Author: admin

ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಜಗತ್ತಿನ ಜನರ ಮುಂದೆ ಹಸಿವು, ಸ್ವಾತಂತ್ರ್ಯ, ಮಹಿಳೆಯರ ದುಡಿಮೆ ಮುಂತಾದ ವಿಷಯಗಳಲ್ಲಿ ಭಾರತದ ಮರ್ಯಾದೆ ಹರಾಜಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಟೀಕಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ಮೂಲಕ ಈ ಕೆಳಕಂಡಂತೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿಯವರನ್ನು ಟೀಕಿಸಿದವರ ವಿರುದ್ಧ ಪ್ರತಿಭಟಿಸಿ ಎಂದು ಹೇಳಿಕೆ ನೀಡಿದ್ದ ಯಡಿಯೂರಪ್ಪನವರಿಗೆ ಮತ್ತು ಬಿಜೆಪಿಯವರಿಗೆ ನಾನು 32 ಪ್ರಶ್ನೆಗಳನ್ನು ಕೇಳಿದ್ದೆ. ಇದುವರೆಗೆ ಬಿಜೆಪಿಯವರಿಗೆ ಮತ್ತು ಯಡಿಯೂರಪ್ಪನವರಿಗೆ ಒಂದೇ ಒಂದು ಪ್ರಶ್ನೆಗೂ ಉತ್ತರಿಸಲು ಸಾಧ್ಯವಾಗಲಿಲ್ಲ. ಇದರ ಮಧ್ಯೆ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ 121 ದೇಶಗಳ ಪೈಕಿ 107 ನೇ ಸ್ಥಾನಕ್ಕೆ ಕುಸಿದಿದೆಯೆಂಬ ವರದಿ ಬಿಡುಗಡೆಯಾಯಿತು. ಬಿಜೆಪಿಯವರು ಯಥಾಪ್ರಕಾರ ಈ ವರದಿಯೆ ಸರಿ ಇಲ್ಲ ಎಂದು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕೇಂದ್ರ…

Read More

ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮೂರು ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ . ಈ ನಡುವೆ ಕಾಂಗ್ರೆಸ್,ಜೆಡಿಎಸ್ ಗೆ ಸಾರಿಗೆ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಯಾರ ಅವಧಿಯಲ್ಲಿ ಸಮಿತಿ ರಚನೆ ಯಾಗಿದೆ ಎಂಬುದು ಮುಖ್ಯವಲ್ಲ. ಆದರೆ ಮೀಸಲಾತಿ ಹೆಚ್ಚಳ ಅನುಷ್ಟಾನಕ್ಕೆ ತಂದಿರುವುದು ಬಿಜೆಪಿ. ಜೆಡಿಎಸ್, ಕಾಂಗ್ರೆಸ್ ಗೆ ರಾಜಕೀಯ ಇಚ್ಚಾಶಕ್ತಿ ಕೊರತೆ ಇದೆ. ಹೀಗಾಗಿ ಮೀಸಲಾತಿ ಹೆಚ್ಚಳ ಮಾಡಿರಲಿಲ್ಲ. ನಮಗೆ ಇಚ್ಚಾಶಕ್ತಿ ಇದೆ . ಹೀಗಾಗಿ ಮೀಸಲಾತಿ ಹೆಚ್ಚಳ ಅನುಷ್ಟಾನ ತಂದಿದ್ದೇವೆ. ಬಿಎಸ್ ವೈ, ಸಿಎಂ ಬಸವರಾಜ ಬೊಮ್ಮಾಯಿ ಅವರ ಇಚ್ಚಾ ಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಟಾನ ಮಾಡಿದ್ದೇವೆ ಎಂದರು. ಯಾವುದೇ ಸಮುದಾಯ ಸೇರಿಸಲು ನಮ್ಮ ಅಭ್ಯಂತರವಿಲ್ಲ ಆದರೆ ಜಾತಿಯ ಕುಲಶಾಸ್ತ್ರ ಅಧ್ಯಯನ ಮಾಡಬೇಕು. ಮೀಸಲಾತಿ ಅನುಷ್ಟಾನಕ್ಕಾಗಿ ಸಮಿತಿಯನ್ನ ರಚಿಸಬೇಕು. ಆ ಸಮಿತಿ ನೀಡುವ ವರದಿಯನ್ವಯ ಕ್ರಮ ಕೈಗೊಳ್ಳಬೇಕು. ಏಕಾಏಕಿ ಅನುಷ್ಟಾನ ಹೆಚ್ಚಳ ಆಗಲ್ಲ. ಮೀಸಲಾತಿ ಹೆಚ್ಚಳ ಸಂಬಂಧ…

Read More

ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಕಬ್ಬುಬೆಳೆಗಾರರು ಧರಣಿ ಕೈಗೊಂಡಿದ್ದು, ಮೈಸೂರು- ಊಟಿ ಹೆದ್ದಾರಿ ತಡೆದು ರೈತಮುಖಂಡರು ಪ್ರತಿಭಟನೆ ನಡೆಸಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಎಪಿಎಂಸಿ ಸಮೀಪದ ನಂಜನಗೂಡು ರಿಂಗ್ ರಸ್ತೆಯಲ್ಲಿ ಕಬ್ಬುಬೆಳೆಗಾರರು ಧರಣಿ ನಡೆಸಿದ್ದು, ಕಬ್ಬಿನ ಸೋಗು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಪ್ರತಿಭಟನಾಕಾರರು ಧರಣಿಯಲ್ಲಿ ಭಾಗಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿತ್ತು. ಈ ಮೂಲಕ ವಾಹನ ದಟ್ಟಣೆ ಆಗದಂತೆ ಪೊಲೀಸರು ಕ್ರಮವಹಿಸಿದ್ದರು. ಪ್ರತಿಭಟನಾಕಾರರು ರಸ್ತೆಯಲ್ಲಿ ಉರುಳಿಸೇವೆ ಮಾಡಿ ಪ್ರತಿಭಟನೆ ನಡೆಸಿದ್ದು, ನಾಲ್ಕು ದಿಕ್ಕಿನಲ್ಲೂ ರೈತಮುಖಂಡರು ಜಮಾವಣೆಯಾದ ಹಿನ್ನೆಲೆ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಬದಲಿ ಮಾರ್ಗದಲ್ಲಿ ತೆರಳುತ್ತಿದ್ದು, ಸದ್ಯ ಮೈಸೂರು -ನಂಜನಗೂಡು ರಸ್ತೆ ಬಂದ್ ಮಾಡಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಇತ್ತೀಚೆಗೆ ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಾಂಶುಪಾಲರು, ಅಧ್ಯಾಪಕರು ಸಭೆ ನಡೆಸಿ ಧೈರ್ಯ ತುಂಬಿದರು. ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಾಲೇಜು ಕಟ್ಟಡ ಕುಸಿದುಬಿದ್ದಿತ್ತು. ಹೀಗಾಗಿ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿತ್ತು. ಆತಂಕ ದೂರ ಮಾಡುವ ಸಲುವಾಗಿ ಇಂದು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಾತನಾಡಿದ ಪ್ರಾಂಶುಪಾಲ ಡಾ.ಡಿ ರವಿ ಅವರು, ಕುಸಿದ ಪಾರಂಪರಿಕ ಕಟ್ಟಡದಲ್ಲಿ ಪ್ರಯೋಗಶಾಲೆ ಮತ್ತು ಕೆಲವು ತರಗತಿಗಳು ನಡೆಯುತ್ತಿದ್ದವು. ಸದರಿ ತರಗತಿಗಳನ್ನು ಪಕ್ಕದಲ್ಲೇ ಇರುವ ಹೊಸ ಕಟ್ಟಡದಲ್ಲಿ ನಡೆಸಲಾಗುತ್ತದೆ. ತರಗತಿಗಳು ಯಾವ ತೊಂದರೆಯೂ ಇಲ್ಲದೆ ನಡಯಲಿವೆ ಎಂದು ಪ್ರಾಂಶುಪಾಲರಾದ ಡಾ. ಡಿ.ರವಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಲೋಕೋಪಯೋಗಿ ಇಲಾಖೆಯ ಇಂಜಿನಿಯರುಗಳ ತಂಡ ಕಾಲೇಜಿನ ಪಾರಂಪರಿಕ ಕಟ್ಟಡವನ್ನು ಪರಿಶೀಲನೆ ನಡೆಸಿದ್ದು ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ನಂತರ ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಗಾಳಿಸುದ್ದಿ ನಂಬದಿರುವಂತೆ ಹಾಗು ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ…

Read More

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಜೆಡಿಎಸ್ ನಾಯಕರು ತಯಾರಾಗುತ್ತಿದ್ದು ಈ ನಡುವೆ ಇಂದು ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚಾಲನೆ ನೀಡಿದರು. ಗುಟ್ಟಳ್ಳಿ ಗವಿಗಂಗಾಧರೇಶ್ವರ ದೇಗುಲದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದರು, ಪಂಚರತ್ನ ರಥಕ್ಕೆ ಪೂಜೆ ಮಾಡಿ ಸಾಂಕೇತಿಕ ಚಾಲನೆ ನೀಡಿದರು. ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ, ಆರೋಗ್ಯ ಯೋಜನೆಗಳ ಪಂಚರತ್ನವಾಗಿದೆ. 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್ ಮೆಗಾ ಪ್ಲಾನ್ ನಡೆಸಿದೆ. ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, 1994 ರಲ್ಲಿ ಚುನಾವಣೆಗೆ ಮೊದಲು ಇಲ್ಲೇ ಪೂಜೆ ಸಲ್ಲಿಸಲಾಗಿತ್ತು, ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಚುನಾವಣೆಗೆ ಹೋಗಿದ್ದವು. ನವೆಂಬರ್ 1 ರಿಂದ ಪಂಚರತ್ನ ರಥಯಾತ್ರೆ ಆರಂಭಿಸಲು ಚಿಂತಿಸಿದ್ಧೆ. ಆದರೆ ಇಂದು ಒಳ್ಳೆ ದಿನವಾದ್ದರಿಂದ ಇಂದೇ ಚಾಲನೆ ನೀಡಿದ್ದೇವೆ ಎಂದರು. ನಾಳೆ ಅಣ್ಣಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು. ನವೆಂಬರ್ 1 ರಂದು ಕೋಲಾರದಲ್ಲಿ ಸಮಾವೇಶ ಆಯೋಜಿಸಿದ್ದೇವೆ…

Read More

ಕರ್ನಾಟಕದಲ್ಲಿ ವಶಪಡಿಸಿಕೊಂಡಿರುವಂತಹ ಮಾದಕವಸ್ತುಗಳ ಮಾದರಿಗಳ ತಪಾಸಣೆಗಾಗಿ ಎರಡು ಹೆಚ್ಚುವರಿ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ರೂ.7 ಕೋಟಿ ಅನುದಾನ ಲಭಿಸಿದೆ. ಸರಣಿ ಟ್ವೀಟ್‌ಗಳ ಮೂಲಕ ರಾಜ್ಯದ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು, ಮಾದಕವಸ್ತುಗಳ ಮಾರಾಟದ ಮೂಲಕ ಕಾನೂನುಬಾಹಿರವಾಗಿ ಗಳಿಸಿರುವ ಆಸ್ತಿಯನ್ನು ರಾಜ್ಯ ಪೋಲಿಸ್ ಇಲಾಖೆ ವಶಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ವಶಪಡಿಸಿಕೊಂಡಿರುವ ಮಾದಕವಸ್ತುಗಳ ಮಾದರಿಗಳ ಕ್ಷಿಪ್ರ ತಪಾಸಣೆಗಾಗಿ ಎರಡು ಹೆಚ್ಚುವರಿ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಇಲಾಖೆ ರೂ.7 ಕೋಟಿ ಹಣಕಾಸಿನ ನೆರವನ್ನು ಒದಗಿಸಿದೆ. ಇದಕ್ಕಾಗಿ ನಾನು ಕೇಂದ್ರದ ಸಂಬಂಧಪಟ್ಟ ಇಲಾಖೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ರಾಜ್ಯದಲ್ಲಿ ಮಾದಕವಸ್ತುಗಳ ವಿರುದ್ಧದ ನಮ್ಮ ಹೋರಾಟ ಹಾಗೂ ಮಾದಕವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಲು ನಮ್ಮ ಇಲಾಖೆ ಬದ್ಧವಾಗಿದೆ,” ಎಂದು ತಮ್ಮ ಟ್ವೀಟ್‌ನಲ್ಲಿ ಸೂದ್ ಅವರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮಂಗಳೂರು: ಫ್ಲಿಪ್‌ಕಾರ್ಟ್‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದು, ಅದರ ಬದಲಿಗೆ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಪಡೆದಿರುವ ವಿಲಕ್ಷಣ ಪ್ರಕರಣ ನಡೆದಿದೆ. ಚಿನ್ಮಯ ರಮಣ ಎಂಬ ವ್ಯಕ್ತಿ ಫ್ಲಿಪ್‌ಕಾರ್ಟ್‌ನಿಂದ ಲ್ಯಾಪ್‌ಟಾಪ್ ಖರೀದಿಸಿದ್ದರು. ಆದರೆ ಅವರಿಗೆ ಲ್ಯಾಪ್‌ಟಾಪ್ ಬಾಕ್ಸ ಅಲ್ಲಿ ದೊಡ್ಡ ಕಲ್ಲು ಕಳುಹಿಸಲಾಗಿದೆ. ಈ ವಿಚಾರವನ್ನ ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದು, ಲ್ಯಾಪ್‌ಟಾಪ್‌ ಆರ್ಡರ್ ಮಾಡಿದ್ದೆ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದೆ. ದೀಪಾವಳಿ ಮಾರಾಟದ ಸಮಯದಲ್ಲಿ ಎಂದು ಬರೆದಿದ್ದಾರೆ. ಅವರು ಬಾಕ್ಸ್ ತೆರೆಯುವ ವಿಡಿಯೋವನ್ನು ಸಹ ಪೋಸ್ಟ್ ಮಾಡಿದ್ದಾರೆ. ಆದಾಗ್ಯೂ, ಫ್ಲಿಪ್‌ಕಾರ್ಟ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಸಂಪೂರ್ಣ ಮೊತ್ತವನ್ನು ಪಾವತಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವಿಜಯಪುರ: ಟ್ರ್ಯಾಕ್ಟರಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ಮೃತಪಟ್ಟು, 9 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಇಂಡಿ ತಾಲೂಕಿನ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಭಯ್ಯಾಜಿ ಶಿಂಧೆ(50), ಸುಮಿತ್ರಾ ಶಿಂಧೆ(45) ಮೃತ ದುರ್ದೈವಿಗಳು. ಮೃತ ದಂಪತಿ ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ನಿವಾಸಿಗಳು. ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರಗೆ ಮಹಾರಾಷ್ಟ್ರದ ಅಕ್ಕಲಕೋಟಗೆ ತೆರಳುತ್ತಿದ್ದ ಕ್ರೂಸರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿದ್ದ 9 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಥಣಿ ಮೂಲದ ಇವರೆಲ್ಲಾ ಕ್ರೂಸರ್ ನಲ್ಲಿ ಅಕ್ಕಲಕೋಟೆ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು ರೈತರು ರಾಜ್ಯದಾದ್ಯಂತ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ. ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ ಹೋರಾಟ ನಡೆಯುತ್ತಿದೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವಿಜಯನಗರ: ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ಮಾಡಿದ ನಂತರ, ಕಾನೂನು ಕ್ರಮ ಕೈಗೊಳ್ಳದೇ ದಾಳಿ ನಡೆಸಿದ ಆ ವಿಷಯವನ್ನೇ ಮುಚ್ಚಿಟ್ಟು, ದಾಳಿಯೇ ನಡೆದಿಲ್ಲ ಎಂಬ ನಡೆಯನ್ನು ಪೊಲೀಸರು ತೋರಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿ ಗ್ರಾಮಸ್ಥರೇ ಶಾಕ್ ನೀಡಿದ್ದಾರೆ. ದೀಪಾವಳಿ ಹಬ್ಬದಂದು ಇಸ್ಪಿಟ್ ಆಡುತ್ತಿದದಂತ ಜೂಜು ಕೋರರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರಾದಂತ ವೆಂಕಟೇಶ್ ಎಂಬುವರು ಠಾಣೆಗೆ ತೆರಳಿ ದೂರು ದಾಖಲಾದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದರೂ, ಪ್ರಕರಣ ದಾಖಲಿಸದೇ ಇದ್ದಂತ ಪೊಲೀಸರ ವಿರುದ್ಧ ನಂತರ ವೆಂಕಟೇಶ್​​ ನಾಲ್ವರು ಪೊಲೀಸ್​​ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಾಲ್ವರು ಪೇದೆಗಳಾದ ಮಹೇಶ. ಅಭಿಷೇಕ್.…

Read More