Author: admin

ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ಈ ಕುರಿತು ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್‌ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು. ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್‌ ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ…

Read More

2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 175 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಫೈನಲ್ ಆಗಿದ್ದು, ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ. ಬೆಂಗಳೂರಿನ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತ ಸಭೆ ನಡೆದಿದ್ದು, ಈಗಾಗಲೇ 175 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ ಎನ್ನಲಾಗಿದೆ. 175 ಕ್ಷೇತ್ರಗಳಲ್ಲಿ 90 ಕ್ಷೇತ್ರಗಳಿಗೆ ಒಬ್ಬ ಅಭ್ಯರ್ಥಿ​, 85 ಕ್ಷೇತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ. ಇನ್ನೂ 49 ಕ್ಷೇತ್ರಗಳಿಗೆ ಅಂತಿಮವಾಗದ ಅಭ್ಯರ್ಥಿಗಳಿದ್ದಾರೆ. ಹಾಲಿ ಶಾಸಕರ ಪೈಕಿ 10 ಮಂದಿಗೆ ಟಿಕೆಟ್ ಕೈ ತಪ್ಪಿದೆ. ಉಳಿದೆಲ್ಲಾ ಹಾಲಿ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಬೇರೆ ಪಕ್ಷಗಳಿಂದ 25 ಜನ ಕಾಂಗ್ರೆಸ್​​ಗೆ ಬರುವ ನಿರೀಕ್ಷೆಯಿದ್ದು, ಅವರಿಗೆ ಈಗಾಗಲೇ ಕ್ಷೇತ್ರ ಮೀಸಲಿಡಲಾಗಿದೆ ಎನ್ನಲಾಗಿದೆ. ಕಾಂಗ್ರೆಸ್ 40ಕ್ಕೂ ಹೆಚ್ಚು ಕ್ಷೇತ್ರಗಳನ್ನು ಅಂತಿಮಗೊಳಿಸಿಲ್ಲ. ಇಂದು ಸಂಜೆಯೇ ಹೈಕಮಾಂಡ್​ಗೆ ಕೈ ಅಭ್ಯರ್ಥಿಗಳ ಲಿಸ್ಟ್ ಹೋಗಲಿದ್ದು, ದೆಹಲಿಯಿಂದ ತಂಡವೊಂದು ಬಂದು ರಾಜ್ಯದಲ್ಲಿ ಸಮೀಕ್ಷೆ ನಡೆಸುತ್ತದೆ. ಸಮೀಕ್ಷೆ ರಿಪೋರ್ಟ್​ ಬಳಿಕ ಹೈಕಮಾಂಡ್​ನಿಂದ ಪಟ್ಟಿ ರಿಲೀಸ್…

Read More

ಬೆಳಗಾವಿ : ಕುಂದಾನಗರಿ ಕೇವಲ ಕುಂದಾಗಷ್ಟೇ ಅಲ್ಲಾ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭತ್ತದ ಬೆಳೆಗೂ ಪ್ರಸಿದ್ಧಿ ಪಡೆದಿದೆ. ಬಾಸುಮತಿ ಭತ್ತದ ತಳಿಗೆ ಪ್ರಸಿದ್ಧತೆ ಪಡೆದಿರುವ ಬೆಳಗಾವಿ ಭತ್ತದ ಖನಿಜ ಎಂದು ಪ್ರಸಿದ್ಧಿಯಾಗಿದೆ. ಆದ್ರೇ ಭತ್ತ ಬೆಳೆಗಾರರು ಈ ಭಾರಿ ಕಂಗಾಲಾಗಿದ್ದಾರೆ. ಕೂಲಿ ವೆಚ್ಚ, ಕಾರ್ಮಿಕರ ಸಮಸ್ಯೆ ಸೇರಿ ಹಲವು ಸಮಸ್ಯೆಗಳಿಂದ ತತ್ತರಿಸಿ ಹೋಗಿದ್ದಾರೆ. ಈ ಕುರಿತು ಪಂಚಾಯತ್ ಸ್ವರಾಜ್ ಸಮಾಚಾರದೊಂದಿಗೆ ಭತ್ತ ಬೆಳೆಗಾರರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ. ಬೆಳಗಾವಿ ಸುತ್ತುಮುತ್ತಲು ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದ್ದು ಇಲ್ಲಿ ಪ್ರಮುಖವಾಗಿ ಇಂದಿರಾಯನಿ ಬಾಸುಮತಿ, ಕಿಟಾಲ ತಳಿಗಳ ಹೆಚ್ಚನ ಪ್ರಮಾಣದಲ್ಲಿ ಬೆಳೆಯುತ್ತಾರೆ . ಈಗ ಇರುವ ಮಾರುಕಟ್ಟೆಯ ಬೆಲೆ ತಳಿಗಳ ಆಧಾರಿತವಾಗಿದ್ದು ಬಾಸುಮತಿಗೆ 4 ಸಾವಿರ ರೂಪಾಯಿಗಳಿಂದ ಹಿಡಿದು 5 ಸಾವಿರ ರೂಪಾಯಿವರೆಗೆ ಬೆಲೆ ಹೊಂದಿದೆ. 2500-3000 ಸಾವಿರವರೆಗೆ ರೈತರಿಂದ ದಲ್ಲಾಳಿಗಳು ಖರೀದಿ ಮಾಡುತ್ತಾರೆ. ಈ ಬೆಲೆ ರೈತನಿಗೆ ಸಮಾಧಾನಕರವಾಗಿಯೂ ಇಲ್ಲ ಮತ್ತು ಈ ಬೆಲೆಯಿಂದಾಗಿ ಕೃಷಿ ಮಾಡಲು ಕಷ್ಟವಾಗಿದೆ, ಒಂದು…

Read More

ಪ್ರತಿಭಟನೆ ನಡೆಸುತ್ತಿದ್ದ ಶಿವಸೇನೆ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ. ಶಿವಸೇನೆ ಮುಖಂಡ ಸುಧೀರ್ ಸುರಿ ಹತ್ಯೆಗೊಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.  ನಗರದಲ್ಲಿನ ಪ್ರಮುಖ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ. ದೇವಸ್ಥಾನದ ಹೊರಭಾಗದಲ್ಲಿ ಹಾನಿಗೊಳಗಾದ ದೇವಸ್ಥಾನದ ಮೂರ್ತಿಗಳು ಕಸದ ತೊಟ್ಟಿಯಲ್ಲಿ ಸಿಕ್ಕಿದ್ದನ್ನು ಖಂಡಿಸಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಶಿವಸೇನೆ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆ ವೇಳೆ ಕೆಲವರು ಗಾಳಿಯಲ್ಲಿ ಗುಂಡು ಹಾರಿಸಿದರೆ ಇನ್ನೂ ಕೆಲವರು ಇದನ್ನೇ ದುರುಪಯೋಗಪಡಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: 5ಜಿ ಸೇವೆಗೆ ಅಕ್ಟೋಬರ್ 1ರಂದು ಚಾಲನೆ ನೀಡಿದ್ದ ಬೆನ್ನಲ್ಲೇ ಏರ್​ ಟೆಲ್​ ದಾಖಲೆ ಬರೆದಿದೆ. ಆರಂಭದ 30 ದಿನಗಳಲ್ಲೇ 10 ಲಕ್ಷ 5ಜಿ ಗ್ರಾಹಕರನ್ನು ತಾನು ಹೊಂದಿರುವುದಾಗಿ ದೂರಸಂಪರ್ಕ ಕಂಪನಿ ಭಾರ್ತಿ ಏರ್ಟೆಲ್ ತಿಳಿಸಿದೆ. ಸದ್ಯ ಇನ್ನೂ ಪೂರ್ಣ ಪ್ರಮಾಣದಲ್ಲಿ ಏರ್​ಟೆಲ್ 5ಜಿ ಸೇವೆ ಆರಂಭವಾಗಿಲ್ಲ. ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುವುದಾಗಿ ಕಂಪನಿ ತಿಳಿಸಿತ್ತು. ಇದೀಗ ಸೇವೆ ವಿಸ್ತರಿಸುವ ಹಂತದಲ್ಲಿರುವಾಗಲೇ ಭಾರಿ ಸಂಖ್ಯೆಯ ಗ್ರಾಹಕರು ದೊರೆತಿದ್ದಾರೆ ಎಂದು ಹೇಳಿಕೆ ನೀಡಿದೆ. ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5ಜಿ ಸೇವೆ ಆರಂಭವಾಗಿದೆ. ಮುಂಬೈ, ಚೆನ್ನೈ, ಹೈದರಾಬಾದ್, ನಾಗ್ಪುರ ಹಾಗೂ ವಾರಾಣಸಿಗಳಲ್ಲಿ ಹಂತಹಂತವಾಗಿ 5ಜಿ ಸೇವೆ ಆರಂಭಿಸುವುದಾಗಿ ಏರ್​​ ಟೆಲ್ ಹೇಳಿತ್ತು. ಈ ನಗರಗಳಲ್ಲಿ ಸೇವೆಯನ್ನು ವಿಸ್ತರಿಸುವ ಕೆಲಸ ನಡೆಯುತ್ತಿದೆ ಎಂದು ಕಂಪನಿ ಹೇಳಿಕೊಂಡಿದೆ. ನೆಟ್​ ವರ್ಕ್​ ವಿಸ್ತರಣೆ ಕಾರ್ಯ ಪೂರ್ತಿ ನಡೆಯುವುದಕ್ಕೂ ಮುನ್ನವೇ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದು ಏರ್ಟೆಲ್ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗೆ ಶೀಘ್ರದಲ್ಲಿಯೇ ಮುಹೂರ್ತ ನಿಗದಿಯಾಗಲಿದೆ. ಹೀಗಾಗಿ ಇಂದು ಅಥವಾ ನಾಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಅಥವಾ ನಾಳೆ ಸಂಜೆ ಮುಖ್ಯಮಂತ್ರಿ ದೆಹಲಿಗೆ ತೆರಳಲಿದ್ದು, ಭಾನುವಾರ ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ. ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣಕ್ಕೆ ಸಜ್ಜಾಗಿರುವ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಯಾವೆಲ್ಲ ನಾಯಕರಿಗೆ ಮಣೆಹಾಕಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹೆಚ್.ಡಿ.ಕೋಟೆ: ಪೈಪ್ ಒಡೆದು ರಸ್ತೆಯಲ್ಲಿ ನೀರು ಹರಿಯುತ್ತಿದ್ದರೂ ಪಂಚಾಯಿತಿ ಅಧಿಕಾರಿಗಳು  ಕ್ಯಾರೇ ಅನ್ನುತ್ತಿಲ್ಲ, ಹೆಚ್.ಡಿ.ಕೋಟೆ ತಾಲ್ಲೂಕಿನ ಎಂ.ಕನ್ನೇನಹಳ್ಳಿ ಗ್ರಾಮದ ಜನರು ಕಲುಸಿತ ನೀರನ್ನೆ ಕುಡಿಯುವ ಪರಿಸ್ಥಿತಿ ಎದುರಾಗಿದ್ದರೂ ಪಿ ಡಿ ಒ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ. ಪೈಪ್ ಒಡೆದು ಸರಿ ಸುಮಾರು ಆರು ತಿಂಗಳಾದರು ಪಿಡಿಒ ಈ ಬಗ್ಗೆ ಗಮನ ಹರಿಸಿಲ್ಲ. ಬಚಿಕ್ಕಕೆರೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಂ ಕನ್ನೇನಹಳ್ಳಿ ಗ್ರಾಮದ ಸದಸ್ಯ ಮಲ್ಲೇಶ ಹಲವು ಬಾರಿ ಈ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಕ್ರಮಕೈಗೊಳ್ಳದೇ ಮೀನಾ ಮೇಷ ಎಸಗುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆ ಮತ್ತು ಅಂಗನವಾಡಿ ಹಾಗೂ ಗ್ರಾಮಸ್ಥರಿಗೆ ಕುಡಿಯಲು ನೀರಿಲ್ಲದೆ ಬವಣಿಸುತ್ತಿದ್ದಾರೆ. ನೀರು ಹರಿದು ಗುಂಡಿಗಳಲ್ಲಿ ನಿಂತು ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುತ್ತಿದೆ. ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸಿ ಎಂ ಕನ್ನೇನಹಳ್ಳಿ ಜನರ ಗೋಳು ನಿವಾರಿಸುತ್ತಾರಾ ಎಂದು ಕಾದು ನೋಡಬೇಕಿದೆ. ಕ್ಷೇತ್ರದ…

Read More

ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರು (35) ಆನಂದ್ (30). ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಕಳೆದ ರಾತ್ರಿ ಗಂಗೆ ಮೇಲೆ ಆಣೆ ಮಾಡಲು ಕೆರೆ ಬಳಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶವವನ್ನ ಹೊರೆತೆಗೆಯಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಇರಿಸಿಕೊಂಡ ಹಿನ್ನೆಲೆಯಲ್ಲಿ ಸೆಸ್ಕ್ ಸಂಪರ್ಕ ಕಡಿತಗೊಳಿಸಿದ್ದರಿಂದ ಚಾಮರಾಜನಗರದ ಐತಿಹಾಸಿಕ ದೇವಸ್ಥಾನದ ಚಾಮರಾಜೇಶ್ವರ ದೇವರಿಗೆ ಕತ್ತಲಲ್ಲಿ ಪೂಜೆ ನೆರವೇರಿಸಿದ ಘಟನೆ ಗುರುವಾರ ನಡೆದಿದೆ. ಚಾಮಗರಾಜನಗರದ ಹೃದಯಭಾಗದಲ್ಲಿರುವ ಚಾಮರಾಜೇಶ್ವರ ದೇಗುಲದ 60ರಿಂದ 70 ಸಾವಿರ ರೂಪಾಯಿ ವಿದ್ಯುತ್ ಬಿಲ್ ಅನ್ನು ಮುಜರಾಯಿ ಇಲಾಖೆ ಬಾಕಿ ಉಳಿಸಿಕೊಂಡಿದೆ. ಪದೇಪದೆ ಗಡುವು ವಿಸ್ತರಿಸಿದರೂ ಬಿಲ್ ಪಾವತಿಸದ ಕಾರಣ ಸೆಸ್ಕ್ ಗುರುವಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ಸೆಸ್ಕ್ ಸಿಬ್ಬಂದಿ ದೇಗುಲದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಗುರುವಾರ ಸಂಜೆ ದೇವಸ್ಥಾನದಲ್ಲಿ ಕತ್ತಲಲ್ಲೇ ಪೂಜೆ ಮಾಡಲಾಗಿದ್ದು, ನೆರೆದಿದ್ದ ಭಕ್ತರು ಮೊಬೈಲ್ ಬ್ಯಾಟರಿ ಚೆಲ್ಲಿದರು. ಕಾರ್ತಿಕ ಮಾಸವಾಗಿರುವುದರಿಂದ ಶಿವನ ಭಕ್ತರು ಅದರಲ್ಲೂ ಮಹಿಳೆಯರು ಚಾಮರಾಜೇಶ್ವರನ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲ ಭೇಟಿ ನೀಡುತ್ತಿದ್ದಾರೆ. ವಿದ್ಯುತ್ ಇಲ್ಲದಿರುವುದರಿಂದ ಬಂದಿದ್ದ ಭಕ್ತರು ಕತ್ತಲಲ್ಲೇ ದರ್ಶನ ಪಡೆದು ಮರಳುವಂತಾಗಿದೆ. ವಿದ್ಯುತ್ ಕಡಿತಗೊಳಿಸಲು ಮುಂದಾದ ವೇಳೆ 15 ದಿ‌ನ‌ ಕಾಲಾವಕಾಶ ಪಡೆದು ವಿದ್ಯುತ್ ಪಾವತಿ ಮಾಡಲಾಗಿತ್ತು. ಆದರೆ, ಈ ಬಾರಿ ಗಡುವು ನೀಡ ಸೆಸ್ಕ್…

Read More

ಸಾಂಸ್ಕೃತಿಕ ನಗರಿ ಮೈಸೂರಿನ ಕೆ.ಆರ್. ನಗರ ಪಟ್ಟಣದ ಜನವಸತಿ ಪ್ರದೇಶಕ್ಕೆ ಚಿರತೆ ಪ್ರತ್ಯಕ್ಷವಾಗಿದ್ದು, ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮೂವರ ಮೇಲೆ ದಾಳಿ ನಡೆಸಿದ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಕೆ.ಆರ್.ನಗರ ಪಟ್ಟಣದ ಕನಕಗಿರಿ ಲೇಔಟ್​ಗೆ ಚಿರತೆ ನುಗ್ಗಿದ್ದು, ರಸ್ತೆಯಲ್ಲಿ ಹೋಗ್ತಿದ್ದ ಬೈಕ್​​​, ಸೈಕಲ್​​ ಸವಾರನ ಮೇಲೂ ದಾಳಿ ಮಾಡಿದೆ. ಅರಣ್ಯ ಸಿಬ್ಬಂದಿ ಮೇಲೂ ಚಿರತೆ ಎರಗಿ ಗಾಯಗೊಳಿಸಿದೆ. ಮೊನ್ನೆಯಷ್ಟೆ ಟಿ.ನರಸೀಪುರದಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಹಿಡಿಯಲು ಅರಣ್ಯಾಧಿಕಾರಿ ಸೀಮಾ, ರಶ್ಮಿ ಟೀಂ ಹರಸಾಹಸ ಪಟ್ಟಿದ್ದು, ಮನೆಯಿಂದ ಹೊರ ಬರದಂತೆ ಜನರಿಗೆ ಮೈಕ್​ ಮೂಲಕ ಸಂದೇಶ ನೀಡಿದ್ದಾರೆ. ಶುಕ್ರವಾರ ಕೆಆರ್ ನಗರದಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More