Author: admin

ಮಧುಗಿರಿ: ರಾಜ್ಯ ಸರ್ಕಾರ ಎರಡೂವರೆ ವರ್ಷದಲ್ಲಿ 5,800 ಬಸ್‌ ಗಳನ್ನು ಖರೀದಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪಟ್ಟಣದ ಹಿಂದೂಪುರ ರಸ್ತೆಯಲ್ಲಿರುವ ಪಾಳ್ಯದಹಳ್ಳಿ ಸಮೀಪ ಸಾರಿಗೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಸಹಯೋಗದೊಂದಿಗೆ ಶನಿವಾರ ನಡೆದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನ ಪರೀಕ್ಷಾ ಪಥ ಹಾಗೂ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಈಗಾಗಲೇ 45 ಸ್ವಯಂ ಚಾಲಿತ ವಾಹನ ಚಾಲನ ಪರೀಕ್ಷಾ ಪಥ ನಿರ್ಮಿಸಲಾಗುತ್ತಿದೆ. ಏಳು ಟ್ರ್ಯಾಕ್ ಚಾಲನೆಯಲ್ಲಿವೆ. 28 ಟ್ರ್ಯಾಕ್ ಬಾಕಿಯಿದ್ದು, ಈ ವರ್ಷ 10 ಟ್ರ್ಯಾಕ್ ನಿರ್ಮಾಣಕ್ಕೆ ಟೆಂಡರ್ ಆಗಿದ್ದು ಶೀಘ್ರ ಕಾಮಗಾರಿ ಪೂರ್ಣಗೊಳ್ಳುವುದು. ನರೇಂದ್ರ ಮೋದಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಗುಜರಾತ್‌ನಲ್ಲಿ ಈ ರೀತಿ ಅಭಿವೃದ್ಧಿಯಾಗಿಲ್ಲ ಎಂದರು. ಮಧುಗಿರಿಯಲ್ಲಿ ಸಾರಿಗೆ ವಿಭಾಗೀಯ ಕಚೇರಿಯನ್ನು ಶೀಘ್ರ ಮಂಜೂರು ಮಾಡಲಾಗುವುದು. ಸಾರಿಗೆ ಬಸ್‌ ನಿಲ್ದಾಣ ನವೀಕರಣಕ್ಕೆ ಆದ್ಯತೆ ಹಾಗೂ ತಾಲ್ಲೂಕಿಗೆ…

Read More

ತುಮಕೂರು: ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎ.ಎಚ್‌.ರಾಜಾಸಾಬ್‌ ಪ್ರತಿಪಾದಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ಸಮಾಜ’ ಕುರಿತು ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಸ್ವಾತಂತ್ರ್ಯದ ನಂತರ ದೇಶದ ಜನರ ಹಸಿವು ನೀಗಿಸಲು ಹಸಿರು ಕ್ರಾಂತಿ ಆರಂಭವಾಯಿತು. ಇದರ ಪರಿಣಾಮವಾಗಿ ಭಾರತ ಆಹಾರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಿದೆ. ಆದರೆ ಅಂತರ್ಜಲದ ಅತಿಯಾದ ಬಳಕೆ, ರಾಸಾಯನಿಕ, ಹೈಬ್ರಿಡ್ ತಳಿ, ಕೀಟನಾಶಕ ಬಳಕೆಯ ಪರಿಣಾಮವಾಗಿ ಪರಿಸರ ನಾಶವಾಗಿದೆ. ಕುಡಿಯುವ ನೀರು ವಿಷವಾಗಿದೆ. ಇದೆಲ್ಲವನ್ನೂ ಗಮನಿಸಿದರೆ ಪರಿಸರ ಸ್ನೇಹಿ ಸಂಶೋಧನೆಗಳಿಗೆ ಒತ್ತು ನೀಡಬೇಕಿದೆ ಎಂದು ಹೇಳಿದರು. ಕೃತಕ ಬುದ್ಧಿಮತ್ತೆ (ಎಐ) ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ವಿದ್ಯಾರ್ಥಿಗಳು ಬರೆದ ಸಂಶೋಧನಾ ಪ್ರಬಂಧಗಳಲ್ಲಿ ಯಾವುದು ಅಸಲಿ, ಯಾವುದು ನಕಲು ಎಂಬುದನ್ನು ಕಂಡುಹಿಡಿಯಲು ಹೊಸ ಸಂಶೋಧನೆ ಮಾಡುವಂತಹ ದುಃಸ್ಥಿತಿಗೆ ತಲುಪಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದರು. ಕಾಲೇಜು ಶಿಕ್ಷಣ ಇಲಾಖೆ…

Read More

ಕುಣಿಗಲ್:  ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್ ಮಾಡಿದ ಆರೋಪದ ಮೇರೆಗೆ ಇಬ್ಬರು ಯೂಟ್ಯೂಬ್ ವಾಹಿನಿಯ ಪತ್ರಕರ್ತರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಗರದ ಯೂಟ್ಯೂಬ್ ವಾಹಿನಿ ಮಾಲೀಕ ಶಬೀರ್, ವ್ಯವಸ್ಥಾಪಕ ನಿರ್ದೇಶಕಿ ಕುಸುಮಾ ಎಂಬುವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ತಾಲ್ಲೂಕಿನ ನಾಗೇಗೌಡನಪಾಳ್ಯದ ತಾಜ್‌ ರೆಸ್ಟೋರೆಂಟ್‌ ಮಾಲೀಕ ಜಿಯಾವುಲ್ಲಾ ಎಂ.ಶೇಖ್ ನೀಡಿದ ದೂರಿನ ಮೇರೆಗೆ ಅಮೃತೂರು ಠಾಣೆಯಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿತ್ತು. ಮೇ 24ರಂದು ಒಬ್ಬ ಮಹಿಳೆ, ಮೂವರು ಪುರುಷರು ಹೋಟೆಲ್‌ ನಲ್ಲಿ ಊಟ ಮಾಡಿ ಹೋಗಿದ್ದರು. ಅವರಿಗೆ ನೀಡಿದ್ದ ಊಟವನ್ನು ವಿಡಿಯೋ ಮಾಡಿಕೊಂಡಿದ್ದರು. 3 ದಿನದ ನಂತರ ಕುಸುಮಾ ಎಂಬುವರು ನನ್ನ ಜತೆ ಮೊಬೈಲ್‌ ನಲ್ಲಿ ಮಾತನಾಡಿದ್ದರು ಎಂದು ಜಿಯಾವುಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಿಮ್ಮ ಹೋಟೆಲ್‌ನಲ್ಲಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದೀರಿ, ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಎಲ್ಲ ವಿಡಿಯೊ ನನ್ನ ಬಳಿ ಇವೆ. ಸುದ್ದಿ ಪ್ರಕಟಿಸದಿರಲು ಕಮರ್ಷಿಯಲ್ ನೀಡಬೇಕು ಎಂದು ಕುಸುಮಾ ಬೇಡಿಕೆ ಇಟ್ಟಿದ್ದರು ಎಂದು…

Read More

ವರದಿ: ಹಾದನೂರು ಚಂದ್ರ ಸರಗೂರು:  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿಕಡೆ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿನ.16ರಿಂದ 18ರವರೆಗೆ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಲಿದೆ. ಭಕ್ತರು, ಕಾಡಿಗೆ ಕಿಂಚಿತ್ತೂ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆ ಮುಜರಾಯಿ ಮತ್ತು ತಾಲೂಕು ಆಡಳಿತ ಮಾಡಲಾಗಿದೆ. ಪ್ರತಿ ವರ್ಷದಂತೆ ದೇವಸ್ಥಾನದಲ್ಲಿಕಾರ್ತಿಕ ಮಾಸದಲ್ಲಿನಡೆಯುವ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ತಯಾರಿ ಮಾಡಿಕೊಳ್ಳುವಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ. ದೇವಸ್ಥಾನವನ್ನು ಸ್ವಚ್ಛಗೊಳಿಸುವುದು, ಸುಣ್ಣ–ಬಣ್ಣ ಬಳಿಯುವುದು, ತಳಿರು ತೋರಣ ಕಟ್ಟಿ ಅಲಂಕಾರ ಮಾಡುವುದು ಸೇರಿದಂತೆ ಕೊಂಡೋತ್ಸವ ನಡೆಯುವ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಆದೇಶ ನೀಡಲಾಗಿದೆ. ಜಾತ್ರೆಯ ವಿವಿಧ ಕಾರ್ಯಕ್ರಮ: ಶ್ರೀ ಕ್ಷೇತ್ರ ಬೇಲದಕುಪ್ಪೆ, ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವದಲ್ಲಿವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇರಲಿವೆ. ನ. 16ರಂದು ಆಲಯ ಪ್ರವೇಶ, ಗಣಪತಿ ಪೂಜೆ, ಹೋಮ-ಹವನ, ರುದ್ರಾಭಿಷೇಕ ಪಾರಾಯಣ, ನೈವೇದ್ಯ, ಮಹಾಮಂಗಳಾರತಿ, ಬ್ರಾಹ್ಮಿ ಮುಹೂರ್ತದಲ್ಲಿನವರತ್ನನ್ಯಾಸ, ಪ್ರಾಣಪ್ರತಿಷ್ಠೆ, ಪೂರ್ಣಾಹುತಿ ನಂತರ…

Read More

ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ  ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ತಾಲ್ಲೂಕು, ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿನಿಂದ ಬಂದ ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ದೇವಾಲಯದಲ್ಲಿ ಆಡಳಿತ ಮಂಡಳಿಯಿಂದ ಮುಂಜಾನೆಯಿಂದ ವಿವಿಧ ಹೋಮ, ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 12.35 ಗಂಟೆಗೆ ಬೆಳ್ಳಿರಥೋತ್ಸವ, ಪ್ರಾಕಾರೋತ್ಸವ ನಡೆಯಿತು. ದೇಗುಲ ಆವರಣದಲ್ಲಿ ದೀಪಾಲಂಕಾರ, ಹೂವಿನ ಅಲಂಕಾರ ಮಾಡಲಾಗಿತ್ತು. ರಥೋತ್ಸವದಲ್ಲಿ ಚಿಟ್ಟಿ ಮೇಳ, ಮಂಗಳವಾದ್ಯ, ಚಂಡೆ ವಾದ್ಯ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದರು. ದೀಪೋತ್ಸವಕ್ಕೆ ಸಿದ್ಧರಬೆಟ್ಟದ ವೀರಭದ್ರಶಿವಾಚಾರ್ಯ ಸ್ವಾಮೀಜಿ, ಎಲೆರಾಂಪುರದ ಹನುಮಂತನಾಥ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನೂರಾರು ಭಕ್ತರು ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಿಸಿದರು. ಗೊರವನಹಳ್ಳಿ, ನರಸಯ್ಯನಪಾಳ್ಯ, ಗೊಲ್ಲರಟ್ಟಿ ಗ್ರಾಮಸ್ಥರಿಂದ ಆರತಿ ಉತ್ಸವ ಏರ್ಪಡಿಸಲಾಗಿತ್ತು. ಟ್ರಸ್ಟ್ ಅಧ್ಯಕ್ಷ…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಕೊಳ್ಳುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕ ಕಲ್ಲಪ್ಪ ಬೋರಾಳೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಎಚ್.ರಂಗೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು, ಶಿಶು ಅಭಿವೃದ್ಧಿ ಅಧಿಕಾರಿ ಈಮಲ್ಲಪ್ಪಾ, ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮಕ್ಕಳ ಹಕ್ಕುಗಳು ಬಗ್ಗೆ ತಿಳಿಸಿದರು ಮತ್ತು ಬಾಲ್ಯ ವಿವಾಹ ಮಕ್ಕಳ ದೌರ್ಜನ್ಯಗಳು ತಡೆಯುವಂತೆ ಪೋಷಕರಲ್ಲಿ ಜಾಗೃತಿ ಮೂಡಿಸಿದರು. ಚಿಂತಾಕಿ ಪೊಲೀಸ್ ಠಾಣೆ ಪಿಎಸ್ ಐ ಚಂದ್ರಶೇಖರ್ ನಿರ್ಣಾಕರ್ ಅವರು ಮಾತನಾಡಿ, ಮಕ್ಕಳ ಕೈಗಳಿಗೆ ಮೊಬೈಲ್ ನೀಡಿ ಅವರ ಭವಿಷ್ಯ ಹಾಳು ಮಾಡಬೇಡಿ ಮತ್ತು ಅಪ್ರಾಪ್ತ ಮಕ್ಕಳ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಪಾಲಕರು ಮತ್ತು ಶಿಕ್ಷಕರು ಜಾಗೃತರಾಗಿ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ಕಡೆ ಗಮನಹರಿಸುವಂತೆ ಕರೆ ನೀಡಿದರು. ಕೊಳ್ಳುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 26 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ಶಾಲೆಯಿಂದ ವರ್ಗಾವಣೆಗೊಂಡ ಕಲ್ಲಪ್ಪ…

Read More

ಬೀದರ್:  ಔರಾದ ತಾಲೂಕಿನ ತೇಗಂಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಕ್ಕಳ ದಿನವನ್ನು  ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯ ಶಿಕ್ಷಕರು ಹಾಗೂ ಪೋಷಕರು ಕೂಡಿ ಮಕ್ಕಳೊಂದಿಗೆ ಕೇಕ್‌ ಕತ್ತರಿಸುವ ಮೂಲಕ ಹಾಗೂ ಶಿಕ್ಷಕರು ಮಕ್ಕಳಿಗೆ ಕಾಣಿಕೆ ಮತ್ತು ಮಧ್ಯಾಹ್ನ ವಿಶೇಷ ಭೋಜನವನ್ನು ಮಾಡಿಸಿ ಮಕ್ಕಳ ದಿನಾಚರಣೆ ಆಚರಿಸಿದರು. ಸಮಾಜ ಸೇವಕ ಯುವ ಉದ್ಯಮಿ ಗೌರವ ದೇಶಮುಖರವರು ಎಲ್ಲಾ ಮಕ್ಕಳಿಗೆ 150 ನೋಟ್ ಬುಕ್ ಹಾಗೂ ಪೆನ್ ವಿತರಣೆ ಮಾಡಿದರು. ನಂತರ ಮಾತನಾಡಿ, ಪಂಡಿತ ಜವಾಹರಲಾಲ್ ನೆಹರು ಅವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿ ಮತ್ತು ಕಾಳಜಿ ಹೊಂದಿದ್ದರು. ಹೀಗಾಗಿ ತಮ್ಮ ಜನ್ಮದಿನವನ್ನು ಮಕ್ಕಳ ಜಯಂತಿಯನ್ನಾಗಿ ಆಚರಿಸಿರಿ ಎಂದು ಹೇಳಿದ್ದಕ್ಕಾಗಿ ಪ್ರತಿ ವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶಾಲೆಯ ಮುಖ್ಯೋಪಾಧ್ಯಾಯರಾದ ಸುಂದರಮ್ಮಾ ಸುವರ್ಣ ಕೋಟೆ, ಎಸ್ ಡಿ.ಎಮ್ ಸಿ ಅಧ್ಯಕ್ಷರಾದ ಅವಿನಾಶ ಮುಕ್ತೆದಾರ, ಉಪಾಧ್ಯಕ್ಷರಾದ ಚಂದು ಚಿಟಮೆ, ಗ್ರಾಮದ ಹಿರಿಯರಾದ ಕಾಶಪ್ಪಾ ಮುಕ್ತೆದಾರ, ಸೋಮನಾಥ…

Read More

ಸರಗೂರು:  ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಳ್ಳೂರು ವಲಯದ  ಸಂಘದ ಸದಸ್ಯ ರಾಜಶೇಖರಪ್ಪ ಹುಲಿ ದಾಳಿಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಶುಕ್ರವಾರ ದಂದು ಭೇಟಿ ನೀಡಿ ಸಾಂತ್ವನ ಹೇಳಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 30 ಸಾವಿರ  ಚೆಕ್ ವಿತರಣೆ ಮಾಡಿದರು. ಹುಲ್ಲಹಳ್ಳಿ ಯೋಜನಾ ಕಚೇರಿಯ ಯೋಜನಾಧಿಕಾರಿ ಗಣೇಶ ನಾಯಕ್ ಮಾತನಾಡಿ, ಅ.26ರಂದು ತಮ್ಮ ಜಮೀನಿನಲ್ಲಿ ಕೃಷಿ ಕಾಯಕದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ ಹುಲಿ ಏಕಾಏಕಿ  ಗುಂಪಿನ ಸದಸ್ಯ ಮೇಲೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಸದರಿ ಕುಟುಂಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ವತಿಯಿಂದ  ಕುಟುಂಬಕ್ಕೆ ಸಹಾಯಧನ ನೀಡಲು ಮನವಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕಳಿಸಿ ಕೊಟ್ಟಿದ್ದು, ಅವರ ಆದೇಶ ಮೇರೆಗೆ 30 ಸಾವಿರ ಸಹಾಯಧನ ಮಂಜೂರು ಮಾಡಿದ ಮಂಜೂರಾತಿ ಪತ್ರ ಹಾಗೂ  ಚೆಕ್ ನೀಡಲಾಯಿತು ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಸಮಾಜ ಮುಖಿಯಾಗಿ ಕೆಲಸ ಮಾಡಿಕೊಂಡು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ…

Read More

ತುಮಕೂರು: ನಗರದ ಚಿಕ್ಕಪೇಟೆ ಮುಖ್ಯರಸ್ತೆಯ” (ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕಡೆಯಿಂದ) ಪುರಾತನೆ ಶ್ರೀ ಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಾಲಯದಲ್ಲಿ ನ.19 ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನ.17 ರಂದು ಕಡೇ ಕಾರ್ತಿಕ ಸೋಮವಾರ ಶ್ರೀಸ್ವಾಮಿಗೆ ಏಕವಾರ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ, ಅಲಂಕಾರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ನ.19 ರಂದು ಕಾರ್ತಿಕ ಅಮಾವಾಸ್ಯೆ ಪ್ರಯುಕ್ತ ಶ್ರೀ ಗಂಗಾಧರೇಶ್ವರಸ್ವಾಮಿಗೆ ರುದ್ರಾಭಿಷೇಕ ವಿಶೇಷ ಪುಷ್ಪಾಲಂಕಾರ ಮಹಾಮಂಗಳಾರತಿ ಸಂಜೆ ಲಕ್ಷದೀಪೋತ್ಸವ ಏರ್ಪಡಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಬೇಕೆಂದು ದೇವಸ್ಥಾನದ ಅರ್ಚಕ ರವೀಂದ್ರನಾಗ್ ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕೂಡಲೇ ಕಸದ ರಾಶಿಯನ್ನು ತೆರವುಗೊಳಿಸಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಇಂಜಿನಿಯರ್ ಪೂರ್ಣಿಮಾ ಅವರಿಗೆ ಸೂಚನೆ ನೀಡಿದರು. ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳ್ಳಂಬೆಳಗ್ಗೆಯೇ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದಾಗ ವಾಹನ ನಿಲುಗಡೆ ಮಾಡುವ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡು,  ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಲು ಅವಕಾಶ ಮಾಡಿಕೊಡಬೇಕೇ ಹೊರತು ಕಸ ಹಾಕಲು ಬಳಸಬಾರದು. ಇದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗುತ್ತದೆ. ಹೂವು—ಹಣ್ಣು–ತರಕಾರಿ ತ್ಯಾಜ್ಯ ಕೊಳೆತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಮಾರುಕಟ್ಟೆ ಆವರಣದಲ್ಲಿ ಸಮರ್ಪಕವಾಗಿ ಸ್ವಚ್ಛತೆ ನಿರ್ವಹಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಂಗಡಿ ಮಾಲೀಕರು, ಅಧಿಕಾರಿಗಳಿಗೆ ತರಾಟೆ: ನಗರದ ಡಿ.ದೇವರಾಜು ಅರಸು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ನಿಲ್ದಾಣದ ಆವರಣದಲ್ಲಿರುವ ಎಸ್‌ ಎಂಎಲ್ ಕಾಂಡಿಮೆಂಟ್ಸ್…

Read More