Subscribe to Updates
Get the latest creative news from FooBar about art, design and business.
- ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
- ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
- ಕೂಲಿ ಕೊಡದೇ ಗಾರ್ಮೆಂಟ್ಸ್ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
- ಸರಗೂರು | ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
- ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
- ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
- ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
- ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
Author: admin
ಬೆಂಗಳೂರು: ಅನುಮತಿ ಇಲ್ಲದೆ ಮುಖ್ಯಮಂತ್ರಿಗಳ ಗೃಹ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಆರೋಪದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ. ಹೈಗ್ರೌಂಡ್ಸ್ ಪೊಲೀಸರ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸಿದ ನಗರದ 69ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರಹಿತ ವಾರಂಟ್ ಜಾರಿ ಮಾಡಿ ವಿಚಾರಣೆ ಮುಂದೂಡಿದ್ದಾರೆ.. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಈಗಾಗಲೇ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಈವರೆಗೂ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿಸಿದ್ದು, ವಿಚಾರಣೆಯನ್ನು ಡಿಸೆಂಬರ್ 27ಕ್ಕೆ ಮುಂದೂಡಿದೆ. 2021ರ ಮಾರ್ಚ್ 25ರಂದು ಪುಷ್ಪಾ ಅಮರನಾಥ್ ಸೇರಿದಂತೆ ಇತರ 7 ಮಂದಿ ಮಹಿಳೆಯರು ಅನುಮತಿ ಪಡೆಯದೇ ಮುಖ್ಯಮಂತ್ರಿಗಳ ಗೃಹ ಕಚೇರಿ ಗೇಟ್ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು. ಈ ಸಂಬಂಧ ಅಕ್ರಮವಾಗಿ ಗುಂಪು ಕೂಡಿದ್ದರಿಂದ ಗೃಹ ಕಚೇರಿ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಈ ಸಂಬಂಧ…
ಬೀದರ್ : ಟ್ರಕ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿದೆ. ಟ್ರಕ್ ಮತ್ತು ಆಟೋದ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಕೂಲಿ ಕಾರ್ಮಿಕ ಮಹಿಳೆಯರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಭಾವತಿ(36), ಜಕ್ಕಮ್ಮ(32), ರುಕ್ಮಿಣಿ (60), ಯಾದಮ್ಮ(40), ಗುಂಡಮ್ಮ(52) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಹೆಸರು ಪತ್ತೆಯಾಗಿಲ್ಲ. ಇದೇ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಈ ಅಪಘಾತದಲ್ಲಿ ಮೃತಪಟ್ಟಿರುವ ಚಿಟಗುಪ್ಪ ತಾಲೂಕಿನ ಉಡುಮನಳ್ಳಿ ಮೂಲದವರು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರೆಲ್ಲ ಕೂಲಿ ಕಾರ್ಮಿಕರೇ ಆಗಿದ್ದಾರೆ. ದಿನನಿತ್ಯದ ಕೂಲಿ ಕೆಲಸವನ್ನು ಮುಗಿಸಿಕೊಂಡು ಆಟೋದಲ್ಲಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಬೀದರ್ ಚಿಟಗುಪ್ಪ ತಾಲೂಕಿನ ಬೆಮ್ಮಳಖೇಡ ಬಳಿ ಟ್ರಕ್ ವಾಹನ ಆಟೋಗೆ ಬಂದು ಡಿಕ್ಕಿ ಹೊಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಚಿತ್ರದ ಹಾಡಿನ ಮ್ಯೂಸಿಕ್ ಬಳಸಿದ ಆರೋಪ ಹಿನ್ನೆಲೆಯಲ್ಲಿ ಸಂಸದ ರಾಹುಲ್ ಗಾಂಧಿ ಮೂವರು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಸಿನಿಮಾ ಮ್ಯೂಸಿಕ್ ಬಳಸಿದ ಹಿನ್ನೆಲೆಯಲ್ಲಿ ಕಾಪಿ ರೈಟ್ಸ್ ಉಲ್ಲಂಘನೆಯಾಗಿದ್ದು, ಕಾಂಗ್ರೆಸ್ ವಿರುದ್ಧ ಎಂ.ಆರ್.ಟಿ ಸಂಸ್ಥೆ ಕಾನೂನು ಹೋರಾಟಕ್ಕೆ ಮುಂದಾಗಿದೆ. ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್ ಸಿನಿಮಾ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಉಸ್ತುವಾರಿ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಕೋರ್ಟ್ ನಿರ್ದೇಶನದ ಮೇರೆಗೆ ಯಶವಂತಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ರೂ. ಹೆಚ್ಚಲ್ಲ ಅಲ್ಲವೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಫೋಟೋ ಹಾಕಿ ಕರೆನ್ಸಿ ನೋಟೊಂದನ್ನು ರಾಜ್ಯ ಕಾಂಗ್ರೆಸ್ ಸಿದ್ದಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಶಾಸಕ ಸಂಗಮೇಶ್ಗೆ 500 ಕೋಟಿ ರೂ. ಆಫರ್ ನೀಡಿದ್ದೇನೆ ಎಂಬ ಈಶ್ವರಪ್ಪ ಅವರ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಈ ರೀತಿಯಾಗಿ ವ್ಯಂಗ ಮಾಡಿದೆ. ಈಶ್ವರಪ್ಪ ಅವರೇ, ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ? 500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಪೊಲೀಸ್ ಉಮೇಶ್ ರೆಡ್ಡಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಉಮೇಶ್ ರೆಡ್ಡಿಗೆ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಸಿಜೆಐ ಪೀಠ ಆದೇಶ ಹೊರಡಿಸಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಕ್ರೂರ ಶಿಕ್ಷೆಯಾಗಬೇಕು, ಆತನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು. ಉಮೇಶ್ ರೆಡ್ಡಿ ತಾಯಿ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದು ಅದು 2013ರಲ್ಲಿ ತಿರಸ್ಕರಿಸಲ್ಪಟ್ಟಿತ್ತು.ಆದರೆ ಈಗ ಸುಪ್ರೀಂ ಕೋರ್ಟ್ ಗಲ್ಲು…
ಬೆಂಗಳೂರು ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾದ ಅಮಾನವೀಯ ಘಟನೆ ಬೆಂಗಳೂರಿನ ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಡೆದಿದೆ. ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಮೃತಪಟ್ಟಿದ್ದಾಳೆ. ಶಿಕ್ಷಕನ ಹೊಡೆತಕ್ಕೆ ಮೊದಲ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ (106) ಇಂದು ವಿಧಿವಶರಾಗಿದ್ದಾರೆ. ಇದೇ ತಿಂಗಳು 2 ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಮನೆಯಿಂದ ಕೊನೆಯ ಮತ ಚಲಾಯಿಸಿದ್ದರು. ಹಿಮಾಚಲ ಪ್ರದೇಶದ ಕಿನ್ನೌರ್ ನಿವಾಸಿ ನೇಗಿಗೆ 106 ವರ್ಷ ವಯಸ್ಸಾಗಿತ್ತು. ನವೆಂಬರ್ 2ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಅವರು ತಮ್ಮ ಮನೆಯಿಂದ ಕೊನೆಯ ಮತ ಚಲಾಯಿಸಿದ್ದರು. ಮತ ಚಲಾಯಿಸಿದ ನಂತರ ಮಾತನಾಡಿದ ಶ್ಯಾಮ್ ಸರನ್, ಮತದಾನ ಪ್ರಜಾಪ್ರಭುತ್ವದ ಮಹಾನ್ ಹಬ್ಬ ಎಂದು ಹೇಳಿದ್ದರು. ನಾವೆಲ್ಲರೂ ನಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದಿದ್ದರು. ಜುಲೈ 1, 1917ರಲ್ಲಿ ಜನಿಸಿದ್ದ ನೇಗಿ ಅವರು ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 1947ರಲ್ಲಿ ಭಾರತ ಸ್ವಾತಂತ್ರ್ಯ ಪಡೆದ ಬಳಿಕ 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಹವಾಮಾನದ ಕಾರಣಕ್ಕೆ ಐದು ತಿಂಗಳ ಮುಂಚಿತವಾಗಿಯೇ ಮತದಾನ ನಡೆದಿದ್ದು, ಈ ವೇಳೆ ಮೊತ್ತ ಮೊದಲಿಗರಾಗಿ ಶ್ಯಾಮ್ ಸರಣ್ ನೇಗಿ…
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿಯಾಗಿ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಹಾಜರಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ‘ವಿಶ್ವೇಶ್ವರ ಭಟ್ ಆಯೋಗದ ಮುಂದೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಈ ಸಂಬಂಧ ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ’ ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ತಿಳಿಸಿದರು. ‘ಭಾರತದ ರಾಷ್ಟ್ರಪತಿ ಅವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ವಿಶ್ವೇಶ್ವರ ಭಟ್ ಸ್ಪಷ್ಟಪಡಿಸಿದ್ದಾರೆ’ ಎಂದೂ ತಿಳಿಸಿದರು. ಆಯೋಗವು ಕ್ಷಮಾಪಣೆ ಪತ್ರದೊಂದಿಗೆ ಪ್ರಕರಣದ ವಿವರಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದೂ ಅವರು ಮಾಹಿತಿ ನೀಡಿದರು. ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿಯಾಗಿ ಬರೆದುದರ ಬಗ್ಗೆ ಮಾಡಲಾಗಿದ್ದ ಪೋಸ್ಟ್ ಅನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು, ಖುದ್ದಾಗಿ ಹಾಜರಾಗುವಂತೆ ನೋಟಿಸ್ ನೀಡಿತ್ತು. ಮೊಹಮ್ಮದ್ ಮಫಾಜ್ ಎಂಬುವವರು ಈ ಬಗ್ಗೆ ಅಕ್ಟೋಬರ್ 9ರಂದು ಟ್ವೀಟ್ ಮಾಡಿದ್ದರು. ಪತ್ರಿಕೆಯ ಸಂಪಾದಕೀಯ ಪುಟದಲ್ಲಿ ಪ್ರಕಟವಾಗಿದ್ದ ಲೇಖನದ ಎರಡು ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದರು. ಜತೆಗೆ…
ಹೆಚ್.ಡಿ.ಕೋಟೆ: ತಾಲ್ಲೂಕಿನ ಆಡಳಿತ ಸೌಧದ ಸಾರ್ವಜನಿಕ ಶೌಚಾಲಯಗಳು ಗಬ್ಬೆದ್ದು ನಾರುತಿದ್ದು, ಸ್ವಚ್ಛಗೊಳಿಸುವಲ್ಲಿ ತಾಲ್ಲೂಕು ಆಡಳಿತ ವಿಫಲವಾಗಿದೆ. ಆಡಳಿತ ಸೌಧದ ದುಸ್ಥಿತಿ ನೋಡಲಾಗದೇ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೇ ಸಂದರ್ಭದಲ್ಲಿ ಹೋರಾಟಗಾರ, ದಲಿತ ಸಂಘರ್ಷ ಸಮಿತಿಯ ಮುಖಂಡ ಸಣ್ಣಕುಮಾರ್ ಮತ್ತು ದಲಿತ ಸಂಘರ್ಷ ಸಮಿತಿಯ ಹೋರಾಟಗಾರರು ಶೌಚಾಲಯ ಸ್ವಚ್ಛಗೊಳಿಸಿ, ವಿನೂತನವಾಗಿ ಪ್ರತಿಭಟನೆ ತೋರಿದ್ದಾರೆ. ಶಾಸಕರು ತಿಂಗಳಿಗೆ ಎರಡೂ ಮೂರು ಬಾರಿ ತಾಲ್ಲೂಕು ಕಛೇರಿಗೆ ಭೇಟಿ ನೀಡುತ್ತಿರುತ್ತಾರೆ. ಆದರೆ ತಾಲ್ಲೂಕು ಆಡಳಿತದ ಅವ್ಯವಸ್ಥೆ ಅವರ ಕಣ್ಣಿಗೆ ಕಾಣುತಿಲ್ಲವೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇನ್ನೂ ತಾಲೂಕು ಆಡಳಿತ ಸೌಧವೇ ಈ ದುಸ್ಥಿತಿಯಲ್ಲಿರುವುದು ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ. ಜೊತೆಗೆ ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ಬಿಸಿ ಮುಟ್ಟಿಸಬೇಕಾದ ಶಾಸಕರು ಯಾಕೆ ಮೌನವಾಗಿದ್ದಾರೆ ಅನ್ನೋ ಪ್ರಶ್ನೆಗಳಿಗೆ ಕಾರಣವಾಗಿದೆ. ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ ವಿಳಂಬ ಮಾಡುತ್ತಿರುವ ತಾಲೂಕು ಆಡಳಿತ ಜನರ ಗೋಳನ್ನು ಬಗೆ ಹರಿಸುತ್ತಾರಾ ಎಂದು ಕಾದು ನೋಡಬೇಕಿದೆ. ಸಾರ್ವಜನಿಕರ ಶೌಚಾಲಯವನ್ನೂ ನಿರ್ವಹಣೆ ಮಾಡದ ಅಧಿಕಾರಿಗಳು ಜನರ…
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಕ್ರಮ ಆಸ್ತಿ ಮತ್ತು ಹಣ ವರ್ಗಾವಣೆ ಆರೋಪದಲ್ಲಿ ಪದೇಪದೆ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಶುಕ್ರವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಕೆಪಿಸಿಸಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy