Subscribe to Updates
Get the latest creative news from FooBar about art, design and business.
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
- ತುಮಕೂರು ಡಿಸಿ ಶುಭಕಲ್ಯಾಣ್ ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು ಡಿಸಿಯಾಗಿ ವರ್ಗಾವಣೆ
- ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ: ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
- ತಿಪಟೂರು: ಜೆಡಿಎಸ್ ಎಸ್ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
- ತುಮಕೂರು ಪ್ರಿಂಟಿಂಗ್ ಹಬ್ ಆಗಲಿ: ಸಿ.ಸಿ.ಪಾವಟೆ
Author: admin
ತುಮಕೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರೊಂದಿಗೆ ಔಷಧಿ ಕೊರತೆಯಾಗದಂತೆ ಎಚ್ಚರಿಕೆವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ಔಷಧಗಳನ್ನು ಲಭ್ಯವಿರುವಂತೆ ಕ್ರಮವಹಿಸಬೇಕು. ಪ್ರತಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆಗಳ ಅವಲಂಬನೆಯನ್ನು ಕಡಿಮೆ ಮಾಡಬೇಕು ಎಂದು ನಿರ್ದೇಶಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಪ್ರಯೋಗಾಲಯ ಹಾಗೂ ಔಷಧ ಸಂಗ್ರಹಣಾ ಘಟಕಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು. ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಿ, ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಬೇಕೆಂದು ಸಲಹೆ ನೀಡಿದರು. ಜನರಿಗೆ ಸುಗಮವಾದ, ಸುಸ್ಥಿರವಾದ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶದಿಂದ ಶಿಥಿಲಗೊಂಡ…
ತುಮಕೂರು: ನಾವು ಸಮಾನವಾಗಿ, ಭ್ರಷ್ಟಾಚಾರ ರಹಿತ, ಶೋಷಣೆ ಇಲ್ಲದ, ಸಮಾಜದಲ್ಲಿ ಬದುಕಬೇಕು. ಅದಕ್ಕಾಗಿ ಹೋರಾಟ ಬಹಳ ಮುಖ್ಯ. ಎಲ್ಲಿಯವರೆಗೆ ನಾವು ಧ್ವನಿ ಎತ್ತಿ ಪ್ರಶ್ನಿಸದೆ ಸಹಿಸಿಕೊಳ್ಳುತ್ತೇವೋ ಅಲ್ಲಿಯವರೆಗೆ ದೌರ್ಜನ್ಯ ನಡೆಯುತ್ತಲೇ ಇರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಡಾ. ಬಿ.ಆರ್ ಅಂಬೇಡ್ಕರ್ ತರಬೇತಿ ಸಂಶೋಧನೆ ಹಾಗೂ ವಿಸ್ತರಣ ಕೇಂದ್ರ, ಬೆಂಗಳೂರು ಮತ್ತು ಈದಿನ ಡಾಟ್ ಕಾಮ್ ಸಹಯೋಗದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ‘ಅರಿವೇ ಅಂಬೇಡ್ಕರ’ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಕಾನೂನು ಜ್ಞಾನವನ್ನು ಹೊಂದಿರಬೇಕು. ಅಸಮಾನತೆ ಗುಲಾಮಗಿರಿಯ ಬದುಕನ್ನು ಬದುಕದೆ ತಮ್ಮ ಹಕ್ಕುಗಳ ಬಗ್ಗೆ ತಿಳಿಯಲು ಹೋರಾಡಿ, ಅನ್ಯಾಯದ ವಿರುದ್ಧ ತಲೆಯೆತ್ತಿದರೆ ಮಾತ್ರ ನಾವು ಬದಲಾವಣೆಯನ್ನು ತರಲು ಸಾಧ್ಯ. ಉತ್ತಮ ಶಿಕ್ಷಣ ಪಡೆದ ಪ್ರತಿಯೊಬ್ಬ ವ್ಯಕ್ತಿಯು ಸಹ ತಮ್ಮ ಸುತ್ತಲಿನ ಪ್ರದೇಶದ ಜನರ ಅಭಿವೃದ್ಧಿಯನ್ನು ಬಯಸಿದರೆ ಅಂತಹವರಲ್ಲಿ ಅಂಬೇಡ್ಕರ್ ಅವರನ್ನು…
ತಿಪಟೂರು: ತಾಲ್ಲೂಕಿನ ರಂಗಾಪುರ ಹಾಗೂ ಅನುಗೊಂಡನಹಳ್ಳಿ ಗ್ರಾಮಗಳ ದೊಡ್ಡಕಟ್ಟೆ ಹಾಗೂ ಕಾಳನಕಟ್ಟೆ ಕೆರೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2024ರಲ್ಲಿ ರೂ.16.85 ಲಕ್ಷ ಮೊತ್ತವನ್ನು ವಿನಿಯೋಗಿಸಿ ಪುನಶ್ಚೇತನಗೊಳಿಸಲಾಗಿತ್ತು. ಸದರಿ ರಂಗಾಪುರದ ದೊಡ್ಡಕಟ್ಟೆ ಹಾಗೂ ಆನುಗೊಂಡನಹಳ್ಳಿ ಕಾಳನಕಟ್ಟೆ ಕೆರೆಗಳ ಹಸ್ತಾಂತರ ಪ್ರಮಾಣ ಪತ್ರವನ್ನು ರಂಗಾಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶಂಕರ್ ಬೀಳೂರು ರವರಿಗೆ ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ರವರ ನೇತೃತ್ವದಲ್ಲಿ ವಿತರಿಸಲಾಯಿತು. ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಪ್ರಮೋದ್, ವಲಯ ಮೇಲ್ವಿಚಾರಕ ದಿನೇಶ್, ಸಿ.ಎಸ್.ಸಿ. ಸೇವಾದರರಾದ ಆಶಾರವರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಂಚಾಘಟ್ಟ ಗ್ರಾಮದ ಮಜರೆ ಗೊಲ್ಲರಹಟ್ಟಿ ಗ್ರಾಮ ತಿಪಟೂರು ನಗರಕ್ಕೆ ಹೊಂದಿಕೊಂಡಂತೆ ಇದ್ದು, ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುವ ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯವಿಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ನಮ್ಮ ಗ್ರಾಮಕ್ಕೆ ರಸ್ತೆ ಸೌಕರ್ಯ ಕಲ್ಪಸುವಂತೆ ಒತ್ತಾಯಿಸಿ ಗ್ರಾಮಸ್ಥರು ತಿಪಟೂರು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು. ಕಾಡುಗೊಲ್ಲ ಸಮಾಜದ ಮುಖಂಡ ಪ್ರಕಾಶ್ ಯಾದವ್ ಮಾತನಾಡಿ, ಕಂಚಾಘಟ್ಟ ಗೊಲ್ಲರ ಹಟ್ಟಿಗೆ ಸೂಕ್ತ ರಸ್ತೆ ಸಂಪರ್ಕವಿಲ್ಲದೆ ಪರದಾಡುವಂತಾಗಿದೆ, ಮಹಿಳೆಯರು ಮಕ್ಕಳು ಪರದಾಡುವಂತಾಗಿದೆ. ಶಾಲಾ ಮಕ್ಕಳು ರಸ್ತೆ ಸಂಪರ್ಕವಿಲ್ಲದೆ, ಸುಮಾರು ಮೂರ್ನಾಲ್ಕು ಕಿಲೋ ಮೀಟರ್ ಸುತ್ತಿಕೊಂಡು ನಗರದ ಶಾಲಾ ಕಾಲೇಜಿಗೆ ತಲುಪಬೇಕು. ಅಂಗವಿಕಲರು ವಯೋವೃದ್ದರ ಸ್ಥಿತಿಯಂತೂ ಅಯೋಮಯವಾಗಿದೆ. ಹಟ್ಟಿಯಲ್ಲಿ ಯಾರಾದರೂ ಅನಾರೋಗ್ಯ ಪೀಡಿತರಾದರೆ ಅಂಬುಲೆನ್ಸ್ ಬರುವುದಕ್ಕೂ ರಸ್ತೆಇಲ್ಲ. ಸರ್ಕಾರ ಕೂಡಲೇ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಗ್ರಾಮದ ಮುಖಂಡ ಹೊನ್ನಪ್ಪ ಮಾತನಾಡಿ, ಕಂಚ್ಚಾಘಟ್ಟ ಗೊಲ್ಲರ ಹಟ್ಟಿ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ, ಹಿಂದೆ ಇದ್ದ ರಸ್ತೆ ಎತ್ತಿನಹೊಳೆ ಕಾಮಗಾರಿಯಿಂದ ರಸ್ತೆ…
ತುಮಕೂರು: ಸುಗಮ್ಯ ಭಾರತ ಯಾತ್ರಾ ಸಮೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರಿ ಕಚೇರಿ, ನಗರ ಸ್ಥಳಿಯ ಸಂಸ್ಥೆಗಳು ಹಾಗೂ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಚೇತನರಿಗೆ ಅಡೆ–ತಡೆ ರಹಿತ ಸೌಲಭ್ಯಗಳ ಆಡಿಟ್ ಮಾಡುವ ಸಲುವಾಗಿ ಅಭಿವೃದ್ಧಿಪಡಿಸಲಾಗಿರುವ ಮೊಬೈಲ್ ಆಪ್ ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಸಂಜೆ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಸರ್ಕಾರಿ ಕಚೇರಿ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಚೇತನರಿಗೆ ಕಡ್ಡಾಯವಾಗಿ ಅಡೆ-ತಡೆ ರಹಿತ ವಾತಾವರಣ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ಕಚೇರಿ ಕಟ್ಟಡಗಳ ಹಾಗೂ ಸಾರ್ವಜನಿಕ ಸ್ಥಳಗಳ ಆಡಿಟಿಂಗ್ ಮಾಡಲು ತರಬೇತಿ ಪಡೆದಿರುವ ವಿ.ಆರ್.ಡಬ್ಲ್ಯೂ, ಅಧಿಕಾರಿಗಳು ಅಗತ್ಯ ಸಹಕಾರ ನೀಡುವ ಮೂಲಕ ಸುಗಮ್ಯ ಭಾರತ ಯಾತ್ರಾ ಸಮೀಕ್ಷಾ ಕಾರ್ಯಕ್ರಮ ಯಶಸ್ವಿಯಾಗುವಂತೆ ಶುಭ ಕೋರಿದರು. ಈ ಸಂದರ್ಭದಲ್ಲಿ ವಿಕಲಚೇತನ ಕಲ್ಯಾಣಾಧಿಕಾರಿ ಬಿ.ಎಸ್.ಚಿದಾನಂದಮೂರ್ತಿ ಸೇರಿದಂತೆ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ಮೌಲ್ಯಾಧಾರಿತ ಜೀವನ ನಡೆಸುವುದು ಮುಖ್ಯ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ಜಪಾನಂದಜಿ ಮಹಾರಾಜ್ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗವು ಪಾವಡಗದ ಶ್ರೀ ರಾಮಕೃಷ್ಣ ಸೇವಾಶ್ರಮ, ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸಮಾಜಕಾರ್ಯ ಗ್ರಾಮೀಣ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಶಿಕ್ಷಣದಲ್ಲಿ ಮೌಲ್ಯಗಳನ್ನು ಬಿತ್ತುವುದು ಅಗತ್ಯವಾಗಿದೆ. ನಾಗರಿಕರಾದ ನಾವು ಸೇವೆಯ ಹೃದಯವಂತಿಕೆ ಹೊಂದಬೇಕು ಎಂದರು. ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪೆÇ್ರ ಪರಶುರಾಮ್ ಕೆ. ಜಿ. ಮಾತನಾಡಿ, ಸಮಾಜಕ್ಕೆ ಶ್ರೀ ರಾಮಕೃಷ್ಣ ಸೇವಾ ಆಶ್ರಮದ ಕೊಡುಗೆ ಅಪಾರವಾದದ್ದು. ಆಶ್ರಮದ ನೇತೃತ್ವದಲ್ಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಆರಂಭವಾಗಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆ ರಾಷ್ಟ್ರಮಟ್ಟದಲ್ಲಿ ಹೆಮ್ಮೆ ತಂದಿದೆ ಎಂದರು. ಮಧುಗಿರಿ ವಿಜ್ಞಾನ ಕೇಂದ್ರದ ಕಾರ್ಯದರ್ಶಿಯವರಾದ ಶ್ರೀ ಕೆ ಎನ್ ನರಸಿಂಹಮೂರ್ತಿ ಮಾತನಾಡಿ, ಓದುವ ಸಮಯದಲ್ಲೇ ಸಮಾಜಕಾರ್ಯದ ಒಲವು ಹೊಂದಿರುವುದು ಹೆಮ್ಮೆಯ…
ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಗಂಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು ಮಳೆ ಗಾಳಿಗೆ ಹಾನಿಗೊಳಗಾದ ಪ್ರಕರಣವನ್ನು ಶೀಘ್ರವಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ಧನವನ್ನು ವಿತರಿಸಬೇಕೆಂದು ನಿರ್ದೇಶಿಸಿದರು. ಮಧುಗಿರಿಯ ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ 10ರಲ್ಲಿ ಕೊಳವೆ ಬಾವಿ ನೀರಿನ ಮೂಲವನ್ನು ಪರಿಶೀಲಿಸಿದಾಗ ಕುಡಿಯಲು ಯೋಗ್ಯವಿಲ್ಲ ಎಂಬ ವರದಿ ಬಂದಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೇರೊಂದು ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ 330 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕ್ಲೋರಿನೇಷನ್ ಪ್ರಕ್ರಿಯೆ ಕಡ್ಡಾಯವಾಗಿ…
ಬೀದರ್: ಆಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಎಪಿಎಂಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯ ನೇತೃತ್ವ ವಹಿಸಿದ್ದ ಶಾಸಕರು ಧ್ವಜ ಹಿಡಿದು ಹೆಜ್ಜೆ ಹಾಕಿದರು. ಎಪಿಎಂಸಿ ಎದುರುಗಡೆಯ ಕನ್ನಾಡಾಂಬೆ ವೃತ್ತದಲ್ಲಿ ಸಾಮಾವೇಶ ನಡೆಯುವ ವೇಳೆ ಶಾಸಕರು ಕುಳಿತಲ್ಲೇ ನಿಶಕ್ತರಾದರು. ಶಾಸಕರು ಮೆರವಣಿಗೆಯಲ್ಲಿ ಕುಣಿದು ದುಡಿದಿದ್ದಾರೆ, ಹೀಗಾಗಿ ಸುಸ್ತಾಗಿ ತಲೆ ಸುತ್ತಿದೆ ಬೇರೆ ಏನೂ ಸಮಸ್ಯೆ ಇಲ್ಲ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಶಾಸಕರ ಆಪ್ತರು ತಿಳಿಸಿದ್ದಾರೆ. ಯಾತ್ರೆಯಲ್ಲಿ ಬೀದರ್ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮಠಾಧೀಶರ, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಕುಡಿಯುವ ನೀರಿಗಾಗಿ ಪ್ರತಿದಿನ 1800 ಕ್ಯೂ ಸೆಕ್ಸ್ ನೀರು ಹರಿದು ಬರುತ್ತಿದೆ. ಹೀಗೆ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು , ತುಮಕೂರಿನ ಬುಗುಡನಹಳ್ಳಿ, ಕೆರೆಯಲ್ಲಿ ಸಂಗ್ರಹಿಸಲಾಗುತ್ತಿದೆ. ಮುಂದಿನ 10 ದಿನಗಳವರೆಗೆ ಇದೇ ರೀತಿ ಹೇಮಾವತಿ ಜಲಾಶಯದಿಂದ ನೀರು ಹರಿದು ಬರಲಿದ್ದು ಬುಗುಡನಹಳ್ಳಿ ಕೆರೆ ಸಂಪೂರ್ಣ ಭರ್ತಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಪರಮೇಶ್ವರ್ ಅವರ ಜೊತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ, ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬಳ್ಳಾರಿ: ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸಂಡೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದ ನಿವಾಸಿಗಳಾದ ಆಶಾ (28 )ಜಯಲಕ್ಷ್ಮಿ (21), ಒಬ್ಬ ಬಾಲಕ ಮತ್ತು ಬಾಲಕಿ ಅಪಘಾತದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಸಂಡೂರು ಪಟ್ಟಣದಿಂದ ಹೊಸಪೇಟೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಹೊಸಪೇಟೆ ಕಡೆಯಿಂದ ವೇಗವಾಗಿ ಬಂದ ಅದಿರು ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದೆ.ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW