಾಧ್ಯ. ದೇವರಲ್ಲಿ ಹೆಚ್ಚಿದ…

Read More

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿ ಪಂಚಾಯತಿ ಕ್ಲರ್ಕ್ ಕೆಲಸ ಕಳೆದುಕೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್  ನಲ್ಲಿ ನಡೆದಿದೆ. ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸರ್ಕಾರದ ವಿರುದ್ಧ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಈ ಹಿನ್ನೆಲೆ ಕ್ಲರ್ಕ್ ರಾಯಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಹುದ್ದೆಯಲ್ಲಿದ್ದುಕೊಂಡು ಸರ್ಕಾರದ ವಿರುದ್ಧವೇ ಸ್ಟೇಟಸ್ ಹಾಕಿದ್ದಕ್ಕೆ ಅಮಾನತು ಶಿಕ್ಷೆ ವಿಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಳೇ‌ ಹುಬ್ಬಳ್ಳಿಯ ನುರಾನಿ ಪ್ಲಾಟ್‌ನಲ್ಲಿರುವ ಎಸ್‌ ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾ‌ಬಂದ್ ಮನೆ ಮೇಲೆ‌ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ಪಿಐ ರಾಜ್ಯ ಕಾರ್ಯದರ್ಶಿ ಶೆಫಿ ಬೆಳ್ಳಾರೆಯನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹೆಚ್.ಡಿ.ಕೋಟೆ:   ತಾಲೂಕಿನ ಕ್ರೀಷ್ಣಾಪುರ ಗ್ರಾಮದ ಸರಕಾರಿ ಶಾಲ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ  ಮಲ್ಲಿಗೆ ಜ್ಞಾನ ವಿಕಾಸಕೇಂದ್ರದಲ್ಲಿ ಸಿರಿಧಾನ್ಯಗಳ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೂಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಸಿದ್ದಾರ್ಥ ಕಾಲೇಜೀನ ಉಪನ್ಯಾಸಕರಾದ ಪುಷ್ಪಲತಾ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಶಶಿಧರ್ ಎಂ. ರವರು ದೀಪ ಬೇಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,  ಜ್ಞಾನವಿಕಾಸ ಕಾರ್ಯಕ್ರಮವು ಹೇಮಾವತಿ ಅಮ್ಮನವರ ಪ್ರೀತಿಯ ಕಾರ್ಯಕ್ರಮ ಜ್ಞಾನವಿಕಾಸ ಕೇoದ್ರದಡಿಯಲ್ಲಿ ಪ್ರತಿ ತಿoಗಳು ಸಹ ಆರೋಗ್ಯ ಶಿಕ್ಷಣ ಮತ್ತು ಕುಟುಂಬ ನಿರ್ವಹಣೆ ಬಗ್ಗೆ ಮಾಹಿತಿ ನೀಡಿ, ನಿಮ್ಮಲ್ಲರಲ್ಲಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಧೈರ್ಯ ತುoಬುವ  ಕೆಲಸವನ್ನು ಮಾಡುತ್ತದೆ ಎಂದು ತಿಳಿಸಿದರು ಪುಷ್ಪಲತಾರವರು ಮಾತನಾಡಿ, ಸಿರಿಧಾನ್ಯಗಳ ಕುರಿತು ಮಾಹಿತಿ ನೀಡಿದರು. ಸಿರಿಧಾನ್ಯಗಳನ್ನು ಬಳಕೆ ಮಾಡುವುದರಿoದ ರಕ್ತ ಶುದ್ದಿ ಹಾಗೂ ಜೀರ್ಣಕ್ರಿಯೆಗೆ ಮತ್ತು ಕೊಬ್ಬು ನಿವಾರಣೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿ ಅಶ್ವಿನಿ ಹೆಚ್.ಜಿ. ಸೇವಾಪ್ರತಿ ನಿಧಿ ಮಂಗಳ ಮತ್ತು ಕೇಂದ್ರದ…

Read More

ಮಧುಗಿರಿ: ಪರಿಶಿಷ್ಟ ಜಾತಿ ನಿಂದನೆ  ಪ್ರಕರಣದ ಅಡಿಯಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆಯಲ್ಲಿ   ದಲಿತಪರ ಸಂಘಟನೆಗಳ ಹೋರಾಟ ಹಾಗೂ  ಒತ್ತಾಯದ ಧ್ವನಿಯ  ಮೇರೆಗೆ ಸಹ ಶಿಕ್ಷಕ ಕೆ ಸಿ ಜೀವನ್ ಪ್ರಕಾಶ್ ರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ  ಉಪ ನಿರ್ದೇಶಕರಾದ  ಕೆ.ಜಿ. ರಂಗಯ್ಯ ಅಮಾನತುಗೊಳಿಸಿದರು. ಉಪ ನಿರ್ದೇಶಕರಾದ   ಕೆ.ಜಿ.ರಂಗಯ್ಯ ಮಾಧ್ಯಮದೊಂದಿಗೆ ಮಾತನಾಡಿ, ಕೆ.ಸಿ.ಜೀವನ್ ಪ್ರಕಾಶ್ ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ  ಶಾಲೆ ಪದ್ಮಪುರ ಸಿರಾ ತಾಲ್ಲೂಕು   ಇವರು ಈ ಹಿಂದೆ  ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಉದ್ದೇಶಪೂರ್ವಕ ಜಾತಿನಿಂದನೆ    ಮಾಡಿ   ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಬೇರೆ ಶಿಕ್ಷಕರ ಹತ್ತಿರ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿ ಮಾತನಾಡಿ, ಸಂಭಾಷಣೆಯನ್ನು ಸಾರ್ವಜನಿಕವಾಗಿ ಮೊಬೈಲ್ ವಾಟ್ಸಪ್ ಮೂಲಕ ಹರಿಬಿಟ್ಟಿದ್ದು ಸಮುದಾಯವನ್ನೇ ಅವಹೇಳನಕಾರಿಯಾಗಿ ಮಾನಹಾನಿ ಮಾಡಿದ್ದು, ಈ ವಿಷಯಕ್ಕೆ ಸಂಬಂಧಿಸಿ ಶಿಕ್ಷಕ ಕೆ.ಸಿ.ಜೀವನ್ ಪ್ರಕಾಶ್ ಮೇಲೆ ಸಿರಾ ಟೌನ್ ಪೊಲೀಸ್ ಠಾಣೆಯಲ್ಲಿ   ಜಾತಿ ನಿಂದನೆ…

Read More

ತುಮಕೂರಿನಲ್ಲಿ ಗುರುವಾರ ನಡೆದ ಬಾಣಂತಿ ಮತ್ತು ಶಿಶುಗಳ ಸಾವಿಗೆ ಸಂಬಂಧ ಪಟ್ಟಂತೆ ಚಿಕಿತ್ಸೆ ನೀಡದೆ ನಿರ್ಲಕ್ಷಿಸಿದ ವೈದ್ಯ ಹಾಗೂ ನರ್ಸ್ ಗಳನ್ನು ತನಿಖೆ ಆಗುವವರಿಗೂ ಕೆಲಸದಿಂದ ಅಮಾನತುಗೊಳಿಸಲಾಗಿದೆ. ಮತ್ತೆ ಅದೇ ಆದೇಶ ಪ್ರತಿಯಲ್ಲಿ ಜೀವನ ಭತ್ಯೆಗಾಗಿ ಖಾಲಿಯಿರುವ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಕಣ್ಣೊರಿಸುವ ನಾಟಕವಾಡುತ್ತಿದ್ದೆಯಾ ತುಮಕೂರು ಜಿಲ್ಲಾ ಆಸ್ಪತ್ರೆ ಅನ್ನೋ ಪ್ರಶ್ನೆಗಳಿಗೆ ಕಾರಣವಾಗಿದೆ. ದಿನಾಂಕ: 02.11.2022 ರಂದು, ಜಿಲ್ಲಾ ಆಸ್ಪತ್ರೆ ತುಮಕೂರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಈ ಕೆಳಕಂಡ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞರು, ಹಾಗೂ ಶುಶ್ರೂಷಾಧಿಕಾರಿಗಳು ಕರ್ತವ್ಯ ಲೋಪ ಹಾಗೂ ದುರ್ನಡತೆ ತೋರಿಸಿರುವುದರಿಂದ, ಇವರುಗಳ ವಿರುದ್ಧ. ಇಲಾಖಾ ವಿಚಾರಣೆ ಬಾಕಿ ಇರಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ, ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಹಾಗೂ ಇವರುಗಳ ಅಮಾನತ್ತಿನ ಅವಧಿಯಲ್ಲಿ ಜೀವನಾಂಶ, ಭತ್ಯೆ ಪಡೆಯುವ ಸಲುವಾಗಿ ಲೀನ್‌ ನನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸ್ಥಳಾಂತರಿಸಿದೆ. ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞರು ಡಾ.ಉಷಾ…

Read More

ಕೃಷ್ಣರಾಜಪೇಟೆ: ವಿದ್ಯಾರ್ಥಿಗಳು  ವಿದ್ಯಾಭ್ಯಾಸದ ಜೊತೆಗೆ ಪೋಷಕರಿಗೆ ಮತ್ತು ಶಿಕ್ಷಕರಿಗೆ  ಗೌರವ ನೀಡುವ ಮೂಲಕ‌ ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಕಿಕ್ಕೇರಿ ಸುರೇಶ್ ತಿಳಿಸಿದರು. ಕೃಷ್ಣರಾಜಪೇಟೆ ತಾಲ್ಲೂಕಿನ ಹಳೇ ಹರಳಕುಪ್ಪೆ ಗ್ರಾಮದಲ್ಲಿ ನಡೆದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಗೋವುಗಳಿಗೆ ಪೂಜಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಇಲ್ಲಿ ಕಲಿತ ಶಿಸ್ತು, ಸೌಹಾರ್ಧಯುತ ಬಾಳ್ವೆ, ನೀತಿ ಪಾಠ ಎಲ್ಲವನ್ನು ಮರೆಯದೆ ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು. ಕಲಿಯುವಂತಹ ವಿದ್ಯಾರ್ಥಿಗಳು ಉತ್ತಮ ರೀತಿಯ ಅವಕಾಶವಾದಿಗಳಾಗಿರಬೇಕು. ನನ್ನಿಂದ ಅಸಾಧ್ಯ ಎನ್ನುವಂತಹ ಮನೋಭಾವವನ್ನು ಇಂದೇ ತ್ಯಜಿಸಿ ಎಲ್ಲವನ್ನು ಎದುರಿಸಿ ಗೆಲ್ಲುವ ಧೈರ್ಯ ಬೆಳಸಿಕೊಳ್ಳಬೇಕು, ಮದುವೆಯಾಗಿ ಹೋದ ಮೇಲೆ ಅತ್ತೆ ಮಾವನನ್ನು ತಂದೆ ತಾಯಿ ಎಂದೇ ಭಾವಿಸಿ ಅವರ ಕಷ್ಟ ಸುಖಗಳಿಗೆ ಭಾಗಿಯಾಗಿ ಸಂಸಾರದ ಜವಾಬ್ದಾರಿ ಹೊತ್ತು ಉತ್ತಮ‌ ನಾಗರಿಕರಾಗಿ ಉತ್ತಮ ಸಮಾಜ ನಿರ್ಮಾಣ ಮಾಡುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯ…

Read More