Author: admin

ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕರುನಾಡ ವಿಜಯ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಅಧ್ಯಕ್ಷರಾದ ಎಚ್.ಎಸ್. ಸುರೇಶ್ ಅಧ್ಯಕ್ಷತೆಯಲ್ಲಿ ಆಹ್ವಾನ ಪತ್ರಿಕೆ ಬಿತ್ತಿ ಚಿತ್ರ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಯಿಂದ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಎಸ್.ಸುರೇಶ್, ನವೆಂಬರ್ 28 2022ನೇ ಸೋಮವಾರ ಪಟ್ಟಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಸಂಘಟನೆಯ ವತಿಯಿಂದ ನಡೆಸಲಾಗುವುದು ಎಂದು ತಿಳಿಸಿದರು. ಧ್ವಜಾರೋಹಣವನ್ನು ತುರುವೇಕೆರೆ ಪೊಲೀಸ್ ವೃತ್ತ ನಿರೀಕ್ಷಕರಾದ ಗೋಪಾಲ್ ಎನ್. ನಾಯಕ್ , ಹಾಗೂ ಪೊಲೀಸ್ ಉಪನಿರೀಕ್ಷಕರಾದ ಕೇಶವಮೂರ್ತಿ  ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರುನಾಡ ವಿಜಯ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಹೆಚ್. ಎನ್. ದೀಪಕ್ ವಹಿಸಲಿದ್ದಾರೆ., ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಮಸಾಲ ಜಯರಾಮ್ ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ 28.11.2022ನೇ ಸೋಮವಾರದಂದು ಉಚಿತ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ನಮ್ಮ ತಾಲೂಕಿನ ಅತಿ ಕಿರಿಯ ವಯಸ್ಸಿನಲ್ಲಿಯೇ ತನ್ನ ಅಂಗಾಂಗಗಳನ್ನು ದಾನ ಮಾಡಿ ಇಂದಿನ ಯುವ…

Read More

ತಿಪಟೂರು: ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆಗಾಗಿ ರಾಜ್ಯಾದ್ಯಂತ ಎಲ್ಲಾ ಗ್ರಾಮಗಳಿಂದಲು ಮೃತ್ತಿಕೆ ಸಂಗ್ರಹ ಕಾರ್ಯನಡೆಯುತ್ತಿದೆ. ಇದೇ ವೇಳೆ ಬಿಜೆಪಿಯು ಈ ಕಾರ್ಯಕ್ರಮದಲ್ಲಿಯೂ ರಾಜಕೀಯ ಲಾಭ ಮಾಡಲು ಹೊರಟಿದೆ ಎಂದು ಆರೋಪಿಸಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಚಿಕ್ಕಹೊನ್ನವಳ್ಳಿ ಗ್ರಾಮದಲ್ಲಿ ರಥವನ್ನು ತಡೆದ ಸಾರ್ವಜನಿಕರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗ್ರಾಮದೊಳಗೆ ಬರದಂತೆ ತಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲ್ಲೂಕಿನಾದ್ಯಂತ ಸೂಸೂತ್ರವಾಗಿ ನಡೆಯುತ್ತಿದ್ದ ಮೃತಿಕೆ ಸಂಗ್ರಹವು ಸಚಿವರ ಉಪಸ್ಥಿತಿಯಲ್ಲಿಯೇ ಜರುಗುತ್ತಿತ್ತು. ಆದರೆ ಚಿಕ್ಕಹೊನ್ನವಳ್ಳಿ ಗ್ರಾಮದಲ್ಲಿ ಈ ರಥಯಾತ್ರೆಯಲ್ಲಿ ಒಕ್ಕಲಿಗರ ಸ್ವಾಮೀಜಿಗಳಾದ ಶ್ರೀಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು, ಶ್ರೀಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಯಾಕೆ ಇಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಇನ್ನೂ ಮಾಜಿ ಸಿಎಂ ಯಡಿಯೂರಪ್ಪನವರ ಚಿತ್ರವನ್ನು ಬಳಸಿ ಅದರಲ್ಲಿ ನಮಗೆ ಯಾವುದೇ ಅಭ್ಯಂತರವಿಲ್ಲ.  ಆದರೆ, ಒಕ್ಕಲಿಗರ ನಾಯಕರು, ಹಿರಿಯರೂ, ಮಾಜಿ ಪ್ರಧಾನಿಗಳೂ ಆಗಿರುವ ದೇವೇಗೌಡರ ಚಿತ್ರವನ್ನು ಯಾಕೆ ಬಳಸಿಲ್ಲ?  ಎಂದು ಪ್ರಶ್ನಿಸಿದರು. ಕೆಂಪೇಗೌಡರ…

Read More

ಬೆಂಗಳೂರು ಮಹಾನಗರವನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನರಿಂದ ಸೆಸ್ (ತೆರಿಗೆ) ರೂಪದಲ್ಲಿ ಹಣ ಸಂಗ್ರಹಿಸಿತು. ಆದರೆ ನಗರದಲ್ಲಿ ಭಿಕ್ಷುಕರ ಪುನರ್ವಸತಿ ಏನೂ ಸುಧಾರಿಸಿಲ್ಲ. ಬೆಂಗಳೂರನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಜನರಿಂದ ತೆರಿಗೆ ರೂಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ನಗರದಲ್ಲಿರುವ ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಆದರೆ ಈಗಲೂ ನಗರದಲ್ಲಿ ಎಲ್ಲೆಂದರಲ್ಲಿ ಭಿಕ್ಷುಕರು ಕಂಡು ಬರುತ್ತಿದ್ದಾರೆ. ಹಾಗಾದರೆ ಜನರಿಂದ ಸಂಗ್ರಹಿಸಿದ ತೆರಿಗೆ ಹಣ ಎಲ್ಲಿ ಹೋಯಿತು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ. ಇತ್ತೀಚೆಗೆ ವಿಧಾನ ಪರಿಷತ್‌ ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಭಿಕ್ಷಾಟನಾ ನಿರ್ಮೂಲನಾ ತೆರಿಗೆ ರೂಪದಲ್ಲಿ ರಾಜ್ಯದ 10 ಮುನಿಸಿಪಲ್ ನಿಗಮಗಳಿಂದ ಒಟ್ಟು ರೂ. 437 ಕೋಟಿ ಸಂಗ್ರಹಿವಾಗಿರುವುದಾಗಿ ತಿಳಿಸಿದರು. ಈ ಪೈಕಿ ಬೆಂಗಳೂರು ಮಹಾನಗರ ಸಿಂಹಪಾಲು ಅನ್ನು ಹೊಂದಿದೆ. ಅಂದರೆ ಬೆಂಗಳೂರಿಗರಿಂದಲೇ ಬರೋಬ್ಬರಿ ರೂ.309 ಕೋಟಿ ಭಿಕ್ಷಾಟನಾ ನಿರ್ಮೂಲನಾ…

Read More

ನಟ ಧನಂಜಯ್ ಬೆಂಬಲಕ್ಕೆ ನೀನಾಸಂ ಸತೀಶ್ ನಿಂತಿದ್ದಾರೆ. ‘ಹೆಡ್‌ ಬುಷ್‌’ ಚಿತ್ರದಲ್ಲಿ ವೀರಗಾಸೆ ಕಲೆಗೆ ಅಪಮಾನ ಮಾಡಲಾಗಿದೆ ಎಂಬ ವಿಚಾರ ವಿವಾದಕ್ಕೀಡಾದ ಬೆನ್ನಲ್ಲೆ ಸಾಕಷ್ಟು ಮಂದಿ ನಟ-ನಟಿಯರು ಡಾಲಿ ಬೆಂಬಲಿಕ್ಕೆ ನಿಂತಿದ್ದಾರೆ. ಇದೀಗ ನಿನಾಸಂ ಸತೀಶ್ ಬೆಂಬಲ ನೀಡಿದ್ದಾರೆ. ಧನಂಜಯ್‌ ನನ್ನ ಗೆಳೆಯ, ಅವನ ಎಲ್ಲ ವಿಚಾರಗಳ ಜೊತೆ ಮತ್ತು ಮಾನವೀಯತೆ ಜೊತೆ ನಾನಿದ್ಡೇನೆ ಎಂದು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ನನ್ನಂತೆ ಊರು ಬಿಟ್ಟು ಬ್ಯಾಗು ಹಿಡಿದು ಬಂದವನು, ಸುಮ್ಮನೆ ಸಣ್ಣ ಕಾರಣ ಹಿಡಿದು ಅವನನ್ನು ತೇಜೊವಧೆ ಮಾಡುವ ಗೆಳೆಯರೆ, ನೀವು ನಮ್ಮ ಏಳಿಗೆಯನ್ನು ಬಯಸಿದವರೇ. ವೈಷಮ್ಯ ಬಿಡಿ’ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನಟಿ ಪಾರ್ವತಿ ಇನ್​ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದ್ದು ಅಭಿಮಾನಿಗಳೆಲ್ಲ ಶುಭಾಶಯ ತಿಳಿಸುತ್ತಿದ್ದಾರೆ. ಹೌದು. ಬಹುಭಾಷಾ ನಟಿ ಪಾರ್ವತಿ ಅವರು ಅಮ್ಮನಾಗುತ್ತಿದ್ದಾರಾ ಎಂದು ನೆಟ್ಟಿಗರು ಅಚ್ಚರಿಪಟ್ಟಿದ್ದಾರೆ. ಜತೆಗೆ ಶುಭಾಶಯವನ್ನೂ ಕೋರುತ್ತಿದ್ದಾರೆ. ಮಲೆಯಾಳಂ ಮೂಲದ ನಟಿ ಈಗ ತಾವು ತಾಯಿಯಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಗರ್ಭಿಣಿಯ ಸಿಂಬಲ್ ಹಾಕಿ ವಂಡರ್ ಬಿಗಿನ್ಸ್ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ ಪಾರ್ವತಿ. ಫೋಟೋದಲ್ಲಿ ಪ್ರೆಗ್ನೆನ್ಸಿ ಟೆಸ್ಟಿಂಗ್ ಕಿಟ್, ಟಿಶ್ಯೂ ಇಟ್ಟಿದ್ದಾರೆ. ಇದಕ್ಕೆ ಸಾಕಷ್ಟು ನಟ-ನಟಿಯರೂ ವಿಶ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಕಮೆಂಟ್ ಮಾಡಲಾರಂಭಿಸಿದ್ದಾರೆ. ಅಮ್ಮನಾಗುತ್ತಿರುವುದಕ್ಕೆ ಶುಭಾಶಯಗಳು ಎಂದು ಹಾರೈಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಐತಿಹಾಸಿಕ ಕಥಾಹಂದರ ಹೊಂದಿರುವ, ಖ್ಯಾತ ನಿರ್ದೇಶಕ ಮಣಿರತ್ನಂ ಅವರ ‘ಪೊನ್ನಿಯನ್ ಸೆಲ್ವನ್ -1’ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಹೌದು. ವಿಶ್ವದೆಲ್ಲೆಡೆ ಉತ್ತಮ ಪ್ರಶಂಸೆ ಪಡೆದ ಚಿತ್ರವು ಇದೀಗ ಡಿಜಿಟಲ್ ವೇದಿಕೆಯಲ್ಲಿ ಲಭ್ಯವಾಗುತ್ತಿದೆ. ಅಮೆಜಾನ್  ಪ್ರೈಮ್ ವೇದಿಕೆಯಲ್ಲಿಯೂ ಚಿತ್ರ ರಿಲೀಸ್ ಆಗುತ್ತಿದೆ. ‘ಪೊನ್ನಿಯನ್ ಸೆಲ್ವನ್ -1’ ಚಿತ್ರ ನಿರೀಕ್ಷೆಯಂತೆಯೇ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾಗಿ ಒಂದು ತಿಂಗಳ ಅವಧಿಯಲ್ಲಿ ಚಿತ್ರ ವಿಶ್ವದಾದ್ಯಂತ 500 ಕೋಟಿ ರೂ ಕಲೆಕ್ಷನ್ ಮಾಡಿದೆ. ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿ ಐಶ್ವರ್ಯ ರೈ ಬಚ್ಚನ್, ವಿಕ್ರಮ್, ಕಾರ್ತಿ, ತ್ರಿಶಾ, ಜಯಂ ರವಿ ಮತ್ತು ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣ ತನಿಖೆ ಆಗಬೇಕು. ಅದು ಒಂದು ಬಾರ್ ವಿಚಾರಕ್ಕೆ ಅಮಾನತು ಮಾಡುವಷ್ಟೇ ನಡೆದಿಲ್ಲ. ಇದರ ಹಿಂದೆ ಇನ್ನೂ ಬೇರೇನೋ ಇದ್ದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದರು. ಈ ಕುರಿತು ಮಾತನಾಡಿದ ಅವರು, ನಾನು ಮೊದಲೇ ಹೇಳಿದ್ದೆ. ಒಂದು ಪೋಸ್ಟಿಂಗ್ ಗೆ 70 ಲಕ್ಷ ರೂಪಾಯಿಯಿಂದ 2 ಕೋಟಿ ತನಕ ಹಣದ ವಿಚಾರ ಇದೆ. ಇದು ಬಿಜೆಪಿಯ ಸಂಸ್ಕೃತಿ. ಇದು ಗಂಭೀರವಾದ ವಿಚಾರವಾಗಿದೆ. ನಂದೀಶ್ ಅಮಾನತಿನ ಹಿಂದೆ ಅಷ್ಟೇ ಇದ್ದಂತೆ ಇಲ್ಲ, ಅದಕ್ಕಿಂತ ಹೆಚ್ಚಿನದು ಬೇರೆನೋ ಇದೆ. ಹೀಗಾಗಿ ಅವರ ಸಾವಿನ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್ ಒಂದು ದಿಕ್ಕು, ಸಿದ್ದರಾಮಯ್ಯ ಇನ್ನೊಂದು ದಿಕ್ಕು ಎಂದು ಟೀಕಿಸಿದ್ಧ ಬಿಜೆಪಿ ನಾಯಕರಿಗೆ ಎಂಎಲ್’​ಸಿ ಬಿ.ಕೆ. ಹರಿಪ್ರಸಾದ್​ ತಿರುಗೇಟು ನೀಡಿದರು. ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಹೌದು, ಕಾಂಗ್ರೆಸ್​’ನಲ್ಲಿ ಎರಡು ದಿಕ್ಕು…

Read More

ಇಂದು ನಟ ಪುನೀತ್ ರಾಜ್ ಕುಮಾರ್ ಅವರ ಪ್ರಥಮ ಪುಣ್ಯಸ್ಮರಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿ ಇರುವ ನಟ ಅಪ್ಪು ಸಮಾಧಿಗೆ ದೊಡ್ಮನೆ ಕುಟುಂಬ ಪೂಜೆ ಸಲ್ಲಿಕೆ ಮಾಡಿತು. ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಕೆ ಮಾಡಿದರು. ಮೊದಲು ಡಾ. ರಾಜ್ ಕುಮಾರ್ ಪಾರ್ವತಮ್ಮ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಅಪ್ಪು ಸಮಾಧಿಗೆ ಹಿರಿಯ ನಟ ರಾಘವೇಂಧ್ರ ರಾಜ್ ಕುಮಾರ್ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಟ ಪುನೀತ್ರ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಪೂರ್ಣಿಮಾ ಲಕ್ಷ್ಮೀ, ವಿನಯ್ ರಾಜ್ ಕುಮಾರ್ ಚಿನ್ನೇ ಗೌಡ , ಗೋವಿಂದರಾಜ್ ಅವರು ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಕೆ ವೇಳೆ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಣ್ಣೀರಿಟ್ಟರು. ಇನ್ನು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಸಮಾಧಿ ಬಳಿಗೆ ಆಗಮಿಸಿ ದರ್ಶನ ಪಡೆಯುತ್ತಿದ್ದು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳಿಂದ ರಕ್ತದಾನ ಶಿಬಿರ…

Read More

ಹಾವೇರಿ : ನವೆಂಬರ್ 20 ರ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ಸಂಬಂಧ ನವೆಂಬರ್ 2ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಇದರ ನಂತರ ನವೆಂಬರ್ 15 ರಿಂದ 20 ದಿನದೊಳಗೆ ರಾಜ್ಯದಲ್ಲಿ ಸಭೆ ಮಾಡಿ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಯಾವುದಾದರೂ ಶಾಲೆಯವರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯದ ಪ್ರಕಾರ ಮಕ್ಕಳಿಗೆ ಶಿಕ್ಷಣ ನೀಡಲು ಮುಂದೆ ಬಂದರೆ ಅವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದ ಗ್ರಾಮಸ್ಥರು ಮತ್ತು ಅಭಿಮಾನಿಗಳು ಕರ್ನಾಟಕ ರತ್ನ,ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಅತ್ಯಂತ ಭಕ್ತಿಪೂರ್ವಕವಾಗಿ  ಆಚರಿಸಿದರು. ಅತಿ ಚಿಕ್ಕ ವಯಸ್ಸಿನಲ್ಲಿಯೇ ಬಹುದೊಡ್ಡ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸಾಧನೆಗೈದ ಮಹನೀಯ, ಕರ್ನಾಟಕ ರತ್ನ, ಪುನೀತ್ ರಾಜಕುಮಾರ್ ಅವರ ಸಾವಿನಿಂದ ಇಡಿ ವಿಶ್ವವೇ ಕಂಬನಿಯನ್ನು ಮಿಡಿದಿತ್ತು. ಪ್ರತಿ ಹಳ್ಳಿಯಲ್ಲಿಯೂ ಸಹ ದೇವರಂತೆಯೇ ಪುನೀತ್ ರಾಜಕುಮಾರ್ ರವರನ್ನು ಅವರ ಅಭಿಮಾನಿಗಳು ಆರಾಧಿಸುತ್ತಿದ್ದರು. ಸಮಾಜಮುಖಿ ಕಾರ್ಯಗಳಲ್ಲಿ ಅಪ್ಪು ನಡೆದು ಬಂದಂತೆ ರಾಜ್ಯದ ಸಾವಿರಾರು ಸಂಘಟನೆಗಳು ಸಾವಿರಾರು ಸಂಘ ಸಂಸ್ಥೆಗಳು ಪುನೀತ್ ರಾಜಕುಮಾರ್ ರವರ ಹೆಸರಿನಲ್ಲಿ ಕಳೆದ ಒಂದು ವರ್ಷಗಳಿಂದ ಸಾವಿರಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದರು. ಇಂದಿಗೆ ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಅವರ ಅಪಾರ ಅಭಿಮಾನಿಗಳನ್ನು ಅಗಲಿ ಒಂದು ವರ್ಷ ಕಳೆಯಿತು. ಆದಕಾರಣ ನೇಗಲಾಲ ಗ್ರಾಮದ ಅಭಿಮಾನಿಗಳು ಮತ್ತು ಗ್ರಾಮಸ್ಥರು…

Read More