Author: admin

ಕಿತ್ತೂರು: ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶಿಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ. ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹಾವೇರಿ : ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ರಾಜ್ಯ ಸರ್ಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಮಾತನಾಡಿ , ಹಾವೇರಿಯಲ್ಲಿ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸರ್ಕಾರದ ಅನುದಾನಕ್ಕೆ ಯಾವುದೇ ಕೊರತೆಗಳು ಆಗುವುದಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಅವರು 20 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ, ಈ ಕಾರ್ಯಕ್ರಮಕ್ಕೆ ಮತ್ತು ಇದರ ಪೂರ್ವ ತಯಾರಿಯ ಬಗ್ಗೆ ಚರ್ಚಿಸುವಂತೆ, ಇದಕ್ಕೆ ಬೇಕಾದ ಕಾಮಗಾರಿ ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ, ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಹೇಳಿದ್ದಾರೆ. ಜನವರಿ 6ರಂದು ಅದ್ದೂರಿ ಮೆರವಣಿಗೆ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಐದು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಬಳಸಿಕೊಂಡು ಅಚ್ಚುಕಟ್ಟಾಗಿ ಸಮ್ಮೇಳನ ನಡೆಸಲಾಗುತ್ತದೆ, ಇದಕ್ಕಾಗಿ…

Read More

ಬೆಂಗಳೂರು : ಶೀಘ್ರದಲ್ಲೇ ಕೆಎಸ್ಆರ್‌ಟಿಸಿ ನೌಕರರಿಗೆ ಆರನೇ ವೇತನ ಆಯೋಗ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಲ್ಕರಿಂದ ಐದು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಆಗಬೇಕು, ಆದರೆ ಬೇರೆ ಬೇರೆ ಕಾರಣಗಳಿಂದ ಇದು ಸಾಧ್ಯವಾಗಿಲ್ಲ, ಆದ್ದರಿಂದ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರದಲ್ಲೇ ಸಿಹಿಸುದ್ದಿ ನೀಡುವುದಾಗಿ ಹೇಳಿದ್ದಾರೆ. ಇನ್ನು ಕೆಎಸ್‌ಆರ್‌ಟಿಸಿ ನೌಕರರಿಗೆ ಪ್ರತಿ ತಿಂಗಳ ಒಂದನೇ ತಾರೀಖಿನಂದೇ ವೇತನ ನೀಡುವ ಬಗ್ಗೆ ಮಹತ್ವದ ತೀರ್ಮಾನಕ್ಕೆ ನಿರ್ಧರಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿಸುದ್ದಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ತಳವಾರ ಹಾಗೂ ಪರಿವಾರ ಸಮುದಾಯಗಳನ್ನು ಒಬಿಸಿ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ 2020ರ ಮಾರ್ಚ 19ರಂದು ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿತ್ತು. ಆದರೆ , ಕೆಲ ಗೊಂದಲಗಳು ಸೃಷ್ಟಿಯಾಗಿದ್ದವು. ಕೇಂದ್ರ ಸರಕಾರವು ಕಳೆದ ಮಾರ್ಚನಲ್ಲಿ ಪ್ರಕಟಿಸಿದ ಗೆಜೆಟಿಯನಲ್ಲಿ ನಾಯಕದ, ನಾಯಕ್ ಪರ್ಯಾಯ ಪದಗಳಾದ ಪರಿವಾರ ಹಾಗೂ ತಳವಾರ ಜಾತಿಗಳನ್ನು ಒಳಗೊಂಡಂತೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣ ಪತ್ರ ನೀಡಬಹುದು ಎಂದು ಹೇಳಿತ್ತು. ಇನ್ನು ರಾಜ್ಯ ಸರ್ಕಾರ ಕಳೆದ ಜೂನ್‍ನಲ್ಲಿ ಹೊರಡಿಸಿದ ಸುತ್ತೋಲೆ ಹಾಗೂ ಆಗಸ್ಟನಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಪರಿಶಿಷ್ಟ ಪಂಗಡದ ಪರಿವಾರ ಹಾಗೂ ತಳವಾರ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿತ್ತು. ಆದರೂ ಈ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ…

Read More

ಬೆಂಗಳೂರು : ಬೆಂಗಳೂರು -ಪುಣೆ ರಸ್ತೆಯು 841 ಕಿ.ಮೀ. ಅಂತರ ಹೊಂದಿದೆ. ಈ ಅಂತರ ಕ್ರಮಿಸಲು 14 ರಿಂದ 15 ಗಂಟೆ ಪ್ರಯಾಣ ಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಎವರ್ ಗ್ರೀನ್ ಕಾರಿಡಾರ್ ಹೊಸ ಯೋಜನೆಯು ಎರಡು ನಗರಗಳ ನಡುವೆ 95 ಕಿ.ಮೀ. ಅಂತರ ಕಡಿಮೆ ಮಾಡಲಿರುವುದರ ಜತೆಗೆ 3ರಿಂದ 4 ಗಂಟೆ ಪ್ರಯಾಣದ ಅವಧಿ ಕಡಿತ ಆಗಲಿದೆ. ಸದ್ಯ ಸಿದ್ಧಗೊಂಡಿರುವ ಡಿಪಿಆರ್ ಪ್ರಕಾರ ರಾಜ್ಯದಲ್ಲಿ 458 ಕಿ.ಮೀ. ಉದ್ದ ಹೆದ್ದಾರಿ ಇರಲಿದೆ. ಹಾಲಿ ಬೆಂಗಳೂರು-ಪುಣೆ ರಸ್ತೆಯು 841 ಕಿ.ಮೀ. ಅಂತರ ಕಾರಿಡಾರ್ ನಿರ್ಮಾಣದ ನಂತರ 95 ಕಿ.ಮೀ. ಅಂತರ ಕಡಿಮೆ ಆಗಲಿದೆ. ಕರ್ನಾಟಕದ 9 ಜಿಲ್ಲೆಗಳಲ್ಲಿ ಹಾದು ಹೋಗಲಿರುವ ಹೆದ್ದಾರಿ 2023ರ ಆರಂಭದಲ್ಲಿ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ. ಗ್ರೀನ್ ಕಾರಿಡಾರ್ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವ ಪುಣೆ-ಬೆಂಗಳೂರು ಎಕ್ಸ್ಪ್ರೆಸ್ ಷಟ್ಪಥ ಹೆದ್ದಾರಿ ಯೋಜನೆ, ಕೊಪ್ಪಳ ಜಿಲ್ಲೆಯ ಮೂಲಕ ಹಾದು ಹೋಗಲಿದ್ದು, ಈ ಭಾಗದ ಆರ್ಥಿಕ ಅಭಿವೃದ್ಧಿಗೆ ಹೊಸ ಭರವಸೆ ಮೂಡಿಸಿದೆ.…

Read More

ತಿಪಟೂರು: ನಿರಂತರ ಗೊಂದಲಮಯ ನಿರ್ಧಾರಗಳ ಮೂಲಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ಕಾರಣವಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೂಡಲೇ ರಾಜೀನಾಮೆ ನೀಡಬೇಕೆಂದು ತಿಪಟೂರಿನ ಕಾಂಗ್ರೆಸ್ ಮುಖಂಡ ಶಶಿಧರ್ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಮಕ್ಕಳ ಶಿಕ್ಷಣದ ಹಕ್ಕುಗಳನ್ನು ಇಂದಿನ ಸರ್ಕಾರ ದ ಜನ ವಿರೋಧಿ ನೀತಿ ಕಿತ್ತುಕೊಳ್ಳುತ್ತಿದೆ. ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಹದಗೆಡಿಸುವಲ್ಲಿ ಪ್ರಮುಖ ಪಾತ್ರಧಾರಿ ಬಿ.ಸಿ.ನಾಗೇಶ್ ತಿಪಟೂರು ಮರ್ಯಾದೆ ಕಳೆಯದೆ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಶಶಿಧರ್ ಆಗ್ರಹಿಸಿದರು. ಇತ್ತೀಚೆಗಷ್ಟೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶುಲ್ಕ ವಸೂಲಿಗೆ ಸುತ್ತೋಲೆ ಹೊರಡಿಸಿದ್ದು, ಮಕ್ಕಳಿಗೆ ಕೊಡುತ್ತಿದ್ದ ಸೈಕಲ್ ಗಳನ್ನು ನಿಲ್ಲಿಸಿದ್ದು,  ಬಿ.ಸಿ.ನಾಗೇಶ್ ಸಚಿವರಾದ ನಂತರ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಅವರು ಆರೋಪಿಸಿದರು. ಒಟ್ಟಾರೆ ಹೇಳುವುದಾದರೆ ತಿಪಟೂರಿನ ಮಾನ ಮರ್ಯಾದೆ ಕಳೆಯದೆ ಕೂಡಲೇ ರಾಜೀನಾಮೆ ಕೊಡಬೇಕೆಂದು ಅಗ್ರಹಿಸಿದರು. ವರದಿ: ಆನಂದ್, ತಿಪಟೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಕೊರಟಗೆರೆ: ನವೆಂಬರ್ 1 ರಂದು ಕೊರಟಗೆರೆ ತಾಲೂಕಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲು ಆಯ್ಕೆ ಸಮಿತಿ ಸಭೆ ಸೇರಿ, ತಹಶೀಲ್ದಾರ್ ಮಾರ್ಗದರ್ಶನದಲ್ಲಿ 8 ವಿವಿಧ ಕ್ಷೇತ್ರಗಳಿಂದ 16 ಮಂದಿ ಸಾಧಕರನ್ನು ಆಯ್ಕೆ ಮಾಡಿದೆ. ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾರ್ಗದರ್ಶನದಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಿದ್ದು, ಸಮಿತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ದೊಡ್ಡಸಿದ್ದಪ್ಪ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ 29 ಅರ್ಜಿಗಳಲ್ಲಿ ಆಯ್ಕೆ ಸಮಿತಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 16 ಮಂದಿ ಸಾಧಕರನ್ನು ಆಯ್ಕೆ ಮಾಡಿತು. ಆಯ್ಕೆಯಾದ ಸಾಧಕರು: ಕೃಷಿ ಕ್ಷೇತ್ರದಿಂದ ಸಾವಯವ ಕೃಷಿಕ ತಾಲೂಕಿನ ಚನ್ನರಾಯನ ದುರ್ಗಾ ಹೋಬಳಿಯ ಬರಕ ಗ್ರಾಮದ ದೊಡ್ಡಯ್ಯ ಬಿನ್ ವೀರಣ, ಹೊಳವನಹಳ್ಳಿ ಹೋಬಳಿಯ ಚಿಕ್ಕನಹಳ್ಳಿಯ ಶಿವಣ್ಣ, ಸರ್ಕಾರಿ ನೌಕರರ ಕ್ಷೇತ್ರದಿಂದ ಕನ್ನಡ ಶಿಕ್ಷಕರಾದ ಬುಕ್ಕಾಪಟ್ಟಣ ಕಾಂತರಾಜು ಬಿನ್ ರಾಮಯ್ಯ, ಕನ್ನಡ ಪರ ಹೋರಾಟ ಕ್ಷೇತ್ರದಿಂದ ಕೊರಟಗೆರೆ ಪಟ್ಟಣದ ಬಿ.ಎಸ್.ಪ್ರಸನ್ನಕುಮಾರ್ ಬಿನ್…

Read More

ಭಾರತೀಯ ಜನತಾ ಪಕ್ಷದ ಸರ್ಕಾರ ಭ್ರಷ್ಟಾಚಾರದ ಮೂಲಕ ಶಾಸಕರನ್ನು ಖರೀದಿಸಿ ಆಪರೇಷನ್‌ ಕಮಲ ಮಾಡಿ ಅಧಿಕಾರಕ್ಕೆ ಬಂದಿದೆ, ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಮ್ಮ ಪಕ್ಷದ ಹಾಗೂ ಜೆಡಿಎಸ್‌ ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಬಿಜೆಪಿ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪದ ವಿಚಾರವಾಗಿ ಮಾತನಾಡಿದ ಅವರು,  ಇಂದು ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ಈ ಸರ್ಕಾರವನ್ನು 40% ಕಮಿಷನ್‌ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರು ಲಿಖಿತವಾಗಿ ಪತ್ರ ಬರೆದು ಪ್ರಧಾನಿಗಳಿಗೆ ಹೇಳಿದ್ದಾರೆ. ಇದೇ ವಿಚಾರವನ್ನು ನಾವು ಬೆಳಗಾವಿ ಮತ್ತು ಬೆಂಗಳೂರಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲು ನಿಲುವಳಿ ಸೂಚನೆಗೆ ಅವಕಾಶ ಕೇಳಿದರೂ ಕೂಡ ಸರ್ಕಾರ ಸಭಾಧ್ಯಕ್ಷರ ಮೇಲೆ ಒತ್ತಡ ಹಾಕಿ ಅವಕಾಶ ಸಿಗದಂತೆ ಮಾಡಿತು ಎಂದರು. ಬಸವರಾಜ ಬೊಮ್ಮಾಯಿ ಅವರು ದಾಖಲಾತಿ ನೀಡಿ ಎಂದು ನಮಗೆ ಕೇಳುವ ಮೂಲಕ…

Read More

ಚಿತ್ರದುರ್ಗ: ಹೊಸದುರ್ಗ ಮಾಜಿ ಶಾಸಕರು ವಾಣಿ ವಿಲಾಸ ಸಾಗರ ಅಣೆಕಟ್ಟೆಯ ಕೋಡಿಯನ್ನು 124 ಅಡಿಗೆ ಇಳಿಸುವ ಬಗ್ಗೆ ಮಾತನಾಡಿದ್ದು ಖಂಡನೀಯ, ವಾಣಿ ವಿಳಾಸ ಸಾಗರ ನಮ್ಮ ಜೀವನಾಡಿ ಯಾವುದೇ ಕಾರಣಕ್ಕೂ ಕೋಡಿ ಇಳಿಸಲು ಬಿಡುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಬ್ಯಾಡರಹಳ್ಳಿ ಶಿವಕುಮಾರ್ ಹೇಳಿದರು. ಹೊಸದುರ್ಗದ ಮಾಜಿ ಶಾಸಕರಾದ ಬಿ.ಜಿ.ಗೋವಿಂದಪ್ಪನವರು ವಾಣಿ ವಿಲಾಸ ಸಾಗರ ಅಣೆಕಟ್ಟೆ ಕೋಡಿ ಇಳಿಸುವ ವಿಚಾರವಾಗಿ ನೀಡಿದ ಹೇಳಿಕೆ ವಿಚಾರವಾಗಿ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯಲ್ಲಿನ  ವಾಣಿ ವಿಲಾಸ ಸಾಗರದ ಅಚ್ಚುಕಟ್ಟು ಪ್ರದೇಶದ ಧರ್ಮಪುರ ಹೋಬಳಿಯ ತೊರೆ ಓಬೇನಹಳ್ಳಿ, ಬಿದರಕೆರೆ, ಅಂಬಲಗೆರೆ, ಬ್ಯಾಡರಹಳ್ಳಿ, ಐನಾಳ್ಳಿ , ಗ್ರಾಮದ ರೈತರು ತೊರೆ ಓಬೇನಹಳ್ಳಿ ವೇದಾವತಿ ನದಿ ದಂಡೆಯ ಮೇಲಿರುವ ಈಶ್ವರ ದೇವಸ್ಥಾನದ ಸಮೀಪ ಸಭೆ ಸೇರಿ ಖಂಡನೆ ವ್ಯಕ್ತಪಡಿಸಿದರು. ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಬ್ಯಾಡರಹಳ್ಳಿ ಶಿವಕುಮಾರ್,  ವಿದೇಶ ಪ್ರವಾಸದಲ್ಲಿರುವ ಹಾಲಿ ಶಾಸಕರಾದ ಕೆ.ಪೂರ್ಣಿಮಾ  ಶ್ರೀನಿವಾಸ್ ರವರು ಪತ್ರಿಕೆ ಹೇಳಿಕೆ ನೀಡಿ ಯಾವುದೇ ಕಾರಣಕ್ಕೂ…

Read More

ಬೆಂಗಳೂರು: ನವೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ (ಜಿಐಎಂ) ರಾಜ್ಯ ಸರ್ಕಾರ 5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಒಪ್ಪಂದಗಳಿಗೆ ಸಹಿ ಹಾಕುವ ವಿಶ್ವಾಸವಿದೆ ಕರ್ನಾಟಕ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹೂಡಿಕೆಯು ಸುಮಾರು ಐದು ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಗುರಿಯನ್ನು ತಲುಪುವ ಮತ್ತು ಇನ್ನೂ ಉತ್ತಮವಾಗಿ ಮಾಡುವ ವಿಶ್ವಾಸ ನಮಗಿದೆ ಎಂದು ಅವರು ತಿಳಿಸಿದ್ದಾರೆ. GIM ನ ಕೊನೆಯ ಆವೃತ್ತಿಯ ನಂತರ ಕೇವಲ 27 ಪ್ರತಿಶತಕ್ಕೆ ಹೋಲಿಸಿದರೆ 75 ಪ್ರತಿಶತಕ್ಕಿಂತಲೂ ಹೆಚ್ಚು ಉತ್ತಮವಾದ ಪರಿವರ್ತನೆ ಅನುಪಾತ, ಹೂಡಿಕೆ ಪ್ರಸ್ತಾಪಗಳ ಸಾಕ್ಷಾತ್ಕಾರದ ಬಗ್ಗೆ ಸರ್ಕಾರವು ಭರವಸೆ ಹೊಂದಿದೆ ಎಂದರು. ಮೊದಲಿನಂತಲ್ಲದೆ, ಶೃಂಗಸಭೆಯ ಸಮಯದಲ್ಲಿ ಎಂಒಯುಗಳನ್ನು ನೇರವಾಗಿ ಸಹಿ ಮಾಡಲಾಗುವುದಿಲ್ಲ. ಹೂಡಿಕೆ ಪ್ರಸ್ತಾಪಗಳ ಬಗ್ಗೆ ವಿವರವಾದ ಚರ್ಚೆಗಳ ನಂತರ ಮತ್ತು ಅಗತ್ಯ ಅನುಮತಿಗಳನ್ನು ನೀಡಿದ ನಂತರ ಈ ಪ್ರಕ್ರಿಯೆ ನಡೆಯುತ್ತದೆ ಎಂದು ನಿರಾಣಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More